Tag: Rajiv Gandhi

  • ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

    ರಾಜೀವ್‌ಗಾಂಧಿ ಹತ್ಯೆ ಕೇಸ್ – ರೀಲಿಸ್ ಆದ 6 ಮಂದಿಯಲ್ಲಿ ನಾಲ್ವರು ಗಡಿಪಾರು

    ನವದೆಹಲಿ/ಚೆನ್ನೈ: ರಾಜೀವ್‌ಗಾಂಧಿ ಗಾಂಧಿ ಹತ್ಯೆ (Rajiv Gandhi Murder Case) ಪ್ರಕರಣದಲ್ಲಿ ದೋಷಿಗಳಾಗಿದ್ದ 6 ಮಂದಿ 31 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾರೆ. ಆದರೆ ಬಿಡುಗಡೆಯಾದ 6 ಮಂದಿ ಪೈಕಿ ನಾಲ್ವರು ಗಡಿಪಾರು ಸಮಸ್ಯೆ ಎದುರಿಸುತ್ತಿದ್ದಾರೆ. ಅವರು ಮುಂದಿನ 10 ದಿನಗಳಲ್ಲಿ ಆದೇಶ ಪಡೆದು ಗಡಿಪಾರು ಆಗಲಿದ್ದಾರೆ.

    ಸುಪ್ರೀಂ ಕೋರ್ಟ್ (Supreme Court) ಆರೋಪಿಗಳ ಶಿಕ್ಷೆಯನ್ನು ಕಡಿತಗೊಳಿಸಿದ್ದರಿಂದಾಗಿ ನವೆಂಬರ್ 12ರಂದು ದೋಷಿಗಳನ್ನೂ ಜೈಲಿನಿಂದ ಬಿಡುಗಡೆ ಮಾಡಲಾಯಿತು. ಆ ಬಳಿಕ ತಿರುಚ್ಚಿ ವಿಶೇಷ ಶಿಬಿರದಲ್ಲಿ (Trichy Special Camp) ಗಡಿಪಾರು ಮಾಡಲು ನಿರ್ಧರಿಸಿದ್ದು, ಅವರು ಹೋಗಲು ಬಯಸುವ ದೇಶಗಳಿಗೆ ಕಳುಹಿಸಿಕೊಡಲು ನಿರ್ಣಯ ಕೈಗೊಳ್ಳಲಾಗಿದೆ. ವಿಶೇಷ ಶಿಬಿರ ಅಂದರೆ, ದೇಶದ ನೆಲದಲ್ಲಿ ಇದ್ದುಕೊಂಡೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ಪ್ರಜೆಗಳನ್ನು ಗಡಿಪಾರು ಮಾಡುವವರೆಗೆ ಇರಿಸುವ ಸ್ಥಳ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ – ಜೀವಾವಧಿ ಶಿಕ್ಷೆಗೊಳಗಾದ 6 ಮಂದಿಯ ಬಿಡುಗಡೆಗೆ ಸುಪ್ರೀಂ ಆದೇಶ

    ರಾಬರ್ಟ್ ಪಾಯಸ್ ಉಪವಾಸ ಸತ್ಯಾಗ್ರಹ ನಡೆಸಲು ಯೋಜನೆ ರೂಪಿಸಿದ್ದರು. ಈ ವೇಳೆ ವಿಶೇಷ ಶಿಬಿರಕ್ಕೇ ಭೇಟಿ ನೀಡಿದ ಜಿಲ್ಲಾಧಿಕಾರಿ ಪ್ರವೀಣ್ ಕುಮಾರ್ ಸಮಸ್ಯೆ ಬಗೆಹರಿಸಿದ್ದಾರೆ. ಬಳಿಕ ಮಾತನಾಡಿರುವ ಅವರು, ವಿದೇಶಗಳಲ್ಲಿ ಪೌರತ್ವ ದೃಢೀಕರಿಸಿದ ನಂತರ ಗಡಿಪಾರು ಮಾಡಲಾಗುತ್ತದೆ. ಅವರನ್ನು ಭೇಟಿ ಮಾಡಲು ರಕ್ತಸಂಬಂಧಿಗಳಿಗೆ ಮಾತ್ರ ಅವಕಾಶವಿರಲಿದೆ. ಆದರೆ ದೋಷಿಗಳಾಗಿದ್ದವರು ಗಡಿಪಾರು ವೇಳೆ ಮೊಬೈಲ್‌ಫೋನ್‌ಗಳನ್ನು ಕೊಂಡೊಯ್ಯಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.

    ಸಂತನ್ ಶ್ರೀಲಂಕಾಗೆ (SriLanka) ಹೋಗುವುದಾಗಿ ಹೇಳಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಿದೇಶಿ ಪ್ರಾದೇಶಿಕ ನೋಂದಣಾಧಿಕಾರಿಗಳು ಶ್ರೀಲಂಕಾ ರಾಯಭಾರ ಕಚೇರಿಗೆ (Sri Lankan Embassy) ಮಾಹಿತಿ ನೀಡಿದ್ದಾರೆ. ಅವರು ತಮ್ಮ ಪೌರತ್ವ (Citizenship) ದೃಢೀಕರಿಸಿದ ನಂತರ, ನಾವು ಸಂತನ್‌ನನ್ನು ಗಡೀಪಾರು ಮಾಡುತ್ತೇವೆ. 10 ದಿನಗಳಲ್ಲಿ ಗಡಿಪಾರು ಆದೇಶ ಸಿಗಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

    ಗಡಿಪಾರಾಗುತ್ತಿರುವ ನಳಿನಿ ಮುರುಗನ್ ತಮ್ಮ ಮಗಳು ಹರಿತಾ ವಾಸಿಸುವ ದೇಶಕ್ಕೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದೇನೆ. ಸಂತನ್ ಶ್ರೀಲಂಕಾಗೆ ಹೋಗಲು ನಿರ್ಧರಿಸಿದ್ದಾರೆ. ಉಳಿದ ಇಬ್ಬರು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಕೇಸ್‌ – 30 ವರ್ಷಗಳ ನಂತರ ನಳಿನಿ ಶ್ರೀಹರನ್‌ ಸೇರಿ 3 ಅಪರಾಧಿಗಳು ರಿಲೀಸ್‌

    ಏನಿದು ಪ್ರಕರಣ?
    1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್ಪಿ ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. `ಅಪರಾಧಿಗಳು ತೃಪ್ತಿದಾಯಕ ನಡವಳಿಕೆ ತೋರಿದ್ದಾರೆ. ಪದವಿಗಳನ್ನು ಪಡೆದಿದ್ದು, ಪುಸ್ತಕಗಳನ್ನು ಬರೆದಿದ್ದಾರೆ. ಸಮಾಜ ಸೇವೆಯಲ್ಲಿ ಭಾಗವಹಿಸಿದ್ದಾರೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಹತ್ಯೆ ಪ್ರಕರಣದಲ್ಲಿ ದೋಷಿಗಳಾಗಿದ್ದ 6 ಮಂದಿಯನ್ನು ಬಿಡುಗಡೆಗೊಳಿಸಿದೆ.

    ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕ್ಯಾಬಿನೆಟ್ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು. ಪ್ರಸಕ್ತ ವರ್ಷದ ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಜೈಲಿನಲ್ಲಿದ್ದಾಗ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ರಾಜೀವ್ ಗಾಂಧಿ ಹತ್ಯೆ ಬಗ್ಗೆ ಪ್ರಶ್ನಿಸಿದ್ದರು: ನಳಿನಿ ಶ್ರೀಹರನ್

    ಜೈಲಿನಲ್ಲಿದ್ದಾಗ ಪ್ರಿಯಾಂಕಾ ಗಾಂಧಿ ಭೇಟಿಯಾಗಿ ರಾಜೀವ್ ಗಾಂಧಿ ಹತ್ಯೆ ಬಗ್ಗೆ ಪ್ರಶ್ನಿಸಿದ್ದರು: ನಳಿನಿ ಶ್ರೀಹರನ್

    ಚೆನ್ನೈ: ಜೈಲಿನಲ್ಲಿದ್ದಾಗ (Jail)  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ನನ್ನನ್ನು ಭೇಟಿ ಆಗಿ ತನ್ನ ತಂದೆಯ ಹತ್ಯೆಯ ಬಗ್ಗೆ ಪ್ರಶ್ನಿಸಿದ್ದರು ಎಂದು ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ 6 ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ (Nalini Sriharan) ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕಾ ಗಾಂಧಿ ನನ್ನನ್ನು ಜೈಲಿನಲ್ಲಿ ಭೇಟಿಯಾಗಿದ್ದರು. ಆಗ ತಮ್ಮ ತಂದೆಯ ಹತ್ಯೆ ಬಗ್ಗೆ ಕೇಳಿದ್ದಾರೆ. ಆ ವೇಳೆ ಭಾವುಕರಾಗಿ ಅತ್ತಿದ್ದರು ಎಂದ ಅವರು, ನಾನು ಗಾಂಧಿ ಕುಟುಂಬಕ್ಕೆ ತುಂಬಾ ಕೃತಜ್ಞನಾಗಿದ್ದೇನೆ. ಅವರನ್ನು ಭೇಟಿ ಮಾಡಲು ಅವಕಾಶ ಸಿಕ್ಕರೆ ನಾನು ಅವರನ್ನು ಭೇಟಿ ಮಾಡಲು ಸಿದ್ಧನಿದ್ದೇನೆ ಎಂದು ಹೇಳಿದರು.

    ನಾನು ತಮಿಳುನಾಡಿನ ಕೆಲವು ಸ್ಥಳಗಳಿಗೆ ಹೋಗಿ ನೋಡಲು ಬಯಸುತ್ತೇನೆ. ಅದರಲ್ಲೂ ಮುಖ್ಯವಾಗಿ ದಿವಂಗತ ಕಮಲ ಸರ್ ಸ್ಮಾರಕವನ್ನು ನೋಡಲು ಬಯಸುತ್ತೇನೆ ಎಂದ ಅವರು, ನಾನು ಇನ್ನೂ ನನ್ನ ಪತಿಯನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸದ್ಯಕ್ಕೆ ನನಗೆ ಸಂತೋಷವಿಲ್ಲ. ತನ್ನ ಪತಿಯನ್ನು ತಿರುಚ್ಚಿ ವಿಶೇಷ ಶಿಬಿರದಿಂದ ಆದಷ್ಟು ಬೇಗ ಬಿಡುಗಡೆ ಮಾಡಲು ತಮಿಳುನಾಡು ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು.

    ಈ ಪ್ರಕರಣದಿಂದ ಹೊರಬರಲು ತನಗೆ ಸಹಾಯ ಮಾಡಿದ ಎಲ್ಲರನ್ನು ಭೇಟಿಯಾಗಲು ಬಯಸುತ್ತೇನೆ. ನಾನು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ನೋಡಲು ಬಯಸುತ್ತೇನೆ. ನಾನು ಶೀಘ್ರದಲ್ಲೇ ಸಿಎಂ ಸ್ಟಾಲಿನ್ ಅವರನ್ನು ಭೇಟಿಯಾಗಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದರು.

    ಜೈಲಿನಲ್ಲಿದ್ದ ದಿನಗಳನ್ನು ಮೆಲುಕು ಹಾಕಿದ ಅವರು, ನಮ್ಮನ್ನು ಜೈಲಿನಲ್ಲಿ ಮರಣದಂಡನೆಗೆ ಒಳಗಾದ ಅಪರಾಧಿಗಳಂತೆ ನಡೆಸಿಕೊಳ್ಳಲಾಗುತ್ತಿತ್ತು. ತಾನು ಎರಡು ತಿಂಗಳ ಗರ್ಭಿಣಿಯಾಗಿದ್ದರೂ ಜೈಲಿನೊಳಗೆ ಬೀಗ ಹಾಕಲಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

    ಮುಂದಿನ ದಿನಗಳಲ್ಲಿ ಕುಟುಂಬವು ನನ್ನ ಆದ್ಯತೆಯಾಗಿದೆ ಮತ್ತು ನಾನು ವೃತ್ತಿಪರವಾಗಿ ಏನನ್ನೂ ಮಾಡಲು ಹೋಗುವುದಿಲ್ಲ. ನನ್ನ ಇಡೀ ಜೀವನವು ಈಗಾಗಲೇ ಸಂಪೂರ್ಣವಾಗಿ ನಾಶವಾಗಿದೆ. ಆದ್ದರಿಂದ ನಾನು ಕುಟುಂಬವನ್ನು ನೋಡಿಕೊಳ್ಳಲಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಗೆಲ್ಲುವ ವಿಶ್ವಾಸ ಇಲ್ಲದೆ ಸಿದ್ದರಾಮಯ್ಯ ಜಾಗ ಹುಡುಕಾಟ: ಯಡಿಯೂರಪ್ಪ ವ್ಯಂಗ್ಯ

    ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರ್.ಪಿ. ರವಿಚಂದ್ರನ್ ಸೇರಿದಂತೆ ಎಲ್ಲಾ 6 ಅಪರಾಧಿಗಳನ್ನು ಬಿಡುಗಡೆಗೊಳಿಸಿ ಶುಕ್ರವಾರ ಸುಪ್ರೀಂ ಕೋರ್ಟ್‍ನ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ನಳಿನಿ ಶ್ರೀಹರನ್ ಬಿಡುಗಡೆಗೊಂಡಿದ್ದಾರೆ. ದೇಶದಲ್ಲೇ ಅತಿ ಹೆಚ್ಚು ಕಾಲ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಹಿಳಾ ಕೈದಿ ನಳಿನಿ ಶ್ರೀಹರನ್ ಅವರನ್ನು ಶನಿವಾರ ವೆಲ್ಲೂರು ಜೈಲಿನಿಂದ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ನಾವು ಕೊಲೆಗಾರರಲ್ಲ, ನಮ್ಮನ್ನು ಸಂತ್ರಸ್ತರೆಂದು ನೋಡಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ

    Live Tv
    [brid partner=56869869 player=32851 video=960834 autoplay=true]

  • ಗಾಂಧಿ ಕುಟುಂಬಕ್ಕೆ ಕ್ಷಮೆ ಕೋರುವೆ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ

    ಗಾಂಧಿ ಕುಟುಂಬಕ್ಕೆ ಕ್ಷಮೆ ಕೋರುವೆ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿ ನಳಿನಿ

    ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಒಬ್ಬರಾದ ನಳಿನಿ ಶ್ರೀಹರನ್ (Nalini Sriharan), ಸ್ಫೋಟದಲ್ಲಿ ಸಾವನ್ನಪ್ಪಿದವರ ಹಾಗೂ ಗಾಂಧಿ ಕುಟುಂಬಕ್ಕೆ ಕ್ಷಮೆ ಕೇಳಿದ್ದಾರೆ.

    ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಅಪರಾಧಿಗಳನ್ನು 31 ವರ್ಷಗಳ ನಂತರ ಬಿಡುಗಡೆ ಮಡಲಾಗಿತ್ತು. ಈ ವೇಳೆ ಮಾತನಾಡಿದ ನಳಿನಿ ಶ್ರೀಹರನ್, ನಾನು ಸ್ಫೋಟದಲ್ಲಿ ಸಾವನ್ನಪ್ಪಿದವರ ಬಗ್ಗೆ ತುಂಬಾ ವಿಷಾದವಿದೆ. ನಾವು ಘಟನೆಯ ಬಗ್ಗೆ ಯೋಚಿಸುತ್ತಾ ಹಲವು ವರ್ಷಗಳನ್ನು ಕಳೆದಿದ್ದೇವೆ. ಆ ಕುಟುಂಬದವರ ಬಳಿ ಕ್ಷಮೆಯಾಚಿಸುತ್ತೇನೆ ಎಂದರು.

    ಸ್ಫೋಟದಲ್ಲಿ ಅನೇಕರು ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಅವರೆಲ್ಲರೂ ಒಮ್ಮೆಯಾದರೂ ಆ ದುರಂತದಿಂದ ಯಾವುದೇ ಸಮಯದಲ್ಲಾದರೂ ಹೊರಬರುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

    ರಾಜೀವ್ ಗಾಂಧಿಯವರ ಕುಟುಂಬವನ್ನು ಭೇಟಿಯಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ನನ್ನನ್ನು ಭೇಟಿ ಮಾಡುತ್ತಾರೆ ಎಂದು ನಾನು ಭಾವಿಸುವುದಿಲ್ಲ. ಅವರು ನನ್ನನ್ನು ನೋಡುವ ಸಮಯ ಕಳೆದಿದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

    1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್ಪಿ ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. ಅಪರಾಧಿಗಳು ತೃಪ್ತಿದಾಯಕ ನಡವಳಿಕೆ ತೋರಿದ್ದಾರೆ. ಪದವಿಗಳನ್ನು ಪಡೆದಿದ್ದು, ಪುಸ್ತಕಗಳನ್ನು ಬರೆದಿದ್ದಾರೆ. ಸಮಾಜ ಸೇವೆಯಲ್ಲಿ ಭಾಗವಹಿಸಿದ್ದಾರೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಕೇಸ್‌ – 30 ವರ್ಷಗಳ ನಂತರ ನಳಿನಿ ಶ್ರೀಹರನ್‌ ಸೇರಿ 3 ಅಪರಾಧಿಗಳು ರಿಲೀಸ್‌

    ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‍ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ (Supreme Court)  ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು. ಅದೇ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕ್ಯಾಬಿನೆಟ್ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು. ಇದನ್ನೂ ಓದಿ: ದ್ರೌಪದಿ ಮುರ್ಮು ನೋಡಲು ಹೇಗಿದ್ದಾರೆ ಗೊತ್ತಲ್ಲ- ವಿವಾದವಾಗ್ತಿದ್ದಂತೆ ಟಿಎಂಸಿ ಸಚಿವ ಕ್ಷಮೆ

    Live Tv
    [brid partner=56869869 player=32851 video=960834 autoplay=true]

  • ರಾಜೀವ್‌ ಗಾಂಧಿ ಹತ್ಯೆ ಕೇಸ್‌ – 30 ವರ್ಷಗಳ ನಂತರ ನಳಿನಿ ಶ್ರೀಹರನ್‌ ಸೇರಿ 3 ಅಪರಾಧಿಗಳು ರಿಲೀಸ್‌

    ರಾಜೀವ್‌ ಗಾಂಧಿ ಹತ್ಯೆ ಕೇಸ್‌ – 30 ವರ್ಷಗಳ ನಂತರ ನಳಿನಿ ಶ್ರೀಹರನ್‌ ಸೇರಿ 3 ಅಪರಾಧಿಗಳು ರಿಲೀಸ್‌

    ಚೆನ್ನೈ: ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದ ಅಪರಾಧಿಗಳನ್ನು 31 ವರ್ಷಗಳ ಜೈಲುವಾಸದ ನಂತರ ಬಿಡುಗಡೆ ಮಾಡಲಾಯಿತು. ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ (Supreme Court) ಆದೇಶ ಹೊರಡಿಸಿದ ಒಂದು ದಿನದ ನಂತರ ಅವರನ್ನು ಇಂದು ರಿಲೀಸ್‌ ಮಾಡಲಾಗಿದೆ.

    ಅಪರಾಧಿಗಳಾಗಿದ್ದ ನಳಿನಿ ಶ್ರೀಹರನ್ (Nalini Sriharan), ಅವರ ಪತಿ ಮುರುಗನ್ ಮತ್ತು ಸಂತನ್ ಅವರನ್ನು ಶನಿವಾರ ಸಂಜೆ ಬಿಡುಗಡೆ ಮಾಡಲಾಯಿತು. ಪೆರೋಲ್ ಷರತ್ತುಗಳ ಭಾಗವಾಗಿ ನಳಿನಿ ಇಂದು ಬೆಳಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ರಾಜೀವ್ ಗಾಂಧಿ ಹತ್ಯೆ ಕೇಸ್ – ಸುಪ್ರೀಂ ತೀರ್ಪು ಸ್ವಾಗತಿಸಿದ ಸ್ಟಾಲಿನ್

    ಮೇ ತಿಂಗಳಲ್ಲಿ, ಏಳನೇ ಅಪರಾಧಿ ಪೆರಾರಿವಾಲನ್‌ನನ್ನು ಬಿಡುಗಡೆ ಮಾಡಲು ಸುಪ್ರೀಂ ಕೋರ್ಟ್ ತನ್ನ ಅಸಾಮಾನ್ಯ ಅಧಿಕಾರವನ್ನು ಬಳಸಿತ್ತು. ಅದೇ ಆದೇಶವು ಉಳಿದ ಅಪರಾಧಿಗಳಿಗೂ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಕ್ಯಾಬಿನೆಟ್ 2018 ರಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ರಾಜ್ಯಪಾಲರು ಬದ್ಧರಾಗಿದ್ದಾರೆ ಎಂದು ನ್ಯಾಯಾಲಯ ಗಮನಿಸಿತ್ತು.

    1991ರಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆ ಪ್ರಕರಣದಲ್ಲಿ ನಳಿನಿ ಅವರಲ್ಲದೆ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ಆರ್ಪಿ ರವಿಚಂದ್ರನ್ ಅವರು ಜೈಲು ಪಾಲಾಗಿದ್ದರು. “ಅಪರಾಧಿಗಳು ತೃಪ್ತಿದಾಯಕ ನಡವಳಿಕೆ ತೋರಿದ್ದಾರೆ. ಪದವಿಗಳನ್ನು ಪಡೆದಿದ್ದು, ಪುಸ್ತಕಗಳನ್ನು ಬರೆದಿದ್ದಾರೆ. ಸಮಾಜ ಸೇವೆಯಲ್ಲಿ ಭಾಗವಹಿಸಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿತ್ತು. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ – ಜೀವಾವಧಿ ಶಿಕ್ಷೆಗೊಳಗಾದ 6 ಮಂದಿಯ ಬಿಡುಗಡೆಗೆ ಸುಪ್ರೀಂ ಆದೇಶ

    ನಳಿನಿ ಶ್ರೀಹರನ್ ಅವರ ಸಹೋದರ ಬಾಕಿನಾಥನ್ ಮಾತನಾಡಿ, ಅಪರಾಧಿಗಳು ಈಗಾಗಲೇ ಮೂರು ದಶಕಗಳ ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ. ಜೈಲಿನಲ್ಲಿ ಸಾಕಷ್ಟು ನೋವು ಅನುಭವಿಸಿದ್ದಾರೆ. ಮಾನವೀಯತೆ ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಅವರ ಬಿಡುಗಡೆಯನ್ನು ವಿರೋಧಿಸುವವರು ಭಾರತದ ಕಾನೂನನ್ನು ಗೌರವಿಸಬೇಕು ಎಂದು ತಿಳಿಸಿದ್ದಾರೆ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜೀವ್ ಗಾಂಧಿ ಹತ್ಯೆ ಕೇಸ್ – ಸುಪ್ರೀಂ ತೀರ್ಪು ಸ್ವಾಗತಿಸಿದ ಸ್ಟಾಲಿನ್

    ರಾಜೀವ್ ಗಾಂಧಿ ಹತ್ಯೆ ಕೇಸ್ – ಸುಪ್ರೀಂ ತೀರ್ಪು ಸ್ವಾಗತಿಸಿದ ಸ್ಟಾಲಿನ್

    ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಳಿನಿ ಶ್ರೀಹರನ್ (Nalini Sriharan) ಸೇರಿದಂತೆ ಆರು ಮಂದಿಯನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂಕೆ ಸ್ಟಾಲಿನ್  (Chief Minister MK Stalin)ಸ್ವಾಗತಿಸಿದ್ದಾರೆ.

    ಈ ಕುರಿತಂತೆ ಟ್ವೀಟ್ ಮಾಡಿರುವ ಸ್ಟಾಲಿನ್ ಅವರು, ಆರು ಮಂದಿಯನ್ನು ಬಿಡುಗಡೆಗೊಳಿಸುವ ಬಗ್ಗೆ ಸುಪ್ರೀಂ ಕೋರ್ಟ್ (Supreme Court) ನೀಡಿರುವ ತೀರ್ಪನ್ನು ನಾನು ಸ್ವಾಗತಿಸುತ್ತೇನೆ. ಉನ್ನತ ನ್ಯಾಯಾಲಯದ ತೀರ್ಪಿನ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿ, ಇದು ಪ್ರಜಾಪ್ರಭುತ್ವದ ಸಿದ್ಧಾಂತಕ್ಕೆ ಐತಿಹಾಸಿಕ ತೀರ್ಪಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜೀವ್‌ಗಾಂಧಿ ಹತ್ಯೆ – ಜೀವಾವಧಿ ಶಿಕ್ಷೆಗೊಳಗಾದ 6 ಮಂದಿಯ ಬಿಡುಗಡೆಗೆ ಸುಪ್ರೀಂ ಆದೇಶ

    ಜನರಿಂದ ಚುನಾಯಿತವಾದ ಸರ್ಕಾರದ ನಿರ್ಧಾರಗಳು ಮತ್ತು ರಾಜ್ಯಪಾಲರ ಸ್ಥಾನದಲ್ಲಿರುವವರ ನಿರ್ಧಾರಗಳಿಗೆ ಅಡ್ಡಿಪಡಿಸಬಾರದು ಎಂಬುದಕ್ಕೆ ಸುಪ್ರೀಂ ಕೋರ್ಟ್‍ನ ತೀರ್ಪು ಸಾಕ್ಷಿಯಾಗಿದೆ. ಡಿಎಂಕೆ ಸರ್ಕಾರವಿದ್ದಾಗಲೂ ಮತ್ತು ಪ್ರತಿಪಕ್ಷದಲ್ಲಿದ್ದಾಗಲೂ ಇವರನ್ನು ಬಿಡುಗಡೆಗೊಳಿಸುವಂತೆ ಜನರ ಪರವಾಗಿ ಧ್ವನಿ ಎತ್ತಿತ್ತು ಎಂದು ಹೇಳಿದ್ದಾರೆ.

    ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ನಳಿನಿ ಶ್ರೀಹರನ್ ಮತ್ತು ಇತರೆ ಐವರು ಮಂದಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಆದರೆ ಜೈನಲ್ಲಿ ಒಳ್ಳೆಯ ನಡತೆ ರೂಢಿಸಿಕೊಂಡ ಆಧಾರದ ಹಿನ್ನೆಲೆ ಆರು ಮಂದಿಯನ್ನು ಸುಪ್ರೀಂಕೋರ್ಟ್ ಬಿಡುಗಡೆಗೊಳಿಸಿದೆ. ಇದನ್ನೂ ಓದಿ: ಸಿಎಂ ಪತ್ರ ಬರೆದಿದ್ದು ಯಾವಾಗ? ದೇವೇಗೌಡರ ನಿವಾಸಕ್ಕೆ ತಲುಪಿಸಿದ್ದು ಯಾವಾಗ? – ಬಿಜೆಪಿಗೆ ಜೆಡಿಎಸ್ ಪ್ರಶ್ನೆ

    ರಾಜೀವ್ ಗಾಂಧಿಯವರು 1991ರ ಮೇ 21 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ತಮಿಳು ಟೈಗರ್ಸ್ ಎಲ್‍ಟಿಟಿಇ ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್‍ನಿಂದ ಹತ್ಯೆಗೀಡಾಗಿದ್ದರು. ಈ ಪ್ರಕರಣದಲ್ಲಿ ನಳಿನಿ ಅಲ್ಲದೆ ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಹಾಗೂ ರವಿಚಂದ್ರನ್ ಜೈಲು ಪಾಲಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ರಾಜೀವ್‌ಗಾಂಧಿ ಹತ್ಯೆ –  ಜೀವಾವಧಿ ಶಿಕ್ಷೆಗೊಳಗಾದ  6 ಮಂದಿಯ ಬಿಡುಗಡೆಗೆ ಸುಪ್ರೀಂ ಆದೇಶ

    ರಾಜೀವ್‌ಗಾಂಧಿ ಹತ್ಯೆ – ಜೀವಾವಧಿ ಶಿಕ್ಷೆಗೊಳಗಾದ 6 ಮಂದಿಯ ಬಿಡುಗಡೆಗೆ ಸುಪ್ರೀಂ ಆದೇಶ

    ನವದೆಹಲಿ: ಭಾರತದ ಮಾಜಿ ಪ್ರಧಾನಿ (Prime Minister Of India) ರಾಜೀವ್ ಗಾಂಧಿ (Rajiv Gandhi) ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ (Nalini Sriharan) ಸೇರಿದಂತೆ 6 ಮಂದಿಯನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ಆದೇಶಿಸಿದೆ.

    ಈ ಹಿಂದೆ ತಮಿಳುನಾಡು ಸರ್ಕಾರ (Tamil Nadu Government) ದೋಷಿಗಳ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು ಎಂಬ ವಿಚಾರವನ್ನು ಸುಪ್ರೀಂ ಕೋರ್ಟ್ ತನ್ನ ಆದೇಶದ ವೇಳೆ ಗಮನಿಸಿದೆ. ಮೇ ತಿಂಗಳಲ್ಲಿ ಮತ್ತೊಬ್ಬ ದೋಷಿ ಪೆರಾರಿವಾಲನ್‌ನನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು. ಇದನ್ನೂ ಓದಿ: 2014ಕ್ಕೂ ಮೊದಲು 70, ಈಗ 140 ವಿಮಾನ ನಿಲ್ದಾಣ: ಬೆಂಗಳೂರನ್ನು ಹಾಡಿ ಹೊಗಳಿದ ಮೋದಿ

    ರಾಜೀವ್ ಗಾಂಧಿಯವರು ಮೇ 21, 1991 ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ತಮಿಳು ಟೈಗರ್ಸ್ ಎಲ್‌ಟಿಟಿಇ (TamilTigers LTTE) ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್‌ನಿಂದ ಹತ್ಯೆಗೀಡಾಗಿದ್ದರು. ಈ ಪ್ರಕರಣದಲ್ಲಿ ನಳಿನಿ ಅಲ್ಲದೆ ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಹಾಗೂ ರವಿಚಂದ್ರನ್ ಜೈಲು ಪಾಲಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ವೆಬ್ ಸರಣಿ ರೂಪದಲ್ಲಿ ಬರಲಿದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ

    ವೆಬ್ ಸರಣಿ ರೂಪದಲ್ಲಿ ಬರಲಿದೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣ

    ಮಾಜಿ ಪ್ರಧಾನಿ ರಾಜೀವ್ ಗಾಂಧಿ (Rajiv Gandhi) ಹತ್ಯೆಯ ಕುರಿತು ಕನ್ನಡದಲ್ಲಿ ಸಿನಿಮಾ ಬರುತ್ತಿದೆ ಎಂದು ಹಲವು ವರ್ಷಗಳಿಂದ ಸುದ್ದಿ ಆಗುತ್ತಲೇ ಇದೆ. ಆದರೂ, ಇನ್ನೂ ಅದಕ್ಕೆ ಮುಹೂರ್ತ ಕೂಡಿ ಬಂದಿಲ್ಲ. ಅಷ್ಟರಲ್ಲಿ ಹಿಂದಿಯಲ್ಲಿ ವೆಬ್ ಸರಣಿಯೊಂದು ಮೂಡಿ ಬರಲಿದೆ. ನಿರ್ದೇಶಕ ನಾಗೇಶ್ ಕುಕನೂರು (Nagesh Kukanur) ಈ ವೆಬ್ ಸರಣಿಯ ಸೂತ್ರಧಾರರಾಗಿದ್ದು, ಅಪ್ಲಾಸ್ ಎಂಟರ್ ಟೈನ್ಮೆಂಟ್ ಬ್ಯಾನರ್ ಅಡಿ ಈ ಸರಣಿ ನಿರ್ಮಾಣಗೊಳ್ಳಲಿದೆ.

    ಈಗಾಗಲೇ ರಾಜೀವ್ ಗಾಂಧಿ ಹತ್ಯೆಯ ಕುರಿತು ಅನೇಕ ಡಾಕ್ಯುಮೆಂಟರಿಗಳು, ಕೆಲವು ಸಿನಿಮಾಗಳಲ್ಲಿ ದೃಶ್ಯಗಳಾಗಿ ಹಾಗೂ ಈ ಕುರಿತು ಅನೇಕರು ಪುಸ್ತಕಗಳನ್ನು ಬರೆದಿದ್ದಾರೆ. ಇದೇ ಮೊದಲ ಬಾರಿಗೆ ವೆಬ್ ಸರಣಿ ರೂಪದಲ್ಲಿ ರಾಜೀವ್ ಗಾಂಧಿ ಹತ್ಯೆ ಜನರೆದುರು ಬರಲಿದೆ. ಈ ವೆಬ್ ಸರಣಿಗಾಗಿ ಪತ್ರಕರ್ತ ಅನಿರುದ್ಧ ಮಿತ್ರ ಬರೆದಿರುವ ‘90 ಡೇಸ್: ದಿ ಟ್ರು ಸ್ಟೋರಿ ಆಫ್ ದಿ ಹಂಟ್ ಫಾರ್ ರಾಜೀವ್ ಗಾಂಧಿ ಅಸಾಸಿನ್; ಪುಸ್ತಕವನ್ನು ಆಧರಿಸಲಾಗಿದೆ. ಇದನ್ನೂ ಓದಿ:ರಾಕೇಶ್‍ಗೆ ಸೋನು ಮೇಲೆ ಲವ್ವಾಗಿದ್ಯಾ? ಏನಿದು ಬಿಗ್‍ಬಾಸ್ ಮನೆಯಲ್ಲಿ ಹೊಸ ಕಹಾನಿ

    ಈ ವೆಬ್ ಸರಣಿಗೆ ಟ್ರೈಯಲ್ ಆಫ್ ಅಸಾಸಿನ್’ ಎಂದು ಹೆಸರಿಡಲಾಗಿದೆ. ರಾಜೀವ್ ಗಾಂಧಿ ಹತ್ಯೆಗೆ ಕಾರಣವಾದ ಅಂಶ, ಅದರ ಹಿಂದಿನ ರೂವಾರಿಗಳು, ಎಲ್‍ಟಿಟಿ ಪ್ರಭಾಕರನ್ (Prabhakar), ಅವರ ತಯಾರಿ ಹೀಗೆ ಏನೆಲ್ಲ ರೋಚಕ ಸಂಗತಿಗಳು ಇರಲಿವೆಯಂತೆ. ಅಲ್ಲದೇ, ರಾಜೀವ್ ಗಾಂಧಿ ಹತ್ಯೆಯ ನಂತರದ ಸಂಗತಿಗಳನ್ನು ಸೇರಿಸಲಿದ್ದಾರಂತೆ ನಿರ್ದೇಶಕರು. ಈಗಾಗಲೇ ಚಿತ್ರಕಥೆ ಕೂಡ ರೆಡಿಯಾಗಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪಾ, ನೀವು ಯಾವಾಗ್ಲೂ ನನ್ನ ಹೃದಯದಲ್ಲಿದ್ದೀರಿ- ರಾಜೀವ್ ಗಾಂಧಿ ಜನ್ಮದಿನದಂದು ನೆನೆದ ರಾಹುಲ್

    ಅಪ್ಪಾ, ನೀವು ಯಾವಾಗ್ಲೂ ನನ್ನ ಹೃದಯದಲ್ಲಿದ್ದೀರಿ- ರಾಜೀವ್ ಗಾಂಧಿ ಜನ್ಮದಿನದಂದು ನೆನೆದ ರಾಹುಲ್

    ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ 78ನೇ ಹುಟ್ಟು ಹಬ್ಬದ ಹಿನ್ನೆಲೆ ಅವರ ಮಕ್ಕಳಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರು ರಾಜೀವ್ ಗಾಂಧಿ ಅವರ ಸಮಾಧಿ ಬಳಿ ತೆರಳಿ ಗೌರವವನ್ನು ಅರ್ಪಿಸಿದರು.

    ಈ ವೇಳೆ ತಮ್ಮ ತಂದೆಯನ್ನು ನೆನೆದ ರಾಹುಲ್ ಗಾಂಧಿ, ಟ್ವಿಟ್ಟರ್‌ನಲ್ಲಿ ರಾಜೀವ್ ಗಾಂಧಿಯವರ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಅದರೊಂದಿಗೆ ರಾಹುಲ್, ಅಪ್ಪಾ, ನೀವು ಯಾವಾಗಲೂ ನನ್ನ ಜೊತೆ, ನನ್ನ ಹೃದಯದಲ್ಲಿದ್ದೀರಿ. ನೀವು ಈ ದೇಶಕ್ಕೆ ಕಂಡ ಕನಸನ್ನು ಪೂರೈಸಲು ನಾನು ಯಾವಾಗಲೂ ಪ್ರಯತ್ನಿಸುತ್ತೇನೆ ಎಂದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದಂದು ಗೌರವ ಅರ್ಪಿಸಿದರು. ನಮ್ಮ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿಯವರ ಜನ್ಮದಿನದಂದು ಅವರಿಗೆ ನಮನಗಳು ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೋದಿ, ಮಹಿಳಾ ಐಎಎಸ್ ಅಧಿಕಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್ – ಕಾನ್‍ಸ್ಟೇಬಲ್ ಅಮಾನತು

    ರಾಜೀವ್ ಗಾಂಧಿ ಅವರು ಭಾರತದ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದು, 1984-89ರ ಅವಧಿಯಲ್ಲಿ ಅಧಿಕಾರದಲ್ಲಿದ್ದರು. 1991ರಲ್ಲಿ ಎಲ್‌ಟಿಟಿಇ ಆತ್ಮಹತ್ಯಾ ಬಾಂಬರ್‌ನಿಂದ ಹತ್ಯೆಗೀಡಾದರು. ಇದನ್ನೂ ಓದಿ: ಮತ್ತೆ ಕಾಂಗ್ರೆಸ್‍ಗೆ ಶುರುವಾಯ್ತಾ ಯಡಿಯೂರಪ್ಪ ಫೀವರ್..?

    Live Tv
    [brid partner=56869869 player=32851 video=960834 autoplay=true]

  • ರಾಜೀವ್‌ಗಾಂಧಿ ಹತ್ಯೆಪ್ರಕರಣ: ನನ್ನ ಮಗಳೂ ಬಿಡುಗಡೆ ಆಗ್ತಾಳೆಂಬ ನಂಬಿಕೆಯಿದೆ ಎಂದ ನಳಿನಿ ತಾಯಿ

    ರಾಜೀವ್‌ಗಾಂಧಿ ಹತ್ಯೆಪ್ರಕರಣ: ನನ್ನ ಮಗಳೂ ಬಿಡುಗಡೆ ಆಗ್ತಾಳೆಂಬ ನಂಬಿಕೆಯಿದೆ ಎಂದ ನಳಿನಿ ತಾಯಿ

    ನವದೆಹಲಿ: ರಾಜೀವ್‌ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡಿರುವ ಸುಪ್ರೀಂ ಕೋರ್ಟ್ ತೀರ್ಪಿನಿಂದ ಉತ್ಸುಕವಾಗಿರುವ ಮತ್ತೋರ್ವ ಆರೋಪಿಯ ತಾಯಿ ನನ್ನ ಮಗಳೂ ಬಿಡುಗಡೆ ಆಗ್ತಾಳೆ ಎಂಬ ನಂಬಿಕೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮತ್ತೋರ್ವ ಆರೋಪಿ ನಳಿನಿ ಅವರ 82 ವರ್ಷದ ತಾಯಿ ಪದ್ಮಾ ಶಂಕರನಾರಾಯಣನ್ ಈ ಕುರಿತು ಮಾತನಾಡಿದ್ದಾರೆ. 31 ವರ್ಷಗಳ ಬಳಿಕ ರಾಜೀವ್‌ಗಾಂಧಿ ಹಂತಕ ಪೆರಾರಿವಾಲನ್ ಅನ್ನು ಜೈಲಿನಿಂದ ಬಿಡುಗಡೆಗೊಳಿಸಿದ್ದು, ಪೆರಾರಿವಾಲನ್ ಕುಟುಂಬ ಸಂತೋಷವಾಗಿದೆ ಎಂದಿದ್ದಾರೆ. ಇದನ್ನೂ ಓದಿ: 31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

    ಪೆರಾರಿವಾಲನ್ ಬಿಡುಗಡೆಗಾಗಿ ಅವನ ತಾಯಿ ಅರ್ಪುತಮ್ಮಾಳ್ ಸಾಕಷ್ಟು ನೋವು ಅನುಭವಿಸಿದ್ದರು. ತಮ್ಮ ಮಗನನ್ನು ಪಡೆಯಲು ಹಲವು ನಾಯಕರನ್ನು ಭೇಟಿ ಮಾಡಿದ್ದರು. ಆದರೆ, ನನ್ನ ಕುಟುಂಬಕ್ಕೆ ಅಂತಹ ಬೆಂಬಲವಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ಗುಡ್‌ಬೈ ಹೇಳಿದ ಹಾರ್ದಿಕ್ ಪಟೇಲ್

    ಪೆರಾರಿವಾಲನ್ ಬಿಡುಗಡೆಗೆ ಶ್ರಮಿಸಿದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ. ಆರೋಪಿ ಸ್ಥಾನದಲ್ಲಿರುವ ನಳಿನಿಗೆ ಮಗುವಿದ್ದ ಕಾರಣ ಆಕೆಗೆ ಮರಣದಂಡನೆ ತೆಗೆದುಹಾಕಿತು. ಇದೀಗ ಮತ್ತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ `ಉಳಿದ 6 ಮಂದಿ ಬಿಡುಗಡೆಗೆ ರಾಜ್ಯ ಸರ್ಕಾರ ಶ್ರಮಿಸಲಿದೆ’ ಎಂದು ಹೇಳಿದ್ದನ್ನು ಟಿವಿಯಲ್ಲಿ ನೋಡಿದ್ದೇನೆ. ಹಾಗಾಗಿ ನನ್ನ ಮಗಳೂ ಶೀಘ್ರದಲ್ಲೇ ಬಿಡುಗಡೆಯಾಗುತ್ತಾಳೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.

  • ಎಲ್ಲರೂ ಮನುಷ್ಯರೇ: ರಾಜೀವ್ ಗಾಂಧಿ ಹಂತಕನ ಪ್ರತಿಕ್ರಿಯೆ

    ಎಲ್ಲರೂ ಮನುಷ್ಯರೇ: ರಾಜೀವ್ ಗಾಂಧಿ ಹಂತಕನ ಪ್ರತಿಕ್ರಿಯೆ

    ಚೆನ್ನೈ: ಮರಣದಂಡನೆಯ ಅಗತ್ಯವಿಲ್ಲ ಎಂದು ನಾನು ದೃಢವಾಗಿ ನಂಬುತ್ತೇನೆ ಎಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಅಪರಾಧಿ ಎ.ಜಿ.ಪೆರಾರಿವಾಲನ್ ಅಭಿಪ್ರಾಯಪಟ್ಟಿದ್ದಾನೆ.

    ಹತ್ಯೆ ಪ್ರಕರಣದಲ್ಲಿ 31 ವರ್ಷಗಳಿಂದ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಪೆರಾರಿವಾಲನ್‌ನನ್ನು ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಆದೇಶ ಹೊರಡಿಸಿತು. ಸುಪ್ರೀಂ ಕೋರ್ಟ್ ತೀರ್ಪು ಪ್ರಕಟವಾದ ನಂತರ ಪೆರಾರಿವಾಲನ್ ಮಾತನಾಡಿದ್ದಾನೆ.

    ನಾನು ಈಗಷ್ಟೇ ಹೊರಬಂದಿದ್ದೇನೆ. ಇದು 31 ವರ್ಷಗಳ ಕಾನೂನು ಹೋರಾಟ. ನಾನು ಸ್ವಲ್ಪ ಉಸಿರಾಡಬೇಕಾಗಿದೆ. ನನಗೆ ಸ್ವಲ್ಪ ಸಮಯ ನೀಡಿ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾನೆ. ಇದನ್ನೂ ಓದಿ: 31 ವರ್ಷಗಳ ನಂತರ ರಾಜೀವ್ ಗಾಂಧಿ ಹಂತಕ ಜೈಲಿನಿಂದ ಬಿಡುಗಡೆ

    ಮರಣದಂಡನೆಯ ಅಗತ್ಯವಿಲ್ಲ ಎಂದು ನಾನು ಸ್ಪಷ್ಟವಾಗಿ ನಂಬುತ್ತೇನೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸೇರಿದಂತೆ ಅನೇಕ ನ್ಯಾಯಮೂರ್ತಿಗಳು ಹಾಗೆ ಹೇಳಿದ್ದಾರೆ. ಎಲ್ಲರೂ ಮನುಷ್ಯರೇ ಎಂದು ಹೇಳಿಕೆ ನೀಡಿದ್ದಾನೆ.

    ಅನೇಕ ಅಪರಿಚಿತರು ನಮಗೆ ಬೆಂಬಲ ನೀಡಿದ್ದಾರೆ. ನನಗೆ ತುಂಬಾ ಜನರ ಪರಿಚಯವಿಲ್ಲ. ಅವರೆಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾನೆ. ಇದನ್ನೂ ಓದಿ: ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಪಿತಾಮಹ: ಬಿಜೆಪಿ

    1991ರ ಮೇ 21ರಂದು ರಾಜೀವ್ ಗಾಂಧಿ ಅವರು ಎಲ್‌ಟಿಟಿಇ ಉಗ್ರರಿಂದ ತಮಿಳುನಾಡಿನಲ್ಲಿ ಹತ್ಯೆಗೀಡಾದರು. ಆರಂಭದಲ್ಲಿ ಚೆನ್ನೈ ವಿಶೇಷ ನ್ಯಾಯಾಲಯವು ಪೆರಾರಿವಾಲನ್‌ಗೆ ಮರಣದಂಡನೆಯನ್ನು ವಿಧಿಸಿತ್ತು. ನಂತರ ಅದನ್ನು ಜೀವಾವಧಿ ಶಿಕ್ಷೆಗೆ ಪರಿವರ್ತಿಸಲಾಗಿತ್ತು.