Tag: RajneeshSeth

  • ಮಸೀದಿಯಿರುವ 100 ಮೀ. ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ: ಮಹಾರಾಷ್ಟ್ರ ಸರ್ಕಾರ

    ಮಸೀದಿಯಿರುವ 100 ಮೀ. ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ: ಮಹಾರಾಷ್ಟ್ರ ಸರ್ಕಾರ

    ಮುಂಬೈ: ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು. ಇಲ್ಲದೇ ಇದ್ದರೆ ಹನುಮಾನ್ ಚಾಲೀಸಾ ಅನ್ನು ಪಠಿಸಲಾಗುತ್ತದೆ ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ ನಾಯಕ ರಾಜ್‌ಠಾಕ್ರೆ ಒತ್ತಾಯಿಸಿದ ಬೆನ್ನಲ್ಲೇ ಮಹಾರಾಷ್ಟ್ರ ಮೈತ್ರಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.

    ರಾಜ್ಯ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್, ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರು ಮತ್ತು ಮುಂಬೈ ಪೊಲೀಸ್ ಆಯುಕ್ತರು ಧ್ವನಿವರ್ಧಕಗಳ ಬಳಕೆಗೆ ಮಾರ್ಗಸೂಚಿ ಸಿದ್ಧಪಡಿಸಲಿದ್ದು, ಒಂದೆರಡು ದಿನಗಳಲ್ಲೇ ಹೊರಡಿಸಲಾಗುವುದು. ಅಲ್ಲದೆ ಮಸೀದಿಯ 100 ಒಳಗೆ ಹನುಮಾನ್ ಚಾಲೀಸಾ ಪಠಿಸುವಂತಿಲ್ಲ ಎಂದು ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೌಡಿಗಳು ಸತ್ರೆ 25 ಲಕ್ಷ ರೂ. ಪರಿಹಾರ ಕೊಡ್ತೀರಾ, ಸಂತೋಷ್ ಪಾಟೀಲ್‍ಗೆ ಯಾಕಿಲ್ಲ: ಸಿ.ಎಂ.ಇಬ್ರಾಹಿಂ ಕಿಡಿ

    loudspeakers

    ರಾಜ್ಯದ ಪೊಲೀಸ್ ಮಹಾನಿರ್ದೇಶಕ ರಜನೀಶ್ ಸೇಠ್ ಮತ್ತು ಮುಂಬೈ ಸಿ.ಪಿ.ಸಂಜಯ್ ಪಾಂಡೆ ಅವರು, ಧ್ವನಿವರ್ಧಕಗಳ ಬಳಕೆಯ ಕುರಿತು ರಾಜ್ಯಕ್ಕೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುತ್ತಿದ್ದಾರೆ. ಈ ಮಾರ್ಗಸೂಚಿಗಳನ್ನು ಒಂದು ಅಥವಾ ಎರಡು ದಿನಗಳಲ್ಲಿ ಹೊರಡಿಸಲಾಗುವುದು. ಎಲ್ಲರೂ ಅವುಗಳನ್ನು ಕಾರ್ಯಗತಗೊಳಿಸಬೇಕು ಎಂದು ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಗೃಹ ಸಚಿವರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕೆ ಆಗಲ್ಲ: ಆರ್.ಧ್ರುವನಾರಾಯಣ್ 

    hanuman statue

    ರಾಜ್ ಠಾಕ್ರೆ ಅವರು ಮೇ 3ರ ಒಳಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದು ಹಾಕಲು ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ಆಗ್ರಹಿಸಿದ್ದರು. ಇತರ ಸಮುದಾಯಗಳ ಸದಸ್ಯರು ದೊಡ್ಡ ಧ್ವನಿಯ ಮುಸ್ಲಿಮರ ಪ್ರಾರ್ಥನೆ ಕೇಳಲು ಇಷ್ಟವಿಲ್ಲ ಎಂದು ವಾದಿಸಿ ಮೇ 3ರ ನಂತರ ಹೆಚ್ಚಿನ ಪ್ರಮಾಣದಲ್ಲಿ ಮಸೀದಿಗಳ ಹೊರಗೆ ಹನುಮಾನ್ ಚಾಲೀಸಾ ಮೊಳಗಿಸುಸುವುದಾಗಿ ಬೆದರಿಕೆ ಹಾಕಿದ್ದರು. ಇದು ಶಿವಸೇನೆಗೆ ಸವಾಲಾಗಿ ಪರಿಣಮಿಸಿ ರಾಜ್‌ಠಾಕ್ರೆ ಎಂದು ಕರೆದಿತ್ತು.