Tag: Rajkaluve

  • ಬುಲ್ಡೋಜರ್ ಬಲಿಷ್ಠರ ಗೋಡೆನೂ ಕೆಡುವುತ್ತಾ ಎಂದು ಸಿಎಂಗೆ ತಿವಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ಬುಲ್ಡೋಜರ್ ಬಲಿಷ್ಠರ ಗೋಡೆನೂ ಕೆಡುವುತ್ತಾ ಎಂದು ಸಿಎಂಗೆ ತಿವಿದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ

    ಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಒತ್ತುವರೆ ಮಾಡಿಕೊಂಡ ಜಾಗಗಳನ್ನು ತೆರವುಗೊಳಿಸುವ ಕಾರ್ಯವನ್ನು ಬಿಬಿಎಂಪಿ ಮಾಡುತ್ತಿದೆ. ಈಗಾಗಲೇ ಹಲವು ಕಟ್ಟಡಗಳನ್ನು, ಗೋಡೆಗಳನ್ನು ಮತ್ತು ಕಾಂಪೌಂಡ್ ಕೆಡುವುವ ಕೆಲಸದಲ್ಲಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಬಿಬಿಎಂಪಿ ಬಿಟ್ಟ ಬುಲ್ಡೋಜರ್ ಕೇವಲ ಸಾಮಾನ್ಯ ಜನರ ಮನೆಗಳನ್ನು ಮಾತ್ರ ಕೆಡುವುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಅದಕ್ಕೆ ನಟಿ ರಮ್ಯಾ ಕೂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಪ್ರಶ್ನೆ ಕೇಳಿದ್ದಾರೆ.

    ಈಗಾಗಲೇ ಪ್ರತಿಷ್ಠಿತ ಕಂಪನಿಗಳು, ಶಾಲಾ, ಕಾಲೇಜುಗಳು ಮತ್ತು ಪ್ರತಿಷ್ಠಿತ ಬಿಲ್ಡರ್ಸ್ ಮನೆಗಳು ಹಾಗೂ ಶಾಸಕರು ಮತ್ತು ಮಂತ್ರಿಗಳ ಒಡೆತನದ ಬಿಲ್ಡಿಂಗ್ ಗಳು ಕೂಡ ರಾಜಕಾಲುವೆಯನ್ನು (Rajkaluve) ಒತ್ತುವರೆ ಮಾಡಿಕೊಂಡಿವೆ. ಹಾಗಾಗಿ ರಮ್ಯಾ (Ramya) ತಮ್ಮ ಟ್ವಿಟ್ ಮೂಲಕ ‘ಕಾನೂನು ರೂಪಿಸುವವರೇ ಕಾನೂನು ಮುರಿದಿದ್ದಾರೆ, ಬುಲ್ಡೋಜರ್ ಅಲ್ಲಿಗೂ ನುಗ್ಗುತ್ತದೆ ಎಂದು ನಾನು ಸಿಎಂ ಮೇಲೆ ಭರವಸೆ ಇಟ್ಟಿದ್ದೇನೆ. ಕಾನೂನು ಎಲ್ಲರಿಗೂ ಒಂದೇ’ ಎಂದು ನೆನಪಿಸಿದ್ದಾರೆ. ಇದನ್ನೂ ಓದಿ:‘ಹನಿಮೂನ್’ ಗೂ ಮುನ್ನ ಮನೆದೇವರ ಆಶೀರ್ವಾದ ಪಡೆದ ನಟಿ ಮಹಾಲಕ್ಷ್ಮಿ ಹಾಗೂ ರವೀಂದರ್

    ಮೊನ್ನೆಯಷ್ಟೇ ಮಳೆಯಿಂದಾಗಿ ಬೆಂಗಳೂರಿನ (Bangalore) ಹಲವು ಬಡಾವಣೆಗಳು ಮುಳುಗಿದಾಗ, ಸರಕಾರ ಸರಿಯಾದ ರೀತಿಯಲ್ಲಿ ಸ್ಪಂದಿಸದೇ ಇರುವುದನ್ನೂ ರಮ್ಯಾ ಕಟುವಾಗಿ ಟೀಕಿಸಿದ್ದರು. ಇದೀಗ ಬುಲ್ಡೋಜರ್ ಕುರಿತಾಗಿಯೂ ಮುಖ್ಯಮಂತ್ರಿಗಳಿಗೆ ನೆನಪಿಸಿದ್ದಾರೆ. ಸಾಮಾನ್ಯರ ಮನೆಗಳನ್ನಷ್ಟೇ ಒಡೆಯಲಾಗುತ್ತಿದೆ. ಉಳ್ಳವರ ಮನೆಗೂ ಬುಲ್ಡೋಜರ್ (Bulldozer) ನುಗ್ಗಲಿ ಎಂದು ರಮ್ಯಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನ ಸಂಕಷ್ಟಕ್ಕೆ ಭ್ರಷ್ಟರಾಮಯ್ಯರೇ ನೇರಕಾರಣ – ಬಿಜೆಪಿ ತಿರುಗೇಟು

    ಬೆಂಗಳೂರಿನ ಸಂಕಷ್ಟಕ್ಕೆ ಭ್ರಷ್ಟರಾಮಯ್ಯರೇ ನೇರಕಾರಣ – ಬಿಜೆಪಿ ತಿರುಗೇಟು

    ಬೆಂಗಳೂರು: ಬೆಂಗಳೂರಿನ ರಾಜಕಾಲುವೆ (Bengaluru Rajkaluve) ವಿಚಾರಕ್ಕೆ ಸಂಬಂಧಿಸಿದಂತೆ #ಭ್ರಷ್ಟರಾಮಯ್ಯ ಹ್ಯಾಶ್‌ಟ್ಯಾಗ್‌ನೊಂದಿಗೆ ಸರಣೀ ಟ್ವೀಟ್‌ಗಳನ್ನು ಮಾಡಿರುವ ಬಿಜೆಪಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಕಿಡಿಕಾರಿದೆ.

    ಅಷ್ಟಕ್ಕೂ ಬೆಂಗಳೂರಿನ (Bengaluru) ಸಂಕಷ್ಟದ ದಿನಗಳಿಗೆ #ಭ್ರಷ್ಟರಾಮಯ್ಯ ಅವರೇ ನೇರ ಕಾರಣ ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಉಗ್ರನ ಶವವನ್ನು ಹೊರತೆಗೆದು ಅಂತ್ಯಸಂಸ್ಕಾರಕ್ಕೆ ಅವಕಾಶ ಕೋರಿದ್ದ ಅರ್ಜಿ ವಜಾ

    ಟ್ವೀಟ್‌ನಲ್ಲಿ ಏನಿದೆ?
    ಕೆರೆಗಳನ್ನು ಡಿನೋಟಿಫೈ ಮಾಡಲು ತಡೆಯಿದ್ದ ಕಾಯ್ದೆಯನ್ನೇ ಅಂದು ಬದಲಾವಣೆ ಮಾಡಿ ಅನುಮೋದನೆ ನೀಡಿದ್ದು ಏಕೆ? ಅಕ್ರಮ ಒತ್ತುವರಿಗೆ ಕಾಂಗ್ರೆಸ್ (Congress) ಸರ್ಕಾರವೇ ನೇರ ಕಾರಣ. ಅಂದು ಸಮಸ್ಯೆ ಸೃಷ್ಟಿಸಿ ಇಂದು ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದವಲ್ಲವೇ?

    ಕೆರೆಗಳನ್ನು ಡಿ-ನೋಟಿಫಿಕೇಶನ್ ಮಾಡಲು ಅವಕಾಶ ಇಲ್ಲವೆಂದು ಅಧಿಕಾರಿಗಳು ತಿಳಿಸಿದರೂ #ಭ್ರಷ್ಟರಾಮಯ್ಯ ಸರ್ಕಾರ ಕಾಯ್ದೆಯನ್ನೇ ತಿದ್ದುಪಡಿ ಮಾಡಿತು. ಈ ಜನವಿರೋಧಿ ನಿರ್ಧಾರದ ಮೂಲಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಪಡೆದ ಕಪ್ಪಕಾಣಿಕೆ ಎಷ್ಟು?

    bjP

    ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಅಕಾಲಿಕ ಮಳೆಯ ಸಂದರ್ಭದಲ್ಲಿ, ಮೊಳಕಾಲುದ್ದ ನೀರಿನಲ್ಲೂ ಬೋಟ್ ರೈಡ್ ಮೂಲಕ ನೆರೆ ಪ್ರದೇಶಕ್ಕೆ ತೆರಳಿ ಜನ ಸ್ಪಂದನೆಯ ನಾಟಕ ಮಾಡಿದ್ದನ್ನು ರಾಜ್ಯದ ಜನತೆ ಗಮನಿಸಿದ್ದಾರೆ. ಷ್ಟಕ್ಕೂ ಬೆಂಗಳೂರಿನ ಮೊನ್ನೆಯ ಸಂಕಷ್ಟದ ದಿನಗಳಿಗೆ #ಭ್ರಷ್ಟರಾಮಯ್ಯ ಅವರೇ ನೇರ ಕಾರಣ ಎಂದು ಆರೋಪಿಸಿದೆ.

    Live Tv
    [brid partner=56869869 player=32851 video=960834 autoplay=true]

  • ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆ – ಭೇದಭಾವದ ಪ್ರಶ್ನೆಯೇ ಇಲ್ಲವೆಂದ ಸಿಎಂ

    ರಾಜಕಾಲುವೆ ಅತಿಕ್ರಮ ತೆರವು ಕಾರ್ಯಾಚರಣೆ – ಭೇದಭಾವದ ಪ್ರಶ್ನೆಯೇ ಇಲ್ಲವೆಂದ ಸಿಎಂ

    ಬೆಂಗಳೂರು: ರಾಜಕಾಲುವೆ (Rajkaluve) ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದ್ದಾರೆ.

    ವಿಧಾನಸೌಧದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಕಟ್ಟಡ, ಮನೆ ಕಟ್ಟಿರುವವರು, ಜೊತೆಗೆ ಯಾರು ಕಾಲುವೆ ನೀರನ್ನು ಹರಿಸಲು ತೊಂದರೆ ಮಾಡಿದ್ದಾರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕೆಲವರು ರಾಜಕಾಲುವೆಯನ್ನು (Rajkaluve) ಮುಚ್ಚಿದ್ದಾರೆ. ಮಳೆ ನೀರು ಚರಂಡಿಗೆ ಅಡ್ಡಿಯಾಗಿದ್ದರೆ, ಅವುಗಳನ್ನು ತೆರವುಗೊಳಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ: ಅಶೋಕ್

    ಪ್ರವಾಹ ಬಂದಾಗ ಐಟಿಬಿಟಿಯವರು (ITBT) ಸೇರಿದಂತೆ ಎಲ್ಲರಿಗೂ ತೊಂದರೆಯಾಗಿದೆ. ಜನಸಾಮಾನ್ಯರು, ಕೆಳಹಂತದ ಮನೆಗಳಿಗೂ ತೊಂದರೆಯಾಗಿದೆ. ಇವುಗಳನ್ನು ತೆರವುಗೊಳಿಸುವ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದಿದ್ದಾರೆ. ಇದನ್ನೂ ಓದಿ: ಚಾರ್ಮಾಡಿ ಘಾಟಿಯ ರಸ್ತೆ ಬದಿ ಮಣ್ಣು ಕುಸಿತ – ಘನ ವಾಹನ ಸಂಚಾರ ನಿಷೇಧ ಹೇರಲು ಆಗ್ರಹ

    ಹಲವಾರು ಪ್ರಕರಣಗಳು ನ್ಯಾಯಾಲಯದಲ್ಲಿ (Court) ದಾಖಲಾಗಿ ನಿರ್ದೇಶನ ಪಡೆಯಲಾಗಿದೆ. ನ್ಯಾಯಾಲಯದಲ್ಲಿಯೂ ಗಂಭೀರವಾಗಿ ಇವುಗಳ ಬಗ್ಗೆ ಮಾಹಿತಿ ನೀಡಲಾಗುವುದು. ನ್ಯಾಯಾಲಯವೂ ಪ್ರವಾಹದ ಪ್ರಕರಣದಲ್ಲಿ ನಿರ್ದೇಶನಗಳನ್ನು ನೀಡಿದೆ. ಈ ಬಾರಿ ದೊಡ್ಡ ಪ್ರಮಾಣದಲ್ಲಿ ಅತಿಕ್ರಮಣ ತೆರೆವುಗೊಳಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

    ಪಿಎಸ್‌ಐ ನೇಮಕಾತಿ: ಪಿಎಸ್‌ಐ (PSI) ಅಕ್ರಮ ನೇಮಕಾತಿ ಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಮಾತನಾಡಿರುವ ವೀಡಿಯೊ (Video) ಬಿಡುಗಡೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಆಡಿಯೋನೋ, ವೀಡಿಯೋನೋ ಗೊತ್ತಿಲ್ಲ. ಅದನ್ನು ಪರಿಶೀಲಿಸಲಾಗುವುದು. ಹಾಗೇನಾದರೂ ತಪ್ಪು ಕಂಡುಬಂದಲ್ಲಿ ತನಿಖೆಗೆ ಆದೇಶಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜಕಾಲುವೆ ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ: ಅಶೋಕ್

    ರಾಜಕಾಲುವೆ ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ: ಅಶೋಕ್

    ಬೆಂಗಳೂರು: ಕೆರೆ, ರಾಜಾಕಾಲುವೆ (Rajkaluve) ಒತ್ತುವರಿ ತೆರವಿಗೆ ನೋಟಿಸ್ (Notice) ಕೊಡುವ ಅಗತ್ಯ ಇಲ್ಲ, ನೋಟಿಸ್ ಕೊಡದೆಯೇ ತೆರವು ಮಾಡಬಹುದು ಎಂದು ಸಚಿವ ಆರ್. ಅಶೋಕ್ (R Ashok) ಹೇಳಿದ್ದಾರೆ.

    ಮಹಾದೇವಪುರ, ಬೊಮ್ಮನಹಳ್ಳಿ ವಲಯದಲ್ಲಿ ರಾಜಕಾಲುವೆ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆರೆ, ರಾಜಾಕಾಲುವೆ (Rajkaluve) ಒತ್ತುವರಿ ತೆರವಿಗೆ ನೋಟಿಸ್ ಕೊಡುವ ಅಗತ್ಯವಿಲ್ಲ, ಕೊಡದೇ ತೆರವು ಮಾಡಬಹುದು ಎಂದಿದ್ದಾರೆ. ಇದನ್ನೂ ಓದಿ: ಮಹಾದೇವಪುರದಲ್ಲಿ ರಾಜಕಾಲುವೆ ಒತ್ತುವರಿ – 8 ಕಡೆ ಜೆಸಿಬಿ ಆಪರೇಷನ್ ಆರಂಭ

    ಯಾರೇ ಒತ್ತುವರಿ ಮಾಡಿದ್ರೂ ಕಾನೂನು ಪ್ರಕಾರ ಕ್ರಮ ಆಗುತ್ತೆ. ಬಡವರು, ಸಾಹುಕಾರರು ಅಂತ ನೋಡದೇ ಒತ್ತುವರಿ ತೆರವು ನಿರಂತರವಾಗಿ ಮಾಡ್ತೇವೆ. ಅಧಿಕಾರಿಗಳು ತಾರತಮ್ಯ ಮಾಡದೇ ಕ್ರಮ ಕೈಗೊಳ್ಳಬೇಕು. ಒಂದು ವಾರ ತೆರವು ಮಾಡಿ ನಂತರ ಸುಮ್ಮನಾಗಬಾರದು, ತೆರವು ಕಾರ್ಯ ನಿರಂತರ ಮಾಡಿ ಅಂತ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬ್ಯಾನರ್‌ನಲ್ಲಿ ಸಿದ್ದು ಫೋಟೋ ಮಾಯ- ಸಿದ್ದರಾಮಯ್ಯ ಇಲ್ಲಿಗೆ ಬಂದಾಗ ಫೋಟೋ ಹಾಕ್ತಾರೆ: ಡಿಕೆಶಿ

    ನಿನ್ನೆ 13 ವಿಲ್ಲಾಗಳಿಗೆ ನೋಟಿಸ್:
    ಬೆಂಗಳೂರು ಮಳೆಯಿಂದಾಗಿ ರೈನ್ ಬೋ ಡ್ರೈವ್ (Rainbow Drive) ಬಡಾವಣೆಯಲ್ಲಿ ನೀರು ತುಂಬಿ ಅವಾಂತರ ಸೃಷ್ಟಿಯಾದ ಬೆನ್ನಲ್ಲೇ ಎಚ್ಚೆತ್ತ ಕಂದಾಯ ಇಲಾಖೆ (Revenue Department) ಜಲಾವೃತ ಮೂಲವನ್ನು ಕಂಡುಹಿಡಿದು, ರಾಜಕಾಲುವೆ ಒತ್ತುವರಿ ತೆರವು ಮಾಡಿದ್ದ 13 ವಿಲ್ಲಾಗಳಿಗೆ ನಿನ್ನೆಯಷ್ಟೇ ನೋಟಿಸ್ ನೀಡಿದೆ.

    ರೈನ್ ಬೋ ಬಡಾವಣೆ ಜುನ್ನಸಂದ್ರ ಹಾಗೂ ಹಾಲನಾಯಕನಹಳ್ಳಿ ಸರ್ವೆ ನಂಬರ್ ನಲ್ಲಿ ವಿಲ್ಲಾಗಳನ್ನು ನಿರ್ಮಾಣ ಮಾಡಲಾಗಿದೆ. ಈ ಹಿನ್ನೆಲೆ 13 ವಿಲ್ಲಾಗಳಿಗೆ ನೋಟಿಸ್ ನೀಡಲಾಗಿದೆ. ಈ ಹಿಂದೆಯೇ ವಿಲ್ಲಾ ತೆರವು ಮಾಡಲು ಹೊರಟಾಗ ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರು. ಈಗ ಮತ್ತೊಮ್ಮೆ ತೆರವಿಗೆ ಬೆಂಗಳೂರು ಪೂರ್ವ ತಾಲೂಕು ತಹಶೀಲ್ದಾರ್ ಅಜಿತ್ ರೈ ನೋಟಿಸ್ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]