ಲಕ್ನೋ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರಪ್ರದೇಶದ (Uttar Pradesh) ಸುಮಾರು 10 ಜಿಲ್ಲೆಗಳಲ್ಲಿ ಶಾಲೆಗಳನ್ನು (Schools) ಬಂದ್ ಮಾಡಲಾಗಿದೆ. ಗುರುಗ್ರಾಮದಲ್ಲಿರುವ ಖಾಸಗಿ (Private Company) ಕಂಪನಿಗಳು ಉದ್ಯೋಗಿಗಳಿಗೆ (Employee) ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿವೆ.
ದೆಹಲಿಯಲ್ಲೂ (NewDelhi) ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ (Rain Floods Delhi Roads). ಪ್ರಮುಖ ರಸ್ತೆಗಳಲ್ಲಿ ಸಂಚಾರದಟ್ಟಣೆ ಹೆಚ್ಚಾಗಿದ್ದು, ಟ್ರಾಫಿಕ್ ಸಮಸ್ಯೆ (Traffic Problem) ನಿಯಂತ್ರಿಸುವಂತೆ ಸಹಾಯವಾಣಿಗೆ (HelpLine) ಕರೆಗಳು ಬರಲಾರಂಭಿಸಿವೆ. ರಕ್ಷಣಾತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಅಲ್ಲಲ್ಲಿ ಬಿದ್ದ ಮರಗಳನ್ನು ತೆರವುಗೊಳಿಸಲಾಗುತ್ತಿವೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೆರೆ, ರಾಜಾಕಾಲುವೆ (Rajkaluve) ಒತ್ತುವರಿ ತೆರವಿಗೆ ನೋಟಿಸ್ (Notice) ಕೊಡುವ ಅಗತ್ಯ ಇಲ್ಲ, ನೋಟಿಸ್ ಕೊಡದೆಯೇ ತೆರವು ಮಾಡಬಹುದು ಎಂದು ಸಚಿವ ಆರ್. ಅಶೋಕ್ (R Ashok) ಹೇಳಿದ್ದಾರೆ.
ಮಹಾದೇವಪುರ, ಬೊಮ್ಮನಹಳ್ಳಿ ವಲಯದಲ್ಲಿ ರಾಜಕಾಲುವೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆ, ರಾಜಾಕಾಲುವೆ (Rajkaluve) ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ, ಕೊಡದೇ ತೆರವು ಮಾಡಬಹುದು ಎಂದಿದ್ದಾರೆ. ಇದನ್ನೂ ಓದಿ: ಮಹಾದೇವಪುರದಲ್ಲಿ ರಾಜಕಾಲುವೆ ಒತ್ತುವರಿ – 8 ಕಡೆ ಜೆಸಿಬಿ ಆಪರೇಷನ್ ಆರಂಭ
ಯಾರೇ ಒತ್ತುವರಿ ಮಾಡಿದ್ರೂ ಕಾನೂನು ಪ್ರಕಾರ ಕ್ರಮ ಆಗುತ್ತೆ. ಬಡವರು, ಸಾಹುಕಾರರು ಅಂತ ನೋಡದೇ ಒತ್ತುವರಿ ತೆರವು ನಿರಂತರವಾಗಿ ಮಾಡ್ತೇವೆ. ಅಧಿಕಾರಿಗಳು ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಬೇಕು. ಒಂದು ವಾರ ತೆರವು ಮಾಡಿ ನಂತರ ಸುಮ್ಮನಾಗಬಾರದು, ತೆರವು ಕಾರ್ಯ ನಿರಂತರ ಮಾಡಿ ಅಂತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾನರ್‌ನಲ್ಲಿ ಸಿದ್ದು ಫೋಟೋ ಮಾಯ- ಸಿದ್ದರಾಮಯ್ಯ ಇಲ್ಲಿಗೆ ಬಂದಾಗ ಫೋಟೋ ಹಾಕ್ತಾರೆ: ಡಿಕೆಶಿ
ನಿನ್ನೆ 13 ವಿಲ್ಲಾಗಳಿಗೆ ನೋಟಿಸ್:
ಬೆಂಗಳೂರು ಮಳೆಯಿಂದಾಗಿ ರೈನ್ ಬೋ ಡ್ರೈವ್ (Rainbow Drive) ಬಡಾವಣೆಯಲ್ಲಿ ನೀರು ತುಂಬಿ ಅವಾಂತರ ಸೃಷ್ಟಿಯಾದ ಬೆನ್ನಲ್ಲೇ ಎಚ್ಚೆತ್ತ ಕಂದಾಯ ಇಲಾಖೆ (Revenue Department) ಜಲಾವೃತ ಮೂಲವನ್ನು ಕಂಡುಹಿಡಿದು, ರಾಜಕಾಲುವೆ ಒತ್ತುವರಿ ತೆರವು ಮಾಡಿದ್ದ 13 ವಿಲ್ಲಾಗಳಿಗೆ ನಿನ್ನೆಯಷ್ಟೇ ನೋಟಿಸ್ ನೀಡಿದೆ.
ರೈನ್ ಬೋ ಬಡಾವಣೆ ಜುನ್ನಸಂದ್ರ ಹಾಗೂ ಹಾಲನಾಯಕನಹಳ್ಳಿ ಸರ್ವೆ ನಂಬರ್ ನಲ್ಲಿ ವಿಲ್ಲಾಗಳನ್ನು ನಿರ್ಮಾಣ ಮಾಡಲಾಗಿದೆ. ಈ ಹಿನ್ನೆಲೆ 13 ವಿಲ್ಲಾಗಳಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆಯೇ ವಿಲ್ಲಾ ತೆರವು ಮಾಡಲು ಹೊರಟಾಗ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ಈಗ ಮತ್ತೊಮ್ಮೆ ತೆರವಿಗೆ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ರೈ ನೋಟಿಸ್ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೋಟ್‌ನಲ್ಲಿ (Boat) ಓಡಾಡುವ ಪರಿಸ್ಥಿತಿ ಯಾವತ್ತೂ ನಿರ್ಮಾಣ ಆಗಿರಲಿಲ್ಲ. ಇಂತಹ ಕೆಟ್ಟ ಪರಿಸ್ಥಿತಿ ನಿರ್ಮಾಣ ಆಗಲು ಬಿಜೆಪಿ (BJP) ಸರ್ಕಾರವೇ ಕಾರಣ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಕಿಡಿಕಾರಿದ್ದಾರೆ.
ಕೆಪಿಸಿಸಿ (KPCC) ಬ್ರಾಂಡ್ ಬೆಂಗಳೂರು ಸಂಬಂಧ ಕಾಂಗ್ರೆಸ್ (Congress) ನಾಯಕರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಹಕ್ಕೆ ಮುಖ್ಯ ಕಾರಣ ಒಂದು ಕೆರೆಯಿಂದ ಮತ್ತೊಂದು ಕೆರೆಗೆ ಸಂಪರ್ಕ ಇಲ್ಲದೇ ಇರೋದು. ಕೆರೆಯಲ್ಲಿ ಹೂಳು ಎತ್ತದೇ, ರಾಜಕಾಲುವೆ ಒತ್ತುವರಿ ತೆರವು ಮಾಡದೇ ಇರೋದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಈಗಿನಿಂದ್ಲೇ ಡಬ್ಬಿ, ಕುಕ್ಕರ್‌ಗಳನ್ನು ಹಂಚಲಾಗ್ತಿದೆ- ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ವಾಗ್ದಾಳಿ
1,953 ರಾಜಕಾಲುವೆ ಒತ್ತುವರಿಯಲ್ಲಿ 1,300 ಒತ್ತುವರಿಯನ್ನ ನಮ್ಮ ಸರ್ಕಾರ ತೆರವುಗೊಳಿಸಿದೆ. ಬಳಿಕ ಬಿಜೆಪಿ ಅಧಿಕಾರಕ್ಕೆ ಬಂತು. 3 ವರ್ಷಗಳಾದರೂ ಉಳಿದ 653 ರಾಜಕಾಲುವೆ ಒತ್ತುವರಿ ತೆರವು ಮಾಡಿಲ್ಲ. ಬೊಮ್ಮನಹಳ್ಳಿ, ಮಹದೇವಪುರ, ಕೆ.ಆರ್ ಪುರಂ, ಸಿವಿ ರಾಮನ್ ಅವರ ಕ್ಷೇತ್ರದಲ್ಲಿ ಬಿಜೆಪಿ ಶಾಸಕರೇ ಇದ್ದರೂ, ನಮ್ಮ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡ್ತಿದ್ದಾರೆ. ಬೆಂಗಳೂರಿನಲ್ಲಿ ಮೂರು ಜನ ಸಂಸದರು ಬಿಜೆಪಿಯವರೇ ಇದ್ದರೂ ಬೋಟ್‌ನಲ್ಲಿ ಓಡಾಡುವ ಪರಿಸ್ಥಿತಿ ತಂದಿಟ್ಟಿದ್ದಾರೆ ಬೆಂಗಳೂರಿನ (Bengaluru) ಜನರೇ ಸರ್ಕಾರಕ್ಕೆ ಬುದ್ಧಿ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಸೆಟ್ಟೇರಿತು ಭಾವನಾ ಮೆನನ್- ವಿಜಯ್ ರಾಘವೇಂದ್ರ ನಟನೆಯ `ಕೇಸ್ ಆಫ್ ಕೊಂಡಾಣ’ ಚಿತ್ರ
ನಿನ್ನೆ ಪ್ರವಾಹ ಪೀಡಿತ 10-12 ಪ್ರದೇಶಗಳಿಗೆ ಭೇಟಿ ನೀಡಿದ್ದೆ. ಅನೇಕ ಬಡಾವಣೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನರ ವಾಸಕ್ಕೂ ಕಷ್ಟವಾಗಿದೆ. ಅವೆಲ್ಲವೂ ಶ್ರೀಮಂತರು ಇರುವ ಪ್ರದೇಶಗಳು. ಆದರೂ ಮನೆಗಳಲ್ಲಿ ಒಬ್ಬರೂ ಇಲ್ಲ. ಬೆಂಗಳೂರಿನ ಇತಿಹಾಸದಲ್ಲೇ ಇಂತಹ ಪರಿಸ್ಥಿತಿ ಬಂದಿರಲಿಲ್ಲ ಎಂದು ವಿಷಾದಿಸಿದ್ದಾರೆ.
ಇಂದಿನ ಅನಾಹುತಗಳಿಗೆ ಹಿಂದಿನ ಸರ್ಕಾರವೇ ಕಾರಣ ಎಂದು ಸಿಎಂ ಬೊಮ್ಮಾಯಿ ಸುಮ್ಮನೇ ಆರೋಪ ಮಾಡ್ತಿದ್ದಾರೆ. ಬಿಜೆಪಿ ಸರ್ಕಾರ ಬಂದು ಮೂರು ವರ್ಷ ಆಗಿದೆ. ಮಳೆ ಎದುರಿಸಲು ಸರ್ಕಾರ ಏನು ಕ್ರಮ ತೆಗೆದುಕೊಂಡಿದೆ ಎಂಬುದನ್ನು ಹೇಳಲಿ. ಪ್ರವಾಹ ಬಂದ ಕ್ಷೇತ್ರದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಅರವಿಂದ್ ಲಿಂಬಾವಳಿ, ಸತೀಶ್ ರೆಡ್ಡಿ, ಬೈರತಿ ಬಸವರಾಜ್, ಎಸ್.ರಘು ಎಲ್ಲರೂ ಬಿಜೆಪಿ ಶಾಸಕರೆಲ್ಲ ಏನು ಮಾಡ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ನಿಂದ ಮೃತಪಟ್ಟವರ ಸಮಾಧಿಗಳ ಮೇಲೆ ಬಿಜೆಪಿ ಸರ್ಕಾರದಿಂದ ಭ್ರಷ್ಟೋತ್ಸವ – ಕಾಂಗ್ರೆಸ್ ಕಿಡಿ
ರಾಜಕಾಲುವೆ ಒತ್ತುವರಿ ತೆರವು ಮುಂದುವರಿಸಿದ್ರೆ ಸಮಸ್ಯೆ ಆಗುತ್ತಿರಲಿಲ್ಲ. ಬಿಬಿಎಂಪಿ (BBMP) ನೋಡಿದ್ರೆ ನಮ್ಮ ವ್ಯಾಪ್ತಿಗೆ ಬರೋದಿಲ್ಲ ಎಂದು ಹೇಳ್ತಿದೆ. ಬೆಸ್ಕಾಂನವರು ಪರಿಹಾರ ಕೊಡ್ಬೇಕು ಅಂತಾ ಹೇಳ್ತಿದ್ದಾರೆ. ಇಂತಹ ಪರಿಸ್ಥಿತಿಗೆ ಬಿಜೆಪಿಯವರೇ ನೇರ ಕಾರಣ. ಈ ಬಗ್ಗೆ ಸರ್ಕಾರ ಶ್ವೇತ್ರ ಪತ್ರ ಹೊರಡಿಸಲಿ, ನಾನು ಸದನದಲ್ಲಿ ಈ ಬಗ್ಗೆ ಪ್ರಸ್ತಾಪ ಮಾಡುತ್ತೇನೆ. ಮಳೆ ಬಂದು ವಾಹನಗಳು ಹಾಳಾಗಿದ್ದರೂ ಪರಿಹಾರ ನೀಡಿಲ್ಲ. ಕೆಲವರು ಹೋಟೆಲ್‌ಗಳಲ್ಲಿ ಉಳಿದುಕೊಂಡಿದ್ದಾರೆ. ಎಲ್ಲರೂ ಶ್ರೀಮಂತರೇ ಆಗಿರೋದಿಲ್ಲ. ಎಲ್ಲದಕ್ಕು ಹಣ ಎಲ್ಲಿಂದ ತರ್ತಾರೆ ಈ ಎಲ್ಲ ವಿಚಾರಗಳನ್ನ ಸದನದಲ್ಲಿ ಪ್ರಸ್ತಾಪ ಮಾಡ್ತೇವೆ. ಸದನದ ಒಳಗು-ಹೊರಗೂ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಸಂಜೆ ಶುರುವಾದ ಮಳೆ ಬಿಟ್ಟು ಬಿಡದೇ ಸುರಿಯುತ್ತಲೇ ಇದೆ. ಮಳೆಯ ಪರಿಣಾಮ ಹಲವು ಬಡಾವಣೆಯ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಬಿಬಿಎಂಪಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ.
ಮಹಾಮಳೆಗೆ ವಿಧಾನಸೌಧವೂ ಜಲಾವೃತವಾಗಿದೆ. ವಿಧಾನಸೌಧದ ಕ್ಯಾಂಟೀನ್‌ಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ಚರಂಡಿ ಬ್ಲಾಕ್ ಆದ ಕಾರಣ ಕ್ಯಾಂಟೀನ್ ಒಳಗೆ ಮಳೆ ನೀರು ನುಗ್ಗಿದ್ದು, ಕ್ಯಾಂಟೀನ್ ಸಿಬ್ಬಂದಿ ಪಂಪ್ ಮೂಲಕ ನೀರು ಹೊರತೆಗೆಯುತ್ತಿರುವ ಕೆಲಸಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಮಾಡೋ ಟಿಕೆ ಹಳ್ಳಿ ಪಂಪ್ ಸ್ಟೇಷನ್ ಮುಳುಗಡೆ
ಸರ್ಜಾಪುರ ಮುಖ್ಯ ರಸ್ತೆಯಲ್ಲೂ ಭಾರೀ ಟ್ರಾಫಿಕ್ ಸಮಸ್ಯೆ ಉಂಟಾಗಿದೆ. ಟ್ರಾಫಿಕ್ ನಲ್ಲಿ ಸಿಕ್ಕಿಕೊಂಡ ವಾಹನಗಳು ಮುಂದಕ್ಕೆ ಸಾಗಲು ರಸ್ತೆಯಿಲ್ಲದಂತೆ ಕಿಲೋ ಮೀಟರ್‌ಗಟ್ಟಲೆ ಒಂದೇ ಕಡೆ ನಿಂತಿವೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮೈಸೂರು-ಬೆಂಗಳೂರು ದಶಪಥ ರಸ್ತೆ ಕಾಮಗಾರಿ ಆಗ್ತಿದೆ. ಅದಕ್ಕೆ ಪ್ಲ್ಯಾನಿಂಗ್ ಕೊಟ್ಟವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಟುಕಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟೋಲ್ ಪಕ್ಕಾ ಪ್ಲ್ಯಾನ್ ಹೇಗಿರಬೇಕು ಅಂತ, ಕಾಮನ್‌ಸೆನ್ಸ್ ಇರಬೇಕು. ಯಾರು ಪ್ಲ್ಯಾನಿಂಗ್ ಮಾಡಿದ್ರು ಅವರಿಗೆ ಅವಾರ್ಡ್ ಕೊಡಬೇಕು. ಬರೀ ಟಾರ್ ಹಾಕಿ ದುಡ್ಡು ಇಸ್ಕೊಳ್ಳೋದಷ್ಟೇ ಕೆಲಸವೇ? ರಾಷ್ಟ್ರೀಯ ಹೆದ್ದಾರಿಯಲ್ಲೇ ಹೀಗಾದ್ರೆ ಕಥೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಒಬ್ಬಳನ್ನೇ ಮದುವೆಯಾದ ಗಂಡಂದಿರಿಬ್ಬರ ಫೈಟ್ – ಪತ್ನಿಗಾಗಿ ಆಕೆಯ ಮೊದಲನೇ ಗಂಡನ ಹತ್ಯೆಗೆ ಸ್ಕೆಚ್ ಹಾಕ್ದ
Welcome to Ramanagar district. Rains have submerged the main Mysuru – Bengaluru Highway. pic.twitter.com/wSgwLUov10
ರಾಮನಗರ, ಚನ್ನಪಟ್ಟಣ, ಕನಕಪುರದ ಭಾಗದಲ್ಲಿ ಮಳೆಹಾನಿಯಾಗಿದೆ. ಈಗಾಗಲೇ ನಾನು ಭೇಟಿ ಮಾಡುವ ಸ್ಥಳಗಳನ್ನ ನಮ್ಮ ಮುಖಂಡರು ಗುರುತಿಸಿದ್ದಾರೆ. ಅಲ್ಲಿ ಹೋಗಿ ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಮಳೆಯಿಂದಾಗಿ ಜನರ ಆಸ್ತಿಪಾಸ್ತಿ ಹಾನಿಯಾಗಿರುವುದು ನೋವಿನ ಸಂಗತಿ. ಸರ್ಕಾರ ಅವರ ನೆರವಿಗೆ ಬರಬೇಕು. ಮಳೆಗೆ ನಿಯಂತ್ರಣ ಇಲ್ಲ, ಮಳೆ ಬರಬಾರದು ಅಂತ ನಾನು ಹೇಳಲ್ಲ. ವಿದ್ಯುತ್ ಸಚಿವನಾಗಿ ಕೆಲಸ ಮಾಡಿರುವ ನನಗೆ ಮಳೆ ಎಷ್ಟು ಅವಶ್ಯಕತೆ ಇದೆ ಅಂತಾ ಗೊತ್ತಿದೆ. ಜನರಿಗೆ ಅನುಕೂಲ ಆಗಲಿ ಅಂತಲೇ ಮೇಕೆದಾಟು ಪಾದಯಾತ್ರೆ ಮಾಡಿದ್ದೇವೆ. 12 ಸಾವಿರ ಕೋಟಿ ಅನುದಾನ ಪಂಪ್ ಸೆಟ್ ವಿದ್ಯುತ್‌ಗೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ನೀವಲ್ಲವೇ? – ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ
ಮುರುಘಾಶ್ರೀಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮುರುಘಾ ಶ್ರೀಗಳ ವಿರುದ್ಧ ಏನು ಷಡ್ಯಂತ್ರ ಆಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಹಿಂದೆಯೂ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮುರುಘಾಶ್ರೀಗಳ ವಿರುದ್ಧ ಷಡ್ಯಂತ್ರ ಆಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ ನಮ್ಮ ಕಣ್ಣಿಗೆ ಕಂಡಿರೋದು ಅವರ ಸೇವೆ ಮಾತ್ರ. ಶ್ರೀಗಳ ಸೇವೆಯನ್ನು ತಳ್ಳಿ ಹಾಕಲು ಆಗುವುದಿಲ್ಲ. ಬೇರೆ ವಿಷಯಗಳ ಬಗ್ಗೆ ನಾನು ಗೊತ್ತಿಲ್ಲದೇ ಮಾತನಾಡುವುದಿಲ್ಲ ಎಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರಿನ ಮೆಜಸ್ಟಿಕ್, ರೇಸ್‌ಕೋರ್ಸ್, ರಾಜಾಜೀನಗರ, ಮಲ್ಲೇಶ್ವರಂ ಸೇರಿದಂತೆ ವಿವಿಧೆಡೆ ಮಳೆಯಿಂದಾಗಿ ರಸ್ತೆಗಳು ಜಲಾವೃತ್ತಗೊಂಡಿವೆ. ಜನರು ರಸ್ತೆಯಲ್ಲಿ ನಡೆದಾಡುವುದಕ್ಕೂ ಕಷ್ಟಪಡುವಂತಾಗಿದೆ. ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಮೂರು ದಿನ ಗಣೇಶೋತ್ಸವಕ್ಕೆ ಅನುಮತಿ
ವಾಹನ ಸಂಚಾರಕ್ಕೂ ತೊಂದರೆಯಾಗಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ನಗರ ಹಾಗೂ ಜಿಲ್ಲಾದ್ಯಂತ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ಶ್ರೀನಿವಾಸ್ ರಜೆ ಘೋಷಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಸಂತ್ರಸ್ತರಿಗೆ ವಿಳಂಬ ಮಾಡದೆ ತಕ್ಷಣವೇ ಮನೆ ಮತ್ತು ಬೆಳೆ ಹಾನಿಗೆ ಪರಿಹಾರ ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಇಂದು ಗೃಹ ಕಚೇರಿ ಕೃಷ್ಣಾದದಲ್ಲಿ ಕಳೆದ ಮೂರು ದಿನಗಳಲ್ಲಿ ರಾಜ್ಯದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಇದನ್ನೂ ಓದಿ: ಚಿರತೆ ಸೆರೆಗೆ ಕೈಯಲ್ಲಿ ಕೋಲು ಹಿಡಿದು ಬಂದ ಮಹಿಳಾಮಣಿಗಳು
ಕೆರೆಗಳು ಒಡೆಯದಂತೆ ಹಾಗೂ ಬಿರುಕು ಬೀಳದಂತೆ ಎಚ್ಚರಿಕೆ ವಹಿಸಬೇಕು. ಸಮೀಕ್ಷೆ ನಡೆಸಿ ಅಗತ್ಯವಿದ್ದೆಡೆ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಮುಖ್ಯಮಂತ್ರಿಗಳು ಸೂಚಿಸಿದರು.
ದೊಡ್ಡ ಕೆರೆಗಳಿರುವಲ್ಲಿ ಜಾಗೃತರಾಗಿದ್ದು, ಸಾವು-ನೋವು ಸಂಭವಿಸದಂತೆ ಎಚ್ಚರ ವಹಿಸಬೇಕು. ಮೈಸೂರು ಹೆದ್ದಾರಿಯಲ್ಲಿ ಮಳೆಯಿಂದಾಗಿ ನೀರು ನಿಂತಿರುವುದರಿಂದ ಪರ್ಯಾಯ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಇಂದಿನಿಂದಲೇ ಅನುವು ಮಾಡಿಕೊಡುವಂತೆ ಮೈಸೂರು, ರಾಮನಗರ ಹಾಗೂ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ನಡೆಯಿತು ‘ಅಸ್ಟೆಮಿದ ಐಸಿರಿ’ ಮೊಸರು ಕುಡಿಕೆ ಉತ್ಸವ
ಮಳೆಯಿಂದ ಹಾನಿಗೊಳಗಾಗಿರುವ ರಸ್ತೆ ಮತ್ತು ಸೇತುವೆಗಳನ್ನು ತಕ್ಷಣವೇ ದುರಸ್ತಿ ಮಾಡಬೇಕು. ಅಧಿಕಾರಿಗಳು ಸಂವಹನದ ಮೂಲಕ ಕಾರ್ಯನಿರ್ವಹಿಸಬೇಕು. ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ರಸ್ತೆ ದುರಸ್ತಿ ಕೈಗೊಳ್ಳಬೇಕು. ಸಕಾಲದಲ್ಲಿ ಕಡಿತಗೊಂಡಿರುವ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು ಎಂದು ತಿಳಿಸಿದರು.
ಕಾಳಜಿ ಕೇಂದ್ರಗಳಲ್ಲಿರುವವರಿಗೆ ಗುಣಮಟ್ಟದ ಆಹಾರ ಹಾಗೂ ಬಂಧುಗಳ ಮನೆಗೆ ತೆರಳಿರುವವರಿಗೆ ಆಹಾರ ಕಿಟ್‌ಗಳನ್ನು ತಲುಪಿಸುವಂತೆ ಸೂಚನೆ ನೀಡಿದರು.
ಸಚಿವರಾದ ಎಸ್.ಟಿ.ಸೋಮಶೇಖರ್, ಡಾ. ಸಿ.ಎನ್.ಅಶ್ವತ್ಥ್ ನಾರಾಯಣ್, ಉಮೇಶ್ ಕತ್ತಿ ಸಭೆಯಲ್ಲಿ ಪಾಲ್ಗೊಂಡು ತಮ್ಮ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಆಗಿರುವ ಹಾನಿಯ ಕುರಿತು ವಿವರಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಮತ್ತಿತರರು ಪಾಲ್ಗೊಂಡಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ರಾಜ್ಯಾದ್ಯಂತ ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ 7 ಜಿಲ್ಲೆಗಳಲ್ಲಿಯೂ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ವಹಿಸುವಂತೆ ಅಲ್ಲಿನ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗಲಿದೆ. ಒಟ್ಟಾರೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಹಿತ ಮಳೆಯಾಗುವ ಸಂಭವವಿದೆ ಎಂದು ಸೂಚಿಸಿದೆ. ಇದನ್ನೂ ಓದಿ: ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ- ಜಮೀರ್‌ಗೆ ಆರ್.ಅಶೋಕ್ ಟಾಂಗ್
Live Tv
[brid partner=56869869 player=32851 video=960834 autoplay=true]
ರಾಮನಗದ: ಜಿಲ್ಲೆಯಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಕೆರೆಕಟ್ಟೆಗಳು ತುಂಬಿ ರಸ್ತೆಗೆ ಕೋಡಿ ಹರಿದಿದ್ದು, ಮೈಸೂರು-ಬೆಂಗಳೂರಿಗೆ ಸಂಚರಿಸುವ ವಾಹನಗಳಿಗೆ ಬದಲಿ ರಸ್ತೆ ಮಾರ್ಗಗಳನ್ನು ಸೂಚಿಸಲಾಗಿದೆ.
ಇಂದಿನಿಂದ ಮೂರು ದಿನಗಳವರೆಗೆ ಬೆಂಗಳೂರು – ಮೈಸೂರು ಮಾರ್ಗವಾಗಿ ಪ್ರಯಾಣಿಸುವ ಬಸ್ ಹಾಗೂ ಇತರೇ ಪ್ರಯಾಣಿಕರು ಬೆಂಗಳೂರು-ಕನಕಪುರ-ಮೈಸೂರು ಮಾರ್ಗವಾಗಿ ಅಥವಾ ಬೆಂಗಳೂರು- ಕುಣಿಗಲ್- ಮೈಸೂರು ಮಾರ್ಗವಾಗಿ ಪ್ರಯಾಣಿಸುವಂತೆ ರಾಮನಗರ ಜಿಲ್ಲಾ ಪೊಲೀಸರು ಸೂಚಿಸಿದ್ದಾರೆ. ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗಗಳನ್ನು ಅನುಸರಿಸುವಂತೆ ಮನವಿ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಶಿಮ್ಲಾ: ಹಿಮಾಚಲ ಪ್ರದೇಶ, ಉತ್ತರಾಖಂಡ, ಓಡಿಶಾ ಹಾಗೂ ಜಾರ್ಖಂಡ್ ರಾಜ್ಯಗಳಲ್ಲಿ ರಣ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಭೂಕುಸಿತದಿಂದ 31 ಮಂದಿ ದುರ್ಮರಣಕ್ಕೀಡಾಗಿದ್ದಾರೆ.
While earlier this morning 3 People went missing when a House collapsed in Himachal in heavy flash floods🚨now a Railway Bridge in Kangra Himachal Pradesh Collapsed into river, just a while back. Thankfully no reports of injury yet 🙏 Praying for safety of people in #Himachal 🙏 pic.twitter.com/Ql9YnodJsV
ಸದ್ಯ ಮಳೆಯ ಆರ್ಭಟ ಮುಂದುವರಿದಿದ್ದು, ನಾಲ್ಕು ರಾಜ್ಯಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಮೃತದೇಹಗಳನ್ನು ಈವರೆಗೂ ಹೊರಗೆ ತೆಗೆಯಲು ಆಗಿಲ್ಲ. ಪ್ರವಾಹ ಮತ್ತು ಭೂಕುಸಿತದ ನಂತರ ಮಂಡಿ ಜಿಲ್ಲೆಯ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿದೆ. ಅನೇಕ ವಾಹನಗಳು ಹಾನಿಯಾಗಿವೆ ಎಂದು ಅವರು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]