ಮಧ್ಯಾಹ್ನ 1:20 ಕ್ಕೆ ಅಗ್ನಿಶಾಮಕ ಇಲಾಖೆಗೆ ಬೆಂಕಿಯ ಬಗ್ಗೆ ಮಾಹಿತಿ ನೀಡಲಾಗಿತ್ತು. ಆರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
– ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಸಂಸತ್ತಿನ ಮಕರದ್ವಾರದಲ್ಲಿ ಟಿ-ಶರ್ಟ್ ಪ್ರತಿಭಟನೆ
ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR – ಸರ್) ವಿಚಾರವಾಗಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಇಂದು ಸಹ ಲೋಕಸಭೆ (Lok Sabha) ಮತ್ತು ರಾಜ್ಯಸಭೆಯ (Rajya Sabha) ಕಲಾಪವನ್ನ ಮುಂದೂಡಲಾಯಿತು.
बिहार से SIR की शुरुआत की गई है, जो अब पूरे देश में करने जा रहे हैं।
हमारी मांग है कि SIR पर चर्चा हो, लेकिन BJP सरकार चर्चा से भाग रही है। विपक्ष चाहता है कि सदन चले, लेकिन BJP सरकार सदन नहीं चलने दे रही है।
ಮತಗಳವು, ಬಿಹಾರದ ಎಸ್‌ಐಆರ್ ವಿರೋಧಿಸಿ ಸಂಸತ್ ಭವನದ ಸಂಕೀರ್ಣದಲ್ಲಿ INDIA ಒಕ್ಕೂಟದ ಪಕ್ಷಗಳ ಸಂಸದರು ‘ಟಿ-ಶರ್ಟ್ ಪ್ರತಿಭಟನೆ’ ನಡೆಸಿದರು. ಬಿಹಾರ ಮತದಾರರ ಪಟ್ಟಿಯಲ್ಲಿದ್ದಾರೆ ಎನ್ನಲಾದ 124 ವರ್ಷ ವಯಸ್ಸಿನ ಮತದಾರ ಮಹಿಳೆಯ ಹೆಸರು ಹೊಂದಿರುವ ಬಿಳಿ ಟಿ-ಶರ್ಟ್‌ಗನ್ನು (T Shirt) ಧರಿಸಿ ಪ್ರತಿಪಕ್ಷಗಳು ಸಂಸದರು, ಪ್ರತಿಭಟನೆ (Protest) ನಡೆಸಿದರು. ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ; ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ ಆಕ್ಷೇಪ
ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್‌ಸಿಪಿಯ ಸುಪ್ರಿಯಾ ಸುಳೆ, ಟಿಎಂಸಿಯ ಒಬ್ರೇನ್, ಡಿಎಂಕೆಯ ಟಾರ್ ಬಾಲು, ಎಡ ಪಕ್ಷಗಳ ಇತರ ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಜಮಾಯಿಸಿ ಪ್ರತಿಭಟನೆಮಾಡಿದರು. ರಾಜೀವ್ ಕುಮಾರ್ ಮತ್ತು ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಬಿಜೆಪಿಯ ಇಲಾಖೆಯಾಗಿದೆ ಎಂದು ಕಾಂಗ್ರೆಸ್‌ನ ಮಾಣಿಕಮ್ ಟ್ಯಾಗೋರ್ ಆರೋಪಿಸಿದರು. 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲುವಿಗಾಗಿ 3 ಸಾವಿರ ಮತ ಖರೀದಿಸಲಾಗಿತ್ತು ಎಂಬ ಸಿಎಂ ಇಬ್ರಾಹಿಂ ಹೇಳಿಕೆ ಆಧರಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯಸಭಾ ಬಿಜೆಪಿ ಸಂಸದ ಲೇಹರ್ ಸಿಂಗ್ ದೂರು ನೀಡಿದ್ದಾರೆ.
ನವದೆಹಲಿ: ಕಾಂಗ್ರೆಸ್ ಪಿಒಕೆಯನ್ನು (ಪಾಕ್ ಆಕ್ರಮಿತ ಕಾಶ್ಮೀರ) ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಅದನ್ನು ನಾವು ಮರಳಿ ಪಡೆಯುತ್ತೇವೆ ಎಂದು ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ (Amit Shah) ಖಡಕ್ ಸಂದೇಶ ರವಾನಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಂದ ನನಗೆ ಬಹಳಷ್ಟು ಕರೆಗಳು ಬಂದವು. ಅವರು ಈ ಭಯೋತ್ಪಾದಕರ ತಲೆಗೆ ಗುಂಡು ಹಾರಿಸಿ ಕೊಲ್ಲುವಂತೆ ನನ್ನನ್ನು ವಿನಂತಿಸಿದ್ದರು. ನಮ್ಮ ಅಧಿಕಾರಿಗಳು ಅವರ ತಲೆಗೆ ಗುಂಡು ಹಾರಿಸಿ ಕೊಂದಿದ್ದಾರೆಂದು ತಿಳಿಸಿದ್ದಾರೆ.
ಸ್ಥಳದಲ್ಲಿ ವಶಪಡಿಸಿಕೊಂಡ ಗುಂಡುಗಳ ಕವಚಗಳು ಪಹಲ್ಗಾಮ್‌ನಲ್ಲಿ ಪತ್ತೆಯಾದ ಕವಚಗಳೊಂದಿಗೆ ಶೇ.99 ರಷ್ಟು ಹೊಂದಿಕೆಯಾಗುತ್ತವೆ ಎಂದು ಹೇಳಿದ್ದಾರೆ. ಕಾಶ್ಮೀರ ಭಯೋತ್ಪಾದನೆಯಿಂದ ಮುಕ್ತವಾಗಲಿದೆ ಎಂಬ ಬಲವಾದ ಸಂದೇಶವನ್ನು ನಾನು ನೀಡಲು ಬಯಸುತ್ತೇನೆ ಎಂದಿದ್ದಾರೆ.
ಗೃಹ ಸಚಿವರ ಭಾಷಣಕ್ಕೂ ಮುನ್ನ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಉಪಸ್ಥಿತರಿಲ್ಲ, ಚರ್ಚೆಗೆ ಉತ್ತರಿಸುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು. ನಂತರ ಪಕ್ಷವು ಸಚಿವರ ಪ್ರತಿಕ್ರಿಯೆಯನ್ನು ನಿರ್ಲಕ್ಷಿಸಿ ಸಭಾತ್ಯಾಗ ಮಾಡಿತು.
ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನಕರ್ (Vice President Dhankhar) ಸೋಮವಾರ ರಾತ್ರಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ಇನ್ನೂ ಎರಡೂವರೆ ವರ್ಷ ಸೇವಾವಧಿ ಇದ್ದರೂ ದಿಢೀರ್ ರಾಜೀನಾಮೆ(Resignation) ನೀಡಿರುವುದು ಇಡೀ ದೇಶವೇ ದಿಗ್ಭ್ರಮೆ ಒಳಗಾಗಿದೆ ಮಾತ್ರವಲ್ಲ ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜೀನಾಮೆಯನ್ನು ಅಂಗೀಕರಿಸಿದ್ದು, ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ. ರಾಜೀನಾಮೆ ಅಂಗೀಕಾರವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಧನಕರ್ ಕೊಡುಗೆಯನ್ನು ಕೊಂಡಾಡಿದ್ದಾರೆ. ಧನಕರ್ ಆರೋಗ್ಯ ಚೇತರಿಕೆ ಆಗಲಿ ಅಂತಲೂ ಮೋದಿ ಹಾರೈಸಿದ್ದಾರೆ.
ಅನಾರೋಗ್ಯದಿಂದಲೇ ರಾಜೀನಾಮೆ ನೀಡಿರುವುದಾಗಿ ಧನಕರ್ ಹೇಳಿದ್ದರೂ ಕಾಂಗ್ರೆಸ್ (Congress) ಹಲವು ಪ್ರಶ್ನೆಗಳನ್ನು ಎತ್ತಿದೆ. ಇನ್ನೂ ಎರಡೂವರೆ ವರ್ಷ ಅಧಿಕಾರ ಇದ್ದರೂ, ರಾಜೀನಾಮೆ ಕೊಟ್ಟಿರೋದ್ಯಾಕೆ ಅಂತ ಪ್ರಶ್ನೆ ಮಾಡಿದೆ. ಎಲ್ಲೋ ಏನೋ ಆಗಿದೆ ಅಂತ ರಾಜ್ಯಸಭೆಯ ಕಾಂಗ್ರೆಸ್ ಮುಖ್ಯ ಸಚೇತಕ ಜೈರಾಮ್ ರಮೇಶ್ ಅನುಮಾನ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಆರೋಪವನ್ನು ನಡ್ಡಾ ನಿರಾಕರಿಸಿದ್ದು, ಪ್ರಮುಖ ಸಂಸದೀಯ ಸಭೆಯಲ್ಲಿ ಭಾಗಿಯಾಗಿದ್ದರಿಂದ ನಿರ್ಣಾಯಕ ವ್ಯವಹಾರ ಸಲಹಾ ಸಮಿತಿ (BAC) ಸಭೆಯಲ್ಲಿ ಭಾಗಿಯಾಗಲು ಆಗಲಿಲ್ಲ. ಉಪ ರಾಷ್ಟ್ರಪತಿಗಳಿಗೆ ಮಾಹಿತಿ ನೀಡಲಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಧನಕರ್ ರಾಜೀನಾಮೆ ಬಗ್ಗೆ ಚರ್ಚೆಗೆ ವಿಪಕ್ಷಗಳು ಒತ್ತಾಯಿಸಿದ್ದರಿಂದ ರಾಜ್ಯಸಭೆ ಕಲಾಪವನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.
ಧನಕರ್ ರಾಜೀನಾಮೆ ಯಾಕೆ? ಅನುಮಾನ 1: ನಡ್ಡಾ ವಿರುದ್ಧ ಬೇಸರ
ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ.ಯಶವಂತ ವರ್ಮಾ ವಾಗ್ದಂಡನೆ ವಿಚಾರದಲ್ಲಿ ವಿಪಕ್ಷಗಳ ನೋಟಿಸ್ ಅಂಗೀಕಾರವಾಗಿತ್ತು. ಸೋಮವಾರ ಈ ವಿಚಾರದ ಬಗ್ಗೆ ಸದನದಲ್ಲಿ ಭಾರೀ ಚರ್ಚೆ ನಡೆದಿತ್ತು. ಚರ್ಚೆಯ ವೇಳೆ ಜೆಪಿ ನಡ್ಡಾ (JP Nadda) ನನ್ನ ಹೇಳಿಕೆಯಷ್ಟೇ ದಾಖಲು ಆಗಲಿದೆ. ಬೇರೆಯವರದ್ದು ದಾಖಲಾಗುವುದಿಲ್ಲ ಎಂದಿದ್ದರು. ಈ ಹೇಳಿಕೆಗೆ ಬೇಸರಗೊಂಡಿರುವ ಸಾಧ್ಯತೆಯಿದೆ.
Shri Jagdeep Dhankhar Ji has got many opportunities to serve our country in various capacities, including as the Vice President of India. Wishing him good health.
श्री जगदीप धनखड़ जी को भारत के उपराष्ट्रपति सहित कई भूमिकाओं में देश की सेवा करने का अवसर मिला है। मैं उनके उत्तम…
ಅನುಮಾನ 3: ಬಿಎಸಿ ಸಭೆಗೆ ಗೈರಾಗಿದ್ದಕ್ಕೆ ಅಸಮಾಧಾನ
ಧನಕರ್ ಸೋಮವಾರ ಮಧ್ಯಾಹ್ನ 12:30ಕ್ಕೆ ನಿರ್ಣಾಯಕ ವ್ಯವಹಾರ ಸಲಹಾ ಸಮಿತಿ (BAC) ಸಭೆ ಕರೆದಿದ್ದರು. ಸಂಜೆ ಮತ್ತೆ ಸಭೆಗೆ ನಿರ್ಧರಿಸಲಾಗಿತ್ತು. ಸಂಜೆಯ ಸಭೆಗೆ ಕೇಂದ್ರ ಸಚಿವ ನಡ್ಡಾ, ರಿಜಿಜು ಗೈರಾಗಿದ್ದರು. ಈ ಸಭೆಗೆ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ಪ್ರತಿನಿಧಿಸಿದ್ದರು. ಮೂಲಗಳ ಪ್ರಕಾರ ತನಗೆ ತಿಳಿಸದೇ ಜೆಪಿ ನಡ್ಡಾ ಮತ್ತು ರಿಜಿಜು ಅವರು ಗೈರಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಬಿಎಸಿ ಸಭೆಯನ್ನು ಮಂಗಳವಾರಕ್ಕೆ ಮುಂದೂಡಿದ್ದರು. ಇದನ್ನೂಓದಿ: ಕನ್ವರ್ಯಾತ್ರೆಯ ಮಾರ್ಗದಲ್ಲಿ ಹೋಟೆಲ್‌ಗಳಿಗೆ ಕ್ಯೂಆರ್ ಕೋಡ್ ಕಡ್ಡಾಯ –ಆದೇಶ ಎತ್ತಿ ಹಿಡಿದ ಸುಪ್ರೀಂ
ಬಿಎಸಿ ಚರ್ಚೆಗಳು ನಡೆಯುತ್ತಿರುವಾಗ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಕೊಠಡಿಯಲ್ಲಿ ಮತ್ತೊಂದು ಉನ್ನತ ಮಟ್ಟದ ಸಭೆ ನಡೆಯುತ್ತಿತ್ತು. ನಡ್ಡಾ, ಶಾ, ರಿಜಿಜು, ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಿರಿಯ ಸಚಿವರು ಭಾಗವಹಿಸಿದ್ದ ಸಭೆಯಲ್ಲಿ ವಾಗ್ದಂಡನೆ ನೋಟಿಸ್‌ಗೆ ದಾಖಲೆಗೆ ಸಹಿ ಹಾಕಲು ಎನ್‌ಡಿಎ ಸಂಸದರನ್ನು ಪ್ರತ್ಯೇಕವಾಗಿ ಕರೆಯಲಾಗಿತ್ತು. ಸಭೆಯು ಸುಮಾರು ಎರಡೂವರೆ ಗಂಟೆಗಳ ಕಾಲ ನಡೆದಿತ್ತು ಮತ್ತು ಬಿಜೆಪಿ ಮಿತ್ರಪಕ್ಷಗಳು ಸಹ ಸಹಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು.
ಈ ಸಭೆಯ ಬಳಿಕ ಗೃಹ ಸಚಿವ ಅಮಿತ್ ಶಾ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿದ್ದರು. ಇದಾದ ಸುಮಾರು ಎರಡು ಗಂಟೆಗಳ ನಂತರ ಧನಕರ್ ರಾಜೀನಾಮೆ ಘೋಷಣೆ ಮಾಡಿದ್ದರು.
ನವದೆಹಲಿ: ಮುಂಬೈ ಸ್ಫೋಟ (Mumbai Blast) ಪ್ರಕರಣ ಮತ್ತು ಉಗ್ರ ಕಸಬ್ (Kasab) ಗಲ್ಲಿಗೇರಲು ಕಾರಣರಾಗಿದ್ದ ಸರ್ಕಾರಿ ಅಭಿಯೋಜಕ, ಖ್ಯಾತ ವಕೀಲ ಉಜ್ವಲ್ ನಿಕಮ್ (Ujjwal Nikam), ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಸಮಾಜ ಸೇವಕ ಸಿ ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಕಾರ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ರಾಷ್ಟ್ರಪತಿಗಳು ರಾಜ್ಯಸಭೆಗೆ ಗರಿಷ್ಠ 12 ಸದಸ್ಯರನ್ನು ನಾಮನಿರ್ದೇಶನ ಮಾಡಬಹುದು. ನಾಮನಿರ್ದೇಶಿತರು ಸಾಹಿತ್ಯ, ವಿಜ್ಞಾನ, ಕಲೆ ಮತ್ತು ಸಾಮಾಜಿಕ ಸೇವೆಯ ಕ್ಷೇತ್ರಗಳಿಂದ ಬಂದಿರಬೇಕು. ಮೇಲ್ಮನೆಯಲ್ಲಿ ಖಾಲಿ ಇದ್ದ ನಾಲ್ಕು ಸ್ಥಾನಗಳಿಗೆ ಈ ನಾಲ್ವರು ಆಯ್ಕೆ ಆಗಿದ್ದಾರೆ.
ಉಜ್ವಲ್ ನಿಕಂ
72 ವರ್ಷದ ಉಜ್ವಲ್ ನಿಕಮ್ 1993ರ ಮುಂಬೈ ಸ್ಫೋಟಗಳು ಮತ್ತು 26/11 ದಾಳಿಗಳಂತಹ ಪ್ರಮುಖ ಭಯೋತ್ಪಾದನಾ ಪ್ರಕರಣಗಳಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಕೆಲಸ ಮಾಡಿದ್ದಾರೆ. ಅವರು ಸಂಗೀತ ದಿಗ್ಗಜ ಗುಲ್ಶನ್ ಕುಮಾರ್ ಮತ್ತು ಬಿಜೆಪಿಯ ಪ್ರಮುಖ ಪ್ರಮೋದ್ ಮಹಾಜನ್ ಅವರ ಹೈ ಪ್ರೊಫೈಲ್ ಕೊಲೆ ಪ್ರಕರಣಗಳ ತನಿಖೆಯಲ್ಲೂ ವಾದ ಮಂಡಿಸಿದ್ದರು.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ, ಬಿಜೆಪಿ ಮುಂಬೈ ನಾರ್ತ್ ಸೆಂಟ್ರಲ್ ಸ್ಥಾನದಿಂದ ನಿಕಮ್ ಅವರನ್ನು ಕಣಕ್ಕಿಳಿಸಿತ್ತು, ಆದರೆ ಅವರು ಕಾಂಗ್ರೆಸ್‌ನ ವರ್ಷಾ ಗಾಯಕ್ವಾಡ್ ವಿರುದ್ಧ ಸೋತಿದ್ದರು. ನಿಕಮ್ ಅವರಿಗೆ 2016 ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.
ಹರ್ಷವರ್ಧನ್ ಶ್ರಿಂಗ್ಲಾ
ಶ್ರಿಂಗ್ಲಾ (Harsh Vardhan Shringla) ಜನವರಿ 2020 ಮತ್ತು ಏಪ್ರಿಲ್ 2022 ರ ನಡುವೆ ವಿದೇಶಾಂಗ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಅವರು 2023 ರಲ್ಲಿ ಭಾರತ ಆಯೋಜಿಸಿದ್ದ ಜಿ 20 ಶೃಂಗಸಭೆಯ ಮುಖ್ಯ ಸಂಯೋಜಕರಾಗಿದ್ದರು. ಇದಕ್ಕೂ ಮೊದಲು, ಅವರು ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ಮತ್ತು ಬಾಂಗ್ಲಾದೇಶಕ್ಕೆ ಹೈಕಮಿಷನರ್ ಆಗಿ ಸೇವೆ ಸಲ್ಲಿಸಿದ್ದರು. ಇದನ್ನೂಓದಿ: ಬೀದಿನಾಯಿಗಳಿಗೆವಿಶೇಷವಾಗಿತಯಾರಿಸಿದಭಕ್ಷ್ಯನೀಡುತ್ತಿಲ್ಲ: ಬಿಬಿಎಂಪಿ ಸ್ಪಷ್ಟನೆ
ಸಿ ಸದಾನಂದನ್ ಮಾಸ್ಟರ್
ಕೇರಳದ ಶಿಕ್ಷಣತಜ್ಞ ಮತ್ತು ಕಾರ್ಯಕರ್ತರಾಗಿರುವ ಸಿ ಸದಾನಂದನ್ ಮಾಸ್ಟರ್ (C Sadanandan Master) ಅವರನ್ನು ಮೂರು ದಶಕಗಳ ಹಿಂದೆ ಸಿಪಿಎಂ ಕಾರ್ಯಕರ್ತರು ದಾಳಿ ನಡೆಸಿ ಕಾಲುಗಳನ್ನು ಕತ್ತರಿಸಿದ್ದರು. 2016 ರ ಕೇರಳ ಚುನಾವಣೆಯಲ್ಲಿ ಕುತುಪರಂಬದಿಂದ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು.
ಮೀನಾಕ್ಷಿ ಜೈನ್
ರಾಜಕೀಯ ತಜ್ಞೆ ಮತ್ತು ಇತಿಹಾಸಕಾರರಾಗಿರುವ ಮೀನಾಕ್ಷಿ ಜೈನ್ (Meenakshi Jain) ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ 2020 ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದರು. ಅವರು ಈ ಹಿಂದೆ ಭಾರತೀಯ ಐತಿಹಾಸಿಕ ಸಂಶೋಧನಾ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.
ನವದೆಹಲಿ: ಸಂಸತ್‌ನಲ್ಲಿ ತೀವ್ರ ಚರ್ಚೆಗೆ ಒಳಪಟ್ಟು, ಉಭಯ ಸದನಗಳು ಅಂಗೀಕರಿಸಿದ್ದ ವಕ್ಫ್ ತಿದ್ದುಪಡಿ ಮಸೂದೆಗೆ (Waqf Amendment Bill) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅಂಕಿತ ಹಾಕಿದ್ದಾರೆ.
ಶುಕ್ರವಾರ ಬೆಳಗ್ಗೆ ರಾಜ್ಯಸಭೆಯಲ್ಲಿ 13 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಚರ್ಚೆಯ ಬಳಿಕ, ಮಸೂದೆಗೆ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ಇದಕ್ಕೂ ಮೊದಲು, ಗುರುವಾರ ಮುಂಜಾನೆ ಲೋಕಸಭೆಯಲ್ಲಿ 288 ಸದಸ್ಯರು ಬೆಂಬಲಿಸಿದರೆ, 232 ಸದಸ್ಯರು ವಿರೋಧಿಸಿದರು. ಈ ರೀತಿಯಾಗಿ, ಎರಡೂ ಸದನಗಳಲ್ಲಿ ಬಹುಮತದೊಂದಿಗೆ ಮಸೂದೆ ಅಂಗೀಕಾರವಾಗಿ ರಾಷ್ಟ್ರಪತಿಗಳ ಒಪ್ಪಿಗೆಗೆ ರವಾನೆಯಾಗಿತ್ತು. ಪರ ವಿರೋಧಗಳ ನಡುವೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ರಾತ್ರಿ ವಕ್ಫ್ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ್ದಾರೆ. ರಾಷ್ಟ್ರಪತಿಗಳ ಅಂಕಿತ ಬೀಳುತ್ತಿದ್ದಂತೆ ವಕ್ಫ್ ತಿದ್ದುಪಡಿ ಮಸೂದೆ ಈಗ ಕಾನೂನಾಗಿದೆ. ಇದೇ ವೇಳೆ ಮುರ್ಮು ಅವರು, ಮುಸಲ್ಮಾನ್ ವಕ್ಫ್ (ಪುನರಾವರ್ತಿತ) ಮಸೂದೆ 2025ಕ್ಕೆ ಸಹ ಒಪ್ಪಿಗೆ ನೀಡಿದ್ದಾರೆ. ಇದನ್ನೂ ಓದಿ: 1996ರ ವಿಶ್ವಕಪ್ ಗೆದ್ದ ಲಂಕಾ ಕ್ರಿಕೆಟ್ ದಿಗ್ಗಜರ ಜೊತೆ ಮೋದಿ ಸಂವಾದ!
ಈ ಶಾಸನ ‘ಮುಸ್ಲಿಂ ವಿರೋಧಿ’ ಮತ್ತು ‘ಅಸಂವಿಧಾನಿಕ’ ಎಂದು ವಿರೋಧ ಪಕ್ಷಗಳು ತೀವ್ರ ಆಕ್ಷೇಪಣೆಗಳನ್ನು ವ್ಯಕ್ತಪಡಿಸಿವೆ. ಈ ತಿದ್ದುಪಡಿಯು ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಸ್ವಾತಂತ್ರ‍್ಯದ ಮೇಲೆ ದಾಳಿ ಮಾಡುತ್ತದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ. ಈ ಆಕ್ಷೇಪಣೆಗಳು ಸಂಸತ್ತಿನಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದವು. ಆದರೆ ಮಸೂದೆಯು ‘ಐತಿಹಾಸಿಕ ಸುಧಾರಣೆ’ ಹಾಗೂ ಅಲ್ಪಸಂಖ್ಯಾತ ಸಮುದಾಯಕ್ಕೆ ನೆರವಾಗಲಿದೆ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿತ್ತು. ಇದನ್ನೂ ಓದಿ: ಯಶಸ್ವಿ, ಪರಾಗ್ ಅಮೋಘ ಬ್ಯಾಟಿಂಗ್; ಪಂಜಾಬ್‌ಗೆ ರಾಯಲ್ ʻಪಂಚ್ʼ – ರಾಜಸ್ಥಾನ್‌ಗೆ 50 ರನ್‌ಗಳ ಭರ್ಜರಿ ಜಯ
ಜಂಟಿ ಸಂಸದೀಯ ಸಮಿತಿ ರಚನೆ ಸೇರಿದಂತೆ 6 ತಿಂಗಳುಗಳ ವಿಸ್ತೃತ ಚರ್ಚೆ ಹಾಗೂ ಸಮಾಲೋಚನೆಗಳ ಬಳಿಕ ಕಾಯ್ದೆಯನ್ನು ಸಂಸತ್‌ನಲ್ಲಿ ಮಂಡಿಸಲಾಗಿತ್ತು. ಹೊಸ ಕಾನೂನನ್ನು ಕಾಂಗ್ರೆಸ್, ಎಐಎಂಐಎಂ ಮತ್ತು ಆಮ್ ಆದ್ಮಿ ಪಕ್ಷ ಸುಪ್ರೀಂ ಕೋರ್ಟ್‌ನಲ್ಲಿ ಪ್ರತ್ಯೇಕ ಅರ್ಜಿಗಳ ಮೂಲಕ ಪ್ರಶ್ನಿಸಿವೆ. ಆದರೆ ಸುಪ್ರೀಂ ಕೋರ್ಟ್ ಅರ್ಜಿ ವಿಚಾರಣೆಗೆ ಸಮಯವನ್ನು ನಿಗದಿಪಡಿಸಿಲ್ಲ. ಇದನ್ನೂ ಓದಿ: ನಮ್ಮ ಭೂಮಿಯನ್ನು ಭಾರತದ ಭದ್ರತಾ ಹಿತಾಸಕ್ತಿಗೆ ವಿರುದ್ಧವಾಗಿ ಬಳಸಲು ಬಿಡಲ್ಲ: ಶ್ರೀಲಂಕಾ ಭರವಸೆ
ನವದೆಹಲಿ: ತೀವ್ರ ಗದ್ದಲ, ಜಟಾಪಟಿ, ಸುದೀರ್ಘ 12 ಗಂಟೆ ಚರ್ಚೆ ನಂತರ ಮಧ್ಯರಾತ್ರಿ ವಕ್ಫ್ ತಿದ್ದುಪಡಿ ಮಸೂದೆಗೆ ರಾಜ್ಯಸಭೆ (Rajya Sabha) ಅನುಮೋದನೆ ನೀಡಿದೆ. ಈ ಮೂಲಕ ವಕ್ಫ್ ಮಸೂದೆಯನ್ನು (Waqf Amendment Bill) ಸೋಲಿಸುತ್ತೇವೆ ಎಂದಿದ್ದ INDIA ಒಕ್ಕೂಟಕ್ಕೆ ಮುಖಭಂಗವಾಗಿದ್ದು ನಿರೀಕ್ಷೆಯಂತೆ ಲೋಕಸಭೆ ಮತ್ತು ರಾಜ್ಯ ಸಭೆಯಲ್ಲಿ ಮಸೂದೆಯನ್ನು ಪಾಸ್ ಮಾಡುವ ಮೂಲಕ ಮೋದಿ ಸರ್ಕಾರಕ್ಕೆ (Narendra Modi) ಗೆಲುವು ಸಿಕ್ಕಿದೆ.
ಮಧ್ಯರಾತ್ರಿ 2:30 ಕ್ಕೆ ನಡೆದ ಮತದಾನದಲ್ಲಿ ಮಸೂದೆ ಪರ 128, ವಿರುದ್ಧ 95 ಮತಗಳು ಬಿದ್ದವು. ಲೋಕಸಭೆ ಮತ್ತ ರಾಜ್ಯಸಭೆಯಲ್ಲಿ ಮಸೂದೆ ಪಾಸ್ ಆಗಿದ್ದು ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರು ಸಹಿ ಹಾಕಿದ ಬಳಿಕ ಅಧಿಕೃತವಾಗಿ ಉಮೀದ್ ಕಾಯ್ದೆ (UMEED Act – Unified Waqf Management, Empowerment, Efficiency and Development Act) ಜಾರಿಯಾಗಲಿದೆ. ಇದನ್ನೂ ಓದಿ: ದೇವಸ್ಥಾನ, ಕೆರೆ, ಕೃಷಿ ಭೂಮಿ ಸೇರಿ 5,970 ಸರ್ಕಾರಿ ಆಸ್ತಿಗಳನ್ನ ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ – ಜೆ.ಪಿ ನಡ್ಡಾ ಕಳವಳ
ಮಸೂದೆಯನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಬೇಕೆಂಬ ವಿರೋಧ ಪಕ್ಷದ ಬೇಡಿಕೆಯನ್ನು ಪುರಸ್ಕರಿಸಿದ್ದೇವೆ. 2013 ರಲ್ಲಿ ತಂದ ವಕ್ಫ್ ಮಸೂದೆಯನ್ನು ಎದುರಿಸಲು ರಚಿಸಲಾದ 13 ಸದಸ್ಯರ ಸಮಿತಿಗಿಂತ ಸಮಿತಿಯು 31 ಸದಸ್ಯರನ್ನು ಹೊಂದಿತ್ತು. 2013 ರ ಸಮಿತಿಯ 22 ಸಭೆಗಳಿಗೆ ಹೋಲಿಸಿದರೆ ಜಗದಾಂಬಿಕಾ ಪಾಲ್ ನೇತೃತ್ವದ ಜೆಪಿಸಿ 200 ಗಂಟೆಗಳ ಕಾಲ ಚರ್ಚಿಸಿದೆ ಮತ್ತು 36 ಸಭೆಗಳನ್ನು ನಡೆಸಿದೆ ಎಂದು ತಿಳಿಸಿದರು.
– ಮೋದಿ ಸರ್ಕಾರದಲ್ಲಿ ಎಲ್ಲರೂ ಸಮಾನರು
– ರಾಜ್ಯಸಭೆಯಲ್ಲಿ ಕಾಂಗ್ರೆಸ್‌ಗೆ ತಿವಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ
ನವದೆಹಲಿ: ಕಳೆದ ಕೆಲವು ದಶಕಗಳಲ್ಲಿ 5,970 ಸರ್ಕಾರಿ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ 1975 -2020ರ ವರೆಗೂ 40 ಆಸ್ತಿಗಳನ್ನು ವಕ್ಫ್ ಆಸ್ತಿ (Wafq Property) ಎಂದು ಘೋಷಿಸಲಾಗಿದೆ. ಇದರಲ್ಲಿ ಕೆರೆಗಳುಮ, ರೈತರ ಜಮೀನು, ಮಂದಿರ, ಸಾರ್ವಜನಿಕ ಆಸ್ತಿಯೂ ಸೇರಿದೆ. ವಕ್ಫ್ ಆಸ್ತಿ ಹೆಚ್ಚುತ್ತಿದೆ, ಹಾಗಾಗಿ ಅದರ ದುರುಪಯೋಗ ಆಗಬಾರದು. ಆದ್ದರಿಂದಲೇ ಅದಕ್ಕೆ ಕಾನೂನು ಮಾಡುತ್ತಿದ್ದೇವೆ ಎಂದು ಸಚಿವ ಜೆ.ಪಿ ನಡ್ಡಾ (JP Nadda) ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ವಕ್ಫ್ ಬಿಲ್ ಮೇಲೆ ಮಾತನಾಡಿದ ಅವರು, ಮೋದಿ ಸರ್ಕಾರದಲ್ಲಿ (Modi Government) ಎಲ್ಲರನ್ನೂ ಸಮಾನವಾಗಿ ನೋಡಲಾಗುತ್ತದೆ. ಕಳೆದ 70 ವರ್ಷಗಳಲ್ಲಿ ಯಾರು ಅವರನ್ನು ಬೆದರಿಸಿ ಇಟ್ಟಿದ್ದಾರೆ? ಅವರನ್ನು ಯಾರು ಪ್ರತ್ಯೇಕವಾಗಿ ನೋಡಿದ್ದಾರೆ? 50-100 ವರ್ಷಗಳ ಬಳಿಕ ನಾವು ಯಾರು ಇರಲ್ಲ. ಆದರೆ ಮಾಡಿದ ಕೆಲಸಗಳು ಪರಿಣಾಮ ಬೀರುತ್ತವೆ. ತ್ರಿವಳಿ ತಲಾಖ್ ಕೋರ್ಟ್ ಹೇಳಿದರೂ ರದ್ದು ಮಾಡಲಿಲ್ಲ, ಕಾಂಗ್ರೆಸ್ ಸರ್ಕಾರ (Congress Government) ಯಾಕೆ ರದ್ದು ಮಾಡಲಿಲ್ಲ? ಕಾಂಗ್ರೆಸ್ ಸಂಸದ ನಾಸೀರ್ ಹುಸೇನ್ ಮುಸ್ಲಿಮರನ್ನು 2ನೇ ದರ್ಜೆ ನಾಗರಿಕಂತೆ ನೋಡಲಾಗುತ್ತಿದೆ ಎನ್ನುತ್ತಾರೆ. ಮುಸ್ಲಿಂ ಮಹಿಳೆಯರನ್ನ 2ನೇ ದರ್ಜೆ ನಾಗರಿಕನ್ನಾಗಿ ನೋಡಲಾಗುತ್ತಿತ್ತು. ಆದ್ರೆ ಇಂದು ಕೋಟ್ಯಂತರ ಮುಸ್ಲಿಂ ಮಹಿಳೆಯರು (Muslim Women) ಸ್ವಾತಂತ್ರ‍್ಯಗೊಂಡಿದ್ದಾರೆ ಎಂದು ಸಚಿವರು ಹೇಳಿದರು. ಇದನ್ನೂ ಓದಿ: ನನ್ನ ವಿರುದ್ಧದ ಆರೋಪ ಸಾಬೀತುಪಡಿಸಿದ್ರೆ ರಾಜೀನಾಮೆ, ಇಲ್ಲದಿದ್ರೆ ನೀವು ಕೊಡಿ – ಅನುರಾಗ್ ಠಾಕೂರ್‌ಗೆ ಖರ್ಗೆ ಸವಾಲು
ವಕ್ಫ್ ಅನ್ನು ಬೇರೆ ದೇಶಗಳು ಸರ್ಕಾರಕ್ಕೆ ತೆಗೆದುಕೊಂಡು ನಡೆಸುತ್ತಿವೆ. ಆದ್ರೆ ನಾವು ಸರ್ಕಾರದ ವ್ಯಾಪ್ತಿಗೆ ತೆಗೆದುಕೊಂಡಿಲ್ಲ. ಬದಲಿಗೆ ಹೊಣೆಗಾರಿಕೆಗೆ ತರುತ್ತಿದ್ದೇವೆ. ಮುಸ್ಲಿಂ ದೇಶಗಳು ವಕ್ಫ್ ಅನ್ನು ಪರಾಮರ್ಶಕ, ಡಿಜಿಟಲ್ ಮಾಡುತ್ತಿವೆ. ಭಾರತದಲ್ಲಿ ಮಾಡಲು ಏನ್ ಸಮಸ್ಯೆ? ವಕ್ಫ್ ಆಸ್ತಿ ಸರಿಯಾದ ಕೈಯಲ್ಲಿ ಇರಬೇಕು, ಸರಿಯಾಗಿ ಬಳಕೆಯಾಗಬೇಕು. ವಕ್ಫ್ ಆಸ್ತಿ ಹೆಚ್ಚುತ್ತಿದೆ, ಹಾಗಾಗಿ ಅದರ ದುರುಪಯೋಗ ಆಗಬಾರದು. ಆದ್ದರಿಂದಲೇ ಅದಕ್ಕೆ ಕಾನೂನು ಮಾಡುತ್ತಿದ್ದೇವೆ, ದುರುಪಯೋಗ ತಡೆಯುತ್ತಿದ್ದೇವೆ ಎಂದು ಜೆ.ಪಿ ನಡ್ಡಾ ಹೇಳಿದರು. ಇದನ್ನೂ ಓದಿ: 25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ
ಕಳೆದ ಕೆಲವು ದಶಕಗಳಿಂದ 5,970 ಸರ್ಕಾರಿ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ 1975 -2020ರ ವರೆಗೂ 40 ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಲಾಗಿದೆ. ಇದರಲ್ಲಿ ಕೆರೆಗಳುಮ, ರೈತರ ಜಮೀನು, ಮಂದಿರ, ಸಾರ್ವಜನಿಕ ಆಸ್ತಿಯೂ ಸೇರಿದೆ. ವಕ್ಫ್ ಆಸ್ತಿಯಲ್ಲಿ ಏರಿಕೆಯಾದರೂ ಅದರ ಆದಾಯದಲ್ಲಿ ಯಾವುದೇ ಏರಿಕೆಯಾಗಿಲ್ಲ. ವಕ್ಫ್ ಆಸ್ತಿ ದುರ್ಬಳಕೆ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸಿದೆ. ಕೇರಳದಲ್ಲಿ ಕ್ರಿಶ್ಚಿಯನ್ ಆಸ್ತಿಯನ್ನೂ ವಶಪಡಿಸಿಕೊಳ್ಳಿಸಲಾಗುತ್ತಿದೆ. ಅವರು ನಮ್ಮ ಬಳಿ ಅಳಲು ವ್ಯಕ್ತಪಡಿಸುತ್ತಿದ್ದಾರೆ. ಈ ದುರ್ಬಳಕೆಗೆ ಕಡಿವಾಣ ಹಾಕೋದಕ್ಕೆ ವಕ್ಫ್ ಮಸೂದೆಗೆ ತಿದ್ದುಪಡಿ ತರಲಾಗಿದೆ. ಇದನ್ನೂ ಓದಿ: ರಾಹುಲ್ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಮಂಥನ – ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ
– ಪುಷ್ಪಾ ಸ್ಟೈಲ್‌ನಲ್ಲಿ ತಗ್ಗೋದೇ ಇಲ್ಲ ಎಂದ ಖರ್ಗೆ
– ಶಿಸ್ತು ಸಮಿತಿಯ ಪರಿಶೀಲನೆಗೆ ನೀಡಿದ ಧನಕರ್
ನವದೆಹಲಿ: ವಕ್ಫ್ ಬಿಲ್ ಮಂಡನೆಗೆ ಮುನ್ನವೇ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಗರಂ ಆದ ಪ್ರಸಂಗ ನಡೆಯಿತು. ವಕ್ಫ್ ಭೂಮಿ ಕಬ್ಜಾ ಮಾಡಿದ್ದಾರೆ ಎಂದು ಸುಳ್ಳು ಆರೋಪ ಮಾಡಿದ ಅನುರಾಗ್ ಠಾಕೂರ್ (Anurag Thakur) ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ರು. ಇಂತಹ ರಾಜಕೀಯ ದಾಳಿಗಳಿಗೆ ನಾನು ಬೆದರುವ ಮಾತೇ ಇಲ್ಲ ಎಂದು ಪುಷ್ಪಾ ಸಿನಿಮಾ ಶೈಲಿಯಲ್ಲಿ ಅಬ್ಬರಿಸಿದ್ರು.
ಅನುರಾಗ್ ಠಾಕೂರ್ ಅರೋಪಕ್ಕೆ ರಾಜ್ಯಸಭೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವಕ್ಫ್ ಆಸ್ತಿ (Waqf Property) ಕಬಳಿಕೆ ಆರೋಪಕ್ಕೆ ತಿರುಗೇಟು ನೀಡಿದರು. ನನ್ನ ಜೀವನ ತೆರದ ಪುಸ್ತಕ, ಜೀವನದಲ್ಲಿ ಕಷ್ಟ ಮತ್ತು ಹೋರಾಟವಿದೆ. ಸಾರ್ವಜನಿಕ ಜೀವನದಲ್ಲಿ ಉನ್ನತ ಮೌಲ್ಯಗಳನ್ನು ಕಾಪಾಡಿಕೊಂಡು ಬಂದಿದ್ದೇನೆ. 60 ವರ್ಷ ರಾಜಕೀಯದಲ್ಲಿ ಇದನ್ನು ಬಯಸಿರಲಿಲ್ಲ. ಇಂತಹ ಆಧಾರ ರಹಿತ ಆರೋಪ ನಿರೀಕ್ಷಿಸರಲಿಲ್ಲ. ಅನುರಾಗ್ ಠಾಕೂರ್ ನನ್ನ ವಿರುದ್ಧ ಆಧಾರ ರಹಿತ ಆರೋಪ ಮಾಡಿದ್ದಾರೆ. ಅದನ್ನು ನಮ್ಮ ಸಂಸದರು ವಿರೋಧಿಸಿದ ಬಳಿಕ ಈ ಹೇಳಿಕೆ ವಾಪಸ್ ಪಡೆದುಕೊಂಡಿದ್ದಾರೆ. ಆದರೆ ಡ್ಯಾಮೇಜ್ ಆಗಿ ಹೋಗಿದೆ, ಮಾಧ್ಯಮಗಳಲ್ಲಿ ವರದಿಯಾಗಿದೆ. ಇದರಿಂದ ನನ್ನ ಚಾರಿತ್ರ‍್ಯ ಮತ್ತು ಗೌರವಕ್ಕೆ ಧಕ್ಕೆಯಾಗಿದೆ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ವಕ್ಫ್ ಮಸೂದೆ | ದಾನದ ಆಸ್ತಿ ದುರ್ಬಳಕೆಯಾಗದಂತೆ ತಡೆಯಲು ಮೋದಿ ಮುಂದಾಗಿದ್ದಾರೆ: ಹೆಚ್‌ಡಿಡಿ
ದೇವೇಗೌಡರು ಇದನ್ನು ಕೇಳಿಸಿಕೊಳ್ಳಬೇಕು. ಅವರ 50 ವರ್ಷದಿಂದ ನೋಡಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮತ್ತು ಎಐಸಿಸಿ ಅಧ್ಯಕ್ಷನಾಗಿ ನಾನು ಒತ್ತಾಯ ಪೂರ್ವಕವಾಗಿ ಎದ್ದು ನಿಲ್ಲಬೇಕಿದೆ. ಅನುರಾಗ್ ಠಾಕೂರ್ ಹೇಳಿಕೆಯನ್ನು ವಿರೋಧಿಸಬೇಕಿದೆ, ಠಾಕೂರ್ ಈ ಆರೋಪಗಳನ್ನು ಸಾಬೀತುಪಡಿಸಲು ಸಾಧ್ಯವಾಗದಿದ್ದರೇ ಅವರು ರಾಜೀನಾಮೆ ನೀಡಬೇಕು. ಅವರು ಸಾಬೀತರಾದರೇ ನಾನು ರಾಜೀನಾಮೆ ನೀಡುತ್ತೇನೆ. ನಾನು ಇಂತಹ ಬೆದರಿಕೆಗೆ ಹೆದರುವುದಿಲ್ಲ ಎಂದು ಎಚ್ಚರಿಸಿದ್ರು. ಇದನ್ನೂ ಓದಿ: 25 ಸಾವಿರ ಶಿಕ್ಷಕರ ವಜಾ – ಜಡ್ಜ್‌ಗಳ ಮನೆಯಲ್ಲಿ ಹಣ ಪತ್ತೆಯಾದ್ರೆ ವರ್ಗಾವಣೆ, ಶಿಕ್ಷಕರ ವಜಾ ಯಾಕೆ? – ಮಮತಾ ಬ್ಯಾನರ್ಜಿ ಪ್ರಶ್ನೆ
ನಾನು ಕಾರ್ಮಿಕನ ಮಗ, ಕಾರ್ಮಿಕ ನಾಯಕ, ಅಲ್ಲಿಂದ ಕಾಂಗ್ರೆಸ್ ಅಧ್ಯಕ್ಷನಾಗಿದ್ದೇನೆ. ದೇವೇಗೌಡರಿಗೆ ಎಲ್ಲವೂ ಗೊತ್ತಿದೆ. ವಿಧಾನಸಭೆಯಲ್ಲಿ ಯಾರು ನನಗೆ ಬೆರಳು ಎತ್ತಿ ಮಾಡನಾಡಿಲ್ಲ. ಈ ಬಿಜೆಪಿ ನಾಯಕರು ಬೆದರಿಕೆ ಬಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಒಡೆದು ಹೊಗ್ತಿನಿ, ಬಗ್ಗುವುದಿಲ್ಲ, ನಾನು ಒಂದಿಂಚು ಭೂಮಿ ಕಬಳಿಸಿಲ್ಲ, ಅನುರಾಗ್ ಠಾಕೂರ್ ಕ್ಷಮೆ ಕೇಳಲೇಬೇಕು ಎಂದು ಒತ್ತಾಯಿಸಿದರು. ಬಳಿಕ ಈ ಚರ್ಚೆಯನ್ನು ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನಕರ್ ಶಿಸ್ತು ಸಮಿತಿಯ ಪರಿಶೀಲನೆಗೆ ನೀಡಿದರು. ಇದನ್ನೂ ಓದಿ: ರಾಹುಲ್ ಜೊತೆ ಸಿದ್ದರಾಮಯ್ಯ ಪ್ರತ್ಯೇಕ ಮಂಥನ – ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸಲು ತೀರ್ಮಾನ
ನವದೆಹಲಿ: ಲೋಕಸಭೆ ಅಂಗೀಕಾರದ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು (Kiran Rijiju) ಅವರು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ಮಂಡಿಸಿದರು.
ವಕ್ಫ್ ಮಂಡಳಿಗಳನ್ನು ಬಲಪಡಿಸುವ, ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಹಕ್ಕುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ರಚಿಸಲಾಗಿದೆ ಎಂದು ಕಿರಣ್ ರಿಜಿಜು ಮಸೂದೆ ಮಂಡಿಸಿ ಹೇಳಿದರು. ಇದನ್ನೂ ಓದಿ: ವಕ್ಫ್ ಫೈಟ್: ಏನಿದು ವಿವಾದ?- ಹೊಸ ತಿದ್ದುಪಡಿ ಮಸೂದೆಯಿಂದ ಆಗುವ ಬದಲಾವಣೆ ಏನು?
ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, 288 ಸದಸ್ಯರು ಇದರ ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದಾರೆ.
ಹೊಸ ಮಸೂದೆಯನ್ನು UMEED (ಏಕೀಕೃತ ವಕ್ಫ್ ನಿರ್ವಹಣೆ, ಮೌಲ್ಯವರ್ಧನೆ, ಕಾರ್ಯದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ) ಎಂದು ಕರೆಯಲಾಗುವುದು ಎಂದು ಹೇಳಿದ್ದ ಕಿರಣ್ ರಿಜಿಜು ತಿಳಿಸಿದ್ದಾರೆ. ಇದನ್ನು ಒಳ್ಳೆಯ ಉದ್ದೇಶಕ್ಕೆ ಜಾರಿಗೆ ತರಲಾಗಿದೆ. ಯಾರಿಗೂ ಇದರಿಂದ ಸಮಸ್ಯೆ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು – ತಡರಾತ್ರಿ 2 ಗಂಟೆಗೆ ಅಂಗೀಕಾರ