Tag: Rajahmundry

  • ರಾಜಮುಂಡ್ರಿಯ ಹ್ಯಾವ್ಲಾಕ್ ಸೇತುವೆ ಮೇಲೆ ರವಿತೇಜ್ ಸಿನಿಮಾದ ಫಸ್ಟ್ ಲುಕ್ ಲಾಂಚ್

    ರಾಜಮುಂಡ್ರಿಯ ಹ್ಯಾವ್ಲಾಕ್ ಸೇತುವೆ ಮೇಲೆ ರವಿತೇಜ್ ಸಿನಿಮಾದ ಫಸ್ಟ್ ಲುಕ್ ಲಾಂಚ್

    ತೆಲುಗಿನ ಮಾಸ್ ಮಹಾರಾಜ ರವಿತೇಜ (Raviteja)  ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ (Tiger Nageshwar Rao). ವಂಶಿ ನಿರ್ದೇಶನದಲ್ಲಿ ಅದ್ಧೂರಿಯಾಗಿ ತಯಾರಾಗಿರುವ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಆಗಿದೆ. ಭಾರತದ ಮೂರನೇ ಅತಿ ಉದ್ದದ ರಸ್ತೆ ಹಾಗೂ ರೈಲ್ವೆ ಸೇತುವೆ ಎನಿಸಿಕೊಂಡಿರುವ ರಾಜಮುಂಡ್ರಿಯಲ್ಲಿರುವ (Rajahmundry) ಗೋದಾವರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹ್ಯಾವ್ಲಾಕ್ (Havelock) ಸೇತುವೆ ಮೇಲೆ ಇಂದು ಫಸ್ಟ್ ಲುಕ್ (First Look) ಪೋಸ್ಟರ್ ಅನಾವರಣ ಮಾಡಲಾಗಿದೆ.

    ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ನಲ್ಲಿ ರವಿತೇಜ, ಉಗ್ರವಾದ ರೂಪದಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬಿಯರ್ಡ್ ಲುಕ್,  ಗಾಯವಾದ ಮುಖ, ಮಾಸ್ ಅವತಾರದಲ್ಲಿ ಮಾಸ್ ಮಹಾರಾಜ ಧಗಧಗಿಸಿದ್ದಾರೆ. ಪಂಚ ಭಾಷೆಯಲ್ಲಿ ರಿಲೀಸ್ ಆಗಿರುವ ಕನ್ನಡದ ಫಸ್ಟ್ ಲುಕ್ ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಧ್ವನಿಯಾಗಿದ್ದಾರೆ. ಭಾರತದ ಕುಖ್ಯಾತ ಕಳ್ಳ ಎನಿಸಿಕೊಂಡಿರುವ ಟೈಗರ್ ನಾಗೇಶ್ವರ್ ರಾವ್ ಪ್ರಪಂಚವನ್ನು ಶಿವಣ್ಣ ಪರಿಚಯಿಸಿದ್ದಾರೆ. ಇದನ್ನೂ ಓದಿ:ಹೃದಯಾಘಾತದಿಂದ ಫೇಮಸ್ ನಟ ನಿತೇಶ್ ಪಾಂಡೆ ನಿಧನ

    ಕನ್ನಡದಲ್ಲಿ ಶಿವಣ್ಣ, ತೆಲುಗಿನಲ್ಲಿ ವೆಂಕಟೇಶ್ ದಗ್ಗುಭಾಟಿ, ಬಾಲಿವುಡ್ ನಲ್ಲಿ ಜಾನ್ ಅಬ್ರಾಂ, ತಮಿಳಿನಲ್ಲಿ ಕಾರ್ತಿ ಹಾಗೂ ಮಲಯಾಳಂನಲ್ಲಿ ದುಲ್ಕರ್ ಸಲ್ಮಾನ್ ಟೈಗರ್ ನಾಗೇಶ್ವರ್ ರಾವ್ ಫಸ್ಟ್ ಲುಕ್ ಗೆ ಧ್ವನಿಯಾಗಿದ್ದಾರೆ. ಜಿಂಕೆಯನ್ನು ಬೇಟೆಯಾಡುವ ಹುಲಿ ನೋಡಿರ್ತಿಯಾ..ಹುಲಿಗಳನ್ನು ಬೇಟೆಯಾಡುವ ಹುಲಿ ನೋಡಿರ್ತಿಯಾ ಎಂಬ ಪವರ್ ಫುಲ್ ಡೈಲಾಗ್ ಮೂಲಕ ರವಿತೇಜ ಮಾಸ್ ಆಗಿ ಎಂಟ್ರಿ ಕೊಟ್ಟಿದ್ದಾರೆ.

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

    ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ ಬಾಕ್ಸಾಫೀಸ್ ಬೇಟೆಗಿಳಿಯಲಿದ್ದು, ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ.

  • ಶೂಟಿಂಗ್‍ಗಾಗಿ ರಾಜಮಂಡ್ರಿಗೆ ಬಂದಿಳಿದ ರಾಮ್ ಚರಣ್ – ಅಭಿಮಾನಿಗಳಿಂದ ನೂಕು ನುಗ್ಗಲು

    ಶೂಟಿಂಗ್‍ಗಾಗಿ ರಾಜಮಂಡ್ರಿಗೆ ಬಂದಿಳಿದ ರಾಮ್ ಚರಣ್ – ಅಭಿಮಾನಿಗಳಿಂದ ನೂಕು ನುಗ್ಗಲು

    ಹೈದರಾಬಾದ್: ಆರ್‌ಸಿ 15 ಚಿತ್ರೀಕರಣಕ್ಕಾಗಿ ತೆಲುಗಿನ ಖ್ಯಾತ ನಟ ರಾಮ್ ಚರಣ್ ಅವರು ಆಂಧ್ರಪ್ರದೇಶದ ರಾಜಮಂಡ್ರಿಯ ರಾಜಾಜಿನಗರಕ್ಕೆ ಬಂದಿಳಿದ ತಕ್ಷಣ ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ ಹೊರಗೆ ಜಮಾಯಿಸಿ ಚರಣ್ ಅವರನ್ನು ಕಾಣಲು ಮುಗಿಬಿದ್ದಿದ್ದಾರೆ.

    ರಾಮ್ ಚರಣ್ ತಮ್ಮ ಮುಂಬರುವ ಚಿತ್ರ ಆರ್‍ಆರ್‍ಆರ್ ಬಿಡುಗಡೆಗಾಗಿ ಈಗಾಗಲೇ ಕಾತುರದಿಂದ ಕಾಯುತ್ತಿದ್ದಾರೆ. ಎಸ್ ಎಸ್ ರಾಜಮೌಳಿ ನಿರ್ದೇಶನದ ಈ ಚಿತ್ರವು ಮಾರ್ಚ್ 25 ರಂದು ಅದ್ಧೂರಿಯಾಗಿ ಬಿಡುಗಡೆಯಾಗುತ್ತಿದೆ. ತೆಲುಗು ಅಲ್ಲದೆ, ತಮಿಳು, ಮಲಯಾಳಂ, ಕನ್ನಡ ಮತ್ತು ಹಿಂದಿಯಲ್ಲೂ ಸಹ ಚಿತ್ರವು ಬಿಡುಗಡೆಯಾಗಲಿದೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಗುಡ್‍ಬೈ ಹೇಳಿದ ಬಾಲಿವುಡ್ ನಟಿ ರಾಖಿ ಸಾವಂತ್

     

    View this post on Instagram

     

    A post shared by Kamlesh Nand (work) (@artistrybuzz_)

    ಫೆಬ್ರವರಿ 13 ರಂದು, ರಾಮ್ ಚರಣ್ ಮತ್ತು ಅವರ ತಂಡವು ಆರ್‌ಸಿ 15 ರ ಶೂಟಿಂಗ್‍ಗಾಗಿ ರಾಜಮಂಡ್ರಿ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದನ್ನೂ ಗಮನಿಸಿದ ಅಭಿಮಾನಿಗಳು ಚರಣ್ ಅವರ ದರ್ಶನ ಪಡೆಯಲು ವಿಮಾನ ನಿಲ್ದಾಣದ ಹೊರಗೆ ಕಾಯುತ್ತಿದ್ದರು.

    ವಿಮಾನ ನಿಲ್ದಾಣದಿಂದ ಅವರು ರಾಜಮಂಡ್ರಿಯ ಪ್ರತಿಷ್ಠಿತ ಹೋಟೆಲ್‍ವೊಂದಕ್ಕೆ ತೆರಳುತ್ತಿದ್ದಾಗ ಅಭಿಮಾನಿಗಳು ರಸ್ತೆಯ ಎರಡೂ ಬದಿಯಲ್ಲಿ ಸಾಲುಗಟ್ಟಿ ನಿಂತು ಚರಣ್‍ಗೆ ಆತ್ಮೀಯ ಸ್ವಾಗತ ಕೋರಿದ್ದಾರೆ. ಈ ಸಂದರ್ಭದಲ್ಲಿ ರಾಮ್ ಚರಣ್ ಬೌನ್ಸರ್‌ಗಳು ಅಭಿಮಾನಿಗಳನ್ನು ಚದುರಿಸಲು ಹರ ಸಾಹಸ ಪಟ್ಟಿದ್ದಾರೆ. ಇದನ್ನೂ ಓದಿ: ಹಿರಿಯ ನಟ ರಾಜೇಶ್ ಸ್ಥಿತಿ ಗಂಭೀರ

    ಆರ್‌ಸಿ 15 ರಾಜಕೀಯಕ್ಕೆ ಸಂಬಂಧಪಟ್ಟ ಚಿತ್ರವಾಗಿದೆ. ಈ ಚಿತ್ರವನ್ನು ಶಂಕರ್ ಅವರು ನಿರ್ದೇಶಿಸಿದ್ದು, ಚಿತ್ರಕ್ಕೆ ಕಾರ್ತಿಕ್ ಸುಬ್ಬರಾಜ್ ಕಥೆ ಬರೆದಿದ್ದಾರೆ.

    ಇತ್ತೀಚಿನ ಸಂದರ್ಶನವೊಂದರಲ್ಲಿ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಚಿತ್ರವನ್ನು ಉದ್ದೇಶಿಸಿ ಮಾತನಾಡಿದ್ದು, ನಾನು ಈ ರಾಜಕೀಯ ಕಥೆಯನ್ನು ಹಲವು ವರ್ಷಗಳ ಹಿಂದೆ ಬರೆದಿದ್ದೇನೆ. ನನಗೆ ಬಹಳ ಹಿಂದೆಯೇ ಶಂಕರ್ ಸರ್ ಈ ಚಿತ್ರವನ್ನು ನಿರ್ದೇಶಿಸಿದರೆ ಉತ್ತಮವಾಗಿರುತ್ತದೆ ಅಂತ ಅನಿಸಿತ್ತು. ಹೀಗಾಗಿ ನಾನು ಈ ಕಥೆಯನ್ನು ಅವರಿಗೆ ನೀಡಿದಾಗ ಅವರು ಅದನ್ನು ಇಷ್ಟಪಟ್ಟರು. ಅವರು ಈಗಾಗಲೇ ಈ ಕಥೆಯನ್ನು ನಿರ್ದೇಶಿಸಲು ಒಪ್ಪಿಕೊಂಡಿದ್ದಾರೆ. ನಾನು ಅವರೊಂದಿಗೆ ಈ ಚಿತ್ರದಲ್ಲಿ ಕೆಲಸ ಮಾಡಲು ಅತ್ಯಂತ ಸಂತೋಷ ಮತ್ತು ಹೆಮ್ಮೆಯೆನಿಸುತ್ತದೆ.

    ರಾಮ್ ಚರಣ್ ಹೊರತಾಗಿ, ಆರ್‌ಸಿ 15 ಚಿತ್ರದಲ್ಲಿ ಕಿಯಾರಾ ಅಡ್ವಾಣಿ, ಅಂಜಲಿ, ಜಯರಾಮ್, ಸುನಿಲ್, ಶ್ರೀಕಾಂತ್ ಮತ್ತು ನವೀನ್ ಚಂದ್ರ ನಟಿಸಿದ್ದಾರೆ. ಛಾಯಾಗ್ರಾಹಕ ತಿರುರು, ಸಂಕಲನಕಾರ ಶಮೀರ್ ಮುಹಮ್ಮದ್ ಮತ್ತು ಸಂಗೀತ ಸಂಯೋಜಕ ಎಸ್ ಥಮನ್ ತಾಂತ್ರಿಕ ತಂಡದ ಭಾಗವಾಗಿದ್ದಾರೆ.