Tag: Rajayoga

  • ‘ರಾಜಯೋಗ’ದ ಸಾಂಗ್ ಮೆಚ್ಚಿಕೊಂಡ ಯಂಗ್ ರೆಬಲ್ ಸ್ಟಾರ್

    ‘ರಾಜಯೋಗ’ದ ಸಾಂಗ್ ಮೆಚ್ಚಿಕೊಂಡ ಯಂಗ್ ರೆಬಲ್ ಸ್ಟಾರ್

    ಸ್ಯಾಂಡಲ್‌ವುಡ್‌ನ ಕಾಮಿಡಿ ಸ್ಟಾರ್ ಧರ್ಮಣ್ಣ ಕಡೂರು (Dharmanna Kaduru) ಅವರಿಗೀಗ ‘ರಾಜಯೋಗ’ (Rajayoga) ಶುರುವಾಗಿದೆ. ರಾಜಯೋಗ ಅರಂಭವಾದ ಮೇಲೆ ಕಾಮಿಡಿ ಸ್ಟಾರ್ ಆಗಿದ್ದ ಧರ್ಮಣ್ಣ ಇದೀಗ ಹೀರೋ ಆಗಿದ್ದಾರೆ. ಇದೆಲ್ಲ ನಿಜಕ್ಕೂ ರಾಜಯೋಗದ ಮಹಿಮೆನಾ ಅಂತ ಕೇಳಿದ್ರೆ ಹಂಡ್ರೆಡ್ ಪರ್ಸೆಂಟ್ ಹೌದು ಅಂತಾರೆ ಧರ್ಮಣ್ಣ. ಯಾಕೆಂದರೆ ಧರ್ಮಣ್ಣ ರಾಜಯೋಗ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜಯೋಗ ಪಕ್ಕಾ ಫ್ಯಾಮಿಲಿ ಎಂಟಟೈನರ್ ಸಿನಿಮಾ. ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿರುವ ರಾಜಯೋಗ ಚಿತ್ರದಿಂದ ಇದೀಗ ಮೊದಲ ಹಾಡು  (Song) ಬಿಡುಗಡೆಯಾಗಿದೆ. ರೊಮ್ಯಾಂಟಿಕ್ ಹಾಡು ಇದಾಗಿದ್ದು ‘ಬಿ ಎ ಗಂಡು….’ ಎನ್ನುವ ಸಾಲಿನಿಂದ ಪ್ರಾರಂಭವಾಗುತ್ತದೆ.

    ಧರ್ಮಣ್ಣ ಅಭಿನಯದ ಈ ಸಿನಿಮಾದ ಮೊದಲ ಹಾಡನ್ನು ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ (Abhishek Ambarish) ರಿಲೀಸ್ ಮಾಡಿದ್ದಾರೆ. ಹಾಡನ್ನು ನೋಡಿ ಇಷ್ಟಪಟ್ಟಿರುವ ಅಭಿಷೇಕ್ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ. ಇನ್ನೂ ನವ ಜೋಡಿಗಳು ಈ ಹಾಡನ್ನ ನೋಡಲೆ ಬೇಕು ಎಂದು ಹೇಳಿದ್ದಾರೆ.

    ರಾಜಯೋಗ ಚಿತ್ರಕ್ಕೆ ಲಿಂಗರಾಜ ಉಚ್ಚಂಗಿ ದುರ್ಗ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದ ಹಾಡುಗಳಿಗೆ ಅಕ್ಷಯ್ ಎಸ್ ರಿಷಬ್  ಸಂಗೀತ ನೀಡಿದ್ದಾರೆ. ಸದ್ಯ ರಿಲೀಸ್ ಆಗಿರುವ ‘ಬಿ ಎಂ ಗಂಡು…’ ಹಾಡಿಗೆ ಲಿಂಗರಾಜು ಅವರೇ ಸಾಹಿತ್ಯ ರಚಿಸಿದ್ದು ಖ್ಯಾತ ಸಂಗೀತ ನಿರ್ದೇಶಕ ಅನೂಪ್ ಸೀಳಿನ್ ಮತ್ತು ಗಾಯಕಿ ಅನನ್ಯಾ ಭಟ್ ಧ್ವನಿ ನೀಡಿದ್ದಾರೆ. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ರಾಜಯೋಗ ಇದೀಗ ಹಾಡಿನ ಮೂಲಕವು ಅಭಿಮಾನಿಗಳ ಹೃದಯ ಗೆಲ್ಲುತ್ತಿದೆ.

    ಅಂದಹಾಗೆ ನಿರ್ದೇಶಕ ಲಿಂಗರಾಜು ಅವರಿಗೆ ಇದು ಮೊದಲ ಸಿನಿಮಾ. ಈ ಮೊದಲು ಕಿರುತೆರೆಯಲ್ಲಿ ಕೆಲಸ ಮಾಡಿದ್ದ ಲಿಂಗರಾಜು ಅವರು ರಾಜಯೋಗ ಸಿನಿಮಾ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗಿ ಸ್ಯಾಂಡ‌ವುಡ್‌ಗೆ ಎಂಟ್ರಿಕೊಡುತ್ತಿದ್ದಾರೆ. ಇನ್ನೂ ಈ ಸಿನಿಮಾದಲ್ಲಿ ಧರ್ಮಣ್ಣ ಬಿಟ್ಟರೆ ಉಳಿದವರೆಲ್ಲ ಹೊಸಬರು. ಧರ್ಮಣ್ಣ ಅವರಿಗೆ ನಾಯಕಿಯಾಗಿ ನಿರೀಕ್ಷಾ ರಾವ್ ಕಾಣಿಸಿಕೊಂಡಿದ್ದಾರೆ.  ನಿರೀಕ್ಷಾ ಮೊದಲ ಬಾರಿಗೆ ಕನ್ನಡ ಸಿನಿಮಾದಲ್ಲಿ ನಟಿಸಿದ್ದು ಧರ್ಮಣ್ಣ ಪತ್ನಿಯಾಗಿ ಮಿಂಚಿದ್ದಾರೆ.

    ಈ ಸಿನಿಮಾ ಶ್ರೀರಾಮ ರಕ್ಷಾ ಪ್ರೊಡಕ್ಷನ್‌ ಮೂಲಕ  ಕುಮಾರ ಕಂಠೀರವ ಅವರು ಬಂಡವಾಳ ಹೂಡಿದ್ದಾರೆ. ವಿಶೇಷ ಎಂದರೆ ಧರ್ಮಣ್ಣ ನಟನೆ ಜೊತೆಗೆ ಸಹ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ಇನ್ನೂ ಉಳಿದಂತೆ ದೀಕ್ಷಿತ್ ಕೃಷ್ಣ, ಪ್ರಭು, ಲಿಂಗರಾಜು, ನೀರಜ್ ಗೌಡ ಕೂಡ ಈ ಸಿನಿಮಾಗೆ ಬಂಡವಾಳ ಹಾಕಿದ್ದಾರೆ. ಸದ್ಯ ಟ್ರೈಲರ್ ಮತ್ತು ಹಾಡಿನ ಮೂಲಕ ಸದ್ದು ಮಾಡುತ್ತಿರುವ ರಾಜಯೋಗ ಸಿನಿಮಾ ಮುಂದಿನ ತಿಂಗಳು ಮೊದಲ ವಾರದಲ್ಲಿ ತೆರೆಗೆ ಬರಲು ಸಜ್ಜಾಗಿದೆ. ಧರ್ಮಣ್ಣ ಅವರ ರಾಜಯೋಗ ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಧರ್ಮಣ್ಣ ನಟನೆಯ ‘ರಾಜಯೋಗ’ ಟ್ರೈಲರ್ ರಿಲೀಸ್

    ಧರ್ಮಣ್ಣ ನಟನೆಯ ‘ರಾಜಯೋಗ’ ಟ್ರೈಲರ್ ರಿಲೀಸ್

    ಮಾನವನ ಜೀವನದಲ್ಲಿ ರಾಜಯೋಗ ಎಂಬ ಪದಕ್ಕೆ ಬಹಳ ಮಹತ್ವವಿದೆ. ರಾಜಯೋಗ  ಬಂತೆಂದರೆ ಮುಂದೆ ಆತನಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆಯಿದೆ. ಹಾಸ್ಯನಟ, ಪೋಷಕನಟ ಧರ್ಮಣ್ಣ (Dharmanna Kadoor) ನಾಯಕನಾಗಿ ನಟಿಸಿರುವ  ಚಲನಚಿತ್ರದ ಹೆಸರೂ ಸಹ  ರಾಜಯೋಗ (Rajayoga). ಈ ಚಿತ್ರದ ಟ್ರೈಲರ್ (Trailer) ಬಿಡುಗಡೆ ಕಾರ್ಯಕ್ರಮ  ಇತ್ತೀಚೆಗೆ ನಡೆಯಿತು. ವಿಶೇಷವಾಗಿ ಇಬ್ಬರು ಸಾಮಾನ್ಯ ಮಹಿಳೆಯರು ಈ ಟ್ರೈಲರ್ ಬಿಡುಗಡೆಗೊಳಿಸಿದರು.  ಲಿಂಗರಾಜ ಉಚ್ಚಂಗಿದುರ್ಗ  ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರವನ್ನು  ಶ್ರೀರಾಮರತ್ನ ಪ್ರೊಡಕ್ಷನ್ಸ್ ಅಡಿ  ಕುಮಾರ ಕಂಠೀರವ, ದೀಕ್ಷಿತ್ ಕೃಷ್ಣ, ಪ್ರಭು ಚಿಕ್ಕನಾಯ್ಕನಹಳ್ಳಿ, ಲಿಂಗರಾಜು ಕೆಎನ್, ಅರ್ಜುನ್ ಅಣತಿ ಅಲ್ಲದೆ ಧರ್ಮಣ್ಣ ಸಹೋದರ ಹೊನ್ನಪ್ಪ ಕಡೂರು ಈ  ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    ಈ ಸಂದರ್ಭದಲ್ಲಿ ನಿರ್ದೇಶಕ ಲಿಂಗರಾಜು (Lingaraja Uchchandidurga) ಮಾತನಾಡುತ್ತಾ, ‘ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಗ್ರಾಮೀಣ ಭಾಗದಲ್ಲಿ ನಡೆಯುವ ಕಥೆ. ನಾನೂ ಸಹ ಹಳ್ಳಿಯಿಂದ ಬಂದವನು.  ದೀಕ್ಷಿತ್ ಕೃಷ್ಣ, ಲಿಂಗರಾಜು ನನ್ನ ಸ್ನೇಹಿತರು, ಪ್ರಾಮಾಣಿಕವಾಗಿ ಕೆಲಸ ಮಾಡಿದರೆ ಒಂದಲ್ಲ ಒಂದು ದಿನ ರಾಜಯೋಗ ಬಂದೇ ಬರುತ್ತದೆ ಎನ್ನುವುದೇ ಈ ಚಿತ್ರದ ಕಾನ್ಸೆಪ್ಟ್.  ರಾಮ ರಾಮ ರೇ ಚಿತ್ರದಲ್ಲಿ ಧರ್ಮಣ್ಣ ಅವರ ಅಭಿನಯ ನೋಡಿ, ಈ ಚಿತ್ರಕ್ಕೆ  ಆಯ್ಕೆ  ಮಾಡಿದ್ದೇನೆ. ತಂದೆ, ಪತ್ನಿ, ಚಿಕ್ಕಪ್ಪ ದೊಡ್ಡಪ್ಪ ಹೀಗೆ ಎಲ್ಲಾ ಪಾತ್ರಗಳು ಅವರ ಸುತ್ತ ಬರುತ್ತವೆ. ತಂದೆ ಮಗನ ನಡುವೆ ನಡೆಯುವ ಕಥೆ. ಜೋತಿಷ್ಯ ಸುಳ್ಳಲ್ಲ, ಆದರೆ ಅದನ್ನು ಕೆಲವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಚಿತ್ರದ ಕೊನೆಯಲ್ಲಿ ಮಗನ ಪಾತ್ರದ ಮೂಲಕ ತಂದೆಗೆ ಬುದ್ದಿ ಕಲಿಸುವ ಕಥೆಯಿದೆ. ಸೀರಿಯಸ್ ವಿಷಯವನ್ನು ಹಾಸ್ಯದ ಮೂಲಕ ಹೇಳಲು ಪ್ರಯತ್ನಿಸಿದ್ದೇವೆ, ಪಾಸ್ಟ್, ಫ್ಯೂಚರ್ ಯೋಚಿಸದೆ, ಪ್ರೆಸೆಂಟ್ ಲೈಫ್ ಬಗ್ಗೆ ಗಮನ ಹರಿಸಿದರೆ  ನಮ್ಮ ಜೀವನ ಚೆನ್ನಾಗಿರುತ್ತದೆ ಎಂದು ಹೇಳುವ ಕಥೆ. 3 ಹಂತಗಳಲ್ಲಿ 45 ದಿನಗಳ ಕಾಲ  ಚಿತ್ರೀಕರಿಸಿದ್ದೇವೆ. ಸದ್ಯ ಚಿತ್ರದ ಡಿಐ ನಡೀತಿದೆ ಎಂದು ಹೇಳಿದರು.

    ನಾಯಕನಟ ಧರ್ಮಣ್ಣ ಮಾತನಾಡುತ್ತಾ, ನಾನಿಲ್ಲಿ ಕೂರಲು ಕಾರಣ ರಾಮಾ ರಾಮಾ ರೇ ತಂಡ. ಈ ಚಿತ್ರದಲ್ಲಿ ಕಥೆ, ನಿರ್ದೇಶಕ‌ ಇಬ್ಬರೂ ನಾಯಕರು. ನಾನೊಂದು ಪಾತ್ರ ಮಾಡಿದ್ದೇನೆ ಅಷ್ಟೇ. ಈ ಪಾತ್ರದಲ್ಲಿ ಕಾಮಿಡಿ, ಎಮೋಷನ್ ಎಲ್ಲಾ ಇದೆ. ಈ ಥರದ ಪಾತ್ರವನ್ನು ಹಿಂದೆಂದೂ ಮಾಡಿಲ್ಲ. ಗ್ರಾಮೀಣ ಭಾಗದಲ್ಲಿ ನಡೆಯೋ ಕಥೆಯಲ್ಲಿ ಸಂಬಂಧದ ಮೌಲ್ಯಗಳನ್ನು ಹಾಸ್ಯದ ಹಿನ್ನೆಲೆಯಲ್ಲಿ ಹೇಳಲು ಪ್ರಯತ್ನಿಸಿದ್ದೇವೆ. ಈ ಸಿನಿಮಾ ನೋಡುವಾಗ ಹಿರಿಯ ನಟರಾದ ಅನಂತನಾಗ್, ಶಶಿಕುಮಾರ್ ಖಂಡಿತ ನೆನಪಾಗ್ತಾರೆ. ಸದ್ಯದಲ್ಲೇ ನಿಮ್ಮ ಮುಂದೆ ಬರುತ್ತೇವೆ ಎಂದು ಹೇಳಿದರು.

     

    ಚಿತ್ರದ ನಾಯಕಿಯಾಗಿ ನಿರೀಕ್ಷಾ ರಾವ್ ನಟಿಸಿದ್ದಾರೆ. ಚಿತ್ರದಲ್ಲಿ 6 ಹಾಡುಗಳಿದ್ದು, ಅಕ್ಷಯ್ ರಿಶಭ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಷ್ಣುಪ್ರಸಾದ್ ಕ್ಯಾಮೆರಾವರ್ಕ್ ನಿಭಾಯಿಸಿದ್ದಾರೆ. ಬಿ.ಎಸ್.ಕೆಂಪರಾಜು ಅವರ ಸಂಕಲನ ಈ ಚಿತ್ರಕ್ಕಿದೆ. ನಾಗೇಂದ್ರ ಶಾ ನಾಯಕನ ತಂದೆಯ ಪಾತ್ರ ನಿರ್ವಹಿಸಿದ್ದು, ಕೃಷ್ಣ ಮೂರ್ತಿ ಕವುತಾರ್ ಒಬ್ಬ ಜೋತಿಷಿಯ ಪಾತ್ರ ಮಾಡಿದ್ದಾರೆ. ಶ್ರೀನಿವಾಸಗೌಡ್ರು, ಉಷಾ ರವಿಶಂಕರ್, ಮಹಾಂತೇಶ ಹಿರೇಮಠ್ ಉಳಿದ ಪಾತ್ರವರ್ಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನವೆಂಬರ್ 19ರಂದು ಜನಾರ್ದನ ರೆಡ್ಡಿಗೆ ರಾಜಯೋಗ – ಮತ್ತೆ ಶುಕ್ರದೆಸೆ ಶುರುವಾಯ್ತಾ?

    ನವೆಂಬರ್ 19ರಂದು ಜನಾರ್ದನ ರೆಡ್ಡಿಗೆ ರಾಜಯೋಗ – ಮತ್ತೆ ಶುಕ್ರದೆಸೆ ಶುರುವಾಯ್ತಾ?

    ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿಗೆ ಮತ್ತೆ ಶುಕ್ರದೆಸೆ ಶುರುವಾಗಿದ್ದು, ರಾಜಯೋಗದಿಂದ ರೆಡ್ಡಿ ರಾಜ್ಯವನ್ನು ಆಳುತ್ತಾರೆ ಎಂದು ಜೋತಿಷ್ಯ ಶಾಸ್ತ್ರ ಹೇಳಿದೆ ಎನ್ನಲಾಗಿದೆ.

    ಆಂಬಿಡೆಂಡ್ ಕಂಪೆನಿ ವಂಚನೆ ಪ್ರಕರಣದಿಂದ ಬೇಸತ್ತಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಇದೇ ತಿಂಗಳು 19ರಂದು ರಾಜಯೋಗ ಹಿನ್ನೆಲೆಯಲ್ಲಿ ಅಂದು ಮಹಾಯಾಗಕ್ಕೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ನವೆಂಬರ್ 19ರಂದು ಗಾಲಿ ಜನಾರ್ದನ ರೆಡ್ಡಿ ಬೆಂಗಳೂರಿನ ಪಾರಿಜಾತ ನಿವಾಸದಲ್ಲಿ ವಿಘ್ನ ನಿವಾರಕ ಗಣೇಶನ ಹೆಸರಿನಲ್ಲಿ ವಿಶೇಷ ಪೂಜೆ ಹೋಮ ಹವನ ನಡೆಯಲಿದೆ. ಮಹಾಯಾಗ ನಡೆಯುವ ದಿನ ಮಗಳ ಮದುವೆಯ ಎರಡನೇ ವಾರ್ಷಿಕೋತ್ಸವ ಕೂಡ ಇದೆ.

    ಜನಾರ್ದನ ರೆಡ್ಡಿ ಅತೀ ಹೆಚ್ಚಾಗಿ ದೇವರ ಪೂಜೆ ಮಾಡುತ್ತಾರೆ. ಜೊತೆಗೆ ಜ್ಯೋತಿಷ್ಯವನ್ನು ನಂಬುತ್ತಾರೆ. ಆದ್ದರಿಂದ ಜಾಮೀನು ಸಿಕ್ಕಮೇಲೆ ಅವರೇ ಸ್ವತಃ ಇನ್ನು ಮೂರು ದಿನಗಳ ಬಳಿಕ ನಮ್ಮ ನಿವಾಸದಲ್ಲಿ ಹೋಮ-ಹವನ ಮಾಡಿಸುತ್ತೇನೆ. ನಂತರ ನಮಗೆ ರಾಜಯೋಗ ಶುರುವಾಗುತ್ತದೆ. ಮೂರುದಿನಗಳ ನಂತರ ನಮ್ಮನ್ನು ಯಾರು ಟಚ್ ಕೂಡ ಮಾಡುವುದಕ್ಕೆ ಆಗಲ್ಲ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದರು.

    ಈ ವಿಚಾರದ ಬಗ್ಗೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಪ್ರತಿಕ್ರಿಯಿಸಿದ್ದು, ಸದ್ಯಕ್ಕೆ ನಾನು ಜನಾರ್ದನ ರೆಡ್ಡಿಯವರ ಜಾತಕವನ್ನು ಪರಿಶೀಲನೆ ಮಾಡಿಲ್ಲ. ರಾಜಯೋಗ ಅವರ ರಾಶಿ, ನಕ್ಷತ್ರದ ಅನುಗುಣವಾಗಿ ಆಯಾ ಕಾಲಕ್ಕೆ ಬರುತ್ತದೆ ಎಂಬುದನ್ನು ಪ್ರಮಾಣಿಕರಿಸಿ ನೋಡಲಾಗುತ್ತದೆ. ಹಿರಿಯರು ಹೇಳಿದಂತೆ ಮೂರಕ್ಕೆ ಮುಕ್ತಾಯ ಎಂಬಂತೆ ಮೂರು ಬಾರಿ ಜೈಲು ವಾಸದ ಬಳಿಕ ಜನಾರ್ದನ ರೆಡ್ಡಿಯ ಕಷ್ಟದ ದಿನಗಳು ಮುಗಿಯುತ್ತದೆ ಎಂದು ಹೇಳಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews