Tag: rajastan royals

  • ರನ್‌ ಮಳೆಯಲ್ಲಿ ಕೊಚ್ಚಿ ಹೋಯ್ತು ರಾಜಸ್ಥಾನ – ಮೊದಲ ಸ್ಥಾನಕ್ಕೆ ಜಿಗಿದ ಮುಂಬೈ

    ರನ್‌ ಮಳೆಯಲ್ಲಿ ಕೊಚ್ಚಿ ಹೋಯ್ತು ರಾಜಸ್ಥಾನ – ಮೊದಲ ಸ್ಥಾನಕ್ಕೆ ಜಿಗಿದ ಮುಂಬೈ

    – ಸತತ 6 ಜಯ ಸಾಧಿಸಿ 14 ಅಂಕದೊಂದಿಗೆ ಇಂಡಿಯನ್ಸ್‌ ಕಮಾಲ್‌

    ಜೈಪುರ: ರಯಾನ್ ರಿಕೆಲ್ಟನ್, ರೋಹಿತ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌, ನಾಯಕ ಹಾರ್ದಿಕ್‌ ಪಾಂಡ್ಯ ಅವರ ರನ್‌ ಮಳೆಯ ಆಟದಿಂದ ರಾಜಸ್ಥಾನ ರಾಯಲ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ 100 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ಕೇವಲ 2 ವಿಕೆಟ್‌ ನಷ್ಟಕ್ಕೆ 217 ರನ್‌ ಹೊಡೆಯಿತು. ಕಠಿಣ ಸವಾಲನ್ನು ಪಡೆದ ರಾಜಸ್ಥಾನ 16.1 ಓವರ್‌ಗಳಲ್ಲಿ 117 ರನ್‌ ಗಳಿಸಿ ಆಲೌಟ್‌ ಆಗಿದೆ. ಸತತ 6 ಜಯದೊಂದಿಗೆ ಉತ್ತಮ ರನ್‌ ರೇಟ್‌ ಹೊಂದಿರುವ ಕಾರಣ ಮುಂಬೈ ಇಂಡಿಯನ್ಸ್‌ ಅಂಕಪಟ್ಟಿಯಲ್ಲಿ 14 ಅಂಕದೊಂದಿಗೆ ಮೊದಲ ಸ್ಥಾನಕ್ಕೆ ಏರಿದರೆ ಅಷ್ಟೇ ಅಂಕ ಪಡೆದಿರುವ ಆರ್‌ಸಿಬಿ ಎರಡನೇ ಸ್ಥಾನಕ್ಕೆ ಜಾರಿದೆ.

    ರಾಜಸ್ಥಾನ್‌ ತಂಡವು ಆರಂಭಿಕ ಹಂತದಲ್ಲೇ ಆಘಾತ ಅನುಭವಿಸಿತು. ಗುಜರಾತ್‌ ವಿರುದ್ಧ ಆಡಿದ ಕಳೆದ ಪಂದ್ಯದಲ್ಲಿ ಆರಂಭಿಕರಾದ ಯಶಸ್ವಿ ಜೆಸ್ವಾಲ್‌ ಹಾಗೂ ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಅದೇ ಆಟದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಇಂದು ಈ ಜೋಡಿ ನಿರಾಸೆ ಮೂಡಿಸಿತು. ಮೊದಲೇ ಓವರ್‌ನಲ್ಲೇ ದೀಪಕ್‌ ಚಹಾರ್‌ ಬೌಲಿಂಗ್‌ ದಾಳಿಗೆ ವೈಭವ್‌ ಸೂರ್ಯವಂಶಿ ಓಟಾಗಿ, ಪೆವಿಯನ್‌ನತ್ತ ಮುಖ ಮಾಡಿದರು. ಯಶಸ್ವಿ ಜೈಸ್ವಾಲ್‌ ಕೂಡಾ ಹೆಚ್ಚು ಹೊತ್ತು ಪೆವಿಲಿಯನ್‌ನಲ್ಲಿರದೇ ಬೋಲ್ಟ್‌ಗೆ ಕ್ಲೀನ್‌ ಬೋಲ್ಡ್‌ ಆದರು. ಅದಾಗಲೇ ರಾಜಸ್ಥಾನ ತಂಡ 2 ಓವರ್‌ಗೆ 18 ರನ್‌ನಷ್ಟಕ್ಕೆ 2 ವಿಕೆಟ್‌ ಕಳೆದುಕೊಂಡಿತ್ತು.

    ಬಳಿಕ ಬಂದ ನಿತೀಶ್‌ ರಾಣಾ ಕೂಡ 11 ಎಸೆತಗಳಲ್ಲಿ 9 ರನ್‌ ಗಳಿಸಿ ಓಟಾದರು. ಮಧ್ಯಮ ಕ್ರಮಾಂಕದಲ್ಲಿ ಯಾರು ಸಹ ಹೆಚ್ಚು ಹೊತ್ತು ಕ್ರೀಸ್‌ನಲ್ಲಿರಲಿಲ್ಲ. 8 ಎಸೆತಗಳಲ್ಲಿ 16 ರನ್‌ ಬಾರಿಸಿದ್ದ ತಂಡದ ನಾಯಕ ರಿಯಾನ್‌ ಪರಾಗ್‌ರನ್ನು ಜಸ್ಪ್ರೀತ್‌ ಬುಮ್ರಾ ವಿಕೆಟ್‌ ಕಿತ್ತು ಪೆವಿಲಿಯನ್‌ಗೆ ಕಳುಹಿಸಿದರು. ಬಳಿಕ ಬಂದ ಜುರೇಲ್‌ 11 ಎಸೆತಕ್ಕೆ 11ರನ್‌ ಕಲೆಹಾಕಿದರೆ, ಹೆಟ್ಮೆಯರ್‌ ಶೂನ್ಯಕ್ಕೆ ಓಟಾದರು.

    ಅಷ್ಟರಲ್ಲಾಗಲೇ 4 ಓವರ್‌ನಲ್ಲೇ ರಾಜಸ್ಥಾನ ತಂಡವು 5 ವಿಕೆಟ್‌ ಕಳೆದುಕೊಂಡಿತ್ತು. ಬಳಿಕ ಕ್ರೀಸ್‌ಗೆ ಬಂದ ಜೋಫ್ರಾ ಆರ್ಚರ್‌ 27 ಎಸೆತಗಳಲ್ಲಿ 30 ರನ್‌ ಬಾರಿಸಿ, ಮುಂಬೈ ಬೌಲರ್ಸ್‌ಗಳ ದಾಳಿಗೆ ಓಟಾದರು. ಬಳಿಕ ಬಂದ ಮಹೀಶ್‌ ತೀಕ್ಷಣ ಹಾಗೂ ಕುಮಾರ್‌ ಕಾರ್ತಿಕೇಯ ಒಂದಕ್ಕಿಗೆ ಮುಂಬೈ ಬೌಲರ್ಸ್‌ಗೆ ಶರಣಾದರು. ಮುಂಬೈ ಬೌಲರ್ಸ್‌ಗಳ ದಾಳಿಗೆ ಧೂಳಿಪಟವಾದ ರಾಜಸ್ಥಾನ ಬ್ಯಾಟರ್ಸ್‌ ರನ್‌ ಕದಿಯಲು ಪರದಾಡಿದರು

    ಮುಂಬೈ ಪರ ಬೋಲ್ಟ್‌ ಹಾಗೂ ಕರಣ್‌ ಶರ್ಮಾ ತಲಾ 3 ವಿಕೆಟ್‌ಕಿತ್ತರು. ಬುಮ್ರಾ 2 ವಿಕೆಟ್‌, ದೀಪಕ್‌ ಚಹಾರ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ 1 ವಿಕೆಟ್‌ ಪಡೆದರು.

    ಟಾಸ್‌ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ರೋಹಿತ್ ಶರ್ಮಾ, ರಯಾನ್‌ ರಿಕಲ್ಟನ್‌ ಭರ್ಜರಿ ಜೊತೆಯಾಟವಾಡಿದ್ದು, ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಆರ್‌ಆರ್‌ ತಂಡದ ಬೌಲರ್‌ಗಳು ವಿಫಲರಾದರು.

    ಪವರ್ ಪ್ಲೇನಲ್ಲಿ ಇವರಿಬ್ಬರ ಜೊತೆಯಾಟವು ಸ್ಟೇಡಿಯಂನಲ್ಲಿ ಫ್ಯಾನ್ಸ್‌ ಹುಚ್ಚೆದ್ದು ಕುಣಿಯುವಂತೆ ಮಾಡಿತು. ಮುಂಬೈ ಇಂಡಿಯನ್ಸ್‌ ಮೊದಲ 6 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 58 ರನ್‌ ಸಿಡಿಸಿತು. ಈ ಜೋಡಿಯನ್ನು ಕಟ್ಟಿಹಾಕಲು ರಾಜಸ್ಥಾನ್‌ ಬೌಲರ್ಸ್‌ ಪರದಾಡಿದರು.

    ರಯಾನ್‌ ರಿಕಲ್ಟನ್‌ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ಮುಂದುವರಿಸಿದ್ದು, 9ನೇ ಓವರ್‌ನಲ್ಲಿ ಕುಮಾರ್‌ ಕಾರ್ತಿಕೇಯ ಎಸೆದ ಐದನೇ ಎಸೆತಕ್ಕೆ ಸಿಕ್ಸರ್ ಬಾರಿಸುವ ಮೂಲಕ, 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. 71 ಎಸೆತಗಳಲ್ಲಿ 116 ರನ್‌ ಕಲೆ ಹಾಕಿದ ರೋಹಿತ್‌ ಹಾಗೂ ರಯಾನ್‌ ಜೊಡಿಯ ಓಟಕ್ಕೆ 11 ನೇ ಓವರ್‌ನಲ್ಲಿ ಮಹೀಶ್‌ ತೀಕ್ಷಣ್ ಬ್ರೇಕ್‌ ಹಾಕಿದರು. ರಯಾನ್‌ ರಿಕಲ್ಟನ್‌ 38 ಎಸೆತಗಳಲ್ಲಿ 61 ರನ್‌ (7 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಓಟಾದರು.

    ಉತ್ತಮ ಫಾರ್ಮ್‌ನಲ್ಲಿದ್ದ ರೋಹಿತ್ ಶರ್ಮಾ ಮತ್ತೊಮ್ಮೆ ಅರ್ಧಶತಕ ಬಾರಿಸಿ ಮಿಂಚಿದರು. ಇವರು 36 ಎಸೆತಗಳಲ್ಲಿ 53 ರನ್‌ (9 ಬೌಂಡರಿ) ಬಾರಿಸಿ 12ನೇ ಓವರ್‌ನ 4ನೇ ಎಸೆತದಲ್ಲಿ ರಿಯಾನ್‌ ಪರಾಗ್‌ಗೆ ವಿಕಟ್‌ ಒಪ್ಪಿಸಿದರು. ಅದಾಗಲೇ ಮುಂಬೈ ತಂಡ 2 ವಿಕೆಟ್‌ ನಷ್ಟಕ್ಕೆ 123 ರನ್‌ ಕಲೆ ಹಾಕಿತ್ತು.

    ರೋಹಿತ್ ಶರ್ಮಾ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ ಆಧಾರವಾಯಿತು. ಈ ಜೋಡಿ ತಮ್ಮ ಪವರ್‌ ಫುಲ್‌ ಹೊಡೆತಗಳಿಂದ ಎದುರಾಳಿ ಬೌಲರ್‌ಗಳನ್ನು ಬೆಂಡೆತ್ತಿತು. ಈ ಜೋಡಿ ಕಟ್ಟಿ ಹಾಕುವುದು ರಾಜಸ್ಥಾನ ತಂಡಕ್ಕೆ ದೊಡ್ಡ ಸವಾಲಾಗಿತ್ತು.

    ಫಜಲ್‌ ಫರೂಕಿ ಅವರ 18ನೇ ಓವರ್ ಒಂದರಲ್ಲೇ 21 ರನ್‌ಗಳು ಹರಿದು ಬಂದಿದೆ. ಸೂರ್ಯಕುಮಾರ್ ಯಾದವ್ 23 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 48 ರನ್‌ ಸಿಡಿಸಿದರು. ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ ಸೇರಿದಂತೆ ಅಜೇಯ 48 ರನ್‌ ಕಲೆ ಹಾಕಿದರು. ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 217 ರನ್‌ ಕಲೆಹಾಕಿತ್ತು. ರಾಜಸ್ಥಾನ್‌ ಬೌಲರ್ಸ್‌ಗಳಾದ ಮಹೀಶ್ ತೀಕ್ಷಣ್‌, ರಿಯಾನ್‌ ಪರಾಗ್‌ ತಲಾ ಒಂದು ವಿಕೆಟ್‌ ಕಬಳಿಸಿದರು.

    ಪಿಂಕ್‌ ಜೆರ್ಸಿ ಧರಿಸಿದ್ದ ರಾಜಸ್ಥಾನ್ ರಾಯಲ್ಸ್
    ವಿಶೇಷವಾಗಿ ಗ್ರಾಮೀಣ ಮಹಿಳೆಯರ ಉನ್ನತಿಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಈ ಕ್ರಮ ಕೈಗೊಂಡಿದೆ. ಮಹಿಳಾ ಸಬಲೀಕರಣದ ಕಡೆಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಲು ಫ್ರಾಂಚೈಸಿ ಈ ಕ್ರಮ ತೆಗೆದುಕೊಂಡಿದೆ. ಮುಂಬೈ ವಿರುದ್ಧದ ಪಂದ್ಯಕ್ಕೆ ರಾಜಸ್ಥಾನ ತಂಡದ ಆಟಗಾರರು ಗುಲಾಬಿ ಬಣ್ಣದ ಜೆರ್ಸಿಗಳನ್ನು ಧರಿಸಿ ಮೈದಾನಕ್ಕೆ ಪ್ರವೇಶಿಸಿದರು.

  • ಆರ್‌ಸಿಬಿ ಗೆಲುವು: ಡ್ರೆಸ್ಸಿಂಗ್ ರೂಮ್‍ನಲ್ಲಿ ಸಂಭ್ರಮಾಚರಣೆ

    ಆರ್‌ಸಿಬಿ ಗೆಲುವು: ಡ್ರೆಸ್ಸಿಂಗ್ ರೂಮ್‍ನಲ್ಲಿ ಸಂಭ್ರಮಾಚರಣೆ

    ಮುಂಬೈ: ಮಂಗಳವಾರ ನಡೆದ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಗೆಲುವು ಸಾಧಿಸಿತ್ತು. ಈ ಹಿನ್ನೆಲೆಯಲ್ಲಿ ಡ್ರೇಸಿಂಗ್ ರೂಮ್‍ನಲ್ಲಿ ಜಯವನ್ನು ಸಂಭ್ರಮಿಸಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಧಿಕೃತ ಖಾತೆ ವೀಡಿಯೋವನ್ನು ಶೇರ್ ಮಾಡಿಕೊಂಡಿದೆ.

    ಟ್ವೀಟ್‍ನಲ್ಲಿ ಏನಿದೆ?:
    RR VS RCB: ಡ್ರೆಸ್ಸಿಂಗ್ ರೂಮ್ ಆಚರಣೆಗಳು. ವಿಶೇಷ ವಿಜಯದ ಹಾಡನ್ನು ಹಾಡಿದ್ದಾರೆ. ದಿನೇಶ್‌ ಕಾರ್ತಿಕ್‌ ಮತ್ತು ಶಹಬಾಜ್‍ಗೆ ಮೆಚ್ಚುಗೆ ಹಾಗೂ ತಂಡದ ನಾಯಕ ಸಂತೋಷ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ಗೆಲುವಿನಿಂದ ತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿದೆ. ಆಟದ ದಿನದಂದು ಆರ್‌ಆರ್ ವಿರುದ್ಧ ಆರ್‌ಸಿಬಿ ಗೆಲುವಿನ ನಂತರ ಡ್ರೆಸ್ಸಿಂಗ್ ರೂಮ್‍ನಿಂದ ಎಲ್ಲಾ ಪ್ರತಿಕ್ರಿಯೆಗಳನ್ನು ನಾವು ನಿಮಗೆ ತರುತ್ತೇವೆ ಎಂದು ತಿಳಿಸಿದೆ.

    ಮಂಗಳವಾರ ನಡೆದ ರಾಜಸ್ಥಾನ್ ರಾಯಲ್ಸ್ ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 169 ರನ್ ನೀಡಿತ್ತು. ಬೃಹತ್ ಮೊತ್ತವನ್ನು ಬೆನ್ನೆತ್ತಿದ ಆರ್‌ಸಿಬಿ ರೋಚಕ ಗೆಲುವು ಸಾಧಿಸಿತ್ತು. ಶಹಬಾಜ್‌ ಅಹ್ಮದ್‌ 45 ಹಾಗೂ ದಿನೇಶ್‌ ಕಾರ್ತಿಕ್‌ 44 ರನ್‌ ಗಳಿಸಿ ತಂಡವನ್ನು ಗೆಲ್ಲಿಸಿದರು.  ರಾಜಸ್ಥಾನ ರಾಯಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸುವ ಮೂಲಕ ಆರ್‌ಸಿಬಿ ಆಡಿದ 3 ಪಂದ್ಯಗಳಲ್ಲಿ 2 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

  • ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್‍ಗೆ ಏರಲು ಯಾವ ತಂಡ ಏನು ಮಾಡಬೇಕು?

    ರೋಚಕ ಘಟ್ಟ ತಲುಪಿದ ಐಪಿಎಲ್ – ಪ್ಲೇ ಆಫ್‍ಗೆ ಏರಲು ಯಾವ ತಂಡ ಏನು ಮಾಡಬೇಕು?

    ದುಬೈ: 14ನೇ ಅವೃತ್ತಿಯ ಐಪಿಎಲ್ ಪಂದ್ಯಗಳು ದಿನೇ ದಿನೇ ರೋಚಕತೆ ಪಡೆದುಕೊಳ್ಳತ್ತಿವೆ. ಟೂರ್ನಿಯ ಕೊನೆಯ ಹಂತದ ಕೆಲವೇ ಕೆಲವು ಲೀಗ್ ಪಂದ್ಯಗಳು ಬಾಕಿ ಉಳಿದಿದ್ದು, ಇನ್ನೂ ಪ್ಲೇ ಆಫ್‍ಗೆ ಯಾವ ತಂಡಗಳು ಎಂಟ್ರಿ ಕೊಡಲಿವೆ ಎಂಬುದು ಖಚಿತವಾಗಿಲ್ಲ.

    ದುಬೈನಲ್ಲಿ ನಡೆಯುತ್ತಿರುವ ದ್ವಿತೀಯಾರ್ಧದ ಐಪಿಎಲ್ ಪಂದ್ಯಗಳು ಅಭಿಮಾನಿಗಳಿಗೆ ರಸದೌತಣ ನೀಡುತ್ತಿವೆ. ಇದುವರೆಗೂ ಒಟ್ಟು ಲೀಗ್‍ನಲ್ಲಿ 43 ಪಂದ್ಯಗಳು ನಡೆದಿದೆ. ಇನ್ನೂ 13 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಆದರೂ ಯಾವ ಯಾವ ತಂಡಗಳು ಪ್ಲೇ ಆಫ್‍ಗೆ ಲಗ್ಗೆಯಿಡಲಿವೆ ಎಂಬುದು ಕೂತಹಲಕಾರಿಯಾಗಿದೆ. 10 ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್, 8 ಗೆಲುವು ಹಾಗೂ 2 ಸೋಲುಗಳಿಂದ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡಿದೆ. 11 ಪಂದ್ಯಗಳನ್ನಾಡಿರುವ ಡೆಲ್ಲಿ, 8 ಗೆಲುವು ಹಾಗೂ 3 ಸೋಲುಗಳಿಂದ 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಪತ್ನಿಯಾಗುವವಳು ನನ್ನಂತೆಯೇ ಕ್ರೀಡಾಪಟುವಾಗಿರಬೇಕು: ನೀರಜ್ ಚೋಪ್ರಾ

    ಬೆಂಗಳೂರು ರಾಯಲ್ ಚಾಲೆಂಜರ್ಸ್ ಕೂಡ ಚೆನ್ನೈ ಹಾಗೂ ಡೆಲ್ಲಿ ನಂತರದ ಸ್ಥಾನದಲ್ಲಿದೆ. 11 ಪಂದ್ಯಗಳನ್ನಾಡಿರುವ ಆರ್‍ಸಿಬಿ 7 ಗೆಲುವು ಹಾಗೂ 4 ಸೋಲುಗಳಿಂದ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. 11 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಕಂಡಿರುವ ಕೆಕೆಆರ್ 10 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ 5 ಗೆಲುವು, 6 ಸೋಲುಗಳಿಂದ 5ನೇ ಸ್ಥಾನದಲ್ಲಿದೆ. ಇದನ್ನೂ ಓದಿ: ಮ್ಯಾಕ್ಸ್‌ವೆಲ್ ಅಬ್ಬರ -ರಾಜಸ್ಥಾನ ವಿರುದ್ಧ ಬೆಂಗಳೂರಿಗೆ 7 ವಿಕೆಟ್ ಜಯ

    ಎಲ್ಲಾ ತಂಡಗಳಿಗೂ 10 ಪಂದ್ಯಗಳೂ ಮುಗಿದರೂ ಇನ್ನೂ ಪ್ಲೇ ಆಫ್ ಲಗ್ಗೆಯಿಡಲು ಮಾತ್ರ ಸಾಧ್ಯವಾಗಿಲ್ಲ. ಉಳಿದ 13 ಲೀಗ್ ಪಂದ್ಯಗಳ ನಂತರವಷ್ಟೇ ಮುಂದಿನ ಹಂತಕ್ಕೆ ಹೋಗುವ ತಂಡಗಳು ಯಾವುವು ಎಂಬುದು ಖಚಿತವಾಗುತ್ತದೆ.

    ಚೆನ್ನೈ, ಡೆಲ್ಲಿ ಪ್ಲೇ ಆಫ್ ಖಚಿತ

    ಈಗಾಗಲೇ 16 ಅಂಕಗಳೊಂದಿಗೆ ಕ್ರಮವಾಗಿ ಒಂದು ಹಾಗೂ 2ನೇ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇ ಆಫ್‍ನತ್ತ ಮುನ್ನಡೆದಿವೆ. ಉಳಿದಿರುವ 4 ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದ, ಡೆಲ್ಲಿ 3ರಲ್ಲಿ ಒಂದು ಪಂದ್ಯ ಗೆದ್ದರೂ ಪ್ಲೇ ಆಫ್ ಪ್ರವೇಶಿಸಲಿದೆ. ಎರಡು ತಂಡಗಳ ನೆಟ್ ರನ್‍ರೇಟ್ ಕೂಡ ಉತ್ತಮವಾಗಿದೆ.

    ಒಂದು ಪಂದ್ಯ ಗೆದ್ದೂ ಆರ್​ಸಿಬಿ ಪ್ಲೇ ಆಫ್‍ಗೆ

    ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 14 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಉಳಿದಿರುವ 3 ಪಂದ್ಯಗಳಲಿ ನೆಟ್ ರನ್‍ರೇಟ್ ಜೊತೆಗೆ ಒಂದು ಪಂದ್ಯ ಗೆದ್ದರೂ ಆರ್​ಸಿಬಿ ಪ್ಲೇ ಆಫ್ ಪ್ರವೇಶಿಸುವ ಸಾಧ್ಯತೆ ದಟ್ಟವಾಗಿದೆ. ನಿನ್ನೆ ರಾಜಸ್ತಾನ ವಿರುದ್ಧ ನಡೆದ ಪಂದ್ಯದಲ್ಲಿ ಅಮೋಘ ಜಯಗಳಿಸಿರುವ ಬೆಂಗಳೂರು, ಚೆನ್ನೈ ಹಾಗೂ ಡೆಲ್ಲಿ ಜೊತೆ ಪ್ಲೇ ಆಫ್‍ಗೆ ಎಂಟ್ರಿ ಕೊಡಲಿದೆ.

    ಸನ್ ರೈಸರ್ಸ್, ರಾಜಸ್ತಾನ್, ಪಂಜಾಬ್ ದೂರ

    ಟೂರ್ನಿಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ಹೈದರಾಬಾದ್ ಈಗಾಗಲೇ ಪ್ಲೇ ಆಫ್ ಕನಸನ್ನು ಕೈ ಚೆಲ್ಲಿದೆ. ರಾಜಸ್ಥಾನ, ಪಂಜಾಬ್ 11 ಪಂದ್ಯಗಳಿಂದ 8 ಅಂಕ ಪಡೆದಿದ್ದರೂ ಪ್ಲೇ ಆಫ್ ಪ್ರವೇಶ ಕಷ್ಟ. ಎರಡು ತಂಡಗಳು, ಉಳಿದಿರುವ ಮೂರು ಪಂದ್ಯಗಳನ್ನು ಗೆದ್ದರೂ ನೆಟ್ ರನ್‍ರೇಟ್ ಕೊರತೆಯುಂಟಾಗಿ ಟೂರ್ನಿಯಿಂದ ಹೊರಬರುವ ಸಾಧ್ಯತೆ ಹೆಚ್ಚಿದೆ.

    ಕೆಕೆಆರ್, ಮುಂಬೈ, ಪಂಜಾಬ್ ನಡುವೆ ಪ್ಲೇ ಆಫ್‍ಗಾಗಿ ಹಣಾಹಣಿ

    ಪ್ಲೇ ಆಫ್‍ಗಾಗಿ ಮೂರು ತಂಡಗಳಿಗೂ ಉಳಿದಿರುವ 3 ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ. 5 ಜಯದೊಂದಿಗೆ 10 ಅಂಕಗಳಿಸಿರುವ ಮುಂಬೈ ಕೆಕೆಆರ್ ನಾಲ್ಕನೇ ಸ್ಥಾನಕ್ಕಾಗಿ ತೀವ್ರ ಕಸರತ್ತು ನಡೆಸಿವೆ. ಮುಂದಿನ ಪಂದ್ಯಗಳನ್ನು ಗೆದ್ದು ನೆಟ್ ರನ್‍ರೇಟ್‍ನಲ್ಲಿ ಚೇತರಿಕೆ ಕಂಡು ಸೆಮಿಸ್ ಹಂತಕ್ಕೆ ತಲುಪಲು ಕೆಕೆಆರ್ ಹಾಗೂ ಮುಂಬೈ ಹರಸಾಹಸ ಪಡಬೇಕಿದೆ.