Tag: rajamouli

  • ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ

    ಆರ್ಮಿಗೆ ಸಂಬಂಧಿಸಿದ ವಿಡಿಯೋಗಳನ್ನು ಶೇರ್ ಮಾಡಬೇಡಿ: ರಾಜಮೌಳಿ ಮನವಿ

    ಭಾರತ ಮತ್ತು ಪಾಕಿಸ್ತಾನದ ಉದ್ವಿಗ್ನತೆಯ ನಡುವೆ ಫ್ಯಾನ್ಸ್‌ಗೆ ಸಂದೇಶವೊಂದನ್ನು ರಾಜಮೌಳಿ (Rajamouli) ಹಂಚಿಕೊಂಡಿದ್ದಾರೆ. ಭಾರತೀಯ ಸೇನೆಗೆ ಸಂಬಂಧಿಸಿದ ಯಾವುದೇ ಫೋಟೋ, ವಿಡಿಯೋಗಳನ್ನು ಶೇರ್ ಮಾಡಬೇಡಿ. ಇದರಿಂದ ಶತ್ರುಗಳಿಗೆ ಸಹಾಯವಾಗಬಹುದು ಎಂದು ರಾಜಮೌಳಿ ಎಚ್ಚರಿಸಿದ್ದಾರೆ. ಇದನ್ನೂ ಓದಿ:ಭಾರತ-ಪಾಕ್ ನಡುವೆ ಉದ್ವಿಗ್ನ ಹೊತ್ತಲ್ಲೇ ದಿಟ್ಟ ನಿರ್ಧಾರ ಕೈಗೊಂಡ ಕಮಲ್ ಹಾಸನ್

    ಭಾರತೀಯ ಸೇನೆಗೆ ಸಂಬಂಧಪಟ್ಟ ಯಾವುದೇ ಫೋಟೋಗಳು ಮತ್ತು ವಿಡಿಯೋಗಳನ್ನು ತೆಗೆದುಕೊಳ್ಳಬೇಡಿ. ಅವುಗಳನ್ನು ಹಂಚಿಕೊಳ್ಳಬೇಡಿ. ಇದರಿಂದ ಶತ್ರುಗಳಿಗೆ ಸಹಾಯವಾಗಬಹುದು. ಪರಿಶೀಲಸದೇ ಯಾವುದೇ ಸುದ್ದಿಗಳನ್ನು ಶೇರ್ ಮಾಡೋದನ್ನು ನಿಲ್ಲಿಸಿ. ನಾವೆಲ್ಲರೂ ಜವಾಬ್ದಾರಿಯಿಂದ ವರ್ತಿಸೋಣ. ಶಾಂತವಾಗಿ, ಜಾಗೃತೆಯಾಗಿ, ಸಕರಾತ್ಮಕವಾಗಿರೋಣ. ಗೆಲುವು ನಮ್ಮದೇ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಚಂದನ್ ಶೆಟ್ಟಿ ಜೊತೆ ಹಸೆಮಣೆ ಏರಿದ ‘ಸೀತಾ ವಲ್ಲಭ’ ನಟಿ ಸುಪ್ರೀತಾ

    ನಮ್ಮ ದೇಶವನ್ನು ಭಯೋತ್ಪಾದನೆಯಿಂದ ರಕ್ಷಿಸುವಲ್ಲಿ ಅಚಲ ಧೈರ್ಯ ತೋರಿದ ನಮ್ಮ ಭಾರತೀಯ ಸಶಸ್ತ್ರ ಪಡೆಗಳಿಗೆ ನಮನಗಳು. ಶಾಂತಿ ಮತ್ತು ಏಕತೆಗಾಗಿ ಒಂದು ರಾಷ್ಟ್ರವಾಗಿ ಒಟ್ಟಾಗಿ ನಿಲ್ಲೋಣ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

    ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಹಿನ್ನೆಲೆ ಭಾರತ ಈಗ ಪಾಕ್‌ಗೆ ತಕ್ಕ ಪಾಠ ಕಲಿಸುತ್ತಿದೆ.

  • ಮೂರು ಭಾಗಗಳಲ್ಲಿ ಬರಲಿದೆ ‘ಮಹಾಭಾರತ’- ರಾಜಮೌಳಿ ಕನಸಿಗೆ ನಾನಿ ಸಾಥ್

    ಮೂರು ಭಾಗಗಳಲ್ಲಿ ಬರಲಿದೆ ‘ಮಹಾಭಾರತ’- ರಾಜಮೌಳಿ ಕನಸಿಗೆ ನಾನಿ ಸಾಥ್

    ತೆಲುಗಿನ ಖ್ಯಾತ ಡೈರೆಕ್ಟರ್ ರಾಜಮೌಳಿ (Rajamouli) ಅವರು ಮಹೇಶ್ ಬಾಬುಗೆ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇದರ ನಡುವೆ ಮುಂದಿನ ಚಿತ್ರದ ಬಗ್ಗೆ ಅವರು ಅಪ್‌ಡೇಟ್ ಹಂಚಿಕೊಂಡಿದ್ದಾರೆ. ‘ಮಹಾಭಾರತ’ (Mahabharat) ಸಿನಿಮಾ ಮಾಡೋದಾಗಿ ‘ಬಾಹುಬಲಿ’ ಡೈರೆಕ್ಟರ್ ರಾಜಮೌಳಿ ಅನೌನ್ಸ್ ಮಾಡಿದ್ದಾರೆ. ಇದನ್ನೂ ಓದಿ:ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ‘ನನ್ನರಸಿ ರಾಧೆ’ ನಟಿ

    ನ್ಯಾಚುರಲ್ ಸ್ಟಾರ್ ನಾನಿ ಮತ್ತು ಶ್ರೀನಿಧಿ ಶೆಟ್ಟಿ ನಟನೆಯ ‘ಹಿಟ್ 3’ ಸಿನಿಮಾ ಮೇ 1ರಂದು ರಿಲೀಸ್ ಆಗಲಿದೆ. ಈ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ರಾಜಮೌಳಿ ಮಾತನಾಡಿ, ‘ಮಹಾಭಾರತ’ 3 ಭಾಗಗಳಲ್ಲಿ ಬರಲಿದೆ. ಪ್ರತಿಯೊಂದು ಭಾಷೆಯ ಪ್ರೇಕ್ಷಕರು ನೋಡಬೇಕು. ಹಾಗಾಗಿ ಬಹುಭಾಷೆಗಳಲ್ಲಿ ಮಹಾಭಾರತ ಚಿತ್ರ ಮಾಡೋದಾಗಿ ಹೇಳಿದ್ದಾರೆ. ಇದನ್ನೂ ಓದಿ:ದರ್ಶನ್ ಜೊತೆಗಿನ ಹೊಸ ಫೋಟೋ ಹಂಚಿಕೊಂಡ ವಿಜಯಲಕ್ಷ್ಮಿ- ವಾವ್ ಎಂದ ಫ್ಯಾನ್ಸ್

    ನಾನಿ ಕೂಡ ‘ಮಹಾಭಾರತ’ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸೋದಾಗಿ ರಾಜಮೌಳಿ ತಿಳಿಸಿದ್ದಾರೆ. ಯಾವ ಪಾತ್ರ ಎಂಬುದನ್ನು ಅವರು ಬಿಟ್ಟು ಕೊಟ್ಟಿಲ್ಲ. ತಂದೆ ವಿಜೇಂದ್ರ ಪ್ರಸಾದ್ ಅವರು 3 ಭಾಗಗಳಲ್ಲಿ ‘ಮಹಾಭಾರತ’ ತರಲು ಪ್ಲ್ಯಾನ್ ಮಾಡಿದ್ದಾರೆ. ಇದರ ಸ್ಕ್ರೀಪ್ಟ್‌ ಕೆಲಸವು ಕೆಲವು ವರ್ಷಗಳಿಂದ ನಡೆಯುತ್ತಿದೆ ಎಂದಿದ್ದಾರೆ ರಾಜಮೌಳಿ.

    ಅಂದಹಾಗೆ, ಇತ್ತೀಚೆಗೆ ‘ಮಹಾಭಾರತ’ ಸಿನಿಮಾ ಮಾಡೋದು ನನ್ನ ಕನಸು ಎಂದು ಆಮೀರ್ ಖಾನ್ ಹೇಳಿದ್ದರು. ಇದೀಗ ರಾಜಮೌಳಿ ಕೂಡ ‘ಮಹಾಭಾರತ’ ಬರುವ ಬಗ್ಗೆ ಅನೌನ್ಸ್ ಮಾಡಿದ್ದಾರೆ. ಹಾಗಾದ್ರೆ ಎರಡೆರಡು ಮಹಾಭಾರತ ಹೆಸರಿನಲ್ಲಿ ಸಿನಿಮಾ ಬರ‍್ತಾವಾ? ಎಂದು ಅಭಿಮಾನಿಗಳಲ್ಲಿ ಗೊಂದಲ ಉಂಟಾಗಿದೆ. ರಾಜಮೌಳಿ ಮತ್ತು ಆಮೀರ್ ನಡೆ ಫ್ಯಾನ್ಸ್‌ಗೆ ಕುತೂಹಲ ಮೂಡಿಸಿದೆ. ಈ ಬಗ್ಗೆ ಇಬ್ಬರೂ ಕ್ಲ್ಯಾರಿಟಿ ಕೊಡ್ತಾರಾ ಕಾಯಬೇಕಿದೆ.

  • ಮಹೇಶ್ ಬಾಬು ಜೊತೆ ನಟಿಸಲು ಪ್ರಿಯಾಂಕಾ ಚೋಪ್ರಾಗೆ 30 ಕೋಟಿ ಸಂಭಾವನೆ

    ಮಹೇಶ್ ಬಾಬು ಜೊತೆ ನಟಿಸಲು ಪ್ರಿಯಾಂಕಾ ಚೋಪ್ರಾಗೆ 30 ಕೋಟಿ ಸಂಭಾವನೆ

    ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಸ್ಟಾರ್ ನಟಿಯರಾದ ಆಲಿಯಾ ಭಟ್, ಕರೀನಾ ಕಪೂರ್, ದೀಪಿಕಾ ಪಡುಕೋಣೆ, ನಯನತಾರಾರನ್ನೇ ಹಿಂದಿಕ್ಕಿದ್ದಾರೆ. ಮಹೇಶ್ ಬಾಬು ನಟನೆಯ ಹೊಸ ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ ಚೋಪ್ರಾ 30 ಕೋಟಿ ರೂ. ಸಂಭಾವನೆಗೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ಸ್ಟಾರ್ ನಟಿಯರಿಗೆ ಪ್ರಿಯಾಂಕಾ ಸೆಡ್ಡು ಹೊಡೆದಿದ್ದಾರೆ.

    ಕಿಯಾರಾ, ಆಲಿಯಾ, ದೀಪಿಕಾ ಪಡುಕೋಣೆ ಸೇರಿದಂತೆ ಕೆಲ ಟಾಪ್ ನಟಿಯರು ಒಂದು ಸಿನಿಮಾಗೆ 5ರಿಂದ 15 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. ಹೀಗಿರುವಾಗ 30 ಕೋಟಿ ರೂ. ಸಂಭಾವನೆಯನ್ನು ಪ್ರಿಯಾಂಕಾ ಪಡೆಯುವ ಮೂಲಕ ಎಲ್ಲರ ಹುಬ್ಬೆರಿಸಿದ್ದಾರೆ. ಒಂದು ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಭಾರತದ ಮೊದಲ ನಟಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

    ಕಳೆದ ಕೆಲವು ವರ್ಷಗಳಿಂದ ದೇಸಿ ಗರ್ಲ್ ಹಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರು. ಇದೀಗ ಮಹೇಶ್ ಬಾಬು (Mahesh Babu) ನಟನೆಯ 29ನೇ ಚಿತ್ರಕ್ಕೆ (SSMB29) ಅವರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಅದಷ್ಟೇ ಅಲ್ಲ, ಒಡಿಶಾ, ವಿಶಾಖಪಟ್ಟಣಂ, ಹೈದರಾಬಾದ್‌ನಲ್ಲಿ ಈಗಾಗಲೇ ಶೂಟಿಂಗ್ ನಡೆಯುತ್ತಿದ್ದು, ನಟಿ ಕೂಡ ಭಾಗಿಯಾಗಿದ್ದಾರೆ. ಈ ಸಿನಿಮಾವನ್ನು ರಾಜಮೌಳಿ (Rajamouli) ನಿರ್ದೇಶನ ಮಾಡುತ್ತಿದ್ದಾರೆ. ಇದನ್ನೂ ಓದಿ:‘ಡ್ರ್ಯಾಗನ್’ ಚಿತ್ರದ ಬಳಿಕ ಹೆಚ್ಚಿದ ಬೇಡಿಕೆ- ‘ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್

    ಈ ಹಿಂದೆ ರಾಮ್ ಚರಣ್, ದಳಪತಿ ವಿಜಯ್ ಜೊತೆ ತೆಲುಗು ಸಿನಿಮಾಗಳಲ್ಲಿ ಪ್ರಿಯಾಂಕಾ ನಟಿಸಿದ್ದಾರೆ. ಈಗ ಮಹೇಶ್ ಬಾಬುಗೆ ನಾಯಕಿಯಾಗಿ ಬರೋಬ್ಬರಿ 20 ವರ್ಷಗಳ ಬಳಿಕ ಸೌತ್ ಸಿನಿಮಾರಂಗಕ್ಕೆ ನಟಿ ಕಮ್ ಬ್ಯಾಕ್ ಆಗ್ತಿದ್ದಾರೆ.

  • ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ಹೊಕ್ಕಳಿಗೆ 2.7 ಕೋಟಿ ಮೌಲ್ಯದ ಡೈಮಂಡ್ ರಿಂಗ್ ಧರಿಸಿದ ಪ್ರಿಯಾಂಕಾ ಚೋಪ್ರಾ- ಬೆಲೆ ಕೇಳಿ ಫ್ಯಾನ್ಸ್‌ ಶಾಕ್

    ಬಾಲಿವುಡ್ ಬೆಡಗಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಮಹೇಶ್ ಬಾಬು ನಟನೆಯ ಸಿನಿಮಾಗಾಗಿ ಭಾರತಕ್ಕೆ ಬಂದಿದ್ದಾರೆ. ಮುಂಬೈ ವಿಮಾನ ನಿಲ್ದಾಣದಲ್ಲಿ ಹೊಕ್ಕಳಿಗೆ ಧರಿಸಿದ 2.7 ಕೋಟಿ ರೂ. ಮೌಲ್ಯದ ಡೈಮಂಡ್ ರಿಂಗ್ ವಿಚಾರವಾಗಿ ಚರ್ಚೆಗೆ ಗ್ರಾಸವಾಗಿದ್ದಾರೆ. ಇದನ್ನೂ ಓದಿ:ಶಿವಣ್ಣ ನಿವಾಸಕ್ಕೆ ಯಶ್‌ ದಂಪತಿ ಭೇಟಿ

    ಮುಂಬೈ ಏರ್‌ಪೋರ್ಟ್‌ನಿಂದ ಹೊರಬರುವಾಗ ಪ್ರಿಯಾಂಕಾ ಚೋಪ್ರಾ ಬ್ಲ್ಯಾಕ್ ಕೋ-ಆರ್ಡ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಸ್ಟೈಲೀಶ್ ಲುಕ್ ಫ್ಯಾನ್ಸ್ ಗಮನ ಸೆಳೆದಿದೆ. ಅದರಲ್ಲೂ ಪ್ರಿಯಾಂಕಾ ಹೊಕ್ಕಳಿಗೆ ಧರಿಸಿದ ಬೆಲ್ಲಿ ಬಟನ್ ಡೈಮಂಡ್ ಪಿನ್ ಇದರ ಬೆಲೆ ಕೇಳಿ ಗಾಬರಿಯಾಗಿದ್ದಾರೆ. ಇದರ ಬೆಲೆ ಬರೋಬ್ಬರಿ 2.7 ಕೋಟಿ ರೂ. ಮೌಲ್ಯದಾಗಿದೆ ಎಂದು ಕೇಳಿಯೇ ಅಭಿಮಾನಿಗಳು ದಂಗಾಗಿದ್ದಾರೆ.

     

    View this post on Instagram

     

    A post shared by Manav Manglani (@manav.manglani)

    ಇನ್ನೂ ರಾಜಮೌಳಿ ಮತ್ತು ಮಹೇಶ್ ಬಾಬು ಕಾಂಬಿನೇಷನ್ ಸಿನಿಮಾದಲ್ಲಿ ಲೀಡ್ ಹೀರೋಯಿನ್ ಆಗಿ ನಟಿಸುತ್ತಿದ್ದಾರೆ. ಎಂದೂ ನಟಿಸಿರದ ವಿಭಿನ್ನ ಪಾತ್ರದಲ್ಲಿ ಪ್ರಿಯಾಂಕಾ ಕಾಣಿಸಿಕೊಳ್ತಿದ್ದಾರೆ.

    ಈಗಾಗಲೇ ಹೈದರಾಬಾದ್, ಒಡಿಶಾ, ವಿಶಾಖಪಟ್ಟಣಂ ಸೇರಿದಂತೆ ಹಲವೆಡೆ ಚಿತ್ರೀಕರಣದಲ್ಲಿ ನಟಿ ಭಾಗಿಯಾಗಿದ್ದಾರೆ. ಚಿತ್ರೀಕರಣ ಭರದಿಂದ ನಡೆಯುತ್ತಿದೆ.‌ ಸಿನಿಮಾದ ಹೆಚ್ಚಿನ ಅಪ್‌ಡೇಟ್‌ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

  • ರಾಜಮೌಳಿ ಮೇಲೆ ಗಂಭೀರ ಆರೋಪ : ನಿರ್ಮಾಪಕ ಆತ್ಮಹತ್ಯೆ

    ರಾಜಮೌಳಿ ಮೇಲೆ ಗಂಭೀರ ಆರೋಪ : ನಿರ್ಮಾಪಕ ಆತ್ಮಹತ್ಯೆ

    ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ (S S Rajamouli)ಮೇಲೆ ಗಂಭೀರ ಆರೋಪ ಮಾಡಿ, ಆತ್ಮಹತ್ಯೆಗೆ ಶರಣಾಗಿದ್ದಾರೆ ಖ್ಯಾತ ನಿರ್ಮಾಪಕ ಶ್ರೀನಿವಾಸ್ ರಾವ್. ಜ್ಯೂನಿಯರ್ ಎನ್.ಟಿ.ಆರ್ ನಟನೆಯ ಯಮದೊಂಗ (Yamadonga) ಸಿನಿಮಾವನ್ನು ಶ್ರೀನಿವಾಸ್ ರಾವ್  (Srinivas Rao)ನಿರ್ಮಾಣ ಮಾಡಿದ್ದರು.

    ಎಸ್.ಎಸ್ ರಾಜಮೌಳಿಯ ಆತ್ಮಿಯ ಸ್ನೇಹಿತನೂ ಆಗಿದ್ದ ಶ್ರೀನಿವಾಸ್ ರಾವ್‍ ಡೆತ್ ನೋಟ್ ಮತ್ತು ಸಾಯುವ ಮುನ್ನ ವಿಡಿಯೋವೊಂದನ್ನು ಮಾಡಿ, ತನ್ನ ಸಾವಿಗೆ ರಾಜಮೌಳಿ ಮತ್ತು ಅವರ ಪತ್ನಿ ರಮಾ ಕಾರಣ ಅಂತ ಹೇಳಿಕೊಂಡಿದ್ದಾರೆ. ಜೊತೆಗೆ ರಾಜಮೌಳಿ ಮತ್ತು ತನ್ನ ನಡುವಿನ ಲವ್ ಸ್ಟೋರಿಯನ್ನು ಶ್ರೀನಿವಾಸ್ ಹಂಚಿಕೊಂಡಿದ್ದಾರೆ.

    ರಾಜಮೌಳಿ ಮತ್ತು ನಾನು ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದೆವು.  ಆ ಹುಡುಗಿಯನ್ನು ರಾಜಮೌಳಿ ತ್ಯಾಗ ಮಾಡುವಂತೆ ನನಗೆ ಹೇಳಿದ. ಹಾಗಾಗಿ ನಾನು ಆ ಹುಡುಗಿಯನ್ನು ರಾಜಮೌಳಿಗೆ ಬಿಟ್ಟು ಕೊಟ್ಟೆ. ಅಲ್ಲಿಂದ ನಾನು ಮದುವೆ ಆಗಿಲ್ಲ. ರಾಜಮೌಳಿಗೂ ನನಗೂ 34 ವರ್ಷದ ಸ್ನೇಹ.  ಇತ್ತೀಚೆಗೆ ಸಣ್ಣ ಮನಸ್ತಾಪ ಆಯಿತು. ನಾನು ನಮ್ಮ ಲವ್ ಸ್ಟೋರಿಯನ್ನು ಸಿನಿಮಾ ಮಾಡೋದಾಗಿ ಹೇಳಿದೆ. ಅಲ್ಲಿಂದ ರಾಜಮೌಳಿ ನಿರಂತರವಾಗಿ ನನಗೆ ಟಾರ್ಚರ್ ಮಾಡಲು ಶುರು ಮಾಡಿದ ಅಂತ ಡೆತ್ ನೋಟ್ ನಲ್ಲಿ  ಶ್ರೀನಿವಾಸ್ ರಾವ್ ಬರೆದಿದ್ದಾರೆ.

    ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ರಾಜಮೌಳಿ ವಿರುದ್ಧ ಕ್ರಮ ತಗೆದುಕೊಳ್ಳುವಂತೆ ಡೆತ್ ನೋಟ್ ನಲ್ಲಿ ಉಲ್ಲೇಖ ಮಾಡಲಾಗಿದೆ. ಈವರೆಗೂ ಶ್ರೀನಿವಾಸ್ ರಾವ್ ಅವರ ಮೃತದೇಹ ಸಿಕ್ಕಿಲ್ಲ ಅನ್ನೋ ಮಾಹಿತಿಯೂ ಇದೆ.

  • ದೇಸಿ ಗರ್ಲ್ ಈಗ ದುಬಾರಿ- ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

    ದೇಸಿ ಗರ್ಲ್ ಈಗ ದುಬಾರಿ- ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ

    ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಹಿಂದಿ ಸಿನಿಮಾದಲ್ಲಿ ನಟಿಸದೇ ಹಲವು ವರ್ಷಗಳೇ ಕಳೆದಿದೆ. ಹಾಲಿವುಡ್ ಸಿನಿಮಾಗಳಲ್ಲಿ ಆ್ಯಕ್ಟೀವ್ ಆಗಿರುವ ನಟಿ ಈಗ ಮತ್ತೆ ಸೌತ್ ಸಿನಿಮಾಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮಹೇಶ್ ಬಾಬು (Mahesh Babu) ಜೊತೆ ನಟಿಸಲು 30 ಕೋಟಿ ರೂ. ಸಂಭಾವನೆಯನ್ನು ನಟಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾದ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಪ್ರಿಯಾಂಕಾಗೆ 42 ವರ್ಷವಾದ್ರೂ ನಟಿಯ ಚಾರ್ಮ್ ಇನ್ನೂ ಕಮ್ಮಿಯಾಗಿಲ್ಲ. ಅವರಿಗೆ ಇನ್ನೂ ಬೇಡಿಕೆಯಿದೆ. ಹಾಲಿವುಡ್‌ನಲ್ಲಿ ಆ್ಯಕ್ಷನ್ ಕ್ವೀನ್ ಆಗಿ ಮಿಂಚುತ್ತಿದ್ದಾರೆ. ಹೀಗಿರುವಾಗ ಬಹುನಿರೀಕ್ಷಿತ ಸಿನಿಮಾ ರಾಜಮೌಳಿ ಮತ್ತು ಮಹೇಶ್ ಬಾಬು ಸಿನಿಮಾದಲ್ಲಿ ನಟಿಸಲು ಪ್ರಿಯಾಂಕಾ 30 ಕೋಟಿ ರೂ. ಕೇಳಿದ್ದಾರೆ. ಅದಕ್ಕೆ ಚಿತ್ರತಂಡ ಕೂಡ ಸಮ್ಮತಿ ಸೂಚಿಸಿದೆ ಎನ್ನಲಾದ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ.

    ಇನ್ನೂ ಭಾರತದ ಯಾವುದೇ ನಟಿ ಇಷ್ಟು ಸಂಭಾವನೆ ಪಡೆದಿಲ್ಲ. ಹಾಗಾಗಿ ಪ್ರಿಯಾಂಕಾ ಭಾರತದ ಅತ್ಯಂತ ದುಬಾರಿ ನಟಿ ಎನಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಅನಿಮಲ್’ ನಿರ್ದೇಶಕನ ಜೊತೆ ಪ್ರಭಾಸ್ ಸಿನಿಮಾ ಶುರುವಾಗೋದು ಯಾವಾಗ?- ಸಿಕ್ತು ಅಪ್‌ಡೇಟ್

    ಮಹೇಶ್ ಬಾಬು ಈ ಸಿನಿಮಾಗೆ ಕಳೆದ 2 ವರ್ಷಗಳಿಂದ ತಯಾರಿ ನಡೆಯುತ್ತಿದೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ನೆರವೇರಿದೆ. ಸಿನಿಮಾದ ಶೂಟಿಂಗ್ ಕೂಡ ಶುರುವಾಗಿದೆ.

  • ‘ಬಾಹುಬಲಿ 3’ಗಾಗಿ ಮತ್ತೆ ಒಂದಾಗ್ತಾರಾ ರಾಜಮೌಳಿ, ಪ್ರಭಾಸ್?

    ‘ಬಾಹುಬಲಿ 3’ಗಾಗಿ ಮತ್ತೆ ಒಂದಾಗ್ತಾರಾ ರಾಜಮೌಳಿ, ಪ್ರಭಾಸ್?

    ‘ಬಾಹುಬಲಿ’ (Bahubali) ಪಾರ್ಟ್‌ 1 ಮತ್ತು 2ರ ಮೂಲಕ ಸೆನ್ಸೇಷನ್ ಕ್ರಿಯೆಟ್ ಮಾಡಿದ್ದ ಪ್ರಭಾಸ್ ಮತ್ತು ರಾಜಮೌಳಿ ಮತ್ತೆ ಒಂದಾಗಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ‘ಬಾಹುಬಲಿ 3’ ಕುರಿತು ಫ್ಯಾನ್ಸ್‌ಗೆ ಗುಡ್ ನ್ಯೂಸ್‌ವೊಂದು ಸಿಕ್ಕಿದೆ. ಇದನ್ನೂ ಓದಿ:ಖಡಕ್ ಲುಕ್‌ನಲ್ಲಿ ಬಂದ ಪುಷ್ಪರಾಜ್- ‘ಪುಷ್ಪ 2’ ಪೋಸ್ಟರ್ ಔಟ್

    ಇತ್ತೀಚೆಗೆ ‘ಕಂಗುವ’ (Kanguva) ಚಿತ್ರದ ನಿರ್ಮಾಪಕ ಕೆ.ಇ ಜ್ಞಾನವೇಲ್ ರಾಜ ಸಂದರ್ಶನವೊಂದರಲ್ಲಿ ಮಾತನಾಡಿ, ‘ಬಾಹುಬಲಿ 3’ (Bahubali 3) ಚಿತ್ರ ಮಾಡುವ ಕುರಿತು ಪ್ಲ್ಯಾನ್ ನಡೆಯುತ್ತಿದೆ ಎಂದಿದ್ದಾರೆ. ಬಾಹುಬಲಿ 1 ಮತ್ತು 2 ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡಿದರು. ಈಗ ಗ್ಯಾಪ್ ನಂತರ ಬಾಹುಬಲಿ ಪಾರ್ಟ್ 3ಗಾಗಿ ಪ್ಲ್ಯಾನಿಂಗ್ ನಡೆಯುತ್ತಿದೆ ಎಂದಿದ್ದಾರೆ.

    ‘ಬಾಹುಬಲಿ 3’ ಮಾಡುವ ಕುರಿತು ರಾಜಮೌಳಿ (Rajamouli) ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ‘ಬಾಹುಬಲಿ 3’ಗಾಗಿ ಪ್ರಭಾಸ್ (Prabhas) ಮತ್ತು ರಾಜಮೌಳಿ ಜೊತೆಯಾಗಿ ಮತ್ತೆ ಕೆಲಸ ಮಾಡುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದಿದೆ.

    ಇನ್ನೂ ರಾಜಮೌಳಿ ಸದ್ಯ ಮಹೇಶ್ ಬಾಬು ಜೊತೆಗಿನ ಹೊಸ ಸಿನಿಮಾದ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಪ್ರಭಾಸ್ ಅವರು ‘ಕಣ್ಣಪ್ಪ’ ಮತ್ತು ‘ದಿ ರಾಜ ಸಾಬ್’ ಚಿತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಹಾಗಾದ್ರೆ ಮುಂದಿನ ದಿನಗಳಲ್ಲಿ ಬಾಹುಬಲಿ ಸೀಕ್ವೆಲ್ ಬಗ್ಗೆ ಅಧಿಕೃತ ಅಪ್‌ಡೇಟ್ ಸಿಗುತ್ತಾ? ಎಂಬುದನ್ನು ಕಾದುನೋಡಬೇಕಿದೆ.

  • ಪ್ರಿನ್ಸ್ ಫ್ಯಾನ್ಸ್‌ಗೆ ಸಿಹಿಸುದ್ದಿ- ರಾಜಮೌಳಿ ಜೊತೆಗಿನ ಮಹೇಶ್ ಬಾಬು ಚಿತ್ರಕ್ಕೆ ಮುಹೂರ್ತ ಫಿಕ್ಸ್

    ಪ್ರಿನ್ಸ್ ಫ್ಯಾನ್ಸ್‌ಗೆ ಸಿಹಿಸುದ್ದಿ- ರಾಜಮೌಳಿ ಜೊತೆಗಿನ ಮಹೇಶ್ ಬಾಬು ಚಿತ್ರಕ್ಕೆ ಮುಹೂರ್ತ ಫಿಕ್ಸ್

    ‘ಗುಂಟೂರು ಖಾರಂ’ ಸಿನಿಮಾದ ಸಕ್ಸಸ್ ನಂತರ ಮಹೇಶ್ ಬಾಬು (Mahesh Babu) ಅವರು ‘ಬಾಹುಬಲಿ’ (Bahubali) ಖ್ಯಾತಿಯ ರಾಜಮೌಳಿ (Rajamouli) ಜೊತೆ ಕೈಜೋಡಿಸಿದ್ದಾರೆ. ಇದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇಬ್ಬರ ಕಾಂಬಿನೇಷನ್ ಸಿನಿಮಾ ಶುರುವಾಗೋದು ಯಾವಾಗ ಎಂಬ ಪ್ರಶ್ನೆಗೆ ಈಗ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ಇದನ್ನೂ ಓದಿ:ಸಂದೇಶ್ ಪ್ರೊಡಕ್ಷನ್ಸ್ ಜತೆ ಕೈ ಜೋಡಿಸಿದ ಕಿಚ್ಚ ಸುದೀಪ್

    ರಾಜಮೌಳಿ ಜೊತೆಗಿನ ಸಿನಿಮಾಗಾಗಿ ಮಹೇಶ್ ಬಾಬು ಭರ್ಜರಿ ಸಿದ್ಧತೆ ಮಾಡಿಕೊಳ್ತಿದ್ದಾರೆ. ಸಿನಿಮಾಗಾಗಿ ಕೆಲ ತಿಂಗಳುಗಳ ಹಿಂದೆ ಮಹೇಶ್ ಬಾಬು ಜರ್ಮನಿಗೆ ಹೋಗಿದ್ದರು. ಈಗಲೂ ಈ ಚಿತ್ರದ ತಯಾರಿ ಮುಗಿದಿಲ್ಲ. ಎಲ್ಲಾ ಪಕ್ಕಾ ಆದ್ಮೇಲೆಯೇ ಅಖಾಡಕ್ಕೆ ಇಳಿಯಲು ಮಹೇಶ್ ಬಾಬು ನಿರ್ಧರಿಸಿದ್ದಾರೆ. ಹಾಗಾಗಿ ಆಗಸ್ಟ್ ವೇಳೆಗೆ ಸಿನಿಮಾ ಸೆಟ್ಟೇರಲಿದೆ. ಮುಂದಿನ ವರ್ಷ ಚಿತ್ರ ರಿಲೀಸ್ ಆಗಲಿದೆ.

    ಮೂಲಗಳ ಪ್ರಕಾರ, ಈ ಸಿನಿಮಾ ಹೆಚ್ಚು ಕಮ್ಮಿ ಇಪ್ಪತ್ತು ದೇಶಗಳಲ್ಲಿ ಇದರ ಶೂಟಿಂಗ್ ನಡೆಯಲಿದೆ. ಬಹುತೇಕ ಕಾಡಿನಲ್ಲಿ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ. ಅದಷ್ಟೇ ಅಲ್ಲ, 8 ಗೆಟಪ್‌ನಲ್ಲಿ ಮಹೇಶ್ ಬಾಬು ಕಾಣಿಸಿಕೊಳ್ಳಲಿದ್ದಾರೆ. ಪಾತ್ರ ಹೀಗೆ ಬರಬೇಕು ಅದಕ್ಕೆ ಏನೆಲ್ಲಾ ಮಾಡಬೇಕೋ ಅದರ ತಯಾರಿಯಲ್ಲಿದ್ದಾರೆ. ಅದು ಎಲ್ಲೆಲ್ಲಿ ಎನ್ನುವುದು ನಿಗೂಢ. ಹೀಗಾಗಿ ಮಹೇಶ್ ಬಾಬು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

    ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಕತೆ ಬರೆದಿದ್ದಾರೆ. ಅದಕ್ಕೆ ಏನೇನು ಮಸಾಲೆ ಬೇಕು ರಾಜಮೌಳಿ ತುಂಬಿದ್ದಾರೆ. ಭರ್ತಿ ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಇಷ್ಟು ಕೋಟಿ ಖರ್ಚು ಮಾಡುತ್ತಿರುವುದು ಇದೇ ಮೊದಲು. ಗ್ಲೋಬಲ್ ಸಿನಿಮಾ ಎನ್ನುವ ಹೆಗ್ಗಳಿಕೆ ಕೂಡ ಇದೆ. ಇದರಲ್ಲಿ ಹೀರೋ ಬಿಟ್ಟರೆ ಇನ್ಯಾರ ಹೆಸರೂ ಗೊತ್ತಾಗಿಲ್ಲ. ಅದಕ್ಕೂ ಅಂತಿಮ ತೆರೆ ಬೀಳುವ ದಿನ ದೂರ ಇಲ್ಲ.

  • ಸಖತ್ ಕ್ಯೂರಿಯಾಸಿಟಿ ಮೂಡಿಸುತ್ತಿದೆ ‘ಬಾಹುಬಲಿ’ ಆನಿಮೇಟೆಡ್ ಟ್ರೈಲರ್

    ಸಖತ್ ಕ್ಯೂರಿಯಾಸಿಟಿ ಮೂಡಿಸುತ್ತಿದೆ ‘ಬಾಹುಬಲಿ’ ಆನಿಮೇಟೆಡ್ ಟ್ರೈಲರ್

    ಹೊಸ ಸಿನಿಮಾದ ನಡುವೆಯೇ ನಿರ್ದೇಶಕ ಎಸ್.ಎಸ್. ರಾಜಮೌಳಿ (Rajamouli) ಮತ್ತೊಂದು ಮಹಾನ್ ಕೆಲಸಕ್ಕೆ ಮುಂದಾಗಿದ್ದಾರೆ. ತಮ್ಮದೇ ಯಶಸ್ಸಿನ ಸಿನಿಮಾ ‘ಬಾಹುಬಲಿ’ (Bahubali)ಯನ್ನು ಆನಿಮೇಷನ್ ರೂಪದಲ್ಲಿ ತರಲು ರೆಡಿಯಾಗಿದ್ದಾರೆ. ಈ ಸಿರೀಸ್ ಗೆ ಅವರು ‘ಬಾಹುಬಲಿ- ಕ್ರೌನ್ ಆಫ್ ಬ್ಲಡ್’ ಎಂದು ಹೆಸರಿಟ್ಟಿದ್ದಾರೆ. ಹಲವಾರು ಸರಣಿಗಳಲ್ಲಿ ಇದು ಮೂಡಿ ಬರಲಿದೆ ಎಂದು ಅವರು ಹೇಳಿಕೊಂಡಿದ್ದಾರೆ.

    ಈ ಬಾಹುಬಲಿ ಕ್ರೌನ್ ಆಫ್ ಬ್ಲಡ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಬಾಹುಬಲಿ ಸಿನಿಮಾದ ಅಷ್ಟೂ ಪಾತ್ರಗಳನ್ನೂ ಈ ಟ್ರೈಲರ್ ನಲ್ಲಿ ನೋಡಬಹುದಾಗಿದೆ. ಮೇ 17ರಿಂದ ಡಿಸ್ನಿ ಹಾಟ್ ಸ್ಟಾರ್ ನಲ್ಲಿ ಈ ಆನಿಮೇಷನ್ (Animated) ಚಿತ್ರ ಪ್ರಸಾರವಾಗಲಿದೆ. ಟ್ರೈಲರ್ ಸಖತ್ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿದೆ.

    ಸದ್ಯ ರಿಲೀಸ್ ಆಗಿರುವ ಟ್ರೈಲರ್ ನಲ್ಲಿ ಪಾತ್ರಗಳ ಮೂಲಕ ಕಥೆಯ ಸಾರಾಂಶವನ್ನು ಹೇಳಲಾಗಿದೆ. ಕಟ್ಟಪ್ಪನೇ (Kattappa) ಕಥೆಯ ವಿಲನ್ ಎನ್ನುವಂತೆ ಬಿಂಬಿಸಲಾಗಿದೆ. ಮಾಹಿಷ್ಮತಿ ಸಾಮ್ರಾಜ್ಯದ ಮೇಲೆ ಮೊದಲು ಒಬ್ಬ ಶತ್ರು ಆಕ್ರಮಣಕ್ಕೆ ಮುಂದಾಗುತ್ತಾನೆ ಎಂದು ಹೇಳುವ ಮೂಲಕ ಕಥೆಯಲ್ಲಿ ಹೊಸ ಬದಲಾವಣೆ ತರಲಾಗಿದೆ.

    ಈ ನಡುವೆ ಮೊನ್ನೆಯಷ್ಟೇ ಜಪಾನ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಹೊಸ ಸಿನಿಮಾದ ಬಗ್ಗೆಯೂ ಅಪ್ ಡೇಟ್ ನೀಡಿದ್ದಾರೆ ರಾಜಮೌಳಿ. ಆರ್.ಆರ್.ಆರ್ ಸಿನಿಮಾದ ಶೋ ಜಪಾನ್ ನಲ್ಲಿ ಆಯೋಜನೆ ಮಾಡಲಾಗಿತ್ತು. ನಂತರ ಕೇಳಲಾದ ಪ್ರಶ್ನೆಗೆ ಉತ್ತರಿಸಿದ್ದಾರೆ ನಿರ್ದೇಶಕರು. ಈ ಸಂದರ್ಭದಲ್ಲಿ ಆರ್.ಆರ್.ಆರ್ 2 (RRR 2) ಸಿನಿಮಾ ಬರಲಿದೆ. ಆದರೆ, ಅದು ಸದ್ಯಕ್ಕೆ ಸಸ್ಪೆನ್ಸ್ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಈ ವೇಳೆ ತಮ್ಮ ಮುಂಬರುವ ಸಿನಿಮಾ ಬಗ್ಗೆ ರಾಜಮೌಳಿ ಮಾಹಿತಿ ನೀಡಿದ್ದಾರೆ. ಮಹೇಶ್‌ ಬಾಬು ಜೊತೆಗಿನ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ್ದಾರೆ.

    ಜಪಾನ್‌ನಲ್ಲಿ ನಡೆದ ಸ್ಕ್ರೀನಿಂಗ್‌ನಲ್ಲಿ ಮಾತನಾಡಿದ ಎಸ್‌ಎಸ್ ರಾಜಮೌಳಿ, ನಮ್ಮ ಮುಂದಿನ ಚಿತ್ರದ ಸ್ಕ್ರೀಪ್ಟ್ ಕೆಲಸ ಮುಗಿಸಿದ್ದೇವೆ. ಚಿತ್ರ ಪ್ರಿ-ಪ್ರೊಡಕ್ಷನ್ ಪ್ರಕ್ರಿಯೆಯಲ್ಲಿದೆ. ಇನ್ನೂ ಕಾಸ್ಟಿಂಗ್ ಪೂರ್ಣಗೊಂಡಿಲ್ಲ. ಚಿತ್ರದ ಹೀರೋ ಅಂದರೆ ಮಹೇಶ್ ಬಾಬು (Mahesh Babu) ಅವರು ಮಾತ್ರ ಫೈನಲ್ ಆಗಿದ್ದಾರೆ. ಆತ ತುಂಬಾ ಒಳ್ಳೆಯ ನಟ. ಸುಂದರ ಕೂಡ. ಸಿನಿಮಾ ಬಿಡುಗಡೆ ಸಮಯದಲ್ಲಿ ಅವರನ್ನು ಇಲ್ಲಿಗೆ ಕರೆತಂದು ನಿಮಗೆ ಪರಿಚಯಿಸುತ್ತೇನೆ ಎಂದು ರಾಜಮೌಳಿ ಮಾಹಿತಿ ನೀಡಿದರು.

     

    ಮೂಲಗಳ ಪ್ರಕಾರ, ಈ ಸಿನಿಮಾ ಹೆಚ್ಚು ಕಮ್ಮಿ ಇಪ್ಪತ್ತು ದೇಶಗಳಲ್ಲಿ ಇದರ ಶೂಟಿಂಗ್ ನಡೆಯಲಿದೆ. ಬಹುತೇಕ ಕಾಡಿನಲ್ಲಿ ಚಿತ್ರೀಕರಣಕ್ಕೆ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎನ್ನಲಾಗುತ್ತಿದೆ.  ಅದಷ್ಟೇ ಅಲ್ಲ, 8 ಗೆಟಪ್‌ನಲ್ಲಿ ಮಹೇಶ್ ಬಾಬು ಕಾಣಿಸಿಕೊಳ್ಳಲಿದ್ದಾರೆ. ಪಾತ್ರ ಹೀಗೆ ಬರಬೇಕು ಅದಕ್ಕೆ ಏನೆಲ್ಲಾ ಮಾಡಬೇಕೋ ಅದರ ತಯಾರಿಯಲ್ಲಿದ್ದಾರೆ. ಅದು ಎಲ್ಲೆಲ್ಲಿ ಎನ್ನುವುದು ನಿಗೂಢ. ಹೀಗಾಗಿ ಮಹೇಶ್ ಬಾಬು ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • ಕ್ರಿಕೆಟಿಗ ಡೇವಿಡ್ ವಾರ್ನರ್ ನಟನೆ ಕಂಡು ತಲೆ ಚೆಚ್ಚಿಕೊಂಡ ರಾಜಮೌಳಿ

    ಕ್ರಿಕೆಟಿಗ ಡೇವಿಡ್ ವಾರ್ನರ್ ನಟನೆ ಕಂಡು ತಲೆ ಚೆಚ್ಚಿಕೊಂಡ ರಾಜಮೌಳಿ

    ಸ್ಟ್ರೇಲಿಯಾದ ಕ್ರಿಕೆಟ್ ತಾರೆ ಡೇವಿಡ್ ವಾರ್ನರ್ ಗೆ ಆಕ್ಷನ್ ಕಟ್ ಹೇಳಿದ್ದಾರೆ ರಾಜಮೌಳಿ (Rajamouli). ಡೇವಿಡ್ ನಟನೆ ಕಂಡು ತಲೆ ಚಚ್ಚಿಕೊಂಡಿದ್ದಾರೆ. ಹಾಗಂತ ಇದು ಸಿನಿಮಾವಲ್ಲ, ಜಾಹೀರಾತು (Advertisement). ಆ ಜಾಹೀರಾತಿನಲ್ಲಿ ರಾಜಮೌಳಿ ನಿರ್ದೇಶಕನಾಗಿ ನಟಿಸಿದ್ದರೆ, ವಾರ್ನರ್ (David Warner) ರಾಜಮೌಳಿ ಚಿತ್ರದ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

    ಆಪ್ ಒಂದರ ಜಾಹೀರಾತು ಇದಾಗಿದ್ದು, ಡೇವಿಡ್ ಗೆ ಕಾಲ್ ಮಾಡುವ ರಾಜಮೌಳಿ, ನಿಮ್ಮ ಕ್ರಿಕೆಟ್ ಪಂದ್ಯದ ಟಿಕೆಟ್ ಅನ್ನು ರಿಯಾಯತಿ ದರದಲ್ಲಿ ಕೊಡಬಹುದೆ ಎಂದು ಕೇಳ್ತಾರೆ. ಕ್ರೆಡಿಟ್ ಯುಪಿಐ ಆಗಿದ್ದರೆ ಕ್ಯಾಶ್ ಬ್ಯಾಕ್ ಬರುತ್ತದೆ ಎನ್ನುತ್ತಾರೆ ಡೇವಿಡ್. ಸಾಮಾನ್ಯ ಯುಪಿಐ ಇದ್ದರೆ? ಎಂದು ಮರು ಪ್ರಶ್ನೆ ಮಾಡುತ್ತಾರೆ ರಾಜಮೌಳಿ. ನಿಮಗೆ ರಿಯಾಯಲಿ ಬೇಕು ಅಂದರೆ, ನನಗೊಂದು ಅವಕಾಶ ಕೊಡಿ ನಿಮ್ಮ ಸಿನಿಮಾದಲ್ಲಿ ಎನ್ನುವ ಡೇವಿಡ್. ತಮ್ಮ ಸಿನಿಮಾದಲ್ಲಿ ಡೆವಿಡ್ ಇದ್ದರೆ ಹೇಗೆಲ್ಲ ನಟಿಸಬಹುದು ಎಂದು ಅಂದಾಜಿಸಿಕೊಂಡು ರಿಯಾಯತಿಯೇ ಬೇಡವೆಂದು ಬೆಚ್ಚಿ ಬೀಳ್ತಾರೆ ರಾಜಮೌಳಿ.

     

    ಈ ಜಾಹೀರಾತು ಮಜವಾಗಿದೆ. ತಮಾಷೆ ತಮಾಷೆಯಾಗಿ ಇಬ್ಬರೂ ಲವಲವಿಕೆಯಿಂದ ನಟಿಸಿದ್ದಾರೆ. ಅದರಲ್ಲೂ ಡೇವಿಡ್ ನಟನೆ ಸಖತ್ ಇಷ್ಟವಾಗುತ್ತಿದೆ. ಇಬ್ಬರು ದಿಗ್ಗಜರನ್ನು ಬಳಸಿಕೊಂಡು ಆ ಆಪ್ ಜಾಹೀರಾತು ನಿರ್ಮಾಣವಾಗಿದೆ.