Tag: Raj Kumar Hirani

  • ಶಾರುಖ್ ನಟನೆಯ ‘ಡಂಕಿ’ ಚಿತ್ರದ ಫಸ್ಟ್ ಸಾಂಗ್ ಎಂಟ್ರಿಗೆ ಡೇಟ್ ಫಿಕ್ಸ್

    ಶಾರುಖ್ ನಟನೆಯ ‘ಡಂಕಿ’ ಚಿತ್ರದ ಫಸ್ಟ್ ಸಾಂಗ್ ಎಂಟ್ರಿಗೆ ಡೇಟ್ ಫಿಕ್ಸ್

    ಶಾರುಖ್‌ ಖಾನ್‌ (Shah Rukh Khan)  ನಟನೆಯ ಡಂಕಿ ಸಿನಿಮಾದ ಟೀಸರ್ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಜನ್ಮದಿನಕ್ಕೆ ಡಂಕಿ ಡ್ರಾಪ್ 1 ಎಂಬ ಟೈಟಲ್‌ನಡಿ ಬಂದ ಝಲಕ್ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದೀಗ ಡಂಕಿ ಸಿನಿಮಾದ ಮೊದಲ ಹಾಡು (Song) ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ.

    ಡಂಕಿ (Dunki) ಸಿನಿಮಾದ ರೋಮ್ಯಾಂಟಿಕ್ ನಂಬರ್ ಇದೇ ತಿಂಗಳ‌ 22ರಂದು ರಿಲೀಸ್ ಆಗಲಿದೆ. ಲಪ್ ಪಟ್ ಗಯಾ ಎಂಬ ಸಾಹಿತ್ಯವುಳ್ಳ ಸುಮಧುರ ಹಾಡಿಗೆ ಪ್ರೀತಂ ಚಕ್ರವರ್ತಿ ಟ್ಯೂನ್ ಹಾಕಿದ್ದಾರೆ. ಹೇಗಿರಲಿ ಡಂಕಿ ಮೊದಲ ಗಾನಬಜಾನ ಎಂಬ ನಿರೀಕ್ಷೆ ಹೆಚ್ಚಿಸಿದೆ.

    ರಾಜ್ ಕುಮಾರ್ ಹಿರಾನಿ, ಅಭಿಜಿತ್ ಜೋಶಿ ಮತ್ತು ಕನಿಕಾ ಧಿಲ್ಲೋನ್ ಡಂಕಿಗೆ ಕಥೆ ಬರೆದರೆ, ರಾಜ್ ಕುಮಾರ್ ಹಿರಾನಿ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಹಾರ್ಡಿ ಪಾತ್ರದಲ್ಲಿ ಶಾರುಖ್, ಮನು ಪಾತ್ರದಲ್ಲಿ ತಾಪ್ಸಿ, ರಾಜಕುಮಾರ್ ಹಿರಾನಿ ಫೇವರಿಟ್ ಆ್ಯಕ್ಟರ್ ಬೊಮನ್ ಇರಾನಿ ಇಲ್ಲಿ ಗುಲಾಟಿ ಅನ್ನುವ ಪಾತ್ರ ಮಾಡಿದ್ದಾರೆ. ಹೀಗೆ ಹೆಸರಾಂತ ಕಲಾವಿದರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ರಾಜಕುಮಾರ್ ಹಿರಾನಿ (Raj Kumar Hirani) ಕಾನೂನು ಬಾಹಿರವಾಗಿ ಕೆನಡಾ ಮತ್ತು ಅಮೆರಿಕಕ್ಕೆ ಹೋಗುವ ಜನರ ಕಥೆಯನ್ನೆ ಡಂಕಿ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರೆ. ಡಂಕಿ ಚಿತ್ರವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ. ಈ ಕ್ರಿಸ್‌ಮಸ್‌ ಹಬ್ಬದ ಸಮಯದಲ್ಲಿ ಡಂಕಿ ಸಿನಿಮಾ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ, ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದ್ದಾರೆ. ಇನ್ನೇನು ಡಿಸೆಂಬರ್‌ ಕೊನೇ ವಾರದಲ್ಲಿ ಸಿನಿಮಾ ರಿಲೀಸ್‌ ಆಗಲಿದೆ.

  • ಕಿಂಗ್ ಖಾನ್ ಹುಟ್ಟು ಹಬ್ಬಕ್ಕೆ ‘ಡಂಕಿ’ ಟೀಸರ್ ರಿಲೀಸ್

    ಕಿಂಗ್ ಖಾನ್ ಹುಟ್ಟು ಹಬ್ಬಕ್ಕೆ ‘ಡಂಕಿ’ ಟೀಸರ್ ರಿಲೀಸ್

    ಬಾಲಿವುಡ್ ಕಿಂಗ್ ಖಾನ್ ಶಾರುಖ್ ಖಾನ್ (Shah Rukh Khan) ಗಿಂದು ಜನ್ಮದಿನದ (Birthday)ಸಂಭ್ರಮ. 58ನೇ ವಸಂತಕ್ಕೆ ಕಾಲಿಟ್ಟಿರುವ ಬಾದ್ ಷಾಗೆ ಶುಭಾಷಯಗಳ ಮಹಾಪೂರವೇ ಹರಿದುಬರ್ತಿದೆ. ಕಿಂಗ್ ಖಾನ್ ಹುಟ್ಟುಹಬ್ಬದ ಸ್ಪೆಷಲ್ ಆಗಿ ಡಂಕಿ (Dunki) ಸಿನಿಮಾದ ಟೀಸರ್ (Teaser) ಉಡುಗೊರೆಯಾಗಿ ಸಿಕ್ಕಿದೆ.

    ನಾಲ್ಕು ರಾಷ್ಟ್ರಪ್ರಶಸ್ತಿ ಗೆದ್ದಿರುವ ಸ್ಟಾರ್ ಡೈರೆಕ್ಟರ್ ರಾಜ್ ಕುಮಾರ್ ಹಿರಾನಿ (Raj Kumar Hirani) ಡಂಕಿ ಸಿನಿಮಾದ ಸೂತ್ರಧಾರ. ಮುನ್ನಾ ಬಾಯ್ ಎಂಬಿಬಿಎಸ್, 3 ಈಡಿಯಟ್ಸ್, ಪಿಕೆ, ಸಂಜುನಂತಹ ಸೂಪರ್ ಡೂಪರ್ ಹಿಟ್ ಚಿತ್ರ ಕೊಟ್ಟಿರುವ ಹಿರಾನಿ, ಈ ಬಾರಿ ಐದು ಜನ ಸ್ನೇಹಿತರ ಕಥೆ ಹೇಳೋದಿಕ್ಕೆ ಬರ್ತಿದೆ. ಒಂದೊಳ್ಳೆ ಸಂದೇಶದ ಜೊತೆಗೆ ಮನರಂಜನಾತ್ಮಕ ಅಂಶಗಳನ್ನು ಬೆರೆಸಿ ಎಣೆದಿರುವ ಡಂಕಿ ಟೀಸರ್ ಗೆ ಅದ್ಭುತ ರೆಸ್ಪಾನ್ಸ್ ಸಿಕ್ತಿದೆ.

    ಶಾರುಖ್ ಖಾನ್ ನಾಯಕನಾಗಿ ನಟಿಸಿದ್ದು, ಬೊಮನ್ ಇರಾನಿ, ತಾಪ್ಸೀ ಪನ್ನು, ವಿಕ್ಕಿ ಕೌಶಲ್, ಅನಿಲ್ ಗ್ರೋವರ್, ವಿಕ್ರಮ್ ಕೊಚ್ಚರ್ ತಾರಾಬಳಗದಲ್ಲಿದ್ದಾರೆ. ಪ್ರೀತಿ ಮತ್ತು ಸ್ನೇಹದ ಕಥೆಯಾಗಿರುವ ಡಂಕಿ ಸಿನಿಮಾವನ್ನು JIO ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೈನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ನಡಿ ರಾಜ್‌ಕುಮಾರ್ ಹಿರಾನಿ ಮತ್ತು ಗೌರಿ ಖಾನ್ ನಿರ್ಮಿಸಿದ್ದಾರೆ. ಅಭಿಜಾತ್ ಜೋಷಿ, ರಾಜ್‌ಕುಮಾರ್ ಹಿರಾನಿ ಮತ್ತು ಕನಿಕಾ ಧಿಲ್ಲೋನ್ ಕಥೆ ಬರೆದಿದ್ದಾರೆ. ಡಂಕಿ ಸಿನಿಮಾ ಕ್ರಿಸ್ಮಸ್ ಗೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

     

    ಶಾರುಖ್ ಖಾನ್ ಹುಟ್ಟು ಹಬ್ಬವನ್ನು ಅವರ ಅಭಿಮಾನಿಗಳು ನಿನ್ನೆ ಮಧ್ಯರಾತ್ರಿಯಿಂದಲೇ ಆಚರಿಸುತ್ತಿದ್ದಾರೆ. ಶಾರುಖ್ ಮನೆ ಮುಂದೆ ಅಸಂಖ್ಯಾತ ಅಭಿಮಾನಿಗಳು ಜಮಾಯಿಸಿದ್ದಾರೆ. ಅಭಿಮಾನಿಗಳನ್ನು ನಿಯಂತ್ರಿಸುವುದಕ್ಕಾಗಿಯೇ ನಟನೆ ಮನೆಯ ಮುಂದೆ ಪೊಲೀಸ್ ಸರ್ಪಗಾವಲು ನಿಯೋಜನೆಯಾಗಿದೆ. ರಾತ್ರಿಯೇ ತಮ್ಮ ಮನೆಯ ಟೆರಸ್ ನಿಂದ ಅಭಿಮಾನಿಗಳತ್ತ ಕೈ ಬೀಸಿ ಧನ್ಯವಾದಗಳನ್ನು ಹೇಳಿದ್ದಾರೆ ಶಾರುಖ್. ಮತ್ತೆ ಬೆಳಗ್ಗೆ ಸಿಗುವುದಾಗಿ ತಿಳಿಸಿದ್ದಾರೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಶ್ಮೀರದಿಂದ ಶುರುವಾಯ್ತು ಶಾರುಖ್ ನಟನೆಯ ‘ಡಂಕಿ’ ಚಿತ್ರ

    ಕಾಶ್ಮೀರದಿಂದ ಶುರುವಾಯ್ತು ಶಾರುಖ್ ನಟನೆಯ ‘ಡಂಕಿ’ ಚಿತ್ರ

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ನಡುವೆ ಶಾರುಖ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಹೆಸರಾಂತ ನಿರ್ದೇಶಕ ರಾಜ್ ಕುಮಾರ್ ಹಿರಾನಿ (Raj Kumar Hirani) ನಿರ್ದೇಶನದಲ್ಲಿ ತಯಾರಾಗುತ್ತಿರುವ ಡಂಕಿ ಚಿತ್ರದಲ್ಲಿ ಅವರು ನಟಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ.

    ಡಂಕಿ ಸಿನಿಮಾವನ್ನು ನಿರ್ದೇಶಕರು ಕಾಶ್ಮೀರದಿಂದ (Kashmir) ಶುರು ಮಾಡಿದ್ದಾರೆ. ಈ ಭಾಗದ ಚಿತ್ರೀಕರಣಕ್ಕಾಗಿ ಶಾರುಖ್ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಕಾಶ್ಮೀರದಲ್ಲಿ ತಮ್ಮ ನೆಚ್ಚಿನ ನಟ ಶಾರುಖ್ ಶೂಟಿಂಗ್ ನಲ್ಲಿ ಪಾಲ್ಗೊಂಡ ವಿಡಿಯೋವನ್ನು ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಹನ್ನೊಂದು ವರ್ಷದ ನಂತರ ಶಾರುಖ್ ಸಿನಿಮಾ ಕಾಶ್ಮೀರದಲ್ಲಿ ಚಿತ್ರೀಕರಣವಾಗುತ್ತಿದ್ದು,  ಈ ಹಿಂದೆ ಜಬ್ ತಕ್ ಹೈ ಜಾನ್ ಸಿನಿಮಾದ ಶೂಟಿಂಗ್ ಅದೇ ಸ್ಥಳದಲ್ಲೇ ನಡೆದಿತ್ತು ಎಂದು ಅಭಿಮಾನಿಗಳು ನೆನಪಿಸಿಕೊಂಡಿದ್ದಾರೆ. ಬರೋಬ್ಬರಿ 11 ವರ್ಷಗಳ ಬಳಿಕ ಆ ನೆಲದಲ್ಲಿ ಶಾರುಖ್ ಕಾಲಿಟ್ಟಿರುವುದು ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ. ಇದನ್ನೂ ಓದಿ:ನಾನು ಮಾತಾಡಿದರೆ ಸಮಂತಾ ಕಥೆ ಅಷ್ಟೆ: ಮತ್ತೆ ಗುಡುಗಿದ ಚಿಟ್ಟಿ ಬಾಬು

    ಡಂಕಿ ಸಿನಿಮಾದಲ್ಲಿ ಶಾರುಖ್ ಜೊತೆ ತಾಪ್ಸಿ ಪನ್ನು(Taapsee Pannu) ಮತ್ತು ವಿಕ್ಕಿ ಕೌಶಲ್ (Vicky Kaushal) ನಟಿಸಿದ್ದು, ಸದ್ಯ ಕಾಶ್ಮೀರದ ಸೋನ್ ಮಾರ್ಗ್ ಪ್ರದೇಶದಲ್ಲಿ ಮಾತಿನ ಭಾಗದ ಚಿತ್ರೀಕರಣವನ್ನು ಮಾಡುತ್ತಿದ್ದಾರಂತೆ ನಿರ್ದೇಶಕ ರಾಜಕುಮಾರ್ ಹಿರಾನಿ.