Tag: Rajasthan Royals

  • IPL 2026 | ಸಂಜು ಸ್ಯಾಮ್ಸನ್‌ ಆರ್‌ಸಿಬಿ ಸೇರೋದು ಪಕ್ಕಾನಾ?

    IPL 2026 | ಸಂಜು ಸ್ಯಾಮ್ಸನ್‌ ಆರ್‌ಸಿಬಿ ಸೇರೋದು ಪಕ್ಕಾನಾ?

    ಮುಂಬೈ: ರಾಜಸ್ಥಾನ್‌ ರಾಯಲ್ಸ್ (Rajasthan Royals) ಜೊತೆಗಿನ ಸಂಬಂಧ ಹದಗೆಟ್ಟಿರುವುದರಿಂದ ಸಂಜು ಸ್ಯಾಮ್ಸನ್ ಅವರು 2026ರ ಐಪಿಎಲ್‌ ಮಿನಿ ಹರಾಜಿಗೂ ಮುನ್ನವೇ ಫ್ರಾಂಚೈಸಿಯಿಂದ ಹೊರಬರಲು ಇಚ್ಛಿಸಿದ್ದಾರೆ. ಈ ಬೆನ್ನಲ್ಲೇ ವೈರಲ್‌ ಆಗಿರುವ ಫೋಟೋಗಳು ಸಂಜು ಸ್ಯಾಮ್ಸನ್‌ (Sanju Samson) ಆರ್‌ಸಿಬಿ ಸೇರೋದು ಪಕ್ಕಾ ಎಂದು ಹೇಳುತ್ತಿವೆ.

    ಹೌದು. 2026ರ ಐಪಿಎಲ್‌ಗೆ (IPL 2025) ಮುಂಚಿತವಾಗಿ ನಡೆಯಲಿರುವ ಮಿನಿ ಹರಾಜಿಗೂ ಮುನ್ನ ತಮ್ಮನ್ನು ಫ್ರಾಂಚೈಸಿಯಿಂದ ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದಾರಂತೆ. ಈ ಬೆನ್ನಲ್ಲೇ ಸಂಜು ಆರ್‌ಸಿಬಿ (RCB) ಥ್ರೋ ಡೌನ್ ಸ್ಪೆಷಲಿಸ್ಟ್ ಜೊತೆ ತರಬೇತಿ ಪಡೆಯುತ್ತಿರುವ ಫೋಟೋಗಳು ವೈರಲ್‌ ಆಗಿದ್ದು, ಭಾರೀ ಹೈಪ್‌ ಕ್ರಿಯೆಟ್‌ ಮಾಡಿದೆ.

    ಕಳೆದ ತಿಂಗಳು ಮುಕ್ತಾಯಗೊಂಡ ಟಿ20 ಏಷ್ಯಾಕಪ್‌ (T20 Asia Cup) ಟೂರ್ನಿಯಲ್ಲಿ ಸಂಜು ಸ್ಯಾಮ್ಸನ್‌ ಮೊದಲ ಆಯ್ಕೆಯ ವಿಕೆಟ್‌ ಕೀಪರ್‌ ಬ್ಯಾಟರ್‌ ಆಗಿದ್ದರು. ಅಲ್ಲದೇ ಅಕ್ಟೋಬರ್‌ 29ರಿಂದ ಶುರುವಾಗಲಿರುವ 5 ಪಂದ್ಯಗಳ ಟಿ20 ಸರಣಿಗೆ ಆಯ್ಕೆಯಾಗಿದ್ದು, ಆಸ್ಟ್ರೇಲಿಯಾಗೆ (Australia) ಪ್ರಯಾಣಿಸಲಿದ್ದಾರೆ. ಅದಕ್ಕೂ ಮುನ್ನ ಸಂಜು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಥ್ರೋ-ಡೌನ್ ಸ್ಪೆಷಲಿಸ್ಟ್ ಗೇಬ್ರಿಯಲ್ ಅವರಿಂದಿಗೆ ತರಬೇತಿ ಪಡೆಯುತ್ತಿದ್ದಾರೆ. ಈ ಫೋಟೋಗಳು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

    ಸ್ಯಾಮ್ಸನ್‌ ಆರ್‌ಆರ್‌ ತೊರೆಯಲು ಕಾರಣ ಏನು?
    ರಾಜಸ್ಥಾನ್‌ ರಾಯಲ್ಸ್‌ ತಂಡದ ನಾಯಕನಾಗಿದ್ದ ಸಂಜು ಸ್ಯಾಮ್ಸನ್‌ 2025ರ ಐಪಿಎಲ್‌ ಟೂರ್ನಿಯ ಬಹುತೇಕ ಪಂದ್ಯಗಳಲ್ಲಿ ಇಂಪ್ಯಾಕ್ಟ್‌ ಪ್ಲೇಯರ್‌ ಆಗಿ ಕಣಕ್ಕಿಳಿದಿದ್ದರು. ರಿಯಾನ್‌ ಪರಾಗ್‌ ನಾಯಕನಾಗಿ ಅನೇಕ ಪಂದ್ಯಗಳನ್ನ ಮುನ್ನಡೆಸಿದ್ದರು. ಇದು ಅಸಮಾಧಾನ ಮೂಡಿಸಿತ್ತು ಎನ್ನಲಾಗಿದೆ. ಅಲ್ಲದೇ ಜೋಸ್‌ ಬಟ್ಲರ್‌ ಅವರನ್ನ ಫ್ರಾಂಚೈಸಿಯಿಂದ ಕೈಬಿಟ್ಟಿದ್ದು ಸಹ ಸಂಜುಗೆ ಬೇಸರ ತರಿಸಿತ್ತಂತೆ. ಹೀಗಾಗಿ 2025ರ ಟೂರ್ನಿ ಮುಗಿದ ಬೆನ್ನಲ್ಲೇ ತನ್ನನ್ನು ಹರಾಜಿನಲ್ಲಿ ಬಿಡುಗಡೆ ಮಾಡಲು ಅಥವಾ ಬೇರೆ ಫ್ರಾಂಚೈಸಿ ಜೊತೆಗೆ ವಿನಿಮಯ ಮಾಡುವಂತೆ ಕೇಳಿಕೊಂಡಿದ್ದರು. ಆರಂಭದಲ್ಲಿ ಸಂಜು ಸಿಎಸ್‌ಕೆ ಸೇರಿಕೊಳ್ಳಲಿದ್ದು, ಧೋನಿ ಬಳಿಕ ವಿಕೆಟ್‌ ಕೀಪರ್‌ ಬ್ಯಾಟರ್‌ ಆಗಲಿದ್ದಾರೆ ಎನ್ನಲಾಗಿತ್ತು. ಆದರೀಗ ಅವರು ಆರ್‌ಸಿಬಿ ಫ್ರಾಂಚೈಸಿ ಸೇರಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ.

    IPL RR VS RCB 2

    ಈಗಾಗಲೇ 2026ರ ಐಪಿಎಲ್‌ನ ಮಿನಿ ಹರಾಜಿಗೆ ತಯಾರಿ ನಡೆಯುತ್ತಿದೆ. ನವೆಂಬರ್‌ 15ರ ಒಳಗೆ ಎಲ್ಲಾ ಫ್ರಾಂಚೈಸಿಗಳು ರಿಟೇನ್‌ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸುವಂತೆ ಐಪಿಎಲ್‌ ಮಂಡಳಿ ತಿಳಿಸಿದೆ. ಡಿಸೆಂಬರ್‌ 13 ರಿಂದ 15ರ ಒಳಗೆ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಮಾತ್ರವೆ ಮೆಗಾ ಹರಾಜು ನಡೆಯಲಿದೆ.

  • ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ – ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

    ಮುಖ್ಯಕೋಚ್‌ ಹುದ್ದೆಗೆ ಗುಡ್‌ಬೈ – ಒಂದೇ ವರ್ಷಕ್ಕೆ RR ಫ್ರಾಂಚೈಸಿಯಿಂದ ಹೊರಬಂದ ರಾಹುಲ್‌ ದ್ರಾವಿಡ್‌

    ಜೈಪುರ: 2026ರ ಐಪಿಎಲ್‌ ಟೂರ್ನಿಗೂ ಮುನ್ನವೇ ರಾಹುಲ್‌ ದ್ರಾವಿಡ್‌ ರಾಜಸ್ಥಾನ್‌ ರಾಯಲ್ಸ್‌ (Rajasthan Royals) ತಂಡದ ಮುಖ್ಯಕೋಚ್‌ ಹುದ್ದೆಯಿಂದ ಕೆಳಗಿಳಿದಿದ್ದಾರೆ. 2025ರ ಐಪಿಎಲ್‌ ಟೂರ್ನಿ ವೇಳೆ ರಾಜಸ್ಥಾನ್‌ ತಂಡದ ಕೋಚ್‌ ಆಗಿದ್ದ ದ್ರಾವಿಡ್‌ (Rahul Dravid) ಒಂದೇ ವರ್ಷಕ್ಕೆ ಫ್ರಾಂಚೈಸಿಯಿಂದ ಹೊರಬಂದಿದ್ದಾರೆ.

    19ನೇ ಆವೃತ್ತಿಯ ಐಪಿಎಲ್‌ಗೂ ಮುನ್ನ ದ್ರಾವಿಡ್‌ ಹೆಡ್‌ ಕೋಚ್‌ (Head Coach) ಹುದ್ದೆಯಿಂದ ಕೆಳಗಿಳಿಯುವ ಬಗ್ಗೆ ರಾಜಸ್ಥಾನ್‌ ರಾಯಲ್ಸ್‌ ಶನಿವಾರ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಿಸಿದ ಆರ್‌ಸಿಬಿ

    ರಾಜಸ್ಥಾನ್‌ ರಾಯಲ್ಸ್ ತಂಡದ ಪ್ರಯಾಣದಲ್ಲಿ ರಾಹುಲ್ ಹಲವು ವರ್ಷಗಳಿಂದ ಕೇಂದ್ರಬಿಂದುವಾಗಿದ್ದಾರೆ. ಅವರ ನಾಯಕತ್ವವು ಒಂದು ಪೀಳಿಗೆಯ ಆಟಗಾರರ ಮೇಲೆ ಪ್ರಭಾವ ಬೀರಿದೆ. ತಂಡದೊಳಗೆ ದೊಡ್ಡ ಮೌಲ್ಯಗಳನ್ನು ನಿರ್ಮಿಸಿದೆ ಮತ್ತು ಫ್ರಾಂಚೈಸಿಯೊಂದಿಗೆ ಅಳಿಸಲಾಗದ ಗುರುತು ಬಿಟ್ಟಿದ್ದಾರೆ. ಫ್ರಾಂಚೈಸಿ ರಚನಾತ್ಮಕ ಪರಿಶೀಲನೆಯ ಭಾಗವಾಗಿ, ರಾಹುಲ್‌ಗೆ ಫ್ರಾಂಚೈಸಿಯಲ್ಲಿ ವಿಶಾಲವಾದ ಸ್ಥಾನ ನೀಡಲಾಗಿತ್ತು, ಆದರೆ ಅದನ್ನು ತೆಗೆದುಕೊಳ್ಳದಿರಲು ಅವರು ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

    ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಮತ್ತು ವಿಶ್ವದಾದ್ಯಂತ ಇರುವ ಫ್ರಾಂಚೈಸಿಯ ಎಲ್ಲಾ ಆಟಗಾರರು ಹಾಗೂ ಲಕ್ಷಾಂತರ ಅಭಿಮಾನಿಗಳು ರಾಹುಲ್‌ ದ್ರಾವಿಡ್‌ ಅವರ ಸೇವೆಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸಿದ್ದಾರೆ ಎಂದು ಫ್ರಾಂಚೈಸಿ ಹೇಳಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕಾಲ್ತುಳಿತ – ಅಭಿಮಾನಿಗಳಿಗೆ ಕೇರ್‌ ಸೆಂಟರ್‌ ತೆರೆಯಲಿದೆ ಆರ್‌ಸಿಬಿ

    ಟೀಂ ಇಂಡಿಯಾದ ಮುಖ್ಯಕೋಚ್‌ ಹುದ್ದೆಯಿಂದ ಹೊರ ಬಂದ ಬಳಿಕ 2024ರ ಸೆಪ್ಟೆಂಬರ್‌ನಲ್ಲಿ ದ್ರಾವಿಡ್ ಅವರನ್ನು ಬಹು ವರ್ಷಗಳ ಒಪ್ಪಂದದ ಮೇಲೆ RR ತಂಡದ ಮುಖ್ಯಕೋಚ್‌ ಆಗಿ ನೇಮಕ ಮಾಡಿಕೊಳ್ಳಲಾಗಿತ್ತು. ಉದ್ಘಾಟನಾ ಆವೃತ್ತಿಯಲ್ಲಿ ಐಪಿಎಲ್‌ ಟ್ರೋಫಿ ಗೆದ್ದಿದ್ದ ರಾಜಸ್ಥಾನ್‌ ರಾಯಲ್‌ ಡ್ರಾವಿಡ್‌ ಅವರನ್ನು ಕೋಚ್‌ ಆಗಿ ನೇಮಿಸಿಕೊಂಡ ಬಳಿಕ ಮತ್ತೊಂದು ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದ್ರೆ 2025ರ ಐಪಿಎಲ್‌ನಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವು ಕಳಪೆ ಪ್ರದರ್ಶನ ನೀಡಿತು, 14 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆದ್ದು ಲೀಗ್‌ ಸುತ್ತಿನಲ್ಲೇ ಹೊರಬಿದ್ದಿತು.

  • CSKಗೆ ಗುಡ್‌ಬೈ ಹೇಳಲು ಅಶ್ವಿನ್ ನಿರ್ಧಾರ – ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲು ಸಂಜು ಕಾತರ?

    CSKಗೆ ಗುಡ್‌ಬೈ ಹೇಳಲು ಅಶ್ವಿನ್ ನಿರ್ಧಾರ – ಚೆನ್ನೈ ಸೂಪರ್‌ ಕಿಂಗ್ಸ್‌ ಸೇರಲು ಸಂಜು ಕಾತರ?

    ಚೆನ್ನೈ: 2026ರ ಐಪಿಎಲ್‌ (IPL 2025) ಟೂರ್ನಿಯ ಮಿನಿ ಹರಾಜಿಗೆ ಇನ್ನೂ ಕೆಲ ತಿಂಗಳು ಬಾಕಿಯಿದೆ. ಅದಕ್ಕೂ ಮುನ್ನವೇ 5 ಬಾರಿ ಐಪಿಎಲ್‌ ಚಾಂಪಿಯನ್‌ ಆಗಿರುವ ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡ ತೊರೆಯಲು ಆಫ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.

    ಈ ಕುರಿತು ಎಂ.ಎಸ್‌ ಧೋನಿ ಹಾಗೂ ನಾಯಕ ರುತುರಾಜ್‌ ಗಾಯಕ್ವಾಡ್‌ ಅವರೊಂದಿಗೆ ಚರ್ಚಿಸಿದ ಬಳಿಕ ಅಧಿಕೃತವಾಗಿ ತಿಳಿಸುವುದಾಗಿ ಅಶ್ವಿನ್‌ (R Ashwin) ಹೇಳಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ದೂರವಾದಾಗಲೇ ಬೆಲೆ ತಿಳಿಯೋದು – ಮತ್ತೆ ಒಂದಾಗುತ್ತೇವೆಂದ ಸೈನಾ ನೆಹ್ವಾಲ್ ದಂಪತಿ

    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಅಶ್ವಿನ್‌ 2025ರ ಋತುವಿನಲ್ಲ ಸ್ಥಿರ ಪ್ರದರ್ಶನವನ್ನೂ ನೀಡಲಾಗಲಿಲ್ಲ. ಕೇವಲ 9 ಪಂದ್ಯಗಳಲ್ಲಿ ಮಾತ್ರವೇ ಕಾಣಿಸಿಕೊಂಡು 7 ವಿಕೆಟ್‌ ಪಡೆದಿದ್ದರು. ಕಳಪೆ ಪ್ರದರ್ಶನದಿಂದಾಗಿ ಅವರನ್ನು 5 ಪಂದ್ಯಗಳಿಗೆ ಬೆಂಚ್‌ನಲ್ಲಿ ಇರಿಸಲಾಗಿತ್ತು. ಅಲ್ಲದೇ ಸಿಎಸ್‌ಕೆ ಕೂಡ ಕೇವಲ 4 ಪಂದ್ಯಗಳಲ್ಲಿ ಗೆದ್ದು, ಕೊನೇ ಸ್ಥಾನದಲ್ಲೇ 18ನೇ ಆವೃತ್ತಿ ಮುಗಿಸಿತ್ತು. ಸದ್ಯ ಸಿಎಸ್‌ಕೆ ತೊರೆಯಲು ನಿರ್ಧರಿಸಿರುವ ಅಶ್ವಿನ್‌ ಮತ್ತೆ ರಾಜಸ್ಥಾನ್‌ ರಾಯಲ್ಸ್‌ ತಂಡ ಸೇರಲಿದ್ದಾರೆ ಎಂಬ ವದಂತಿಗಳೂ ಹಬ್ಬಿವೆ. ಇದನ್ನೂ ಓದಿ: ಟೀಕೆಯಿಂದ ಖಿನ್ನತೆಗೆ ಜಾರಿದ್ದೆ, ಆತ್ಮಹತ್ಯೆಗೆ ಯೋಚಿಸಿದ್ದೆ – ಮೌನ ಮುರಿದ ಚಹಲ್‌

    ಸಿಎಸ್‌ಕೆಗೆ ಸಂಜು ಸ್ಯಾಮ್ಸನ್‌
    ಮತ್ತೊಂದು ಕಡೆ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಮತ್ತು ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್‌ ಸಂಜು ಸ್ಯಾಮ್ಸನ್ (Sanju Samson) ಫ್ರಾಂಚೈಸಿ ತೊರೆಯಲು ಬಯಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ರಾಜಸ್ಥಾನ್‌ (Rajasthan Royals) ಪರ ಅತಿ ಹೆಚ್ಚು ಪಂದ್ಯಗಳನ್ನು ಆಡಿದ ಹಾಗೂ ಅತಿಹೆಚ್ಚು ರನ್‌ ಗಳಿಸಿದ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ ಸಂಜು ಸ್ಯಾಮ್ಸನ್‌. ಹರಾಜಿಗೂ ಮುನ್ನವೇ ತಮ್ಮನ್ನು ತಂಡದಿಂದ ಬಿಡುಗಡೆ ಮಾಡಲು ಅಥವಾ ವಿನಿಯಮ ಮಾಡಿಕೊಳ್ಳಲು ರಿಕ್ವೆಸ್ಟ್‌ ಮಾಡಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬಾಗಲಕೋಟೆ | ಬಡ ವಿದ್ಯಾರ್ಥಿನಿಯ ಶಿಕ್ಷಣಕ್ಕೆ ಕ್ರಿಕೆಟಿಗ ರಿಷಭ್‌ ಪಂತ್ ಆರ್ಥಿಕ ನೆರವು

    ವರದಿಗಳು ಹರಿದಾಡುತ್ತಿದ್ದಂತೆ ಸಂಜು ಸ್ಯಾಮ್ಸನ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ಸಿಎಸ್‌ಕೆ ಬಯಸಿದೆ. ಈ ಬಗ್ಗೆ ಸಂಜು ಸ್ಯಾಮ್ಸನ್‌ ಮುಖ್ಯಕೋಚ್‌ ಸ್ಟೀಫನ್ ಫ್ಲೆಮಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ಸಹ ನಡೆಸಿದ್ದರು ಎಂದು ಹೇಳಲಾಗಿದೆ. ಆದ್ರೆ ಉಭಯ ಫ್ರಾಂಚೈಸಿಗಳು ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

  • ರಾಜಸ್ಥಾನ ತಂಡಕ್ಕೆ ಸೇರಿಸೋದಾಗಿ ರಾಜ್ಯಮಟ್ಟದ ಕ್ರಿಕೆಟಿಗನಿಗೆ 24 ಲಕ್ಷ ವಂಚನೆ

    ರಾಜಸ್ಥಾನ ತಂಡಕ್ಕೆ ಸೇರಿಸೋದಾಗಿ ರಾಜ್ಯಮಟ್ಟದ ಕ್ರಿಕೆಟಿಗನಿಗೆ 24 ಲಕ್ಷ ವಂಚನೆ

    ಚಿಕ್ಕೋಡಿ: ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡಕ್ಕೆ ಸೇರಿಸೋದಾಗಿ ಚಿಕ್ಕೋಡಿಯ (Chikkodi) ರಾಜ್ಯಮಟ್ಟದ ಕ್ರಿಕೆಟಿಗನಿಗೆ ಸೈಬರ್‌ ವಂಚಕರು (Cyber Crime) 24 ಲಕ್ಷ ರೂ. ವಂಚಿಸಿರುವುದು ಬೆಳಕಿಗೆ ಬಂದಿದೆ.

    ಚಿಕ್ಕೋಡಿ ತಾಲೂಕಿನ ಚಿಂಚಣಿ ಗ್ರಾಮದ ರಾಕೇಶ್ ಯಡೂರು (19)‌ ವಂಚನೆಗೊಳಗಾದ ಯುವಕ. ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿ ಆಡುತ್ತಿದ್ದ ಯುವಕನನ್ನು, ವಂಚಕರು ಇನ್ಸ್ಟಾಗ್ರಾಮ್‌ನಲ್ಲಿ ಸಂಪರ್ಕಿಸಿದ್ದಾರೆ. ರಾಜಸ್ಥಾನ ತಂಡಕ್ಕೆ ಸೇರಿಸುತ್ತೇವೆ ಎಂದು ನಂಬಿಸಿದ್ದಾರೆ. ಇದನ್ನೂ ಓದಿ: ಮೆಟ್ರೋದಲ್ಲಿ ಪ್ರಯಾಣಿಸುವ ಯುವತಿಯರ ಆಕ್ಷೇಪಾರ್ಹ ವಿಡಿಯೋ ಅಪ್ಲೋಡ್‌ – ಪೇಜ್‌ ವಿರುದ್ಧ ಎಫ್‌ಐಆರ್‌

    ತಂಡಕ್ಕೆ ಸೇರಿಸಲು, 24 ಲಕ್ಷ ರೂ. ನೀಡುವಂತೆ ಯುವಕನಿಗೆ ವಂಚಕರು ಹೇಳಿದ್ದರು. ಅದರಂತೆ ವಂಚಕರ ಭರವಸೆಯನ್ನು ನಂಬಿ ಯುವಕ ಹಣವನ್ನು ಅವರ ಖಾತೆಗೆ ವರ್ಗಾಯಿಸಿದ್ದಾನೆ.‌ ಹಣ ನೀಡಿದರೂ ಯಾವುದೇ ತಂಡಕ್ಕೂ ಆಯ್ಕೆಯಾಗದೆ ಇದ್ದಿದ್ದರಿಂದ ಆತ ಕಂಗಾಲಾಗಿ ಪೊಲೀಸರ ಮೊರೆ ಹೋಗಿದ್ದಾನೆ.

    ಈ ಸಂಬಂಧ ಬೆಳಗಾವಿ ಜಿಲ್ಲಾ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವಿಜಯಪುರದಲ್ಲಿ ಭೀಕರ ಅಪಘಾತ – ಐವರು ದುರ್ಮರಣ

  • IPL 2025 | ʻವೈಭವʼ ಫಿಫ್ಟಿ – ರಾಯಲ್‌ ಆಗಿ ಗೆದ್ದು ಆಟ ಮುಗಿಸಿದ ರಾಜಸ್ಥಾನ್‌

    IPL 2025 | ʻವೈಭವʼ ಫಿಫ್ಟಿ – ರಾಯಲ್‌ ಆಗಿ ಗೆದ್ದು ಆಟ ಮುಗಿಸಿದ ರಾಜಸ್ಥಾನ್‌

    ನವದೆಹಲಿ: ವೈಭವ್‌ ಸೂರ್ಯವಂಶಿ (Vaibhav Suryavanshi)ಅವರ ಅಮೋಘ ಅರ್ಧಶತಕದ ಬ್ಯಾಟಿಂಗ್‌ ನೆರವಿನೊಂದಿಗೆ ರಾಜಸ್ಥಾನ್ಸ್‌ ರಾಯಲ್ಸ್‌ (Rajasthan Royals) ತಂಡವು ಚೆನ್ನೈ ಸೂಪರ್‌ ಕಿಂಗ್ಸ್‌ (Chennai Super Kings) ವಿರುದ್ಧ 6 ವಿಕೆಟ್‌ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಸಂಜು ಸ್ಯಾಮ್ಸನ್‌ ನಾಯಕತ್ವದ ಆರ್‌ಆರ್‌ (RR)ತಂಡ 18ನೇ ಆವೃತ್ತಿಯ ಐಪಿಎಲ್‌ಗೆ (IPL) ವಿದಾಯ ಹೇಳಿದೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌ ನಿಗದಿತ 20 ಓವರ್‌ಗಳಲ್ಲಿ 8 ಓವರ್‌ಗಳ ನಷ್ಟಕ್ಕೆ 187 ರನ್‌ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ರಾಜಸ್ಥಾನ 17.1 ಓವರ್‌ಗಳಲ್ಲೇ 4 ವಿಕೆಟ್‌ ನಷ್ಟಕ್ಕೆ 188 ರನ್‌ ಗಳಿಸುವ ಮೂಲಕ ಕೊನೆಯ ಪಂದ್ಯದಲ್ಲಿ ವಿಜಯಶಾಲಿಯಾಯಿತು.ಇದನ್ನೂ ಓದಿ: ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಉದ್ಧಟತನ – ಒಂದು ಪಂದ್ಯಕ್ಕೆ ದಿಗ್ವೇಶ್ ಅಮಾನತು, ಭಾರೀ ದಂಡ

    ಲೀಗ್‌ ಸುತ್ತಿನ ಕೊನೆಯ ಪಂದ್ಯದಲ್ಲಿ ಗೆಲಲ್ಲೇಬೇಕೆಂದು ಪಣತೊಟ್ಟು ಕಣಕ್ಕಿಳಿದ ರಾಜಸ್ಥಾನ ರಾಯಲ್ಸ್‌ ಪಂದ್ಯದ ಮೊದಲಿನಿಂದಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಯಿತು. ಯಶಸ್ವಿ ಜೈಸ್ವಾಲ್‌ 19 ಎಸೆತಗಳಲ್ಲಿ 36 ರನ್‌, ವೈಭವ್‌ ಸೂರ್ಯವಂಶಿ 33 ಎಸೆತಗಳಲ್ಲಿ 57 ರನ್‌, ಸಂಜು ಸ್ಯಾಮ್ಸನ್‌ 31 ಎಸೆತಗಳಲ್ಲಿ 41 ರನ್‌, ರಿಯಾನ್‌ ಪರಾಗ್‌ 4 ಎಸೆತಗಳಲ್ಲಿ 3 ರನ್‌, ಧ್ರುವ್‌ ಜುರೆಲ್‌ 12 ಎಸೆತಗಳಲ್ಲಿ 31 ರನ್‌ ಹಾಗೂ ಶಿಮ್ರಾನ್‌ ಹೆಟ್ಮೆಯರ್‌ 5 ಎಸೆತಗಳಲ್ಲಿ 12 ರನ್‌ ಗಳಿಸಿದರು.

    ಚೆನ್ನೈ ಪರ ಬೌಲಿಂಗ್‌ ಮಾಡಿದ ರವಿಚಂದ್ರನ್‌ ಅಶ್ವಿನ್‌ 2, ಅನ್ಶುಲ್‌ ಕಾಂಬೋಜ್‌, ನೂರ್‌ ಅಹ್ಮದ್‌ ತಲಾ ಒಂದೊಂದು ವಿಕೆಟ್‌ ಪಡೆದರು.

    ಇದಕ್ಕೂ ಮುನ್ನ ಚೆನ್ನೈ ಸೂಪರ್‌ ಕಿಂಗ್ಸ್‌ ಬ್ಯಾಟಿಂಗ್‌ ಮಾಡಿ, ಆಯುಷ್‌ ಮಾತ್ರೆ 20 ಎಸೆತಗಳಲ್ಲಿ 43 ರನ್‌, ಡೆವೊನ್‌ ಕಾನ್ವೇ 8 ಎಸೆತಗಳಲ್ಲಿ 10 ರನ್‌, ರವಿಚಂದ್ರನ್‌ ಅಶ್ವಿನ್‌ 8 ಎಸೆತಗಳಲ್ಲಿ 13 ರನ್‌, ಡೆವಾಲ್ಡ್‌ ಬ್ರೆವಿಸ್‌ 25 ಎಸೆತಗಳಲ್ಲಿ 42 ರನ್‌, ಶಿವಂ ದುಬೆ 32 ಎಸೆತಗಳಲ್ಲಿ 39 ರನ್‌, ಎಂಎಸ್‌ ಧೋನಿ 17 ಎಸೆತಗಳಲ್ಲಿ 16 ರನ್‌ ಗಳಿಸಿದರು. ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಳ್ಳುವ ಮೂಲಕ 187 ಗಳಿಸಿದರು.

    ರಾಜಸ್ಥಾನ ಪರ ಬೌಲಿಂಗ್‌ ಮಾಡಿದ ಯುದ್ವೀರ್‌ ಸಿಂಗ್‌ ಹಾಗೂ ಆಕಾಶ್‌ ಮಧ್ವಾಲ್‌ ತಲಾ 3 ವಿಕೆಟ್‌ ಪಡೆದರೆ, ತುಷಾರ್‌ ಸಿಂಗ್‌, ವನಿಂದು ಹಸರಂಗ ತಲಾ ಒಂದೊಂದು ವಿಕೆಟ್‌ ಪಡೆದುಕೊಂಡರು. ಈಗಾಗಲೇ ಪ್ಲೇಆಫ್‌ನಿಂದ ಹೊರಬಿದ್ದಿರುವ ಚೆನ್ನೈ ತಂಡ ಗೆಲುವು ಸಾಧಿಸಿದ್ದರೂ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿರಲಿಲ್ಲ.ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆ ಕಾಟ – ತವರಿನಲ್ಲಿ ನಡೆಯಬೇಕಿದ್ದ RCB ಕೊನೆಯ ಪಂದ್ಯ ಲಕ್ನೋಗೆ ಶಿಫ್ಟ್

  • ಯಶಸ್ವಿ, ವೈಭವ್‌ ಹೋರಾಟ ವ್ಯರ್ಥ, ಪಂಜಾಬ್‌ಗೆ 10 ರನ್‌ ರೋಚಕ ಜಯ – ಪ್ಲೇ ಆಫ್‌ಗೆ ಇನ್ನೂ ಹತ್ತಿರ!

    ಯಶಸ್ವಿ, ವೈಭವ್‌ ಹೋರಾಟ ವ್ಯರ್ಥ, ಪಂಜಾಬ್‌ಗೆ 10 ರನ್‌ ರೋಚಕ ಜಯ – ಪ್ಲೇ ಆಫ್‌ಗೆ ಇನ್ನೂ ಹತ್ತಿರ!

    ಜೈಪುರ್‌: ಯಶಸ್ವಿ ಜೈಸ್ವಾಲ್‌, ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಆರಂಭದ ಹೊರತಾಗಿಯೂ ರಾಜಸ್ಥಾನ್‌ ರಾಯಲ್ಸ್‌ 10 ರನ್‌ಗಳ ವಿರೋಚಿತ ಸೋಲು ಕಂಡಿದೆ. ರಾಜಸ್ಥಾನ್‌ ವಿರುದ್ಧ ಗೆದ್ದ ಪಂಜಾಬ್‌ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಜಿಗಿದಿದ್ದು, ಪ್ಲೇ ಆಫ್‌ಗೆ ಇನ್ನೂ ಹತ್ತಿರವಾಗಿದೆ.

    ಅಂಕಪಟ್ಟಿಯಲ್ಲಿ 17 ಅಂಕ ಗಳಿಸಿರುವ ಆರ್‌ಸಿಬಿ +0.482 ನೆಟ್‌ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಂಜಾಬ್‌ ಕಿಂಗ್ಸ್‌ 17 ಅಂಕ ಗಳಿಸಿದ್ದರೂ +0.389 ನೆಟ್‌ರನ್‌ರೇಟ್‌ನೊಂದಿಗೆ 2ನೇ ಸ್ಥಾನ ಕಾಯ್ದುಕೊಂಡಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ 5 ವಿಕೆಟ್‌ ನಷ್ಟಕ್ಕೆ 219 ರನ್‌ ಗಳಿಸಿತ್ತು. 220 ರನ್‌ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್‌ ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಸ್ಫೋಟಕ ಅರ್ಧಶತಕ ಜೊತೆಯಾ:
    ರಾಜಸ್ಥಾನ್‌ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ವೈಭವ್‌ ಸೂರ್ಯವಂಶಿ ಹಾಗೂ ಯಶಸ್ವಿ ಜೈಸ್ವಾಲ್‌ ಸ್ಪೋಟಕ ಪ್ರದರ್ಶನ ನೀಡಿದ್ದರು. ಮೊದಲ ಓವರ್‌ನಲ್ಲೇ ಯಶಸ್ವಿ 22 ರನ್‌ ಚಚ್ಚಿದ್ದರು. ಇನ್ನೂ ಮೊದಲ ವಿಕೆಟ್‌ಗೆ ಈ ಜೋಡಿ 29 ಎಸೆತಗಳಲ್ಲಿ ಸ್ಫೋಟಕ 76 ರನ್‌ ಜೊತೆಯಾಟ ನೀಡಿತ್ತು. ಈ ವೇಳೆ ವೈಭವ್‌ 15 ಎಸೆತಗಳಲ್ಲಿ 40 ರನ್‌ (4 ಸಿಕ್ಸರ್‌, 4 ಬೌಂಡರಿ) ಚಚ್ಚಿ ಔಟಾದರು. ಈ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್‌ 25 ಎಸೆತಗಳಲ್ಲಿ 50 ರನ್‌ (1 ಸಿಕ್ಸರ್‌, 9 ಬೌಂಡರಿ) ಗಳಿಸಿ ಔಟಾದರು.

    ಇವರಿಬ್ಬರ ವಿಕೆಟ್‌ ಬೀಳುತ್ತಿದ್ದಂತೆ ಒಂದೆಡೆ ರನ್‌ ವೇಗ ಕಡಿತಗೊಂಡರೆ ಮತ್ತೊಂದೆಡೆ ಪ್ರಮುಖ ವಿಕೆಟ್‌ ಬೀಳುತ್ತಾ ಸಾಗಿತು. ಮಧ್ಯಮ ಕ್ರಮಾಂಕದಲ್ಲಿ ಧ್ರುವ್‌ ಜುರೆಲ್‌ ಅವರ ಅರ್ಧಶತಕದ (53 ರನ್‌) ಹೋರಾಟ ವ್ಯರ್ಥವಾಯಿತು. ಅಂತಿಮವಾಗಿ ರಾಜಸ್ಥಾನ್‌ 7 ವಿಕೆಟ್‌ಗೆ 209 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ಇದಕ್ಕೂ ಮುನ್ನ ಬ್ಯಾಟ್‌ ಮಾಡಿದ್ದ ಪಂಜಾಬ್‌ ಪರ ನೇಹಾಲ್‌ ವಧೇರಾ 70 ರನ್‌ (37 ಎಸೆತ, 5 ಸಿಕ್ಸರ್‌, 5 ಬೌಂಡರಿ), ಶಶಾಂಕ್‌ ಸಿಂಗ್‌ (30 ಎಸೆತ, 3 ಸಿಕ್ಸರ್‌, 5 ಬೌಂಡರಿ), ಶ್ರೇಯಸ್‌ ಅಯ್ಯರ್‌ 30 ರನ್‌, ಪ್ರಭ್‌ ಸಿಮ್ರನ್‌, ಒಮರ್ಝೈ ತಲಾ 21 ರನ್‌, ಪ್ರಿಯಾಂಶ್‌ ಆರ್ಯ 9 ರನ್‌ ಗಳಿಸಿದ್ರೆ ಮಿಚೆಲ್ ಓವನ್ ಶೂನ್ಯ ಸುತ್ತಿದರು.

  • ರೋಚಕ ಪಂದ್ಯದಲ್ಲಿ ಕೆಕೆಆರ್‌ಗೆ 1 ರನ್‌ ಜಯ, ಪ್ಲೇ ಆಫ್‌ ಕನಸು ಜೀವಂತ – ಹೋರಾಡಿ ಸೋತ ರಾಜಸ್ಥಾನ್‌

    ರೋಚಕ ಪಂದ್ಯದಲ್ಲಿ ಕೆಕೆಆರ್‌ಗೆ 1 ರನ್‌ ಜಯ, ಪ್ಲೇ ಆಫ್‌ ಕನಸು ಜೀವಂತ – ಹೋರಾಡಿ ಸೋತ ರಾಜಸ್ಥಾನ್‌

    ಕೋಲ್ಕತ್ತಾ: ಕೊನೆಯವರೆಗೂ ಜಿದ್ದಾಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವು ರಾಜಸ್ಥಾನ್‌ ರಾಯಲ್ಸ್‌ ವಿರುದ್ಧ 1 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 11 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿರುವ ಕೆಕೆಆರ್‌ 11 ಅಂಕಗಳೊಂದಿಗೆ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿಕೊಂಡಿದೆ.

    ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್‌ ಕಳೆದುಕೊಂಡು ರಾಜಸ್ಥಾನ್​​ ರಾಯಲ್ಸ್‌ಗೆ 207 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಆರ್‌ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

    ರಾಜಸ್ಥಾನದ ಪರ ರಿಯಾನ್ ಪರಾಗ್ 45 ಎಸೆತಗಳಲ್ಲಿ 6 ಬೌಂಡರಿ, 8 ಸಿಕ್ಸರ್‌ ಸಿಡಿಸಿ 95 ರನ್‌ ಕಲೆ ಹಾಕಿದರು. ಯಶಸ್ವಿ ಜೈಸ್ವಾಲ್‌ 21 ಎಸೆತಗಳಲ್ಲಿ 1 ಸಿಕ್ಸರ್‌ 5 ಬೌಂಡರಿ ನೆರವಿನಿಂದ 34 ರನ್‌, ಶಿಮ್ರಾನ್ ಹೆಟ್ಮೆಯರ್ 23 ಎಸೆತಗಲ್ಲಿ 29 ರನ್‌, ಶುಭಂ ದುಬೆ 14 ಎಸೆತಗಳಲ್ಲಿ 25 ರನ್‌ ಕಲೆ ಹಾಕಿದರು.

    ಕೆಕೆಆರ್‌ ಪರ ವರುಣ್ ಚಕ್ರವರ್ತಿ 2, ಹರ್ಷಿತ್ ರಾಣಾ 2, ಮೊಯಿನ್ ಅಲಿ 2, ವೈಭವ್ ಅರೋರಾ 1 ವಿಕೆಟ್‌ ಕಬಳಿಸಿದರು.

    ಕೆಕೆಆರ್ ಪರ ಆ್ಯಂಡ್ರೆ ರಸೆಲ್ 25 ಎಸೆತಗಳಲ್ಲಿ ಅಜೇಯ 57 ರನ್​ ಗಳಿಸಿ ಬೃಹತ್ ಮೊತ್ತಕ್ಕೆ ನೆರವಾದರು. ಅಜಿಂಕ್ಯ ರಹಾನೆ 30,ಅಂಗ್​​ಕ್ರಿಸ್​ ರಘುವಂಶಿ 44, ರಹ್ಮನುಲ್ಹಾ ಗುರ್ಬಜ್​ 35 ರನ್​ ಗಳಿಸಿ ತಂಡದ ಮೊತ್ತ ಹೆಚ್ಚಿಸಿದರು.

    ಬ್ಯಾಟಿಂಗ್ ಆರಂಭಿಸಿದ ಕೆಕೆಆರ್ ಕೇವಲ 13 ರನ್​ಗಳಾಗುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಸುನಿಲ್ ನರೈನ್ ಕೇವಲ ಯುಧ್ವೀರ್ ಸಿಂಗ್ ಬೌಲಿಂಗ್​​ನಲ್ಲಿ ಕ್ಲೀನ್ ಬೌಲ್ಡ್ ಆದರು. 2ನೇ ವಿಕೆಟ್​ಗೆ ರೆಹ್ಮನುಲ್ಲಾ ಗುರ್ಬಜ್ ಹಾಗೂ ಅಜಿಂಕ್ಯ ರಹಾನೆ 56 ರನ್​ಗಳಿಸಿದರು. ಗುರ್ಬಜ್ 25 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ 35 ರನ್​ಗಳಿಸಿ ತೀಕ್ಷಣ ಬೌಲಿಂಗ್​​ನಲ್ಲಿ ಹೆಟ್ಮೇಯರ್​ಗೆ ಕ್ಯಾಚ್ ನೀಡಿದರು. ನಂತರ ರಹಾನೆ ಜೊತೆಗೂಡಿದ ರಘವಂಶಿ ನಿಧಾನವಾಗಿ ವಿಕೆಟ್ ಉಳಿಸಿಕೊಂಡು 31 ಎಸೆತಗಳಲ್ಲಿ 42 ರನ್​ಗಳ ಜೊತೆಯಾಟ ಆಡಿದರು.

    ರಹಾನೆ 24 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ 30 ರನ್​ಗಳಿಸಿದರೆ, ರಘವಂಶಿ 31 ಎಸೆತಗಳಲ್ಲಿ 5 ಬೌಂಡರಿ ಸಹಿತ 44 ರನ್​ಗಳಿಸಿದರು. ರಘುವಂಶಿ ರಸೆಲ್ ಜೊತೆಗೆ 61 ರನ್​ಗಳ ಜೊತೆಯಾಟ ಆಡಿದರು.

    ಆರ್‌ಆರ್‌ ಪರ ಜೋಫ್ರಾ ಆರ್ಚರ್, ಯುದ್ವೀರ್ ಸಿಂಗ್, ಮಹೇಶ್ ತೀಕ್ಷಣ, ರಿಯಾನ್ ಪರಾಗ್ ತಲಾ ಒಂದೊಂದು ವಿಕೆಟ್‌ ಕಬಳಿಸಿದರು.

  • IPL 2025 | ಒಂದೇ ಒಂದು ತೂಫಾನ್‌ ಶತಕ – ವೈಭವ್‌ಗೆ 10 ಲಕ್ಷ ರೂ. ಬಹುಮಾನ!

    IPL 2025 | ಒಂದೇ ಒಂದು ತೂಫಾನ್‌ ಶತಕ – ವೈಭವ್‌ಗೆ 10 ಲಕ್ಷ ರೂ. ಬಹುಮಾನ!

    – ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಇತಿಹಾಸ ನಿರ್ಮಿಸಿದ 14ರ ಬಾಲಕ

    ಜೈಪುರ: ತನ್ನ ಚೊಚ್ಚಲ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲೇ (IPL 20225) ಸ್ಫೋಟಕ ಶತಕ ಸಿಡಿಸಿದ ಕ್ರೀಡಾತಾರೆ ವೈಭವ್‌ ಸೂರ್ಯವಂಶಿಗೆ (Vaibhav Suryavanshi) ಬಿಹಾರ ರಾಜ್ಯ ಸರ್ಕಾರ ಬಂಪರ್‌ ಬಹುಮಾನ ನೀಡಿ ಘೋಷಿಸಿದೆ.

    ಶತಕ ಬಾರಿಸಿದ ವೈಭವ್‌ ಸೂರ್ಯವಂಶಿಗೆ ಸಿಎಂ ನಿತೀಶ್‌ ಕುಮಾರ್‌ (Nitish Kumar) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಇದೇ ವೇಳೆ ಬಿಹಾರ ರಾಜ್ಯ ಸರ್ಕಾರದಿಂದ 10 ಲಕ್ಷ ರೂ. ಬಹುಮಾನವನ್ನೂ ಘೋಷಿಸಿದರು. ಇದನ್ನೂ ಓದಿ: ʻವೈಭವ’ ಶತಕ – ತನ್ನ ಚೊಚ್ಚಲ ಐಪಿಎಲ್‌ನಲ್ಲೇ ಇತಿಹಾಸ ನಿರ್ಮಿಸಿದ 14ರ ಬಾಲಕ

    ವೈಭವ್‌ ಸೂರ್ಯವಂಶಿಗೆ ಅಭಿನಂದನೆ ತಿಳಿಸಿದರು. ಕಿರಿಯ ವಯಸ್ಸಿನಲ್ಲೇ ಅವರ ಪ್ರತಿಭೆ ಮುಂದೆ ಭಾರತೀಯ ಕ್ರಿಕೆಟ್‌ಗೆ ಹೊಸ ಭರವಸೆಯಾಗಿದೆ. ಇಂದು ಇಡೀ ದೇಶವೇ ಅವನ ಬಗ್ಗೆ ಹೆಮ್ಮೆ ಪಡುತ್ತಿದೆ. 2024ರಲ್ಲಿ ನಾನು ವೈಭವ್‌ ಮತ್ತು ಅವರ ತಂದೆಯನ್ನ ಭೇಟಿಯಾಗಿದ್ದೆ, ಆಗಲೇ ನಾನು ಅವರ ಭವಿಷ್ಯ ಉಜ್ವಲವಾಗಿರಲಿದೆ ಎಂದು ಹಾರೈಸಿದ್ದೆ. ಹಾಗೆಯೇ ಇಂದು ಯಶಸ್ಸು ಕಾಣುತ್ತಿದ್ದಾರೆ. ಐಪಿಎಲ್‌ನಲ್ಲಿ ಅವರ ಅತ್ಯುತ್ತಮ ಪ್ರದರ್ಶನದ ಬಳಿಕ ನಾನು ಅವರಿಗೆ ಫೋನ್‌ ಮಾಡಿ ಮಾತನಾಡಿದ್ದೆ. ವೈಭವ್ ಭವಿಷ್ಯದಲ್ಲಿ ಭಾರತೀಯ ಕ್ರಿಕೆಟ್‌ ತಂಡದಲ್ಲಿ ಇನ್ನಷ್ಟು ದಾಖಲೆಗಳನ್ನು ಸೃಷ್ಟಿಸಿ ದೇಶಕ್ಕೆ ಕೀರ್ತಿ ತರಲೆಂದು ಹಾರೈಸುತ್ತೇನೆ ಎಂದು ಶುಭಕೋರಿದರು.  ಇದನ್ನೂ ಓದಿ: ಐಪಿಎಲ್‌ಗಾಗಿ ಮಟನ್‌, ಪಿಜ್ಜಾ ತ್ಯಜಿಸಿದ್ದ ವೈಭವ್‌ – ಡಯಟ್‌ ಸೀಕ್ರೆಟ್‌ ರಿವೀಲ್‌ ಮಾಡಿದ ಕೋಚ್‌

    ವೇಗದ ಶತಕ ಸಿಡಿಸಿದ ಮೊದಲ ಭಾರತೀಯ
    ತನ್ನ ಚೊಚ್ಚಲ ಪಂದ್ಯದಲ್ಲೇ ಸಿಕ್ಸರ್ ಸಿಡಿಸುವ ಮೂಲಕ ಐಪಿಎಲ್‌ಗೆ ಪದಾರ್ಪಣೆ ಮಾಡಿದ ವೈಭವ್ ಸೂರ್ಯವಂಶಿ 3ನೇ ಪಂದ್ಯದಲ್ಲೇ ಸ್ಫೋಟಕ ಶತಕ ಸಿಡಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಗುಜರಾತ್ ಟೈಟಾನ್ಸ್ (Gujarat Titans) ವಿರುದ್ಧ ನಡೆದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು 35 ಎಸೆತಗಳಲ್ಲಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ವೇಗದ ಶತಕ ಬಾರಿಸಿದ 2ನೇ ಆಟಗಾರ ಹಾಗೂ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇಡೀ ಐಪಿಎಲ್ ಇತಿಹಾಸದಲ್ಲೇ ಅತಿ ವೇಗದ ಶತಕ ಸಿಡಿಸಿದ ಖ್ಯಾತಿ ಕ್ರಿಸ್ ಗೇಲ್ (30 ಎಸೆತ) ಅವರ ಹೆಸರಿನಲ್ಲಿದೆ. ಇದೀಗ 35 ಎಸೆತಗಳಲ್ಲಿ ಶತಕ ಬಾರಿಸುವ ಮೂಲಕ ವೈಭವ್ ಸೂರ್ಯವಂಶಿ 2ನೇ ಸ್ಥಾನಕ್ಕೆ ಜಿಗಿದಿದ್ದಾರೆ. ಉಳಿದಂತೆ ಯೂಸೂಫ್ ಪಠಾಣ್ (37 ಎಸೆತ), ಡೇವಿಡ್ ಮಿಲ್ಲರ್ (38 ಎಸೆತ), ಟ್ರಾವಿಸ್ ಹೆಡ್ (39 ಎಸೆತ) ಕಡಿಮೆ ಎಸೆತಗಳಲ್ಲಿ ಶತಕ ಸಿಡಿಸಿದ ಟಾಪ್-5 ಆಟಗಾರ ಪಟ್ಟಿಯಲ್ಲಿದ್ದಾರೆ.

    ವೇಗದ ಫಿಫ್ಟಿ:
    ಇನ್ನೂ ವೈಭವ್ ಈ ಆವೃತ್ತಿಯಲ್ಲಿ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಬರೆದಿದ್ದಾರೆ. ಜೊತೆಗೆ ಅತೀ ಕಿರಿಯ ವಯಸ್ಸಿಗೆ ಈ ಸಾಧನೆ ಮಾಡಿದ ಮೊದಲಿಗನಾಗಿದ್ದಾರೆ. ಇಡೀ ಐಪಿಎಲ್‌ನಲ್ಲೇ ಅತೀ ವೇಗದ ಅರ್ಧಶತಕ ಸಿಡಿಸಿದ ದಾಖಲೆ ಯಶಸ್ವಿ ಜೈಸ್ವಾಲ್ ಹೆಸರಲ್ಲಿದೆ. 2023ರ ಆವೃತ್ತಿಯಲ್ಲಿ ಜೈಸ್ವಾಲ್ ಕೆಕೆಆರ್ ವಿರುದ್ಧ ಕೇವಲ 13 ಎಸೆತಗಳಲ್ಲಿ ಫಿಫ್ಟಿ ಬಾರಿಸಿದ್ದರು. 2018ರಲ್ಲಿ ಕೆ.ಎಲ್ ರಾಹುಲ್, 2022ರಲ್ಲಿ ಪ್ಯಾಟ್ ಕಮ್ಮಿನ್ಸ್ (ಅಂದು ಕೆಕೆಆರ್) ಮುಂಬೈ ವಿರುದ್ಧ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಕ್ರಮವಾಗಿ 2, 3ನೇ ಸ್ಥಾನಗಳಲ್ಲಿದ್ದಾರೆ. ಇದನ್ನೂ ಓದಿ: ಸ್ಪಿನ್‌ ಮಾಂತ್ರಿಕ ಅಶ್ವಿನ್‌, ಒಲಿಂಪಿಕ್ಸ್‌ ಪದಕ ವಿಜೇತ ಶ್ರೀಜೇಶ್‌ಗೆ ಪದ್ಮ ಪ್ರಶಸ್ತಿ ಗೌರವ 

    ಈ ಆವೃತ್ತಿಯಲ್ಲಿ ವೇಗದ ಫಿಫ್ಟಿ ಬಾರಿಸಿದ ಆಟಗಾರರು
    ವೈಭವ್ (ರಾಜಸ್ಥಾನ್) – 50 ರನ್ – 17 ಎಸೆತ
    ಪೂರನ್ (ಎಲ್‌ಎಸ್‌ಜಿ) – 50 ರನ್, 18 ಎಸೆತ
    ಮಾರ್ಷ್ (ಎಲ್‌ಎಸ್‌ಜಿ) – 50 ರನ್, 21 ಎಸೆತ
    ಹೆಡ್ (ಎಸ್‌ಆರ್‌ಹೆಚ್) – 50 ರನ್, 21 ಎಸೆತ

  • ಐಪಿಎಲ್‌ಗಾಗಿ ಮಟನ್‌, ಪಿಜ್ಜಾ ತ್ಯಜಿಸಿದ್ದ ವೈಭವ್‌ – ಡಯಟ್‌ ಸೀಕ್ರೆಟ್‌ ರಿವೀಲ್‌ ಮಾಡಿದ ಕೋಚ್‌

    ಐಪಿಎಲ್‌ಗಾಗಿ ಮಟನ್‌, ಪಿಜ್ಜಾ ತ್ಯಜಿಸಿದ್ದ ವೈಭವ್‌ – ಡಯಟ್‌ ಸೀಕ್ರೆಟ್‌ ರಿವೀಲ್‌ ಮಾಡಿದ ಕೋಚ್‌

    ಪಾಟ್ನಾ: ಸದ್ಯ ಕ್ರಿಕೆಟ್‌ ಪ್ರಿಯರ ಬಾಯಲ್ಲೀಗ 14ರ ಬಾಲಕ ವೈಭವ್‌ ಸೂರ್ಯವಂಶಿಯದ್ದೇ (Vaibhav Suryavanshi) ಮಾತು. ವೈಭವ್‌ ಬ್ಯಾಟ್‌ನಿಂದ ಹೊಮ್ಮಿದ ಸಿಡಿಲಬ್ಬರದ ಶತಕ ರಾಜಸ್ಥಾನ ರಾಯಲ್ಸ್‌ (Rajasthan Royals) ತಂಡಕ್ಕೆ ನಿರ್ಣಾಯಕ ಪಂದ್ಯದಲ್ಲಿ ಭರ್ಜರಿ ಗೆಲುವು ತಂದುಕೊಟ್ಟಿತು. ಇದರೊಂದಿಗೆ ಸತತ 5 ಸೋಲುಗಳ ನಂತರ ಗೆಲುವಿನ ಹಾದಿಗೆ ಮರಳಿದ ರಾಯಲ್ಸ್‌ ತನ್ನ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿದೆ.

    ಲಕ್ನೋ ಸೂಪರ್‌ ಜೈಂಟ್ಸ್‌ ವಿರುದ್ಧದ ಪಂದ್ಯದಲ್ಲಿ ಶಾರ್ದೂಲ್‌ ಠಾಕೂರ್‌ ಬೌಲಿಂಗ್‌ಗೆ ಮೊದಲ ಎಸೆತದಲ್ಲೇ ಸಿಕ್ಸರ್‌ ಸಿಡಿಸುವ ಮೂಲಕ ವೂಭವ್‌ ಐಪಿಎಲ್‌ಗೆ ಗ್ರ್ಯಾಂಡ್‌ ಎಂಟ್ರಿ ಕೊಟ್ಟಿದ್ದರು. ಆದ್ರೆ ನಿನ್ನೆ ಪಂದ್ಯದಲ್ಲಿ ವೈಭವ್‌ ಸೂರ್ಯವಂಶಿ ಗುಜರಾತ್‌ ಬೌಲರ್‌ಗಳನ್ನು ದಂಡಿಸಿದ ರೀತಿ ಕಂಡು ಇಡೀ ಕ್ರಿಕೆಟ್‌ (Cricket) ಜಗತ್ತು ನಿಬ್ಬೆರಗಾಗಿದೆ. ಹೀಗಾಗಿ ಕ್ರಿಕೆಟ್‌ ತಾರೆಯನ್ನ ಯುವ ಆಟಗಾರರನ್ನು ಕೊಂಡಾಡುತ್ತಿದ್ದಾರೆ. ಈ ಮಧ್ಯೆ ಒಂದು ವಿಷಯವನ್ನು ಎಲ್ಲರೂ ಅರಿತುಕೊಳ್ಳಬೇಕಿದೆ. ಅದ್ಭುತ ಶತಕದ ಮೂಲಕ ವಿಶ್ವವಿಖ್ಯಾತಿ ಪಡೆದ ವೈಭವ್‌ ಡಯಟ್‌ ಚಾರ್ಟ್‌ ಹೇಗಿದೆ ಅನ್ನೋದನ್ನ ಅವರ ಕೋಚ್‌ ಮನೋಜ್ ಓಜಾ (Manoj Ojha) ತಿಳಿಸಿದ್ದಾರೆ.

    ಚಿಕನ್‌, ಮಟನ್‌ ಪ್ರಿಯ ವೈಭವ್‌
    ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಕೋಚ್‌ ಮನೋಜ್‌ ಓಜಾ, ವೈಭವ್‌ ಚಿಕ್ಕವನಾದ್ದರಿಂದ ಚಿಕನ್‌, ಮಟನ್‌ (Mutton), ಪಿಜ್ಜಾ ಅಂದ್ರೆ ಹೆಚ್ಚು ಪ್ರೀತಿ. ಎಷ್ಟು ಕೊಟ್ಟರೂ ಮುಗಿಸಿಬಿಡುತ್ತಿದ್ದಮ, ಅದಕ್ಕಾಗಿ ಸ್ವಲ್ಪ ದಪ್ಪಗೆ ಕಾಣುತ್ತಾನೆ. ಆದ್ರೆ ಐಪಿಎಲ್‌ ಹತ್ತಿರ ಬರುತ್ತಿದ್ದಂತೆ ಮಟನ್‌, ಪಿಜ್ಜಾ (Pizza) ತಿನ್ನೋದನ್ನ ತ್ಯಜಿಸಿದ್ದ. ಅವನಿಗಾಗಿ ಡಯಟ್‌ ಚಾರ್ಚ್‌ ಕೂಡ ಮಾಡಲಾಗಿತ್ತು ಎಂದು ಓಜಾ ಹೇಳಿದ್ದಾರೆ.

    ಹೀಗೆ ಹೊಡೀತಾನೆ ಅಂತ ಗೊತ್ತಿರಲಿಲ್ಲ
    ಇನ್ನೂ ಮನೋಜ್ ಓಜಾ ತಮ್ಮ ಶಿಷ್ಯನ ಆಟ ಕಂಡು ಚಕಿತಗೊಂಡಿದ್ದಾರೆ. ಅವನು ಹೊಡೆಯುತ್ತಾನೆ ಅಂದುಕೊಂಡಿದ್ದೆ, ಆದ್ರೆ ಹೀಗೆ ಹೊಡೆಯುತ್ತಾನೆ ಎಂದು ನನಗೆ ಗೊತ್ತಿರಲಿಲ್ಲ. ಒಟ್ನಲ್ಲಿ ಏನೋ ದೊಡ್ಡದು ನಡೆಯುತ್ತದೆ ಅಂತ ಮಾತ್ರ ಗೊತ್ತಿತ್ತು. ಅವನಿನ್ನೂ 14 ವರ್ಷದ ಹುಡುಗ, ದೇವರು ಅವನಿಗೆ ಅಪಾರ ಪ್ರತಿಭೆ ನೀಡಿದ್ದಾನೆ. ಅವನ ವೃತ್ತಿಜೀವನದಲ್ಲಿ ನಾನೂ ಭಾಗಿಯಾಗಲು ಸಾಧ್ಯವಾಗಿರುವುದಕ್ಕೆ ನಿಜವಾಗಿಯೂ ಕೃತಜ್ಞನಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

  • ವೈಭವ್‌ ʻಯಶಸ್ವಿʼ ಶತಕ – 14ರ ಬಾಲಕನ ಆಟಕ್ಕೆ ಗುಜರಾತ್‌ ಧೂಳಿಪಟ, ರಾಜಸ್ಥಾನ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    ವೈಭವ್‌ ʻಯಶಸ್ವಿʼ ಶತಕ – 14ರ ಬಾಲಕನ ಆಟಕ್ಕೆ ಗುಜರಾತ್‌ ಧೂಳಿಪಟ, ರಾಜಸ್ಥಾನ್‌ಗೆ 8 ವಿಕೆಟ್‌ಗಳ ಭರ್ಜರಿ ಜಯ

    ಜೈಪುರ: 14ರ ಬಾಲಕ ವೈಭವ್‌ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್‌ ಸ್ಫೋಟಕ ಶತಕದ ಜೊತೆಯಾಟ ನೆರವಿನಿಂದ ರಾಜಸ್ಥಾನ್‌ ರಾಯಲ್ಸ್‌ ತಂಡ ಗುಜರಾತ್‌ ಟೈಟಾನ್ಸ್‌ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 9 ಪಂದ್ಯಗಳಲ್ಲಿ 6ರಲ್ಲಿ ಗೆಲುವು ಸಾಧಿಸಿರುವ ಗುಜರಾತ್‌ ಟೈಟಾನ್ಸ್‌ 12 ಅಂಕಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.

    ಇಲ್ಲಿನ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ತಂಡ ಬೌಲಿಂಗ್ ಆಯ್ದುಕೊಂಡಿತು. ಮೊದಲಿಗೆ ಬ್ಯಾಟ್ ಬೀಸಿದ ಗುಜರಾತ್ ತಂಡ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿತು. ಗೆಲುವಿಗೆ 210 ರನ್‌ಗಳ ಗುರಿ ಪಡೆದ ರಾಜಸ್ಥಾನ್‌ 15.5‌ ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 212 ರನ್‌ ಬಾರಿಸಿ ಗೆಲುವಿನ ನಗೆ ಬೀರಿತು.

    ಆರಂಭಿಕ ಆಟಗಾರರಾಗಿ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಅಬ್ಬರದ ಆಟವಾಡಿದರು. ಮೊದಲ ವಿಕೆಟ್‌ಗೆ ಈ ಜೋಡಿ 71 ಎಸೆತಗಳಲ್ಲಿ ಸ್ಫೋಟಕ 166 ರನ್‌ಗಳ ಜೊತೆಯಾಟ ನೀಡಿತು. 14 ವರ್ಷದ ವೈಭವ್ ಕೇವಲ 35 ಬಾಲ್‌ಗಳಿಗೆ ಸೆಂಚುರಿ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಯಶಸ್ವಿ ಜೈಸ್ವಾಲ್ 40 ಬಾಲ್‌ಗಳಿಗೆ 70 ರನ್ ಗಳಿಸಿದರೇ, ನಾಯಕ ರಿಯಾನ್ ಪರಾಗ್ 15 ಎಸೆತಗಳಿಗೆ 32 ರನ್ ಗಳಿಸಿ ಅಜೇಯರಾಗಿ ಉಳಿದರು.

    ಗುಜರಾತ್ ಪರ ಆರಂಭಿಕ ಆಟಗಾರರಾಗಿ ನಾಯಕ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಫೀಲ್ಡಿಗಿಳಿದು 62 ಬಾಲ್‌ಗಳಿಗೆ 93 ರನ್ ಗಳಿಸಿ ಉತ್ತಮ ಜೊತೆಯಾಟವಾಡಿದರು. ಬಳಿಕ ಸುದರ್ಶನ್ 30 ಎಸೆತಗಳಿಗೆ 39 ರನ್‌ಗಳಿಸಿ ಔಟಾದರು. ಬಳಿಕ ಜೊತೆಯಾದ ಗಿಲ್ ಹಾಗೂ ಜೋಶ್ ಬಟ್ಲರ್ 38 ಎಸೆತಗಳಿಗೆ 74 ರನ್‌ಗಳ ಕಲೆ ಹಾಕಿ ತಂಡವನ್ನು ಮುನ್ನಡೆಸಿದರು. ನಾಯಕ ಗಿಲ್ 50 ಬಾಲ್‌ಗಳಲ್ಲಿ 4 ಸಿಕ್ಸರ್ ಹಾಗೂ 5 ಫೋರ್ ಸಿಡಿಸಿ 84 ರನ್ ಗಳಿಸಿ ಶತಕದ ಹೊಸ್ತಿಲಲ್ಲಿ ವಿಕೆಟ್ ಒಪ್ಪಿಸಿದರು. ಬಟ್ಲರ್ 26 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಅಜೇಯರಾಗಿ ಉಳಿದರು.

    ರಾಜಸ್ಥಾನ ಪರ ತೀಕ್ಷಣ 2 ವಿಕೆಟ್ ಕಿತ್ತರೆ ಜೋಫ್ರಾ ಆರ್ಚರ್ ಮತ್ತು ಸಂದೀಪ್ ಶರ್ಮಾ ತಲಾ ಒಂದೊಂದು ವಿಕೆಟ್ ಪಡೆದರು.