Tag: rajyasabha election

  • ಬಿಜೆಪಿಯ 1 ಪುಟದ ನೋಟಿಸ್‌ಗೆ 170 ಪುಟಗಳ ಉತ್ತರ ನೀಡಿದ್ದೇವೆ: ಎಸ್‌ಟಿ ಸೋಮಶೇಖರ್‌

    ಬಿಜೆಪಿಯ 1 ಪುಟದ ನೋಟಿಸ್‌ಗೆ 170 ಪುಟಗಳ ಉತ್ತರ ನೀಡಿದ್ದೇವೆ: ಎಸ್‌ಟಿ ಸೋಮಶೇಖರ್‌

    ಬೆಂಗಳೂರು: ಬಿಜೆಪಿ (BJP) ನೀಡಿದ 1 ಪುಟದ ನೋಟಿಸ್‌ಗೆ ನಾವು 170 ಪುಟಗಳ ಉತ್ತರ ನೀಡಿದ್ದೇವೆ ಎಂದು ರೆಬೆಲ್‌ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ (ST Somashekar) ಹೇಳಿದ್ದಾರೆ.

    ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮಗೆ ಬಿಜೆಪಿಯವರು ನೀಡಿದ್ದ ನೋಟಿಸ್‌ಗೆ ದೀರ್ಘ ಉತ್ತರ ನೀಡಿದ್ದೇವೆ. ಯಾವ್ಯಾವ ರಾಜ್ಯದಲ್ಲಿ ಕೋರ್ಟ್ ತೀರ್ಪು ಏನು ಬಂದಿದೆ? ಯಾವ್ಯಾವ ರಾಜ್ಯದಲ್ಲಿ ಬಿಜೆಪಿ ಇಂತಹ ವಿಚಾರದಲ್ಲಿ ಯಾವ ನಿರ್ಧಾರ ಕೈಗೊಂಡಿದೆ? ಎಲ್ಲಾ ದಾಖಲೆ ಸೇರಿಸಿ 170 ಪುಟಗಳ ಉತ್ತರ ಕೊಟ್ಟಿದ್ದೇವೆ ಎಂದು ತಿಳಿಸಿದರು.

     

    ಶಿವರಾಂ ಹೆಬ್ಬಾರ್ (Shivaram Hebbar) ಪ್ರತಿಕ್ರಿಯಿಸಿ, ಸೋಮಶೇಖರ್ ಅವರದ್ದು ಅಡ್ಡ ಮತದಾನ. ನನ್ನದು ಮತದಾನಕ್ಕೆ ಗೈರು ನೋಟಿಸ್‌ಗೆ ಬೇರೆ ರೀತಿಯ ಉತ್ತರ ಕೊಟ್ಟಿದ್ದೇನೆ. ನನ್ನದು ಸೋಮಶೇಖರ್ ಉತ್ತರಕ್ಕಿಂತ 2 ಪುಟ ಕಡಿಮೆ ಇರಬಹುದು. ಆದರೆ ಎಲ್ಲಾ ದಾಖಲೆ ಸಹಿತ ಉತ್ತರ ಕೊಟ್ಟಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಯಲ್ಲೇ ಇದ್ದು ಶುದ್ದೀಕರಣದ ಕಡೆ ನನ್ನ ನಡೆ: ಡಿವಿಎಸ್‌ ಘೋಷಣೆ

    ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಭೇಟಿಗೆ ಸದಾಶಿವನಗರ ನಿವಾಸಕ್ಕೆ ಬಿಜೆಪಿ ರೆಬೆಲ್ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಒಂದೇ ಕಾರಿನಲ್ಲಿ ಆಗಮಿಸಿದ್ದರು. ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಸಂಬಂಧ ಡಿಸಿಎಂ ಭೇಟಿ ಮಾಡಿದ್ದೇವೆ ಎಂದು ಎಸ್‌ಟಿ ಸೋಮಶೇಖರ್‌ ಭೇಟಿ ಬಳಿಕ ಮಾಧ್ಯಮಗಳಿಗೆ ತಿಳಿಸಿದರು. ಇದನ್ನೂ ಓದಿ: ಡಬಲ್‌ ಮರ್ಡರ್‌ ಕೇಸ್‌ – ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ!

    ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಸೋಮಶೇಖರ್‌ ಅಡ್ಡ ಮತದಾನ ಮಾಡಿದ್ದರೆ ಶಿವರಾಂ ಹೆಬ್ಬಾರ್‌ ಮತದಾನಕ್ಕೆ ಗೈರು ಹಾಜರಿ ಹಾಕಿದ್ದರು. ವಿಪ್‌ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರಣ ಕೇಳಿ ನೋಟಿಸ್‌ ಜಾರಿ ಮಾಡಿತ್ತು.

  • ಅನಾರೋಗ್ಯದ ಕಾರಣ ಮತದಾನ ಮಾಡಲು ಆಗಲಿಲ್ಲ: ಶಿವರಾಮ್‌ ಹೆಬ್ಬಾರ್‌ ಸ್ಪಷ್ಟನೆ

    ಅನಾರೋಗ್ಯದ ಕಾರಣ ಮತದಾನ ಮಾಡಲು ಆಗಲಿಲ್ಲ: ಶಿವರಾಮ್‌ ಹೆಬ್ಬಾರ್‌ ಸ್ಪಷ್ಟನೆ

    ಕಾರವಾರ: ಬೆಳಗ್ಗೆ ಆರೋಗ್ಯ ಸರಿ ಇರಲಿಲ್ಲ, ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ (Rajyasabha Election) ಮತದಾನ ಮಾಡಲು ಆಗಲಿಲ್ಲ ಎಂದು ಯಲ್ಲಾಪುರದಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ (Shivaram Hebbar) ಸ್ಪಷ್ಟನೆ ನೀಡಿದ್ದಾರೆ.

    ರಾಜ್ಯಸಭಾ ಚುನಾವಣೆಗೆ ಗೈರಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಬೆಳಗ್ಗೆ ಆರೋಗ್ಯ ಸರಿ ಇರಲಿಲ್ಲ. ವೈದ್ಯರ ಸಲಹೆಯಂತೆ 6 ಗಂಟೆಗೆ ಬರಬೇಕಾಯ್ತು. ಅಸಮಾಧಾನವಿದ್ದಿದ್ದರೇ ಅಡ್ಡ ಮತದಾನ ಮಾಡುವ ಅವಕಾಶ ಇತ್ತು. ಹಾಗೆ ಮಾಡಲಿಲ್ಲ ಎಂದರು. ಇದನ್ನೂ ಓದಿ: ಸೋಲು ನಮಗೆ, ನಮ್ಮ ಕುಟುಂಬಕ್ಕೆ ಹೊಸದೇನು ಅಲ್ಲ: ಹೆಚ್‌ಡಿಕೆ

    ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ನಾನು ಯಾರಿಗೂ ಹೆದರಿ ಮತದಾನಕ್ಕೆ ಹೋಗಿಲ್ಲ. ನಾನು ಮತದಾನಕ್ಕೆ ಹೋಗಿ ಅಡ್ಡ ಮತದಾನ ಮಾಡಬಹುದಿತ್ತು,ಇಲ್ಲವೇ ಮತದಾನ ಮಾಡದೆಯೇ ಇರಬಹುದಿತ್ತು. ನಾನು ಯಾರಿಗೂ ವಾರ್ನಿಂಗ್ ಕೊಡಲು ಹೋಗಿಲ್ಲ. ನನಗೆ ನನ್ನದೇ ಆದ ಅಸಮಾಧಾನ ಇರುವುದು ನಿಜ. ಅದು ಜಿಲ್ಲಾಮಟ್ಟದಲ್ಲಿಮಾತ್ರ ಎಂದು ಹೆಬ್ಬಾರ್‌ ಹೇಳಿದರು.

    ಕೇಂದ್ರ ಮತ್ತು ರಾಜ್ಯದ ಮುಖಂಡರ ಮೇಲೆ ಅಸಮಾಧಾನ ಇಲ್ಲ. ಸಮಸ್ಯೆ ಇರುವುದು ಜಿಲ್ಲಾ ಮಟ್ಟದ ನಾಯಕರಿಂದ ಮಾತ್ರ. ಯಾರು ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ಕೊಡಲಿದೆ ಎಂದು ತಿಳಿಸಿದರು.

  • ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ: ಸಿ.ಟಿ ರವಿ ಗರಂ

    ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ: ಸಿ.ಟಿ ರವಿ ಗರಂ

    ಚಿಕ್ಕಮಗಳೂರು: ರಾಜಕಾರಣದ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಸಲ್ಲುತ್ತಾರೆ. ಅಲ್ಲದೆ ಇವರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗುತ್ತಾರೆ ಎಂದು ಮಾಜಿ ಶಾಸಕ ಸಿ.ಟಿ.ರವಿ (CT Ravi) ವಾಗ್ದಾಳಿ ನಡೆಸಿದ್ದಾರೆ.

    ರಾಜ್ಯಸಭೆ ಚುನಾವಣೆಯಲ್ಲಿ ಎಸ್.ಟಿ.ಸೋಮಶೇಖರ್ (ST Somashekhar) ಅಡ್ಡ ಮತದಾನದ ಕುರಿತು ಪ್ರತಿಕ್ರಿಯಿಸಿದ ಅವರು, ವ್ಯಕ್ತಿ ಸಂಬಂಧಕ್ಕೋಸ್ಕರ ರಾಜೀ ರಾಜಕಾರಣ ಒಳ್ಳೆಯದಲ್ಲ. ಅವಕಾಶವಾದಿಗಳಿಗೆ ಸಪೋರ್ಟ್ ಮಾಡೋದು ಅನೈತಿಕ ರಾಜಕಾರಣಕ್ಕೆ ವೇದಿಕೆ ಸೃಷ್ಠಿಸಿದಂತೆ. ಪಕ್ಷ-ಪಕ್ಷ ಅನ್ನೋ ನಾವು ಪ್ರಶ್ನೆಗಳಿಗೆ ಒಳಗಾಗುತ್ತೇವೆ ಎಂದರು. ಇದನ್ನೂ ಓದಿ: ಸೋಮಶೇಖರ್ ವಿರುದ್ಧ ಸ್ಪೀಕರ್‌ಗೆ ದೂರು: ದೊಡ್ಡನಗೌಡ ಪಾಟೀಲ್

    ರಾಜಕೀಯ ವ್ಯಭಿಚಾರ ಮಾಡೋರು ಎಲ್ಲಾ ಕಡೆ ಹೋಗಿ ಸುಲಭವಾಗಿ ಸೆಟ್ ಆಗ್ತಾರೆ. ಹಾರ್ಡ್ ಕೋರ್, ಸಿದ್ಧಾಂತಕ್ಕೆ ರಾಜಕಾರಣ ಮಾಡೋರು ನಿಷ್ಠೂರಕ್ಕೆ ಒಳಗಾಗುತ್ತಾರೆ. ಇಂಥವರು ನಮ್ಮ ಪಕ್ಷದ ಸಿಎಂ ಬೇರೆ ಪಕ್ಷದ ಸಿಎಂ ಬಳಿಯೂ ಚೆನ್ನಾಗಿರುತ್ತಾರೆ. ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು. ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡೋದು ಶೂನ್ಯ ಸಹನೆ ಎಂದು ಸಿ.ಟಿ ರವಿ ಕಿಡಿಕಾರಿದರು.

    ಎಸ್‌ಟಿಎಸ್‌ ಅಡ್ಡಮತದಾನ: ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಟಿ ಸೋಮಶೇಕರ್ ಅವರು ಅಡ್ಡಮತದಾನದ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ ಪರ ಮತ ಎಸ್‍ಟಿಎಸ್ ಚಲಾಯಿಸಿದ್ದಾರೆ. ಹೀಗಾಗಿ ಎಸ್‍ಟಿಎಸ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

  • ಸೋಮಶೇಖರ್ ವಿರುದ್ಧ ಸ್ಪೀಕರ್‌ಗೆ  ದೂರು: ದೊಡ್ಡನಗೌಡ ಪಾಟೀಲ್

    ಸೋಮಶೇಖರ್ ವಿರುದ್ಧ ಸ್ಪೀಕರ್‌ಗೆ ದೂರು: ದೊಡ್ಡನಗೌಡ ಪಾಟೀಲ್

    ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಟಿ ಸೋಮಶೇಖರ್ (ST Somashekhar) ಅವರು ಅಡ್ಡಮತದಾನದ ಮೊರೆ ಹೋಗಿದ್ದಾರೆ.

    ಕಾಂಗ್ರೆಸ್ ಅಭ್ಯರ್ಥಿ ಜಿ.ಸಿ.ಚಂದ್ರಶೇಖರ್ (G.C Chandrashekhar) ಪರ ಮತ ಎಸ್‍ಟಿಎಸ್ ಚಲಾಯಿಸಿದ್ದಾರೆ. ಹೀಗಾಗಿ ಎಸ್‍ಟಿಎಸ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಶಾಕ್‌ – ಕಾಂಗ್ರೆಸ್‌ ಪರ ಎಸ್‌.ಟಿ.ಸೋಮಶೇಖರ್‌ ಮತ

    ಈ ಸಂಬಂಧ ಬಿಜೆಪಿ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಸೋಮಶೇಖರ್ ವಿರುದ್ಧ ಸಂಜೆ 4 ಗಂಟೆ ನಂತರ ಸ್ಪೀಕರ್ ಗೆ ದೂರು ಕೊಡ್ತೀವಿ. ಶಿಸ್ತು ಕ್ರಮ ತೆಗೆದುಕೊಳ್ಳುತ್ತೇವೆ. ಜೊತೆಗೆ ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆಯೂ ದೂರಿನಲ್ಲಿ ತಿಳಿಸುವುದಾಗಿ ಹೇಳಿದರು.

    ಎಲ್ಲರಿಗೂ ವಿಪ್ ಜಾರಿ ಮಾಡಿದ್ದೆವು. ಸೋಮಶೇಖರ್ ವಿರುದ್ಧ ಸ್ಪೀಕರ್ ಗೆ ದೂರು ಕೊಡಲು ನಿರ್ಧಾರ ಮಾಡಿದ್ದೇವೆ. ಅವರಿಗೆ ಖುದ್ದು ಭೇಟಿ ವಿಪ್ ಕೊಟ್ ಬಂದಿದ್ದೆ, ವಾಟ್ಸಪ್‍ನಲ್ಲೂ ಕಳಿಸಿದ್ದೆ. ಅವರ ವಿರುದ್ಧ ಶಿಸ್ತು ಕ್ರಮಕ್ಕೆ ನಿರ್ಧಾರ ಆಗಿದೆ. ಶಿವರಾಂ ಹೆಬ್ಬಾರ್ ಗೂ ವಿಪ್ ಕೊಡಲಾಗಿತ್ತು. ಆದರೆ ಅವರಿನ್ನೂ ಮತ ಹಾಕಲು ಬಂದಿಲ್ಲ ಎಂದರು.

  • ಭೇಟಿಯಾಗಿ ಭರವಸೆ ಕೊಟ್ಟವರಿಗೆ ಮತ ಹಾಕ್ತೀನಿ: ಸೋಮಶೇಖರ್

    ಭೇಟಿಯಾಗಿ ಭರವಸೆ ಕೊಟ್ಟವರಿಗೆ ಮತ ಹಾಕ್ತೀನಿ: ಸೋಮಶೇಖರ್

    ಬೆಂಗಳೂರು: ನಾನು ಯಾರನ್ನೂ ಭೇಟಿ ಮಾಡಲ್ಲ. ನನ್ನನ್ನು ಭೇಟಿ ಮಾಡಿ, ಭರವಸೆ ಕೊಟ್ಟರೆ ಅವರಿಗೆ ಮತ ಹಾಕುತ್ತೇನ ಎಂದು ಮಾಜಿ ಸಚಿವ ಎಸ್.ಟಿ ಸೋಮಶೇಖರ್ (ST Somashekhar) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿದ್ದಾಗ ಬಿಜೆಪಿಗೆ, ಕಾಂಗ್ರೆಸ್‍ನಲ್ಲಿದ್ದಾಗ ಕಾಂಗ್ರೆಸ್‍ಗೆ ವೋಟ್ ಹಾಕಿದ್ದೇನೆ. ಕಳೆದ ಬಾರಿ ನಿರ್ಮಲಾ ಸೀತಾರಾಮನ್‍ಗೆ ಹಾಕಿ ಎಂದರು. ಆದರೆ ಎಲೆಕ್ಷನ್ ಮುಗಿದ ಮೇಲೆ ನಿರ್ಮಲಾ ಸೀತಾರಾಮನ್ (Nirmala Sitaraman) ಭೇಟಿಗೆ ಅವಕಾಶವೇ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

    ಯಾರು ನನ್ನ ಕ್ಷೇತ್ರಕ್ಕೆ ಅನುದಾನ ಕೊಡ್ತಾರೆ ಅವರಿಗೆ ನನ್ನ ಮತ ಕೊಡುತ್ತೇನೆ. ನಾನು ಯಾರನ್ನೂ ಭೇಟಿ ಮಾಡಲ್ಲ. ನನ್ನನ್ನು ಭೇಟಿ ಮಾಡಿ, ಭರವಸೆ ಕೊಟ್ಟರೆ ಅವರಿಗೆ ಮತ ಹಾಕುತ್ತೇನೆ. ನನ್ನ ಕ್ಷೇತ್ರಕ್ಕೆ ಸರ್ಕಾರಿ ಶಾಲೆಗೆ ಯಾರು ಅನುದಾನ ಕೊಡ್ತಾರೆ ಅವರಿಗೆ ಮತ ನೀಡುತ್ತೇನೆ. 5-6 ಸಾರಿ ರಾಜ್ಯಸಭೆಗೆ ಅವರು ಹೇಳಿದಂತೆ ಹಾಕಿದ್ದೀನಿ. ಪಕ್ಷ ಹೇಳಿದಂತೆ ಕೇಳಿದ್ದೇನೆ. ಸಿಎಂ ಸ್ಥಾನಕ್ಕಾಗಿ ಅವರು ಅವಕಾಶವಾದಿಗಳಲ್ವಾ ಎಂದು ಹೆಚ್‍ಡಿಕೆಗೆ ಟಾಂಗ್ ಕೊಟ್ಟರು.

    ಸಿಎಂ ಆದ್ಮೇಲೆ ಒಂದು, ಆಗೋ ಮುಂಚೆ ಒಂದಾ..? ವೋಟ್ ಹಾಕಿದ ಮೇಲೆ ನಮಗೆ ವ್ಯಾಲ್ಯೂ ಇಲ್ವಾ..?. ರಾಜ್ಯಸಭೆ ಅಭ್ಯರ್ಥಿಗೆ ಅನುದಾನ ಬರುತ್ತೇ.. ಆ ಅನುದಾನ ನನ್ನ ಕ್ಷೇತ್ರಕ್ಕೆ ಕೊಡೊರಿಗೆ ನಾನು ಮತ ಹಾಕುತ್ತೇನೆ ಎಂದು ಎಸ್‍ಟಿಎಸ್ ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಿಂತ ಒಗ್ಗಟ್ಟು ತೋರಿಸಬೇಕು: ಹೆಚ್‌ಡಿಕೆ

  • ಇಂದು ರಾಜ್ಯಸಭೆ ಹೈವೋಲ್ಟೇಜ್ ಕದನ- ವಿಧಾನಸೌಧದಲ್ಲಿ ಸಿದ್ಧತೆ ಹೇಗಿದೆ?

    ಇಂದು ರಾಜ್ಯಸಭೆ ಹೈವೋಲ್ಟೇಜ್ ಕದನ- ವಿಧಾನಸೌಧದಲ್ಲಿ ಸಿದ್ಧತೆ ಹೇಗಿದೆ?

    ಬೆಂಗಳೂರು: ಇಂದು ರಾಜ್ಯಸಭೆ ಹೈವೋಲ್ಟೇಜ್ ಕದನ ನಡೆಯಲಿದೆ. ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಮತದಾನ ನಡೆಯಲಿದೆ. ಬೆಳಗ್ಗೆ 9ರಿಂದ ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.

    ಮೂರು ಪಕ್ಷಗಳಿಗೂ ರಾಜ್ಯಸಭೆ ಚುನಾವಣೆ (Rajyasabha Election) ಅಗ್ನಿ ಪರೀಕ್ಷೆ ಎದುರಾಗಿದೆ. 3 ಪಕ್ಷಗಳಿಗೆ ಅಡ್ಡ ಮತದಾನದ ಭೀತಿ ಶುರುವಾಗಿದೆ. 4 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 223 ಶಾಸಕರಿಂದ ಮತದಾನ ಆಗಲಿದೆ. ಇದನ್ನೂ ಓದಿ: ಕುತೂಹಲ ಘಟ್ಟದಲ್ಲಿ ರಾಜ್ಯಸಭಾ ಚುನಾವಣೆ – ನಂಬರ್‌ ಗೇಮ್‌ ಹೇಗಿದೆ? ಕಾಂಗ್ರೆಸ್‌, ದೋಸ್ತಿಗಳ ಲೆಕ್ಕಾಚಾರ ಏನು?

    ಸಿದ್ಧತೆ ಹೇಗಿದೆ..?: ಮತದಾನಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಬಿಗಿ ಭದ್ರತೆಯಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಮತದಾನಕ್ಕೆ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಮತದಾನ ಕೊಠಡಿ ಬಳಿ ಬ್ಯಾರಿಕೇಡ್ ಹಾಕಿ ಬಿಗಿ ಭದ್ರತೆ ಒದಗಿಸಲಾಗುತ್ತಿದೆ. ಮತದಾನ ಕೊಠಡಿಯೊಳಗೆ ಏಜೆಂಟ್ ಗಳಿಗೆ ಪ್ರತ್ಯೇಕವಾಗಿ ಆಸನ ವ್ಯವಸ್ಥೆ ಮಾಡಲಗುತ್ತಿದೆ. ಶಾಸಕರು ತಮ್ಮ ಪಕ್ಷದ ಏಜೆಂಟರಿಗೆ ತೋರಿಸಿ ಮತದಾನ ಮಾಡಬೇಕಾಗುತ್ತದೆ. ಮತದಾನ ಕೇಂದ್ರದಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಲಾಗಿದೆ. ಜೊತೆಗೆ ಮತದಾನ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡಿಂಗ್  ಮಾಡಿಕೊಳ್ಳಲಾಗುತ್ತದೆ.

    ಅಖಾಡದಲ್ಲಿ ಯಾರೆಲ್ಲಾ ಇದ್ದಾರೆ..?: ರಾಜ್ಯಸಭೆ ಅಖಾಡದಲ್ಲಿ ಕಾಂಗ್ರೆಸ್‍ನಿಂದ (Congress) ಅಜಯ್ ಮಾಕೇನ್, ಸಯ್ಯದ್ ನಸೀರ್ ಹುಸೇನ್ ಮತ್ತು ಜಿ.ಸಿ. ಚಂದ್ರಶೇಖರ್ ಸ್ಪರ್ಧೆ ಮಾಡ್ತಿದ್ದಾರೆ. ಬಿಜೆಪಿಯಿಂದ (BJP) ನಾರಾಯಣಸಾ ಬಾಂಡಗೆ ಸ್ಪರ್ಧೆ ಮಾಡ್ತಿದ್ದು, 5ನೇ ಅಭ್ಯರ್ಥಿಯಾಗಿ ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಅಭ್ಯರ್ಥಿಯಾಗಿ ಕುಪೇಂದ್ರ ರೆಡ್ಡಿ ಕಣದಲ್ಲಿ ಇದ್ದಾರೆ. ಮತಗಳ ಆಧಾರದಲ್ಲಿ ಕಾಂಗ್ರೆಸ್‍ಗೆ 3 ಸ್ಥಾನ, ಬಿಜೆಪಿಗೆ 1 ಸ್ಥಾನ ಬರುವುದು ಖಚಿತ ಎನ್ನಲಾಗಿದೆ. ಆದ್ರೆ ಕಾಂಗ್ರೆಸ್‍ನಲ್ಲಿ ಅಡ್ಡ ಮತದಾನವಾದರೆ ಮೈತ್ರಿ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರ ಶುರುವಾಗಿದೆ.‌

    ಹೋಟೆಲ್‌ನಲ್ಲಿ ತಂಗಿದ್ದ ಶಾಸಕರು: ಇತ್ತ ರಾಜ್ಯ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕರು ಹಿಲ್ಟನ್ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಶಾಸಕಾಂಗ ಸಭೆ ಮುಗಿಸಿ ಕೆಲ ಶಾಸಕರು ರಾತ್ರಿಯೇ ಮನೆಗೆ ತೆರಳಿದ್ದು, ಇಂದು ಬೆಳಗ್ಗೆ ಹಿಲ್ಟನ್ ಹೋಟೆಲ್ ಗೆ ವಾಪಾಸ್ ಆಗುತ್ತಿದ್ದಾರೆ. ಬೆಳಗ್ಗಿನ ಉಪಹಾರದ ನಂತರ ಬಸ್ ಮುಖಾಂತರ ಶಾಸಕರು ವಿಧಾನಸೌಧಕ್ಕೆ ತೆರಳಲಿದ್ದಾರೆ.

  • Rajyasabha Polls: ಕಾಂಗ್ರೆಸ್‌ನಿಂದ ಕರ್ನಾಟಕದ ಮೂವರಿಗೆ ಟಿಕೆಟ್

    Rajyasabha Polls: ಕಾಂಗ್ರೆಸ್‌ನಿಂದ ಕರ್ನಾಟಕದ ಮೂವರಿಗೆ ಟಿಕೆಟ್

    ನವದೆಹಲಿ: ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ (Rajyasabha Election) ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಮೂವರಿಗೆ ಟಿಕೆಟ್‌ ನೀಡಲಾಗಿದೆ.

    ಅಜಯ್ ಮಾಕನ್, ಡಾ ಸೈಯದ್ ನಾಸೀರ್ ಹುಸೇನ್ ಹಾಗೂ ಜಿಸಿ ಚಂದ್ರಶೇಖರ್ ಅವರಿಗೆ ಕರ್ನಾಟಕದಿಂದ ಪಕ್ಷ ಟಿಕೆಟ್‌ ನೀಡಿದೆ. ಇನ್ನು ಮಧ್ಯಪ್ರದೇಶದಿಂದ ಅಶೋಕ್ ಸಿಂಗ್, ರೇಣುಕಾ ಚೌಧರಿ ಮತ್ತು ತೆಲಂಗಾಣದಿಂದ ಎಂ ಅನಿಲ್ ಕುಮಾರ್ ಯಾದವ್ ಅವರನ್ನು ಕಾಂಗ್ರೆಸ್ (Congress) ಕಣಕ್ಕಿಳಿಸಿದೆ.

    ಪಕ್ಷದ ಹಿರಿಯ ನಾಯಕ ಮತ್ತು ಮಧ್ಯಪ್ರದೇಶದ (Madyapradesh) ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ರಾಜ್ಯಸಭೆಗೆ ಹೋಗಲು ಬಯಸಿದ್ದರು. ಇದೇ ಕಾರಣಕ್ಕೆ ಸೋನಿಯಾ ಗಾಂಧಿಯವರನ್ನು ಕೂಡ ಭೇಟಿಯಾಗಿದ್ದರು ಎಂದು ಹೇಳಲಾಗಿತ್ತು. ಆದರೆ ಈ ಪಟ್ಟಿಯಲ್ಲಿ ಅವರ ಹೆಸರನ್ನು ಉಲ್ಲೇಖಿಸಿಲ್ಲ.

    15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಮತಎಣಿಕೆಯೂ ನಡೆಯಲಿದೆ. ಫೆಬ್ರವರಿ 15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಇದನ್ನೂ ಓದಿ: ಅಜ್ಜನ ಕನಸು ನೆರವೇರಿಸಲು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮೊಗ

  • Rajyasabha Polls: ಗುಜರಾತ್‌ನಿಂದ ಜೆ.ಪಿ ನಡ್ಡಾ, ಮಹಾರಾಷ್ಟ್ರದಿಂದ ಅಶೋಕ್ ಚವಾಣ್‌ಗೆ ಟಿಕೆಟ್‌

    Rajyasabha Polls: ಗುಜರಾತ್‌ನಿಂದ ಜೆ.ಪಿ ನಡ್ಡಾ, ಮಹಾರಾಷ್ಟ್ರದಿಂದ ಅಶೋಕ್ ಚವಾಣ್‌ಗೆ ಟಿಕೆಟ್‌

    ನವದೆಹಲಿ: ಗುಜರಾತ್ ಮತ್ತು ಮಹಾರಾಷ್ಟ್ರದಿಂದ ರಾಜ್ಯಸಭಾ ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಗುಜರಾತ್‌ನಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಮಹಾರಾಷ್ಟ್ರದಿಂದ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಅಶೋಕ್ ಚವಾಣ್ ರಾಜ್ಯಸಭಾ (Rajyasabha Election) ಟಿಕೆಟ್ ಪಡೆದಿದ್ದಾರೆ.

    ಪಕ್ಷ ಬಿಡುಗಡೆ ಮಾಡಿರುವ ಹೊಸ ಪಟ್ಟಿಯಲ್ಲಿ ಗುಜರಾತ್‌ನ ನಾಲ್ವರು ಅಭ್ಯರ್ಥಿಗಳ ಹೆಸರುಗಳಿವೆ. ಜೆಪಿ ನಡ್ಡಾ (JP Nadda) ಅವರಲ್ಲದೆ, ಗುಜರಾತ್‌ನಿಂದ ಗೋವಿಂದ್ ಭಾಯಿ ಧೋಲಾಕಿಯಾ, ಮಾಯಾಂಕ್‌ಭಾಯ್ ನಾಯಕ್ ಮತ್ತು ಡಾ. ಜಶ್ವಂತ್ ಸಿಂಗ್ ಸಲಾಂ ಸಿಂಗ್ ಪರ್ಮಾರ್ ಅವರನ್ನು ರಾಜ್ಯಸಭಾ ಅಭ್ಯರ್ಥಿಗಳಾಗಿ ಪಕ್ಷ ಘೋಷಿಸಿದೆ. ಇತ್ತ ಮಹಾರಾಷ್ಟ್ರದಿಂದ ಅಶೋಕ್ ಚವಾಣ್ (Ashok Chavan), ಮೇಧಾ ಕುಲಕರ್ಣಿ ಮತ್ತು ಡಾ. ಅಜಿತ್ ಗೋಪ್ಚಾಡೆ ಅವರಿಗೆ ಪಕ್ಷ ರಾಜ್ಯಸಭಾ ಟಿಕೆಟ್ ನೀಡಿದೆ.

    ವಜ್ರದ ಉದ್ಯಮಿಗೆ ಟಿಕೆಟ್: ಗುಜರಾತ್‌ನ ವಜ್ರದ ವ್ಯಾಪಾರಿ ಗೋವಿಂದಭಾಯ್ ಧೋಲಾಕಿಯಾ ಅವರಿಗೆ ಬಿಜೆಪಿ ರಾಜ್ಯಸಭಾ ಟಿಕೆಟ್ ನೀಡಿರುವುದು ಅಚ್ಚರಿ ಹುಟ್ಟಿಸಿದೆ. ಗೋವಿಂದಭಾಯಿ ಧೋಲಾಕಿಯಾ ಅವರು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ 11 ಕೋಟಿ ರೂಪಾಯಿ ದೇಣಿಗೆ ನೀಡಿ ಸುದ್ದಿಯಾಗಿದ್ದರು. ಇವರು RSSನೊಂದಿಗೆ ಬಹಳ ಹಿಂದಿನಿಂದಲೂ ಉತ್ತಮ ಸಂಬಂಧವನ್ನು ಹೊಂದಿದವರಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ನವ್ರು ಕೊಟ್ಟ ಕಾರ್ಡ್ ನೀಡಿದ್ರೆ ಮೈತ್ರಿ ಪಕ್ಷದಿಂದ ಗಿಫ್ಟ್

    ಫೆ.27 ರಂದು ಮತದಾನ: ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನಾಂಕವಾಗಿದ್ದು, ಫೆ. 16 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ತಮ್ಮ ಹೆಸರನ್ನು ಫೆ. 20 ರವರೆಗೆ ಹಿಂಪಡೆಯಲು ಅವಕಾಶ ಇದೆ. ಫೆ.27ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5ರಿಂದ ಮತ ಎಣಿಕೆ ನಡೆಯಲಿದೆ.

  • Rajya Sabha Election: ಬುಧವಾರ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ?

    Rajya Sabha Election: ಬುಧವಾರ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ?

    – ಇಂದು ರಾತ್ರಿಯೇ ನಿರ್ಧಾರ

    ನವದೆಹಲಿ: 2024ರ ಲೋಕಸಭಾ ಚುನಾವಣೆಗೂ ಮುನ್ನ ದೇಶದ ವಿವಿಧ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ (Rajyasabha Election) ನಡೆಯಲಿದೆ. ಈ ಬಾರಿಯ ಚುನಾವಣೆಗೆ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಕೂಡ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಈ ಬೆನ್ನಲ್ಲೇ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದಾಗಿ ವರದಿಯಾಗಿದೆ.

    ಸೋನಿಯಾ ಗಾಂಧಿ (Sonia Gandhi) ಅವರು ಈ ಬಾರಿ ರಾಜ್ಯಸಭೆಗೆ ಸಿದ್ಧರಾಗಿದ್ದಾರೆ. ಅವರು ನಾಳೆ ನಾಮಪತ್ರ (Nomination) ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಸೋನಿಯಾ ಗಾಂಧಿ ಅವರ ಜೊತೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕೂಡ ಉಪಸ್ಥಿತರಿರುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಸೋನಿಯಾ ಗಾಂಧಿ ಯಾವ ರಾಜ್ಯದಿಂದ ಸ್ಪರ್ಧಿಸುತ್ತಾರೆ ಎಂಬುದು ಇಂದು ರಾತ್ರಿಯೊಳಗೆ ಅಂತಿಮ ನಿರ್ಧಾರವಾಗಲಿದೆ ಎನ್ನಲಾಗಿದೆ.

    ಕಾಂಗ್ರೆಸ್‌ನಿಂದ ಸೋನಿಯಾ ಗಾಂಧಿ ಅವರನ್ನು ರಾಜ್ಯಸಭೆಗೆ ಕಳುಹಿಸಬಹುದು ಎಂಬ ವಿಷಯ ಬಹಳ ದಿನಗಳಿಂದ ಚರ್ಚೆಯಲ್ಲಿದೆ. ತೆಲಂಗಾಣ ಅಥವಾ ರಾಜಸ್ಥಾನದಿಂದ ರಾಜ್ಯಸಭೆಗೆ ಸೋನಿಯಾ ನಾಮಪತ್ರ ಸಲ್ಲಿಸುವ ಸಾಧ್ಯತೆ ಹಲವು ಬಾರಿ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ. ಇದನ್ನೂ ಓದಿ: ರಾಜಸ್ಥಾನದಿಂದ ಸೋನಿಯಾ ಗಾಂಧಿ ರಾಜ್ಯಸಭಾ ಚುನಾವಣೆಗೆ ಸ್ಪರ್ಧೆ?

  • ರಾಜ್ಯಸಭೆ ಚುನಾವಣೆಯ ಟೆನ್ಶನ್ ಮಧ್ಯೆಯೇ ಸಿದ್ದರಾಮಯ್ಯ ಶಾಪಿಂಗ್

    ರಾಜ್ಯಸಭೆ ಚುನಾವಣೆಯ ಟೆನ್ಶನ್ ಮಧ್ಯೆಯೇ ಸಿದ್ದರಾಮಯ್ಯ ಶಾಪಿಂಗ್

    ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಸಭಾ ಚುನಾವಣೆ ನಡೆಯಲಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಪಿಂಗ್ ತೆರಳಿರುವುದು ಗಮನಸೆಳೆದಿದೆ.

    ರಾಜ್ಯಸಭೆ ಸಂಬಂಧ ಜೆಡಿಎಸ್ ನಿಯೋಗ ಸಿದ್ದರಾಮಯ್ಯರನ್ನ ಭೇಟಿ ಮಾಡಿ ಮಾತುಕತೆ ನಡೆಸಿತ್ತು. ನಿಯೋಗದ ಭೇಟಿ ಬಳಿಕ ನೇರವಾಗಿ ಸಿದ್ದರಾಮಯ್ಯ ಶಾಪಿಂಗ್ ಗೆ ತೆರಳಿದ್ದಾರೆ.

    ಬೆಂಗಳೂರಿನ ಅವೆನ್ಯೂ ರಸ್ತೆಯ ಖಾದಿ ಭಂಡಾರ್ ಮಳಿಗೆಯಲ್ಲಿ ತೆರಳಿದ ಸಿದ್ದರಾಮಯ್ಯ ಪಂಚೆಗಳನ್ನ ಖರೀದಿಸಿದ್ದಾರೆ. 30 ಪಂಚೆಗಳನ್ನ ಏಕ ಕಾಲಕ್ಕೆ‌ ಖರೀದಿ ಮಾಡಿದ್ದಾರೆ. ಒಂದು ಪಂಚೆಗೆ ಸಿದ್ದರಾಮಯ್ಯ 650 ರೂ. ನೀಡಿದ್ದಾರೆ. ಡಿಸ್ಕೌಂಟ್ ಹೋಗಿ ಪ್ರತಿ ಪಂಚೆಗೆ 650 ರೂ.ಗೆ ನೀಡಿ ಖರೀದಿ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯಸಭೆ ಚುನಾವಣೆ: ಜೆಡಿಎಸ್‍ಗೆ ಸಿದ್ದರಾಮಯ್ಯ ಚೆಕ್ – ಬಿಜೆಪಿಗೆ ಕುದುರುತ್ತಾ ಲಕ್?

    ಪಂಚೆ ಖರೀದಿ ಸಮಯದಲ್ಲಿ ವಿವಿಧ ಬ್ರ್ಯಾಂಡ್ ಬಗ್ಗೆಯೂ ಸಿದ್ದರಾಮಯ್ಯ ವಿಚಾರಿಸಿದ್ದಾರೆ. ಮೈಸೂರು ತಿರುಪುರು ಖಾದಿಯಲ್ಲಿ ತೆಗೆದುಕೊಂಡಿದ್ದ ಪಂಚೆ ಬಗ್ಗೆ ಸಿದ್ದರಾಮಯ್ಯ ಅಂಗಡಿಯವರ ಬಳಿ ವಿಚಾರಿಸಿದ್ದಾರೆ. ಅಂತಿಮವಾಗಿ ಮೈಸೂರಿನ ತಿರುಪುರು ಖಾದಿಯ 30 ಪಂಚೆಗಳನ್ನ ಖರೀದಿ ಮಾಡಿದ್ದಾರೆ.

    ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಜೂನ್ 10ರಂದು ಚುನಾವಣೆ ನಡೆಯಲಿದೆ. ಇದರಲ್ಲಿ ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 6 ಸ್ಥಾನಗಳಿವೆ. ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್ ಪಕ್ಷ ಎಂಟು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ರಾಜಸ್ಥಾನದಲ್ಲಿ 2, ಛತ್ತೀಸ್‍ಗಡದಲ್ಲಿ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ರಾಜಸ್ಥಾನದಲ್ಲಿ ಬಿಜೆಪಿಯೇತರ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕರೆ ಒಂದು ಹೆಚ್ಚುವರಿ ಸ್ಥಾನ ಕೂಡ ಕಾಂಗ್ರೆಸ್‍ಗೆ ದಕ್ಕಬಹುದು.