Tag: Rajasthan HighCourt

  • ಅತ್ಯಾಚಾರ ಕೇಸ್‌ – ಸ್ವಯಂ ಘೋಷಿತ ದೇವಮಾನವ ಅಸರಾಂಗೆ ಮಧ್ಯಂತರ ಜಾಮೀನು

    ಅತ್ಯಾಚಾರ ಕೇಸ್‌ – ಸ್ವಯಂ ಘೋಷಿತ ದೇವಮಾನವ ಅಸರಾಂಗೆ ಮಧ್ಯಂತರ ಜಾಮೀನು

    ನವದೆಹಲಿ/ಜೈಪುರ: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸ್ವಯಂ ಘೋಷಿತ ದೇವಮಾನವ ಅಸಾರಾಂಗೆ (Asaram Bapu) ವೈದ್ಯಕೀಯ ಚಿಕಿತ್ಸೆಗಾಗಿ ರಾಜಸ್ಥಾನ ಹೈಕೋರ್ಟ್ (Rajasthan High Court) ಆರು ತಿಂಗಳುಗಳ ಕಾಲ ಮಧ್ಯಂತರ ಜಾಮೀನು (Interim Bail) ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ ಅವರ ವಿಭಾಗೀಯ ಪೀಠ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಸರಾಂ ಅವರ ಪ್ರಸ್ತುತ ಆರೋಗ್ಯ ಸ್ಥಿತಿಯನ್ನು ಉಲ್ಲೇಖಿಸಿ ನಿಯಮಿತ ಜಾಮೀನು ಮಂಜೂರು ಮಾಡಿತು. ಇದನ್ನೂ ಓದಿ: ಕ್ವಾಂಟಮ್‌ ಸಿಟಿ ಅಭಿವೃದ್ಧಿ, ಸಹಭಾಗಿತ್ವಕ್ಕೆ ಸ್ವಿಟ್ಜರ್ಲೆಂಡ್‌ ಕಂಪನಿ, ಸಂಶೋಧನಾ ಸಂಸ್ಥೆಗಳ ಒಲವು: ಸಚಿವ ಬೋಸರಾಜು

    ಆಗಸ್ಟ್ 2013ರಿಂದ ಅಸಾರಾಂ ಬಾಪು ಜೈಲಿನಲ್ಲಿದ್ದಾರೆ. ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾದರು. ಬಾಲಕಿಯ ಪೋಷಕರು ಅವರ ಭಕ್ತರಾಗಿದ್ದು, ಪೊಲೀಸರಿಗೆ ದೂರು ನೀಡಿದ ನಂತರ ಬಂಧನ ಮಾಡಲಾಯ್ತು. ಎರಡು ತಿಂಗಳ ನಂತರ, ಗುಜರಾತ್‌ನ ಸೂರತ್ ಆಶ್ರಮದಲ್ಲಿ ಇಬ್ಬರು ಸಹೋದರಿಯರ ಮೇಲೆ ಅತ್ಯಾಚಾರ ಆರೋಪದಲ್ಲಿ ಅಸಾರಾಂ ಮತ್ತು ಅವರ ಮಗ ನಾರಾಯಣ್ ಸಾಯಿ ವಿರುದ್ಧ ಪ್ರಕರಣ ದಾಖಲಾಯಿತು. ಈ ಪ್ರಕರಣಗಳಲ್ಲಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ಕಾಗಿನೆಲೆ ಅಭಿವೃದ್ಧಿಗಾಗಿ 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

    ಈ ವರ್ಷ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಅಸಾರಾಂಗೆ ವೈದ್ಯಕೀಯ ಆಧಾರದ ಮೇಲೆ ಮಾರ್ಚ್ ಅಂತ್ಯದವರೆಗೆ ಮಧ್ಯಂತರ ಜಾಮೀನು ನೀಡಿತ್ತು. ನ್ಯಾಯಮೂರ್ತಿಗಳಾದ ಎಂ.ಎಂ. ಸುಂದ್ರೇಶ್ ಮತ್ತು ರಾಜೇಶ್ ಬಿಂದಾಲ್ ಅವರ ಪೀಠ ಈ ಆದೇಶ ನೀಡಿತ್ತು. ಮಧ್ಯಂತರ ಜಾಮೀನಿನ ಮೇಲೆ ಹೊರಗಿರುವಾಗ ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಲು ಅಥವಾ ಅವರ ಅನುಯಾಯಿಗಳನ್ನು ಭೇಟಿ ಮಾಡಲು ಪ್ರಯತ್ನಿಸಬಾರದು ಎಂದು ಆದೇಶಿಸಿತು. ಇದನ್ನೂ ಓದಿ: ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆ ಬಗ್ಗೆ ಮಾತಾಡದೇ ಬಾಯಿಮುಚ್ಚಿಕೊಂಡು ಇರ್ಬೇಕು: ಬೋಸರಾಜು

    ಅಸಾರಾಂ ಬಾಪು ಹೃದಯ ಸಂಬಂಧಿ ಸಮಸ್ಯೆಗಳು, ಇತರ ವಯೋಸಹಜ ರೋಗಗಳಿಂದ ಬಳಲುತ್ತಿದ್ದಾರೆ. ಜೈಲಿನಲ್ಲಿ ಸರಿಯಾದ ಚಿಕಿತ್ಸೆ ಸಿಗದಿರುವುದು ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಆರೈಕೆ ಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಹೈಕೋರ್ಟ್ ಈ ಆಧಾರಗಳನ್ನು ಪರಿಗಣಿಸಿ ಆರು ತಿಂಗಳ ಜಾಮೀನು ನೀಡಿದೆ. ಇದನ್ನೂ ಓದಿ: ನಾವು ಮಾತಾಡಿದಷ್ಟು ಪಕ್ಷಕ್ಕೆ ಡ್ಯಾಮೇಜ್, ಸೈಲೆಂಟ್ ಆಗಿ ಇರದಿದ್ರೆ ವಿಪಕ್ಷಗಳಿಗೆ ಆಹಾರ ಆಗ್ತೀವಿ: ರಾಮಲಿಂಗಾ ರೆಡ್ಡಿ

  • ನಗರಗಳಲ್ಲಿನ ಬೀದಿನಾಯಿ, ಅನಾಥ ಪ್ರಾಣಿಗಳ ತೆರವಿಗೆ ವಿಶೇಷ ಅಭಿಯಾನ – ರಾಜಸ್ಥಾನ ಹೈಕೋರ್ಟ್

    ನಗರಗಳಲ್ಲಿನ ಬೀದಿನಾಯಿ, ಅನಾಥ ಪ್ರಾಣಿಗಳ ತೆರವಿಗೆ ವಿಶೇಷ ಅಭಿಯಾನ – ರಾಜಸ್ಥಾನ ಹೈಕೋರ್ಟ್

    ಜೈಪುರ: ಜೋಧ್‌ಪುರ, ಉದಯಪುರ ಹಾಗೂ ಜೈಪುರ ನಗರಗಳ ಬೀದಿನಾಯಿ (Street Dogs) ಮತ್ತು ಅನಾಥ ಪ್ರಾಣಿಗಳನ್ನು ತೆರೆವುಗೊಳಿಸುವುದಕ್ಕಾಗಿ ವಿಶೇಷ ಅಭಿಯಾನ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್ (Rajasthan Highcourt) ಆದೇಶಿಸಿದೆ.

    ಅಭಿಯಾನದ ವೇಳೆ ತೆರವಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದು ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಅವಕಾಶವಿರುತ್ತದೆ ಎಂದು ನ್ಯಾಯಮೂರ್ತಿಗಳಾದ ಕುಲದೀಪ್ ಮಾಥುರ್ ಮತ್ತು ರವಿ ಚಿರಾನಿಯಾ ಅವರಿದ್ದ ದ್ವಿ-ಸದಸ್ಯ ಪೀಠ ಹೇಳಿದೆ. ಆದರೆ ಅಭಿಯಾನದ ವೇಳೆ ಪ್ರಾಣಿಗಳಿಗೆ ಹಾನಿಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಕೂಡ ಸ್ಪಷ್ಟಪಡಿಸಿದೆ.ಇದನ್ನೂ ಓದಿ: `ಭಾಷಾ’ಗಿಂತ `ಓಂ’ ಸಿನಿಮಾ ಹತ್ತು ಪಟ್ಟು ಬೆಟರ್- ಉಪ್ಪಿ ಹೊಗಳಿದ ರಜನಿಕಾಂತ್

    ಈ ಕುರಿತು ನಾಗರಿಕರು ದೂರು ಸಲ್ಲಿಸಲು ಅನುಕೂಲವಾಗುವಂತೆ ದೂರವಾಣಿ ಸಂಖ್ಯೆ ಹಾಗೂ ಇ-ಮೇಲ್ ಐಡಿ ಒದಗಿಸಬೇಕು. ಅದಲ್ಲದೇ ಬೀದಿ ನಾಯಿಗಳು ಹಾಗೂ ಅನಾಥ ಪ್ರಾಣಿಗಳಿಗೆ ಪುರಸಭೆಗಳು, ಖಾಸಗಿ ವ್ಯಕ್ತಿಗಳು ಅಥವಾ ಇನ್ಯಾವುದೇ ಸಂಸ್ಥೆಗಳು ತಾವು ನಿರ್ವಹಿಸುವ ಆಶ್ರಯ ಕೇಂದ್ರಗಳಲ್ಲಿ ತಮಗಿಷ್ಟವಿದ್ದಲ್ಲಿ ಆಹಾರ ನೀಡಬಹುದು ಎಂದು ಹೇಳಿದೆ.

    ಸಾಮಾನ್ಯ ಜನರು ಭಾವನೆ, ಧಾರ್ಮಿಕ ನಂಬಿಕೆ ಅಥವಾ ಪ್ರಾಣಿಗಳ ಮೇಲಿನ ಪ್ರೀತಿಯಿಂದಾಗಿ ಆಹಾರ ನೀಡಲು ಅಥವಾ ಅವುಗಳನ್ನು ನೋಡಿಕೊಳ್ಳಲು ಬಯಸಿದರೆ ಅಂತಹ ಚಟುವಟಿಕೆಗಳನ್ನು ಪ್ರಾಣಿ ಆಶ್ರಯ ಕೇಂದ್ರದಲ್ಲಿ ಮಾಡಬಹುದು ಎಂದು ತಿಳಿಸಿದೆ.

    ರಸ್ತೆಗಳಿಂದ ಬೀದಿ ಪ್ರಾಣಿಗಳನ್ನು ತೆರವುಗೊಳಿಸುವಂತೆ ಮತ್ತು ವಾಹನಗಳ ಮುಕ್ತ ಸಂಚಾರಕ್ಕಾಗಿ ನಿಯಮಿತವಾಗಿ ಗಸ್ತು ತಿರುಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಅಧಿಕಾರಿಗಳಿಗೆ ಪೀಠ ನಿರ್ದೇಶಿಸಿದೆ. ರಾಜ್ಯದಲ್ಲಿ ನಾಯಿ ಕಡಿತ, ಹೆದ್ದಾರಿಯಲ್ಲಿ ಅನಾಥ ದನಗಳ ಹಾವಳಿಯಿಂದ ಹೆಚ್ಚು ಸಾವು-ನೋವು ಸಂಭವಿಸುತ್ತಿದ್ದ ಹಿನ್ನೆಲೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತ್ತು. ಈ ಕುರಿತು ಪ್ರತಿಕ್ರಿಯಿಸಲು ರಾಜ್ಯ ಸರ್ಕಾರ ಮತ್ತು ಪುರಸಭೆ ಸಮಯಾವಕಾಶದ ಅಗತ್ಯವಿದೆ ಎಂದು ಸೋಮವಾರ (ಆ.11) ಕೋರಿದ್ದವು. ಸದ್ಯ ಹೈಕೋರ್ಟ್ ಸೆ.8ಕ್ಕೆ ವಿಚಾರಣೆಯನ್ನು ಮುಂದೂಡಿದೆ.ಇದನ್ನೂ ಓದಿ: ಯಾವ ಕಾರಣಕ್ಕೆ ರಾಜಣ್ಣ ಅವ್ರನ್ನ ವಜಾ ಮಾಡಿದ್ದಾರೆ ಗೊತ್ತಿಲ್ಲ: ಪರಮೇಶ್ವರ್