Tag: Rakibhai

  • ‘ಸಲಾರ್’ ಸಿನಿಮಾದಲ್ಲಿ ರಾಕಿಭಾಯ್ ಇಲ್ಲ: ಪ್ರಶಾಂತ್ ನೀಲ್ ಸ್ಪಷ್ಟನೆ

    ‘ಸಲಾರ್’ ಸಿನಿಮಾದಲ್ಲಿ ರಾಕಿಭಾಯ್ ಇಲ್ಲ: ಪ್ರಶಾಂತ್ ನೀಲ್ ಸ್ಪಷ್ಟನೆ

    ಲಾರ್ (Salaar) ಸಿನಿಮಾದಲ್ಲಿ ಯಶ್ (Yash) ನಟಿಸಿದ್ದಾರೆ ಎಂದೆಲ್ಲ ಸುದ್ದಿ ಹರಿಬಿಡಲಾಗಿತ್ತು. ಕೆಜಿಎಫ್ ಸಿನಿಮಾದ ಪಾತ್ರವೊಂದು ಸಲಾರ್ ನಲ್ಲಿ ಎಂಟ್ರಿ ಕೊಡಲಾಗಿದೆ. ಅದು ಯಶ್ ಪಾತ್ರವಾಗಿದೆ ಎಂದು ಹೇಳಲಾಗಿತ್ತು. ಅದಕ್ಕೀಗ ಸ್ಪಷ್ಟನೆ ನೀಡಿದ್ದಾರೆ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ (Prashant Neel). ಸಲಾರ್ ಸಿನಿಮಾದಲ್ಲಿ ಯಶ್ ಇದ್ದಾರೆ ಅಂತ ಹೇಳೋಕೆ ನನಗೇಕೆ ಅಳುಕು. ಅವರು ಇದ್ದಾರೆ ಅಂದಿದ್ದರೆ, ಅದನ್ನೂ ಪ್ರಚಾರ ಮಾಡುತ್ತಿದ್ದೆವು. ಪ್ರಚಾರಕ್ಕೆ ಅದು ಪ್ಲಸ್ ಆಗಿರೋದು. ಆದರೆ, ಈ ಸಿನಿಮಾದಲ್ಲಿ ಅವರು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಸಲಾರ್ ಸಿನಿಮಾದ ಕುರಿತಾಗಿ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಯಶ್ ಬಗ್ಗೆಯೂ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಜೀವನ ಪರ್ಯಂತ ಯಶ್ ನನ್ನ ಜೊತೆಯಾಗಿಯೇ ಇರುತ್ತಾರೆ ಎಂದು ಹೇಳುವ ಮೂಲಕ, ಯಶ್ ಮತ್ತು ಪ್ರಶಾಂತ್ ನೀಲ್ ಮಧ್ಯ ಯಾವುದೂ ಸರಿ ಇಲ್ಲ ಎನ್ನುವುದಕ್ಕೂ ಅವರು ಉತ್ತರ ನೀಡಿದ್ದಾರೆ.

    ನಾಳೆ ವಿಶ್ವದಾದ್ಯಂತ ಸಲಾರ್ ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ಬಿಡುಗಡೆ ಆಗುವ ಒಂದು ದಿನ ಮುನ್ನ ಚಿತ್ರದ ಮತ್ತೊಂದು ಹಾಡು ಬಿಡುಗಡೆ ಮಾಡಿದ ಹೊಂಬಾಳೆ ಫಿಲ್ಮ್ಸ್. ಪ್ರತಿಕಥೆಯ ಹೆಸರಿನಲ್ಲಿ ರಿಲೀಸ್ ಆಗಿರುವ ಹಾಡಿನಲ್ಲಿ ಶಾಂತಿಯ ಮಂತ್ರವನ್ನು ಹೇಳುವ ಪ್ರಯತ್ನ ಮಾಡಲಾಗಿದೆ. ನಾಯಕನ ತಾಯಿಯು ಟೀಚರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಗನಿಗೆ ಕ್ಷಮೆಯಿಂದ ಗೆಲ್ಲುವ ಮಾತುಗಳನ್ನು ಹೇಳಲಿಸಲಾಗಿದೆ.

     

    ‘ಸಲಾರ್ ಪಾರ್ಟ್ 1: ಸೀಸ್‍ಫೈರ್’ ಚಿತ್ರದಲ್ಲಿ ಪ್ರಭಾಸ್‍ ಜೊತೆಗೆ ಪೃಥ್ವಿರಾಜ್‍ ಸುಕುಮಾರನ್‍, ಶ್ರುತಿ ಹಾಸನ್‍, ಜಗಪತಿ ಬಾಬು ಮುಂತಾದವರು ನಟಿಸಿದ್ದು, ಪ್ರಶಾಂತ್ ನೀಲ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಹೊಂಬಾಳೆ ಫಿಲಂಸ್‍ನಡಿ ವಿಜಯ್‍ ಕಿರಗಂದೂರು ಈ ಚಿತ್ರವನ್ನು ನಿರ್ಮಿಸಿದ್ದಾರೆ.

  • Breaking- ಯಶ್ ಹೊಸ ಸಿನಿಮಾ ‘ಟಾಕ್ಸಿಕ್’: ಸೂಪರ್ ಟೈಟಲ್, ಭರ್ಜರಿ ನಿರೀಕ್ಷೆ

    Breaking- ಯಶ್ ಹೊಸ ಸಿನಿಮಾ ‘ಟಾಕ್ಸಿಕ್’: ಸೂಪರ್ ಟೈಟಲ್, ಭರ್ಜರಿ ನಿರೀಕ್ಷೆ

    ಭಿಮಾನಿಗಳ ನಿರೀಕ್ಷೆ ಯಶ್ (Yash) ನಟನೆಯ 19ನೇ ಸಿನಿಮಾದ ಟೈಟಲ್ ಲಾಂಚ್ ಆಗಿದೆ. ನಿರೀಕ್ಷೆಗೆ ತಕ್ಕಂತೆಯೇ ಭರ್ಜರಿಯಾದ ಟೈಟಲ್ ಅನ್ನೇ ತಮ್ಮ ಚಿತ್ರಕ್ಕೆ ಇಟ್ಟಿದ್ದಾರೆ ಯಶ್. ‘ಟಾಕ್ಸಿಕ್’ ಮೂಲಕ ಮತ್ತೊಂದು ದೊಡ್ಡ ಮಟ್ಟದ ಚಿತ್ರಕ್ಕೆ ಅವರು ಕೈ ಹಾಕಿದ್ದಾರೆ. ಕೆ.ವಿ.ಎನ್ ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದ್ದು, ಗೀತಾ ಅವರ ನಿರ್ದೇಶನ ಚಿತ್ರಕ್ಕಿದೆ.

    ಈ ನಡುವೆ ಮತ್ತೊಂದು ಹೊಸ ವಿಷಯ ಹರಿದಾಡುತ್ತಿದೆ. ಮೊನ್ನೆಯಷ್ಟೇ ಈ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿತ್ತು. ಈ ಚಿತ್ರಕ್ಕೆ ಕೇವಲ ಒಬ್ಬರು ನಾಯಕಿಯರಲ್ಲ, ಮೂವರು ನಾಯಕಿಯರ ಇರಲಿದ್ದಾರೆ ಎನ್ನುವುದು ಲೆಟೆಸ್ಟ್ ಮಾಹಿತಿ. ಸಾಯಿ ಪಲ್ಲವಿ, ಮೃಣಲಾ ಠಾಕೂರ್ ಹೀಗೆ ಮೂವರು ಹಿರೋಯಿನ್ ಚಿತ್ರದಲ್ಲಿ ಪಾತ್ರವಾಗಲಿದ್ದಾರಂತೆ.

    ತಮ್ಮ ಹೊಸ ಸಿನಿಮಾದ ಟೈಟಲ್ (Title) ಅನ್ನು ಡಿ.8ರಂದು ಬೆಳಗ್ಗೆ 9.55ಕ್ಕೆ ಲಾಂಚ್ ಮಾಡುವುದಾಗಿ ರಾಕಿಭಾಯ್ ಘೋಷಣೆ ಮಾಡಿದ್ದಾಗ, 9.55ಕ್ಕೆ ಸಮಯ ನಿಗದಿ ಆಗಿದ್ದು ಏಕೆ? ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ. ಆ ಸಮಯದಲ್ಲಿ ಲಾಂಚ್ ಮಾಡಿದರೆ ಒಳ್ಳೆಯದಾ? ಅಥವಾ ಯಾರಾದರೂ ಅದೇ ಸಮಯವನ್ನು ನಿಗದಿ ಮಾಡಿದ್ದಾರಾ ಎನ್ನುವ ಚರ್ಚೆ ಕೂಡ ಶುರುವಾಗಿದೆ.

    ಉತ್ತರ ಸಿಂಪಲ್ ಎನ್ನುತ್ತವೆ ಮೂಲಗಳು. ಯಶ್ ಅವರ 19ನೇ ಸಿನಿಮಾ ಇದಾಗಿದ್ದು, 9+5+5 ಒಟ್ಟು ಮಾಡಿದರೆ 19 ಸಂಖ್ಯೆಯಾಗುತ್ತದೆ. ಹಾಗಾಗಿ ಈ ಸಮಯವನ್ನು ನಿಗದಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಯಶ್ ಏನೇ ಮಾಡಿದರೂ ಹೊಸ ರೀತಿಯಲ್ಲಿ ಯೋಚಿಸುತ್ತಾರೆ. ಹಾಗಾಗಿ ಈ ಲೆಕ್ಕಾಚಾರವನ್ನು ಅವರು ಹೊಸದಾಗಿ ಯೋಚಿಸಿದ್ದಾರೆ. ಅದರಾಚೆ ಏನೂ ಇಲ್ಲ ಎನ್ನುತ್ತಾರೆ ಯಶ್ ಆಪ್ತರು.

     

    ಕೆಜಿಎಫ್, ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಯಶ್ ಸೈಲೆಂಟ್ ಆಗಿ ಮುಂದಿನ ಸಿನಿಮಾಗೆ ಭರ್ಜರಿ ತಯಾರಿ ಮಾಡಿಕೊಳ್ತಾ ಇದ್ದರು. ಇಷ್ಟು ತಿಂಗಳು ಅವರು ತೆಗೆದುಕೊಂಡಿದ್ದು ಯಾಕೆ ಎನ್ನುವುದಕ್ಕೆ ಟೈಟಲ್ ನಲ್ಲೇ ಹಲವು ಉತ್ತರಗಳಿವೆ.

  • ಮತ್ತೊಂದು ಬಿಗ್ ನ್ಯೂಸ್ ಕೊಟ್ಟ ಯಶ್ : ಡಿ.8ಕ್ಕೆ ಟೈಟಲ್ ಘೋಷಣೆ

    ಮತ್ತೊಂದು ಬಿಗ್ ನ್ಯೂಸ್ ಕೊಟ್ಟ ಯಶ್ : ಡಿ.8ಕ್ಕೆ ಟೈಟಲ್ ಘೋಷಣೆ

    ಷ್ಟು ದಿನ ತೆರೆಮೆರೆಯಲ್ಲಿ ತಮ್ಮ ಹೊಸ ಸಿನಿಮಾದ ಕೆಲಸ ಮಾಡುತ್ತಿದ್ದ ಯಶ್, ನಿನ್ನೆಯಿಂದ ಅಭಿಮಾನಿಗಳಿಗೆ ದಿನಕ್ಕೊಂದು ಹೊಸ ಸುದ್ದಿ ನೀಡುತ್ತಿದ್ದಾರೆ. ನಿನ್ನೆಯಷ್ಟೇ ಲೋಡಿಂಗ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದವರು, ಇಂದು ತಮ್ಮ ಹೊಸ ಸಿನಿಮಾದ ಟೈಟಲ್ (Title) ಘೋಷಣೆ ಮಾಡುವ ಬಗ್ಗೆ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 8ರಂದು ಮುಂಜಾನೆ 9.55ಕ್ಕೆ ಹೊಸ ಸಿನಿಮಾದ ಶೀರ್ಷಿಕೆ ಅನಾವರಣ ಮಾಡುವುದಾ ತಿಳಿಸಿದ್ದಾರೆ.

    ಯಶ್ (Yash) ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗೆದ್ದು ಬೀಗಿದ್ದು ಆಗಿದೆ. ಇನ್ನೂ ಏನೇ ಇದ್ರೂ ಮುಂದಿನ ಚಿತ್ರದ ಬಗ್ಗೆ ಅನೌನ್ಸ್ ಮಾಡೊದೊಂದೇ ಬಾಕಿ. ಹೀಗಿರುವಾಗ ಅಭಿಮಾನಿಗಳ ನಿರೀಕ್ಷೆಯಂತೆ ಯಶ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಯಶ್ ಕಡೆಯಿಂದ ಮುಂದಿನ ಸಿನಿಮಾಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.

    ಕೆಜಿಎಫ್, ಕೆಜಿಎಫ್ 2 (KGF 2) ಸಕ್ಸಸ್ ಬಳಿಕ ಯಶ್ ಸೈಲೆಂಟ್ ಆಗಿ ಮುಂದಿನ ಸಿನಿಮಾಗೆ ಭರ್ಜರಿ ತಯಾರಿ ಮಾಡಿಕೊಳ್ತಾ ಇದ್ದರು. ಈಗ ಬಿಗ್ ಅಪ್ಡೇಟ್ ಸಿಕ್ಕಿದೆ. ‘ಲೋಡಿಂಗ್ಎಂಬ ಬರಹದ ಫೋಟೋವನ್ನ ನಿನ್ನೆ ಇನ್ಸ್ಟಾಗ್ರಾಂ ಮುಖಪುಟ ಬದಲಿಸಿದ್ದಾರೆ ಯಶ್. ಸಂಡೆ ಸಂಜೆ ಯಶ್ ಸಖತ್ ನ್ಯೂಸ್ ಕೊಟ್ಟಿದ್ದರು.

    ರಾಕಿಭಾಯ್ ಆಗಿ ಘರ್ಜಿಸಿದ ಮೇಲೆ ಯಶ್ 19 (Yash 19) ಯಾವಾಗ ಎಂದು ಎಲ್ಲರೂ ಕೇಳುತ್ತಿದ್ದರು. ಲೋಡಿಂಗ್ ಎಂಬ ಬರಹದ ಮೂಲಕ ಮುಂದಿನ ಚಿತ್ರದ ಬಗ್ಗೆ ಸುಳಿವು ನೀಡಿದ್ದಾರೆ. ಮೂಲಕಯಶ್ 19′ ಸಿನಿಮಾಗೆ ಕೌಂಟ್ ಡೌನ್ ಶುರುವಾಗಿದೆ.

     

    ನಟ ಯಶ್ ಅವರು ಮಲಯಾಳಂ ಡೈರೆಕ್ಟರ್ ಗೀತು ಮೋಹನ್ ದಾಸ್ ಜೊತೆ ಕೈಜೋಡಿಸಿದ್ದಾರೆ ಎಂಬ ಸುದ್ದಿಯಿದೆ. ‘ಯಶ್ 19′ ಪ್ರಾಜೆಕ್ಟ್ ಜೊತೆಗೆ ಕೆಜಿಎಫ್ 3 ಕೂಡ ಯಶ್ ಕೈಯಲ್ಲಿದೆ.

  • ರಾಕಿಭಾಯ್ ಅಭಿಮಾನಿಗಳಿಗೆ ಬುಧವಾರಕ್ಕೆ ಗುಡ್ ನ್ಯೂಸ್

    ರಾಕಿಭಾಯ್ ಅಭಿಮಾನಿಗಳಿಗೆ ಬುಧವಾರಕ್ಕೆ ಗುಡ್ ನ್ಯೂಸ್

    ರಾಕಿಭಾಯ್ ಯಶ್ ಅಭಿಮಾನಿಗಳಿಗೆ ನವೆಂಬರ್ 1 ವಿಶೇಷ ದಿನವಾಗಲಿದೆ. ಕನ್ನಡ ರಾಜ್ಯೋತ್ಸವದ ದಿನದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಗಲಿದೆ ಎಂದು ಹೇಳಲಾಗಿತ್ತು. ಆದರೆ, ಅದರ ಬದಲಾಗಿ ಕೆಜಿಎಫ್ 2 ಸಿನಿಮಾ ರೀ ರಿಲೀಸ್ ಆಗುತ್ತಿದೆ. ಬೆಂಗಳೂರಿನ ಆಯ್ದ ಕೆಲವು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಚಿತ್ರವನ್ನು ಮರುಬಿಡುಗಡೆ ಮಾಡಲಾಗಿತ್ತು. ಈಗಾಗಲೇ ಅಡ್ವಾನ್ಸ್ ಬುಕ್ಕಿಂಗ್ ಕೂಡ ಶುರುವಾಗಿದೆ.

    ಅಂದುಕೊಂಡಂತೆ ಆಗಿದ್ದರೆ, ನವೆಂಬರ್ (November) ಒಂದಕ್ಕೆ ಯಶ್ (Yash) ನಟನೆಯ ಹೊಸ ಸಿನಿಮಾದ (New Movie) ಅಪ್ ಡೇಟ್ ಸಿಗಲಿದೆ ಎನ್ನುವ ಮಾಹಿತಿ ಇತ್ತು. ಚಿತ್ರದ ಟೈಟಲ್ (Title) ಮತ್ತು ಟೀಸರ್ ಅನ್ನು ಏಕಕಾಲಕ್ಕೆ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗಿತ್ತು. ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಮಾಡಲಿದ್ದು, ಕನ್ನಡ ರಾಜ್ಯೋತ್ಸವಕ್ಕೆ ಅಭಿಮಾನಿಗಳಿಗೆ ಭರ್ಜರಿ ಉಡುಗೊರೆ ಸಿಗಲಿದೆ ಎನ್ನುವ ಸುದ್ದಿ ಇತ್ತು. ಅದೀಗ ಪೋಸ್ಟ್ ಪಾನ್ ಆಗಿದೆ. ದೀಪಾವಳಿಗೆ ಈ ಎಲ್ಲ ಮಾಹಿತಿ ಹೊರ ಬೀಳಲಿವೆ ಎನ್ನುವುದು ಸದ್ಯದ ವರ್ತಮಾನ.

    ಯಶ್ ನಟನೆಯ ಹೊಸ ಸಿನಿಮಾದ ಅಪ್ ಡೇಟ್ ಬಗ್ಗೆ ಅಭಿಮಾನಿಗಳು ಹಲವು ತಿಂಗಳಿಂದ ಕಾಯುತ್ತಲೇ ಇದ್ದಾರೆ. ಈಗಾಗಲೇ ಹಲವು ವಿಷಯಗಳು ಗಾಂಧಿನಗರದಲ್ಲಿ ಹರಿದಾಡುತ್ತಿದ್ದರೂ, ಅವು ಯಾವವೂ ಅಧಿಕೃತ ಮಾಹಿತಿಯಲ್ಲ. ದೀಪಾವಳಿಗೆ (Deepavali) ಯಶ್ ನಟನೆಯ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅದಕ್ಕಾಗಿ ಸರ್ವ ಸಿದ್ಧತೆಯನ್ನು ಟೀಮ್ ಮಾಡಿಕೊಂಡಿದೆ.

    ಅಧಿಕೃತ ಮಾಹಿತಿಯನ್ನು ಯಶ್ ಹಂಚಿಕೊಳ್ಳದೇ ಇದ್ದರೂ ಚಿತ್ರದ ನಿರ್ದೇಶಕರು, ನಿರ್ಮಾಣ ಸಂಸ್ಥೆ, ನಾಯಕಿಯ ಹೆಸರು ಎಲ್ಲವೂ ಒಂದೊಂದೆ ಆಚೆ ಬಂದಿವೆ. ಅವೆಲ್ಲವೂ ಎಷ್ಟು ನಿಜವೋ, ಸುಳ್ಳೋ ಗೊತ್ತಿಲ್ಲ. ಆದರೂ, ದಿನಕ್ಕೊಂದು ಮಾಹಿತಿಯಂತೂ ಸಿಗುತ್ತಿದೆ. ಅದನ್ನು ಓದಿಕೊಂಡು, ಕೇಳಿಕೊಂಡು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.

    ಮೊನ್ನೆಯಷ್ಟೇ ಸಿನಿಮಾದ ನಾಯಕಿಯ ಹೆಸರು ಬಹಿರಂಗವಾಗಿತ್ತು. ಇದೀಗ ಸಿನಿಮಾದ ಶೂಟಿಂಗ್ ವಿವರಗಳು ಸಿಗುತ್ತಿವೆ. ಈಗಾಗಲೇ ಕಥೆ ಲಾಕ್ ಆಗಿದ್ದು, ಅಕ್ಟೋಬರ್ ನಲ್ಲಿ ಅಧಿಕೃತ ಘೋಷಣೆ ಮಾಡಿ, ಡಿಸೆಂಬರ್ 23ರಿಂದ ಚಿತ್ರೀಕರಣಕ್ಕೆ ಹೋಗಲು ಚಿತ್ರತಂಡ ರೆಡಿಯಾಗಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಟ್ವಿಟರ್ ನಲ್ಲಿ ಈ ವಿಷಯ ಟ್ರೆಂಡಿಂಗ್ ನಲ್ಲಿಯೂ ಇತ್ತು.

     

    ಈ ಚಿತ್ರಕ್ಕೆ ನಾಯಕಿಯಾಗಿ ಮಲಯಾಳಂ ನಟಿ ಸಂಯುಕ್ತಾ ಮೆನನ್ (Samyukta Menon)  ಆಯ್ಕೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಿತ್ರತಂಡದಿಂದ ಯಾವುದೇ ಮಾಹಿತಿ ಹೊರ ಬರದಿದ್ದರೂ, ಸಂಯುಕ್ತಾ ಹೆಸರು ಮಾತ್ರ ಜೋರಾಗಿ ಕೇಳಿ ಬರುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಕಿಭಾಯ್ ಯಶ್ ಹೆಸರಿನಲ್ಲಿ ಗೋಲ್ಡ್ ಕಾಯಿನ್, ಬಿಸ್ಕೆಟ್

    ರಾಕಿಭಾಯ್ ಯಶ್ ಹೆಸರಿನಲ್ಲಿ ಗೋಲ್ಡ್ ಕಾಯಿನ್, ಬಿಸ್ಕೆಟ್

    ದೇ ಮೊದಲ ಬಾರಿಗೆ ಕನ್ನಡ ಸಿನಿಮಾ ನಟನೊಬ್ಬನ ಗೋಲ್ಡ್ ಕಾಯಿನ್ ಮತ್ತು ಗೋಲ್ಡ್ ಬಿಸ್ಕೆಟ್ ರಿಲೀಸ್ ಆಗಿದೆ. ಮೊನ್ನೆಯಷ್ಟೇ ರಾಕಿಂಗ್ ಸ್ಟಾರ್ ಯಶ್ ಮಲೇಷ್ಯಾಗೆ ಪ್ರವಾಸ ಬೆಳೆಸಿದ್ದರು. ಅಲ್ಲಿ ಬಂಗಾರದ ಅಂಗಡಿಯ ಉದ್ಘಾಟನೆಯನ್ನು ಅವರು ಮಾಡಿದ್ದರು. ಅದೇ ಅಂಗಡಿಯವರು ರಾಕಿಭಾಯ್ (Rakibhai) ಯಶ್ ಹೆಸರಿನಲ್ಲಿ ಗೋಲ್ಡ್ ಕಾಯಿನ್ ಮತ್ತು ಬಿಸ್ಕೆಟ್ (Gold Biscuit) ಬಿಡುಗಡೆ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಮಲೇಷ್ಯಾಗೆ ಹೋಗಿರುವ ಸಂದರ್ಭದಲ್ಲೇ ಯಶ್ ತಮ್ಮ ಮುಂದಿನ (New Movie) ಸಿನಿಮಾದ ಬಗ್ಗೆ ಮತ್ತೊಂದು ಅಪ್ ಡೇಟ್ (Update) ನೀಡಿದ್ದಾರೆ. ಮಲೇಷ್ಯಾದಲ್ಲಿ ಹೊಸ ಸಿನಿಮಾದ ಕುರಿತು ಮಾತನಾಡಿರುವ ಯಶ್, ‘ದೊಡ್ಡ ಸಿನಿಮಾವನ್ನು ಮಾಡುತ್ತೇನೆ ಎಂದು ಹೇಳುತ್ತಿಲ್ಲ, ಒಳ್ಳೆಯ ಸಿನಿಮಾ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅದೊಂದು ಮಾಸ್ ಸಿನಿಮಾವಾಗಿರಲಿದೆ. ಸದ್ಯದಲ್ಲೇ ಮಾಹಿತಿ ನೀಡುತ್ತೇನೆ’ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ:ಶಿವರಾಜ್ ಕುಮಾರ್ ಹುಟ್ಟ ಹಬ್ಬಕ್ಕೆ ಭರ್ಜರಿ ಸಿದ್ಧತೆ ಮಾಡಿಕೊಂಡ ‘ಘೋಸ್ಟ್’ ಟೀಮ್

    ರಾಕಿಭಾಯ್ ಯಶ್ (Yash) ಮೊನ್ನೆ ಮಲೇಷ್ಯಾಗೆ ಹಾರಿದ್ದರು. ನಾಲ್ಕೈದು ಗೆಳೆಯರೊಂದಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಅವರು, ಮಲೇಷ್ಯಾದಲ್ಲಿ (Malaysia) ಚಿನ್ನದ ಅಂಗಡಿಯೊಂದರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ, ಮಲೇಷ್ಯಾದಲ್ಲಿ ವಾಸವಿರುವ ಅವರ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಶ್ ಅವರಿಗೆ ನೀಡಲಾದ ಗಿಫ್ಟ್ (Gift) ಸಾಕಷ್ಟು ವೈರಲ್ ಕೂಡ ಆಗಿದೆ.

     

    ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು (Group Photo) ಪ್ರಸಿದ್ಧ ಕಲಾವಿದರ ಜೊತೆ ಪೇಟಿಂಗ್ ಮಾಡಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಆ ಫೋಟೋವನ್ನು ಅವರೇ ಬಿಡುಗಡೆಗೊಳಿಸಿ ಬೆರಗಿನಿಂದ ನೋಡಿದರು ಯಶ್. ಆ ವಿಡಿಯೋ ಕೂಡ ವೈರಲ್ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಸ್ ಸಿನಿಮಾ ಮಾಡುತ್ತಿದ್ದೇನೆ, ಸದ್ಯದಲ್ಲೇ ಹೇಳುವೆ : ನಟ ಯಶ್

    ಮಾಸ್ ಸಿನಿಮಾ ಮಾಡುತ್ತಿದ್ದೇನೆ, ಸದ್ಯದಲ್ಲೇ ಹೇಳುವೆ : ನಟ ಯಶ್

    ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂದಿನ (New Movie) ಸಿನಿಮಾದ ಬಗ್ಗೆ ಮತ್ತೊಂದು ಅಪ್ ಡೇಟ್ (Update) ನೀಡಿದ್ದಾರೆ. ಮಲೇಷ್ಯಾದಲ್ಲಿ ಹೊಸ ಸಿನಿಮಾದ ಕುರಿತು ಮಾತನಾಡಿರುವ ಯಶ್, ‘ದೊಡ್ಡ ಸಿನಿಮಾವನ್ನು ಮಾಡುತ್ತೇನೆ ಎಂದು ಹೇಳುತ್ತಿಲ್ಲ, ಒಳ್ಳೆಯ ಸಿನಿಮಾ ಮಾಡಲು ಪ್ರಯತ್ನಿಸುತ್ತಿದ್ದೇನೆ. ಅದೊಂದು ಮಾಸ್ ಸಿನಿಮಾವಾಗಿರಲಿದೆ. ಸದ್ಯದಲ್ಲೇ ಮಾಹಿತಿ ನೀಡುತ್ತೇನೆ’ ಎಂದು ಮಾತನಾಡಿದ್ದಾರೆ.

    ರಾಕಿಭಾಯ್ ಯಶ್ (Yash) ಮೊನ್ನೆ ಮಲೇಷ್ಯಾಗೆ ಹಾರಿದ್ದರು. ನಾಲ್ಕೈದು ಗೆಳೆಯರೊಂದಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದ ಅವರು, ಮಲೇಷ್ಯಾದಲ್ಲಿ (Malaysia) ಚಿನ್ನದ ಅಂಗಡಿಯೊಂದರ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ, ಮಲೇಷ್ಯಾದಲ್ಲಿ ವಾಸವಿರುವ ಅವರ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಯಶ್ ಅವರಿಗೆ ನೀಡಲಾದ ಗಿಫ್ಟ್ (Gift) ಸಾಕಷ್ಟು ವೈರಲ್ ಕೂಡ ಆಗಿದೆ. ಇದನ್ನೂ ಓದಿ:ಚೆಕ್ ಬೌನ್ಸ್ ಕೇಸ್‌ನಲ್ಲಿ ನಟ ನೀನಾಸಂ ಅಶ್ವಥ್ ಬಂಧನ

    ಯಶ್ ಮತ್ತು ಪತ್ನಿ ರಾಧಿಕಾ ಪಂಡಿತ್, ಇಬ್ಬರು ಮಕ್ಕಳು ಹಾಗೂ ಯಶ್ ಅವರ ತಂದೆ-ತಾಯಿ ಇರುವಂತಹ ಗ್ರೂಪ್ ಫೋಟೋವನ್ನು (Group Photo) ಪ್ರಸಿದ್ಧ ಕಲಾವಿದರ ಜೊತೆ ಪೇಟಿಂಗ್ ಮಾಡಿಸಿ, ಉಡುಗೊರೆಯಾಗಿ ನೀಡಿದ್ದಾರೆ. ಆ ಫೋಟೋವನ್ನು ಅವರೇ ಬಿಡುಗಡೆಗೊಳಿಸಿ ಬೆರಗಿನಿಂದ ನೋಡಿದರು ಯಶ್. ಆ ವಿಡಿಯೋ ಕೂಡ ವೈರಲ್ ಆಗಿದೆ.

     

    ಬೆಂಗಳೂರಿನಿಂದ ಹೊರಟ ವಿಶೇಷ ವಿಮಾನದಲ್ಲಿ ಪಾನಿಪುರಿ ಕಿಟ್ಟಿ (Panipuri Kitty) ಸೇರಿದಂತೆ ಹಲವರು ಇದ್ದಾರೆ. ಮಲೇಷ್ಯಾಗೆ ಬಂದಿಳಿದಿದ್ದ ತಮ್ಮ ನೆಚ್ಚಿನ ನಟನನ್ನು ನೋಡುವುದಕ್ಕಾಗಿ ಅಲ್ಲಿನ ಅಭಿಮಾನಿಗಳು ಕಾಯುತ್ತಿದ್ದರು ಎನ್ನುತ್ತಾರೆ ಯಶ್ ಆಪ್ತರು. ಚಿನ್ನದ ಅಂಗಡಿ ಉದ್ಘಾಟನೆಯ ನಂತರ ಮುಂದಿನ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡದೇ ಇದ್ದರೂ, ಕಾರ್ಯಕ್ರಮದ ನಂತರ ಫ್ಯಾನ್ಸ್ ಭೇಟಿ ಮಾಡುವುದು ಖಚಿತ ಎಂದಿದ್ದರು. ಹಾಗೆಯೇ ಯಶ್ ಅಭಿಮಾನಿಗಳನ್ನೂ ಭೇಟಿ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಶೇಷ ವಿಮಾನದಲ್ಲಿ ಮಲೇಷ್ಯಾಗೆ ಹಾರಿದ ಯಶ್ : ಯಾಕೆ? ಏನು?

    ವಿಶೇಷ ವಿಮಾನದಲ್ಲಿ ಮಲೇಷ್ಯಾಗೆ ಹಾರಿದ ಯಶ್ : ಯಾಕೆ? ಏನು?

    ರಾಕಿಂಗ್ ಸ್ಟಾರ್ ಯಶ್ ಇಂದು ಮಲೇಷ್ಯಾಗೆ ಹಾರಿದ್ದಾರೆ. ನಾಲ್ಕೈದು ಗೆಳೆಯರೊಂದಿಗೆ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿರುವ ಅವರು, ಇಂದು ಮಲೇಷ್ಯಾದಲ್ಲಿ (Malaysia) ಚಿನ್ನದ ಅಂಗಡಿಯೊಂದರ ಉದ್ಘಾಟನೆಯಲ್ಲಿ ಪಾಲ್ಗೊಳ್ಳಲಿದ್ದಾರಂತೆ. ಅಲ್ಲದೇ, ಮಲೇಷ್ಯಾದಲ್ಲಿ ವಾಸವಿರುವ ಅವರ ಅಭಿಮಾನಿಗಳನ್ನು ಇಂದು ಅವರು ಭೇಟಿ ಮಾಡಲಿದ್ದಾರೆ. ಬೆಂಗಳೂರಿನಿಂದ ಹೊರಟಿರುವ ವಿಶೇಷ ವಿಮಾನದಲ್ಲಿ ಪಾನಿಪುರಿ ಕಿಟ್ಟಿ (Panipuri Kitty) ಸೇರಿದಂತೆ ಹಲವರು ಇದ್ದಾರೆ.

    ಕೆಜಿಎಫ್ ಸಿನಿಮಾದ ನಂತರ ಯಶ್ (Yash) ಅಭಿಮಾನಿಗಳು ರಾಜ್ಯ, ದೇಶದ ಗಡಿಯನ್ನೂ ದಾಟಿದ್ದಾರೆ. ಅನೇಕ ದೇಶಗಳಲ್ಲಿ ಯಶ್ ಅಭಿಮಾನಿಗಳ (Fans) ಸಂಘಗಳಿವೆ. ಆಯಾ ರಾಜ್ಯಕ್ಕೆ ಯಶ್ ಭೇಟಿ ನೀಡಿದಾಗೆಲ್ಲ ಅವರ ಅಭಿಮಾನಿಗಳಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡುತ್ತಾರೆ. ಅಲ್ಲದೇ, ಮನೆ ಮುಂದೆ ಬಂದ ಅಭಿಮಾನಿಗಳಿಗೂ ಟೈಮ್ ನೀಡುತ್ತಾರೆ. ಇದೀಗ ಮಲೇಷ್ಯಾ ಫ್ಯಾನ್ಸ್ ಮೀಟ್ ಮಾಡಲು ಮುಂದಾಗಿದ್ದಾರೆ.

    ಇಂದು ಮಲೇಷ್ಯಾಗೆ ಬಂದಿಳಿದಿರುವ ತಮ್ಮ ನೆಚ್ಚಿನ ನಟನನ್ನು ನೋಡುವುದಕ್ಕಾಗಿ ಅಲ್ಲಿನ ಅಭಿಮಾನಿಗಳು ಕಾಯುತ್ತಿದ್ದಾರೆ ಎನ್ನುತ್ತಾರೆ ಯಶ್ ಆಪ್ತರು. ಚಿನ್ನದ ಅಂಗಡಿ ಉದ್ಘಾಟನೆಯ ನಂತರ ಮುಂದಿನ ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡದೇ ಇದ್ದರೂ, ಕಾರ್ಯಕ್ರಮದ ನಂತರ ಫ್ಯಾನ್ಸ್ ಭೇಟಿ ಮಾಡುವುದು ಖಚಿತ ಎನ್ನುತ್ತಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಕೆಜಿಎಫ್ 2 ಸಿನಿಮಾದ ನಂತರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ಕಾಯುತ್ತಿದ್ದಾರೆ. ಹೊಸ ಸಿನಿಮಾ ಯಾವಾಗ ಶುರು ಎಂದು ಕಳೆದ ಒಂದು ವರ್ಷದಿಂದಲೂ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಯಶ್ ಮಾತ್ರ ಯಾವುದೇ ಅಪ್ ಡೇಟ್ ನೀಡದೇ ಮೌನವಹಿಸಿದ್ದಾರೆ. ಹಾಗಂತ ಅವರು ಸುಮ್ಮನೆ ಕುಳಿತಿಯಲ್ಲ ಎನ್ನುವುದನ್ನೂ ಸ್ಪಷ್ಟ ಪಡಿಸಿದ್ದಾರೆ. ಹೊಸ ಸಿನಿಮಾದ ಕೆಲಸದಲ್ಲೇ ಬ್ಯುಸಿಯಾಗಿದ್ದೇನೆ ಎಂದೂ ಸ್ಪಷ್ಟನೆ ನೀಡಿದ್ದಾರೆ.

     

    ಮೊನ್ನೆಯಷ್ಟೇ ನಂಜನಗೂಡಿಗೆ ಆಗಮಿಸಿದ್ದ ಯಶ್, ‘ನಾನು ದುಡ್ಡಿಗಾಗಿ ಸಿನಿಮಾ ಮಾಡುವುದಿಲ್ಲ. ಸಿನಿಮಾವನ್ನು ಯಾರೂ ಫ್ರಿಯಾಗಿ ನೋಡುವುದಿಲ್ಲ. ಹಾಗಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ. ಒಂದು ನಿಮಿಷವನ್ನೂ ಹಾಳು ಮಾಡಿಕೊಳ್ಳದೇ ಹೊಸ ಸಿನಿಮಾದ ಕೆಲಸವನ್ನು ಮಾಡುತ್ತಿದ್ದೇನೆ. ಅತೀ ಶೀಘ್ರದಲ್ಲೇ ಅಪ್ ಡೇಟ್ ನೀಡುತ್ತೇನೆ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫ್ಯಾನ್ಸ್ ಭೇಟಿಗಾಗಿ ಮಲೇಷ್ಯಾಗೆ ಹೊರಟು ನಿಂತ ರಾಕಿಭಾಯ್ ಯಶ್

    ಫ್ಯಾನ್ಸ್ ಭೇಟಿಗಾಗಿ ಮಲೇಷ್ಯಾಗೆ ಹೊರಟು ನಿಂತ ರಾಕಿಭಾಯ್ ಯಶ್

    ಕೆಜಿಎಫ್ ಸಿನಿಮಾದ ನಂತರ ಯಶ್ (Yash) ಅಭಿಮಾನಿಗಳು ರಾಜ್ಯ, ದೇಶದ ಗಡಿಯನ್ನೂ ದಾಟಿದ್ದಾರೆ. ಅನೇಕ ದೇಶಗಳಲ್ಲಿ ಯಶ್ ಅಭಿಮಾನಿಗಳ (Fans) ಸಂಘಗಳಿವೆ. ಆಯಾ ರಾಜ್ಯಕ್ಕೆ ಯಶ್ ಭೇಟಿ ನೀಡಿದಾಗೆಲ್ಲ ಅವರ ಅಭಿಮಾನಿಗಳಿಗಾಗಿ ಒಂದಷ್ಟು ಸಮಯವನ್ನು ಮೀಸಲಿಡುತ್ತಾರೆ. ಅಲ್ಲದೇ, ಮನೆ ಮುಂದೆ ಬಂದ ಅಭಿಮಾನಿಗಳಿಗೂ ಟೈಮ್ ನೀಡುತ್ತಾರೆ. ಇದೀಗ ಮಲೇಷ್ಯಾ ಫ್ಯಾನ್ಸ್ ಮೀಟ್ ಮಾಡಲು ಮುಂದಾಗಿದ್ದಾರೆ.


    ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಯಶ್ ಜುಲೈ 9ರಂದು ಮಲೇಷ್ಯಾಗೆ (Malaysia) ತೆರಳುತ್ತಿದ್ದಾರೆ. ಕಾರ್ಯಕ್ರಮದ ನಂತರ ಅವರು ಮಲೇಷ್ಯಾದ ಅಭಿಮಾನಿಗಳನ್ನೂ ಭೇಟಿ ಮಾಡಲಿದ್ದಾರಂತೆ. ತಮ್ಮ ನೆಚ್ಚಿನ ನಟನನ್ನು ನೋಡುವುದಕ್ಕಾಗಿ ಅಲ್ಲಿನ ಅಭಿಮಾನಿಗಳು ಕಾಯುತ್ತಿದ್ದಾರೆ ಎನ್ನುತ್ತಾರೆ ಯಶ್ ಆಪ್ತರು. ಕಾರ್ಯಕ್ರಮದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡದೇ ಇದ್ದರೂ, ಕಾರ್ಯಕ್ರಮದ ನಂತರ ಫ್ಯಾನ್ಸ್ ಭೇಟಿ ಮಾಡುವುದು ಖಚಿತ ಎನ್ನುತ್ತಾರೆ. ಇದನ್ನೂಓದಿ:ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕಾಂತಾರ’ ಹೀರೋ ರಿಷಬ್ ಶೆಟ್ಟಿ

    ಕೆಜಿಎಫ್ 2 ಸಿನಿಮಾದ ನಂತರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ಕಾಯುತ್ತಿದ್ದಾರೆ. ಹೊಸ ಸಿನಿಮಾ ಯಾವಾಗ ಶುರು ಎಂದು ಕಳೆದ ಒಂದು ವರ್ಷದಿಂದಲೂ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ, ಯಶ್ ಮಾತ್ರ ಯಾವುದೇ ಅಪ್ ಡೇಟ್ ನೀಡದೇ ಮೌನವಹಿಸಿದ್ದಾರೆ. ಹಾಗಂತ ಅವರು ಸುಮ್ಮನೆ ಕುಳಿತಿಯಲ್ಲ ಎನ್ನುವುದನ್ನೂ ಸ್ಪಷ್ಟ ಪಡಿಸಿದ್ದಾರೆ. ಹೊಸ ಸಿನಿಮಾದ ಕೆಲಸದಲ್ಲೇ ಬ್ಯುಸಿಯಾಗಿದ್ದೇನೆ ಎಂದೂ ಸ್ಪಷ್ಟನೆ ನೀಡಿದ್ದಾರೆ.

     

    ಮೊನ್ನೆಯಷ್ಟೇ ನಂಜನಗೂಡಿಗೆ ಆಗಮಿಸಿದ್ದ ಯಶ್, ‘ನಾನು ದುಡ್ಡಿಗಾಗಿ ಸಿನಿಮಾ ಮಾಡುವುದಿಲ್ಲ. ಸಿನಿಮಾವನ್ನು ಯಾರೂ ಫ್ರಿಯಾಗಿ ನೋಡುವುದಿಲ್ಲ. ಹಾಗಾಗಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ. ಒಂದು ನಿಮಿಷವನ್ನೂ ಹಾಳು ಮಾಡಿಕೊಳ್ಳದೇ ಹೊಸ ಸಿನಿಮಾದ ಕೆಲಸವನ್ನು ಮಾಡುತ್ತಿದ್ದೇನೆ. ಅತೀ ಶೀಘ್ರದಲ್ಲೇ ಅಪ್ ಡೇಟ್ ನೀಡುತ್ತೇನೆ ಎಂದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಂಜನಗೂಡು ನಂಜುಂಡೇಶ್ವರನ ಬಳಿ ಯಶ್ ಕೇಳಿದ್ದೇನು?

    ನಂಜನಗೂಡು ನಂಜುಂಡೇಶ್ವರನ ಬಳಿ ಯಶ್ ಕೇಳಿದ್ದೇನು?

    ಶ್ (Yash) ನಯಾ ಯುದ್ಧಕ್ಕೆ ಸಜ್ಜಾಗಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಸಿನಿಮಾದ ಮಾಹಿತಿ ಜಗತ್ತಿನ ಮುಂದೆ ಇಡಲಿದ್ದಾರೆ. ಅಖಾಡ ಸಿದ್ಧವಾಗಿದೆ. ಕುದುರೆ ಏರುವುದೊಂದೇ ಬಾಕಿ. ಅದಕ್ಕೂ ಮುನ್ನ ಮನೆ ದೇವರು ನಂಜುಂಡೇಶ್ವರನ (Nanjundeshwar) ಪಾದಕ್ಕೆ ಶರಣಾಗಿದ್ದಾರೆ. ಮಹಾ ಗೆಲುವಿಗಾಗಿ ಬೇಡಿಕೊಂಡಿದ್ದಾರೆ. ಇನ್ನೇನು ಕೋರಿಕೊಂಡರು ರಾಕಿಭಾಯ್? ನಯಾ ಸಿನಿಮಾ ಘೋಷಣೆ ಯಾವಾಗಂತೆ? ಬಾಲಿವುಡ್‌ಗೆ ಹೋಗಲಿದ್ದಾರಾ ರಾಮಾಚಾರಿ? ಇಂತಹ ಪ್ರಶ್ನೆಗಳು ಸಹಜವಾಗಿಯೇ ಅಭಿಮಾನಿಗಳಲ್ಲಿ ಮೂಡಿವೆ.

    ರಾಕಿಭಾಯ್ ಚಿತ್ತ. ಹೊಸ ಸಿನಿಮಾದತ್ತ. ಈ ಹಿಂದೆ ಮಾಡಿದ ಸಿನಿಮಾಗಳದ್ದು ಒಂದು ತೂಕವಾದರೆ. ಈಗ ಮಾಡಲಿರುವ ಚಿತ್ರದ್ದು ಭೂಮಿ ತೂಕ. ಅದಕ್ಕಾಗಿಯೇ ಕಳೆದ ಎರಡು ಮೂರು ವರ್ಷಗಳಿಂದ ಹುಡುಕಿ ಹುಡುಕಿ ಕತೆ ಮಾಡಿಸಿದ್ದಾರೆ. ಈಗಾಗಲೇ ಚಿತ್ರಕತೆ ಒಂದು ಹಂತಕ್ಕೆ ಬಂದಿದೆ. ತಿದ್ದುವಿಕೆ ನಡೆಯುತ್ತಲೇ ಇರುತ್ತದೆ. ಮಲಯಾಳಂ ನಿರ್ದೇಶಕಿ ಗೀತು ಮೋಹನ್‌ದಾಸ್ ಡೈರೆಕ್ಟರ್ ಪಟ್ಟದಲ್ಲಿ ಕುಳಿತಿದ್ದಾರೆ. ಒಂದೊಂದು ವಿಭಾಗವೂ ಹಗಲು ರಾತ್ರಿ ಬೆವರು ಸುರಿಸುತ್ತಿದೆ. ಈ ಸಮಯದಲ್ಲಿಯೇ ರಾಕಿಭಾಯ್ ಮನೆ ದೇವರು ನಂಜನಗೂಡು (Nanjangudu) ನಂಜುಂಡೇಶ್ವರನ ಪಾದಕ್ಕೆ ಅಡ್ಡ ಬಿದ್ದಿದ್ದಾರೆ. ದಿವ್ಯ ಗೆಲುವನ್ನು ನೀಡು ಎಂದು ಕೈಮುಗಿದಿದ್ದಾರೆ.

    ಯಶ್ ಬಾಲ್ಯದಿಂದಲೇ ಓಡಾಡಿ ಬೆಳೆದ ಜಾಗ ಈ ನಂಜುಂಡೇಶ್ವರನ ಸನ್ನಿಧಿ. ಮೈಸೂರಿನಿಂದ ಹಬ್ಬ ಹರಿದಿನಗಳಲ್ಲಿ ಅಪ್ಪ ಅಮ್ಮ ಹಾಗೂ ಇಬ್ಬರು ಮಕ್ಕಳು ಈ ದೈವ ದರ್ಶನಕ್ಕೆ ಹೋಗುತ್ತಿದ್ದರು. ಮನೆಯಲ್ಲಿ ಎಷ್ಟೇ ಕಷ್ಟ ಇದ್ದರೂ ಅದನ್ನು ನಿವಾರಿಸು ಭಗವಂತ ಎಂದು ಕೋರುತ್ತಿದ್ದರು. ಡ್ರೈವರ್ ಆಗಿದ್ದ ಅಪ್ಪ. ಮನೆ ಒಡತಿಯಾಗಿದ್ದ ಅಮ್ಮ. ಇಬ್ಬರೂ ಮಕ್ಕಳಿಗೆ ಏನೇನು ಬೇಕೊ ಎಲ್ಲವನ್ನೂ ಕೊಟ್ಟು ಭಾವುಕರಾಗುತ್ತಿದ್ದರು. ಅದೇ ದೇವರ ಮೆಟ್ಟಿಲ ಮೇಲೆ ಇಂದು ಯಶ್ ಮೀಸೆ ತಿರುವುತ್ತಾ ನಿಂತಿದ್ದಾರೆ. ನಂಜುಂಡೇಶ್ವರನ ಅನುಗ್ರಹದಿಂದಲೇ ಈಗ ನ್ಯಾಶನಲ್ ಸ್ಟಾರ್ ಪಟ್ಟದಲ್ಲಿ ಕುಳಿತಿದ್ದಾರೆ.

    ಅದೊಂದು ಕಾಲದಲ್ಲಿ ಅಪ್ಪ ಅಮ್ಮನ ಜೊತೆ ಈ ಸನ್ನಿಧಿಗೆ ಹೋಗುತ್ತಿದ್ದ ಯಶ್ ಈಗ ಪತ್ನಿ ರಾಧಿಕಾ ಹಾಗೂ ಇಬ್ಬರು ಮಕ್ಕಳ ಸಮೇತ ಹೋಗುವ ಸಮಯ ಬಂದಿದೆ. ಅಂದು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ರಾಕಿ ಈಗ ಕೋಟಿ ಕೋಟಿ ಬೆಲೆ ಬಾಳು ಐಷಾರಾಮಿ ಕಾರಿನಲ್ಲಿ ಹೋಗಿದ್ದಾರೆ. ಇವರಿಗಾಗಿ ವಿಶೇಷ ಪೂಜೆ ಕೂಡ ಮಾಡಲಾಯಿತು. ಕೆಜಿಎಫ್ ಮುಗಿದ ಮೇಲೆ ಯಶ್ ಎಲ್ಲೇ ಸಿಗಲಿ ಎಲ್ಲರೂ ಕೇಳುವುದು ಒಂದೇ ಪ್ರಶ್ನೆ. `ಯಾವಾಗ ಹೊಸ ಸಿನಿಮಾ ಅನೌನ್ಸ್ಮೆಂಟ್ ?’ ಅದಕ್ಕೆ ಸಿದ್ಧರಾಗಿಯೇ ಬಂದಂತಿದ್ದ ಯಶ್ ಮತ್ತೆ ಅದೇ ಮಾತನ್ನು ರಿಪೀಟ್ ಮಾಡಿದರು. ಸದ್ಯದಲ್ಲೇ ಎಲ್ಲವನ್ನೂ ತಿಳಿಸುತ್ತೇನೆ ಎಂದರು. ಇದನ್ನೂ ಓದಿ:ಅನಿಮಲ್ ಶೂಟಿಂಗ್ ಮುಗಿಸಿದ ರಶ್ಮಿಕಾ ಮಂದಣ್ಣ

    ಕಾಸು ಕೊಟ್ಟು ನೋಡುವ ಪ್ರೇಕ್ಷಕರಿಗೆ ಯಾವುದೇ ರೀತಿ ಬೇಸರ ಆಗಬಾರದು. ಅಂಥ ಸಿನಿಮಾಕ್ಕಾಗಿಯೇ ಒಂದು ನಿಮಿಷ ವ್ಯರ್ಥ ಮಾಡದೇ ದುಡಿಯುತ್ತಿದ್ದೇನೆ ಎಂದು ಹೇಳಿ ಇನ್ನಷ್ಟು ಕುತೂಹಲ ಮೂಡಿಸಿದರು. ಈ ನಡುವೆ ತೂರಿ ಬಂದ ಪ್ರಶ್ನೆ ಒನ್ಸ್ ಅಗೇನ್ ಅದೇ. ಬಾಲಿವುಡ್‌ನ ರಾಮಾಯಣ ಸಿನಿಮಾದಲ್ಲಿ ಯಶ್ ರಾವಣನ ಪಾತ್ರ ಮಾಡಲಿದ್ದಾರಂತೆ. ಈಗಾಗಲೇ ರಾಮಾಯಣ ತಂಡ ಸಂಪರ್ಕ ಮಾಡಿದೆಯಂತೆ. ಇದೇ ಕೆಲವು ದಿನಗಳಿಂದ ಗಿರಕಿ ಹೊಡೆಯುತ್ತಿತ್ತು. ಹಾಗೆಯೇ ರಜನಿ ಜೊತೆ ಯಶ್ ನಟಿಸಲಿದ್ದಾರೆ ಎನ್ನುವ ಮಾತೂ ಕೇಳಿ ಬಂದಿತ್ತು. ಅದಕ್ಕೆಲ್ಲ ಖಡಕ್ ಉತ್ತರ ಕೊಟ್ಟು ನಕ್ಕರು.

    ಈಗಾಗಲೇ ಯಶ್ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಕೆಜಿಎಫ್ (KGF) ಗೆಲುವು ಸುಮ್ಮನೆ ಬಂದಿಲ್ಲ ಎನ್ನುವುದನ್ನು ಅವರು ಸಾಬೀತು ಪಡಿಸಬೇಕಿದೆ. ಕಾರಣ ಕಣ್ಣ ಮುಂದಿದೆ. ಬಾಹುಬಲಿ ನಂತರ ಟಾಲಿವುಡ್ ಸ್ಟಾರ್ ಪ್ರಭಾಸ್ ಒಂದೇ ಒಂದು ಹಿಟ್ ಕೊಟ್ಟಿಲ್ಲ. ಎಲ್ಲವೂ ಅಟ್ಟರ್ ಫ್ಲಾಪ್. ರಾಜಮೌಳಿ ಇದ್ದಿದ್ದಕ್ಕೇ ಬಾಹುಬಲಿ ಗೆದ್ದಿತು ಎನ್ನುವ ಮಾತು ಶುರುವಾಗಿದೆ. ಅದೇ ರೀತಿ ಪ್ರಶಾಂತ್ ನೀಲ್ ಮಾತ್ರ ಗೆಲುವಿಗೆ ಕಾರಣ ಎನ್ನುವಂತೆ ಆಗಬಾರದಲ್ಲವೆ? ಅದಕ್ಕಾಗಿ ಹೊಸ ಸಿನಿಮಾ ಜಗತ್ತಿನ ತುಂಬಾ ಮೆರವಣಿಗೆ ಹೊರಡಬೇಕಿದೆ. ಅದೆಲ್ಲ ಲೆಕ್ಕಾಚಾರ ತಲೆಯಲ್ಲಿ ಇಟ್ಟುಕೊಂಡು ಯಶ್ ಯಾಗಕ್ಕೆ ಮೊದಲ ಹೆಜ್ಜೆ ಇಡಲಿದ್ದಾರೆ.

  • ರಾಕಿ ಭಾಯ್ ಯಶ್ ಭೇಟಿ ಮಾಡಿದ ಡಿಕೆ ಸಾಹೇಬ್

    ರಾಕಿ ಭಾಯ್ ಯಶ್ ಭೇಟಿ ಮಾಡಿದ ಡಿಕೆ ಸಾಹೇಬ್

    ಮೊನ್ನೆಯಷ್ಟೇ ಕ್ರಿಕೆಟ್ ದಂಥಕತೆ ಸಚಿನ್ ಅವರನ್ನು ತಮಿಳಿನ ಖ್ಯಾತ ನಟ ಸೂರ್ಯ ಭೇಟಿ ಮಾಡಿ, ಆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಲ್ಲದೇ, ಸುದೀಪ್ ಅವರನ್ನು ಕ್ರಿಕೆಟಿಗರು ಪದೇ ಪದೇ ಭೇಟಿ ಮಾಡುತ್ತಲೇ ಇರುತ್ತಾರೆ. ಆ ಖುಷಿಯನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಅಂಥದ್ದೊಂದು ಫೋಟೋ ಯಶ್ ಅವರ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದೆ.

    ಕ್ರಿಕೆಟ್ ಲೋಕದ ಡಿಕೆ ಸಾಹೇಬ್ ಎಂದೇ ಖ್ಯಾತರಾಗಿರುವ ದಿನೇಶ್ ಕಾರ್ತಿಕ್ (Dinesh Karthik) ಇತ್ತೀಚೆಗಷ್ಟೇ ಯಶ್ (Yash) ಅವರನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ತಗೆಸಿಕೊಂಡ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಫೋಟೋ ಜೊತೆ ‘ಸಲಾಂ ರಾಕಿ ಭಾಯ್’ ಎಂದು ಹೆಮ್ಮೆಯಿಂದ ಬರೆದುಕೊಂಡಿದ್ದಾರೆ. ಈ ಸಮಯದಲ್ಲಿ ಯಶ್ ತಮ್ಮ ಮುಂದಿನ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿಯನ್ನು ಹಂಚಿಕೊಂಡರು ಎಂದು ಹೇಳಲಾಗುತ್ತಿದೆ.

    ತಮ್ಮ ಮುಂದಿನ ಸಿನಿಮಾ ಬಗ್ಗೆ ಯಶ್ ಜಾಣೆ ನಡೆ ಪ್ರದರ್ಶಿಸುತ್ತಿದ್ದಾರೆ. ಈವರೆಗೂ ಯಾವುದೇ ಮಾಹಿತಿಯನ್ನು ಅವರು ಹಂಚಿಕೊಳ್ಳದೇ ಇದ್ದರೂ, ಅವರ ಸಿನಿಮಾ ಬಗ್ಗೆ ವರ್ಷದಿಂದಲೂ ಬೇರೆ ಬೇರೆ ರೀತಿಯಲ್ಲಿ ಚರ್ಚೆ ಆಗುತ್ತಲೇ ಇದೆ. ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಈ ಬಾರಿ ಅವರ ಸಿನಿಮಾ ಹಾಲಿವುಡ್ ರೇಂಜ್ ನಲ್ಲಿ ಇರಲಿದೆಯಂತೆ. ಹಾಗಾಗಿಯೇ ಸಂಪೂರ್ಣ ಸಿದ್ಧತೆಯೊಂದಿಗೆ ಅವರು ಹೊಸ ಸಿನಿಮಾಗೆ ಕಾಲಿಡಲಿದ್ದಾರಂತೆ.