Tag: rajamouli

  • ಆಸ್ಕರ್‌ನಲ್ಲಿ ಜ್ಯೂ.ಎನ್‌ಟಿಆರ್-ಚರಣ್ ಡ್ಯಾನ್ಸ್ ಮಾಡಿಲ್ಲ ಯಾಕೆ? ಇಲ್ಲಿದೆ ಅಸಲಿ ಕಾರಣ

    ಆಸ್ಕರ್‌ನಲ್ಲಿ ಜ್ಯೂ.ಎನ್‌ಟಿಆರ್-ಚರಣ್ ಡ್ಯಾನ್ಸ್ ಮಾಡಿಲ್ಲ ಯಾಕೆ? ಇಲ್ಲಿದೆ ಅಸಲಿ ಕಾರಣ

    ತೆಲುಗಿನ (Telagu) ನಟ ಜ್ಯೂ.ಎನ್‌ಟಿಆರ್ (Jr.Ntr) ಮತ್ತು ರಾಮ್ ಚರಣ್ (Ram Charan) ಜಬರ್‌ದಸ್ತ್ ಆಗಿ ಕುಣಿದಿದ್ದ `ನಾಟು ನಾಟು’ (Naatu Naatu) ಹಾಡಿಗೆ ಈ ವರ್ಷ ಆಸ್ಕರ್ ಅವಾರ್ಡ್ (Oscar Award) ಒಲಿದಿದೆ. ವಿಶ್ವದ ಎಲ್ಲೆಡೆ ಈ ಹಾಡು ಈಗ ಸಂಚಲನ ಮೂಡಿಸುತ್ತಿದೆ. ಹೀಗಿರುವಾಗ ಆಸ್ಕರ್ ವೇದಿಕೆಯಲ್ಲಿ ತಾರಕ್- ಚರಣ್ ನಾಟು ನಾಟು ಹಾಡಿಗೆ ಪ್ರದರ್ಶನ ನೀಡಬೇಕಿತ್ತು. ಕೊನೆಯ ಹಂತದಲ್ಲಿ ಪ್ರದರ್ಶನ ಕ್ಯಾನ್ಸಲ್ ಆಗಿದ್ದೇಕೆ ಎಂಬುದನ್ನ ನಿರ್ಮಾಪಕ ರಾಜ್‌ ಕಪೂರ್  ಅಸಲಿ ವಿಚಾರವನ್ನ ಬಿಚ್ಚಿಟ್ಟಿದ್ದಾರೆ.

    `ಆರ್‌ಆರ್‌ಆರ್’ (RRR) ಸಿನಿಮಾಗಾಗಿ ರಾಜಮೌಳಿ ಮತ್ತು ಟೀಮ್ ಶ್ರಮ ವಹಿಸಿ ಕೆಲಸ ಮಾಡಿದ್ದಾರೆ. `ನಾಟು ನಾಟು’ ಹಾಡನ್ನ ಉಕ್ರೇನ್‌ನಲ್ಲಿ ಅದ್ದೂರಿಯಾಗಿ ಶೂಟಿಂಗ್ ಮಾಡಲಾಗಿತ್ತು. ತೆರೆಯ ಮೇಲೆ ಕಮಾಲ್ ಮಾಡಿದ್ದಂತಹ ನಾಟು ನಾಟು ಸಾಂಗ್‌ಗೆ ಆಸ್ಕರ್ ವೇದಿಕೆಯಲ್ಲೂ ಪ್ರದರ್ಶನ ಮಾಡುವ ಯೋಜನೆ ಇತ್ತು. ಕಡೆಯ ಕ್ಷಣದಲ್ಲಿ ಬದಲಾಗಿದ್ದು ಯಾಕೆ ಎಂಬುದನ್ನ ನಿರ್ಮಾಪಕ ರಾಜ್ ಕಪೂರ್ (Raj Kapoor) ಇದೀಗ ತಿಳಿಸಿದ್ದಾರೆ.

    ರಾಮ್ ಚರಣ್ ಮತ್ತು ತಾರಕ್ ಇಬ್ಬರೂ ಪ್ರತಿಷ್ಠಿತ ವೇದಿಕೆಯಲ್ಲಿ ಡಾನ್ಸ್ ಮಾಡಲು ಆರಾಮದಾಯಕವಾಗಿರದ ಕಾರಣ ಪ್ರದರ್ಶನ ನೀಡಿಲ್ಲ ಎಂದು ರಾಜ್ ಕಪೂರ್ ಬಹಿರಂಗಪಡಿಸಿದ್ದಾರೆ. ವೇದಿಕೆಯ ಮೇಲೆ ಡ್ಯಾನ್ಸ್ ಮಾಡುವ ಮುನ್ನ ಮತ್ತೆ ಕಾರ್ಯಕ್ರಮದ ಸಿದ್ಧತೆ ಸಮಯದ ಅಭಾವವಿತ್ತು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ನಮ್ಮ ಭಾರತದ ಹೆಮ್ಮೆ ಎಂದು ಹಾಡಿ ಹೊಗಳಿದ ಕಂಗನಾ

    ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲ ಭೈರವ ಗಾಯಕರ ಜೊತೆ ಇವರಿಬ್ಬರೂ ಪ್ರದರ್ಶನ ನೀಡಬೇಕಿತ್ತು. ಎಂ.ಎಂ ಕೀರವಾಣಿ ಹೇಳಿದ ಬಳಿಕ ನಾವು ರಾತ್ರೋರಾತ್ರಿ ಭಾರತದ ಮತ್ತು ಲಾಸ್ ಏಂಜಲೀಸ್‌ನಲ್ಲಿರುವ ಕೋರಿಯೋಗ್ರಾಫರ್‌ಗಳಿಗೆ ಕರೆ ಮಾಡಿ ಮಾತನಾಡಿದೆವು. ನಾವು ಕಾಸ್ಟಿಂಗ್ ಆಯ್ಕೆಗಳು, ವಸ್ತ್ರ ವಿನ್ಯಾಸ ಮತ್ತು ಭಾರತದ ತಂಡದೊಂದಿಗೆ ಸ್ಟೇಜ್ ರೆಂಡರಿಂಗ್ ಎಲ್ಲವೂ ಸಿದ್ಧತೆ ಮಾಡಿಕೊಂಡಿದ್ದೇವು. ಆದರೆ ಎಲ್ಲದಕ್ಕೂ ಸಮಯದ ಅಭಾವವಿತ್ತು ಎಂದಿದ್ದಾರೆ. ಪ್ರತಿಷ್ಠಿತ ವೇದಿಕೆಯಲ್ಲಿ ನೃತ್ಯ ಮಾಡೋದಾದ್ರೆ ಅದಕ್ಕೆ ಸಿದ್ಧತೆ ಕೂಡ ಚೆನ್ನಾಗಿರಬೇಕು ಎಂಬ ಕಾರಣಕ್ಕೆ ಪ್ರದರ್ಶನ ನೀಡಲಾಗಲಿಲ್ಲ‌ ಬಳಿಕ ಹಾಲಿವುಡ್‌ ನಟಿ ಲಾರೆನ್‌ ಮತ್ತು ಅವರ ತಂಡ ಅದ್ಭುತವಾಗಿ ಪ್ರದರ್ಶಿಸಿದರು ಎಂದು ನಿರ್ಮಾಪಕ ರಾಜ್ ಕಪೂರ್ ತಿಳಿಸಿದ್ದಾರೆ.

  • Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    Oscar-ಆಸ್ಕರ್ ಪ್ರಶಸ್ತಿ ಪಡೆದ ನಾಟು ನಾಟು ‘ಲಹರಿ’ಯ ಹಾಡು ನೀವಿನ್ನೂ ನೋಡಿಲ್ವಾ?

    ನಾಟು ನಾಟು (Natu Natu) ಹಾಡು ಆಸ್ಕರ್ (Oscar) ಪ್ರಶಸ್ತಿ ಪಡೆಯುವ ಮೂಲಕ ಜಗತ್ತಿನಾದ್ಯಂತ ಸುದ್ದಿ ಮಾಡಿದೆ. ಸೋಷಿಯಲ್ ಮೀಡಿಯಾದಲ್ಲೂ ಅದು ಟ್ರೆಂಡ್ ಸೃಷ್ಟಿಸಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಸಿನಿಮಾದ ಗೀತೆ ಇದಾಗಿದ್ದು,  ಎಂ.ಎಂ.ಕೀರವಾಣಿ (MM Keeravani) ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಜ್ಯೂನಿಯರ್ ಎನ್.ಟಿ.ಆರ್ ಹಾಗೂ ರಾಮ್ ಚರಣ್ ಈ ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದರೆ, ಈ ಹಾಡಿನ ಮ್ಯೂಸಿಕ್ ಹಕ್ಕನ್ನು ಕನ್ನಡದ ಹೆಮ್ಮೆಯ ಲಹರಿ (Lahari Music) ಸಂಸ್ಥೆ ಪಡೆದುಕೊಂಡಿದೆ.

    ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ರಿಲೀಸ್ ಆಗಿದ್ದು, ಮೂಲ ಚಿತ್ರಸಾಹಿತ್ಯವನ್ನು ಚಂದ್ರಬೋಸ್ ಬರೆದಿದ್ದಾರೆ. ಕಲಾಭೈರವ ಹಾಗೂ ಸಿಪ್ಲಿಗಂಜ ಹಾಡಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಹಾಡು ಮೂಡಿ ಬಂದಿದೆ. ಇಂತಹ ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯು ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ (Sipliganja) ಹಾಗೂ ಕಾಲಭೈರವ (Kalabhairava) ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

    ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • RRR-ನಾಟು ನಾಟು ಹಾಡಿಗೆ ಆಸ್ಕರ್ : ಸಂತಸ ವ್ಯಕ್ತ ಪಡಿಸಿದ ಲಹರಿ ವೇಲು

    RRR-ನಾಟು ನಾಟು ಹಾಡಿಗೆ ಆಸ್ಕರ್ : ಸಂತಸ ವ್ಯಕ್ತ ಪಡಿಸಿದ ಲಹರಿ ವೇಲು

    ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ರಾಜಮೌಳಿ (Rajamouli) ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾದ ನಾಟು ನಾಟು (Natu Natu) ಹಾಡಿಗೆ ಓರಿಜನಲ್ ಸಾಂಗ್ ವಿಭಾಗದಲ್ಲಿ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿ ಸಂದಿದೆ. ಆರ್.ಆರ್.ಆರ್ ಸಿನಿಮಾದ ಹಾಡುಗಳ (Song) ಹಕ್ಕುಗಳನ್ನು ಪಡೆದಿದ್ದ ಭಾರತೀಯ ಸಿನಿಮಾ ರಂಗದ ಪ್ರತಿಷ್ಠಿತ ಲಹರಿ ಸಂಸ್ಥೆಯು ಸಂತಸ ವ್ಯಕ್ತ ಪಡಿಸಿದೆ. ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಲಹರಿ ವೇಲು, ಆಸ್ಕರ್ ಪ್ರಶಸ್ತಿ ಪಡೆದಿದ್ದಕ್ಕೆ ಆರ್.ಆರ್.ಆರ್ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ‘ಲಹರಿ ಸಂಸ್ಥೆಗೆ 48 ವರ್ಷ. ಅಷ್ಟು ವರ್ಷದ ಶ್ರಮಕ್ಕೆ ಸಂದ ಗೌರವವೂ ಇದಾಗಿದೆ. ಆರ್.ಆರ್.ಆರ್ ಸಿನಿಮಾದ ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಎಂ.ಎಂ. ಕೀರವಾಣಿ, ನಟರಾದ ರಾಮ್ ಚರಣ್ (Ram Charan), ಜ್ಯೂನಿಯರ್ ಎನ್.ಟಿ.ಆರ್, ಸಾಹಿತ್ಯ ಬರೆದವರು, ಹಾಡಿದವರಿಗೆ ಎಲ್ಲರಿಗೂ ಅಭಿನಂದನೆಗಳು. ಈ ಪ್ರಶಸ್ತಿಯನ್ನು ಕನ್ನಡ ತಾಯಿ, ಭಾರತಾಂಬೆಯ ಮಡಲಿಗೆ ಅರ್ಪಿಸುತ್ತೇವೆ ಮತ್ತು ಸಂಗೀತ ಕ್ಷೇತ್ರಕ್ಕೆ, ಮಾಧ್ಯಮದ ಗೆಳೆಯರಿಗೆ ಹಾಗೂ ಭಾರತೀಯ ಸಿನಿಮಾ ರಂಗಕ್ಕೆ ಅರ್ಪಿಸುತ್ತೇವೆ’ ಎಂದರು ಲಹರಿ ವೇಲು. ಇದನ್ನೂ ಓದಿ: `ಜೊತೆ ಜೊತೆಯಲಿ’ ಖ್ಯಾತಿಯ ಶಿಲ್ಪಾ ಅಯ್ಯರ್ ಮದುವೆ ಆಲ್ಬಂ

    ಜಗತ್ತೇ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳು ಘೋಷಣೆಯಾಗಿದ್ದು, ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

    ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • Breaking- ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಸಂಭ್ರಮದಲ್ಲಿ ಭಾರತ

    Breaking- ನಾಟು ನಾಟು ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ : ಸಂಭ್ರಮದಲ್ಲಿ ಭಾರತ

    ಗತ್ತೇ ಕಾಯುತ್ತಿದ್ದ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿಗಳು ಘೋಷಣೆಯಾಗಿದ್ದು, ಭಾರತವನ್ನು ಪ್ರತಿನಿಧಿಸಿದ್ದ ಆರ್.ಆರ್.ಆರ್ ಸಿನಿಮಾದ ‘ನಾಟು ನಾಟು’ (Natu Natu) ಹಾಡಿಗೆ (Song) ಆಸ್ಕರ್ ಪ್ರಶಸ್ತಿ ಸಂದಿದೆ. ರಾಜಮೌಳಿ (Rajamouli) ನಿರ್ದೇಶನದಲ್ಲಿ ಮೂಡಿ ಬಂದ ಆರ್.ಆರ್.ಆರ್ ಚಿತ್ರದ ಈ ಹಾಡು ಆಸ್ಕರ್ ತರುವ ಭರವಸೆಯನ್ನೂ ಮೂಡಿಸಿತ್ತು. ಆಸ್ಕರ್ ವೇದಿಕೆಯ ಮೇಲೆ ಈ ಹಾಡನ್ನು ಗಾಯಕರಾದ ಸಿಪ್ಲಿಗಂಜ ಹಾಗೂ ಕಾಲಭೈರವ ಹಾಡಿದ್ದರು. ಅಮೆರಿಕಾದ ನಟ, ಡಾನ್ಸರ್ ಲಾರೆನ್ ಗೋತ್ಲಿಬ್ ನೃತ್ಯ ಮಾಡಿದ್ದರು.

    ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯದ್ದೇ ಸದ್ದು. ಭಾರತದಲ್ಲೂ ರಾಮ್ ಚರಣ್ (Ram Charan) ಮತ್ತು ಜ್ಯೂನಿಯರ್ (Jr NTR) ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಿನಿಮಾ ರಂಗದ ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಶುಭಾಶಯ ಕೋರಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ. ಇದನ್ನೂ ಓದಿ: `ಜೊತೆ ಜೊತೆಯಲಿ’ ಖ್ಯಾತಿಯ ಶಿಲ್ಪಾ ಅಯ್ಯರ್ ಮದುವೆ ಆಲ್ಬಂ

    ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

    ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ. ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

  • ರಾಯಚೂರು ಜಿಲ್ಲೆ ಚುನಾವಣಾ ರಾಯಭಾರಿಯಾಗಿ ನಿರ್ದೇಶಕ ರಾಜಮೌಳಿ ಆಯ್ಕೆ

    ರಾಯಚೂರು ಜಿಲ್ಲೆ ಚುನಾವಣಾ ರಾಯಭಾರಿಯಾಗಿ ನಿರ್ದೇಶಕ ರಾಜಮೌಳಿ ಆಯ್ಕೆ

    ರಾಜ್ಯದಲ್ಲಿ ರಾಜಕೀಯ (Politics) ಕಾವು ಜೋರಾಗಿದೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ತೆರೆಮರೆಯಲ್ಲಿ ತಯಾರಿ ಜೋರಾಗಿ ನಡೆಯುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಜಾಗೃತಿಗಾಗಿ ರಾಜ್ಯದ ಕೆಲವು ಜಿಲ್ಲೆಗಳಿಗೆ ಚುನಾವಣಾ ನೇಮಕ ಮಾಡಲಾಗಿದೆ. ಅದರಂತೆಯೇ ರಾಯಚೂರು (Raichur) ಜಿಲ್ಲೆಗೆ ಸ್ಟಾರ್ ನಿರ್ದೇಶಕ ರಾಜಮೌಳಿ (Rajamouli) ಅವರನ್ನು ಚುನಾವಣಾ (Election) ರಾಯಭಾರಿಯಾಗಿ (Ambassador) ನೇಮಕ ಮಾಡಿದೆ. ಇದನ್ನೂ ಓದಿ: ಅಪ್ಪು ನಟಿಸಬೇಕಿದ್ದ ಕತೆಯಲ್ಲಿ ವಿನಯ್ ರಾಜ್‌ಕುಮಾರ್ ಹೀರೋ

    ರಾಜಮೌಳಿ ಅವರು ತನ್ನ ಹುಟ್ಟೂರಿಗೆ ಚುನಾವಣಾ ರಾಯಭಾರಿಯಾಗಿರುವುದು ವಿಶೇಷ. ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ವಿಜಯಪುರ ಸೇರಿ ಹತ್ತು ಜಿಲ್ಲೆಗಳಿಗೆ ವಿವಿಧ ಕ್ಷೇತ್ರಗಳ ಸಾಧಕರನ್ನು ಚುನಾವಣಾ ರಾಯಭಾರಿಗಳಾಗಿ ನೇಮಕ ಮಾಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಈ ಪೈಕಿ ರಾಜಮೌಳಿ ಹೆಸರು ಸಾಕಷ್ಟು ಗಮನ ಸೆಳೆದಿದೆ. ಎಸ್.ಎಸ್ ರಾಜಮೌಳಿ ಅವರನ್ನ ನೇಮಕ ಮಾಡಿರುವ ಬಗ್ಗೆ ರಾಯಚೂರು ಜಿಲ್ಲಾಧಿಕಾರಿ ಚಂದ್ರಶೇಖರ್ ನಾಯಕ್ ತಿಳಿಸಿದ್ದಾರೆ.

    ರಾಯಚೂರು ಜಿಲ್ಲೆ ಕರ್ನಾಟಕ ಹಾಗೂ ಆಂಧ್ರ ಗಡಿಯಲ್ಲಿದೆ. ಇದರ ಜೊತೆಗೆ ರಾಜಮೌಳಿಗೆ ರಾಯಚೂರು ಜಿಲ್ಲೆಯ ಕನೆಕ್ಷನ್ ಕೂಡ ಇದೆ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಆಂಧ್ರದಲ್ಲಿ ಜಮೀನು ಹೊಂದಿದ್ದರು. ಆದರೆ, ರೈಲ್ವೇ ಟ್ರ‍್ಯಾಕ್ ನಿರ್ಮಾಣದಿಂದ ಜಮೀನನ್ನು ಕಳೆದುಕೊಂಡರು. ಈ ವೇಳೆ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಅವರು 1968ರಲ್ಲಿ ರಾಯಚೂರಿಗೆ ಸ್ಥಳಾಂತರಗೊಂಡಿದ್ದರು. ಅಲ್ಲಿ 7 ಎಕರೆ ಭತ್ತದ ಜಮೀನು ಪಡೆದು ಅಲ್ಲಿಯೇ ಕೃಷಿ ಮಾಡಿದರು. ರಾಜಮೌಳಿ ಹುಟ್ಟಿದ್ದು 1973ರಲ್ಲಿ. 1977ರಲ್ಲಿ ವಿಜಯೇಂದ್ರ ಪ್ರಸಾದ್ ಅವರು ಕುಟುಂಬ ಸಮೇತ ಮತ್ತೆ ಆಂಧ್ರ ಪ್ರದೇಶಕ್ಕೆ ತೆರಳಿದರು. ಹೀಗಾಗಿ, ರಾಜಮೌಳಿಗೆ ರಾಯಚೂರು ಜಿಲ್ಲೆಯ ಬಗ್ಗೆ ವಿಶೇಷ ಗೌರವ ಇದೆ.

    ಪ್ರತಿಯೊಬ್ಬರೂ ಮತನದಾನ ಮಾಡಬೇಕು ಎಂದು ಸರ್ಕಾರ ಜಾಗೃತಿ ಮೂಡಿಸುತ್ತದೆ. ಆಯಾ ಜಿಲ್ಲೆಯ ರಾಯಭಾರಿಯಿಂದ ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗುತ್ತದೆ. ಇದಕ್ಕಾಗಿ ಏರ್ಪಡಿಸುವ ವಿವಿಧ ಕಾರ್ಯಕ್ರಮದಲ್ಲಿ ಖ್ಯಾತ ನಿರ್ದೇಶಕ ರಾಜಮೌಳಿ ಭಾಗಿಯಾಗಲಿದ್ದಾರೆ.

  • ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

    ‘ಆಸ್ಕರ್’ ಪ್ರಶಸ್ತಿಗಾಗಿ 80 ಕೋಟಿ ಖರ್ಚು ಮಾಡಿದ ರಾಜಮೌಳಿ : ತೆಲುಗು ನಿರ್ದೇಶಕ ಕಿಡಿಕಿಡಿ

    ಬಾರಿ ಆಸ್ಕರ್ (Oscar) ಪ್ರಶಸ್ತಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಧಾವಂತದಲ್ಲಿದೆ ಆರ್.ಆರ್.ಆರ್ (RRR) ಚಿತ್ರತಂಡ. ಈ ಪ್ರಶಸ್ತಿಯಲ್ಲಿ ಭಾಗಿಯಾಗಲು ಹಲವು ನಿಯಮಗಳಿದ್ದು ಆ ಎಲ್ಲ ನಿಯಮಗಳನ್ನು ಪೂರೈಸಿ, ಇದೀಗ ಅಂತಿಮ ಹಂತವನ್ನೂ ಅದು ತಲುಪಿದೆ. ಮಾರ್ಚ್ 12ಕ್ಕೆ ಪ್ರಶಸ್ತಿ ಘೋಷಣೆ ಮತ್ತು ಪ್ರದಾನ ಸಮಾರಂಭವೂ ನಡೆಯಲಿದ್ದು, ಈ ವೇದಿಕೆಯ ಮೇಲೆ ಆರ್.ಆರ್.ಆರ್ ಚಿತ್ರದ ನಾಯಕರಾದ ಜ್ಯೂನಿಯರ್ ಎನ್.ಟಿ.ಆರ್ (Jr. NTR,) ಹಾಗೂ ರಾಮ್ ಚರಣ್ (Ram Charan) ‘ನಾಟು ನಾಟು’ ಗೀತೆಗೆ ಹೆಜ್ಜೆ ಹಾಕಲಿದ್ದಾರೆ. ಈ ಹಾಡೇ ಅಂತಿಮ ಸುತ್ತಿಗೆ ಆಯ್ಕೆಯೂ ಆಗಿದೆ.

    ಆರ್.ಆರ್.ಆರ್ ಸಿನಿಮಾದ ಹಾಡಿಗೆ ಆಸ್ಕರ್ ಬರಲಿ ಎಂದು ದೇಶಕ್ಕೆ ದೇಶವೇ ಪ್ರಾರ್ಥಿಸುತ್ತಿದ್ದರೆ, ತೆಲುಗಿನ ಹಿರಿಯ ನಿರ್ದೇಶಕ ತಮ್ಮಾರೆಡ್ಡಿ (Thamarreddy Bharadwaj) ಚಿತ್ರತಂಡದ ವಿರುದ್ಧ ಕಿಡಿಕಾರಿದ್ದಾರೆ. ಆಸ್ಕರ್ ಪ್ರಶಸ್ತಿಯನ್ನು ಪಡೆಯಲೆಂದು ಆರ್.ಆರ್.ಆರ್ ಚಿತ್ರದ ನಿರ್ದೇಶಕ ರಾಜಮೌಳಿ (Rajamouli) ಬರೋಬ್ಬರಿ 80 ಕೋಟಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೊತ್ತದಲ್ಲಿ ತಾವು ಹತ್ತು ಸಿನಿಮಾಗಳನ್ನು ತಯಾರಿಸುತ್ತಿದ್ದೆ ಎಂದಿದ್ದಾರೆ. ಇದನ್ನೂ ಓದಿ: ಎಮೋಷನಲ್ ನಿಂದನೆ ಬಗ್ಗೆ ಮೌನ ಮುರಿದ ಮೇಘನಾ ರಾಜ್

    ‘ನಾನು ಆರೋಪ ಮಾಡುತ್ತಿಲ್ಲ. ನನಗೆ ಗೊತ್ತಿರುವವರೇ ಹೇಳಿರುವಂತೆ ಆಸ್ಕರ್ ಪ್ರಶಸ್ತಿಗಾಗಿ ರಾಜಮೌಳಿ ಮತ್ತು ತಂಡ ನೀರಿನಂತೆ ಹಣ ಖರ್ಚು ಮಾಡಿದ್ದಾರೆ. ಎಂಬತ್ತು ಕೋಟಿ ಖರ್ಚಾಗಿದೆ ಎಂದು ಹೇಳಲಾಗುತ್ತಿದೆ. ಅಲ್ಲಿ ಸಿನಿಮಾ ಬಿಡುಗಡೆ, ಪ್ರಚಾರ, ತಂಡದ ಖರ್ಚು ಮತ್ತು ಆಸ್ಕರ್ ಪ್ರಶಸ್ತಿಗಾಗಿ ಮಾಡಬೇಕಾದ ಖರ್ಚು ಹೀಗೆ ಕೋಟಿ ಕೋಟಿ ಸುರಿದಿದ್ದಾರೆ. ಇಷ್ಟು ಹಣ ಖರ್ಚು ಮಾಡಿ ಪ್ರಶಸ್ತಿ ಪಡೆಯಬೇಕಾ?’ ಎಂದು ಅವರು ತಮ್ಮಾರೆಡ್ಡಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

    ಕನ್ನಡದ ಕೆಜಿಎಫ್ 2 ಚಿತ್ರಕ್ಕೆ ನೂರು ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಆಸ್ಕರ್ ಪ್ರಶಸ್ತಿಗಾಗಿ ಆರ್.ಆರ್.ಆರ್ ಎಂಬತ್ತು ಕೋಟಿ ಖರ್ಚು ಮಾಡಿದ್ದಾರೆ. ಇಪ್ಪತ್ತು ಕೋಟಿ ಸೇರಿಸಿದ್ದರೆ ಮತ್ತೊಂದು ಕೆಜಿಎಫ್ ಮಾದರಿಯ ಚಿತ್ರ ಮಾಡಬಹುದಿತ್ತು ಎಂದು ತಮ್ಮಾರೆಡ್ಡಿ ಲೇವಡಿ ಮಾಡಿದ್ದಾರೆ. ಇವರ ಮಾತು ತೆಲುಗು ಸಿನಿಮಾ ರಂಗದಲ್ಲಿ ಸಂಚಲನ ಮೂಡಿಸಿದೆ.

  • Oscars 2023: ಪ್ರತಿಷ್ಠಿತ ಆಸ್ಕರ್ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿದೆ `ನಾಟು ನಾಟು’ ಸಾಂಗ್

    Oscars 2023: ಪ್ರತಿಷ್ಠಿತ ಆಸ್ಕರ್ ವೇದಿಕೆಯಲ್ಲಿ ಪ್ರದರ್ಶನಗೊಳ್ಳಲಿದೆ `ನಾಟು ನಾಟು’ ಸಾಂಗ್

    ಖ್ಯಾತ ನಿರ್ದೇಶಕ ರಾಜಮೌಳಿ (Director Rajamouli) ನಿರ್ದೇಶನದ `RRR’ ಸಿನಿಮಾದ ಕೀರ್ತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಚಿತ್ರದ `ನಾಟು ನಾಟು’ ಸಾಂಗ್‌ಗೆ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಬಾಚಿಕೊಂಡ ಬೆನ್ನಲ್ಲೇ ಇದೀಗ ಪ್ರತಿಷ್ಠಿತ ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ (Naatu Naatu Song) ಹಾಡು ಪ್ರದರ್ಶನಗೊಳ್ಳುವುದರ ಬಗ್ಗೆ ಸಿಹಿಸುದ್ದಿ ಸಿಕ್ಕಿದೆ.

    ಆಸ್ಕರ್ (Oscars 2023) ಅಂಗಳಕ್ಕೆ ಹೋಗೋದು ಪ್ರತೀ ಫಿಲಂ ಮೇಕರ್‌ನ ಬಹುದೊಡ್ಡ ಕನಸು. ಆಸ್ಕರ್ ವೇದಿಕೆಯಲ್ಲಿ ಜಗತ್ತಿನ ವಿವಿಧ ಭಾಷೆಗಳ ವಿವಿಧ ದೇಶಗಳ ನಾನಾ ಮೈ ಬಣ್ಣದ ನಟ- ನಟಿಯರ ಮೇಳವೇ ನಡೆಯುತ್ತೆ. ಆದರೆ ಈ ಬಾರಿ ಆಸ್ಕರ್‌ನಲ್ಲಿ ಪ್ರಸಿದ್ಧ `ಆರ್‌ಆರ್‌ಆರ್’ ಸಿನಿಮಾದ್ದೇ ಸಮಾಚಾರ. ಈ ಚಿತ್ರ ಬಂದು ವರ್ಷ ಕಳೆದರೂ `ಆರ್‌ಆರ್‌ಆರ್’ ಚಿತ್ರದ `ನಾಟು ನಾಟು’ ಹಾಡು ಇಡೀ ಜಗತ್ತನ್ನೇ ಕುಣಿಸುತ್ತಿದೆ. ಹಾಗಾಗಿ ಮಾ.12ಕ್ಕೆ ಲಾಸ್ ಎಂಜಲೀಸ್‌ನಲ್ಲಿ 95ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆ ವೇದಿಕೆ ಮೇಲೆ `ನಾಟು ನಾಟು’ ಲೈವ್ ಪರ್ಫಾರ್ಮೆನ್ಸ್‌ಗೆ ಅವಕಾಶ ಸಿಕ್ಕಿದೆ. ಈ ಹಿಂದೆಯೇ ಈ ಬಗ್ಗೆ ಸುಳಿವು ಸಿಕ್ಕಿತ್ತು. ಇದೀಗ ಅಧಿಕೃತವಾಗಿ ಈ ವಿಚಾರವನ್ನು ಅಕಾಡೆಮಿ ಸ್ಪಷ್ಟಪಡಿಸಿದೆ.

    ಚಂದ್ರಬೋಸ್ ಸಾಹಿತ್ಯ ಬರೆದಿರುವ `ನಾಟು ನಾಟು’ ಹಾಡನ್ನು ಗಾಯಕರಾದ ರಾಹುಲ್ ಸಿಪ್ಲಿಗಿಂಜ್ ಹಾಗೂ ಕಾಲ ಭೈರವ ಹಾಡಿದ್ದರು. ಇದೀಗ ಇವರಿಬ್ಬರಿಗೆ ಆಸ್ಕರ್ ವೇದಿಕೆಯ ಮೂಲಕ ಮತ್ತೊಮ್ಮೆ ಹಾಡಿನ ಲೈವ್ ಪರ್ಫಾರ್ಮೆನ್ಸ್ ನೀಡುವ ಅವಕಾಶ ದಕ್ಕಿದೆ. ಇದನ್ನು ಟ್ವೀಟ್ ಮಾಡಿ ಅಕಾಡೆಮಿ ಖಚಿತ ಪಡಿಸಿದೆ. ಜೇಮ್ಸ್ ಕ್ಯಾಮರೂನ್‌ನಂತ ಹಾಲಿವುಡ್ ಫಿಲ್ಮ್ ಮೇಕರ್ಸ್ ‘RRR’ ಸಿನಿಮಾ ನೋಡಿ ಮೆಚ್ಚಿ ಹೊಗಳಿದ್ದಾರೆ. ಈ ವಾರ ಸಿನಿಮಾ ಅಮೆರಿಕಾದಲ್ಲಿ ಮತ್ತೆ ರಿಲೀಸ್ ಆಗುತ್ತಿದೆ. ವಿಶೇಷ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ. ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ (M.M Keeravani) ಈ ಹಾಡಿಗೆ ಸಂಗೀತ ನಿರ್ದೇಶನ ಮಾಡಿದವರು. ಅವರು ಆಸ್ಕರ್ ವೇದಿಕೆಯಲ್ಲಿ ಭಾಗಿ ಆಗುವುದು ಅನುಮಾನ ಎನ್ನಲಾಗ್ತಿದೆ. ಇತ್ತೀಚೆಗೆ ಆರೋಗ್ಯ ಕಾರಣಗಳಿಂದ ವೇದಿಕೆಯಲ್ಲಿ ಪರ್ಫಾರ್ಮೆನ್ಸ್ ಕಷ್ಟ ಎಂದು ಕೀರವಾಣಿ ಹೇಳಿದ್ದರು. ಅವರ ಬರುವಿಕೆಯ ಬಗ್ಗೆ ನಿರೀಕ್ಷೆಯಿದೆ. ಇದನ್ನೂ ಓದಿ ಸ್ವೀಟ್‌ ಹಾರ್ಟ್‌ಗೆ ವಿಶ್‌ ಮಾಡಿದ ರಿಷಬ್ ಶೆಟ್ಟಿ

    ಚಿತ್ರದ ನಾಟು ನಾಟು ಸಾಂಗ್ ಅನ್ನ ಉಕ್ರೇನ್‌ನಲ್ಲಿ ಶೂಟ್ ಮಾಡಲಾಗಿತ್ತು. ಪ್ರೇಮ್ ರಕ್ಷಿತ್ ಕೊರಿಯೋಗ್ರಾಫಿಯಲ್ಲಿ ತಾರಕ್- ಚರಣ್ ಜಬರ್‌ದಸ್ತ್ ಆಗಿ ಹೆಜ್ಜೆ ಹಾಕಿದ್ದರು. ಈ ಸಿನಿಮಾ ಗೆಲುವಿಗೆ ರಾಜಮೌಳಿ ಅವರ ನಿರ್ದೇಶನವಷ್ಟೇ ಸಾಥ್ ನೀಡಿರುವುದಲ್ಲ. ಚಿತ್ರಕಥೆಯ ಜೊತೆ ತಾರಕ್ ಮತ್ತು ರಾಮ್ ಚರಣ್ ಅಭಿನಯ ಕೂಡ ಗೆಲುವಿಗೆ ಕಾರಣವಾಗಿದೆ.

  • ಕನ್ನಡಕ್ಕೆ ಬರುವ ಡಬ್ಬಿಂಗ್ ಸಿನಿಮಾಗಳಿಗೆ ಇವರದ್ದೇ ಮಾತು, ಹಾಡು

    ಕನ್ನಡಕ್ಕೆ ಬರುವ ಡಬ್ಬಿಂಗ್ ಸಿನಿಮಾಗಳಿಗೆ ಇವರದ್ದೇ ಮಾತು, ಹಾಡು

    ರಭಾಷೆಗಳಿಂದ ಕನ್ನಡಕ್ಕೆ ಡಬ್  ಆಗಿ ಬರುವ ಚಿತ್ರಗಳಲ್ಲಿ ಒಂದು ಹೆಸರು ಬಹಳ ಕಾಮನ್  ಆಗಿರುತ್ತದೆ. ಅದು ವರದರಾಜ್  ಚಿಕ್ಕಬಳ್ಳಾಪುರ. 2019ರಲ್ಲಿ ಬಿಡುಗಡೆಯಾದ ‘ರಂಗಸ್ಥಳ’ ಚಿತ್ರಕ್ಕೆ ಹಾಡುಗಳನ್ನು ಬರೆಯುವ ಮೂಲಕ ಚಿತ್ರರಂಗಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟ ಅವರು, ನಾಲ್ಕು ವರ್ಷಗಳ ಅಂತರದಲ್ಲಿ 96 ಚಿತ್ರಗಳಿಗೆ ಸಂಭಾಷಣೆಕಾರರಾಗಿ, ಗೀತರಚನೆಕಾರರಾಗಿ  ಕೆಲಸ ಮಾಡಿದ್ದಾರೆ.

    ಮೂಲತಃ ಚಿಕ್ಕಬಳ್ಳಾಪುರದವರಾದ ವರದರಾಜ್ , ಬೆಂಗಳೂರಿನ ಆರ್ .ಸಿ. ಕಾಲೇಜಿನಲ್ಲಿ ಓದಿದವರು. ಬಿ.ಬಿ.ಎಂ, ಎಂ.ಬಿ.ಎ ಪದವಿಧರರು. ಚಿಕ್ಕಂದಿನಿಂದಲೂ ಕವನ, ಕಥೆಗಳನ್ನು ಬರೆಯುತ್ತಿದ್ದ ಅವರು, ಕಾಲೇಜಿನಲ್ಲಿ ತಮ್ಮದೇ ರಚನೆಯ ನಾಟಕಗಳನ್ನೂ ಆಡಿಸಿದ್ದಾರೆ. ಗಡಿ ಭಾಗದವರದ್ದಾರಿಂದ ಕನ್ನಡದ ಜೊತೆಗೆ ತೆಲುಗಿನಲ್ಲೂ ಹಿಡಿತ ಚೆನ್ನಾಗಿತ್ತು. ಕನ್ನಡ ಸಾಹಿತ್ಯವಲ್ಲದೆ, ತೆಲುಗು ಸಾಹಿತ್ಯವನ್ನೂ ಚೆನ್ನಾಗಿ ಓದಿ ಅರ್ಥ ಮಾಡಿಕೊಂಡಿದ್ದ ಅವರು, ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದು 2009ರಲ್ಲಿ. ಪೂಜಾ ಗಾಂಧಿ ಅಭಿನಯದ ‘ತವರಿನ ಋಣ’ ಚಿತ್ರಕ್ಕಾಗಿ ಅವರು ‘ಕೇಳೇ ಮೈನ’ ಎಂಬ ಹಾಡನ್ನು ಬರೆದರಾದರೂ ಆ ಚಿತ್ರ ಕಾರಣಾಂತರಗಳಿಂದ ಬಿಡುಗಡೆಯಾಗಲಿಲ್ಲ. ನಂತರ ಒಂದು ದಶಕ ಕಾಲ ನೂರಾರು ಭಕ್ತಿ ಗೀತೆ, ವೀಡೀಯೋ ಸಾಂಗ್ ಗಳನ್ನು ರಚಿಸುವಲ್ಲಿ ತೊಡಗಿಸಿಕೊಂಡಿದ್ದರು ವರದರಾಜು.

    ಹೀಗಿರುವಾಗಲೇ, 2019ರಲ್ಲಿ ಡಬ್ಬಿಂಗ್ ಗೆ ಮುಕ್ತ ಅವಕಾಶ ಸಿಕ್ಕಿತ್ತು. ಈ ಸಂದರ್ಭದಲ್ಲಿ ರಾಮ್ ಚರಣ್  ತೇಜ ಅಭಿನಯದ ತೆಲುಗು ಚಿತ್ರ ‘ರಂಗಸ್ಥಲಂ’, ಕನ್ನಡಕ್ಕೆ ‘ರಂಗಸ್ಥಳ’ ಎಂಬ ಹೆಸರಿನಲ್ಲಿ ಡಬ್  ಆಗಿ ಬಿಡುಗಡೆಯಾಯಿತು. ಈ ಚಿತ್ರಕ್ಕಾಗಿ ಅವರು ಬರೆದ ‘ಎಂಥ ಮುದ್ದಾಗಿದೀಯೇ’ ‘ಗಂಗಮ್ಮ ರಂಗಮ್ಮ’ ಸೇರಿದಂತೆ ಎಲ್ಲ ಹಾಡುಗಳು ಯಶಸ್ವಿಯಾದವು. ನಂತರ ‘ಕಾಂಚನ 3’ ಚಿತ್ರಕ್ಕೆ ಸಾಹಿತ್ಯ ಬರೆದರು. ಈ ಚಿತ್ರವೂ ಹೆಸರು ತಂದುಕೊಟ್ಟಿತು. ಮೊದಲೆರಡು ಚಿತ್ರಗಳಿಗೆ ಸಾಹಿತ್ಯ ಮಾತ್ರ ಬರೆದ ಅವರು, ಮೂರನೆಯ ಚಿತ್ರವಾದ ‘ಸೈರಾ ನರಸಿಂಹ ರೆಡ್ಡಿ’ಗೆ ಹಾಡುಗಳ ಜೊತೆಗೆ ಸಂಭಾಷಣೆಗಳನ್ನೂ ರಚಿಸಿದರು. ಈ ಚಿತ್ರಗಳ ಯಶಸ್ಸಿನಿಂದ ವರದರಾಜ್  ಸಾಕಷ್ಟು ಬ್ಯುಸಿಯಾದರು.

    ತೆಲುಗು, ತಮಿಳು ಮಲಯಾಳಂ ಮತ್ತು ಹಿಂದಿಯಿಂದ ಕನ್ನಡಕ್ಕೆ ಡಬ್  ಆದ ‘ಮಾಸ್ಟರ್ ‘, ‘ಗೀತ ಗೋವಿಂದಂ’, ‘RRR’, ‘ಮಗಧೀರ’, ‘ಬೃಂದಾವನಂ’, ‘ಮಿಥುನಂ’, ‘ವಡ ಚೆನ್ನೈ’, ‘ಇಮೈಕ್ಕ ನೋಡಿಗಳ್ ‘, ‘ಕಾತುವಾಕ್ಕುಲ ರೆಂಡು ಕಾದಲ್’, ‘ಬೀಸ್ಟ್ ‘, ‘ವಿಕ್ರಮ್ ‘, ‘ಪೊನ್ನಿಯನ್  ಸೆಲ್ವನ್  1’, ‘ಪಾಲಾರ್’ ‘ಪುಷ್ಪ’ ಮುಂತಾದ ಬೇರೆ ಭಾಷೆಯಿಂದ ಕನ್ನಡಕ್ಕೆ ಡಬ್  ಆದ ಚಿತ್ರಗಳ ಜತೆಗೆ, ಕನ್ನಡದಿಂದ ಬೇರೆ ಭಾಷೆಗಳಿಗೆ ಡಬ್  ಆಗಿರುವ ‘ಕೆಂಪೇಗೌಡ 2’, ‘ಪೊಗರು’, ‘ಕಿಸ್ ‘, ‘ವಂಚನ’ ‘ರೆಮೋ’, ‘ಉಗ್ರಾವತಾರಂ’, ‘ ಅನಗನಗಾ ಓಕ ಅಡವಿ  ‘, ‘ಕಬ್ಜ’ ಮತ್ತು ‘ಟೆರರ್ ‘ ಮುಂತಾದ ಚಿತ್ರಗಳಿಗೆ ವರದರಾಜು ಸಾಹಿತ್ಯ ಮತ್ತು ಸಂಭಾಷಣೆ ರಚಿಸಿದ್ದಾರೆ. ವರದರಾಜು ಬರೆದಿರುವ ‘ಮಾಸ್ಟರ್ ‘ ಚಿತ್ರದ ‘ಮನಸೇ ಕರಗದಾ ಲೋಕವೀ ಲೋಕವು’, ‘ಪುಷ್ಪ’ ಚಿತ್ರದಲ್ಲಿ ‘ಶ್ರೀವಲ್ಲಿ’, ‘ಸಾಮಿ ಸಾಮಿ’, ‘ಹೂಂ ಅಂತೀಯ ಮಾಮ ಉಹೂಂ ಅಂತೀಯ ಮಾಮ’, ‘RRR’ ಚಿತ್ರದ ‘ಹಳ್ಳಿನಾಟು’, ‘ದೋಸ್ತಿ’, ‘ಜನನಿ’, ‘ಕೊಮರಂ ಭೀಮ್  ಉಧೋ’ ಮುಂತಾದ ಹಾಡುಗಳು ಸಾಕಷ್ಟು ಯಶಸ್ವಿಯಾಗಿವೆ.

    ಇದು ಈಗಾಗಲೇ ಬಿಡುಗಡೆಯಾಗಿರುವ ಚಿತ್ರಗಳ ವಿಷಯವಾದರೆ, ಕನ್ನಡಕ್ಕೆ ಡಬ್  ಆಗುತ್ತಿರುವ ಚಿತ್ರಗಳು ಸಹ ದೊಡ್ಡ ಸಂಖ್ಯೆಯಲ್ಲಿದೆ. ‘ಶಾಕುಂತಲಂ’, ‘ಪುಷ್ಪ 2’, ‘ಪೊನ್ನಿಯನ್  ಸೆಲ್ವನ್  2’, ‘ಹರಿಹರ ವೀರಮಲ್ಲು’, ‘ದಸರಾ’ NTR 30, ಮುಂತಾದ ಚಿತ್ರಗಳಿಗೆ ವರದರಾಜು ಸಾಹಿತ್ಯ ಮತ್ತು ಸಂಭಾಷಣೆ ರಚಿಸಿದ್ದು, ಕೆಲ ಚಿತ್ರಗಳು ಇನ್ನಷ್ಟೇ ಬಿಡುಗಡೆಯಾಗಬೇಕಿವೆ. ಇದನ್ನೂ ಓದಿ: `ಸೀತಾ ರಾಮಂ’ ನಾಯಕಿಗೆ ಮದುವೆ ಪ್ರಪೋಸಲ್‌, ಖಡಕ್‌ ಉತ್ತರ ಕೊಟ್ಟ ನಟಿ

    ಬಹಳ ಕಡಿಮೆ ಸಮಯದಲ್ಲಿ ವರದರಾಜ್  ಅತೀ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡುವುದರ ಜೊತೆಗೆ ಮಣಿರತ್ನಂ, ಎಸ್ .ಎಸ್ . ರಾಜಮೌಳಿ, ಸುಕುಮಾರ್ , ಎಂ.ಎಂ. ಕೀರವಾಣಿ ದೇವಿಶ್ರೀ ಪ್ರಸಾದ್ ಮುಂತಾದ ಖ್ಯಾತನಾಮರ ಜೊತೆಗೂ ಕೆಲಸ ಮಾಡಿದ್ದಾರೆ. ಹಾಗೆಯೇ, ಜ್ಯೂನಿಯರ್  ಎನ್ ಟಿಆರ್ , ರಾಮ್ ಚರಣ್  ತೇಜ ಅವರಿಗೆ ಕನ್ನಡವನ್ನು ತಿದ್ದಿ ತೀಡಿ, ಅವರಿಂದ ಡಬ್ಬಿಂಗ್  ಮಾಡಿಸಿರುವ ವರದರಾಜ್, ತಾವು ನಡೆದು ಬಂದ ಹಾದಿಯ ಬಗ್ಗೆ ಖುಷಿ ವ್ಯಕ್ತಪಡಿಸುತ್ತಾರೆ. ಸದ್ಯದಲ್ಲೇ ಶತಕ ಪೂರೈಸುವುದರಲ್ಲಿರುವ ವರದರಾಜು ಚಿಕ್ಕಬಳ್ಳಾಪುರ, ಕನ್ನಡಕ್ಕೂ ಇತರೆ ಭಾಷೆಗಳಿಗೂ ನಡುವಿನ ಸೇತುವೆಯಂತೆ ಕೆಲಸ ಮಾಡುತ್ತಾ ಮುಂದಿನ ದಿನಗಳಲ್ಲಿ ಇನ್ನಷ್ಟು ಸದಭಿರುಚಿಯ ಸಾಹಿತ್ಯ ರಚಿಸುತ್ತಾ ತಮ್ಮ ಬರವಣಿಗೆಯ ಮೂಲಕ ಇನ್ನಷ್ಟು ಕನ್ನಡ ಸೇವೆ ಮಾಡುವ ಇಂಗಿತವನ್ನು ವ್ಯಕ್ತಪಡಿಸುತ್ತಾರೆ.

  • ಆಸ್ಕರ್ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ : ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ

    ಆಸ್ಕರ್ ಗೆಲ್ಲುತ್ತೇವೆ ಎನ್ನುವ ವಿಶ್ವಾಸವಿದೆ : ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ (R.R.R) ಸಿನಿಮಾದ ‘ನಾಟು ನಾಟು’ ಹಾಡು (Natu Natu Song) ಈಗಾಗಲೇ ಗೋಲ್ಡನ್ ಗ್ಲೋಬ್ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇದೀಗ ಆಸ್ಕರ್ (Oscar) ಪ್ರಶಸ್ತಿಯ ಮೇಲೆ ಕಣ್ಣಿಟ್ಟು ಕೂತಿದೆ. ಆಸ್ಕರ್ ರೇಸ್ ನಲ್ಲಿ ನಾಟು ನಾಟು ಸಾಂಗ್ ಸ್ಪರ್ಧೆಗಿದ್ದು ಈ ಬಾರಿ ತಮಗೆ ಆಸ್ಕರ್ ಪ್ರಶಸ್ತಿ ಬರುವ ವಿಶ್ವಾಸವಿದೆ ಎಂದಿದ್ದಾರೆ ಸಿನಿಮಾದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿ.

    ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಂ.ಎಂ.ಕೀರವಾಣಿ (MM Keeravani) ಅವರಿಗೆ ಸಂಗೀತ ಕಾರ್ಯಕ್ರಮ ನೀಡುವಂತಹ ಅವಕಾಶ ಸಿಕ್ಕಿದೆ. ಹಾಗಾಗಿ ಕೀರವಾಣಿ ಮತ್ತು ಟೀಮ್ ತಾಲೀಮು ಕೂಡ ನಡೆಸುತ್ತಿದೆ. ಅದೊಂದು ಜಾಗತಿಕ ಕಾರ್ಯಕ್ರಮ ಆಗಿರುವುದರಿಂದ ಹೆಸರಾಂತ ಸಂಗೀತ ಕಲಾವಿದರೇ ಕೀರವಾಣಿ ಜೊತೆ ಪ್ರಯಾಣ ಬೆಳೆಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಭಾರತದ ಸಂಗೀತ ನಿರ್ದೇಶಕರೊಬ್ಬರಿಗೆ ಇಂಥದ್ದೊಂದು ಅವಕಾಶ ಸಿಕ್ಕಿರುವುದು ವಿಶೇಷ. ಇದನ್ನೂ ಓದಿ: ಸಾಲು ಸಾಲು ಸಿನಿಮಾಗಳ ನಡುವೆ ಕಾವಿತೊಟ್ಟು ಅಚ್ಚರಿ ಮೂಡಿಸಿದ ಮಿಲ್ಕಿ ಬ್ಯೂಟಿ

    ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲು ಆರ್.ಆರ್.ಆರ್ ಚಿತ್ರತಂಡ  ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ನಿರ್ದೇಶಕ ರಾಜಮೌಳಿ (Rajamouli), ನಟರಾದ ಜ್ಯೂನಿಯರ್ ಎನ್.ಟಿ.ಆರ್, ರಾಮಚರಣ್ ಕುಟುಂಬಗಳು ಭಾಗಿಯಾಗಲಿವೆ ಎಂದು ಹೇಳಲಾಗುತ್ತಿದೆ. ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೂ ತಮ್ಮ ಕುಟುಂಬದೊಂದಿಗೆ ತೆರಳಿತ್ತು ಸಿನಿಮಾ ಟೀಮ್.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕೀರವಾಣಿ

    ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕೀರವಾಣಿ

    ಟಾಲಿವುಡ್‌ನ (Tollywood) ಸ್ಟಾರ್ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ (Mm.keeravani) ಅವರ ʻನಾಟು ನಾಟುʼ (Naatu Naatu Song) ಸಾಂಗ್ ಗೋಲ್ಡನ್ ಗ್ಲೋಬ್ ಅವಾರ್ಡ್ ಗೆದ್ದ ಮೇಲೆ ಇದೀಗ ಆಸ್ಕರ್ ಪ್ರಶಸ್ತಿಗೂ (Oscar Awards) ನಾಮಿನೇಟ್ ಆಗಿದೆ. ಅಷ್ಟೇ ಅಲ್ಲದೇ ಕೀರವಾಣಿ ಅವರಿಗೆ ಬಂಪರ್ ಅವಕಾಶವೊಂದು ಸಿಕ್ಕಿದೆ. ಆಸ್ಕರ್ ಪ್ರದಾನ ಸಮಾರಂಭದಲ್ಲಿ ಹಾಡಲು ಅವರಿಗೆ ಅವಕಾಶ ಸಿಕ್ಕಿದೆ.

    ರಾಜಮೌಳಿ ನಿರ್ದೇಶನದ `ಆರ್‌ಆರ್‌ಆರ್’ ಚಿತ್ರದ ನಾಟು ನಾಟು ಸಾಂಗ್‌ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಕಳೆದ ವರ್ಷ ರಿಲೀಸ್ ಆಗಿ, ಬ್ಲಾಕ್ ಬಸ್ಟರ್ ಸೂಪರ್ ಹಿಟ್ ಆಗಿತ್ತು. ಇತ್ತೀಚಿಗಷ್ಟೇ ಗೋಲ್ಡನ್ ಗ್ಲೋಬ್ ಅವಾರ್ಡ್ ಬಾಚಿಕೊಂಡ ನಾಟು ನಾಟು ಸಾಂಗ್‌ನ ಸಂಗೀತ ನಿರ್ದೇಶಕ ಎಂ.ಎಂ ಕೀರವಾಣಿ ಈಗ ಮತ್ತೆ ಅವರ ಆಸ್ಕರ್ ಪ್ರಶಸ್ತಿಗೆ ನಾಮಿನೇಟ್ ಆಗಿ ಪೈಪೋಟಿ ನೀಡುತ್ತಿದೆ.

    `ನಾಟು ನಾಟು’ ಸೂಪರ್ ಸಾಂಗ್ ಅನ್ನು ಇದೀಗ ಆಸ್ಕರ್ ಸಮಾರಂಭದ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಕೀರವಾಣಿ ಅವರು ಹಾಡಲಿದ್ದಾರೆ. ಮಾ.12ರಂದು ಲಾಸ್‌ ಏಂಜಲೀಸ್‌ನಲ್ಲಿ ಆಸ್ಕರ್‌ ಅವಾರ್ಡ್‌ ಸಮಾರಂಭ ನಡೆಯಲಿದೆ. ಈ ಬಗ್ಗೆ ಅವರು ಕೊಂಚ ನರ್ವಸ್ ಆಗಿದ್ದಾರೆ. ತಮ್ಮ ಆರೋಗ್ಯದ ಬಗ್ಗೆ ಚಿಂತೆ ಕಾಡ್ತಿರುವ ಬಗ್ಗೆ ಹೇಳಿರೋದಾಗಿ ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ.

    ನಾವು ಆಸ್ಕರ್ ಗೆಲ್ಲುತ್ತೇವೆ ಎಂಬ ಬಗ್ಗೆ ನನಗೆ ಆತ್ಮವಿಶ್ವಾಸ ಇದೆ. ಆದರೆ ಅಷ್ಟು ಜನರ ಎದುರಿನಲ್ಲಿ ಪರ್ಫಾರ್ಮೆನ್ಸ್ ನೀಡಲು ಸಾಕಷ್ಟು ತಯಾರಿ ಬೇಕು ಎಂದು ಕೀರವಾಣಿ ಹೇಳಿದ್ದಾರೆ. ಅವರ ದೇಹದ ತೂಕ ಹೆಚ್ಚಿದೆ. ಆ ಬಗ್ಗೆಯೂ ಅವರು ಮಾತನಾಡಿದ್ದಾರೆ. ತುಂಬಾ ಸಮಯದಿಂದ ನಾನು ಆರೋಗ್ಯವನ್ನು ನಿರ್ಲಕ್ಷಿಸಿದೆ. ʻಗೋಲ್ಡನ್ ಗ್ಲೋಬ್ʼ ಕಾರ್ಯಕ್ರಮದ ವೇದಿಕೆಯಲ್ಲಿ ನಿಂತುಕೊಂಡು ಮಾತನಾಡುವುದು ಕೂಡ ನನಗೆ ಸಮಸ್ಯೆ ಆಯಿತು ಎಂದು ಕೀರವಾಣಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k