ಅಮರಾವತಿ: ಆಂಧ್ರಪ್ರದೇಶದಲ್ಲಿ (Andhra Pradesh) ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಬೃಹತ್ ರ‍್ಯಾಲಿ ನಡೆಸುವ ವೇಳೆ ಭಾರೀ ಅವಘಡ ಸಂಭವಿಸಿದೆ. ಜಗನ್ ತೆರಳುತ್ತಿದ್ದ ಕಾರಿನಡಿ ಸಿಲುಕಿ 55 ವರ್ಷ ವ್ಯಕ್ತಿ ಮೃತಪಟ್ಟಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಗುರುವಾರ) ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಚುನಾವಣಾ ಭಾಷಣದೊಂದಿಗೆ ಲೋಕಸಭಾ ಚುನಾವಣೆಯ ಪ್ರಚಾರವನ್ನು ಕೊನೆಗೊಳಿಸಿದರು.
ಪ್ರಧಾನಿಯವರು ಈಗ ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ರಾಕ್ ಸ್ಮಾರಕದಲ್ಲಿ (Vivekananda Rock Memorial) ಇಂದಿನಿಂದ ಜೂನ್ 1 ರವರೆಗೆ ಅಂದರೆ ಎರಡು ದಿನಗಳ ಕಾಲ (45 ಗಂಟೆಗಳ) ಧ್ಯಾನ ಮಾಡಲಿದ್ದಾರೆ.
Tamil Nadu | Prime Minister Narendra Modi arrived at Vivekananda Rock Memorial in Kanyakumari
He will meditate from 30th May evening to 1st June evening.
PM Modi will meditate day and night at the same place where Swami Vivekanand did meditation, at the Dhyan Mandapam. pic.twitter.com/OhCFgb3bPG
ಮಾರ್ಚ್ 16 ರಂದು ಚುನಾವಣಾ ಆಯೋಗವು (EC) ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದಾಗಿನಿಂದ ಇಂದಿನವರೆಗೆ ಪ್ರಧಾನಿಯವರು ಒಟ್ಟು 206 ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಿದ್ದಾರೆ. ಅಲ್ಲದೇ ಒಟ್ಟು 80 ಸಂದರ್ಶನಗಳನ್ನು ನೀಡಿದ್ದಾರೆ. ಮತದಾನ ಆರಂಭವಾದಾಗಿನಿಂದ ಸರಾಸರಿ ದಿನಕ್ಕೆ ಒಂದಕ್ಕಿಂತ ಹೆಚ್ಚು ಸಂದರ್ಶನಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಕನ್ಯಾಕುಮಾರಿಯಲ್ಲಿ ಪ್ರಧಾನಿ ಮೋದಿ ಧ್ಯಾನ; 33 ವರ್ಷಗಳ ಹಿಂದಿನ ಫೋಟೊ ವೈರಲ್
2019 ರ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿಯವರು ಸುಮಾರು 145 ರ್‍ಯಾಲಿಗಳಲ್ಲಿ ಭಾಗವಹಿಸಿದ್ದರು. ಹೀಗಾಗಿ ಕಳೆದ ಬಾರಿಗಿಂತ ಈ ಬಾರಿ ಅವರು ಹೆಚ್ಚು ಚುನಾವಣಾ ಪ್ರಚಾರ ಹಾಗೂ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಐದು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ ಪ್ರಚಾರದ ಅವಧಿ 68 ದಿನಗಳಿದ್ದರೆ, ಈ ಬಾರಿ 76 ದಿನಗಳು ಇದ್ದವು.
ಚುನಾವಣೆಯಲ್ಲಿ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಬಲಪಡಿಸಲು ಪ್ರಯತ್ನಿಸುತ್ತಿದೆ. ಈ ಮೂರು ರಾಜ್ಯಗಳಲ್ಲಿ 2019 ರ ಚುನಾವಣೆಯಲ್ಲಿ ಬಿಜೆಪಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ತನ್ನ ಬಲವನ್ನು ಉಳಿಸಿಕೊಳ್ಳಲು ಮತ್ತು ತೆಲಂಗಾಣದಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಳ್ಳಲು ಪಕ್ಷವು ಪ್ರಯತ್ನಿಸುತ್ತಿದೆ. 2019 ರಲ್ಲಿ ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ 25 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದ್ದರೆ, ತೆಲಂಗಾಣದಲ್ಲಿ ನಾಲ್ಕು ಸ್ಥಾನಗಳಲ್ಲಿ ಗೆಲುವು ಕಂಡಿತ್ತು.
ಇಂದು ಬೊಮ್ಮನಹಳ್ಳಿಯಲ್ಲಿ ನಡೆಯಬೇಕಿದ್ದ ಬೈಕ್ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಲಿಲ್ಲ ಎನ್ನುವ ಕಾರಣಕ್ಕಾಗಿ ರದ್ದು ಮಾಡಲಾಗಿದೆ. ಆದರೆ, ಈ ರ‍್ಯಾಲಿ ನಡೆಯದೇ ಬಿಡಲಿಲ್ಲ. ಮುಂದಿನ ದಿನಾಂಕವನ್ನು ತಿಳಿಸುವುದಾಗಿ ದರ್ಶನ್ ಫ್ಯಾನ್ಸ್ ಪೋಸ್ಟ್ ಮಾಡಿಕೊಂಡಿದ್ದಾರೆ. ಈ ಮೂಲಕ ತಾವು ಯಾರಿಗೆ ಠಕ್ಕರ್ ಕೊಡಬೇಕು ಎಂದುಕೊಂಡಿದ್ದರೋ ಕೊಟ್ಟೇ ಕೊಡುತ್ತೇವೆ ಎಂದು ಮತ್ತೊಮ್ಮೆ ಸಂದೇಶ ರವಾನಿಸಿದ್ದಾರೆ.
ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ವಿರುದ್ಧ ಠಕ್ಕರ್ ಕೊಡುವುದಕ್ಕಾಗಿ ನಟ ದರ್ಶನ್ (Darshan) ಅಭಿಮಾನಿಗಳು (Fans) ಇಂದು ಬೈಕ್ ರ‍್ಯಾಲಿ (Bike rally) ಏರ್ಪಡಿಸಿದ್ದರು. ಈ ರ‍್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ. ಹಾಗಾಗಿ ಇಂದು ಬೈಕ್ ರ‍್ಯಾಲಿ ನಡೆದಿಲ್ಲ.
ಇಂದು (ಫೆ.26) `ಡಿ ಬಾಸ್ ಜಿಂದಾಬಾದ್’ ಹೆಸರಲ್ಲಿ ದರ್ಶನ್ ಅಭಿಮಾನಿಗಳಿಂದ ಬೃಹತ್ ಬೈಕ್ ರ‍್ಯಾಲಿ ಏರ್ಪಡಿಸಿದ್ದರು. ಹಾಗಾಗಿ ದರ್ಶನ್- ಉಮಾಪತಿ ಸಮರ ನಿಲ್ಲುತ್ತಿಲ್ಲ. ಉಮಾಪತಿಗೆ (Umapathy) ಪಾಠ ಕಲಿಸಲೆಂದೇ ‘ಒಂಟಿ ಸಲಗ’ ಹೆಸರಲ್ಲಿ ಬೃಹತ್ ರ‍್ಯಾಲಿ ನಡೆಸಲು ದರ್ಶನ್ ಫ್ಯಾನ್ಸ್ ತಯಾರಿ ನಡೆಸಿದ್ದರು. ಡಿಬಾಸ್ ಫ್ಯಾನ್ಸ್ ಟೀಮ್‌ಗೆ ಒಂಟಿ ಸಲಗ ಎಂದು ಹೆಸರಿಟ್ಟಿದ್ದರು.
ರ‍್ಯಾಲಿ ಮಾಡ್ತಿರೋ ಜಾಗವೇ ಗಮನಾರ್ಹವಾಗಿದ್ದು, ಬೊಮ್ಮನಹಳ್ಳಿಯಲ್ಲಿ ಬೃಹತ್ ರ‍್ಯಾಲಿಯಲ್ಲಿ ದರ್ಶನ್ ಸಾವಿರಾರು ಅಭಿಮಾನಿಗಳು ಒಗ್ಗಟ್ಟು ಪ್ರದರ್ಶಿಸಲಿದ್ದರು. ಬೊಮ್ಮನಹಳ್ಳಿ ಮಹಾ ಗಣಪತಿ ದೇವಸ್ಥಾನದಿಂದ ಹೆಚ್‌ಎಸ್‌ಆರ್ ಲೇಔಟ್ ಬಿಡಿಎ ಕಾಂಪ್ಲೆಕ್ಸ್‌ವರೆಗೆ ರ‍್ಯಾಲಿ ನಡೆಯಬೇಕಿತ್ತು. ಉಮಾಪತಿಗೆ ಠಕ್ಕರ್ ಕೊಡಲು ಅವರದ್ದೇ ಕ್ಷೇತ್ರದಲ್ಲಿ ಇಂದು ಸಂಜೆ 6 ಗಂಟೆಗೆ ಡಿಬಾಸ್ ಫ್ಯಾನ್ಸ್ ರ‍್ಯಾಲಿ ಮಾಡಲು ಹೊರಟಿದ್ದರು.
ಇತ್ತೀಚೆಗೆ ಉಮಾಪತಿ ಅವರು ದರ್ಶನ್ ನಟನೆಯ ‘ಕಾಟೇರ’ ಸಿನಿಮಾಗೆ ಟೈಟಲ್ ಕೊಟ್ಟಿದ್ದೇ ನಾನು ಎಂದು ಸಂದರ್ಶನಗಳಲ್ಲಿ ಮಾತನಾಡಿದ್ದರು. ಈ ವಿಚಾರಕ್ಕೆ ಕಾಟೇರ ಸಕ್ಸಸ್ ಮೀಟ್‌ನಲ್ಲಿ ದರ್ಶನ್ ಪ್ರತಿಕ್ರಿಯೆ ನೀಡಿದ್ದರು. ಹೇ ತಗಡು ಚಿತ್ರಕ್ಕೆ ‘ಕಾಟೇರ’ ಎಂದು ಟೈಟಲ್ ಇಟ್ಟಿದ್ದೇ ನಾನು ಎಂದು ದರ್ಶನ್ ಉಮಾಪತಿಗೆ ತಿರುಗೇಟು ನೀಡಿದ್ದರು.
ಹಾಸನ: ನಮ್ಮ ನಾಯಕರು ಈ ಬಾರಿಯ ಚುನಾವಣೆಯಲ್ಲಿ (Election) ಒಂದು ಲಕ್ಷ ಮತ ಪಡೆದು ಗೆಲ್ಲಬೇಕು ಎಂದು ಹೇಳಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಗುರಿ ನಿಶ್ಚಯವಾಗಿದೆ. ದಾರಿ ಸೊಗಸಾಗಿದೆ. ಆ ನಿಟ್ಟಿನಲ್ಲಿ ಸಾಗುವೆ ಎಂದು ಶಾಸಕ ಪ್ರೀತಂ ಗೌಡ (Preetham Gowda) ಹೇಳಿದ್ದಾರೆ.
ಹಾಸನದಲ್ಲಿ (Hassan) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಒಂದು ಲಕ್ಷ ಮತಗಳೊಂದಿಗೆ ಗೆಲುವು ಸಾಧಿಸಬೇಕೆಂಬುದು ಜನರ ಹಾಗೂ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಈ ನಿಟ್ಟಿನಲ್ಲಿ ಪ್ರತೀ ಕಾರ್ಯಕರ್ತ ನಾನೇ ಮತದಾರ ಎಂದು ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಏನಾದರೂ ಆಕ್ಷೇಪ ಇದ್ದರೆ ಈಗಲೇ ಇವಿಎಂ (EVM) ಚೆಕ್ ಮಾಡಿಕೊಳ್ಳಲಿ. ಅಲ್ಲದೇ ಕೋವಿಡ್ ಸಂದರ್ಭ ಸೇರಿದಂತೆ ಎಲ್ಲಾ ಹಂತದಲ್ಲೂ ನಮ್ಮ ಶಾಸಕರು ಎಂಬ ಭಾವನೆಯಿಂದ ಎಲ್ಲರೂ ಸೇರಿ ಕೆಲಸ ಮಾಡಿ ಅಭಿವೃದ್ಧಿ ಮಾಡಿದ್ದಾರೆ. ಎಲ್ಲರೂ ಸೇರಿ ನನ್ನನ್ನು ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಇದನ್ನೂ ಓದಿ: ವರುಣಾ, ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ: ಪುಟ್ಟರಂಗಶೆಟ್ಟಿ
ಜೆಡಿಎಸ್ (JDS) ಅಭ್ಯರ್ಥಿ ಕಿತ್ತಾಟ ನಿಮಗೆ ಪ್ಲಸ್ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರೇ ಅಭ್ಯರ್ಥಿಯಾದರೂ ಪ್ರೀತಂ ಗೌಡ ಒಂದು ಲಕ್ಷ ಮತ ಪಡೆಯಬೇಕು ಎಂದು ಜನತೆ ಸಂಕಲ್ಪ ಮಾಡಿದ್ದಾರೆ. ನನಗೆ ನನ್ನದೇ ಆದ ಬಳಗವಿದೆ. ವೋಟು ಹಾಕಿಸುವ ಶಕ್ತಿ ಇದೆ. ನಾನು ವಿಪಕ್ಷಗಳ ಬಗ್ಗೆ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಐವತ್ತು ಸಾವಿರ ಲೀಡ್‌ನಿಂದ ಗೆಲ್ಲುವೆ ಎಂದು ಹದಿನೆಂಟು ತಿಂಗಳ ಹಿಂದೆ ಹೇಳಿದ್ದೆ. ಆಗಲೇ ಉತ್ತರ ಕೊಟ್ಟಿದ್ದರೆ ಅಸ್ತಿತ್ವ ಇರುತ್ತಿತ್ತು. ಈಗ ಸಮಯ ಮೀರಿದೆ. ಆದರೆ ನನ್ನ ಹೇಳಿಕೆಗೆ ಈಗಲೂ, ಮುಂದೆಯೂ ಬದ್ಧವಾಗಿರುತ್ತೇನೆ ಎಂದು ಹೇಳಿದರು.
ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಹಿರಿಯರು. ಅವರಿಗೆ ಶಕ್ತಿ ಇಲ್ಲ ಎನ್ನುವುದಿಲ್ಲ. ಇಡೀ ರಾಜ್ಯದಲ್ಲಿ ಜೆಡಿಎಸ್ ಎಂಪಿ (MP) ಚುನಾವಣೆಯಲ್ಲಿ ಸೋತಾಗ ಹಾಸನದಲ್ಲಿ ಗೆಲ್ಲಿಸಿದರು. ಅವರು ಜಿಲ್ಲೆಯ ಜೆಡಿಎಸ್ ಶಕ್ತಿ. ಆ ಬಗ್ಗೆ ಯಾರೂ ಪ್ರಶ್ನೆ ಮಾಡುವಂತಿಲ್ಲ. ಹಾಸನ ಕ್ಷೇತ್ರದಲ್ಲಿ ನನ್ನ ಶಕ್ತಿ ಇದೆ. ಆದರೆ ರೇವಣ್ಣನವರ ಆಶೀರ್ವಾದ ಇಲ್ಲದೆ ಹಾಸನ ಅಭ್ಯರ್ಥಿ ಡೆಪಾಸಿಟ್ ಪಡೆಯಲು ಸಾಧ್ಯವಿಲ್ಲ. ರೇವಣ್ಣ ಒಂದು ಶಕ್ತಿ. ಅವರ ಮುಖ ನೋಡಿಯೇ ಜನ ವೋಟ್ ಹಾಕೋದು. ಅವರ ಧೋರಣೆ ಒಪ್ಪದಿರಬಹುದು ಆದರೆ ಅವರಲ್ಲಿ ಶಕ್ತಿ ಇದೆ ಎಂದು ರೇವಣ್ಣ ಪರ ಬ್ಯಾಟಿಂಗ್ ಮಾಡಿದರು. ಇದನ್ನೂ ಓದಿ: ಡಿಕೆಶಿ ಆಥಿತ್ಯ ಸ್ವೀಕರಿಸ್ತೀವಿ, ಮಿಲ್ಟ್ರಿ ಹೋಟೆಲ್ ಊಟಾನೂ ಮಾಡ್ತೀವಿ – ಅಶ್ವಥ್ ನಾರಾಯಣ್
ಹೊಳೆನರಸೀಪುರದಲ್ಲಿ ದೇವೇಗೌಡರ (H.D.Deve Gowda) ಕುಟುಂಬ ಹಾಗೂ ಹಾಸನದಲ್ಲಿ ಹೆಚ್.ಎಸ್.ಪ್ರಕಾಶ್ (H.S.Prakash) ಅವರ ಕುಟುಂಬದ ಹಿಡಿತದಲ್ಲೇ ಎಲ್ಲವೂ ನಡೆಯುತ್ತಿತ್ತು. ಈಗ ಜನ ಸಾಮಾನ್ಯ ಕುಟುಂಬದ ಪ್ರೀತಂ ಅವರನ್ನು ಬೆಂಬಲಿಸಿ ಬದಲಾವಣೆ ತರಬೇಕು ಎಂದು ಜನ ಬಯಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಏಳು ಕ್ಷೇತ್ರಗಳ ಟಿಕೆಟ್ ನೀಡುವಾಗ ವರಿಷ್ಠರು ನನ್ನ ಫೀಡ್‌ಬ್ಯಾಕ್ (Feedback) ಕೇಳಿದ್ದರು. ಈಗ ಹೋರಾಟ ಮಾಡುತ್ತೇವೆ. ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗೆದ್ದು ನಾನೇ ಮೊದಲಾಗುತ್ತೇನೆ. ಎರಡನೇ ಸ್ಥಾನಕ್ಕೆ ಜೆಡಿಎಸ್-ಕಾಂಗ್ರೆಸ್ (Congress) ಪೈಪೋಟಿ ನಡೆಸಬೇಕು ಎಂದರು.
ನಾನು ಐದು ದಿನ ರಾಜ್ಯದ ವಿವಿಧೆಡೆ ಪ್ರವಾಸ ಮಾಡಿ ಮೂರು ದಿನ ಜಿಲ್ಲೆಯಲ್ಲಿ ಸುತ್ತಾಡುತ್ತೇನೆ. ಉಳಿದ ಅವಧಿಯಲ್ಲಿ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ. ಪ್ರಧಾನಿ ಮೋದಿಯವರು (Narendra Modi) ಹಾಸನಕ್ಕೆ ಬರುವ ವಿಶ್ವಾಸವಿದೆ. ಪ್ರೀತಂ ಸಚಿವರಾಗಬೇಕು, ಅವರಿಗೆ ಮತ ಹಾಕುತ್ತೇವೆ ಎಂದು ಜನರು ಹೇಳುವುದಕ್ಕೆ ನನ್ನ ಸಹಮತವಿದೆ. ನಾನೇನು ಸನ್ಯಾಸಿಯಲ್ಲ. ಕಾರ್ಯಕರ್ತರ ಬಯಕೆ ತಪ್ಪಲ್ಲ ಎಂದು ಹೇಳಿದರು. ಇದನ್ನೂ ಓದಿ: ಕಡೂರು ಕ್ಷೇತ್ರದಿಂದ ವೈಎಸ್‌ವಿ ದತ್ತ ಸ್ಪರ್ಧೆ: ರೇವಣ್ಣ ಘೋಷಣೆ
ಶುಕ್ರವಾರ ಹಾಸನದಲ್ಲಿ ನಾಮಪತ್ರ (Nomination Papers) ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಿಂದ ರ‍್ಯಾಲಿ (Rally) ಹೊರಡಲಿದ್ದು, ಸಾಲಗಾಮೆ ರಸ್ತೆ, ಸಹ್ಯಾದ್ರಿ ಸರ್ಕಲ್, ಹೇಮಾವತಿ ಪ್ರತಿಮೆ, ಎನ್‌ಆರ್ ವೃತ್ತದ ಮೂಲಕ ಡಿಸಿ ಕಚೇರಿ ತಲುಪಲಿದೆ. ಪಕ್ಷ ಎರಡನೇ ಬಾರಿಗೆ ಶಾಸಕರಾಗಲು ಅವಕಾಶ ಮಾಡಿಕೊಟ್ಟದ್ದಕ್ಕಾಗಿ ನಾವೆಲ್ಲರೂ ಬೃಹತ್ ರ‍್ಯಾಲಿ ಮೂಲಕ ಬೆಂಬಲ ವ್ಯಕ್ತಪಡಿಸುತ್ತೇವೆ ಎಂದು ಗ್ರಾಮಾಂತರ ಮಂಡಲದ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ನಿರ್ಧರಿಸಿದ್ದಾರೆ. ರ‍್ಯಾಲಿಯ ಮತ್ತೊಂದು ವಿಶೇಷವೆಂದರೆ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ, ರಂಜಾನ್ ಹಾಗೂ ಲಕ್ಷ್ಮಿವಾರ. ಸರ್ವಧರ್ಮ ಸಮನ್ವಯ ಹಾಗೂ ಎಲ್ಲರಿಗೂ ಒಳಿತಾಗಲಿ ಎಂದು ಈ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ನಾಮಪತ್ರ ಸಲ್ಲಿಸುವುದಿಲ್ಲ. ನಾಮಪತ್ರ ಸಲ್ಲಿಕೆ ದಿನಾಂಕ ನಂತರ ತಿಳಿಸಲಾಗುವುದು ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಬಿಜೆಪಿಯಿಂದ ಟಿಕೆಟ್ ಸಿಗ್ಲಿಲ್ಲ ಅಂತಾ ಬೆಂಬಲಿಗರ ಸಭೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಟಿಕೆಟ್ ವಂಚಿತೆ ನಾಗಶ್ರೀ
ಅಮರಾವತಿ: ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಅವರು ನಡೆಸುತ್ತಿರುವ ರ‍್ಯಾಲಿ ವೇಳೆ ನೂಕುನುಗ್ಗಲಿನಿಂದ ಕಾಲ್ತುಳಿತಕ್ಕೆ (Stampede) ಇತ್ತೀಚೆಗಷ್ಟೇ 8 ಮಂದಿ ದಾರುಣ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ನಾಯ್ಡು ಅವರ ರ‍್ಯಾಲಿ ವೇಳೆ ಗುಂಟೂರು (Guntur) ಜಿಲ್ಲೆಯಲ್ಲಿ ಕಾಲ್ತುಳಿತಕ್ಕೆ ಮತ್ತೆ 3 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ 2024ರ ವಿಧಾನಸಭಾ ಚುನಾವಣೆಯ ತಯಾರಿಗಾಗಿ ರಾಜ್ಯಾದ್ಯಂತ ನಾಯ್ಡು ಅವರು ಸರಣಿ ರಾಜಕೀಯ ಸಭೆಗಳನ್ನು ನಡೆಸುತ್ತಿದ್ದಾರೆ. ರ‍್ಯಾಲಿ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಈ ವೇಳೆ ತಳ್ಳಾಟ-ನೂಕಾಟ ಜೋರಾಗಿತ್ತು. ಕಾಲ್ತುಳಿತದಿಂದಾಗಿ ಮೂವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಶಂಕಿತ ಉಗ್ರರ ದಾಳಿ- ಮೂವರು ನಾಗರಿಕರು ಸಾವು
ಗುಂಟೂರಿನಲ್ಲಾದ ಕಾಲ್ತುಳಿತ ದುರಂತದ ಬಗ್ಗೆ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ (Jagan Mohan Reddy) ಆಘಾತ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಎಲ್ಲ ರೀತಿಯ ವೈದ್ಯಕೀಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಕ್ಕೆ ಸರ್ಕಾರದ ನೆರವಿನ ಭರವಸೆ ನೀಡಿದ್ದಾರೆ.
ಮೂರು ದಿನಗಳ ಹಿಂದೆ, ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಮಾಜಿ ಸಿಎಂ ನಾಯ್ಡು ಅವರ ರೋಡ್ ಶೋ ವೇಳೆ ಕಾಲ್ತುಳಿತಕ್ಕೆ 8 ಮಂದಿ ಬಲಿಯಾಗಿದ್ದರು. ಘಟನೆಗೆ ವಿಷಾದ ವ್ಯಕ್ತಪಡಿಸಿದ್ದ ನಾಯ್ಡು ಅವರು ತಮ್ಮ ಸಭೆಗಳನ್ನು ರದ್ದುಗೊಳಿಸಿ, ಮೃತರ ಕುಟುಂಬಕ್ಕೆ 24 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಇದನ್ನೂ ಓದಿ: ಭೀಕರ ಅಪಘಾತ- ಡಿಕ್ಕಿ ಹೊಡೆದು 12 ಕಿ.ಮೀ ಎಳೆದೊಯ್ದ ಕಾರು, ಯುವತಿ ದುರ್ಮರಣ
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು, ದುರಂತಕ್ಕೆ ತೆಲುಗು ದೇಶಂ ಪಕ್ಷದ ಮುಖ್ಯಸ್ಥರ ವಿರುದ್ಧ ಹರಿಹಾಯ್ದಿದ್ದರು. ಪ್ರಚಾರದ ಉನ್ಮಾದವೇ ಈ ದುರಂತಕ್ಕೆ ಕಾರಣ ಎಂದು ನಾಯ್ಡು ವಿರುದ್ಧ ಕಿಡಿಕಾರಿದ್ದರು.
Live Tv
[brid partner=56869869 player=32851 video=960834 autoplay=true]
ಗಾಂಧೀನಗರ: ಗುಜರಾತ್ ಚುನಾವಣೆ (Gujarat Assembly Election) ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಬ್ಯುಸಿ ಇದ್ದಾರೆ. ಈ ಹೊತ್ತಲ್ಲೇ ಅವರ ಭದ್ರತೆ ವಿಚಾರದಲ್ಲಿ ಲೋಪ ಉಂಟಾಗಿದೆ.
Gujarat | Police arrests, registers case against 3 people-Nikul Rameshbhai Parmar, Rakesh Kalubhai Bharvad & Rajeshkumar Mangilal Prajapati- for recording video using a drone & violating 'no drone fly zone' during the visit of PM Modi at Bavla today: Ahmedabad Police pic.twitter.com/B5tRz49dh0
ಈ ಸಂಬಂಧ ಮೂವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ. ಆರೋಪಿಗಳನ್ನು ನಿಖಿಲ್ ಪಾರ್ಮರ್, ರಾಕೇಶ್ ಭಾರ್ವಾದ್, ರಾಕೇಶ್ ಕುಮಾರ್ ಪ್ರಜಾಪತಿ ಎಂದು ಗುರುತಿಸಲಾಗಿದೆ. ಮೂವರು ಅಹಮದಾಬಾದ್‍ನ ಓಧವ್ ನಿವಾಸಿಗಳಾಗಿದ್ದಾರೆ. ಐಪಿಸಿ ಸೆಕ್ಷನ್ 188ರ ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಲು ಮುಂದಾಗಿದ್ದಾರೆ. ಈ ಸಂಬಂಧ ಹಲವು ಸಂಸ್ಥೆಗಳು ಏಕಕಾಲದಲ್ಲಿ ಸಮಗ್ರ ತನಿಖೆ ನಡೆಸಿವೆ. ಇದನ್ನೂ ಓದಿ: 225 ಮೀ. ಆಳದ ಕಲ್ಲಿದ್ದಲು ಗಣಿ ಝಾಂಜ್ರಾ ಒಳಗೆ ಪ್ರವೇಶಿಸಿ ಪರಿಶೀಲಿಸಿದ ಮೊದಲ ಸಚಿವ ಪ್ರಹ್ಲಾದ್ ಜೋಶಿ
ಪ್ರಧಾನಿ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಪ್ರದೇಶ ಡ್ರೋನ್ ನಿಷೇಧಿತ ಪ್ರದೇಶವಾಗಿತ್ತು. ಆದರೂ ನಿಷೇಧಿತ ಪ್ರದೇಶದಲ್ಲೇ ಡ್ರೋನ್ ಹಾರಾಟ ನಡೆಸಿ ಮೂವರು 2 ಕಿ.ಮೀ ವರೆಗೆ ವೀಡಿಯೋ ಚಿತ್ರೀಕರಣ ನಡೆಸಿದ್ದಾರೆ. ಬಳಿಕ ಕೂಡಲೇ ಪೊಲೀಸರು ಡ್ರೋನ್ ಹಾರಿಸದಂತೆ ತಿಳಿಸಿದ್ದಾರೆ. ಬಳಿಕ ಕೆಳಗಿಳಿಸಿ ಪರಿಶೀಲಿಸಿದಾಗ ಯಾವುದೇ ನಿಷೇಧಿತ ವಸ್ತು ಪತ್ತೆಯಾಗಿಲ್ಲ. ಹೆಚ್ಚಿನ ತನಿಖೆ ಮುಂದುವರಿದಿದೆ.
Live Tv
[brid partner=56869869 player=32851 video=960834 autoplay=true]
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರ ನೇತೃತ್ವದಲ್ಲಿ ಪ್ರತಿಭಟನಾ ರ‍್ಯಾಲಿಯನ್ನು (Rally) ನಡೆಸಲಾಗುತ್ತಿದ್ದ ಟ್ರಕ್‌ನ (Truck) ಅಡಿಗೆ ಪತ್ರಕರ್ತೆಯೊಬ್ಬಳು (Journalist) ಸಿಲುಕಿ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ. ಪತ್ರಕರ್ತೆ ಟ್ರಕ್ ಅಡಿಗೆ ಸಿಲುಕುತ್ತಿದ್ದಂತೆ ರ‍್ಯಾಲಿಯನ್ನು ನಿಲ್ಲಿಸಲಾಗಿದೆ.
ಮೃತ ಪತ್ರಕರ್ತೆಯನ್ನು ಸ್ಥಳೀಯ ಸುದ್ದಿ ಚಾನೆಲ್ ಫೈವ್‌ನ ವರದಿಗಾರ್ತಿ ಸದಾಫ್ ನಯೀಮ್ ಎಂದು ಗುರುತಿಸಲಾಗಿದೆ. ಇಮ್ರಾನ್ ಖಾನ್ ಅವರ ರ‍್ಯಾಲಿ ಸಾಧೋಕೆ ಬಳಿ ಸಾಗುತ್ತಿದ್ದ ವೇಳೆ ವರದಿಗಾರ್ತಿ ನೆಲದ ಮೇಲೆ ಬಿದ್ದಿದ್ದಾಳೆ. ಈ ವೇಳೆ ಟ್ರಕ್ ಆಕೆಯ ಮೇಲೆ ಹರಿದಿದೆ.
ಘಟನೆಯ ಬಗ್ಗೆ ಟ್ವೀಟ್ ಮಾಡಿದ ಇಮ್ರಾನ್ ಖಾನ್, ಇಂದು ನಮ್ಮ ರ‍್ಯಾಲಿಯ ವೇಳೆ ವರದಿಗಾರ್ತಿ ಸದಾಫ್ ನಯೀಮ್ ಅವರ ಭೀಕರ ಅಪಘಾತ ನಮಗೆ ಆಘಾತ ತಂದಿದೆ ಎಂದು ಶೋಕ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸೇನೆಯನ್ನು ಬಲಪಡಿಸುವುದೇ ನಮ್ಮ ಉದ್ದೇಶ: ಇಮ್ರಾನ್ ಖಾನ್
Shocked & deeply saddened by the terrible accident that led to the death of Channel 5 reporter Sadaf Naeem during our March today. I have no words to express my sorrow. My prayers & condolences go to the family at this tragic time. We have cancelled our March for today.
ಗಾಂಧೀನಗರ: ‘ಹರ್ ಘರ್ ತಿರಂಗ’ ಯಾತ್ರೆಯ ರ‍್ಯಾಲಿ ವೇಳೆ ಗುಜರಾತ್‍ನ ಮಾಜಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ರಸ್ತೆಯಲ್ಲಿ ಬಿಡಾಡುತ್ತಿದ್ದ ಹಸುಗಳು ದಾಳಿ ನಡೆಸಿರುವ ಘಟನೆ ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ನಡೆದಿದೆ.
ಕಡಿಯಲ್ಲಿ ನಡೆದ ತ್ರಿವರ್ಣ ಧ್ವಜಾರೋಹಣದ ವೇಳೆ ಈ ಘಟನೆ ನಡೆದಿದೆ. ಕಾರನ್‍ಪುರ ತರಕಾರಿ ಮಾರುಕಟ್ಟೆಯಲ್ಲಿ ಓಡಾಡುತ್ತಿದ್ದ ಹಸು ನಿತಿನ್ ಪಟೇಲ್ ಅವರಿಗೆ ತಿವಿದಿದೆ. ಇದರಿಂದಾಗಿ ನಿತಿನ್ ಪಟೇಲ್ ಅವರ ಕಾಲಿಗೆ ಗಾಯವಾಗಿದ್ದು, ನಂತರ ಅವರನ್ನು ಸ್ಥಳೀಯರ ನೆರವಿನಿಂದ ತಕ್ಷಣ ಭಾಗ್ಯೋದಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ಇದನ್ನೂ ಓದಿ: ಎಣ್ಣೆ ಏಟಲ್ಲಿ ರೆಸ್ಟೋರೆಂಟ್‍ನಲ್ಲಿ ರಂಪಾಟ – ಗಗನಸಖಿ ಸೇರಿ ಮೂವರು ಅರೆಸ್ಟ್
ಚಿಕಿತ್ಸೆ ನಂತರ ನಿತಿನ್ ಪಟೇಲ್ ಅವರು ಅಹಮದಾಬಾದ್‍ನಲ್ಲಿರುವ ತಮ್ಮ ನಿವಾಸಕ್ಕೆ ತೆರಳಲಿದ್ದಾರೆ. ಇದೀಗ ನಿತಿನ್ ಪಟೇಲ್ ಅವರು ವೀಲ್ ಚೇರ್ ಮೇಲೆ ಕುಳಿತುಕೊಂಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಜೈಲಿನ ಕೈದಿಗೆ ಚಿಕನ್ ಪೀಸ್‍ನಲ್ಲಿ ಗಾಂಜಾ ಸಾಗಾಟ- ಪೊಲೀಸರಿಂದ ಜಪ್ತಿ
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ನೇ ವರ್ಷದ ಸಂಭ್ರಮಕ್ಕೆ ದಿನಗಣನೆ ಶುರುವಾಗಿದೆ. ಆಗಸ್ಟ್ 15ಕ್ಕೆ ಭಾರತಕ್ಕೆ ಬ್ರಿಟಿಷರಿಂದ ಸ್ವಾತಂತ್ರ‍್ಯ ಸಿಕ್ಕಿ 75 ವರ್ಷಗಳು ತುಂಬುತ್ತಿದೆ. ಈ ಅಮೃತ ಸ್ವಾತಂತ್ರ‍್ಯ ಉತ್ಸವವನ್ನು ಮತ್ತಷ್ಟು ಸಂಭ್ರಮದಿಂದ ಆಚರಣೆ ಮಾಡಲು ಎಲ್ಲರೂ ಸಿದ್ಧರಾಗುತ್ತಿದ್ದಾರೆ.
ಫ್ರೀಡಂ ಮಾರ್ಚ್ ಪ್ರಯುಕ್ತ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 75 ಕಿ.ಮೀ ನಡಿಗೆ ಮಾಡುವ ಕಾರ್ಯಕ್ರಮಕ್ಕೆ ಕೆಪಿಸಿಸಿ ಕರೆ ನೀಡಿದ್ದು, ಅದರ ಪ್ರಯುಕ್ತ ಇಂದು ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಗೋವಿಂದಪುರ ವಾರ್ಡ್ನ ಕಾಂಗ್ರೆಸ್ ಕಾರ್ಯಕರ್ತರು ರ‍್ಯಾಲಿಗೆ ಚಾಲನೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸೈಯದ್ ಆಲಿ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಗೋವಿಂದಪುರ ವಾರ್ಡ್‌ನಲ್ಲಿ 9 ಕಿ.ಮೀ ಫ್ರೀಡಂ ಮಾರ್ಚ್ ಮಾಡಿದರು. 75 ಮೀ. ಉದ್ದದ ತ್ರಿವರ್ಣ ಧ್ವಜವನ್ನು ಇಡೀ ವಾರ್ಡ್‌ನಲ್ಲಿ ಪ್ರದರ್ಶನ ಮಾಡಿದ್ದು ವಿಶೇಷವಾಗಿತ್ತು. 75 ಮೀ. ಉದ್ದದ ತ್ರಿವರ್ಣ ಧ್ವಜವನ್ನು 500 ಜನ ಹಿಡಿದುಕೊಂಡು ನಡಿಗೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಪ್ರಧಾನಿ ಬಂದಾಗ ಮಾತ್ರ ರಸ್ತೆ ಮಾಡಿಸ್ತೀರಾ; ನಮ್ಮ ಮಕ್ಕಳು ಒಳ್ಳೆ ರಸ್ತೆಯಲ್ಲಿ ಓಡಾಡಬಾರದಾ – ಪ್ರಕಾಶ್ ರಾಜ್ ಪ್ರಶ್ನೆ
Live Tv
[brid partner=56869869 player=32851 video=960834 autoplay=true]
ತಿರುವನಂತಪುರಂ: ಕೇರಳದ ಅಲಪ್ಪುಳದಲ್ಲಿ `ಗಣರಾಜ್ಯವನ್ನು ರಕ್ಷಿಸಿ’ ಎಂಬ ಘೋಷ ವಾಕ್ಯದಡಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸಂಘಟನೆಯಿಂದ ಈಚೆಗೆ ನಡೆದ ರ‍್ಯಾಲಿಯಲ್ಲಿ ಬಾಲಕನೊಬ್ಬ ಹಿಂದೂ ಹಾಗೂ ಕ್ರಿಶ್ಚಿಯನ್ನರ ವಿರುದ್ಧ ಘೋಷಣೆ ಕೂಗಿರುವ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ.
ವೀಡಿಯೋನಲ್ಲಿ ವ್ಯಕ್ತಿಯೊಬ್ಬರ ಹೆಗಲ ಮೇಲೆ ಕುಳಿತಿರುವ ಹುಡುಗ, ಅಕ್ಕಿಯನ್ನು ಸಿದ್ಧವಾಗಿಡಿ, ಯಮ ನಿಮ್ಮ ಮನೆಗೆ ಬರ್ತಾನೆ, ನಾವು ಗೌರವಯುತವಾಗಿ ಬದುಕಿದರೆ ನಮ್ಮ ಜಾಗದಲ್ಲಿ ಬದುಕಬಹುದು. ಇಲ್ಲದಿದ್ದರೆ ಏನಾಗುತ್ತದೆ ಎನ್ನುವುದು ನಮಗೆ ಗೊತ್ತಿಲ್ಲ ಎಂದೂ ಘೋಷಣೆ ಕೂಗಿದ್ದಾನೆ. ಇದನ್ನೂ ಓದಿ: ದಲಿತ ಯುವತಿಯ ಮೇಲೆ ಗ್ಯಾಂಗ್ ರೇಪ್ – ಡಿಎಂಕೆ ಯುವ ನಾಯಕ ಅರೆಸ್ಟ್
ಈ ಕುರಿತು ಪ್ರತಿಕ್ರಿಯಿಸಿರುವ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ, ಇಂತಹ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವುದು ಬಾಲಾಪರಾಧಿ ಕಾಯ್ದೆಯ ಅನ್ವಯ ಶಿಕ್ಷಾರ್ಹವಾಗಿದೆ. ನಾವು ಎಫ್‌ಐಆರ್ ದಾಖಲಿಸಲು ಸಂಬಂಧಿಸಿದ ಜಿಲ್ಲೆಯ ಅಧಿಕಾರಿಗಳಿಗೆ ಪತ್ರ ಬರೆಯುತ್ತೇವೆ. ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇವೆ ಎಂದಿದ್ದಾರೆ.
ಸಾಂದರ್ಭಿಕ ಚಿತ್ರ
ಪಿಎಫ್‌ಐ ವಕ್ತಾರ ರೌಫ್ ಪಟ್ಟಾಂಬಿ ಸಹ ಈ ಬಗ್ಗೆ ಮಾತನಾಡಿದ್ದು, ಸಂಘಟನೆಯು ಆಯೋಜಿಸಿದ್ದ ಸಮಾವೇಶದಲ್ಲಿ ಘೋಷಣೆ ಕೂಗಿಲ್ಲ. ಅದಕ್ಕೂ ಮುನ್ನ ಸಾವಿರಾರು ಜನರು ಭಾಗವಹಿಸಿದ್ದ ರ‍್ಯಾಲಿಯಲ್ಲಿ ಘೋಷಣೆ ಕೂಗಿರಬಹುದು. ಆದರೆ ಹಿಂದೂಗಳ ವಿರುದ್ಧ ಘೋಷಣೆ ಕೂಗಿಲ್ಲ, ಹಿಂದುತ್ವ ವಿರೋಧಿ ಹಾಗೂ ಫ್ಯಾಸಿಸ್ಟ್ಗಳ ವಿರುದ್ಧ ಕೂಗಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಲವು ಐಫೋನ್‌ಗಳಲ್ಲಿ ಸ್ಥಗಿತವಾಗಲಿದೆ ವಾಟ್ಸಪ್
ರ‍್ಯಾಲಿಯಲ್ಲಿ ಅನೇಕರು ಹಿಂದುತ್ವ ಭಯೋತ್ಪಾದನೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಹಾಗೆಯೇ ಈ ಹುಡುಗನೂ ಘೋಷಣೆ ಕುಗಿದ್ದಾನೆ. ಹೊರತಾಗಿ ಹುಡುಗನ ಕೆಲ ಘೋಷಣೆಗಾಗಿ ನಾವು ವಿಷಾದಿಸುತ್ತೇವೆ. ಈ ಬಗ್ಗೆ ಪರಿಶೀಲಿಸುತ್ತೇವೆ ಎಂದು ತಿಳಿಸಿದ್ದಾರೆ. ಅಲಪ್ಪುಳ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.