Tag: rajesh nayak

  • ಆ ಒಂದು ಸಾಫ್ಟ್‌ವೇರ್ ಒಂದು ತಿಂಗಳು ‘ಇ-ಸ್ವತ್ತು’ಗೆ ಕೈಕೊಡ್ತು!

    ಆ ಒಂದು ಸಾಫ್ಟ್‌ವೇರ್ ಒಂದು ತಿಂಗಳು ‘ಇ-ಸ್ವತ್ತು’ಗೆ ಕೈಕೊಡ್ತು!

    ಬೆಳಗಾವಿ: ಇ-ಖಾತೆ ನೀಡುವಲ್ಲಿ ವಿಳಂಬವಾಗಲು ಒಂದು ಸಾಫ್ಟ್‌ವೇರ್ ಕಾರಣವಾಗಿತ್ತು ಎಂಬ ಅಂಶವನ್ನು ರಾಜ್ಯ ಸರ್ಕಾರ ಹೇಳಿದೆ.

    ಶಾಸಕ ರಾಜೇಶ್ ನಾಯಕ್, ಇ-ಸ್ವತ್ತು ತಂತ್ರಾಂಶದಲ್ಲಿ ಕಳೆದ ಒಂದು ತಿಂಗಳಿನಿಂದ ಸರ್ವರ್ ಸಮಸ್ಯೆ ಇದ್ದು, ಗ್ರಾಮೀಣ ಪ್ರದೇಶದ ಖಾತೆದಾರರಿಗೆ ಇ-ಖಾತೆ ನೀಡುವಲ್ಲಿ ವಿಳಂಬವಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಮತ್ತು ಸರ್ವರ್ ಸಮಸ್ಯೆಗೆ ಸರ್ಕಾರ ಕಂಡುಕೊಂಡ ಪರಿಹಾರ ಕ್ರಮ ಏನು ಎಂದು ಚುಕ್ಕೆ ಗುರುತಿನ ಪ್ರಶ್ನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಿಗೆ ಪ್ರಶ್ನೆ ಕೇಳಿದ್ದರು. ಇದನ್ನೂ ಓದಿ: ಕಲಾಪಕ್ಕೆ ಅಡ್ಡಿ- ವಿಧಾನ ಪರಿಷತ್‌ನ 15 ಕಾಂಗ್ರೆಸ್ ಸದಸ್ಯರು ಅಮಾನತು‌

    ಇದಕ್ಕೆ ಲಿಖಿತ ಉತ್ತರ ನೀಡಿರುವ ಸಚಿವ ಕೆ.ಎಸ್.ಈಶ್ವರಪ್ಪ, ಈ ವಿಚಾರ ಗಮನಕ್ಕೆ ಬಂದಿದೆ. ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಗಳಲ್ಲಿರುವ ಇ-ಸ್ವತ್ತು ತಂತ್ರಾಂಶದ ಸರ್ವರ್ ಗಳಿಗೆ ಒಂದು ಸಾಫ್ಟ್‍ವೇರ್ ಅಳವಡಿಸಿದ್ದರಿಂದ ಕಳೆದ ಒಂದು ತಿಂಗಳಿನಿಂದ ಈ ಸಮಸ್ಯೆಯಾಗಿದೆ. ಈ ಸಾಫ್ಟ್‌ವೇರ್ ಗಳನ್ನು ಈಗ ಡಿಸೇಬಲ್ ಮಾಡಿದ್ದು, ಸಮಸ್ಯೆ ಬಗೆಹರಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಪೊಲೀಸರಿಗೆ ಫ್ರೀ ಹ್ಯಾಂಡ್, ಮಂಗಳೂರಲ್ಲಿ ಕಾನೂನು ಸುವ್ಯವಸ್ಥೆ ಭಂಗ ಬಂದ್ರೆ ಕ್ರಮ: ಆರಗ ಜ್ಞಾನೇಂದ್ರ

    ಸರ್ವರ್ ಸ್ಟೋರೇಜ್ ದ್ವಿಗುಣ:
    ಜೊತೆಗೆ ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರದಲ್ಲಿರುವ ಇ-ಸ್ವತ್ತು ತಂತ್ರಾಂಶಕ್ಕೆ ಸಂಬಂಧಿಸಿದ 4 ಸರ್ವರ್ ಗಳ ಸ್ಟೋರೇಜ್ ಸಾಮರ್ಥ್ಯ ದ್ವಿಗುಣಗೊಳಿಸಲಾಗಿದೆ. ಈ ರೀತಿಯ ಸಮಸ್ಯೆ ಮತ್ತೊಮ್ಮೆ ಉಂಟಾಗದಂತೆ ಇಲಾಖೆಯಿಂದ ಕ್ರಮಕೈಗೊಂಡಿರುವುದಾಗಿ ಉತ್ತರಿಸಿದ್ದಾರೆ. ಇದನ್ನೂ ಓದಿ: ವೆಸ್ಟ್ ಬಾಡಿ ಯಾರು ಅಂತ ಇಡೀ ರಾಜ್ಯಕ್ಕೆ ತಿಳಿದಿದೆ: ಜಾರಕಿಹೊಳಿಗೆ ತಿವಿದ ಸಿದ್ದರಾಮಯ್ಯ

    ಆದರೆ ರಾಜ್ಯ ಸರ್ಕಾರ ಈ ಸಮಸ್ಯೆಗೆ ಕಾರಣವಾದ ಸಾಫ್ಟ್‌ವೇರ್ ಯಾವುದು ಎಂದು ಲಿಖಿತ ಉತ್ತರದಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.

  • ಭಾರತ, ಜಪಾನ್ ನಡುವೆ ಸಂಭಾಷಣೆಗೆ ಧ್ವನಿಯಾದ ಕನ್ನಡಿಗ!

    ಭಾರತ, ಜಪಾನ್ ನಡುವೆ ಸಂಭಾಷಣೆಗೆ ಧ್ವನಿಯಾದ ಕನ್ನಡಿಗ!

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಭಾರತ ದೇಶದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ಈ ಬುಲೆಟ್ ರೈಲು ಯೋಜನೆ ಸೇರಿದಂತೆ ಎರಡು ದೇಶಗಳ ನಡುವೆ ನಡೆದ ಮಹತ್ವದ ಒಪ್ಪಂದಗಳಿಗೆ ಎರಡು ಭಾಷೆಗಳ ಸೇತುವೆಯಾಗಿ ಕೆಲಸ ಮಾಡಿದವರು ಕರ್ನಾಟಕದ ಮಣ್ಣಿನ ಮಗ ರಾಜೇಶ ನಾಯ್ಕ.

    ರಾಜೇಶ ನಾಯ್ಕ ಭಾರತದ ಸರ್ಕಾರದ ವಿದೇಶಾಂಗ ಇಲಾಖೆಯಲ್ಲಿ ಅಧೀನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಇಡೀ ವಿದೇಶಾಂಗ ಇಲಾಖೆಯಲ್ಲಿಯೇ ಜಪಾನಿ ಭಾಷೆಯನ್ನು ಕಲಿತು ಸುಲಲಿತವಾಗಿ ಮಾತನಾಡಬಲ್ಲ ವಿಶಿಷ್ಟತೆಯನ್ನು ಹೊಂದಿದ್ದಾರೆ. ಇವರಿಗೆ ಬುಲೆಟ್ ರೈಲು ಯೋಜನೆ, ಜಪಾನ್ ಪ್ರಧಾನಿ ಶಿಂಬೊ ಅಬೆ ಅವರ ಬಗ್ಗೆ ಹೇಳಿ ಅವರ ಸಂಪೂರ್ಣ ಜವಾಬ್ದಾರಿಯನ್ನು ಸರ್ಕಾರ ನೀಡಿತ್ತು. ಇದಕ್ಕಾಗಿ ತಿಂಗಳುಗಟ್ಟಲೇ ಶ್ರಮವಹಿಸಿ ದುಡಿದು, ಮಹತ್ವದ ಕಾರ್ಯವನ್ನು ರಾಜೇಶ ನಾಯ್ಕ ಯಶಸ್ವಿಗೊಳಿಸಿದ್ದಾರೆ.

    ರಾಜೇಶ್ ನಾಯ್ಕ ಅವರು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದವರು. ಇವರು ವಕೀಲ ಎನ್.ಡಿ.ನಾಯ್ಕ ಐಸೂರು ಮತ್ತು ಲಕ್ಷ್ಮೀ ನಾಯ್ಕ ದಂಪತಿಯ ನಾಲ್ಕನೇ ಪುತ್ರ. 10 ನೇ ತರಗತಿ ಓದುತ್ತಿದ್ದಾಗಲೇ ಐಎಎಸ್ ಆಗಬೇಕು ಎಂದು ಕನಸು ಕಂಡಿದ್ದರು.

    ಮೊದಲು ಕೆಎಎಸ್ ಪರೀಕ್ಷೆಯನ್ನು ಬರೆದು ಅದರಲ್ಲಿ 7ನೇ ರ‍್ಯಾಂಕ್‌ ಪಡೆದು ಉತ್ತೀರ್ಣರಾಗಿದ್ದ ರಾಜೇಶ್ ಅವರು ಕೆಲವು ದಿನಗಳ ಕಾಲ ಉಡುಪಿ ಜಿಲ್ಲೆಯ ಖಜಾನೆ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ನಂತರ ತಮ್ಮ ಕನಸಿನತ್ತಾ ಸಾಗಲು ಉತ್ಸುಕತೆಯಿಂದ ದೆಹಲಿಯಲ್ಲಿ ಐಎಎಸ್ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. 2009 ರಲ್ಲಿ ಸಿಎಸ್‍ಇ ಬ್ಯಾಚ್‍ನಲ್ಲಿ 260 ನೇ ರ್ಯಾಂಕ್ ಪಡೆದು ವಿದೇಶಾಂಗ ಇಲಾಖೆಗೆ ಆಯ್ಕೆಯಾಗಿದ್ದರು. ಪ್ರಸ್ತುತ ವಿದೇಶಾಂಗ ಇಲಾಖೆಯಲ್ಲಿ ಅಧೀನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.