Tag: Rajya Sabha Election

  • ರಾಜ್ಯಸಭೆಗೆ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಮನಿರ್ದೇಶನ – ಅವಿರೋಧವಾಗಿ ಆಯ್ಕೆಯಾಗಲಿರುವ ಬಜ್ಜಿ

    ರಾಜ್ಯಸಭೆಗೆ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಮನಿರ್ದೇಶನ – ಅವಿರೋಧವಾಗಿ ಆಯ್ಕೆಯಾಗಲಿರುವ ಬಜ್ಜಿ

    ನವದೆಹಲಿ : ಮಾರ್ಚ್ 31 ರಂದು ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಆಮ್ ಅದ್ಮಿ ಪಂಜಾಬ್‍ನಿಂದ ಐದು ಮಂದಿ ಅಭ್ಯರ್ಥಿಗಳನ್ನು ನಾಮ ನಿರ್ದೇಶನ ಮಾಡಿದ್ದು ಇದರಲ್ಲಿ ಮಾಜಿ ಕ್ರಿಕೆಟಿಗ ಹರ್ಭಜನ್‍ಸಿಂಗ್ ಕೂಡಾ ಒಳಗೊಂಡಿದ್ದಾರೆ.

    ಹರ್ಭಜನ್ ಸಿಂಗ್ ಜೊತೆಗೆ ದೆಹಲಿಯ ಆಪ್ ಶಾಸಕ ರಾಘವ್ ಚಡ್ಡಾ, ಸಂದೀಪ್ ಪಾಟಕ್, ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕುಲಪತಿ ಅಶೋಕ್ ಮಿತ್ತಲ್ ಹಾಗೂ ಕೃಷ್ಣ ಪ್ರಾಣ್ ಸ್ತನ ಕ್ಯಾನ್ಸರ್ ಕೇರ್ ಚಾರಿಟೇಬಲ್ ಟ್ರಸ್ಟ್‌ನ ಸಂಸ್ಥಾಪಕ ಸಂಜೀವ್ ಅರೋರಾ ಅವರನ್ನು ಪಂಜಾಬ್‍ನಿಂದ ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಇದನ್ನೂ ಓದಿ: ಉಕ್ರೇನ್‍ನಿಂದ 22,500 ವಿದ್ಯಾರ್ಥಿಗಳು ವಾಪಸ್- ಆಪರೇಷನ್ ಗಂಗಾ ಪೂರ್ಣ

    ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ 117 ಸ್ಥಾನಗಳ ಪೈಕಿ 92 ಸ್ಥಾನಗಳಲ್ಲಿ ಆಮ್ ಅದ್ಮಿ ಗೆಲವು ಸಾಧಿಸಿರುವ ಹಿನ್ನಲೆ ಐದು ಮಂದಿ ನಾಮನಿರ್ದೇಶಿತ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಇದರಿಂದ ರಾಜ್ಯಸಭೆಯಲ್ಲಿ ಆಪ್ ಸಂಖ್ಯೆ 3 ರಿಂದ 8ಕ್ಕೆ ಏರಿಕೆಯಾಗಲಿದೆ. ಇದನ್ನೂ ಓದಿ: ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಾಣಕ್ಕೆ ಮುಂದಾದ ಹಿರಿಯ ನಟಿ ಲೀಲಾವತಿ

    ಹರ್ಭಜನ್ ಸಿಂಗ್ ಆಯ್ಕೆ ಹಿಂದೆ ಹಲವು ಲೆಕ್ಕಾಚಾರಗಳನ್ನು ಆಮ್ ಅದ್ಮಿ ಹಾಕಿಕೊಂಡಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಹರ್ಭಜನ್ ಸಿಂಗ್ ಪಂಜಾಬ್‍ನಲ್ಲಿ ಸ್ಪೋರ್ಟ್ಸ್ ಐಕಾನ್ ಆಗಲಿದ್ದಾರೆ. ಈ ಮೂಲಕ ಪಂಜಾಬ್‍ನಲ್ಲಿ ಕ್ರೀಡೆಗಳಿಗೆ ಹೆಚ್ಚು ಆದ್ಯತೆ ನೀಡುವುದು ಮತ್ತು ಯುವಕರನ್ನು ಪಕ್ಷದತ್ತ ಸೆಳೆಯುವ ಲೆಕ್ಕಾಚಾರ ಹೊಂದಲಾಗಿದೆ ಎಂದು ವಿಶ್ಲೇಷಿಸಲಾಗಿದೆ.

  • ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ

    ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ

    ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಪುತ್ರ, ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ.

    ಜೂನ್ 7ರ ಮಧ್ಯರಾತ್ರಿ ಕರೆ ಮಾಡಿದ ಅಪರಿಚಿತ, ಜೀವ ಬೆದರಿಕೆ ಹಾಗೂ ಅವಾಚ್ಯ ಪದಗಳನ್ನು ಬಳಸಿ ನಿಂದನೆ ಮಾಡಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪೊಲೀಸ್ ಮಹಾ ನಿರ್ದೆಶಕ ಪ್ರವೀಣ್ ಸೂದ್ ಅವರಿಗೆ ದೂರು ಸಲ್ಲಿಸಿದ್ದಾರೆ. ಅಪರಿಚಿತ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿ ಪ್ರಾಣ ಬೆದರಿಕೆ ಹಾಕಿದ್ದಾರೆ ಅಂತ ಪ್ರಿಯಾಂಕ್ ಖರ್ಗೆ ದೂರಿನಲ್ಲಿ ದಾಖಲಿಸಿದ್ದಾರೆ.

    ಪ್ರಿಯಾಂಕ್ ಖರ್ಗೆ ಅವರಿಗೂ ಸಹ ಅದೇ ದಿನ ಮಧ್ಯರಾತ್ರಿ 12.36ಕ್ಕೆ ಅಪರಿಚಿತ ನಂಬರ್ ನಿಂದ ಕರೆ ಬಂದಿದೆ. ಸುಮಾರು 10ಕ್ಕೂ ಹೆಚ್ಚು ಬಾರಿ ಕರೆ ಬಂದಿದ್ದರಿಂದ ಕರೆ ಸ್ವೀಕರಿಸಿದಾಗ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಮಾತನಾಡಿದ ವ್ಯಕ್ತಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಪ್ರಿಯಾಂಕ್ ಖರ್ಗೆ ದೂರಿನಲ್ಲಿ ತಿಳಿಸಿದ್ದಾರೆ.

    ಲೋಕಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರವಾಣಿಯಲ್ಲಿ ಪ್ರಾಣಬೆದರಿಕೆ ಹಾಕಿರುವ ಕೃತ್ಯವನ್ನು ಖಂಡಿಸುತ್ತೇನೆ. ಇದು ನಿಜಕ್ಕೂ ಪ್ರಜಾಪ್ರಭುತ್ವಕ್ಕೇ ಮಾರಕ. ಅಪರಾಧಿಯನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದ್ದಾರೆ.

  • ಮಧ್ಯಪ್ರದೇಶದ ಬೆನ್ನಲ್ಲೇ ಗುಜರಾತ್‍ನಲ್ಲಿ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

    ಮಧ್ಯಪ್ರದೇಶದ ಬೆನ್ನಲ್ಲೇ ಗುಜರಾತ್‍ನಲ್ಲಿ ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

    – ರಾಜ್ಯಸಭೆ ಚುನಾವಣೆಗೂ ಮುನ್ನ 5 ಶಾಸಕರು ರಾಜೀನಾಮೆ
    – ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟ್ ಮೊರೆ

    ಗಾಂಧಿನಗರ: ಮಧ್ಯಪ್ರದೇಶದ ಸಿಎಂ ಕಮಲ್‍ನಾಥ್ ಸರ್ಕಾರವನ್ನು ಅತಂತ್ರಕ್ಕೆ ಸಿಲುಕಿದ ಬೆನ್ನಲ್ಲೇ ಗುಜರಾತ್‍ನಲ್ಲಿ ಕಾಂಗ್ರೆಸ್ ಶಾಸಕರ ಹೈಜಾಕ್‍ಗೆ ‘ಕಮಲ ಪಡೆ’ ಸರ್ವಪ್ರಯತ್ನ ನಡೆಸಿದೆ.

    ರಾಜ್ಯಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಗುಜರಾತ್‍ನ 5 ಜನ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ಶಾಸಕರ ನಡೆಯಿಂದ ಕಾಂಗ್ರೆಸ್ ಹೈಕಮಾಂಡ್ ಕಂಗೆಟ್ಟು ಹೋಗಿದ್ದು, ಉಳಿದ ಶಾಸಕರನ್ನು ಪಕ್ಷದಲ್ಲೇ ಇರಿಸಿಕೊಳ್ಳಲು ರೆಸಾರ್ಟ್ ಮೊರೆ ಹೋಗಿದೆ. ಇದನ್ನೂ ಓದಿ:  ನಾಳೆ ಬೆಳಗ್ಗೆಯೇ ಬಹುಮತ ಸಾಬೀತುಪಡಿಸಿ- ಕೈ ಸರ್ಕಾರಕ್ಕೆ ಎಂಪಿ ರಾಜ್ಯಪಾಲ ಆದೇಶ

    ಗುಜರಾತ್‍ನ 4 ರಾಜ್ಯಸಭಾ ಸ್ಥಾನಗಳಿಗೆ ಮಾರ್ಚ್ 26ರಂದು ಚುನಾವಣೆ ನಡೆಯಲಿದೆ. ಈ ಮಧ್ಯೆ ಕಾಂಗ್ರೆಸ್ ಶಾಸಕರಾದ ಪ್ರವೀಣ್ ಮಾರು, ಮಂಗಲ್ ಗವಿತ್, ಸೋಮಭಾಯ್ ಪಟೇಲ್, ಜೆ.ವಿ.ಕಾಕಾಡಿಯಾ ಹಾಗೂ ಪ್ರದ್ಯುಮನ್ ಜಡೇಜಾ ಭಾನುವಾರ ರಾಜೀನಾಮೆ ನೀಡಿದ್ದಾರೆ.

    ಇದಕ್ಕೂ ಮೊದಲು ಆಪರೇಷನ್ ಕಮಲದ ಭಯದಿಂದ ಕಾಂಗ್ರೆಸ್ ತನ್ನ 14 ಶಾಸಕರನ್ನು ಜೈಪುರಕ್ಕೆ ಕಳುಹಿಸಿತ್ತು. ಜೊತೆಗೆ 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದೆ. ಈ ಮೂಲಕ ಎಲ್ಲ ಶಾಸಕರನ್ನು ರೆಸಾರ್ಟಿಗೆ ಕರೆದೊಯ್ಯಲಾಗಿದೆ. ಮೊಬೈಲ್ ಬಳಸದಂತೆ ಹಾಗೂ ತಮ್ಮ ಬಳಿ ಇಟ್ಟುಕೊಳ್ಳದಂತೆ ಶಾಸಕರಿಗೆ ಕಾಂಗ್ರೆಸ್ ನಾಯಕರು ಸೂಚನೆ ನೀಡಿದ್ದಾರೆ. ಒಂದು ರೀತಿ ಬಂಧನಕ್ಕೆ ಒಳಗಾಗಿರುವ ಶಾಸಕರು ಕುಟುಂಬ ಅಥವಾ ಪರಿಚಯಸ್ಥರನ್ನು ಭೇಟಿಯಾಗಲು ಸಹ ಸಾಧ್ಯವಾಗುತ್ತಿಲ್ಲ. ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸರ್ಕಾರವು ಕಾಂಗ್ರೆಸ್ ಹೈಕಮಾಂಡ್ ಆದೇಶದಂತೆ ಗುಜರಾತ್‍ನ ‘ಕೈ’ ಶಾಸಕರಿಗೆ ರಕ್ಷಣೆ ಒದಗಿಸಿದೆ ಎಂದು ವರದಿಯಾಗಿದೆ.

    14 ಶಾಸಕರನ್ನು ಜೈಪುರಕ್ಕೆ ಕಳುಹಿಸಲಾಗಿದೆ. 36 ಶಾಸಕರನ್ನು ರಾಜಸ್ಥಾನಕ್ಕೆ ಕಳುಹಿಸಲಾಗಿದ್ದು, ಅವರನ್ನು ಉದಯಪುರಕ್ಕೆ ಸ್ಥಳಾಂತರಿಸುವ ಸಾಧ್ಯತೆಯಿದೆ. ಉಳಿದ 5 ಶಾಸಕರನ್ನು ಗುಜರಾತ್‍ನ ರೆಸಾರ್ಟಿಗೆ ಕರೆದೊಯ್ಯಲು ಕಾಂಗ್ರೆಸ್ ನಿರ್ಧರಿಸಿದೆಯಂತೆ.

    ಅಂಕಿ ಅಂಶ:
    * ಗುಜರಾತ್ ವಿಧಾನಸಭೆಯಲ್ಲಿ ಒಟ್ಟು ಸ್ಥಾನಗಳು- 180
    * ಕಾಂಗ್ರೆಸ್ 5 ಶಾಸಕರ ರಾಜೀನಾಮೆಯಿಂದ 175ಕ್ಕೆ ಕುಸಿತ
    * ಬಿಜೆಪಿಯ ಬಲ 106 (ಬಿಜೆಪಿ ಶಾಸಕರು 103, ಎನ್‍ಸಿಪಿ 1, ಭಾರತೀಯ ಬುಡಕಟ್ಟು ಪಕ್ಷ2 )
    * ಕಾಂಗ್ರೆಸ್‍ನ ಬಲ 69 (ಕಾಂಗ್ರೆಸ್ 68, ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ 1)
    * ಗುಜರಾತ್‍ನಲ್ಲಿ ರಾಜ್ಯಸಭೆಯ ಎಷ್ಟು ಸ್ಥಾನಗಳಲ್ಲಿ ಚುನಾವಣೆ – 4

    ಅಭಯ್ ಭಾರದ್ವಾಜ್, ರಾಮಿವಾ ಬೆನ್ ಬಾರಾ ಮತ್ತು ನರ್ಹಾರಿ ಅಮೀನ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಶಕ್ತಿ ಸಿಂಗ್ ಗೋಹಿಲ್ ಮತ್ತು ಭಾರತ್ ಸಿಂಗ್ ಸೋಲಂಕಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

    ಸದ್ಯದ ಪರಿಸ್ಥಿಯ ಪ್ರಕಾರ ಬಿಜೆಪಿ 2 ಮತ್ತು ಕಾಂಗ್ರೆಸ್ 1 ಸುಲಭವಾಗಿ ಸ್ಥಾನವನ್ನು ಗೆಲ್ಲುತ್ತವೆ. ಆದರೆ ಕಾಂಗ್ರೆಸ್‍ನ ಇಬ್ಬರು ಶಾಸಕರು ಅಡ್ಡ ಮತ ಚಲಾಯಿಸಿದರೆ ಬಿಜೆಪಿ 3 ಸ್ಥಾನಗಳನ್ನು ಗೆಲ್ಲುತ್ತದೆ. ಬಿಜೆಪಿಯಲ್ಲಿ 106 ಶಾಸಕರು ಇದ್ದಾರೆ. ಈ ಮೂಲಕ 3 ರಾಜ್ಯಸಭಾ ಸ್ಥಾನಗಳನ್ನು ಗೆಲ್ಲಲು ಅವರಿಗೆ ಇನ್ನೂ 2 ಮತಗಳು ಬೇಕಾಗುತ್ತವೆ. ಹೀಗಾಗಿ ಕಾಂಗ್ರೆಸ್‍ನ ಇಬ್ಬರು ಶಾಸಕರ ಅಡ್ಡ ಮತದಾನ ಬಿಜೆಪಿಗೆ ಅಗತ್ಯವಿದೆ.

    2017ರಲ್ಲಿ ಗುಜರಾತ್‍ನ 3 ರಾಜ್ಯಸಭಾ ಸ್ಥಾನಗಳ ಚುನಾವಣೆಯ ಸಂದರ್ಭದಲ್ಲಿ ಇದೇ ರೀತಿಯ ಪರಿಸ್ಥಿತಿ ಸೃಷ್ಟಿಯಾಗಿತ್ತು. ಅಹ್ಮದ್ ಪಟೇಲ್ ಅವರ ವಿಜಯವನ್ನು ನಿರ್ಧರಿಸಲು ಕಾಂಗ್ರೆಸ್ ತನ್ನ ಶಾಸಕರನ್ನು ಕರ್ನಾಟಕಕ್ಕೆ ಕಳುಹಿಸಿತ್ತು. ಕೆಲವು ಶಾಸಕರು ಸಹ ಅಡ್ಡ ಮತದಾನ ಮಾಡಿದರು. ಆದರೆ ಅಹ್ಮದ್ ಪಟೇಲ್ ಮೇಲುಗೈ ಸಾಧಿಸಿದ್ದರು.

  • ‘ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ’

    ‘ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ’

    – ಸಿಂಧಿಯಾಗೆ ಪಕ್ಕಾ ಆಯ್ತು ರಾಜ್ಯಸಭಾ ಸ್ಥಾನ

    ಭೋಪಾಲ್: ಮಹಾರಾಜರೇ ಸ್ವಾಗತ, ನಿಮ್ಮ ಜೊತೆಗಿದ್ದಾನೆ ಶಿವರಾಜ ಎಂದು ಮಧ್ಯಪ್ರದೇಶ ಮಾಜಿ ಸಿಎಂ, ಬಿಜೆಪಿ ಮುಖಂಡ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿ, ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಸ್ವಾಗತಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚೌಹಾಣ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ನಂಬಿ ಮತ್ತು ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ನಂಬಿಕೆ, ಮಂತ್ರದ ಮೂಲ ಮಂತ್ರವನ್ನು ಅನುಸರಿಸಿ. ರಾಷ್ಟ್ರ ಮತ್ತು ಸಾರ್ವಜನಿಕರ ಸೇವೆ ಮಾಡಲು ಬಿಜೆಪಿ ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಕೆಲ ಶಾಸಕರು ನಮ್ಮ ಕುಟುಂಬ ಸೇರಿದ್ದಾರೆ. ಅವರನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಜೆಪಿ ನಡ್ಡಾ ಸಮ್ಮುಖದಲ್ಲಿ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರ್ಪಡೆ

    ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ದೂರ ದೃಷ್ಟಿ ಹೊಂದಿದ್ದಾರೆ. ಜನರ ಸೇವೆ ಮಾಡಲು ಅವರು ರಾಜಕೀಯಕ್ಕೆ ಬಂದಿದ್ದಾರೆ. ಅವರು 2018ರಲ್ಲಿ ನಡೆದ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪರ ಉತ್ಸಾಹದಿಂದ ಕೆಲಸ ಮಾಡಿದರು. ಆದರೆ ಕಾಂಗ್ರೆಸ್ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಉಳಿಸಿಕೊಂಡಿಲ್ಲ. ಹೀಗಾಗಿ ಜ್ಯೋತಿರಾದಿತ್ಯ ಅವರು ಬಿಜೆಪಿಗೆ ಬೆಂಬಲ ನೀಡಿದ್ದಾರೆ ಎಂದು ತಿಳಿಸಿದರು.

    ಕಾಂಗ್ರೆಸ್ ಹಾಗೂ ಪಕ್ಷೇತರ ಶಾಸಕರು ಬಿಜೆಪಿ ಸೇರಿದ್ದು ವೈಯಕ್ತಿಕವಾಗಿ ನನಗೆ ಸಂತೋಷದ ದಿನವಾಗಿದೆ. ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಬಿಜೆಪಿ ಮತ್ತೆ ಮುಂದಾಗಿದೆ ಎಂದರು. ಇದನ್ನೂ ಓದಿ: ಮಧ್ಯಪ್ರದೇಶದ ವೈರಸ್‍ಗೆ ಮಹಾರಾಷ್ಟ್ರಕ್ಕೆ ಪ್ರವೇಶವಿಲ್ಲ: ಶಿವಸೇನೆ

    ರಾಜ್ಯಸಭೆ:
    ಮುಂಬರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿಯು ಒಟ್ಟು 9 ಅಭ್ಯರ್ಥಿಗಳ ಪಟ್ಟಿಯನ್ನುಬಿಡುಗಡೆ ಮಾಡಿದೆ. ಈ ಪೈಕಿ ಮಧ್ಯಪ್ರದೇಶದಿಂದ ಬಿಜೆಪಿ ಅಭ್ಯರ್ಥಿಯಾಗಿ ಜ್ಯೋತಿರಾದಿತ್ಯ ಸಿಂಧಿಯಾ ಗುರುತಿಸಿಕೊಂಡಿದ್ದಾರೆ.