Tag: rajyasabha election

  • ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್

    ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಜೈರಾಮ್ ರಮೇಶ್‍ಗೆ ಟಿಕೆಟ್

    ನವದೆಹಲಿ: ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್ ನಿಂದಲೂ ರಾಜ್ಯಸಭಾ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಕೈ ಪಾಳಯದಿಂದ ಜೈರಾಮ್ ರಮೇಶ್ ಮುಂದುವರಿಸಲು ಹೈಕಮಾಂಡ್ ನಿರ್ಧಾರ ಮಾಡಿದೆ.

    ಕಾಂಗ್ರೆಸ್ ನಿಂದ ಜೈರಾಮ್ ರಮೇಶ್ ಅಂತಿಮವಾದ್ರೆ, ಬಿಜೆಪಿಯಿಂದ ನಿರ್ಮಲಾ ಸೀತರಾಮನ್ ಮತ್ತು ನಟ ಜಗ್ಗೇಶ್ ಅಂತಿಮ ಹೆಸರು ಘೋಷಣೆ ಮಾಡಲಾಗಿದೆ. ರಾಜ್ಯದ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು ಮೂವರು ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ನಾಲ್ಕನೇ ಸ್ಥಾನಕ್ಕೆ ಅಭ್ಯರ್ಥಿಯ ಯಾರು ಅನ್ನೋದು ಇನ್ನು ಕುತೂಹಲವಾಗಿಯೇ ಉಳಿದಿದೆ. ನಾಲ್ಕನೇ ಅಭ್ಯರ್ಥಿಗೆ ಕಾಂಗ್ರೆಸ್ ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದ್ರು ಜೆಡಿಎಸ್ ಬೆಂಬಲ ಬೇಕಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

    ಒಂದು ವೇಳೆ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದ್ರು ಕಾಂಗ್ರೆಸ್ ಅಥವಾ ಬಿಜೆಪಿಯ ಬೆಂಬಲ ಬೇಕಿದೆ. ಆದರೆ ಈವರೆಗೂ ಮೈತ್ರಿ ಮಾತುಕತೆ ಅಂತಿಮವಾಗದ ಕಾರಣ ನಾಲ್ಕನೇ ಅಭ್ಯರ್ಥಿ ಯಾರು ಅನ್ನೋದು ಕುತೂಹಲವಾಗಿಯೇ ಉಳಿದಿದೆ. ಬಿಜೆಪಿ ಉದ್ಯಮಿ ಪ್ರಕಾಶ್ ಶೆಟ್ಟಿ ಮತ್ತು ಲಹರಿ ವೇಲು ಹೆಸರು ಮುಂಚೂಣಿಯಲ್ಲಿ ತಂದಿದ್ದರೇ ಜೆಡಿಎಸ್ ಕುಪೇಂದ್ರ ರೆಡ್ಡಿ ಹೆಸರನ್ನು ಪ್ರಸ್ತಾಪಿಸಿದೆ. ಕುಪೇಂದ್ರ ರೆಡ್ಡಿ ಬಿಜೆಪಿ ಬದಲು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದು, ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ. ಹೀಗಾಗಿ ನಾಲ್ಕನೇ ಅಭ್ಯರ್ಥಿ ಯಾರಾಗಬಹುದು, ಯಾವ್ಯಾವ ಪಕ್ಷಗಳ ನಡುವೆ ಮೈತ್ರಿಯಾಗಲಿದೆ ಎಂದು ಇಂದು ಗೊತ್ತಾಗಲಿದೆ.

    ಒಟ್ಟಿನಲ್ಲಿ ಜೂನ್ 10ರಂದು ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿನ 57 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶವೊಂದರಲ್ಲೇ 11 ಸ್ಥಾನಗಳಿವೆ. ತಮಿಳುನಾಡು ಮತ್ತು ಮಹಾರಾಷ್ಟ್ರದಲ್ಲಿ 6 ಸ್ಥಾನಗಳಿವೆ. ಬಿಹಾರದಲ್ಲಿ 5, ಕರ್ನಾಟಕ, ಆಂಧ್ರಪ್ರದೇಶ ಮತ್ತು ರಾಜಸ್ಥಾನದಲ್ಲಿ 4 ಸ್ಥಾನಗಳು ತೆರವಾಗಿದ್ದು, ಚುನಾವಣೆ ನಡೆಯಲಿದೆ. ಈ 57 ಸ್ಥಾನಗಳ ಪೈಕಿ ಕಾಂಗ್ರೆಸ್  8 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಲ್ಲಿದೆ. ಇದನ್ನೂ ಓದಿ: ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

    ರಾಜಸ್ಥಾನದಲ್ಲಿ 2, ಛತ್ತೀಸ್‍ಗಡದಲ್ಲಿ 2, ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ತಲಾ ಒಂದೊಂದು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ. ರಾಜಸ್ಥಾನದಲ್ಲಿ ಬಿಜೆಪಿಯೇತರ ಎಲ್ಲಾ ಪಕ್ಷಗಳ ಬೆಂಬಲ ಸಿಕ್ಕರೆ ಒಂದು ಹೆಚ್ಚುವರಿ ಸ್ಥಾನ ಕೂಡ ಕಾಂಗ್ರೆಸ್‍ಗೆ ಸಿಗುವ ಸಾಧ್ಯತೆಗಳಿವೆ.

  • ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

    ಜಗ್ಗೇಶ್‍ಗೆ ರಾಜ್ಯಸಭಾ ಟಿಕೆಟ್- ರಾಯರ ಕೃಪೆ, ಪವಾಡಕ್ಕೆ ಧನ್ಯ ಅಂದ್ರು ನವರಸ ನಾಯಕ

    ಬೆಂಗಳೂರು: ರಾಜ್ಯಸಬಾ ಚುನಾವಣೆಗೆ ಸ್ಪರ್ಧಿಸಲು ಸ್ಯಾಂಡಲ್‍ವುಡ್ ನಟ ಜಗ್ಗೇಶ್ ಅವರಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದ್ದು, ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ ಎಂದು ಹೇಳಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ನವರಸ ನಾಯಕ, ಆತ್ಮೀಯ ಕನ್ನಡದ ಬಂಧುಗಳೆ 42 ವರ್ಷ ತಪಸ್ಸಿನಂತೆ ಕಲಾರಂಗದಲ್ಲಿ ಸೇವೆ ಮಾಡಿ ಕಾಯವಾಚಮನ ಸತ್ಯಮಾರ್ಗದಲ್ಲಿ ಬದುಕಿದ್ದೇನೆ. ನನ್ನ ನೆಚ್ಚಿನ ಭಾಜಪ ರಾಜ್ಯದ ಮುಖ್ಯ ಮಂತ್ರಿಗಳು, ಮಂತ್ರಿಗಳು, ಶಾಸಕಮಿತ್ರರು ಹಾಗೂ ರಾಜ್ಯ ರಾಷ್ಟ್ರದ ಸಂಘದ ಹಿರಿಯರ ಆಶೀರ್ವಾದದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವೆ ತಮಗೆ ಶಿರಬಾಗಿ ವಂದಿಸುವೆ. ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ ಎಂದು ಬರೆದುಕೊಂಡಿದ್ದಾರೆ.

    ಜೂನ್ 10 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಘೋಷಣೆ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಕರ್ನಾಟಕದಿಂದಲೇ ಮುಂದುವರಿಸಲು ನಿರ್ಧರಿಸಿದ್ದು, ಕೆ.ಸಿ ರಾಮಮೂರ್ತಿ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ನಟ ಜಗ್ಗೇಶ್‍ಗೆ ಅವಕಾಶ ನೀಡಿದೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜಗ್ಗೇಶ್, ನಿರ್ಮಲಾ ಸೀತಾರಾಮನ್‍ಗೆ ಸಿಕ್ತು ಬಿಜೆಪಿ ಟಿಕೆಟ್

    ನಟ ಜಗ್ಗೇಶ್ ಟಿಕೆಟ್ ನೀಡುವ ಮೂಲಕ ಯಶವಂತಪುರ ಕ್ಷೇತ್ರದಲ್ಲಿ ಒತ್ತಡ ಕಡಿಮೆ ಮಾಡಿದ್ದು, ಎಸ್.ಟಿ ಸೋಮಶೇಖರ್ ರಿಲೀಫ್ ನೀಡುವ ಕೆಲಸ ಹೈಕಮಾಂಡ್ ಮಾಡಿದೆ. ಜೆಡಿಎಸ್ ಜೊತೆಗೆ ಮಾತುಕತೆ ಅಂತ್ಯವಾಗದ ಹಿನ್ನೆಲೆ ಮೂರನೇ ಅಭ್ಯರ್ಥಿ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಜೆಡಿಎಸ್‍ನಿಂದ ಕುಪೇಂದ್ರ ರೆಡ್ಡಿ ಹೆಸರು ಮುನ್ನೆಲೆಯಲ್ಲಿದ್ದು ಅವರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಹಿನ್ನಲೆ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮಣೆ ಹಾಕಿದೆ.

  • ಕೊನೆಯ ಹೋರಾಟದಲ್ಲಿ ರಾಜ್ಯಸಭೆಗೆ ಇಬ್ಬರು ಹೋಗುವಂತಾಗಿದ್ದು ವಿಧಿಯಾಟ: ಸುಧಾಕರ್

    ಕೊನೆಯ ಹೋರಾಟದಲ್ಲಿ ರಾಜ್ಯಸಭೆಗೆ ಇಬ್ಬರು ಹೋಗುವಂತಾಗಿದ್ದು ವಿಧಿಯಾಟ: ಸುಧಾಕರ್

    ಬೆಂಗಳೂರು: ಜೆಡಿಎಸ್ ನಿಂದ ಹೆಚ್ ಡಿ ದೇವೇಗೌಡ ಹಾಗೂ ಕಾಂಗ್ರೆಸ್ಸಿನಿಂದ ಹಿರಿಯ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರು ಹಿರಿಯ ನಾಯಕರ ಕಾಲೆಳೆದಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಸುದೀರ್ಘವಾದ ರಾಜಕೀಯ ಬದುಕಿನ ಬಹುಷಃ ಕೊನೆಯ ಹೋರಾಟದಲ್ಲಿ, ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗವಂತಾಗಿದ್ದು ವಿಧಿಯ ಆಟ. ಆದರೆ ಈ ಮುತ್ಸದ್ದಿಗಳ ಸೇವೆ ಹಾಗೂ ಹೋರಾಟ ಅನುಕರಣೀಯ. ದೇವರು ಇಬ್ಬರಿಗೂ ಒಳ್ಳೆಯ ಆರೋಗ್ಯವನ್ನು ಕರುಣಿಸಲಿ. ಬಿಜೆಪಿಯ ಉದಾರತೆಗೆ ಅಭಿನಂದನೆಗಳು ಎಂದು ಬರೆದು ಬಿಜೆಪಿ ಆಫ್ ಕರ್ನಾಟಕ ಹಾಗೂ ಹೆಚ್ ಡಿ ದೇವೇಗೌಡರಿಗೆ ಟ್ಯಾಗ್ ಮಾಡಿದ್ದಾರೆ.

    ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡ ಅವರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ಮಾಜಿ ಪ್ರಧಾನಿಯವರು ರಾಜ್ಯಸಭೆ ಚುನಾವಣೆಗೆ ಸ್ಪರ್ಧಿಸಲು ಆಯ್ಕೆಯಾಗಿರುವುದನ್ನು ಸ್ಪಷ್ಟಪಡಿಸಿದ್ದರು.

    ಇತ್ತ ಜೂನ್ 19ರಂದು ನಡೆಯಲಿರುವ ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳ ಚುನಾವಣೆಗೆ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಅಭ್ಯರ್ಥಿಯಾಗಿಸಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶ ಹೊರಡಿಸಿದ್ದಾರೆ. ಇನ್ನು ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಕಮಲದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ನೀಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತಿ ಮತ್ತು ಬೆಳಗಾವಿಯ ಈರಣ್ಣ ಕಡಾಡಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಎದ್ದಿದ್ದ ಬಣ ರಾಜಕೀಯಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದ್ದು, ಇಬ್ಬರು ಸಂಘನಿಷ್ಠರಿಗೆ ಬಿಜೆಪಿ ಮಣೆ ಹಾಕಿದೆ.