Tag: Raitha Sangha

  • ಶುಕ್ರವಾರ ಬಳ್ಳಾರಿ ಬಂದ್‌ಗೆ ಕರೆ – ಬಹುತೇಕ ಸಂಘಟನೆಯ ಬೆಂಬಲ

    ಶುಕ್ರವಾರ ಬಳ್ಳಾರಿ ಬಂದ್‌ಗೆ ಕರೆ – ಬಹುತೇಕ ಸಂಘಟನೆಯ ಬೆಂಬಲ

    ಬಳ್ಳಾರಿ: ತುಂಗಭದ್ರಾ ಜಲಾಶಯದ (Tungabhadra Dam) ಬಲದಂಡೆ ಮೇಲ್ಮಟ್ಟದ (HLC) ಕಾಲುವೆಗೆ ನೀರು ಸರಬರಾಜು ಸ್ಥಗಿತಗೊಳಿಸುವುದನ್ನು ಖಂಡಿಸಿ ಶುಕ್ರವಾರ ಬಳ್ಳಾರಿ ಬಂದ್‌ಗೆ (Ballari Bandh) ರೈತ ಸಂಘ ಕರೆ ನೀಡಿದೆ.

    ನೀರಾವರಿ ಸಲಹಾ ಸಮಿತಿಯ ಸಭೆ ಈ ಮೊದಲ ನಿರ್ಣಯದಂತೆ ನ.30ರ ವರೆಗೆ ನೀರು ಹರಿಸಬೇಕೆಂದು ಆಗ್ರಹಿಸಿ ಮಾಧವರೆಡ್ಡಿ ನೇತೃತ್ವದ ರೈತ ಸಂಘ (Raitha Sangha) ಬಳ್ಳಾರಿ ಬಂದ್‌ಗೆ ಕರೆ ನೀಡಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಅತ್ಯುತ್ತಮ ನಾಯಕ – ಹಾಡಿ ಹೊಗಳಿದ ಅಮೆರಿಕ ಗಾಯಕಿ

     

    ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನವೆಂಬರ್ ಅಂತ್ಯದವರೆಗೆ ನೀರು ಹರಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು. ಆದರೆ ನಂತರ ಬೆಂಗಳೂರಿನಲ್ಲಿ ನಡೆದ ಮತ್ತೊಂದು ಸಭೆಯಲ್ಲಿ ನ.10ರ ವರೆಗೆ ಮಾತ್ರ ನೀಡಲಿದೆ ಎಂದು ಹೇಳಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ.

    ರೈತ ಸಂಘದ ಸದಸ್ಯರು ಶುಕ್ರವಾರದ ಬಂದ್‌ಗೆ ಬೆಂಬಲ‌ ನೀಡುವಂತೆ ಎಪಿಎಂಸಿ ಸೇರಿದಂತೆ ವಿವಿಧ ಸಂಘಟನೆಗಳಿಗೆ ಮನವಿ‌ ಮಾಡಿದ್ದು ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

     

  • ಸೆ.21 ರಿಂದ ಬೆಂಗಳೂರಿನಲ್ಲಿ ರೈತರಿಂದ ಪ್ರತಿಭಟನೆ, ಅಹೋರಾತ್ರಿ ಧರಣಿ

    ಸೆ.21 ರಿಂದ ಬೆಂಗಳೂರಿನಲ್ಲಿ ರೈತರಿಂದ ಪ್ರತಿಭಟನೆ, ಅಹೋರಾತ್ರಿ ಧರಣಿ

    – ವಿಧಾನಸೌಧ ಮುತ್ತಿಗೆ ಹಾಕೋ ಎಚ್ಚರಿಕೆ

    ಶಿವಮೊಗ್ಗ: ರೈತರಿಗೆ ಮರಣ ಶಾಸನವಾಗಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿ ಸೇರಿದಂತೆ, ಜನವಿರೋಧಿ ಕಾಯ್ದೆಗಳ ವಿರೋಧಿಸಿ ಸೆ. 21 ರಿಂದ ಬೆಂಗಳೂರಿನ ಮೌರ್ಯ ಸರ್ಕಲ್ ಬಳಿಯ ಮಹಾತ್ಮಗಾಂಧಿ ಪ್ರತಿಮೆ ಎದುರು ಆಹೋರಾತ್ರಿ ಧರಣಿ ಮತ್ತು ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ರೈತ ಸಂಘ ಎಚ್ಚರಿಸಿದೆ.

    ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಮಾಹಿತಿ ನೀಡಿದ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಸರ್ಕಾರ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಕೃಷಿಯನ್ನೇ ಕಸಿದುಕೊಂಡಿದೆ. ಬಹುರಾಷ್ಟ್ರೀಯ ಕಂಪೆನಿಗಳಿಗೆ, ಕಾರ್ಪೋರೇಟ್ ಕಂಪೆನಿಗಳಿಗೆ ರತ್ನಗಂಬಳಿ ಹಾಕುವ ದೃಷ್ಟಿಯಿಂದ ಈ ಕಾಯ್ದೆ ಜಾರಿಗೆ ತರಲು ಹೊರಟಿದೆ. ಬಿಜೆಪಿ ಸರ್ಕಾರದ ಅನಾಚಾರವಿದು. ಯಾವುದೇ ಕಾರಣಕ್ಕೂ ಈ ಕಾಯ್ದೆ ಜಾರಿಯಾಗಬಾರದು. ಮುಂಬರುವ ಅಧಿವೇಶನದಲ್ಲಿ ಭೂಸುಧಾರಣೆ ಕಾಯ್ದೆಯನ್ನು ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.

    ಸೆ.21 ರಿಂದ ಅಧಿವೇಶನ ಆರಂಭವಾಗಲಿದ್ದು, ಪ್ರಾರಂಭದ ದಿನದಿಂದಲೇ ಅಧಿವೇಶನ ಮುಗಿಯುವವರೆಗೂ ಧರಣಿ ನಡೆಸುತ್ತೇವೆ. ಭೂಸುಧಾರಣಾ ಕಾಯ್ದೆಯ ಜೊತೆಗೆ ಕಾರ್ಮಿಕ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ಕೂಡ ಹಿಂಪಡೆಯಬೇಕು. ಈ ಧರಣಿಯಲ್ಲಿ ರಾಜ್ಯದ ಲಕ್ಷಾಂತರ ರೈತರು ಭಾಗವಹಿಸಲಿದ್ದು, ಶಿವಮೊಗ್ಗ ಜಿಲ್ಲೆಯಿಂದಲೂ ಕೂಡ ಸಾವಿರಕ್ಕೂ ಹೆಚ್ಚು ರೈತರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

    ಬಿಎಸ್‍ವೈ ಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುವಾಗ ನನ್ನದು ರೈತ ಪರ ಸರ್ಕಾರ, ನಾನು ರೈತರ ಕಷ್ಟಗಳನ್ನು ದೂರ ಮಾಡುತ್ತೇನೆ ಎಂದು ಪ್ರಮಾಣ ಮಾಡಿದ್ದರು. ಆದರೆ ಈಗ ಮಾಡುತ್ತಿರುವುದಾದರೂ ಏನು, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿದೆ. ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಶ್ರೀಮಂತರು ಭೂಮಿ ಖರೀದಿಸಿ ಖಾಸಗಿ ಬಡಾವಣೆಗಳ ನಿರ್ಮಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನವಿರೋಧಿ ಕಾಯ್ದೆಗಳನ್ನು ರೂಪಿಸುತ್ತಾ ಬಂದಿವೆ ಎಂದು ಆಪಾದಿಸಿದ್ದಾರೆ.

  • ಬಲವಂತ ಸಾಲ ವಸೂಲಾತಿಗೆ ಬಂದರೆ ಕಟ್ಟಿ ಹಾಕ್ತೀವಿ: ರೈತ ಸಂಘದ ಎಚ್ಚರಿಕೆ

    ಬಲವಂತ ಸಾಲ ವಸೂಲಾತಿಗೆ ಬಂದರೆ ಕಟ್ಟಿ ಹಾಕ್ತೀವಿ: ರೈತ ಸಂಘದ ಎಚ್ಚರಿಕೆ

    ಶಿವಮೊಗ್ಗ: ಸಹಕಾರಿ ಸಂಸ್ಥೆಗಳಲ್ಲಿ ರೈತರು ಮಾಡಿರುವ ಸಾಲವನ್ನು ಬಲವಂತವಾಗಿ ವಸೂಲಿ ಮಾಡುವುದನ್ನು ನಿಲ್ಲಿಸಬೇಕು. ಇಲ್ಲವಾದಲ್ಲಿ ಸಾಲ ವಸೂಲಿಗೆ ಬರುವ ಸಹಕಾರಿ ಸಂಸ್ಥೆಗಳ ಏಜೆನ್ಸಿಯವರನ್ನು ಗ್ರಾಮದಲ್ಲಿಯೇ ಕಟ್ಟಿ ಹಾಕುತ್ತೇವೆ ಎಂದು ರಾಜ್ಯ ರೈತ ಸಂಘದ ಗೌರವಾಧ್ಯಕ್ಷ ಎಚ್.ಆರ್.ಬಸವರಾಜನಪ್ಪ ಎಚ್ಚರಿಕೆ ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಸಂಸ್ಥೆಗಳಿಂದ ರೈತರು ಪಡೆದ ಸಾಲಗಳನ್ನು ಸರ್ಕಾರ ಬಲವಂತವಾಗಿ ವಸೂಲಿ ಮಾಡಲು ಆದೇಶ ನೀಡಿದೆ. ಈ ಆದೇಶವನ್ನು ರೈತ ಸಂಘ ಖಂಡಿಸುತ್ತದೆ. ಸರ್ಕಾರ ಈ ಬಗ್ಗೆ ಸುತ್ತೋಲೆ ಹೊರಡಿಸಿರಬಹುದು. ಆದರೆ ಸಹಕಾರಿ ಸಂಸ್ಥೆಗಳು ಕಡ್ಡಾಯ ಸಾಲ ವಸೂಲಿ ಮಾಡಿದರೆ, ಸಾಲದ ಹಣಕ್ಕಾಗಿ ರೈತರ ಟ್ರ್ಯಾಕ್ಟರ್, ಟಿಲ್ಲರ್, ಜಪ್ತಿಗೆ ಬಂದರೆ ಅಂತಹವರನ್ನು ಕಟ್ಟಿ ಹಾಕುತ್ತೇವೆ. ಅಲ್ಲದೇ ಜಪ್ತಿ ಮಾಡಿದ್ದರೆ ಅದನ್ನು ಮರು ಜಪ್ತಿ ಮಾಡುತ್ತೇವೆ. ಹೀಗಾಗಿ ಸರ್ಕಾರ ಈ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

    ಈ ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗಲೂ ಸಹಕಾರಿ, ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ದೀರ್ಘಾವಧಿ ಸಾಲಗಳಿಗೆ ಅಸಲು ಪಾವತಿಸಿದರೆ ಬಡ್ಡಿ ಮನ್ನಾ ಮಾಡುವುದಾಗಿ ಆದೇಶ ಹೊರಡಿಸಿದ್ದರು. ಆದರೆ ರೈತರು ಅಸಲು ಕೂಡ ಕಟ್ಟಲು ಸಾಧ್ಯವಾಗಲಿಲ್ಲ. ನಂತರ ಎಚ್.ಡಿ.ಕುಮಾರಸ್ವಾಮಿ ಸರಕಾರ ಬಂದಾಗ 1 ಲಕ್ಷದವರೆಗಿನ ಸಾಲಮನ್ನಾ ಮಾಡಿದ್ದರು. ಆದರೆ ಈಗ ಅಸಲು ಮತ್ತು ಬಡ್ಡಿ ವಸೂಲಿಗೆ ಆದೇಶ ನೀಡಿರುವುದು ಖಂಡನೀಯ.

    ರೈತರು ಮೊದಲೇ ಒಂದೆಡೆ ಅತಿವೃಷ್ಟಿ, ಮತ್ತೊಂದೆಡೆ ಅನಾವೃಷ್ಟಿ ಎರಡರಿಂದಲೂ ತತ್ತರಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು ಸುತ್ತೋಲೆ ಹಿಂಪಡೆದು ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ಮಾಡಲಾಗುವುದು ಎಂದು ಎಚ್ಚರಿಸಿದರು.

  • ಶಾಸಕರು ರೆಸಾರ್ಟಿನಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

    ಶಾಸಕರು ರೆಸಾರ್ಟಿನಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ: ಕೋಡಿಹಳ್ಳಿ ಚಂದ್ರಶೇಖರ್

    ರಾಯಚೂರು: ರಾಜ್ಯದ ಶಾಸಕರು ರೆಸಾರ್ಟಿನಲ್ಲಿ ತೋರಿರುವ ವರ್ತನೆಯಿಂದ ರಾಜ್ಯಕ್ಕೆ ಅಪಮಾನವಾಗಿದೆ. ಇನ್ನು ಮುಂದೆ ಶಾಸಕರು ರೆಸಾರ್ಟಿನಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಸೆಗಣಿ ಮುಖಕ್ಕೆ ಎರಚಿ ಪ್ರತಿಭಟನೆ ಮಾಡುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ.

    ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಆದರೆ ರಾಜಕೀಯ ಪಕ್ಷಗಳಿಗೆ ಇಂತಹ ಅಪಮಾನ ಯಾವುದೇ ಆಗುವುದಿಲ್ಲ. ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ರಾಜಕೀಯಕ್ಕಾಗಿ ರೆಸಾರ್ಟ್ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸೆಗಣಿ ಬಳಿಯಲಿದ್ದಾರೆ. ಈ ಮೂಲಕ ಇಂತಹ ಸಭೆಗಳಿಗೆ ಇತಿಶ್ರೀ ಹಾಡುತ್ತೇವೆ ಎಂದರು.

    ಸಿಎಂ ಕುಮಾರಸ್ವಾಮಿ ಅವರೊಂದಿಗೆ ನಾಳೆ ರೈತ ಸಂಘಟನೆಗಳ ಬಜೆಟ್ ಪೂರ್ವ ಸಭೆ ನಿಗದಿಯಾಗಿದೆ. ಮುಂದಿನ ಬಜೆಟ್‍ನಲ್ಲಿ ರೈತರ ಪರ ವಿಚಾರಗಳ ಸೇರ್ಪಡೆಗೆ ಒತ್ತಾಯಿಸಲು ನಿರ್ಧಾರ ಮಾಡಿರುವುದಾಗಿ ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv