Tag: Rainfall

  • ರಾಜ್ಯಾದ್ಯಂತ ವರುಣನ ಅಬ್ಬರಕ್ಕೆ 11 ಜೀವಗಳು ಬಲಿ – ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್

    ರಾಜ್ಯಾದ್ಯಂತ ವರುಣನ ಅಬ್ಬರಕ್ಕೆ 11 ಜೀವಗಳು ಬಲಿ – ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್

    ಬೆಂಗಳೂರು: ಹಲವು ದಿನಗಳಿಂದ ರಾಜ್ಯದ 13ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ವಿವಿಧ ಜಿಲ್ಲೆಗಳಲ್ಲಿ 13 ಮಂದಿ ಮೃತಪಟ್ಟಿದ್ದಾರೆ. ಇಷ್ಟಕ್ಕೇ ನಿಲ್ಲದೇ ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಭರ್ಜರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 6ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಆಗ್ತಿದ್ದು, ಮಡಿಕೇರಿ ತಾಲೂಕಿನ ಕೊಯಿನಾಡು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮೇಲೆ ಬೃಹತ್ ಗುಡ್ಡ ಕುಸಿದಿದೆ. ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಮೇಲೆ ಪಯಸ್ವಿನಿ ನದಿ ನೀರು ಬಂದಿದ್ದು ರಸ್ತೆ ಬದಿಯ ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಮನೆ ಮುಂಭಾಗದಲ್ಲಿ ನಿಲ್ಲಿಸಿದ ಕಾರುಗಳು ನೀರಿನ ರಭಸಕ್ಕೆ ತೇಲಾಡಿವೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿದ್ದರಾಮಯ್ಯ ಬರ್ತ್ ಡೇ ಆಚರಣೆ – ಸರಿಯಾಗಿ 12 ಗಂಟೆಗೆ ಕೇಕ್ ಕಟ್

    ಪ್ರವಾಹದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕೊಯನಾಡಿಗೆ ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮ ಬಳಿ ವೇದಾವತಿ ನದಿ ಉಕ್ಕಿ ಹರಿಯುತ್ತಿದೆ. ಸೇತುವೆ ದಾಟಲು ಹೋಗಿ ನದಿಗೆ ಲಾರಿ ಬಿದ್ದು ಕ್ಲೀನರ್ ಮತ್ತು ಚಾಲಕ ರಕ್ಷಣೆಗಾಗಿ ಪರದಾಡಿದ್ದಾರೆ. ಉಡುಪಿಯಲ್ಲಿ ಮಳೆಯಿಂದಾಗಿ ಬೈಂದೂರು ತಾಲೂಕಿನ ಶಿರೂರಿನಲ್ಲಿ ನೆರೆಗೆ ಇಪ್ಪತ್ತಕ್ಕಿಂತ ಹೆಚ್ಚು ನಾಡದೋಣಿ ಕೊಚ್ಚಿಹೋಗಿದ್ದು, 50 ಲಕ್ಷ ಮೌಲ್ಯದ ದೋಣಿ ಸಮುದ್ರ ಪಾಲಾಗಿದೆ. ಶಿರೂರಿನಲ್ಲಿ ನಾಗಮ್ಮ ಶೆಟ್ಟಿ ಎಂಬವರ ಮನೆಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ದವಸಧಾನ್ಯಗಳೆಲ್ಲ ನೀರು ಪಾಲಾಗಿದೆ. ಇದನ್ನೂ ಓದಿ: ತಿರುಪತಿಗೆ ಒಂದೇ ತಿಂಗಳಲ್ಲಿ 140 ಕೋಟಿ ದಾಖಲೆ ಕಾಣಿಕೆ ಸಂಗ್ರಹ

    ಹಾಸನದಲ್ಲಿ ನ್ಯಾಷನಲ್ ಹೈವೇಯಲ್ಲಿ ಕೆಲಸ ಮಾಡುವ ಕಾರ್ಮಿಕರ ಕಾರು, ಎರಡು ಬೈಕ್ ಕೊಚ್ಚಿ ಹೋಗಿದೆ. ಅರಸೀಕೆರೆ ತಾಲೂಕಿನ ಗಿಜಿಹಳ್ಳಿ, ಅಂಚೇಕೊಪ್ಪಲು ಗ್ರಾಮದ ಕೆರೆ ಏರಿ ಕುಸಿತವಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನಾದ್ಯಂತ ಭಾರೀ ಮಳೆ ಮುಂದುವರಿದಿದೆ. ಸುಳ್ಯ ತಾಲೂಕಿನ ಕೊಲ್ಲಮೊಗ್ರ ಸಮೀಪದ ಸಂತಡ್ಕ ಎಂಬಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ಸೇತುವೆ ಮುರಿದ ಪರಿಣಾಮ 200ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿವೆ.

    ಸುಳ್ಯ, ಕಡಬ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಚೆಕ್ ಡ್ಯಾಮ್ ನಿರ್ಮಾಣಕ್ಕಾಗಿ ಬಂದಿದ್ದ ಕೂಲಿ ಕಾರ್ಮಿಕ ನಾಗರಾಜು, ಶಿರಾ ತಾಲೂಕಿನಲ್ಲಿ ಹಳ್ಳ ದಾಟುವಾಗ ಬೈಕ್ ಸಮೇತ ಶಿಕ್ಷಕ ಆರಿಫ್ ಉಲ್ಲಾ ಕೊಚ್ಚಿ ಹೋಗಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಕೆರೆ ಏರಿ ಒಡೆದು ಗ್ರಾಮದ ಕೆಲ ಮನೆಗಳಿಗೆ ನೀರು ನುಗ್ಗಿದೆ.

    ಬೆಂಗಳೂರಿನಲ್ಲಿ ರಾತ್ರಿ ಆಗುತ್ತಿದ್ದಂತೆ ಮಳೆರಾಯ ಅಬ್ಬರಿಸುತ್ತಿದ್ದಾನೆ. ಯಶವಂತಪುರ, ಪೀಣ್ಯ, ಮಹಾಲಕ್ಷ್ಮೀ ಲೇಔಟ್, ಗೊರಗುಂಟೆಪಾಳ್ಯ ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಮೇಖ್ರಿ ಸರ್ಕಲ್, ಜಯಮಹಲ್, ಹೆಬ್ಬಾಳ, ಏರ್ಪೋರ್ಟ್ ರೋಡ್, ಪ್ಯಾಲೆಸ್ ಗುಟ್ಟಹಳ್ಳಿಯಲ್ಲಿ ವಾಹನ ಸವಾರರು ಪರದಾಡಿದ್ದಾರೆ. ಸಾಯಿ ಲೇಔಟ್ ಮತ್ತೆ ಮಳೆಯಿಂದಾಗಿ ಜಲಾವೃತವಾಗಿದೆ. ಮಾನ್ಯತಾ ಟೆಕ್ ಪಾರ್ಕ್ನಾ ಸರ್ವಿಸ್ ರಸ್ತೆ ಮುಳುಗಡೆಯಾಗಿದೆ. ಅರ್ಧ ಅಡಿಯಷ್ಟು ನೀರು ನಿಂತ ಕಾರಣ ವೆಹಿಕಲ್ ಓಡಾಟಕ್ಕೆ ಕಷ್ಟವಾಯ್ತು. ನಾಗರಭಾವಿ ಕಡೆಯಿಂದ ಬೆಂಗಳೂರು ವಿಶ್ವವಿದ್ಯಾಲಯದ ಕಡೆಗೆ ಹೋಗುವ ವೇಳೆ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ. ಇನ್ನುಳಿದಂತೆ ಬೆಂಗಳೂರಿನ ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡಿದ ದೃಶ್ಯ ಕಂಡುಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರಕೃತಿಯಲ್ಲಿ ಮಳೆ ಆರ್ಭಟ; ಮತೀಯ ಗಲಭೆಯಿಂದ ಸಾವು-ನೋವು ಹೆಚ್ಚಳ – ಕೋಡಿಮಠದ ಶ್ರೀ ಭವಿಷ್ಯ

    ಪ್ರಕೃತಿಯಲ್ಲಿ ಮಳೆ ಆರ್ಭಟ; ಮತೀಯ ಗಲಭೆಯಿಂದ ಸಾವು-ನೋವು ಹೆಚ್ಚಳ – ಕೋಡಿಮಠದ ಶ್ರೀ ಭವಿಷ್ಯ

    ಹಾಸನ: ರಾಜ್ಯದಲ್ಲಿ ಮಳೆಯಿಂದಾಗಿ ಹೆಚ್ಚುತ್ತಿರುವ ಹಾನಿ ಮತ್ತು ಮತೀಯ ಗಲಭೆಯಿಂದ ಉಂಟಾಗುತ್ತಿರುವ ಅಶಾಂತಿ ಬಗ್ಗೆ ಅರಸೀಕೆರೆ ತಾಲ್ಲೂಕಿನ ಶ್ರೀಕ್ಷೇತ್ರ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

    ಶುಭಕೃತ ನಾಮ ಸಂವತ್ಸರದ ಫಲದಲ್ಲಿ ಗುಡುಗು, ಮಿಂಚು, ಗಾಳಿ, ಮಳೆ ಹೆಚ್ಚಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುತ್ತದೆ. ಬಯಲುಸೀಮೆ‌ ಮಲೆನಾಡಾಗುತ್ತದೆ, ಮಲೆನಾಡು ಬಯಲುಸೀಮೆಯಾಗಲು ಬಯಸುತ್ತದೆ. ಇದು ಹೀಗೆಯೇ ಮುಂದುವರಿಯುತ್ತದೆ. ಈ ಸಂವತ್ಸರದ ಫಲ ನೋಡಿದರೆ ಮೇಘ ಘರ್ಜಿಸೀತು, ಭೂಮಿ ತಲ್ಲಣಗೊಂಡೀತು. ಭೂಮಿ ಕಂಪಿಸುತ್ತೆ, ಗುಡ್ಡಗಳು ಕುಸಿಯುತ್ತವೆ, ಕೆರೆ ಕಟ್ಟೆಗಳು ಒಡೆದು ಹೋಗುತ್ತವೆ. ಇದು ಈ ಸಂವತ್ಸರದ ಕಡೆಯವರೆಗೂ ಇರುತ್ತೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹತ್ಯೆಯಾದವರ ಕುಟುಂಬಗಳಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಬಾರದು: ಮಂತ್ರಾಲಯ ಶ್ರೀ

    ಮುಂಗಾರು ಮಳೆ ಕಳೆದ ಮೇಲೆ, ಹಿಂಗಾರು ಕಡಿಮೆಯಾಗುತ್ತದೆ. ಆದರೆ ಅಕಾಲಿಕ ಮಳೆಗಳು ಹೆಚ್ಚಾಗುತ್ತವೆ. ಆಶ್ವಿಜ ಕಾರ್ತಿಕದಲ್ಲಿ ದೇಶಕ್ಕೆ ಕಷ್ಟ, ಭಂಗ, ನೋವಿದೆ. ರೋಗರುಜಿನಗಳು ಹೆಚ್ಚುತ್ತವೆ. ಕಳ್ಳಕಾಕರ ಕಾಟ, ಅಪಮೃತ್ಯಗಳು, ಕೊಲೆಗಳು, ಮತೀಯ ಗಲಭೆಗಳು ಹೆಚ್ಚಾಗಿ ಅಂತಾರಾಷ್ಟ್ರೀಯ ವಿಕೋಪಕ್ಕೆ ತುತ್ತಾಗುತ್ತದೆ. ಎಲ್ಲವೂ ಇನ್ನೂ ಇದೆ, ಇನ್ನೂ‌ ಹೆಚ್ಚುತ್ತದೆ ಎಂದು ಹೇಳಿದ್ದಾರೆ.

    ರಾಜಕೀಯದಲ್ಲಿ ಕಲಹಗಳಾಗುತ್ತವೆ, ಗುಂಪುಗಳಾಗುತ್ತವೆ. ಮಳೆ ಬರುತ್ತೆ ಬೆಳೆ ಸಿಕ್ಕಲ್ಲ, ಬೆಳೆ ಬರುತ್ತೆ ಅದನ್ನು ಮಳೆ ತಿನ್ನುತ್ತದೆ. ಶುಭಕೃತ ನಾಮ ಸಂವತ್ಸದ ಫಲ ಅಶುಭವಾಗಿರುತ್ತದೆ. ಬಲಾಢ್ಯ ಪೃಥ್ವಿ ಹೆಚ್ಚುತ್ತ ಹೋಗುತ್ತದೆ. ಆಕಾಶ ಎಲ್ಲಿ ಬೇಕು ಅಲ್ಲಿ ಘರ್ಜಿಸುತ್ತೆ ಕಂಡಮಂಡಲ ಆಗುತ್ತೆ. ದೊಡ್ಡ ದೊಡ್ಡ ಪಟ್ಟಣಗಳಿಗೆ ಭಂಗವಾಗುತ್ತೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಭಟ್ಕಳದಲ್ಲಿ ಗುಡ್ಡ ಕುಸಿತ – ನಾಲ್ವರು ಸಾವು, ಮೂವರ ಶವ ಹೊರತೆಗೆದ ರಕ್ಷಣಾ ಸಿಬ್ಬಂದಿ

    ಮತೀಯ ಗಲಭೆ ಇನ್ನೂ ಹೆಚ್ಚಾಗುತ್ತೆ. ಸಾವು-ನೋವು ಇನ್ನೂ ಜಾಸ್ತಿ ಆಗಿ ಅಶಾಂತಿ ಉಂಟಾಗಲಿದೆ. ಕಾರ್ತಿಕ ಆಶ್ವಿಜದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಗೊಂದಲಗಳು, ಸಾವು-ನೋವುಗಳು ಆಗುವ ಲಕ್ಷಣ ಬಹಳ ಇದೆ. ಜನ ತಲ್ಲಣಗೊಳ್ಳುತ್ತಾರೆ. ಈ ತಿಂಗಳವರೆಗೂ ಕಾದುನೋಡಿ. ಶುಭಕೃತ ನಾಮ ಸಂವತ್ಸರದಲ್ಲಿ ಶುಭ ಆಗೋದಿಲ್ಲ. ಗಾಳಿ, ಮಳೆ, ವೃಕ್ಷಗಳು ಮುರಿದು ಬೀಳುತ್ತವೆ. ವಿಪರೀತ ಮಿಂಚು ಮತ್ತು ಗಾಳಿಯಾಗುತ್ತದೆ. ಸಾವು-ನೋವು ಹೆಚ್ಚಾಗಲಿದೆ. ಜಲಾಶಯಗಳು ತುಂಬಿ ಹರಿಯುತ್ತವೆ. ಕೆಲವು ಕಡೆ ಮಳೆ ಹೋದರೆ ಸಾಕು ಅಂತಾರೆ, ಕೆಲವು ಕಡೆ ಮಳೆ ಬೇಕು ಅಂತಾರೆ ಎಂದು ಶ್ರೀಗಳು ಭವಿಷ್ಯ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಳೆ ನಡುವೆ ಹುಚ್ಚಾಟ – ಹಳ್ಳ ದಾಟಲು ಜೆಸಿಬಿ ಬಳಸಿದ ಗ್ರಾಮಸ್ಥರು

    ಮಳೆ ನಡುವೆ ಹುಚ್ಚಾಟ – ಹಳ್ಳ ದಾಟಲು ಜೆಸಿಬಿ ಬಳಸಿದ ಗ್ರಾಮಸ್ಥರು

    ಬಳ್ಳಾರಿ: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಆರಂಭವಾಗಿದ್ದು, ಇತ್ತ ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಮಳೆಯಿಂದಾಗಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರುವ ಹಳ್ಳ ದಾಟಲು ರಾರಾವಿಯಲ್ಲಿ ಗ್ರಾಮಸ್ಥರು ಜೆಸಿಬಿ ಬಳಸಿ ಹುಚ್ಚಾಟ ಮೆರೆದಿದ್ದಾರೆ.


    ಕಳೆದ ಎರಡು ದಿನಗಳಿಂದ ಜಿಲ್ಲೆಯ ಬಹುತೇಕ ತಾಲೂಕಿನಲ್ಲಿ ಮಳೆಯಾಗಿದೆ. ಇತ್ತ ಬಳ್ಳಾರಿ ಸಿರಗುಪ್ಪಾ ತಾಲೂಕಿನಲ್ಲಿ ವ್ಯಾಪಕ ಮಳೆಯಾಗಿದೆ. ಕಾರಣ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಬಿ ಹರಿಯುತ್ತಿರೋ ಹಳ್ಳ ದಾಟಲು ರಾರಾವಿಯಲ್ಲಿ ಗ್ರಾಮಸ್ಥರು ಜೆಸಿಬಿ ಬಳಸಿದ ವೀಡಿಯೋ ವೈರಲ್ ಆಗುತ್ತಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಬೆಳಗ್ಗೆವರೆಗೂ ಬಂದ ಮಳೆ – ರಾತ್ರಿ ಅಬ್ಬರಿಸಿದ ಮಳೆಗೆ ಜನರು ಹೈರಾಣು


    ಮಳೆಯಿಂದಾಗಿ ಹಳ್ಳದಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜೆಸಿಬಿಯ ಬಕೆಟ್‌ನಲ್ಲಿ ಕುಳಿತು, ಬೈಕ್‍ಗಳೊಂದಿಗೆ ತುಂಬಿ ಹರಿಯುತ್ತಿರುವ ಹಳ್ಳವನ್ನು ಜನರು ದಾಟಿದ್ದಾರೆ. ನಿನ್ನೆ ತಡರಾತ್ರಿ ಆಂಧ್ರ ಮತ್ತು ಸಿರಗುಪ್ಪ ತಾಲೂಕಿನಲ್ಲಿ ವ್ಯಾಪಕವಾಗಿ ಮಳೆ ಸುರಿದಿದೆ. ರಾರಾವಿ ಗ್ರಾಮದ ಬಳಿ ಇರುವ ಸೇತುವೆ ಮೇಲೆ ನೀರು ಹರಿದ ಪರಿಣಾಮ, ಆಂಧ್ರ ಮತ್ತು ಕರ್ನಾಟಕಕ್ಕೆ ಸಂಪರ್ಕ ಹೊಂದಿದ್ದ ರಸ್ತೆ ಕಡಿತಗೊಂಡಿದೆ. ಇದನ್ನೂ ಓದಿ: ಭಾರೀ ಮಳೆಗೆ ಶಾರ್ಟ್ ಸರ್ಕ್ಯೂಟ್‌ನಿಂದ ವೃದ್ಧ ಸಾವು

    Live Tv
    [brid partner=56869869 player=32851 video=960834 autoplay=true]

  • ಭಾರೀ ಮಳೆ ತಾತ್ಕಾಲಿಕ ಸ್ಥಗಿತಗೊಂಡ ಅಮರನಾಥ ಯಾತ್ರೆ – ಪ್ರವಾಹದ ಭೀತಿ

    ಭಾರೀ ಮಳೆ ತಾತ್ಕಾಲಿಕ ಸ್ಥಗಿತಗೊಂಡ ಅಮರನಾಥ ಯಾತ್ರೆ – ಪ್ರವಾಹದ ಭೀತಿ

    ಶ್ರೀನಗರ: ಕಾಶ್ಮೀರ ಕಣಿವೆ ಪ್ರದೇಶದ ಸುತ್ತಮುತ್ತ ಭಾರೀ ಮಳೆ ಆಗುತ್ತಿದೆ. ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

    ಹವಾಮಾನ ವೈಪರೀತ್ಯದಿಂದಾಗಿ ಪಂಚತಾರ್ಣಿ ಮತ್ತು ಅಮರನಾಥ ಗುಹೆಯ ನಡುವೆ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಹವಾಮಾನ ಸುಧಾರಿಸಿದ ನಂತರ ಯಾತ್ರೆಯನ್ನು ಪುನರಾರಂಭಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಗುಹಾಂತರ ದೇಗುಲದ ಸುತ್ತಲಿನ ಪರ್ವತಗಳಲ್ಲಿ ಇಂದು ಭಾರೀ ಮಳೆಯಾಗಿದ್ದು, ಇದರಿಂದಾಗಿ ಸಮೀಪದ ನದಿಯಲ್ಲಿ ನೀರಿನ ಮಟ್ಟವೂ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಹೀಗಾಗಿ ಅಮರನಾಥ ಗುಹೆ ಸುತ್ತ ಪ್ರವಾಹದ ಭೀತಿ ಎದುರಾಗಿದೆ. ಈಗಾಗಲೇ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆ: ನೈಸರ್ಗಿಕ ವಿಕೋಪದಿಂದ 8 ಯಾತ್ರಾರ್ಥಿಗಳು ಸಾವು

    ಯಾತ್ರಾರ್ಥಿಗಳನ್ನು ಪಂಚತಾರ್ಣಿ ಶಿಬಿರಕ್ಕೆ ರವಾನಿಸಲಾಗಿದ್ದು, ಪಂಚತಾರ್ಣಿಯಿಂದ ಐಟಿಬಿಪಿ ಯೋಧರು ನಾಲ್ಕು ಸಾವಿರ ಯಾತ್ರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಜುಲೈ 28 ರವರೆಗೆ ಶ್ರೀನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ – ಮೂರು ತಾಲೂಕು ಬಂದ್‌ಗೆ ಕರೆ

    Live Tv
    [brid partner=56869869 player=32851 video=960834 autoplay=true]

  • ಭೂಕುಸಿತದ ಕಾರಣ ತಿಳಿಯಲು ವಿಜ್ಞಾನಿಗಳ ನೆರವು: ಬಿ.ಸಿ.ನಾಗೇಶ್

    ಭೂಕುಸಿತದ ಕಾರಣ ತಿಳಿಯಲು ವಿಜ್ಞಾನಿಗಳ ನೆರವು: ಬಿ.ಸಿ.ನಾಗೇಶ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದ ಕಾರಣ ತಿಳಿದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ವಿಜ್ಞಾನಿಗಳ ನೆರವು ಪಡೆದು ವರದಿ ತಯಾರಿಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಬಿ.ಸಿ.ನಾಗೇಶ್ ಭರವಸೆ ನೀಡಿದರು.

    ಮಡಿಕೇರಿ ತಾಲೂಕಿನ ಮದೆನಾಡು ಸಮೀಪದಲ್ಲಿ ಇತ್ತೀಚಿಗೆ ಸಂಭವಿಸಿದ ಭೂಕುಸಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಮದೆನಾಡು ಬಳಿ 2018ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಜಾಗದಲ್ಲಿ ಇದೀಗ ಮತ್ತೊಮ್ಮೆ ಭೂಕುಸಿತಗೊಂಡಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ವಿವರಿಸಿದರು. ಇದನ್ನೂ ಓದಿ: 5ನೇ ಮಹಡಿ ಕಿಟಕಿಯಿಂದ ಬೀಳುತ್ತಿದ್ದ 2 ವರ್ಷದ ಕಂದಮ್ಮನನ್ನು ರಕ್ಷಿಸಿದ – ನಮ್ಮ ಹೀರೋ ಎಂದ ನೆಟ್ಟಿಗರು 

    ಈ ಬಗ್ಗೆ ವೈಜ್ಞಾನಿಕ ವರದಿ ಅಗತ್ಯವಾಗಿರುವ ಕಾರಣ ಜಿಲ್ಲೆಗೆ ವಿಜ್ಞಾನಿಗಳ ತಂಡವನ್ನು ಕಳುಹಿಸಿ ಅವರು ಪರಿಶೀಲಿಸಿ ಕಾರಣ ಹಾಗೂ ಸೂಕ್ತ ಕ್ರಮಕೈಗೊಳ್ಳಬೇಕಾದ ಬಗ್ಗೆ ತಾಂತ್ರಿಕವಾಗಿ ವರದಿ ನೀಡಬೇಕು. ಬಳಿಕ ಸರ್ಕಾರ ಇದಕ್ಕೆ ಅಗತ್ಯ ಕ್ರಮವಹಿಸಲಿದೆ. ಮಣ್ಣು ಜಾರಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ ಎಂದು ತಿಳಿಸಿದರು

    2018ರಲ್ಲಿಯೂ ವೈಜ್ಞಾನಿಕ ವರದಿ ನೀಡಲಾಗಿತ್ತು. ಇದೀಗ ಮತ್ತೊಮ್ಮೆ ಭೂಕುಸಿತ ಸಂಭವಿಸಿದೆ. ಈ ಸಂಬಂಧ ಪರಿಹಾರ ಮಾರ್ಗೋಪಾಯ ಕಂಡುಕೊಳ್ಳಲಾಗುತ್ತದೆ. ಜಿಲ್ಲೆಯಲ್ಲಿ ಉಂಟಾದ ಭೂಕಂಪನದ ನಂತರವೂ ನುರಿತರು ಆಗಮಿಸಿದ್ದರು. ಮಳೆಗಾಲ ಮುಗಿದ ಬಳಿಕ ವೈಜ್ಞಾನಿಕ ಕಾರಣ ತಿಳಿದುಕೊಳ್ಳಬಹುದಾಗಿದೆ ಎಂದರು. ಇದನ್ನೂ ಓದಿ: ಮೂರಂತಸ್ತಿನ ಕಟ್ಟಡದಲ್ಲಿ ನೇತಾಡುತ್ತಿದ್ದ ಮಕ್ಕಳ ಮುದ್ದಿನ ಬೆಕ್ಕು – ಯಶಸ್ವಿ ಕಾರ್ಯಾಚರಣೆ

    Live Tv
    [brid partner=56869869 player=32851 video=960834 autoplay=true]

  • ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ

    ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ – ಗ್ರಾಮಸ್ಥರಲ್ಲಿ ಆತಂಕ

    ಮಡಿಕೇರಿ: ಕೊಡಗಿನ ಜನರ ಮೇಲೆ ಪ್ರಕೃತಿ ಮಾತೆ ಈ ಬಾರಿಯು ಮುನಿಸಿಕೊಂಡಂತೆ ಕಾಣುತ್ತಿದೆ. 2018ರಲ್ಲಿ ಸಾಕಷ್ಟು ಪ್ರಕೃತಿ ವಿಕೋಪದಿಂದ ನಲುಗಿಹೋಗಿದ್ದ ಕೊಡಗಿನ ಜನತೆ ಈ ಬಾರಿಯು ಮಳೆ ಅವಾಂತರಗಳಿಂದ ಭೂಕಂಪನ, ಜಲಸ್ಫೋಟ, ಬೆಟ್ಟ ಕುಸಿತದಿಂದಾಗಿ ಬೆಚ್ಚಿ ಬೀಳುತ್ತಿದ್ದಾರೆ.

    ಕಳೆದ ರಾತ್ರಿ ಗ್ರಾಮದ ಬೆಟ್ಟ ಪ್ರದೇಶದಲ್ಲಿ ಜಲಸ್ಫೋಟವಾಗಿ ಒಂದು ಭಾಗದ ಬೆಟ್ಟವೇ ಕುಸಿತವಾಗಿದೆ. ಜಿಲ್ಲೆಯಲ್ಲಿ ಮಳೆ ಅರ್ಭಟ ಕಡಿಮೆ ಅಗಿದ್ರು ಮಳೆಯ ಅವಾಂತರಗಳು ಮಾತ್ರ ಮುಂದುವರಿಯುತ್ತಿದೆ. ಮಡಿಕೇರಿ ತಾಲೂಕಿನ ರಾಮಕೊಲ್ಲಿಯಲ್ಲಿ ಜಲಸ್ಫೋಟ, 2ನೇ ಮೊಣ್ಣಂಗೇರಿಯ ನಿಶಾನಿ ಬೆಟ್ಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಬೆನ್ನಲ್ಲೇ ನಿನ್ನೆ ತಡರಾತ್ರಿ ಮದೆನಾಡಿನ ಕೊಪ್ಪಡ್ಕ ಸಮೀಪದ ಸೀಮೆ ಹುಲ್ಲು ಕಜೆ ಬೆಟ್ಟದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಮಾತ್ರವಲ್ಲ ಬೆಟ್ಟ ಜರಿದು ಬಿದ್ದಿದೆ. ಸದ್ಯ ಬೆಟ್ಟದ ಒಂದು ಭಾಗದ ಸಂಪೂರ್ಣ ಮಣ್ಣು ನೀರಿನೊಂದಿಗೆ ಜರಿದುಕೊಂಡು ಮದೆನಾಡಿನ ಮೂಲಕ ಜೋಡುಪಾಲದವರೆಗೆ ಕೆಸರು ಮಿಶ್ರಿತ ನೀರು ಹರಿದುಕೊಂಡು ಬಂದಿದೆ. ಸದ್ಯ ಅಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆ ಭಾಗದಲ್ಲಿ ಮನೆಗಳಿಲ್ಲ. ಕೆಳ ಭಾಗದಲ್ಲಿ ಇರುವ 15 ಮನೆಯ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಕುಂದಾಪುರದ ಉಪನ್ಯಾಸಕ ನೇಣಿಗೆ ಶರಣು

    ಜಿಲ್ಲೆಯಲ್ಲಿ ಜೋರಾಗಿ ಮಳೆ ಸುರಿದ್ರೆ ಜಲಸ್ಫೋಟವಾದ ಬೆಟ್ಟ ಇನ್ನಷ್ಟು ಕುಸಿಯುವ ಸಾಧ್ಯತೆ ಇದೆ. ಮಾತ್ರವಲ್ಲ ಹಾಗೆ ಕುಸಿದು ಬಂದ ಮಣ್ಣು ಜೋಡುಪಾಲದ ತನಕ ಬಂದು ರಾಷ್ಟ್ರೀಯ ಹೆದ್ದಾರಿಯ ರಸ್ತೆಗೆ ಬೀಳುವ ಸಾಧ್ಯತೆ ಹೆಚ್ಚಿದೆ. 2018ರಲ್ಲೇ ಈ ಬೆಟ್ಟ ಜರಿದ ಪರಿಣಾಮ ಜೋಡುಪಾಲದಲ್ಲಿ ಸಾಕಷ್ಟು ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಬೆಟ್ಟ ಜರಿದ ಒಂದು ಭಾಗವಷ್ಟೇ ಕಣ್ಣಿಗೆ ಗೋಚರಿಸುತ್ತಿದೆ. ಬೆಟ್ಟ ಕುಸಿತವಾಗುವ ಮೊದಲು ಬೆಟ್ಟ ಪ್ರದೇಶದಿಂದ ಜೋರಾದ ಶಬ್ಧ ಕೇಳಿ ಬಂದಿದ್ದು ಗ್ರಾಮದ ಸುತ್ತಮುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ‘ಜೈ ಶ್ರೀರಾಮ್’ ಹೇಳದ ಹುಡುಗನ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

    Live Tv
    [brid partner=56869869 player=32851 video=960834 autoplay=true]

  • ಗುಜರಾತಿನ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮೋದಿ ತವರಲ್ಲಿ ಮಳೆಯ ಸಂಕಷ್ಟಕ್ಕೆ ಸಿಲುಕಿದ ಜನ

    ಗುಜರಾತಿನ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ – ಮೋದಿ ತವರಲ್ಲಿ ಮಳೆಯ ಸಂಕಷ್ಟಕ್ಕೆ ಸಿಲುಕಿದ ಜನ

    ಗಾಂಧಿನಗರ: ಮುಂಬೈ, ಮಹಾರಾಷ್ಟ್ರದ ಬಳಿಕ ಗುಜರಾತ್‌ನಲ್ಲೂ ಮಳೆಯ ಆರ್ಭಟ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗುಜರಾತಿನ 8 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

    ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ಮುಂಬೈ ಮತ್ತು ಅದರ ಉಪನಗರಗಳಲ್ಲಿ ಸಾಧಾರಣದಿಂದ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ- ತಪ್ಪಿಸಿಕೊಳ್ಳಲು ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿತ್ತು ಜೋಡಿ

    ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ನಿನ್ನೆ ನಾಲ್ವರು ಮೃತಪಟ್ಟಿದ್ದಾರೆ. ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಒಟ್ಟು ಮಳೆಯ ಪ್ರಮಾಣ ಶೇ.99 ತಲುಪಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಜೂನ್ 1 ರಂದು ಮುಂಗಾರು ಋತುವಿನ ಆರಂಭವನ್ನು ತೆಗೆದುಕೊಂಡು ಮಳೆ ಹಾನಿಯನ್ನು ಅಂದಾಜಿಸಲಾಗಿದೆ.

    ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಒಟ್ಟು 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಮತ್ತು 6 ರಾಜ್ಯ ವಿಪತ್ತು ನಿರ್ವಹಣಾ ಪಡೆಗಳನ್ನು (ಎಸ್‌ಡಿಆರ್‌ಎಫ್) ನಿಯೋಜಿಸಲಾಗಿದೆ. ಇವು ಮಳೆಹಾನಿ ಪ್ರದೇಶಗಳಿಗೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಉಡುಪಿ ಹಿಸ್ಟರಿಯಲ್ಲೇ ಇದೊಂದು ಖತರ್ನಾಕ್ ಕ್ರೈಂ- ತಪ್ಪಿಸಿಕೊಳ್ಳಲು ಮಾಡಿದ್ದ ಪ್ಲಾನ್‍ನಿಂದಲೇ ಸಿಕ್ಕಿಬಿತ್ತು ಜೋಡಿ

    ಗುಜರಾತ್‌ನಲ್ಲಿ ರೆಡ್ ಅಲರ್ಟ್: ಇಲ್ಲಿನ ಸೂರತ್, ಜುನಾಗಢ್, ಗಿರ್, ಭಾವನಗರ, ತಾಪಿ, ದಂಗ್, ವಲ್ಸಾದ್ ಮತ್ತು ನವಸರ್ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಗುಜರಾತ್‌ನ ವಿಪತ್ತು ನಿರ್ವಹಣಾ ಸಚಿವ ರಾಜೇಂದ್ರ ತ್ರಿವೇದಿ ತಿಳಿಸಿದ್ದಾರೆ.

    ಮಹಾರಾಷ್ಟ್ರದ ಮೋದಕ್ ಸಾಗರ್ ಮತ್ತು ತಾನ್ಸಾ ಎರಡೂ ಅಣೆಕಟ್ಟುಗಳಿಂದ ನೀರು ತುಂಬಿ ಹರಿಯುತ್ತಿರುವುದರಿಂದ ಪೂರ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ. ಆದ್ದರಿಂದ ನದಿ ಪಾತ್ರದ ಜನರು ಜಾಗ್ರತೆ ವಹಿಸುವಂತೆ ಜೊತೆಗೆ ವಹಿಸಬೇಕು, ನದಿಗಳಿಗೆ ಇಳಿಯದಂತೆ ಎಚ್ಚರ ವಹಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೆಆರ್‌ಎಸ್‌ ಡ್ಯಾಂ ಭರ್ತಿಗೆ 1 ಅಡಿ ಬಾಕಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ

    ಕೆಆರ್‌ಎಸ್‌ ಡ್ಯಾಂ ಭರ್ತಿಗೆ 1 ಅಡಿ ಬಾಕಿ – ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ

    ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ ಡ್ಯಾಂ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ. ಈ ಸುದ್ದಿ ಈ ಭಾಗದ ರೈತರಿಗೆ ಸಂತಸ ತಂದಿದ್ರೆ ಮತ್ತೊಂದೆಡೆ ಕಾವೇರಿ ಕೊಳ್ಳದ ಜನರಿಗೆ ಪ್ರವಾಹದ ಭೀತಿ ಎದುರಾಗಿದೆ.

    ಕಾವೇರಿ ಜಲಾನಯನ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟಿಗೆ 30,216 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಇದರಿಂದ ಡ್ಯಾಂ ಸಂಪೂರ್ಣ ಭರ್ತಿಗೆ ಇನ್ನೊಂದು ಅಡಿಯಷ್ಟೇ ಬಾಕಿ ಇದೆ. 124.80 ಅಡಿಗಳಷ್ಟು ಇರುವ ಕೆಆರ್‌ಎಸ್‌ ಡ್ಯಾಂ ಸದ್ಯ 123.20 ಅಡಿಗಳಷ್ಟು ಭರ್ತಿಯಾಗಿದೆ. ಡ್ಯಾಂ ಭರ್ತಿಗೆ ಇನ್ನೂ ಕ್ಷಣಗಣನೆ ಇರುವ ಕಾರಣ ಡ್ಯಾಂನಿಂದ ನದಿಗೆ 106 ಅಡಿ ಮಟ್ಟದ 15 ಗೇಟ್‍ಗಳ ಮೂಲಕ 25,000 ಕ್ಯೂಸೆಕ್ ನೀರನ್ನು ಹರಿಬಿಡಲಾಗುತ್ತಿದೆ. 49.452 ಟಿಎಂಸಿ ಸಾಂದ್ರತೆ ಇರುವ ಕೆಆರ್‌ಎಸ್‌ ಡ್ಯಾಂನಲ್ಲಿ 47.800 ಟಿಎಂಸಿ ನೀರು ಇದೆ. ಇದನ್ನೂ ಓದಿ: ಕೊಡಗಿನ ಕೊಯಿನಾಡಿನಲ್ಲಿ ಕಣ್ಣೆದುರೇ ಕುಸಿದು ಬಿದ್ದ ಗುಡ್ಡ – ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ

    ಒಂದು ಕಡೆ ಕೆಆರ್‌ಎಸ್‌ ಡ್ಯಾಂ 25,000 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಬಿಟ್ಟಿದ್ರೆ, ಇನ್ನೊಂದೆಡೆ ಕೆಆರ್‌ಎಸ್‌ ಡ್ಯಾಂ ಸಮೀಪದಲ್ಲೇ ಇರುವ ರಂಗನತಿಟ್ಟು ಪಕ್ಷಿಧಾಮ ಮುಳುಗಡೆಯ ಭೀತಿಯಲ್ಲಿ ಇದೆ. ಹೀಗಾಗಿ ರಂಗನತಿಟ್ಟು ಪಕ್ಷಿಧಾಮದಲ್ಲಿ ಪ್ರವಾಸಿಗರಿಗೆ ಬೋಟಿಂಗ್‍ನ್ನು ಬಂದ್ ಮಾಡಲಾಗಿದೆ. ಕಳೆದ ಎರಡು ವರ್ಷಗಳ ಹಿಂದೆ ಕೆಆರ್‌ಎಸ್‌ ಡ್ಯಾಂನಿಂದ 1 ಲಕ್ಷ ಕ್ಯೂಸೆಕ್ ನೀರು ಹರಿಬಿಟ್ಟಿದ್ದ ಕಾರಣ ಇಲ್ಲಿನ 40ಕ್ಕೂ ಹೆಚ್ಚು ನಡುಗಡ್ಡೆಗಳು ಹಾನಿಯಾಗಿದ್ದವು. ಇದಾದ ನಂತರ ಅರಣ್ಯ ಇಲಾಖೆ ಇಲ್ಲಿನ ನಡುಗಡ್ಡೆಗಳನ್ನು ಮತ್ತೆ ನಿರ್ಮಾಣ ಮಾಡಿತ್ತು. ಇದೀಗ ಈ ಬಾರಿಯೂ ಹೆಚ್ಚಿನ ಪ್ರಮಾಣದಲ್ಲಿ ಕೆಆರ್‌ಎಸ್‌ ಡ್ಯಾಂನಿಂದ ನೀರು ಹರಿಬಿಟ್ಟರೆ ಮತ್ತೆ ಅದೇ ರೀತಿಯ ವಾತಾವರಣ ನಿರ್ಮಾಣವಾಗುತ್ತದೆ. ಅಲ್ಲದೇ ಕಾವೇರಿ ಕೊಳ್ಳದ ಜನರಿಗೂ ಸಹ ಪ್ರವಾಹದ ಭೀತಿ ಎದುರಾಗಿದ್ದು, ಈಗಾಗಲೇ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚನೆಯನ್ನು ಸಹ ನೀಡಿದೆ. ಇದನ್ನೂ ಓದಿ: ಮೈದುಂಬಿ ಧುಮ್ಮುಕ್ಕುತ್ತಿರುವ ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ

    Live Tv
    [brid partner=56869869 player=32851 video=960834 autoplay=true]

  • ಹಾವೇರಿಯಲ್ಲಿ ನಿರಂತರ ಮಳೆ – ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿನ ಸಂಪರ್ಕ ಕಡಿತ

    ಹಾವೇರಿಯಲ್ಲಿ ನಿರಂತರ ಮಳೆ – ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿನ ಸಂಪರ್ಕ ಕಡಿತ

    ಹಾವೇರಿ: ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಭಾಗದಲ್ಲಿ ನಿರಂತರ ಮಳೆ ಆಗುತ್ತಿದೆ. ಇತ್ತ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕಳಸೂರು ಗ್ರಾಮದ ಬಳಿ ಇರುವ ಬ್ರಿಡ್ಜ್ ಕಂ ಬ್ಯಾರೇಜ್ ಮೇಲಿನ ಸಂಪರ್ಕ ಕಡಿತಗೊಂಡಿದೆ.

    ಕಳಸೂರು ಗ್ರಾಮದ ಬಳಿ ವರದಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಮುಳುಗಡೆಯಾಗಿದೆ. ಕಳಸೂರು ಗ್ರಾಮದಿಂದ ಬ್ರಿಡ್ಜ್ ಕಂ ಬ್ಯಾರೇಜ್ ಮಾರ್ಗವಾಗಿ ದೇವಗಿರಿ ಗಣಜೂರು, ಹಾವೇರಿ ನಗರಕ್ಕೆ ಜನ ಸಂಪರ್ಕವಿತ್ತು. ಇದನ್ನೂ ಓದಿ: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿತ- ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

    ಬ್ರಿಡ್ಜ್ ಕಂ ಬ್ಯಾರೇಜ್ ಮೇಲೆ ನೀರು ತುಂಬಿ ಹರಿಯುತ್ತಿರುವುದರಿಂದ ಸಂಪರ್ಕ ಕಡಿತಗೊಂಡಿದ್ದು, ಹತ್ತಾರು ಕಿ.ಮೀ ಸುತ್ತು ಹಾಕಿ ಗ್ರಾಮಸ್ಥರು ಹಾವೇರಿ ನಗರಕ್ಕೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ನಡೆದುಕೊಂಡು ಹೋಗ್ತಿದ್ದಾಗ ಚೂರಿ ಇರಿತ – ಕೆರೂರು ಪಟ್ಟಣದಲ್ಲಿ ಗುಂಪು ಘರ್ಷಣೆ, 144 ಸೆಕ್ಷನ್ ಜಾರಿ

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ – ಧರೆಗುರುಳಿದ ಭಾರೀ ಮರಗಳು

    ಬೆಂಗಳೂರಿನಲ್ಲಿ ಮಳೆಯ ಅಬ್ಬರಕ್ಕೆ ಜನ ತತ್ತರ – ಧರೆಗುರುಳಿದ ಭಾರೀ ಮರಗಳು

    ಬೆಂಗಳೂರು: ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ನಗರದ ಹಲವೆಡೆ ನೀರು ನುಗ್ಗಿ ಅವಾಂತರವೇ ಸೃಷ್ಟಿಸಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ ಉಂಟಾಗಿದೆ. ಭಾರೀ ಗಾತ್ರದ ಮರಗಳೂ ವರುಣ ಆರ್ಭಟಕ್ಕೆ ಧರೆಗುರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಗರಪಾಲಿಕೆ ಮುಂದಾಗಿದೆ.

    RAIN

    ಕೆಲ ದಿನಗಳಿಂದ ಕೊಂಚ ಬಿಡುವು ನೀಡಿದ್ದ ವರುಣ ಮತ್ತೆ ತನ್ನ ಆರ್ಭಟ ಮುಂದುವರಿಸಿದೆ. ನಿನ್ನೆ ಬೆಂಗಳೂರಿನಲ್ಲಿ ಸೃಷ್ಟಿಸಿದ ಅವಾಂತರಗಳು ಇದಕ್ಕೆ ಸಾಕ್ಷಿಯಾಗಿದೆ. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗಿವೆ. ಇದನ್ನೂ ಓದಿ: ಪಿಎಸ್‍ಐ ಹಗರಣ: ಓರ್ವ ಪೊಲೀಸ್ ಪೇದೆ ಸೇರಿ ಬಂಧಿತರ ಸಂಖ್ಯೆ 39ಕ್ಕೆ ಏರಿಕೆ

    ನಗರದ ವಿವಿಧೆಡೆ 8 ಮರಗಳು ಧರೆಗುರುಳಿವೆ. ಕೆ.ಜಿ.ರಸ್ತೆಯಲ್ಲಿ ಬಿದ್ದಿದ್ದ ಬೃಹತ್ ಮರದಿಂದ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿತ್ತು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

    RAIN (2)

    ಪ್ರಶಾಂತ್ ನಗರ, ಶೋಭಾ ಆಸ್ಪತ್ರೆ ಬಳಿ, ಶ್ರೀರಾಂಪುರ, ಕೆ.ಜಿ.ರಸ್ತೆ ಗಾಂಧಿನಗರ, ಲಿಂಕ್ ರೋಡ್ ಮಲ್ಲೇಶ್ವರ, ಸುಬ್ರಮಣ್ಯನಗರ ಹಾಗೂ ರಾಜಾಜೀನಗರದಲ್ಲಿ ತಲಾ ಒಂದೊಂದು ಮರಗಳು ನೆಲಕಚ್ಚಿದ್ದವು. ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿತ್ತು. ಇದನ್ನೂ ಓದಿ: ಪಿಎಸ್‍ಐ ಅಕ್ರಮ: ಸಿಐಡಿಗೆ ಶರಣಾದ ಆರೋಪಿ ಮಂಜುನಾಥ್

    ಉತ್ತರಹಳ್ಳಿ, ಕೆ.ಪಿ.ಅಗ್ರಹಾರ ಫಿಶ್ ಮಾರ್ಕೆಟ್ ಬಳಿ ಮನೆಗೆ ನೀರು ನುಗ್ಗಿದ್ದ ದೃಶ್ಯಗಳು ಕಂಡುಬಂದವು. ಅಲ್ಲದೆ, ಸಂಗೋಳ್ಳಿ ರಾಯಣ್ಣ ರೈಲ್ವೆ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿತ್ತು. ಪೈಪ್‌ಲೈನ್ ರಸ್ತೆ ಮಲ್ಲೇಶ್ವರಂ ಬಳಿ ಮನೆಗೆ ನುಗ್ಗಿದ ನೀರು ಸಂಪೂರ್ಣ ತೆರವುಗೊಳಿಸುವಲ್ಲಿ ತಡರಾತ್ರಿ ಕಳೆದಿತ್ತು.

    RAIN

    ಎಲ್ಲೆಲ್ಲಿ ಎಷ್ಟು ಮಿ.ಮೀ ಮಳೆಯಾಗಿದೆ..?
    ಬೆಂಗಳೂರು – 20 ರಿಂದ 79, ವಿದ್ಯಾಪೀಠ – 79, ಸಂಪಂಗಿ ರಾಮನಗರ – 68,  ರಾಜಮಹಲ್ ಗುಟ್ಟಹಳ್ಳಿ – 67.5, ಬಿಳೇಕಹಳ್ಳಿ – 63, ಅರಕೆರೆ – 61, ದೊರೆಸಾನಿ ಪಾಳ್ಯ – 51,  ವಿವಿ ಪುರಂ – 51, ದಯಾನಂದ ನಗರ – 49.5, ಪುಲಕೇಶಿನಗರ – 47, ನಾಯಂಡಹಳ್ಳಿ – 46.5, ಹೆಮ್ಮಿಗೆ ಪುರ – 42.5, ಕುಮಾರಸ್ವಾಮಿ ಲೇಔಟ್ – 40, ಉತ್ತರಹಳ್ಳಿ – 32 ಮಿ.ಮೀ ನಷ್ಟು ಮಳೆಯಾಗಿದೆ.