Tag: Rainfall

  • ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

    ಗಡಿ ಜಿಲ್ಲೆ ಬೀದರ್‌ನಲ್ಲಿ ಧಾರಾಕಾರ ಮಳೆಗೆ ಭಾರೀ ಅವಾಂತರ – ರಸ್ತೆ ಸಂಚಾರ ಬಂದ್‌

    ಬೀದರ್‌: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಲಸುರು, ಬೀದರ್ ತಾಲೂಕು, ಭಾಲ್ಕಿಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ಹುಲಸೂರು ತಾಲೂಕಿನ ಇಂಚುರು ಸೇತುವೆ ಮೇಲೆ ಅಪಾರ ಪ್ರಮಾಣದ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ.

    ಹುಲಸೂರು ಇಂದ ಭಾಲ್ಕಿ ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದು ಬೀದರ್ ತಾಲೂಕಿನ ಚಿಲ್ಲರ್ಗಿ ಸೇತುವೆ ಮೇಲೆ ನೀರು ಹರಿದು ರಸ್ತೆ ಸಂಚಾರ ಬಂದಾಗಿದೆ. ಸೇತುವೆ ಮೇಲೆ ನೀರು ಹರಿದು ಪರಿಣಾಮ ರಸ್ತೆ ಸಂಚಾರ ಬಂದಾಗಿದ್ದು, ಚಿಲ್ಲರ್ಗಿ ಟು ಚಿಮ್ಮಕೋಡ್, ಗಾದಗಿ ರಸ್ತೆ ಸಂಚಾರ ಬಂದಾಗಿದೆ. ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಪರದಾಡುತ್ತಿದ್ದರೆ, ಕೆಲವರು ನೀರು ತುಂಬಿದ ರಸ್ತೆ ಮೇಲೆಯ ನಡೆದುಕೊಂಡು ಸೇತುವೆ ದಾಟುತ್ತಿದ್ದಾರೆ.

    ಇನ್ನೂ ಕಮಲನಗರದ ಗ್ರಾಮವೊಂದರಲ್ಲಿ ರಸ್ತೆ ಮೇಲೆ ರಭಸವಾಗಿ ಹರಿಯುತ್ತಿರುವ ನೀರಿನಲ್ಲಿ ದಾಟಲು ಎಮ್ಮೆಗಳು ಪರದಾಡಿವೆ. ಮಾಂಜ್ರಾನದಿಗೆ ಲಕ್ಷ ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹಿನ್ನೆಲೆ ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಮಾಂಜ್ರಾನದಿ ದಡದಲ್ಲಿರುವ ಲಕ್ಷಾಂತರ ಎಕರೆ ಜಮೀನುಗಳಲ್ಲಿ ಬೆಳೆದಿದ್ದ ಬೆಳಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಧಾರಾಕಾರ ಮಳೆ ಹಾಗೂ ಮಾಂಜ್ರಾನದಿ ಎಫೆಕ್ಟ್ ಜಿಲ್ಲೆಯ ಜನ್ರ ಜೀವನ ಮೂರಾಬಟ್ಟೆಯಾಗಿದ್ದು ಇಂದು ಕೂಡಾ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

  • ಕಲಬುರಗಿಯಲ್ಲಿ ನಿರಂತರ ಮಳೆ – ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

    ಕಲಬುರಗಿಯಲ್ಲಿ ನಿರಂತರ ಮಳೆ – ಶಾಲೆಗಳಿಗೆ ಇಂದು, ನಾಳೆ ರಜೆ ಘೋಷಣೆ

    ಕಲಬುರಗಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಇಲ್ಲಿನ ಶಾಲೆಗಳಿಗೆ 2 ದಿನಗಳ ಕಾಲ ರಜೆ (Schools Holiday) ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

    ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಹಾಗಾಗಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಎರಡು ದಿನಗಳ ಕಾಲ (ಸೆ.27,28) ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು (Kalaburagi DC) ಆದೇಶಿಸಿದ್ದಾರೆ. ಅದರಂತೆ ಡಿಡಿಪಿಐ (DDPI) ಸೂರ್ಯಕಾಂತ ಮದಾನೆ ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಹೊಸಪೇಟೆ | ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ

    ಕಲಬುರಗಿ ಜಿಲ್ಲೆಯಾದ್ಯಂತ ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ಆರೆಂಜ್‌ ಅಲರ್ಟ್ ಘೋಷಿಸಲಾಗಿದೆ. ಶಾಲೆಗಳಿಗೆ ಈಗಾಗಲೇ ದಸರಾ ರಜೆಯಿದ್ದು, ಜಿಲ್ಲೆಯ ಕೆಲವು ಶಾಲೆಗಳ ಆಡಳಿತ ಮಂಡಳಿ ದಸರಾ ರಜೆಯಿಂದ ವಿನಾಯಿತಿ ಪಡೆದುಕೊಂಡು ಶಾಲೆಗಳನ್ನು ನಡೆಸುತ್ತಿವೆ. ಅಂತಹ ಶಾಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಸೆ.27 ಹಾಗೂ 28ರಂದು ಎರಡು ದಿನ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದ್ದು, ಈ ರಜಾ ಅವಧಿಯ ಪಾಠ ಬೋಧನೆಯನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ – 8 ಮಂದಿ ಅರೆಸ್ಟ್

  • Rain Alert | ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು, ಸೇತುವೆಗಳು ಜಲಾವೃತ

    Rain Alert | ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು, ಸೇತುವೆಗಳು ಜಲಾವೃತ

    ಕಲಬುರಗಿ/ಯಾದಗಿರಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಯಾದಗಿರಿಯಲ್ಲಿ (Yadagiri) ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.

    ಯಾದಗಿರಿಯಲ್ಲಿ ವರುಣ ಅಬ್ಬರಿಸಿ ಬೊಬ್ಬರಿದಿದ್ದು, ಭಾರಿ ಅವಾಂತರವನ್ನೇ ಸೃಷ್ಟಿಸಿದ್ದಾನೆ. ಇದರಿಂದ ಜನರ ಕಂಗಾಲಾಗಿ ಹೋಗಿದ್ದಾರೆ. ತಡರಾತ್ರಿಯಿಂದ ಸುರಿದ ಭಾರಿ ಮಳೆಯಿಂದಾಗಿ ಯರಗೋಳ ಗ್ರಾಮದ ಸೇತುವೆ, ಹಾಗೂ ಬಾಚವಾರ ಗ್ರಾಮದ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ವಾಹನ ಸಂಚಾರ ಅಡ್ಡಿಯಾಗಿದ್ದು ಜನರು ಪರದಾಡಿದ್ದಾರೆ.

    ರಣಮಳೆಗೆ ಬೀದಿಗೆ ಬಿದ್ದ 30 ಕುಟುಂಬಗಳು
    ಇನ್ನು ಯರಗೋಳ ಕೆರೆ ನೀರು ಗ್ರಾಮಕ್ಕೆ ನುಗ್ಗಿದ್ದು ಗ್ರಾಮದ 30ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಇದರಿಂದ ಮನೆಯಲ್ಲಿದ್ದ ಧವಸ ಧಾನ್ಯ ಹಾಗೂ ಇನ್ನಿತರ ವಸ್ತುಗಳು ಹಾನಿಹಾಗಿದ್ದು ಜನರು ತಲೆಮೇಲೆ ಕೈಹೊತ್ತು ಕೂರುವಂತಾಗಿದೆ. ಇನ್ನು ಬಾಚವಾರ ಗ್ರಾಮದ ಸೇತುವೆ ಮುಳುಗಡೆ ಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ. ಇದರಿಂದ ಗ್ರಾಮದಲ್ಲಿರುವ ಸೇತುವೆಯನ್ನು ಎತ್ತರಗೊಳಿಸಿ ಎಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ. ಇದನ್ನೂ ಓದಿ: ಕರೆಂಟ್​ ಶಾಕ್​ನಿಂದ ಜೀವ ಕಳೆದುಕೊಂಡಿದ್ದ ಕಾರ್ಮಿಕ – ರಹಸ್ಯವಾಗಿ ಶವ ಹೂತಿಟ್ಟ ಲೈನ್​ಮ್ಯಾನ್ ಅರೆಸ್ಟ್‌!

    ಕಲಬುರಗಿ: ‌
    ಇತ್ತ ಕಲಬುರಗಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಹಿನ್ನೆಲೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಆಳಂದ ತಾಲ್ಲೂಕಿನ ಪಡಸಾವಳಿಯಲ್ಲಿ ರಸ್ತೆ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು ಮಣ್ಣೂರ-ಅಫಜಲಪುರ ತೆರಳುವ ರಸ್ತೆ ಸಂಚಾರ ಬಂದ್ ಆಗಿದೆ. ಇದರಿಂದ ಜನರು ಸಂಚಾರ ಮಾಡಲಾಗದೆ ಪರದಾಡಿದರು. ಇದನ್ನೂ ಓದಿ: ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ ಶಾಂತಿ ಕದಡೋಕೆ: ಚಲುವರಾಯಸ್ವಾಮಿ

    ಬೀದರ್:
    ಇನ್ನು, ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣದಲ್ಲಿ ಭಾರೀ ಅವಾಂತರ ಸೃಷ್ಟಿ ಆಗಿದೆ. ಬೆಳಗ್ಗೆಯಿಂದ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡಿದರು. ಇದನ್ನೂ ಓದಿ: ಕಾರು, ಬೈಕ್‌ ಮುಖಾಮುಖಿ ಡಿಕ್ಕಿ – ಮದುವೆ ನಿಶ್ಚಯವಾಗಿದ್ದ ಜೋಡಿ ದುರ್ಮರಣ

    ಬಳ್ಳಾರಿ:
    ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಮಳೆಗೆ ನಗರದ ಮೋಕಾ ಸಂಪರ್ಕ ಕಲ್ಪಿಸುವ ಅಂಡರ್ ಪಾಸ್‌ನಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಿದರು. ಮೊಣಕಾಲುದದ್ದ ನೀರಿನಲ್ಲಿ ಸಂಚಾರ ಮಾಡಲು ವಾಹನ ಸವಾರರು ಹರಸಾಹಸಪಟ್ಟರು. ಇದನ್ನೂ ಓದಿ:  Explained| ದಿಢೀರ್‌ ಟ್ರಂಪ್‌ಗೆ ಭಾರತದ ಮೇಲೆ ಪ್ರೀತಿ ಬಂದಿದ್ದು ಯಾಕೆ? ಅಮೆರಿಕದ ʼವರಿʼ ಏನು?

    ದಾವಣಗೆರೆ:
    ದಾವಣಗೆರೆಯಲ್ಲಿಯೂ ಭಾರೀ ಮಳೆ ಆಗುತ್ತಿರುವ ಹಿನ್ನೆಲೆ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಭದ್ರಾ ಬಲದಂಡೆ ನಾಲೆಯ ಅಕ್ವಾಡಕ್ ಹೊಡೆದು ಅಪಾರ ಪ್ರಮಾಣದ ನೀರು ಪೋಲಾಯಿತು. ನಾಲೆ ಹೊಡೆದ ಪರಿಣಾಮ ನಾಲೆಯ ಅಕ್ಕಪಕ್ಕ ಇರುವ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣ ಬೆಳೆ ಹಾನಿ ಆಗಿದೆ. ಇದರಿಂದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ 20 ವರ್ಷದಿಂದ ನಾಲೆ ರಿಪೇರಿ ಆಗಿಲ್ಲ ಈ ಕಾರಣದಿಂದ ನಾಲೆ ಹೊಡೆದಿದೆ ಎಂದು ಸ್ಥಳೀಯ ರೈತರ ಆಕ್ರೋಶ ವ್ಯಕ್ತಪಡಿಸಿದ್ರು.

  • ನಿರಂತರ ಮಳೆಯಿಂದ ಕೊಡಗಿನಲ್ಲಿ ಮತ್ತೆ ಭೂಕುಸಿತದ ಭೀತಿ

    ನಿರಂತರ ಮಳೆಯಿಂದ ಕೊಡಗಿನಲ್ಲಿ ಮತ್ತೆ ಭೂಕುಸಿತದ ಭೀತಿ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಕೆಲ ದಿನಗಳಿಂದ ಕೊಂಚ ಮಟ್ಟಿಗೆ ಬಿಡುವು ನೀಡಿದ ಮಳೆ ಕಳೆದ ಒಂದುವಾರದಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿದೆ. ಇದರಿಂದ ಜಿಲ್ಲೆಯ ಜನರು ಮತ್ತೆ ಹೈರಾಣಾಗುತ್ತಿದ್ದಾರೆ. ಈ ನಡುವೆ 2018 ರಲ್ಲಿ ಪ್ರಕೃತಿ ವಿಕೋಪ ಉಂಟಾಗಿದ್ದ ಗ್ರಾಮಗಳಲ್ಲಿ ಮತ್ತೆ ಭೂಕುಸಿತ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿದ್ದು ಗ್ರಾಮೀಣ ಭಾಗದ ಜನರು ಮತ್ತೆ ಆತಂಕಕ್ಕೆ ಒಳಗಾಗುತ್ತಿದ್ದಾರೆ.

    ಬೆಟ್ಟ ಗುಡ್ಡದ ನಿವಾಸಿಗಳಿಗೆ ಭೂಕುಸಿತದ ಭೀತಿ
    ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದ ಮಳೆ ಆರ್ಭಟ ಹೆಚ್ಚಾಗುತ್ತಿದೆ. ಜಿಲ್ಲೆಯ ಜನರು ಅಕ್ಷರಶಃ ತತ್ತರಿಸಿ ಹೋಗುತ್ತಿದ್ದಾರೆ. ಈ ನಡುವೆ ಹಳ್ಳ-ಕೊಳ್ಳ ನದಿ ತೊರೆಗಳಲ್ಲಿ ನಿಧಾನವಾಗಿ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಹೀಗಾಗಿ ಬೆಟ್ಟಗುಡ್ಡದ ನಿವಾಸಿಗಳಿಗೆ ಭೂಕುಸಿತದ (Landslides) ಭೀತಿ ಮತ್ತೆ ಕಾಡುತ್ತಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಿರಂತರ ಮಳೆ – ಭೂಕುಸಿತ ಆತಂಕದ ನಡುವೆಯೇ ಜನರ ಜೀವನ

    ಹೌದು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಿರುದಾಲೆ ಗ್ರಾಮದಲ್ಲಿ 2018-19ರಲ್ಲಿ ಭೀಕರ ಪ್ರವಾಹ, ಭೂಕುಸಿತ ಸಂಭವಿಸಿತ್ತು. ಅಂದು ಇಲ್ಲಿನ ಜನ ಮನೆ ಮಠಗಳನ್ನ ಬಿಟ್ಟು ಸುರಕ್ಷಿತ ಸ್ಥಳಗಳಿಗೆ ತೆರಳಿ ಜೀವ ಉಳಿಸಿಕೊಂಡಿದ್ರು. ಪ್ರತಿ ಮಳೆಗಾಲದ ಸಂದರ್ಭದಲ್ಲಿಯೂ ಇಲ್ಲಿನ ಜನರು ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಾರಿ ನಿರಂತರ ಮಳೆಯಾಗುತ್ತಿರುವುದರಿಂದ ಈ ಆತಂಕ ಇನ್ನೂ ಹೆಚ್ಚಾಗಿದೆ. ಇದನ್ನೂ ಓದಿ: ಕೊಡಗಿನಲ್ಲಿ ನಿರಂತರ ಗಾಳಿ ಮಳೆಯಿಂದ ಹರಡುತ್ತಿದೆ ವೈರಲ್ ಫೀವರ್‌ – ಒಂದೇ ತಿಂಗಳಲ್ಲಿ 3,000 ಕೇಸ್‌

    ಈ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳ ಕೆಲ ಜಾಗಗಳಲ್ಲಿ ಜಲ ಹಾಗೂ ಸಣ್ಣಪುಟ್ಟ ಪ್ರಮಾಣದಲ್ಲಿ ಭೂಕುಸಿತ ಉಂಟಾಗುತ್ತಿದೆ. ಹೀಗಾಗಿ ಇಲ್ಲಿನ ಜನರು 2018ರ ಕರಾಳ ದಿನಗಳು ಮತ್ತೆ ಮರುಕಳಿಸುತ್ತಾ ಅನ್ನೋ ಆತಂಕದಲ್ಲೇ ದಿನ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಕೌನ್ಸಿಲಿಂಗ್‌ ಮೂಲಕ ಪಿಡಿಒ ವರ್ಗಾವಣೆ ಪ್ರಕ್ರಿಯೆ: ಪ್ರಿಯಾಂಕ್ ಖರ್ಗೆ

  • ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

    ರಾಜಸ್ಥಾನ, ಗುಜರಾತ್‌ ಸೇರಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

    – ಗುಜರಾತ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

    ನವದೆಹಲಿ: ರಾಜಸ್ಥಾನ, ಒಡಿಶಾ, ಗುಜರಾತ್‌ (Gujarat) ಸೇರಿದಂತೆ ವಿವಿಧ ರಾಜ್ಯಗಳಲ್ಲಿಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಈಗಾಗಲೇ ಗುಜರಾತ್‌ಗೆ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಲಾಗಿದೆ. ಸೌರಾಷ್ಟ್ರ ಮತ್ತು ಕಚ್‌ ಪ್ರದೇಶದಲ್ಲಿ ಸೆಪ್ಟೆಂಬರ್ 6 ಮತ್ತು 7ರ ವರೆಗೆ ಭಾರೀ ಮಳೆಯಾಗುವ (Heavy Rain) ಸಾಧ್ಯತೆಯಿದೆ. ಇದನ್ನೂ ಓದಿ: ಅಪಾಯ ಮಟ್ಟ ಮೀರಿದ ಯಮುನಾ ನದಿ – ದೆಹಲಿ ಸಚಿವಾಲಯಕ್ಕೂ ನುಗ್ಗಿದ ಪ್ರವಾಹ ನೀರು

    ರಾಜಸ್ಥಾನದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ದೌಸಾ ಜಿಲ್ಲೆಯ ಸಿಕ್ರಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 104 ಮಿ.ಮೀ ಮಳೆಯಾಗಿದೆ. ಅಲ್ಲದೇ ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ.

    ದೆಹಲಿ-ಎನ್‌ಸಿಆರ್ ಪ್ರದೇಶಕ್ಕೆ ಯಾವುದೇ ಮಳೆಯ ಎಚ್ಚರಿಕೆ ನೀಡಲಾಗಿಲ್ಲ. ಆದ್ರೆ ಗುರುಗ್ರಾಮ್ ಮತ್ತು ಫರಿದಾಬಾದ್‌ಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಈ ನಗರಗಳಲ್ಲಿ ಹಗುರ ಮಳೆಯಾಗುವ ಸೂಚನೆ ಇದೆ. ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶದಲ್ಲೂ ಸ್ವಲ್ಪ ಪ್ರಮಾಣದ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಗೋವಾ | ಹಾಸ್ಟೆಲ್ ರೂಮ್‌ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

  • ಹಾಸನ | ಮಲೆನಾಡು ಭಾಗದಲ್ಲಿ ಭಾರಿ ಮಳೆ – ಬಿಸಿಲೆ ಘಾಟ್‌ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ

    ಹಾಸನ | ಮಲೆನಾಡು ಭಾಗದಲ್ಲಿ ಭಾರಿ ಮಳೆ – ಬಿಸಿಲೆ ಘಾಟ್‌ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ

    – ಸತತ 5 ಗಂಟೆಗಳಿಂದ ನಿಂತಲ್ಲೇ ನಿಂತ ವಾಹನಗಳು

    ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ತಾಲ್ಲೂಕಿನ ಪಶ್ಚಿಮ ಘಟ್ಟದ ಸಾಲಿನಲ್ಲಿ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ಬಿಸಿಲೆ ಘಾಟ್ ರಾಜ್ಯ ಹೆದ್ದಾರಿಯಲ್ಲಿ (Bisle Ghat Highway) ಭೂಕುಸಿತ ಉಂಟಾಗಿದೆ.

    ರಾಜ್ಯ ಹೆದ್ದಾರಿ 85ರ ಅಡ್ಡಹೊಳೆ ಸಮೀಪ ರಸ್ತೆಗೆ ಭಾರೀ ಪ್ರಮಾಣದ ಮಣ್ಣು ಕುಸಿದಿದೆ (Landslide). ರಸ್ತೆಗೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ನಿರಂತರ ಮಳೆಗೆ ಬೆಳೆಹಾನಿ – ಜಮೀನುಗಳಿಗೆ ಅಧಿಕಾರಿಗಳ ಭೇಟಿ, ಪರಿಶೀಲನೆ

    ಮುಂಜಾನೆ 3 ಗಂಟೆಯಿಂದ ಬಿಸಿಲೆ – ಕುಕ್ಕೆ ಸುಬ್ರಹ್ಮಣ್ಯ ಮಾರ್ಗದಲ್ಲಿ ವಾಹನ ಸಂಚಾರ ಬಂದ್ ಆಗಿದ್ದು, ಸತತ ಐದು ಗಂಟೆಗಳಿಂದ ವಾಹನಗಳು ನಿಂತಲ್ಲೇ ನಿಂತಿವೆ. ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆ ಆರಂಭಿಸಿದ್ದಾರೆ.

    ಕಳೆದ ಮೂರು ದಿನಗಳಿಂದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಅಕ್ರಮ ಗಣಿಗಾರಿಕೆಯಲ್ಲಿ ಶಾಮೀಲು ಆರೋಪ – ಕಂದಾಯ ನಿರೀಕ್ಷಕ, ಗ್ರಾಮಾಡಳಿತ ಅಧಿಕಾರಿ ಸಸ್ಪೆಂಡ್

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ; ರಸ್ತೆ, ವಾಣಿಜ್ಯ ಸಂಕೀರ್ಣಗಳು ಜಲಾವೃತ

    ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ; ರಸ್ತೆ, ವಾಣಿಜ್ಯ ಸಂಕೀರ್ಣಗಳು ಜಲಾವೃತ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿದ್ದು, ಹಲವು ಕಡೆ ಅವಾಂತರ ಸೃಷ್ಟಿ ಮಾಡಿದೆ.

    ಕುಮಟಾ ತಾಲೂಕಿನ ಗೋಕರ್ಣ, ಮಾದನಗೇರಿಯಲ್ಲಿ ರಾಜ್ಯ ಹೆದ್ದಾರಿ 143 ರಲ್ಲಿ ಹೆಚ್ಚಿನ ಮಳೆಯಿಂದಾಗಿ ರಸ್ತೆ ಜಲಾವೃತವಾಗಿ ಹಲವು ವಾಣಿಜ್ಯ ಮಳಿಗೆಗಳಿಗೆ ನೀರು ನುಗ್ಗಿದ್ದು, ನಷ್ಟ ತಂದೊಡ್ಡಿದೆ. ಇನ್ನು ಮಾದನಗೇರಿ, ಗೋಕರ್ಣ ಭಾಗದ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಸವಾರರು ಪರದಾಡುವಂತಾಗಿದೆ. ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

    ಹೊನ್ನಾವರದಲ್ಲಿ ಲಿಂಗನಮಕ್ಕಿ ಹಾಗೂ ಗೇರುಸೊಪ್ಪದ ಜಲಾಶಯದಿಂದ ನೀರು ಹೊರಬಿಟ್ಟ ಪರಿಣಾಮ ನದಿಪಾತ್ರದ ತೋಟಗಳಿಗೆ ನೀರು ನುಗ್ಗಿದೆ. ಹೊನ್ನಾವರದ ಕರ್ನಲ್ ಕಂಬದ ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡದಲ್ಲಿ ಸಣ್ಣ ಪ್ರಮಾಣದ ಕುಸಿದು ರಸ್ತೆಗೆ ಬಿದ್ದಿದೆ. ಪರಿಣಾಮ ಕೆಲವು ಕಾಲ ಸಂಚಾರಕ್ಕೆ ಅಡಚಣೆಯಾಗಿತ್ತು.

    ಕಾರವಾರದಲ್ಲಿ ಸುರಿದ ಮಳೆಗೆ ಕೋಡಿಬಾಗ್‌ನ ವಿಜಯಾ ಪಾಲೇಕರ್ ಎಂಬವರ ಮನೆಯ ಗೋಡೆ ಕುಸಿತವಾಗಿ ಹಾನಿಯಾಗಿದೆ. ಇದನ್ನೂ ಓದಿ: ಲಿಂಗನಮಕ್ಕಿ, ಗೇರುಸೊಪ್ಪ ಡ್ಯಾಮ್‌ನಿಂದ ನೀರು ಬಿಡುಗಡೆ – ಜೋಗ್‌ ಫಾಲ್ಸ್‌ಗೆ ಜೀವಕಳೆ

  • ರಾಜ್ಯದ ಹಲವೆಡೆ ವರ್ಷಧಾರೆ – ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ರಿಲೀಸ್‌

    ರಾಜ್ಯದ ಹಲವೆಡೆ ವರ್ಷಧಾರೆ – ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ರಿಲೀಸ್‌

    ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಗಡಿ ಜಿಲ್ಲೆ ಬೀದರ್‌ನಲ್ಲಿ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಔರಾದ್ ತಾಲೂಕಿನ ಎಕಂಬಾ ಗ್ರಾಮದಲ್ಲಿರುವ ಕೆರೆ ಹೊಡೆದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

    ಗ್ರಾಮದ ಕೆಲವು ಮನೆಗಳಿಗೂ ನೀರು ನುಗ್ಗಿದೆ. ಚಿಟ್ಟವಾಡಿ ಬಳಿ ರಸ್ತೆಯ ಮೇಲೆ ಮೊಣಕಾಲುದ್ದ ನೀರು ನಿಂತಿವೆ. ಬೀದರ್‌ನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೀದರ್‌ನಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

    ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ಮಳೆ ನೀರು ಮನೆಗೆ ನುಗ್ಗಿದೆ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರುಪಾಲಾಗಿದೆ. ಯಾದಗಿರಿಯಲ್ಲಿ ನೀರಿನಲ್ಲಿ ಸಿಲುಕಿದ್ದ ಹಸುವೊಂದನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆ ಹಿನ್ನಲೆ ಅಂಗನವಾಡಿಯಿಂದ ಪ್ರೌಢ ಶಾಲೆಯವರೆಗೆ ಜಿಲ್ಲಾಡಳಿತ ರಜೆಘೋಷಿಸಿದೆ.

    ಉಡುಪಿಯಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇತ್ತ ಹೊನ್ನಾವರದ ಗೇರುಸೊಪ್ಪ ಹಾಗೂ ಲಿಂಗನಮಕ್ಕಿ ಆಣೆಕಟ್ಟಿನಿಂದ ನೀರು ಬಿಡುಗಡೆ ಮಾಡಲಾಗಿದೆ.

    ಗೇರುಸೊಪ್ಪ ಆಣೆಕಟ್ಟಿನಿಂದ 13,192 ಕ್ಯೂಸೆಕ್, ಲಿಂಗನಮಕ್ಕಿ ಜಲಾಶಯದಿಂದ 50,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಜೋಗ ಜಲಪಾತ ಕಣ್ಮನ ಸೆಳೀತಿದೆ.

  • ಭೀಮಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ರಿಲೀಸ್‌ – ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

    ಭೀಮಾ ನದಿಗೆ 2.10 ಲಕ್ಷ ಕ್ಯೂಸೆಕ್ ನೀರು ರಿಲೀಸ್‌ – ಯಲ್ಲಮ್ಮ ದೇವಿ ದೇವಸ್ಥಾನ ಜಲಾವೃತ

    ಕಲಬುರಗಿ: ಮಹಾರಾಷ್ಟ್ರದಲ್ಲಿ ಧಾರಕಾರ ಮಳೆ (Maharashtra Rain) ಹಿನ್ನಲೆ ಉಜನಿ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಬಿಡಲಾಗಿದ್ದು, ಇದರ ಪರಿಣಾಮ ಕಲಬುರಗಿಯ ಭೀಮಾ ನದಿ ಪಾತ್ರದಲ್ಲಿ ಪ್ರವಾಹ (Flood) ಪರಿಸ್ಥಿತಿ ನಿರ್ಮಾಣವಾಗಿದೆ.

    ಅಫಜಲಪುರದ ಮಣ್ಣೂರ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದ್ದು, ಭೀಮಾ ನದಿ (Bheema River) ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇದನ್ನೂ ಓದಿ: ಅರೆಸ್ಟ್ ಆದ್ರೆ ಸರ್ಕಾರಿ ಉದ್ಯೋಗಿಗಳು ಕೆಲಸ ಕಳೆದುಕೊಳ್ತಾರೆ, ಪಿಎಂ, ಸಿಎಂಗೆ ಯಾಕೆ ಹೀಗಾಗಬಾರದು? – ಮೋದಿ

    ಹೀಗಾಗಿ ನೀರಿನ ಮಟ್ಟ ಇಳಿಯುವವರೆಗೆ ಭಕ್ತರಿಗೆ ಹಾಗೂ ಅರ್ಚಕರಿಗೆ ದೇವಸ್ಥಾನದತ್ತ ತೇರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: ಗಾಝಾ ನಗರವನ್ನು ನಾಶ ಮಾಡ್ತೇವೆ – ಹಮಾಸ್‍ಗೆ ಇಸ್ರೇಲ್ ವಾರ್ನಿಂಗ್

  • ಅಪಾಯ‌ಮಟ್ಟ ಮೀರಿದ ಕೃಷ್ಣಾ, ದೂದಗಂಗಾ, ವೇದಗಂಗಾ ನದಿಗಳು – ಪ್ರವಾಹ ಭೀತಿಯಲ್ಲಿ ಜನ

    ಅಪಾಯ‌ಮಟ್ಟ ಮೀರಿದ ಕೃಷ್ಣಾ, ದೂದಗಂಗಾ, ವೇದಗಂಗಾ ನದಿಗಳು – ಪ್ರವಾಹ ಭೀತಿಯಲ್ಲಿ ಜನ

    – ಕೃಷ್ಣಾ ನದಿಗೆ 2.52 ಲಕ್ಷ ಕ್ಯೂಸೆಕ್‌ ಒಳ ಹರಿವು

    ಚಿಕ್ಕೋಡಿ: ಮಹಾರಾಷ್ಟ್ರ (Maharashtra) ಘಟ್ಟ ಪ್ರದೇಶದಲ್ಲಿನ ಮಳೆಯ ಅಬ್ಬರ ಹಾಗೂ ಮಹಾರಾಷ್ಟ್ರ ಜಲಾಶಯಗಳಿಂದ ಬರುತ್ತಿರುವ ಭಾರೀ ಪ್ರಮಾಣದ ನೀರಿನಿಂದ ಕೃಷ್ಣಾ ನದಿ (Krishna River Water) ನೀರಿನ ಒಳ ಹರಿವಿನಲ್ಲಿ ಗಣನೀಯ ಏರಿಕೆಯಾಗಿದೆ.

    ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಒಟ್ಟು 2 ಲಕ್ಷದ 52 ಸಾವಿರ ಕ್ಯೂಸೆಕ್ ನೀರಿನ ಒಳ ಹರಿವು ದಾಖಲಾಗಿದೆ. ಅಪಾಯದ ಮಟ್ಟ ಮೀರಿ ಕೃಷ್ಣಾ ನದಿ ಹರಿಯುತ್ತಿದ್ದು ಒಟ್ಟು 12 ಪ್ರಮುಖ ಸೇತುವೆಗಳ ಮುಳುಗಡೆ ಯಥಾಸ್ಥಿತಿ ಮುಂದುವರೆದಿದೆ‌. ಚಿಕ್ಕೋಡಿ ತಾಲೂಕಿನ ಕಲ್ಲೋಳ‌ ಗ್ರಾಮದ ನದಿ ತೀರದ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ ನದಿ ತೀರದಲ್ಲಿ ಬೆಳಗಾವಿ ಜಿಲ್ಲಾಡಳಿತ ಹೈಅಲರ್ಟ ಜಾರಿ ಮಾಡಿದೆ. ಇದನ್ನೂ ಓದಿ: ಬೀದಿ ನಾಯಿಗಳನ್ನ ಹಿಡಿಯಿರಿ, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಬಿಟ್ಟುಬಿಡಿ: ಸುಪ್ರೀಂ ತೀರ್ಪಿನಲ್ಲಿ ಮಹತ್ವದ ತಿದ್ದುಪಡಿ

    ಮತ್ತೆ ನೀರು ಹೆಚ್ಚಳವಾದಲ್ಲಿ ಗ್ರಾಮಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ. ಇನ್ನು 50 ಸಾವಿರ ಕ್ಯೂಸೆಕ್ ನೀರು ಹೆಚ್ಚಾದಲ್ಲಿ ಪ್ರವಾಹ ಸೃಷ್ಟಿ ಆಗುವ ಆತಂಕದಲ್ಲಿ ನದಿ ತೀರದ ಜನರಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಕೊಲೆ, ತಮಿಳುನಾಡಿನಲ್ಲಿ ಶವ ಪತ್ತೆ – 6 ವರ್ಷಗಳ ಬಳಿಕ ಪ್ರಕರಣ ಭೇದಿಸಿದ ಶಿಡ್ಲಘಟ್ಟ ಪೊಲೀಸ್‌

    ಚಿಕ್ಕೋಡಿ, ನಿಪ್ಪಾಣಿ, ರಾಯಬಾಗ, ಅಥಣಿ ತಾಲೂಕಿನಲ್ಲಿ ಪ್ರವಾಹ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಈಗಾಗಲೇ ದೂದಗಂಗಾ ಹಾಗೂ ವೇದಗಂಗಾ ನದಿ ತೀರದ ಕಾರದಗಾ, ಹುನ್ನರಗಿ ಗ್ರಾಮಗಳು ಸೇರಿ ಕೆಲ ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ತಮ್ಮ ಜಾನುವಾರುಗಳ ಜೊತೆಗೆ ಸುರಕ್ಷಿತ ಸ್ಥಳಗಳತ್ತ ತೆರಳುತ್ತಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ RSS ಗೀತೆ ಹಾಡಿ ಗಮನ ಸೆಳೆದ ಡಿಕೆಶಿ – ಬಿಜೆಪಿಗೆ ಸಿಕ್ತು ಬ್ರಹ್ಮಾಸ್ತ್ರ