Tag: Rainfall

  • ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು

    ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು

    ಕಾರವಾರ: ಧಾರಾಕಾರವಾಗಿ ಸುರಿದ ಮಳೆಗೆ 2 ಮನೆಗಳು ಧರೆಗುರುಳಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಕನಾಳ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರಾಘು ಇಡುಕಪ್ಪ ನಾಯ್ಕ ಮತ್ತು ದಾಕ್ಷಾಯಿಣಿ ಇಡುಕಪ್ಪ ನಾಯ್ಕ ಎಂಬವರಿಗೆ ಸೇರಿದ ಮನೆ ಅಬ್ಬರದ ಗಾಳಿಮಳೆಗೆ ಕುಸಿದು ಬಿದ್ದು ಸಾಕಷ್ಟು ಹಾನಿಯುಂಟಾಗಿದೆ. ಇದನ್ನೂ ಓದಿ: ಕುಡಿತದ ಚಟ ಬಿಡಿಸೋ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು – ನಕಲಿ ವೈದ್ಯ ಅರೆಸ್ಟ್

    ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದ್ದು, ಮನೆಯಲ್ಲಿದ್ದ ವಸ್ತುಗಳು ನಾಶವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆ ಇಲ್ಲದೇ ಆ ಬಡ ಕುಟುಂಬ ಇದೀಗ ಬೀದಿಪಾಲಾಗಿದೆ.

    ಸಂತ್ರಸ್ಥರಿಗೆ ವಾಸ ಮಾಡಲು ಸೂರಿಲ್ಲದೇ ಪರದಾಡುವ ಸ್ಥಿತಿ ಎದುರಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಆ ಕುಟುಂಬದವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನನ್ನ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಯಾರೆಂದು ಗೊತ್ತಿಲ್ಲ: ಡಾ.ಸುಧಾಕರ್ ರಿಯಾಕ್ಷನ್

  • ಕೊಡಗಿನಲ್ಲಿ ನಿರಂತರ ಮಳೆ – ಭೂಕುಸಿತ ಆತಂಕದ ನಡುವೆಯೇ ಜನರ ಜೀವನ

    ಕೊಡಗಿನಲ್ಲಿ ನಿರಂತರ ಮಳೆ – ಭೂಕುಸಿತ ಆತಂಕದ ನಡುವೆಯೇ ಜನರ ಜೀವನ

    – 2018ರ ಪ್ರವಾಹ, ಭೂಕುಸಿತದ ಆತಂಕ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಯಿತ್ತೆಂದರೆ ಎಲ್ಲಿ, ಯಾವಾಗ, ಯಾವ ಬೆಟ್ಟ ಕುಸಿಯುತ್ತೋ ಅನ್ನೋ ಆತಂಕ ಶುರುವಾಗುತ್ತೆ. ಎಲ್ಲೇ ಭೂಕುಸಿತ ಸಂಭವಿಸಿದ್ರೂ ಇಲ್ಲಿನ ಜನಕ್ಕೆ 2018ರ ಪ್ರವಾಹವೇ ಕಣ್ಣಮುಂದೆ ಬಂದು ಹೋಗುತ್ತೆ. ಇದೀಗ ನಿರಂತರ ಮಳೆಯಿಂದ (Heavy Rain) ಮತ್ತೆ ಜನರಲ್ಲಿ ಗುಡ್ಡ ಕುಸಿತದ ಆತಂಕ ಶುರುವಾಗಿದೆ.

    Kodagu

    ಹೌದು. ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಇರುವ ಮಲೆತಿರಿಕೆ ಅಯ್ಯಪ್ಪ ಬೆಟ್ಟದಲ್ಲಿ 2019ರಲ್ಲಿಯೇ ಹಲವೆಡೆ ದೊಡ್ಡ ದೊಡ್ಡ ಬಿರುಕುಗಳು ಮೂಡಿದ್ದವು. ಜೊತೆಗೆ ಹಲವೆಡೆ ಚಿಕ್ಕಪುಟ್ಟ ಭೂಕುಸಿತಗಳು (Landslides) ಅಂಭವಿಸಿವೆ. ವಿಪರ್ಯಾಸವೆಂದರೆ ಈ ಬೆಟ್ಟದಲ್ಲಿ ನೂರಾರು ಕುಟುಂಬಗಳು 35 ರಿಂದ 40 ವರ್ಷಗಳಿಂದ ಮನೆ ನಿರ್ಮಿಸಿಕೊಂಡು ಬದುಕು ಕಟ್ಟಿಕೊಂಡಿವೆ. ಇದನ್ನೂ ಓದಿ: 104 ಸಂಭವನೀಯ ಭೂಕುಸಿತ, ಪ್ರವಾಹ ಪ್ರದೇಶಗಳ ಗುರುತು – 2,995 ಕುಟುಂಬಗಳ ಸ್ಥಳಾಂತರಕ್ಕೆ ಪ್ಲ್ಯಾನ್‌

    ಕಳೆದ 4-5 ವರ್ಷಗಳ ಹಿಂದೆಯೇ ಬೆಟ್ಟದಲ್ಲಿ ಸಾಕಷ್ಟು ಬಿರುಕುಗಳು ಮೂಡಿದ್ದರಿಂದ ಅಲ್ಲಿನ ಎಲ್ಲಾ ನಿವಾಸಿಗಳನ್ನು ಮಳೆಗಾಲದಲ್ಲಿ ಸ್ಥಳಾಂತರ ಮಾಡಿ ನಿರಾಶ್ರಿತರ ಶಿಬಿರಗಳಿಗೆ ಕಳುಹಿಸಲಾಗಿತ್ತು. ಈ ಕುಟುಂಬಗಳ ಒತ್ತಾಯದ ಮೇರೆಗೆ ವಿರಾಜಪೇಟೆ ಪಕ್ಕದಲ್ಲೇ ಇರುವ ಅಂಬಟ್ಟಿ ಎಂಬಲ್ಲಿ ನಿವೇಶನ ಹಂಚಲು ಅಂದಿನ ಬಿಜೆಪಿ ಸರ್ಕಾರ ನಿರ್ಧರಿಸಿತ್ತು. ಹಾಗೇ ಹೇಳಿ 4-5 ವರ್ಷಗಳೇ ಕಳೆದರೂ ಇಂದಿಗೂ ಆ ಕೆಲಸ ಆಗಿಲ್ಲ. ಇದನ್ನೂ ಓದಿ: ಮುಂಗಾರು ಅಬ್ಬರ – ಕಾವೇರಿ ನದಿಯಲ್ಲಿ ಪಿಂಡ ಪ್ರದಾನ ನಿಷೇಧ

    ಹೀಗಾಗಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಇಲ್ಲಿನ ಬೆಟ್ಟದ ನಿವಾಸಿಗಳು ಆತಂಕಗೊಂಡಿದ್ದಾರೆ. ಈ ಬಾರಿ ಕಾಳಜಿ ಕೇಂದ್ರಕ್ಕೆ ಹೋಗಲ್ಲ, ಏನೇ ಆದ್ರೂ ಇಲ್ಲೇ ಇರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಮಳೆಯಬ್ಬರ – ರಾಜ್ಯದ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

  • ದೆಹಲಿಯಲ್ಲಿ ಮಳೆ ಆರ್ಭಟ; ಪ್ರಮುಖ ರಸ್ತೆಗಳು ಜಲಾವೃತ – ಸಂಚಾರ ಅಸ್ತವ್ಯಸ್ತ

    ದೆಹಲಿಯಲ್ಲಿ ಮಳೆ ಆರ್ಭಟ; ಪ್ರಮುಖ ರಸ್ತೆಗಳು ಜಲಾವೃತ – ಸಂಚಾರ ಅಸ್ತವ್ಯಸ್ತ

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಗರದ ಪ್ರಮುಖ ಭಾಗಗಳು ಮಳೆ ನೀರಿನಿಂದ ಆವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.

    ದೆಹಲಿಯಲ್ಲಿ ಕಾರ್ಮೋಡ ಆವರಿಸಿ ಮಳೆ ಸುರಿಯುತ್ತಿದೆ. ನಿರಂತರ ಮಳೆಯು ತೀವ್ರ ಶಾಖ ಮತ್ತು ಹೆಚ್ಚಿನ ಮಾಲಿನ್ಯ ಮಟ್ಟವನ್ನು ಇಳಿಸಿದೆ. ಇಂಡಿಯಾ ಗೇಟ್, ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮಂಡಿ ಹೌಸ್, ತುಘಲಕ್ ರಸ್ತೆ ಮತ್ತು ನಗರದ ಹಲವಾರು ಭಾಗಗಳು ನೀರಿನಿಂದ ಆವೃತವಾಗಿವೆ. ನೆರೆಯ ನೋಯ್ಡಾ ಮತ್ತು ಗಾಜಿಯಾಬಾದ್‌ನಲ್ಲಿಯೂ ಸಹ ಭಾರೀ ಮಳೆಯಾಗುತ್ತಿದೆ.

    ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದೆಹಲಿಗೆ ಆರೆಂಜ್‌ ಅಲರ್ಟ್‌ ಘೋಷಿಸಿತ್ತು. ಗುಡುಗು ಸಹಿತ ಮಧ್ಯಮ ಮಳೆ (ಗಂಟೆಗೆ 5-15 ಮಿಮೀ) ಮುನ್ಸೂಚನೆ ನೀಡಿತ್ತು. ಬೆಳಗ್ಗೆ ಮಳೆ ನೀರು ನಿಂತಿದ್ದರಿಂದ ವಿವಿಧ ಸ್ಥಳಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಮಹಾಮಾಯ ಮೇಲ್ಸೇತುವೆಯ ಕೆಳಗಿರುವ ರಸ್ತೆ ಮತ್ತು ಅಂಬೇಡ್ಕರ್ ಪಾರ್ಕ್ ಬಳಿಯ ರಸ್ತೆ ಕೂಡ ಜಲಾವೃತವಾಗಿದೆ.

    ದೆಹಲಿ ತಾಪಮಾನ 28 ಡಿಗ್ರಿ ಸೆಲ್ಸಿಯಸ್‌ ಇದ್ದು, ಜನತೆಗೆ ಆಹ್ಲಾದಕರ ಹವಾಮಾನದ ಅನುಭವ ಸಿಗುತ್ತಿದೆ. ಗಾಳಿಯ ಗುಣಮಟ್ಟ ಸೂಚ್ಯಂಕ ಕೂಡ ಉತ್ತಮ ಸ್ಥಿತಿಯಲ್ಲಿದೆ. ಮಂಗಳವಾರ ದಕ್ಷಿಣ ದೆಹಲಿ, ಆಗ್ನೇಯ ದೆಹಲಿ, ಮಧ್ಯ ದೆಹಲಿ, ರಾಷ್ಟ್ರೀಯ ಹೆದ್ದಾರಿ 8, ದೆಹಲಿ-ಜೈಪುರ ಮಾರ್ಗ, ಐಟಿಒ ಮತ್ತು ಏಮ್ಸ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ನೀರು ನಿಂತ ಕಾರಣ ಸಂಚಾರ ಜಾಮ್ ಉಂಟಾಗಿತ್ತು.

    ಜೂನ್ 29 ರಿಂದ ದೆಹಲಿಯ ಮುಂಗಾರು ಮಳೆಯು ಋತುಮಾನದ ಸರಾಸರಿಗಿಂತ 8% ಹೆಚ್ಚಾಗಿದೆ. ದೆಹಲಿಯಲ್ಲಿ ಇದುವರೆಗೆ 234.6 ಮಿಮೀ ಮಳೆಯಾಗಿದೆ ಎಂದು ಐಎಂಡಿ ದತ್ತಾಂಶವು ತಿಳಿಸಿದೆ.

  • ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು

    ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಭೂಕುಸಿತ ಎಚ್ಚರಿಕೆ ನೀಡಿದ ಭೂವಿಜ್ಞಾನಿಗಳು

    – ಜಿಲ್ಲೆಯ 19 ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಮುಂದುವರಿಕೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಅಬ್ಬರದ ಮಳೆಯು ಸಾಕಷ್ಟು ಅನಾಹುತ ತಂದೊಡ್ಡಿದ್ದು, ನಿರಂತರ ಭೂಕುಸಿತ ಜನರಲ್ಲಿ ಜೀವ ಭಯ ಸೃಷ್ಟಿಸಿದೆ. ಇದೀಗ ಜಿಲ್ಲಾಡಳಿತ ಅತಿ ಹೆಚ್ಚು ಭೂಕುಸಿತ ಪ್ರದೇಶಗಳ ಡೇಂಜರ್‌ ಝೋನ್ ಪಟ್ಟಿ ಮಾಡಿ ನಿರ್ಬಂಧ ವಿಧಿಸಿದ್ದು, ಭೂಕುಸಿತ ಪ್ರದೇಶದ ಜನರನ್ನು ರಕ್ಷಣೆ ಮಾಡಿದೆ.

    ಗುರುವಾರ ಈ ಭಾಗದಲ್ಲಿ ರಸ್ತೆಯ ಮೇಲೆ 30 ಮೀಟರ್‌ಗೂ ಹೆಚ್ಚು ಗುಡ್ಡ ಕುಸಿದು ಕೊಡಸಳ್ಳಿ ವಿದ್ಯುತ್ ಉತ್ಪಾದನಾ ಘಟಕಕ್ಕೆ ಹೋಗುವ ಮಾರ್ಗ ಬಂದ್ ಆಗಿದ್ದು, ವಿದ್ಯುತ್ ಗಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 25 ಜನ ಸಿಬ್ಬಂದಿ ಹಾಗೂ ಕೊಡಸಳ್ಳಿಗೆ ತೆರಳಿದ್ದ ಬಸ್ ಸಹ ಸಂಚರಿಸಲಾಗದೇ ಸಿಲುಕಿಕೊಂಡಿತು. ಇದರ ನಂತರ ತಕ್ಷಣ ಕಾರ್ಯಾಚರಣೆಗೆ ಇಳಿದ ಜಿಲ್ಲಾಡಳಿತ ಹಾಗೂ ಕೆಪಿಸಿ ಇಲಾಖೆಯವರು ಓರ್ವ ಕಾಲೇಜು ವಿದ್ಯಾರ್ಥಿನಿ ಸೇರಿ ಆರು ಜನರನ್ನು ರಕ್ಷಿಸಿ ಸ್ಥಳಾಂತರಿಸಿದ್ದಾರೆ. ಇದೇ ಭಾಗದಲ್ಲಿ ಬಾಳೆಮನೆ, ಸುಳಗೇರಿ ಗ್ರಾಮವಿದ್ದು, 150 ಕ್ಕೂ ಹೆಚ್ಚು ಜನರಿರುವ ಈ ಊರಿಗೆ ಸಂಪರ್ಕ ಕಡಿತವಾಗಿದೆ. ಇದಲ್ಲದೇ ನದಿ ಭಾಗದಲ್ಲಿ ಕಿಲೋಮೀಟರ್ ಗಟ್ಟಲೇ ನಡೆದುಕೊಂಡು ಬಂದು ರಸ್ತೆ ಸಂಪರ್ಕ ಮಾಡಬೇಕಿದ್ದು, ತೊಂದರೆ ಅನುಭವಿಸುತ್ತಿದ್ದಾರೆ. ಇದನ್ನೂ ಓದಿ: ಹಿಮಾಚಲ ಪ್ರದೇಶ | ಭಾರೀ ಮಳೆಗೆ 37 ಮಂದಿ ಸಾವು – 400 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹಾನಿ

    ಕೊಡಸಳ್ಳಿ ಭಾಗದಲ್ಲಿ ಸ್ಥಳೀಯ ಭೂವಿಜ್ಞಾನಿಗಳ ತಂಡ ಅಧ್ಯಯನ ನಡೆಸಿದ್ದು, ಮತ್ತೆ ಭೂ ಕುಸಿಯುವ ಸಾಧ್ಯತೆಯನ್ನು ತಿಳಿಸಿದೆ. ಇದಲ್ಲದೇ ಭೂವಿಜ್ಞಾನಿಗಳ ತಂಡ ಸಹ ಈ ಹಿಂದೆಯೇ ಕೊಡಸಳ್ಳಿ ಭಾಗದಲ್ಲಿ ಹೆಚ್ಚಿನ ಭೂಕುಸಿತವಾಗುವ ಸಾಧ್ಯತೆ ಕುರಿತು ವರದಿ ಸಹ ನೀಡಿತ್ತು. ಇವೆಲ್ಲವನ್ನೂ ಪರಿಗಣಿಸಿದ ಜಿಲ್ಲಾಡಳಿತ ಕೊಡಸಳ್ಳಿ ಭಾಗದಲ್ಲಿ ಜನ ಸಂಚಾರಕ್ಕೆ ನಿರ್ಬಂಧ ಹೇರಿದೆ. ಇದರ ಜೊತೆಗೆ ಈ ಭಾಗದಲ್ಲಿ ಭೂಕುಸಿತದ ಪ್ರಮಾಣ ತಗ್ಗುವ ವರೆಗೆ ಬಿದ್ದ ಮಣ್ಣನ್ನು ತೆರವು ಮಾಡದಿರಲು ತೀರ್ಮಾನಿಸಿದ್ದು, ವಿದ್ಯುತ್ ಗಾರ ಹಾಗೂ ಗ್ರಾಮಗಳಿಗೆ ಜನ ತೆರಳಲು ಎರಡು ಬೋಟ್ ವ್ಯವಸ್ಥೆ ಮಾಡಿದೆ. ಹವಾಮಾನ ಇಲಾಖೆ ಜುಲೈ ತಿಂಗಳಲ್ಲಿ ಹೆಚ್ಚಿನ ಮಳೆಯಾಗುವ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ವಿಜ್ಞಾನಿಗಳ ತಂಡಕ್ಕೆ ಭೂಕುಸಿತ ಪ್ರದೇಶದ ಈಗಿನ ಪರಿಸ್ಥಿತಿ ವರದಿ ಸಲ್ಲಿಸಲು ಕೋರಿದೆ. ಈ ವರದಿ ಆಧರಿಸಿ ಜಿಲ್ಲಾಡಳಿತ ಶಿರೂರಿನಲ್ಲಿ ಆದ ಪ್ರಾಣಹಾನಿಯಾದಂತೆ ಇತರೆಡೆ ಪ್ರಾಣ ಹಾನಿ ತಪ್ಪಿಸಲು ಕ್ರಮ ಕೈಗೊಳ್ಳುತ್ತಿದೆ.

    ಉತ್ತರ ಕನ್ನಡ ಜಿಲ್ಲೆಯಲ್ಲಿ 439 ಭೂಪ್ರದೇಶಗಳು ಅತಿ ಸೂಕ್ಷ್ಮ ಭೂಕುಸಿತ ವಲಯವಿದ್ದು, ಇವುಗಳಲ್ಲಿ 21 ಭಾಗಗಳು ಅತಿ ಅಪಾಯವಿರುವ ವರದಿಯನ್ನು ಭೂವಿಜ್ಞಾನಿಗಳು ನೀಡಿದ್ದಾರೆ. ಸದ್ಯ ಜಿಲ್ಲಾಡಳಿತ 19 ಭಾಗದ ಭೂಕುಸಿತ ಪ್ರದೇಶದಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದು, ಶಿರೂರು, ಕೊಡಸಳ್ಳಿ ಭಾಗದಲ್ಲಿ ಜನರ ಓಡಾಟಕ್ಕೆ ನಿಷೇಧ ಹೇರಿದೆ. ಈ ಮೂಲಕ ಶಿರೂರು ಭೂಕುಸಿತದಲ್ಲಿ ಆದ ಪ್ರಾಣಹಾನಿ ಇತರೆಡೆ ಆಗದಂತೆ ಎಚ್ಚರ ವಹಿಸುವ ಕ್ರಮವನ್ನು ಜಿಲ್ಲಾಡಳಿತ ಕೈಗೊಂಡಿದೆ. ಇದನ್ನೂ ಓದಿ: ಗುತ್ತಿಗೆದಾರನ ಹತ್ಯೆ ಆರೋಪಿ ಮನೆಗೆ ಬೆಂಕಿ – 6 ಜನ ಅರೆಸ್ಟ್‌

  • ಉತ್ತರ ಕನ್ನಡ – ಎರಡು ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಣೆ

    ಉತ್ತರ ಕನ್ನಡ – ಎರಡು ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಣೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕುಗಳ ಅಂಗನವಾಡಿ, ಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.

    ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ರಜೆ ಘೋಷಣೆ ಮಾಡಲಾಗಿದ್ದು, ಇಂದು ಜಿಲ್ಲೆಯಾದ್ಯಾಂತ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

    ಜಿಲ್ಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತ್ತಿದ್ದು, ಇಂದು ಮಲೆನಾಡು ಭಾಗದಲ್ಲಿ ಮಳೆಯ ಜೊತೆಗೆ ಗಾಳಿಯ ರಭಸವೂ ಹೆಚ್ಚಿರಲಿದೆ. ಸಂಪ್ರದಾಯಿಕ ಮೀನುಗಾರಿಕೆಗೂ ಕೂಡ ನಿರ್ಬಂಧ ಇದ್ದು, ಜಿಲ್ಲೆಯ ಜಲಪಾತಗಳು, ಕಡಲತೀರ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರೆಸಲಾಗಿದೆ.

  • ರಾಜ್ಯದ ಹವಾಮಾನ ವರದಿ 14-06-2025

    ರಾಜ್ಯದ ಹವಾಮಾನ ವರದಿ 14-06-2025

    ಮುಂಗಾರು ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳ ಜನಜೀನ ಅಸ್ತವ್ಯಸ್ತವಾಗಿದೆ. ಇನ್ನೂ 3 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದ್ದು, ಮಳೆಯ ಆರ್ಭಟ ಮುಂದುವರಿಯಲಿದೆ.

    ಶನಿವಾರ: ಜೂನ್ 14ರ ಶನಿವಾರದಂದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

    ಭಾನುವಾರ: ಇನ್ನು ಭಾನುವಾರ ಕೂಡ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ ಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉಳಿದೆಡೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮುಂದಿನ ವಾರ ಸಹ ಕರಾವಳಿ ಹಾಗೂ ಮಲೆನಾಡು ಭಾಗದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರಲಿದೆ. ಮೈಸೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಬೀದರ್ ಜಿಲ್ಲೆಗಳು ಆರೆಂಜ್ ಅಲರ್ಟ್ನಲ್ಲಿ ಮುಂದುವರಿಯಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 26-22
    ಮೈಸೂರು: 27-22

    ಮಂಡ್ಯ: 27-22
    ಮಡಿಕೇರಿ: 23-19
    ರಾಮನಗರ: 27-22
    ಹಾಸನ: 23-20
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 27-21

    ಕೋಲಾರ: 28-22
    ತುಮಕೂರು: 27-22
    ಉಡುಪಿ: 27-22
    ಕಾರವಾರ: 28-26
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-22
    ಹಾವೇರಿ: 27-23
    ಬಳ್ಳಾರಿ: 29-25
    ಗದಗ: 28-22
    ಕೊಪ್ಪಳ: 29-23

    ರಾಯಚೂರು: 32-26
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 29-24
    ಕಲಬುರಗಿ: 31-24
    ಬಾಗಲಕೋಟೆ: 27-24

  • ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

    ಮಹಾರಾಷ್ಟ್ರ | ಭಾರೀ ಮಳೆ ಗಾಳಿಗೆ ಪ್ರವೇಶ ದ್ವಾರ ಕುಸಿದು ಮೂವರು ಬಲಿ

    ಮುಂಬೈ: ಮಹಾರಾಷ್ಟ್ರದಲ್ಲಿ (Maharashtra) ನೈರುತ್ಯ ಮುಂಗಾರು ರೌದ್ರರೂಪ ತಾಳಿದೆ. ಇಲ್ಲಿನ ಛತ್ರಪತಿ ಸಂಭಾಜಿ ನಗರದಲ್ಲಿ (Chhatrapati Sambhajinagar) ಭಾರೀ ಮಳೆ ಮತ್ತು ಗಾಳಿಯಿಂದಾಗಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

    ಸಂಭಾಜಿನಗರದಲ್ಲಿರುವ ಸಿದ್ಧಾರ್ಥ್ ಗಾರ್ಡನ್ (Siddharth Garden) ಬಳಿಯ ಪ್ರವೇಶ ದ್ವಾರ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ದುರಂತದಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

    ಬಲಿಪಶುಗಳು ಗೇಟ್ ಬಳಿ ನಿಂತಿದ್ದಾಗ ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ಬಿದ್ದು, ಕೆಳಗೆ ಸಿಲುಕಿಕೊಂಡಿದ್ದರಿಂದ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಇನ್ನೂ ಗಾಯಗೊಂಡ ಇಬ್ಬರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತರ ಕುಟುಂಬಕ್ಕೆ ಪುರಸಭೆಯು ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದೆ. ಇದನ್ನೂ ಓದಿ: ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ

  • ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    ಕೇರಳದಲ್ಲಿ ಭಾರೀ ಮಳೆಗೆ 5 ಸಾವು – 8 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    – ಕಣ್ಣೂರು, ಎರ್ನಾಕುಳಂ, ಕಾಸರಗೋಡು ಜಿಲ್ಲೆಗಳಲ್ಲಿ ಮಳೆಗೆ ಭಾರೀ ಹಾನಿ
    – ಮಧುವಾಹಿನಿ ಅಬ್ಬರಕ್ಕೆ ಮಧೂರು ದೇಗುಲ ಮುಳುಗಡೆ

    ತಿರುವನಂತಪುರಂ: ಕೇರಳದಲ್ಲಿ ( ಶುಕ್ರವಾರ ಸುರಿದ ಭಾರಿ ಮಳೆಗೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ರಾಜ್ಯಾದ್ಯಂತ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಭಾರೀ ಗಾಳಿ ಮತ್ತು ಉಬ್ಬರವಿಳಿತದಿಂದಾಗಿ ಮನೆಗಳಿಗೆ ವ್ಯಾಪಕ ಹಾನಿಯಾಗಿದೆ.

    ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಎಂಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಉಳಿದ ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿತ್ತು. ಶನಿವಾರ ರಾಜ್ಯಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಜೂನ್ 5 ರವರೆಗೆ ರಾಜ್ಯಾದ್ಯಂತ ಭಾರೀ ಮಳೆ ಮುಂದುವರಿಯಲಿದೆ. ಕೇರಳದಲ್ಲಿ ಮುಂದಿನ ಐದು ದಿನಗಳವರೆಗೆ ಪಶ್ಚಿಮ ದಿಕ್ಕಿನ ಗಾಳಿ ಬೀಸುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಮತ್ತು ನದಿ ದಂಡೆಯ ಬಳಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಕೆ. ರಾಜನ್ ತಿಳಿಸಿದ್ದಾರೆ.

    ಕೊಟ್ಟಾಯಂ ಜಿಲ್ಲೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಇಬ್ಬರು ಯುವಕರು ಮುಳುಗಿ ಸಾವನ್ನಪ್ಪಿದ್ದರೆ, ತಿರುವನಂತಪುರಂ ಬಳಿಯ ಸಮುದ್ರದಲ್ಲಿ ಮೀನುಗಾರಿಕೆ ದೋಣಿ ಮಗುಚಿ ಬಿದ್ದು ಮೀನುಗಾರನೊಬ್ಬ ಸಾವನ್ನಪ್ಪಿದ್ದಾನೆ. ಕೊಚ್ಚಿಯಲ್ಲಿ ಮರ ಬಿದ್ದು 85 ವರ್ಷದ ಎಂಜಿಎನ್‌ಆರ್‌ಇಜಿಎ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದ ಮೂಲದ ವ್ಯಕ್ತಿಯೊಬ್ಬ ಕೊಚ್ಚಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಬಹುತೇಕ ಎಲ್ಲಾ ಜಿಲ್ಲೆಗಳ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಡಿಂಗಿ ದೋಣಿಗಳ ಮೂಲಕ ಕುಟುಂಬಗಳನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು. ನದಿಗಳ ಬಳಿ ವಾಸಿಸುವ ಜನರನ್ನು ಸಹ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು. ರಾಜ್ಯಾದ್ಯಂತ 2,000 ಕ್ಕೂ ಹೆಚ್ಚು ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಯಿತು.

    ರಾಜ್ಯಾದ್ಯಂತ ಭಾರೀ ಮಳೆಗೆ ಮರಗಳು ಉರುಳಿಬಿದ್ದ ಪರಿಣಾಮ ಮನೆಗಳಿಗೆ ಹಾನಿಯಾಗಿದೆ. ರಾಜ್ಯದಾದ್ಯಂತ ಕರಾವಳಿ ಪ್ರದೇಶಗಳಲ್ಲಿನ ಅನೇಕ ಮನೆಗಳು ಉಬ್ಬರವಿಳಿತದ ಪರಿಣಾಮವಾಗಿ ನಾಶವಾದವು. ಮಳೆಯಿಂದಾಗಿ ರಾಜ್ಯಾದ್ಯಂತ ವ್ಯಾಪಕ ಬೆಳೆ ನಷ್ಟವಾಗಿದೆ.

  • ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

    ಮಂಗಳೂರಲ್ಲಿ ವರುಣಾರ್ಭಟ; ಮಳೆಗೆ 6 ಮಂದಿ ಬಲಿ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದೆ. ಭಾರೀ ಮಳೆ ಪರಿಣಾಮ ವಿವಿಧೆಡೆ ಆರು ಮಂದಿ ಬಲಿಯಾಗಿದ್ದಾರೆ.

    ಮನೆ ಮೇಲೆ ಕುಸಿದ ಗುಡ್ಡ; ಮೂವರು ದುರ್ಮರಣ
    ಮಂಗಳೂರು (Mangaluru Rains) ಹೊರವಲಯದ ದೇರಳಕಟ್ಟೆಯ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತವಾಗಿ ಮನೆ ಧರಶಾಹಿಯಾಗಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದರು. ದುರಂತದಲ್ಲಿ ಮೂವರು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಕಾಂತಪ್ಪ ಪೂಜಾರಿ ಎಂಬವರ ಮನೆ ಸಂಪೂರ್ಣ ಕುಸಿತವಾಗಿದೆ. ನಸುಕಿನ 4:30ರ ಸುಮಾರಿಗೆ ಗುಡ್ಡ ಕುಸಿದಿದ್ದು, ಸೀತಾರಾಮ ಅವರು ಮನೆಯಿಂದ ಓಡಿ ಹೊರ ಬಂದಿದ್ದರು. ಮನೆಯೊಳಗೆ ಅವರ ತಂದೆ 65 ವರ್ಷದ ಕಾಂತಪ್ಪ ಪೂಜಾರಿ, ತಾಯಿ 60 ವರ್ಷದ ಪ್ರೇಮ, ಪತ್ನಿ 31 ವರ್ಷದ ಅಶ್ವಿನಿ ಮತ್ತು ಇಬ್ಬರು ಮಕ್ಕಳಾದ ಎರಡೂವರೆ ವರ್ಷದ ಆರ್ಯನ್ ಹಾಗೂ ಒಂದು ವರ್ಷದ ಮಗು ಆಯುಷ್ ಅಡಿಯಲ್ಲಿ ಸಿಲುಕಿಕೊಂಡಿದ್ದರು. ಸ್ಥಳೀಯರು ಬಂದು ಕಾಂತಪ್ಪ ಪೂಜಾರಿಯವರನ್ನ ರಕ್ಷಿಸಿದ್ದು, ಅವರ ಕಾಲಿಗೆ ಗಂಭೀರ ಗಾಯವಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇಮ ಮಣ್ಣಿನಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಮಣ್ಣಿನಡಿಯಲ್ಲಿದ್ದ ಒಂದು ಮಗು ಸಾವನ್ನಪ್ಪಿದ್ದು, ಬಳಿಕ ತಾಯಿ ಹಾಗೂ ಒಂದು ಮಗುವನ್ನು ರಕ್ಷಣೆ ಮಾಡಲಾಗಿತ್ತು. ಆಸ್ಪತ್ರೆಗೆ ಸಾಗಿಸುವಾಗ ಆ ಮಗುವೂ ಮೃತಪಟ್ಟಿರುವ ದುರಂತ ಘಟನೆ ನಡೆದಿದೆ. ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಭಾರೀ ಮಳೆ – ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ

    ವಿದ್ಯುತ್ ಶಾಕ್‌ಗೆ ಲೈನ್‌ಮನ್ ಬಲಿ
    ಓಡಿನ್ಮಾಳ ಗ್ರಾಮದ ಕುಮ್ಮಂಜ ಎಂಬಲ್ಲಿ ಘಟನೆ ವಿದ್ಯುತ್ ಶಾಕ್‌ನಿಂದ ಲೈನ್‌ಮನ್ ವೀರೇಶ್ ಜೈನ್ (27) ಮೃತಪಟ್ಟಿದ್ದಾರೆ. ಕೆಂಜಿಲ ಮನೆ ನಿವಾಸಿ ಸುಕುಮಾರ್ ಜೈನ್ ಮತ್ತು ಪೂರ್ಣಿಮಾ ದಂಪತಿಯ ಎರಡನೇ ಮಗ ಇವರು. ಹೆಚ್‌ಡಿ ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವಿಗೀಡಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಾಡದೋಣಿ ಮಗುಚಿ ಇಬ್ಬರು ನೀರುಪಾಲು
    ಮಂಗಳೂರಿನಲ್ಲಿ ಮಳೆಯ ಜೊತೆ ಕಡಲಬ್ಬರ ಜೋರಾಗಿದೆ. ಪರಿಣಾಮ ನಾಡದೋಣಿ ಮಗುಚಿ ಇಬ್ಬರು ನೀರುಪಾಲಾಗಿರುವ ಘಟನೆ ತೋಟಬೆಂಗ್ರೆ ಅಳಿವೆ ಬಾಗಿಲು ಎಂಬಲ್ಲಿ ನಡೆದಿದೆ. ತೋಟಬೆಂಗ್ರೆ ನಿವಾಸಿಗಳಾದ ಯಶವಂತ, ಕಮಲಾಕ್ಷ ನೀರುಪಾಲಾದ ಮೀನುಗಾರರಾಗಿದ್ದಾರೆ. ನಾಡದೋಣಿಯ ಅವಶೇಷಗಳು ಕಡಲತೀರದಲ್ಲಿ ಬಂದು ಬಿದ್ದಿವೆ. ನೀರಿನಲ್ಲಿ ಕಣ್ಮರೆಯಾಗಿರುವ ಮೀನುಗಾರರಿಗೆ ಶೋಧ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ʻಮರಣ ಮಳೆʼಗೆ ಅಜ್ಜಿ, ಮೊಮ್ಮಕ್ಕಳು ಬಲಿ – 9 ಗಂಟೆಗಳ ಜೀವನ್ಮರಣ ಹೋರಾಟದ ನಂತ್ರ ಬದುಕುಳಿದ ತಾಯಿ!

  • ಮಂಗಳೂರಲ್ಲಿ ಭಾರಿ ಮಳೆ; ಪಂಪ್‌ವೆಲ್ ಸೇತುವೆ ಬಳಿ ಪ್ರವಾಹ ಪರಿಸ್ಥಿತಿ

    ಮಂಗಳೂರಲ್ಲಿ ಭಾರಿ ಮಳೆ; ಪಂಪ್‌ವೆಲ್ ಸೇತುವೆ ಬಳಿ ಪ್ರವಾಹ ಪರಿಸ್ಥಿತಿ

    ಮಂಗಳೂರು: ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಪಂಪ್‌ವೆಲ್ ಸೇತುವೆ (Pumpwell Flyover) ಬಳಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

    ನಿರಂತರ ಮಳೆಗೆ ರಾಜಕಾಲುವೆಯಲ್ಲಿ ನೀರು ಹರಿದಿದೆ. ನಗರದ ಪಂಪ್‌ವೆಲ್‌ನಲ್ಲಿ ರಸ್ತೆ ಮೇಲೆ ಮಳೆ ನೀರು ಹರಿದಿದೆ. ಪರಿಣಾಮ ಪಂಪ್‌ವೆಲ್‌ನಲ್ಲಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಭಾರೀ ಮಳೆಗೆ ಆಟೋ ಮೇಲೆ ಮುರಿದು ಬಿದ್ದ ಮರ – ಚಾಲಕ ದುರ್ಮರಣ

    ಎರಡು ಗಂಟೆಯಿಂದ ನಿರಂತರವಾಗಿ ಮಳೆ ಸುರಿದಿದೆ. ಪಂಪ್‌ವೆಲ್ ಫ್ಲೈಓವರ್ ಕೆಳಭಾಗ ಸಂಪೂರ್ಣ ಜಲಾವೃತವಾಗಿದೆ.