Tag: Rajastan

  • ಕನ್ಹಯ್ಯ ಕೊಲೆ ಹಸಿರಾಗಿರುವಾಗಲೇ ನೂಪುರ್‌ ಶರ್ಮಾ ಬೆಂಬಲಿಸಿದ್ದಕ್ಕೆ ಮತ್ತೊಂದು ಕೊಲೆ

    ಕನ್ಹಯ್ಯ ಕೊಲೆ ಹಸಿರಾಗಿರುವಾಗಲೇ ನೂಪುರ್‌ ಶರ್ಮಾ ಬೆಂಬಲಿಸಿದ್ದಕ್ಕೆ ಮತ್ತೊಂದು ಕೊಲೆ

    ಮುಂಬೈ: ಉದಯಪುರದಲ್ಲಿ ನಡೆದ ಟೈಲರ್ ಕನ್ಹಯ್ಯಾಲಾಲ್ ಹತ್ಯೆ ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ ನೂಪುರ್‌ ಶರ್ಮಾ ಬೆಂಬಲಿಸಿದ್ದಕ್ಕೆ ಮತ್ತೊಬ್ಬ ವ್ಯಕ್ತಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಅಮರಾವತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.

    ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಕೊಲ್ಹೆ (54) ಕೊಲೆಯಾದ ವ್ಯಕ್ತಿ. ಈ ಘಟನೆ ಜೂನ್ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈತನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಪ್ರಕರಣದಲ್ಲಿ ಇದುವರೆಗೆ ಐದು ಮಂದಿಯನ್ನು ಬಂಧಿಸಲಾಗಿದೆ.

    ಉಮೇಶ್ ಕೊಲ್ಹೆ ಸೋಷಿಯಲ್ ಮೀಡಿಯಾದಲ್ಲಿ ನೂಪುರ ಶರ್ಮಾ ಬೆಂಬಲಿಸಿ ಪೋಸ್ಟ್ ಮಾಡಿದ್ದ. ಇದರಿಂದಾಗಿ ಆತನ ಮೇಲೆ ಕೋಪಗೊಂಡ ದುಷ್ಕರ್ಮಿಗಳು ಉಮೇಶ್‍ನನ್ನು ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ: 48 ವರ್ಷಗಳ ಹಿಂದೆ ಹೀಗಿತ್ತು ನನ್ನ ರೆಸ್ಯೂಮ್ – ಉದ್ಯೋಗಾಕಾಂಕ್ಷಿಗಳಿಗೆ ಆತ್ಮವಿಶ್ವಾಸ ತುಂಬಿದ ಬಿಲ್‌ಗೇಟ್ಸ್

    ಉಮೇಶ್ ಕೋಲ್ಹೆ ಅವರ ಪುತ್ರ ಸಂಕೇತ್ ನೀಡಿದ ದೂರು ಮೇರೆಗೆ ಅಮರಾವತಿಯ ಸಿಟಿ ಕೊತ್ವಾಲಿ ಠಾಣೆಯ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಮುದ್ದ್ಸಿರ್ ಅಹ್ಮದ್ (22), ಶಾರುಖ್ ಪಠಾಣ್ (25), ಅಬ್ದುಲ್ ತೌಫಿಕ್ (24), ಶೋಯೆಬ್ ಖಾನ್ (22), ಅತಿಬ್ ರಶೀದ್ (22) ಬಂಧಿತ ಆರೋಪಿಗಳಾಗಿದ್ದರೇ, ಹಮೀಮ್ ಅಹ್ಮದ್ ಫಿರೋಜ್ ಅಹ್ಮದ್ ತಲೆಮರೆಸಿಕೊಂಡಿದ್ದಾನೆ.

    ಉಮೇಶ್ ಕೋಲ್ಹೆ ಅವರು ಜೂನ್ 21 ರಂದು ರಾತ್ರಿ 10:30ರ ಸುಮಾರಿಗೆ ಮೆಡಿಕಲ್ ಸ್ಟೋರ್ ಅನ್ನು ಮುಚ್ಚಿ ಮನೆಗೆ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ ಆತನ ಪತ್ನಿ ಮತ್ತು ಮಗನು ಇದ್ದರು. ಇದನ್ನೂ ಓದಿ: ಕನ್ಹಯ್ಯ ಹತ್ಯೆ ಮಾಡಿದವರಿಗೆ ಗಲ್ಲು ಶಿಕ್ಷೆ ನೀಡಿ: ಉಮ್ಮತ್ ಚಿಂತಕರ ವೇದಿಕೆ ಮನವಿ

    ಮಹಿಳಾ ಕಾಲೇಜು ಪ್ರೌಢಶಾಲೆಯ ಗೇಟ್ ಬಳಿ ಬೈಕ್‍ನಲ್ಲಿ ಮೂವರು ದುಷ್ಕರ್ಮಿಗಳು ಉಮೇಶ್‍ನನ್ನು ಅಡ್ಡಗಟ್ಟಿದರು. ಅವರಲ್ಲಿ ಒಬ್ಬಾತ ಉಮೇಶ್ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಆಗ ಅಲ್ಲೇ ಇದ್ದ ಉಮೇಶ್‍ನ ಪತ್ನಿ ಮತ್ತು ಮಗ ಸಹಾಯಕ್ಕಾಗಿ ಕೂಗಲು ಪ್ರಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣ ಉಮೇಶ್‍ನ್ನು ಹೆಚ್ಚಿನ ಆಸ್ಪತ್ರೆಗೆ ಸಾಗಿಸಲಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

    POLICE JEEP

    ಘಟನೆಗೆ ಸಂಬಂಧಿಸಿದಂತೆ ಐವರು ಬಂಧಿತ ಆರೋಪಿಗಳು, ತಮಗೆ ಕಾರು ಮತ್ತು ಓಡಿಹೋಗಲು 10,000 ರೂ.ಗಳನ್ನು ಒದಗಿಸಿದ ಮತ್ತೊಬ್ಬ ಆರೋಪಿಯ ಸಹಾಯವನ್ನು ಕೋರಿರುವುದಾಗಿ ಬಹಿರಂಗಪಡಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    Live Tv

  • ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲೂ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ: ಟಿಕಾಯತ್

    ಟೈಲರ್ ಶಿರಚ್ಛೇದನ ಸಣ್ಣ ವಿಷಯ, ಇದರಲ್ಲೂ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ: ಟಿಕಾಯತ್

    ನವದೆಹಲಿ: ಉದಯ್‍ಪುರದಲ್ಲಿ ನಡೆದ ಟೈಲರ್ ಶಿರಚ್ಛೇದನ ಸಣ್ಣ ವಿಷಯವಾಗಿದೆ. ಇದರಲ್ಲಿ ಬಿಜೆಪಿ ಪಾಕಿಸ್ತಾನದ ಕೈವಾಡ ಹುಡುಕಲು ಹೊರಟಿದೆ ಎನ್ನುವ ಮೂಲಕ ಹತ್ಯೆಯನ್ನು ರೈತ ನಾಯಕ ರಾಕೇಶ್ ಟಿಕಾಯತ್ ಸಮರ್ಥಿಸಿಕೊಂಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆಗಳು ವಿರೋಧ ಪಕ್ಷದ ಆಡಳಿತವಿರುವ ರಾಜ್ಯಗಳಲ್ಲಿ ಮಾತ್ರ ಏಕೆ ನಡೆಯುತ್ತವೆ. ಹೀಗೆ ಏನಾದರೂ ಸಣ್ಣ ಘಟನೆ ಸಂಭವಿಸಿದರೂ ಬಿಜೆಪಿ ಪಾಕಿಸ್ತಾನದ ಕೈವಾಡವನ್ನು ಹುಡುಕಲು ಹೋಗುತ್ತದೆ ಎಂದು ಕಿಡಿಕಾರಿದರು.

    ರಾಜಸ್ಥಾನ ಅಥವಾ ಪಂಜಾಬ್ ರಾಜ್ಯಗಳಲ್ಲಿ ಈ ರೀತಿ ಘಟನೆಗಳು ಹೆಚ್ಚುತ್ತಿವೆ. ಇದು ಬಿಜೆಪಿಯ ಸಮಯವಾಗಿದೆ. ಕೇಂದ್ರದಲ್ಲಿ ಇರುವವರು ಇದೆಲ್ಲವನ್ನು ಮಾಡಿಸುತ್ತಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ ಅವರು, ಏನಾದರೂ ಚಿಕ್ಕ ಘಟನೆ ನಡೆದರೂ ಬಿಜೆಪಿ ಪಾಕಿಸ್ತಾನ ಭಾಗಿಯಾಗಿದೆ ಎಂದು ಹೇಳುತ್ತಾರೆ ಎಂದು ಗುಡುಗಿದರು. ಇದನ್ನೂ ಓದಿ: ಟೈಲರ್ ಹತ್ಯೆಗೆ ಮುಸ್ಲಿಂ ಯುವಕರು ಬಳಸಿದ ಆಯುಧ ತಯಾರಾಗಿದ್ದೆಲ್ಲಿ? – ರಿಹರ್ಸಲ್ ಹೇಗಿತ್ತು ಗೊತ್ತಾ?

    ಭಾರತದಲ್ಲಿ ಸಂವಿಧಾನ, ಕಾನೂನು ಮತ್ತು ಸೆಕ್ಷನ್‍ಗಳಿವೆ. ಆದರೆ ಅವೆಲ್ಲವೂ ಏನು ಮಾಡುತ್ತಿವೆ. ಇದರ ಬದಲು ಪಾಕಿಸ್ತಾನವನ್ನು ಗುರಿಯಾಗಿಸುತ್ತಿದ್ದಾರೆ. ಇದರಲ್ಲಿ ಪಾಕಿಸ್ತಾನದವರು ಏನು ಮಾಡಿದ್ದಾರೆ. ಈ ಕೊಲೆ ಮಾಡಿದವರನ್ನು ಕಾನೂನಿನ ನಿಯಮಾನುಸಾರ ಬಂಧಿಸಿ ಎಂದರು.

    ಈಗಾಗಲೇ ಉದಯಪುರದ ಟೈಲರ್ ಹತ್ಯೆಗೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ ತನಿಖೆ ಆರಂಭಿಸಿದ್ದು, ಪಾಕಿಸ್ತಾನದ ನಂಟಿರುವುದು ಕಂಡುಬಂದಿದೆ. ಇಬ್ಬರು ಆರೋಪಿಗಳಲ್ಲಿ ಒಬ್ಬರಾದ ಗೌಸ್ ಮೊಹಮ್ಮದ್ 2014ರಲ್ಲಿ 45 ದಿನಗಳ ತರಬೇತಿಗಾಗಿ ಕರಾಚಿಗೆ ಹೋಗಿದ್ದ ಎಂದು ತನಿಖಾ ಸಂಸ್ಥೆಗಳು ಹೇಳಿವೆ. ಇದನ್ನೂ ಓದಿ: ಬೆದರಿಕೆ ಕರೆ ಬಗ್ಗೆ ಪೊಲೀಸರಿಗೆ ತಿಳಿಸಿದ್ದರೂ ಕ್ರಮ ಕೈಗೊಂಡಿರಲಿಲ್ಲ: ಉದಯಪುರ ಟೈಲರ್ ಪುತ್ರರು

    Live Tv

  • ರಾಜಸ್ಥಾನದ ಹಿಂದೂ ವ್ಯಕ್ತಿ ಕೊಲೆ ಅತ್ಯಂತ ಹೇಯವಾದದ್ದು: ಮುತಾಲಿಕ್

    ರಾಜಸ್ಥಾನದ ಹಿಂದೂ ವ್ಯಕ್ತಿ ಕೊಲೆ ಅತ್ಯಂತ ಹೇಯವಾದದ್ದು: ಮುತಾಲಿಕ್

    ಧಾರವಾಡ: ರಾಜಸ್ಥಾನದ ಹಿಂದೂ ವ್ಯಕ್ತಿ ಕೊಲೆ ಅತ್ಯಂತ ಹೇಯವಾದ ನೀಚ, ರಾಕ್ಷಸ ಕೃತ್ಯವಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

    ಧಾರವಾಡದಲ್ಲಿ ಮಾತನಾಡಿದ ಅವರು, ಕಿಡಿಗೇಡಿ ಮುಸ್ಲಿಮರ ಅತಿಯಾದ ಪ್ರವೃತ್ತಿ ನಿರ್ಮಾಣ ಆಗುತ್ತಿದೆ. ಐಸಿಸಿಯಲ್ಲಿ ತಾಲಿಬಾನಿ ಈ ರೀತಿ ಗುಂಡು ಹೊಡೆಯುವುದು ಮಾಡುತ್ತಿದ್ದರು. ಅದೇ ಮಾದರಿಯಲ್ಲಿ ನಮ್ಮ ದೇಶದಲ್ಲಿ ಪ್ರಾರಂಭವಾಗಿದ್ದು, ಈ ಘಟನೆ ಅತ್ಯಂತ ಗಂಭೀರ ವಿಚಾರವಾಗಿದೆ ಎಂದರು.

    ಇದನ್ನು ಹಿಂದೂ ಸಮಾಜ, ಸರ್ಕಾರ, ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಳ್ಳಬೇಕು. ಅಲ್ಲದೇ ಇದನ್ನು ಹದ್ದುಬಸ್ತಿನಲ್ಲಿ ಇಟ್ಟು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳದೇ ಇದ್ದರೆ, ಇದೇ ಮಾನಸಿಕತೆ ಮುಂದುವರೆಯಲಿದೆ ಎಂದ ಅವರು, ಮೋದಿ ಅವರ ಮೇಲೂ ಇದೇ ಮಾದರಿಯಲ್ಲಿ ಕೊಲೆ ಮಾಡ್ತೆವೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕೂಡಲೇ ಮಧ್ಯ ಪ್ರವೇಶ ಮಾಡಲಿ ಎಂದು ಹೇಳಿದರು. ಇದನ್ನೂ ಓದಿ: ಟೈಲರ್ ಕೊಲೆಗಡುಕರನ್ನು ಗುಂಡಿಟ್ಟು ಹತ್ಯೆ ಮಾಡ್ಬೇಕು: ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ

    ಕೊಲೆ ಮಾಡಿದವರ ಮೇಲೆ ಐಪಿಸಿ ಸೆಕ್ಷನ್ ಹಾಕದೇ ಭಯೋತ್ಪಾದಕ ಸೆಕ್ಷನ್ ಹಾಕಬೇಕು. ಕೊಲೆಗಡುಕರು ಹೊರಗೆ ಬರಬಾರದು, ಅಷ್ಟೇ ಅಲ್ಲ, ಒಂದೇ ತಿಂಗಳಲ್ಲಿ ವಾದ ವಿವಾದ ಮಾಡಿ ಗಲ್ಲು ಶಿಕ್ಷೆ ಕೊಡಬೇಕು ಎಂದರು. ಇದನ್ನೂ ಓದಿ: ಉದಯಪುರ ಹತ್ಯೆ: ಆರೋಪಿಗಳಿಗೆ ಪಾಕ್ ಮೂಲದ ಉಗ್ರ ಸಂಘಟನೆ ಜೊತೆ ನಂಟು

    ನಾವೇ ಕೊಂದಿದ್ದೆವೆ, ಇನ್ನು ಕೊಲ್ತೆವೆ ಎಂದು ಕೊಲೆ ಮಾಡಿದವರು ಹೇಳಿದ್ದಾರೆ. ಈ ಹೇಳಿಕೆಯೊಂದೇ ಘಟನೆಗೆ ಮುಖ್ಯ ಸಾಕ್ಷಿಯಾಗಿದ್ದು, ಇನ್ನೂ ತನಿಖೆಯ ಅವಶ್ಯಕತೆಯಿಲ್ಲ. ಇದರ ಒಂದು ಆಧಾರ ಮೇಲೆ ಕೊಲೆಗಡುಕರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲವೇ ಬೀದಿ ಬೀದಿಯಲ್ಲಿ ಹುಚ್ಚು ನಾಯಿಗೆ ಹೊಡೆದಂತೆ ಎನ್‍ಕೌಂಟರ್ ಮಾಡಿ, ಅದಾಗಲೇ ಈ ರೀತಿ ಮಾನಸಿಕತೆ ಹೋಗಲಿದೆ ಎಂದು ಕಿಡಿಕಾರಿದರು.

    ಇವರಿಗೆ ಕಾನೂನು, ಸರ್ಕಾರ, ಹಿಂದೂ ಸಮಾಜದ ಭಯವಿಲ್ಲ. ಹೀಗಾಗಿ ಈ ರೀತಿ ರಾಕ್ಷಸ ಮಾನಸಿಕತೆ ಪ್ರವೃತ್ತಿ ನಡೆಯುತ್ತಿದೆ. ಆ ಟೇಲರ್‍ನನ್ನು ಮೋಸದಿಂದ ಕೊಲೆ ಮಾಡಿದ್ದಾರೆ ಎಂದು ವಿರೋಧಿಸಿದರು.

    ಕಾಂಗ್ರೆಸ್ ಹಾಗೂ ಜೆಡಿಎಸ್‍ನವರು ಬಾಯಿ ಬಿಡಬೇಕು. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರು ಕಲ್ಲಂಗಡಿ ಒಡೆದಂತ ಸಂದರ್ಭದಲ್ಲಿ ಮುಸ್ಲಿಂ ಪರವಾಗಿ ನಿಂತಿದ್ದರು. ಆದರೆ ಇವತ್ತು ರುಂಡ ಕತ್ತಿರಿಸಿದವರ ಬಗ್ಗೆ ಏನ್ ಹೇಳ್ತಿರಿ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್, ಜೆಡಿಎಸ್‍ನವರ ಜೊತೆಗೆ ಬುದ್ಧಿ ಈ ಘಟನೆಗೆ ಸಂಬಂಧಿಸಿ ಮಾತನಾಡಬೇಕು. ಅವರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಬೇಕು ಎಂದರು.

    Live Tv

  • ಟೈಲರ್ ಹತ್ಯೆ ಬೆನ್ನಲ್ಲೆ ನವೀನ್ ಕುಮಾರ್ ಜಿಂದಾಲ್‌ಗೆ ಕೊಲೆ ಬೆದರಿಕೆ

    ಟೈಲರ್ ಹತ್ಯೆ ಬೆನ್ನಲ್ಲೆ ನವೀನ್ ಕುಮಾರ್ ಜಿಂದಾಲ್‌ಗೆ ಕೊಲೆ ಬೆದರಿಕೆ

    ನವದೆಹಲಿ: ಉದಯಪುರದ ಟೈಲರ್ ಶಿರಚ್ಛೇದ ಮಾಡಿದ ಬೆನ್ನಲ್ಲೆ ಬಿಜೆಪಿ ಉಚ್ಛಾಟಿತ ನಾಯಕ ನವೀನ್ ಕುಮಾರ್ ಜಿಂದಾಲ್‌ಗೆ ಕೊಲೆ ಬೆದರಿಕೆ ಬರುತ್ತಿವೆ ಎಂದು ಆರೋಪಿಸಿ ದೆಹಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕೆಲವು ಬೆದರಿಕೆ ಇಮೇಲ್‌ಗಳ ಫೋಟೋವನ್ನು ಶೇರ್‌ ಮಾಡಿಕೊಂಡಿದ್ದಾರೆ. ಉದಯಪುರದ ಟೈಲರ್‌ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದನದ ವೀಡಿಯೋದೊಂದಿಗೆ ಮೂರು ಕೊಲೆ ಬೆದರಿಕೆದಯ ಇಮೇಲ್‍ಗಳನ್ನು ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಇಮೇಲ್‍ಗಳಲ್ಲಿ ತನಗೆ ಮತ್ತು ಕುಟುಂಬಕ್ಕೆ ಶಿರಚ್ಛೇದ ಮಾಡುವುದಾಗಿ ಬೆದರಿಕೆಗಳನ್ನು ಹಾಕಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣನೆಗೆ ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಟೈಲರ್‌ ಹತ್ಯೆ ಖಂಡಿಸಿ ಭುಗಿಲೆದ್ದ ಪ್ರತಿಭಟನೆ – ರಾಜಸ್ಥಾನದಲ್ಲಿ 1 ತಿಂಗಳು 144 ಸೆಕ್ಷನ್‌ ಜಾರಿ

    ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದರು ಎಂಬ ಕಾರಣಕ್ಕೆ ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯ ಲಾಲ್ ಎಂಬುವವರನ್ನು ಇಬ್ಬರು ದುಷ್ಕರ್ಮಿಗಳು ಮಂಗಳವಾರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಈ ಘಟನೆಯಿಂದ ರಾಜಸ್ಥಾನದ ಜತೆಗೆ ದೇಶದ ವಿವಿಧೆಡೆ ಪ್ರತಿಭಟನೆ ಆರಂಭವಾಗಿದೆ. ಇದನ್ನೂ ಓದಿ: ಹತ್ಯೆಯಾದ ಟೈಲರ್‌ಗೆ 10 ದಿನಗಳ ಹಿಂದೆಯೇ ಬಂದಿತ್ತು ಬೆದರಿಕೆ ಕರೆ!

    Live Tv 

  • ಟೈಲರ್ ಹತ್ಯೆ ಭೀಕರವಾಗಿದೆ, ದಯವಿಟ್ಟು ವೀಡಿಯೋ ವೀಕ್ಷಿಸಬೇಡಿ: ರಾಜಸ್ಥಾನ ಪೊಲೀಸರು ಮನವಿ

    ಟೈಲರ್ ಹತ್ಯೆ ಭೀಕರವಾಗಿದೆ, ದಯವಿಟ್ಟು ವೀಡಿಯೋ ವೀಕ್ಷಿಸಬೇಡಿ: ರಾಜಸ್ಥಾನ ಪೊಲೀಸರು ಮನವಿ

    ಜೈಪುರ: ಉದಯಪುರದಲ್ಲಿ ನಡೆದ ಟೈಲರ್ ಕೊಲೆ ವೀಕ್ಷಿಸಲು ತುಂಬಾ ಘೋರವಾಗಿದೆ. ದಯವಿಟ್ಟು ಈ ವೀಡಿಯೋವನ್ನು ವೀಕ್ಷಿಸಬೇಡಿ ಎಂದು ರಾಜಸ್ಥಾನದ ಉನ್ನತ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

    ಈ ಬಗ್ಗೆ ಮಾತನಾಡಿದ ಅಲ್ಲಿನ ಎಡಿಜಿ, ಟೈಲರ್ ಕೊಲೆಯ ವೀಡಿಯೋವನ್ನು ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ಮನವಿ ಮಾಡಿದರು. ಏಕೆಂದರೆ ಈ ವೀಡಿಯೋ ಅತಿ ಹೆಚ್ಚು ಭೀಕರವಾಗಿದ್ದು, ಸಮಾಜದಲ್ಲಿ ಶಾಂತಿ ಕದಡುವ ವಿಷಯವಾಗಿದೆ ಎಂದು ತಿಳಿಸಿದ್ದಾರೆ. ವೀಡಿಯೋ ಸಾಕ್ಷ್ಯವನ್ನು ಆಧರಿಸಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಮೃತ ಟೈಲರ್ ಕನ್ಹಯ್ಯಾ ಲಾಲ್ ಅವರು ಉದಯ್‍ಪುರದ ವಿಶೇಷವಾಗಿ ಜನನಿಬಿಡ ಮಾರುಕಟ್ಟೆಯಲ್ಲಿ ತಮ್ಮ ಅಂಗಡಿಯಲ್ಲಿದ್ದರು. ಕನ್ಹಯ್ಯ ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದ. ಇದರಿಂದ ಕೋಪಗೊಂಡ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್ ಒಬ್ಬರನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ವೀಡಿಯೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ನಿನ್ನೆ ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿತ್ತು. ಸಂಜೆ ವೇಳೆಗೆ ಇಬ್ಬರೂ ಆರೋಪಿಗಳನ್ನು ರಾಜಾಸ್ಥಾನದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಟೈಲರ್‌ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್‌

    POLICE JEEP

    ವೀಡಿಯೋದಲ್ಲಿ ಏನಿದೆ?: ನಾನು ರಿಯಾಜ್ ಅಹ್ಮದ್. ಇವನು ನನ್ನಣ್ಣ ಮೊಹಮ್ಮದ್. ಉದಯಪುರದಲ್ಲಿರುವ ಮಾಲ್ಡಾಸ್ ಸ್ಟ್ರೀಟ್‍ನಲ್ಲಿರುವ ಹಿಂದೂ ವ್ಯಕ್ತಿಯ ತಲೆಯನ್ನು ಕತ್ತರಿಸಿದ್ದೇವೆ. ನಾವು ಬದುಕುತ್ತಿದ್ದೇವೆ ಪ್ರವಾದಿ ಸಲುವಾಗಿ. ಪ್ರವಾದಿಗಾಗಿ ಜೀವ ಬಿಡಲು ಸಿದ್ಧ. ಏಯ್ ನರೇಂದ್ರ ಮೋದಿ ಬೆಂಕಿ ಹಬ್ಬಿಸಿದ್ದು ನೀನು. ಅದನ್ನು ಆರಿಸುತ್ತೇವೆ ನಾವು. ನಾನು ಜೀವಂತವಿದ್ದರೆ ಈ ನನ್ನ ಕತ್ತಿ ನಿನ್ನ ಕುತ್ತಿಗೆ ತಲುಪಿ, ನಿನ್ನನ್ನು ಸಂಹಾರ ಮಾಡುತ್ತೇನೆ. ಇದನ್ನೂ ಓದಿ: ಪ್ರವಾದಿಗಾಗಿ ಒಂದು ಕೊಲೆ ಮಾಡೋಕಾಗಲ್ವೆ? – ಉದಯಪುರ ಹತ್ಯೆಯ ಮಾಸ್ಟರ್‌ಮೈಂಡ್ ವೀಡಿಯೋ ವೈರಲ್

    Live Tv

  • ಅಜ್ಜ ಸೇರಿ ಮೂವರಿಂದ ಬಾಲಕಿಯ ಮೇಲೆ ತಿಂಗಳುಗಟ್ಟಲೆ ಅತ್ಯಾಚಾರ

    ಜೈಪುರ: ಅಜ್ಜ ಸೇರಿ ಮೂವರಿಂದ ಬಾಲಕಿಯ ಮೇಲೆ ತಿಂಗಳು ಗಟ್ಟಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    12 ವರ್ಷದ ಬಾಲಕಿಯ ಮೇಲೆ ಆಕೆಯ ತಾಯಿಯ ತಂದೆ(70), ಅಜ್ಜನ ಸ್ನೇಹಿತ ರಾಮಲಾಲ್ ಬೀಲ್ (50) ಅತ್ಯಾಚಾರವೆಸಗಿದ್ದಾರೆ. 12 ವರ್ಷದ ಹಿಂದೆಯೇ ಬಾಲಕಿಯ ತಂದೆ ಮೃತಪಟ್ಟಿದ್ದರು. ಇದರಿಂದಾಗಿ ಬಾಲಕಿಯು ತನ್ನ ಮಾನಸಿಕ ಅಸ್ವಸ್ಥ ತಾಯಿಯೊಂದಿಗೆ ಒಂದು ದಶಕಕ್ಕೂ ಹೆಚ್ಚು ಕಾಲ ತನ್ನ ಅಜ್ಜನ ಮನೆಯಲ್ಲಿ ವಾಸಿಸುತ್ತಿದ್ದಳು.

    ಮದ್ಯವ್ಯಸನಿಯಾಗಿದ್ದ ಅಜ್ಜ ತನ್ನ ಮನೆಯಲ್ಲೇ ಈ ಕೃತ್ಯವನ್ನು ಮಾಡಲು ಅವಕಾಶ ನೀಡುತ್ತಿದ್ದರು. ಕೆಲವು ಸಂದರ್ಭದಲ್ಲಿ ರಾಮಲಾಲ್ ಬಾಲಕಿಯ ಅಜ್ಜನಿಗೆ ಇದಕ್ಕಾಗಿ ಹಣವನ್ನು ನೀಡುತ್ತಿದ್ದ. ಇದನ್ನೂ ಓದಿ: ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

    ಪ್ರಕರಣದಲ್ಲಿ ಇನ್ನೊಬ್ಬ ಆರೋಪಿ ಅಜಯ್ ಬೈರ್ವಾ(20) ಆರು ತಿಂಗಳಲ್ಲಿ ಬಾಲಕಿಯ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದನು.

    ಆದರೆ ಬಾಲಕಿಗೆ ಶಾಲೆಯಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದಳು. ಇದರಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆಕೆಗೆ ಒಂದು ತಿಂಗಳ ಗರ್ಭಿಣಿ ಆಗಿರುವ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ 70 ವರ್ಷದ ಅಜ್ಜ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಲಾಗಿದೆ. ಇದನ್ನೂ ಓದಿ: ಪೂಜೆ ಮುಗಿಸಿ ಬರುತ್ತಿದ್ದ ಕಾಳಿ ಸ್ವಾಮಿ ಮುಖಕ್ಕೆ ಮಸಿ

  • ಶೀಘ್ರವೇ ಈಶ್ವರಪ್ಪನವರ ರಾಜೀನಾಮೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತೆ: ಅರುಣ್ ಸಿಂಗ್

    ಶೀಘ್ರವೇ ಈಶ್ವರಪ್ಪನವರ ರಾಜೀನಾಮೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತೆ: ಅರುಣ್ ಸಿಂಗ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮೇಲೆ ಆರೋಪ ಕೇಳಿಬಂದಿದ್ದು, ಅವರ ರಾಜೀನಾಮೆ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದರು.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇನ್ನೂ ಪ್ರಕರಣದ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಹ ತನಿಖೆ ನಡೆಸುತ್ತಿದ್ದಾರೆ. 40% ಕಮಿಷನ್ ವಿಚಾರದ ಹಿಂದೆ ಹಲವಾರು ಆ್ಯಂಗಲ್ಸ್‌ಗಳಿವೆ. ಶೀಘ್ರದಲ್ಲಿಯೇ ಈಶ್ವರಪ್ಪನವರ ರಾಜೀನಾಮೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

    ಕರ್ನಾಟಕದಲ್ಲಿ ನಡೆದಿರುವುದು ಸಣ್ಣ ಘಟನೆಯಲ್ಲ. ಇದರ ಹಿಂದೆ ಖಂಡಿತವಾಗಿಯೂ ದೊಡ್ಡ ಕೈವಾಡವಿದ್ದು, ಸಾವಿನ ಮನೆಯಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಆರೋಪಿಸಿದರು. ಇದನ್ನೂ ಓದಿ: ಮುಖಾಮುಖಿ ಭೇಟಿಯಾದ ನಂತರವಷ್ಟೇ ಈಶ್ವರಪ್ಪ ರಾಜೀನಾಮೆ ನಿರ್ಧಾರ: ಬೊಮ್ಮಾಯಿ

    ರಾಜಸ್ಥಾನದಲ್ಲಿ ದಲಿತರ ಹತ್ಯೆಯಾಗಿದೆ. ರಾಜಸ್ಥಾನದ ಕರೋಲಿಯಲ್ಲಿ ಆಂಬುಲೇನ್ಸ್‍ನಲ್ಲಿ ಮಹಿಳೆಯರ ಕೊಲೆ ಹಾಗೂ ಅತ್ಯಾಚಾರ ನಡೆದಿದೆ. ರಾಜಸ್ಥಾನದ ಘಟನೆಗಳನ್ನು ಪ್ರಸ್ತಾಪಿಸಿ ಕಾಂಗ್ರೆಸ್‍ಗೆ ತಿರುಗೇಟು ನೀಡಿದರು. ದವಲಪುರ, ಸವಾಯಿ ಮಾಧವಪೂರದಲ್ಲಿ ದುರ್ಘಟನೆಗಳು ನಡೆದರೂ ಅಲ್ಲಿಗೆ ಸುರ್ಜೇವಾಲ ಭೇಟಿ ನೀಡಿಲ್ಲ. ಸುರ್ಜೇವಾಲ ಇಲ್ಲಿಗೆ ಬರೋದು ಬಿಟ್ಟು ಮೊದಲು ರಾಜಸ್ಥಾನಕ್ಕೆ ಹೋಗಬೇಕಿದೆ. ಪ್ರೀಯಾಂಕಾ ಗಾಂಧಿ ಘಟನೆ ನಡೆದ ಸ್ಥಳದಿಂದ ಕೊಂಚ ದೂರವಿದ್ದರೂ ಸಹ ಅವರೂ ಭೇಟಿ ನೀಡಿಲ್ಲ ಎಂದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ

  • ಬಿಜೆಪಿ ಅಧಿಕಾರದಿಂದ ದೇಶದಲ್ಲಿ ಆಕ್ರಮಣಕಾರಿ ರಾಜಕೀಯ: ಸಚಿನ್ ಪೈಲಟ್

    ಬಿಜೆಪಿ ಅಧಿಕಾರದಿಂದ ದೇಶದಲ್ಲಿ ಆಕ್ರಮಣಕಾರಿ ರಾಜಕೀಯ: ಸಚಿನ್ ಪೈಲಟ್

    ಜೈಪುರ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಆಕ್ರಮಣಕಾರಿ ರಾಜಕೀಯ ಪ್ರಾರಂಭವಾಗಿದೆ ಎಂದು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವವು ವಿಭಿನ್ನ ವಿಚಾರಧಾರೆಗಳು ಮತ್ತು ಚಿಂತನೆಯ ಜನರು ತಮ್ಮದೇ ಆದ ಮಾತುಗಳನ್ನು ಮಾತನಾಡುವ ವೇದಿಕೆಯಾಗಿದೆ. ಇಲ್ಲಿ ಯಾರು ಸರಿ ಮತ್ತು ಯಾರು ತಪ್ಪು ಎಂದು ಸಾರ್ವಜನಿಕರು ನಿರ್ಧರಿಸುತ್ತಾರೆ ಎಂದರು.

    ನಾವು ಪರಸ್ಪರ ವಿರೋಧಿಸುವುದು ಆರೋಗ್ಯಕರ ಸಂಪ್ರದಾಯವಾಗಿದೆ. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ ನಾವು ಸುಸಂಸ್ಕೃತ ಭಾಷೆಯನ್ನು ಬಳಸಬೇಕು ಮತ್ತು ರಾಜಕೀಯದಲ್ಲಿ ಹಿಂಸೆಗೆ ಯಾವುದೇ ಸ್ಥಾನವಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕೇಸರಿ ಪೇಟ, ಕೇಸರಿ ಶಾಲಿನೊಂದಿಗೆ ಕಾಲೇಜಿಗೆ ಬಂದ ಎಂಜಿಎಂ ವಿದ್ಯಾರ್ಥಿಗಳು!

    ರಾಜಸ್ಥಾನದಲ್ಲಿ ಬಾಕಿ ಉಳಿದಿರುವ ರಾಜಕೀಯ ನೇಮಕಾತಿಗಳ ಕುರಿತು ಮಾತನಾಡಿದ ಅವರು, ಎಲ್ಲರಿಗೂ ಮಂತ್ರಿ ಅಥವಾ ಇತರ ದೊಡ್ಡ ಹುದ್ದೆಯನ್ನು ನೀಡಲಾಗುವುದಿಲ್ಲ. ಆದರೆ ಸರ್ಕಾರದಲ್ಲಿ ಅವರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಬಡವರಿಗೆ ಸಹಾಯ ಮಾಡಬಾರದೇ?- ಮೋದಿಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

    ಇತ್ತೀಚೆಗಿನ ಎರಡು-ಮೂರು ತಿಂಗಳಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಎಐಸಿಸಿ ಸರಿಯಾದ ದಿಕ್ಕಿನಲ್ಲಿ ಕೆಲವು ಹೆಜ್ಜೆಗಳನ್ನು ಇಟ್ಟಿದ್ದು, 2023ರಲ್ಲಿ ವಿಧಾನಸಭಾ ಚುನಾವಣೆ ನಡೆದಾಗ ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸುವ ವಿಶ್ವಾಸವಿದೆ ಎಂದರು.

  • ಕೈಗಳನ್ನು ಮುರಿದು, ಕಾಲುಗಳಿಗೆ ಮೊಳೆ ಚುಚ್ಚಿ ಆರ್‌ಟಿಐ ಕಾರ್ಯಕರ್ತನಿಗೆ ಚಿತ್ರಹಿಂಸೆ

    ಕೈಗಳನ್ನು ಮುರಿದು, ಕಾಲುಗಳಿಗೆ ಮೊಳೆ ಚುಚ್ಚಿ ಆರ್‌ಟಿಐ ಕಾರ್ಯಕರ್ತನಿಗೆ ಚಿತ್ರಹಿಂಸೆ

    ಜೈಪುರ: ಆರ್‌ಟಿಐ ಕಾಯಕರ್ತನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

    ಆರ್‌ಟಿಐ ಕಾಯಕರ್ತ ಅಮರರಾಮ್ ಗೋದಾರ್ ಹಲ್ಲೆಗೊಳಗಾದ ವ್ಯಕ್ತಿ. ಇವರು ಭ್ರಷ್ಟಾಚಾರ ಮತ್ತು ಗ್ರಾಮಪಂಚಾಯಿತಿ ಏರಿಯಾದಲ್ಲಿ ನಡೆಯತ್ತಿದ್ದ ಅಕ್ರಮ ಮದ್ಯ ಮಾರಾಟದ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಗೋದಾರ್ ಅವರ ಮೇಲೆ ಎಂಟು ಜನ ದುಷ್ಕರ್ಮಿಗಳು ಹಲ್ಲೆ ನಡೆಸಿ, ಅವರ ಮೇಲೆ ಕಬ್ಬಿಣ ಸಲಾಕೆಯಿಂದ ಬಡಿದು ಕೈಗಳನ್ನು ಮುರಿದಿದ್ದಾರೆ. ಅಲ್ಲದೆ, ಮೊಳೆಗಳಿಂದ ಕೈಕಾಲುಗಳಿಗೆ ಚುಚ್ಚಿ ಚಿತ್ರಹಿಂಸೆ ನೀಡಿದ್ದಾರೆ.

    ನಂತರ ತೀವ್ರ ಗಾಯಗೊಂಡಿದ್ದ ಅವರನ್ನು ನೋಡಿ ಗೋದಾರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಅಲ್ಲಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಗೊದಾರ್ ಅವರನ್ನು ಜೋದ್‌ಪುರ್ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಇದನ್ನೂ ಓದಿ: ಪಂಜಾಬ್‍ನ ಲೂಧಿಯಾನ ನ್ಯಾಯಾಲಯದಲ್ಲಿ ಸ್ಫೋಟ – 2 ಸಾವು, 4 ಮಂದಿಗೆ ಗಾಯ

    POLICE JEEP

    ಬರ್ಮರ್ ಪೊಲೀಸ್ ವರಿಷ್ಠಾಧಿಕಾರಿ ದೀಪಕ್ ಭಾಗವ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಗೋದಾರ್ ಆರೋಗ್ಯವನ್ನು ವಿಚಾರಿಸಿದ್ದಾರೆ. ಜೊತೆಗೆ ಘಟನೆ ಕುರಿತು ದುಷ್ಕರ್ಮಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರವೇ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಯನ್ನು ಬಚಾವ್ ಮಾಡಲು ಖತರ್ನಾಕ್ ಪ್ಲಾನ್ ಮಾಡಿದ್ದ ತಂದೆ ಅರೆಸ್ಟ್!

  • ರಾಜಸ್ಥಾನದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಹೇಗೆ?

    ರಾಜಸ್ಥಾನದಲ್ಲಿ ಕಾಂಗ್ರೆಸ್ ಜಯಗಳಿಸಿದ್ದು ಹೇಗೆ?

    ಜೈಪುರ: ಆಡಳಿತಾರೂಢ ಬಿಜೆಪಿಗೆ ಈ ಬಾರಿಯ ವಿಧಾನಸಭಾ ಚುನಾವಣೆ ತೀವ್ರ ಮುಜುಗರಕ್ಕೆ ಉಂಟುಮಾಡುವತ್ತಾ ಫಲಿತಾಂಶ ಸಾಗುತ್ತಿದ್ದು, ಕಾಂಗ್ರೆಸ್ ಮತ್ತೆ ರಾಜಸ್ಥಾನದಲ್ಲಿ ಅಧಿಕಾರಕ್ಕೆ ಏರಿದೆ.

    ಬಿಜೆಪಿಯ ಮಹಾರಾಣಿ ವಸುಂಧರಾ ರಾಜೇ ರಾಜ್ಯವನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎನ್ನುವ ಚುನಾವಣೋತ್ತರ ಸಮೀಕ್ಷೆಗಳು ಸರಿ ಎಂದು ಇಂದಿನ ಫಲಿತಾಂಶಗಳು ತೋರಿಸುತ್ತಿವೆ. ಆಡಳಿತಾರೂಢ ಬಿಜೆಪಿ ಸರ್ಕಾರದ ವೈಫಲ್ಯ  ರಾಜಸ್ಥಾನದಲ್ಲಿ ಕಾಂಗ್ರೆಸ್ ಗೆಲುವಾಗಿ ಪರಿವರ್ತನೆಯಾಗುತ್ತಿದೆ.

    ಬಿಜೆಪಿ ಎಡವಿದ್ದೆಲ್ಲಿ?
    – ಮುಖ್ಯಮಂತ್ರಿ ವಸುಂಧರಾ ರಾಜೇ ರವರ ಸರ್ವಾಧಿಕಾರಿ ಮನೋವೃತ್ತಿಯನ್ನು ವಿರೋಧಿಸಿ, ಹಲವಾರು ಬಿಜೆಪಿ ಮುಖಂಡರೇ ಚುನಾವಣೆಗೂ ಮುನ್ನವೇ ಬಂಡಾಯ ಎದ್ದಿದ್ದರು. ಟಿಕೆಟ್ ಸಿಗದ ಕಾರಣ 21 ಶಾಸಕರು ಮುಖ್ಯಮಂತ್ರಿ ವಿರುದ್ಧವೇ ಪ್ರಚಾರ ಕೈಗೊಂಡಿದ್ದರು. ರಾಜ್ಯದಲ್ಲಿ ಬಿಜೆಪಿ ವಿರುದ್ಧ ಆಡಳಿತ ವಿರೋಧಿ ಅಲೆಯಿತ್ತು. ಅದನ್ನು ಕಾಂಗ್ರೆಸ್ ಸರಿಯಾಗಿಯೇ ಬಳಸಿಕೊಂಡಿತ್ತು.

    – ಸಚಿನ್ ಪೈಲಟ್ ಕಾಂಗ್ರೆಸ್ ಯುವನಾಯಕರಾಗಿ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ರೈತರ ಸಮಸ್ಯೆಗಳನ್ನು ಪರಿಹರಿಸಲು ವಸುಂಧರಾ ರಾಜೆ ಸರ್ಕಾರ ವಿಫಲವಾಗಿದ್ದು.

    – ವಸುಂಧರಾ ಧೋರಣೆಯಿಂದ ಬೇಸತ್ತ ಬಿಜೆಪಿಯ ರಾಷ್ಟ್ರೀಯ ಮುಖಂಡರು ಕೂಡ ಪ್ರಚಾರಕ್ಕೆ ರಾಜ್ಯದತ್ತ ಹೆಚ್ಚಾಗಿ ಬಂದಿರಲಿಲ್ಲ. ಗುರ್ಜರ ಸಮುದಾಯದ ಸಚಿನ್ ಪೈಲಟ್ ಹಾಗೂ ಮಾಲಿ ಸಮುದಾಯದ ಅಶೋಕ್ ಗೆಹ್ಲೋಟ್ ಒಟ್ಟಾಗಿದ್ದು ಕಾಂಗ್ರೆಸ್ ಗೆಲುವಿಗೆ ಸಹಕಾರಿ ಆಗಿದೆ.

    – ರಾಜಸ್ಥಾನದಲ್ಲಿ ಒಂದು ಬಾರಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಮತ್ತೊಂದು ಬಾರಿ ಬಿಜೆಪಿ ಅಧಿಕಾರಕ್ಕೆ ಏರುತ್ತದೆ. ಹೀಗಾಗಿ ಈ ಬಾರಿಯೂ ಮತದಾರ ಕಾಂಗ್ರೆಸ್ ಬೆಂಬಲಿಸಿದ್ದಾನೆ.

    2013ರಲ್ಲಿ ಏನಾಗಿತ್ತು?
    2013ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಪಡೆದುಕೊಂಡಿತ್ತು. ಕಾಂಗ್ರೆಸ್ 21 ಸ್ಥಾನ ಗೆದಿದ್ದರೆ, ಇತರೆ 16 ಸ್ಥಾನಗಳನ್ನು ಗೆದ್ದಿದ್ದರು. ರಾಜಸ್ಥಾನ ಒಟ್ಟು ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 200 ಸ್ಥಾನಗಳಿದ್ದು, ಬಹುಮತಕ್ಕೆ 100 ಸ್ಥಾನಗಳು ಬೇಕಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv