Tag: Railway Exam

  • ರೈಲ್ವೇ ಎಕ್ಸಾಂಗೆ ಮಂಗಳಸೂತ್ರ, ಜನಿವಾರ ತೆಗೆಸುವಂತಿಲ್ಲ – ರೈಲ್ವೇ ಇಲಾಖೆಯಿಂದ ಅಧಿಕೃತ ಆದೇಶ

    ರೈಲ್ವೇ ಎಕ್ಸಾಂಗೆ ಮಂಗಳಸೂತ್ರ, ಜನಿವಾರ ತೆಗೆಸುವಂತಿಲ್ಲ – ರೈಲ್ವೇ ಇಲಾಖೆಯಿಂದ ಅಧಿಕೃತ ಆದೇಶ

    ಬೆಂಗಳೂರು: ರೈಲ್ವೇ ನೇಮಕಾತಿ ಪರೀಕ್ಷೆ ವೇಳೆ ಮಂಗಳಸೂತ್ರ ಧರಿಸಿದ್ರೆ ಪರೀಕ್ಷೆಗೆ ಅವಕಾಶವಿಲ್ಲ ಎಂಬ ನಿರ್ಬಂಧವನ್ನು ರೈಲ್ವೆ ಸಚಿವಾಲಯ ವಾಪಸ್ ಪಡೆದಿದೆ.

    ಜನಿವಾರ ವಿವಾದದಿಂದಾಗಿ ತೀವ್ರ ಟೀಕೆ, ಅಸಮಾಧಾನ ವ್ಯಕ್ತವಾಗಿದ್ದ ಬೆನ್ನಲ್ಲೇ ಈಗ ನಿರ್ಬಂಧ ಸಡಿಲಿಸಲಾಗಿದೆ. ಮಾರ್ಗಸೂಚಿಯಲ್ಲಿ ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂದು ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: Pahalgam Terror Attack – ತನಗೇ ಗೊತ್ತಿಲ್ಲದೆ ಪ್ರವಾಸಿಗನ ಮೊಬೈಲ್‌ನಲ್ಲಿ ಸೆರೆಯಾಯ್ತು ಭೀಕರ ಉಗ್ರ ಕೃತ್ಯ

    ಈ ಬಗ್ಗೆ ಸಂಸದರು, ಶಾಸಕರು ಮನವಿ ಮಾಡಿದ ಹಿನ್ನೆಲೆ ಟ್ವೀಟ್ ಮೂಲಕ ಕೇಂದ್ರ ಸಚಿವ ಸೋಮಣ್ಣ ಗೊಂದಲಕ್ಕೆ ಇತಿಶ್ರೀ ಹಾಡಿದ್ದಾರೆ. ಜನಿವಾರ, ಮಾಂಗಲ್ಯ, ಸಂಸ್ಕೃತಿ ಬಿಂಬಿಸುವ ಯಾವುದೇ ವಸ್ತು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸೂಚಿಸಲಾಗಿದೆ. ಇದನ್ನೂ ಓದಿ: ವೈಭವ್‌ ʻಯಶಸ್ವಿʼ ಶತಕ – ಚಿರಯುವಕನ ಆಟಕ್ಕೆ ಗುಜರಾತ್‌ ಧೂಳಿಪಟ, ರಾಜಸ್ಥಾನ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

  • ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರಕ್ಕೆ ನಿರ್ಬಂಧ ಬೇಡ: ಸೋಮಣ್ಣ ಸೂಚನೆ

    ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರಕ್ಕೆ ನಿರ್ಬಂಧ ಬೇಡ: ಸೋಮಣ್ಣ ಸೂಚನೆ

    ಮಂಗಳೂರು: ರಾಜ್ಯದಲ್ಲಿ ಜನಿವಾರ ವಿವಾದದ ಬೆನ್ನಲ್ಲೇ ಇದೀಗ ಮತ್ತೊಂದು ವಾರ್ ಶುರುವಾಗಿದೆ. ರೈಲ್ವೆ ಇಲಾಖೆ ಪರೀಕ್ಷೆಗೆ ಹಾಜರಾಗಲು ಜನಿವಾರ, ಮಂಗಳಸೂತ್ರಕ್ಕೆ ನಿರ್ಬಂಧ ವಿಧಿಸಿರುವ ವಿಚಾರವಾಗಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ರೈಲ್ವೆ ಸಚಿವ ವಿ.ಸೋಮಣ್ಣ (V Somanna) ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಮಂಗಳವಾರ ರೈಲ್ವೆ ಇಲಾಖೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲ್ಲಿದ್ದು, ಈಗಾಗಲೇ ಪ್ರವೇಶ ಪತ್ರವು ಪರೀಕ್ಷಾರ್ಥಿಗಳ ಕೈ ಸೇರಿದೆ. ಪ್ರವೇಶ ಪತ್ರದಲ್ಲಿ ಜನಿವಾರ, ಮಂಗಳಸೂತ್ರ ತೆಗೆದು ಪರೀಕ್ಷೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು!

    ಈ ವಿವಾದದ ಬೆನ್ನಲ್ಲೇ ರೈಲ್ವೆ ಇಲಾಖೆಯ ಪರೀಕ್ಷೆಯ ಪ್ರವೇಶಪತ್ರದಲ್ಲಿನ ಸೂಚನೆಗಳ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್‌ನ ಮೂಲಕ ರೈಲ್ವೆ ಸಚಿವರಿಗೆ ದಕ್ಷಿಣ ಕನ್ನಡದ ಸಂಸದ ಕ್ಯಾ.ಬ್ರಿಜೇಶ್ ಚೌಟ (Brijesh Chowta) ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಸಚಿವ ವಿ.ಸೋಮಣ್ಣ ಮಂಗಳಸೂತ್ರ ಹಾಗೂ ಜನಿವಾರ ತೆಗೆಸದಂತೆ ರೈಲ್ವೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಯುವತಿಯರ ಜೊತೆ ರಾಸಲೀಲೆ – ಮೊಬೈಲ್‌ನಲ್ಲಿ ವಿಡಿಯೋ ಅಲ್ಬಂ ಓಪನ್‌ ಮಾಡಿದ್ದ ಕಾಮುಕ ಅರೆಸ್ಟ್

    ರೈಲ್ವೆ ಇಲಾಖೆಯ ಪರೀಕ್ಷೆಯ ಪ್ರವೇಶಪತ್ರದಲ್ಲಿನ ಸೂಚನೆಯು ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ರೈಲ್ವೆ ಇಲಾಖೆಯ ಈ ಸೂಚನೆಗೆ ವಿ.ಹೆಚ್.ಪಿ ಮುಖಂಡ ಶರಣ್ ಪಂಪುವೆಲ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ಸೂಚನೆ ಕೈಬಿಡುವಂತೆ ಜಿಲ್ಲಾಧಿಕಾರಿ ಹಾಗೂ ಸಂಸದರಿಗೆ ಆಗ್ರಹಿಸಿದ್ದಾರೆ.

  • ಇನ್ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ: ಸೋಮಣ್ಣ ಘೋಷಣೆ

    ಇನ್ಮುಂದೆ ಕನ್ನಡದಲ್ಲೇ ರೈಲ್ವೆ ಪರೀಕ್ಷೆ: ಸೋಮಣ್ಣ ಘೋಷಣೆ

    ದಾವಣಗೆರೆ: ಇನ್ನುಮುಂದೆ ಕನ್ನಡದಲ್ಲೇ (Kannada) ರೈಲ್ವೆ ಪರೀಕ್ಷೆ (Railway Exam) ನಡೆಸುವುದಾಗಿ ದಾವಣಗೆರೆಯಲ್ಲಿ (Davanagere) ಕೇಂದ್ರ ಸಚಿವ ವಿ ಸೋಮಣ್ಣ (V Somanna) ಹೇಳಿದ್ದಾರೆ.

    ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ರೈಲ್ವೆ ಇಲಾಖೆಯಲ್ಲಿ ಒಟ್ಟು 12 ಲಕ್ಷ ಹುದ್ದೆಗಳಿದ್ದು, 15 ಲಕ್ಷ ಜನರು ಪಿಂಚಣಿ ಪಡೆಯುತ್ತಿದ್ದಾರೆ. ಖಾಲಿ ಇರುವ 16,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪರೀಕ್ಷೆಯನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ನೀಡಲಾಗಿದ್ದು, ನಮ್ಮ ರಾಜ್ಯದ ಯುವಕರು ಇದರ ಉಪಯೋಗ ಪಡೆದುಕೊಳ್ಳಬೇಕು. ಕನ್ನಡದಲ್ಲೇ ಪರೀಕ್ಷೆ ಬರೆಯಲು ಮತ್ತು ಓದಲು ಪುಸ್ತಕಗಳು ಸಿಗುತ್ತವೆ, ಉಪಯೋಗಿಸಿಕೊಳ್ಳಿ. ಇಲ್ಲ ಇಂಗ್ಲಿಷ್‌ನಲ್ಲಿ ಇರುವುದನ್ನು ತರ್ಜುಮೆ ಮಾಡಲಾಗುತ್ತದೆ. ಅದನ್ನು ಓದಿ ಅನುಕೂಲವಾಗುತ್ತದೆ. ಮುಂದಿನ ದಿನಗಳಲ್ಲಿ ಖಾಲಿ ಇರುವ 46,000 ಹುದ್ದೆಗಳ ಭರ್ತಿ ಮಾಡಲಾಗುತ್ತದೆ ಎಂದರು. ಇದನ್ನೂ ಓದಿ: ಇಸ್ರೇಲ್‌ ದಾಳಿಗೆ ಹಿಜ್ಬುಲ್ಲಾ ಭದ್ರಕೋಟೆಯೇ ಛಿದ್ರ – ತುರ್ತು ಸಭೆಗೆ ವಿಶ್ವಸಂಸ್ಥೆ ತಯಾರಿ

    ಅಲ್ಲದೇ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗದ ಭೂ ಸ್ವಾಧೀನ ಪ್ರಕ್ರಿಯೆ ಮುಗಿಯುವ ಹಂತದಲ್ಲಿದ್ದು, ಮುಂದಿನ ನಾಲ್ಕೈದು ತಿಂಗಳು ಇದೇ ಆರ್ಥಿಕ ವರ್ಷಾಂತ್ಯದಲ್ಲಿ ಹಲವು ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ. ನೇರ ರೈಲು ಮಾರ್ಗವು ನಿಧಾನಗತಿಯಲ್ಲಿ ಸಾಗುತ್ತಿದ್ದು, ಕಳೆದ ಎರಡೂವರೆಗೆ ತಿಂಗಳಿಂದ ಇದರ ಪ್ರಗತಿ ವೇಗ ಹೆಚ್ಚಿಸಲಾಗಿದೆ. ಒಟ್ಟು ಈ ಯೋಜನೆಗೆ 2406.73 ಎಕರೆ ಭೂಮಿ ಬೇಕಾಗಿದ್ದು, ಈಗಾಗಲೇ 2119.16 ಎಕರೆ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 287.54 ಎಕರೆ ಸ್ವಾಧೀನ ಮಾಡಿಕೊಳ್ಳಬೇಕಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಹಾದುಹೋಗುವ 263.78 ಎಕರೆ ಜಮೀನಿನಲ್ಲಿ 246.20 ಎಕರೆ ಸ್ವಾಧೀನ ಪಡಿಸಿಕೊಂಡಿದ್ದು, 17.58 ಎಕರೆಯ ಸ್ವಾಧೀನ ಪ್ರಕ್ರಿಯೆ ವಿವಿಧ ಹಂತದಲ್ಲಿದೆ. ಕೆಲವೇ ದಿನಗಳಲ್ಲಿ ಇದು ಪೂರ್ಣವಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬ್ಯಾಂಕಾಕ್‌ನಿಂದ ಕೊಡಗಿಗೆ, ಕೊಡಗಿನಿಂದ ದುಬೈಗೆ ಹೈಡ್ರೋ ಗಾಂಜಾವಸ್ತು ರವಾನೆ – ಅಂತಾರಾಷ್ಟ್ರೀಯ ಪೆಡ್ಲರ್‌ಗಳ ಜಾಲ ಬೇಧಿಸಿದ ಪೊಲೀಸರು

    ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಯೋಜನೆಯನ್ನು ಕಾಲಮಿತಿಯಲ್ಲಿ ಮುಕ್ತಾಯಗೊಳಿಸುವ ಗುರಿ ಹೊಂದಲಾಗಿದೆ. 2027ರ ಜನವರಿಯೊಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಲು ಉದ್ದೇಶಿಸಲಾಗಿದೆ. ರೈಲ್ವೆ ಕಾಮಗಾರಿಯನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರದಿಂದ ಅಭಿವೃದ್ದಿ ಮಾಡಲಾಗುತ್ತದೆ. ಇದೇ ಆರ್ಥಿಕ ವರ್ಷ ಕೊನೆಯಾಗುವ ವೇಳೆಗೆ ಕನಿಷ್ಠ 4 ರಿಂದ 5 ಕಡೆ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದರು. ಇದನ್ನೂ ಓದಿ: ಆರ್‌.ಅಶೋಕ್‌ ವಿರುದ್ಧ ಸಚಿವ ಪರಮೇಶ್ವರ್‌ ನೂರಾರು ಕೋಟಿ ಭೂ ಹಗರಣ ಬಾಂಬ್‌

    ರಾಜ್ಯದಲ್ಲಿ ಒಟ್ಟು 21 ರೈಲ್ವೆ ಯೋಜನೆಗಳು ನಡೆಯುತ್ತಿದ್ದು, ಇದಕ್ಕಾಗಿ 43,000 ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಎಲ್ಲಾ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಿ ರಾಜ್ಯವನ್ನು ರೈಲ್ವೆ ಸೌಕರ್ಯ ಹೊಂದಿದ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಲಾಗಿದೆ. ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ರೈಲ್ವೆ ಯೋಜನೆಗೆ ಈಗಾಗಲೇ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 115.11.08 ಎಕರೆ ಜಮೀನು ಸ್ವಾಧೀನ ಮಾಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: 200ನೇ ವಿಜಯೋತ್ಸವ ಆಚರಣೆ – ಕಿತ್ತೂರು ಉತ್ಸವ ಜ್ಯೋತಿಗೆ ಸಿಎಂ ಚಾಲನೆ