Tag: rally

  • ಚುನಾವಣೆ ವಿಜಯ ಸಂಭ್ರಮದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – 62 ಮಂದಿ ವಿರುದ್ಧ ಪ್ರಕರಣ

    ಚುನಾವಣೆ ವಿಜಯ ಸಂಭ್ರಮದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ – 62 ಮಂದಿ ವಿರುದ್ಧ ಪ್ರಕರಣ

    ರಾಂಚಿ: ಜಾರ್ಖಂಡ್‌ನ ಹಜಾರಿಬಾದ್ ಜಿಲ್ಲೆಯಲ್ಲಿ ಪಂಚಾಯತ್ ಚುನಾವಣಾ ವಿಜಯದ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವ ಘಟನೆ ನಡೆದಿದೆ. ಇದರ ಆರೋಪದ ಮೇಲೆ 62 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಬಜಾರ್ ಸಮಿತಿ ಹೊರಗಡೆ ನಡೆದ ಮೆರವಣಿಗೆ ವೀಡಿಯೋದಲ್ಲಿ ಜನರ ಗುಂಪು ಪಾಕಿಸ್ತಾನದ ಪರ ಘೋಷಣೆ ಕೂಗಿರುವುದು ಕಂಡುಬಂದಿದೆ. ತಕ್ಷಣವೇ ಪೊಲೀಸರು ಎಚ್ಚರಗೊಂಡು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಲ್ಲಿಯವರೆಗೆ ಯಾವ ಆರೋಪಿಯನ್ನೂ ಬಂಧಿಸಲಾಗಿಲ್ಲ. ವೀಡಿಯೋ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಹಜಾರಿಬಾದ್ ಪೊಲೀಸ್ ಅಧೀಕ್ಷಕ(ಎಸ್‌ಪಿ) ಮನೋಜ್ ರತನ್ ಚೋಥೆ ತಿಳಿಸಿದ್ದಾರೆ. ಇದನ್ನೂ ಓದಿ: ಅಂಬೇಡ್ಕರ್ ಭಾವಚಿತ್ರವಿರುವ ಫ್ಲೆಕ್ಸ್ ಹರಿದು ಅಪಮಾನ

    police (1)

    ವೀಡಿಯೋ ಹಿಂದಿನ ಸತ್ಯವನ್ನು ಕಂಡುಹಿಡಿಯಲು ನಮ್ಮ ತಂಡ ಕಾರ್ಯನಿರ್ವಹಿಸುತ್ತಿದೆ. ಘಟನೆಯ ಅಸಲಿಯತ್ತು ಏನೆಂದು ತಿಳಿದು ಬಂದರೆ, ಅದರಲ್ಲಿ ಭಾಗಿಯಾದ ಪ್ರತಿಯೊಬ್ಬರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ವಿವಾದ – ಸದ್ಯಕ್ಕಿಲ್ಲ ಉತ್ಖನನ

    ಇತ್ತೀಚೆಗೆ ಪಂಚಾಯತ್ ಚುನಾವಣೆಯಲ್ಲಿ ಗೆದ್ದಿದ್ದ ಸ್ಥಳೀಯ ನಾಯಕಿ ಅಮಿನಾ ಖಾತೂನ್ ಬೆಂಬಲಿಗರು ಮೆರವಣಿಗೆ ನಡೆಸಿದ್ದರು. ಇದೇ ಮೆರವಣಿಗೆಯಲ್ಲಿ ಘಟನೆ ನಡೆದಿದ್ದು, ಒಟ್ಟು 62 ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅವರಲ್ಲಿ 12 ಆರೋಪಿಗಳನ್ನು ಗುರುತಿಸಲಾಗಿದ್ದು, 50 ಆರೋಪಿಗಳು ಅಪರಿಚಿತರಾಗಿದ್ದಾರೆ.

  • ಅಗೌರವ ತೋರಿದ ಅಧಿಕಾರಿಗಳಿಗೆ ನಡುರಸ್ತೆಯಲ್ಲೇ ತರಾಟೆ ತೆಗೆದುಕೊಂಡ ಮೇಯರ್

    ಅಗೌರವ ತೋರಿದ ಅಧಿಕಾರಿಗಳಿಗೆ ನಡುರಸ್ತೆಯಲ್ಲೇ ತರಾಟೆ ತೆಗೆದುಕೊಂಡ ಮೇಯರ್

    ಮೈಸೂರು: ಸಮಯಕ್ಕೆ ಸರಿಯಾಗಿ ಕಾರ್ಯಕ್ರಮಕ್ಕೆ ಬಂದ ಮೈಸೂರು ಮೇಯರ್‌ಗೆ, ಕಾರ್ಯಕ್ರಮವನ್ನು ನೀವು ಬರುವುದಕ್ಕೂ ಮುಂಚಿತವಾಗಿ ಮುಗಿಸಿದ್ದೇವೆ ಎಂದು ಆಯೋಜಕರು ತಿಳಿಸಿದ್ದಾರೆ. ಈ ಹಿನ್ನೆಲೆ ಕಾರ್ಯಕ್ರಮ ಆಯೋಜಕರನ್ನು ಮೇಯರ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

    ಅಗ್ನಿಶಾಮಕ ಸೇವಾ ಸಪ್ತಾಹ ಅಂಗವಾಗಿ ಸೈಕಲ್ ಹಾಗೂ ಬೈಕ್ ರ‍್ಯಾಲಿಯಲ್ಲಿ ಮೈಸೂರು ಮೇಯರ್‍ಗೆ ಅಗೌರವ ಸೂಚಿಸಿಲಾಗಿದೆ. ಹೀಗಾಗಿ ಮೇಯರ್ ಸುನಂದಾ ಪಾಲನೇತ್ರ ಅಗ್ನಿಶಾಮಕ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ನನ್ನನ್ನು ಪದಚ್ಯುತಿಗೊಳಿಸಲು ವಿದೇಶಿ ಸಂಚು ನಡೆದಿದೆ: ಇಮ್ರಾನ್ ಆರೋಪ

    ನಡೆದಿದ್ದೇನು?
    ಜಾಥಾ ಕಾರ್ಯಕ್ರಮ ಬೆಳಗ್ಗೆ 7ಕ್ಕೆ ನಿಗದಿಯಾಗಿತ್ತು. ಮೇಯರ್‍ಗೆ ಕರೆ ಮಾಡಿದ ಆಯೋಜಕರು 7.30ಕ್ಕೆ ಕಾರ್ಯಕ್ರಮ ಆರಂಭವಾಗುತ್ತೆ. ಅರ್ಧಗಂಟೆ ತಡವಾಗಿ ಬನ್ನಿ ಎಂದು ಹೇಳಿದ್ದಾರೆ. ಮೇಯರ್ ಸರಿಯಾಗಿ 7.30ಕ್ಕೆ ಕಾರ್ಯಕ್ರಮದ ಸ್ಥಳಕ್ಕೆ ಬಂದಾಗ ಶಾಕ್ ಆಗಿದ್ದಾರೆ. ಏಕೆಂದರೆ ಜಾಥಾ ಆಗಲೇ ಮುಂದೆ ಸಾಗಿತ್ತು. ಇದರಿಂದ ಸಿಡಿಮಿಡಿಗೊಂಡ ಮೇಯರ್ ಅಧಿಕಾರಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡರು.

  • ಮಹಿಳೆಯರಿಗೆ 33% ಸರ್ಕಾರಿ ಉದ್ಯೋಗ, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯ ನಿರ್ಮಾಣ: ಅಮಿತ್ ಶಾ

    ಮಹಿಳೆಯರಿಗೆ 33% ಸರ್ಕಾರಿ ಉದ್ಯೋಗ, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯ ನಿರ್ಮಾಣ: ಅಮಿತ್ ಶಾ

    ಅಗರ್ತಲಾ: ತ್ರಿಪುರಾದಲ್ಲಿ ಮಹಿಳೆಯರಿಗಾಗಿ 33% ಸರ್ಕಾರಿ ಉದ್ಯೋಗಗಳು, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯವನ್ನು ನಿರ್ಮಿಸುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭರವಸೆ ನೀಡಿದರು.

    ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ ಅವರು ತ್ರಿಪುರಾದಲ್ಲಿ ಶೇ. 33ರಷ್ಟು ಸರ್ಕಾರಿ ಉದ್ಯೋಗಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಘೋಷಿಸಿದರು. ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ರೈತರ ಸಾಲಮನ್ನಾ ಅಸಾಧ್ಯ: ಎಸ್.ಟಿ. ಸೋಮಶೇಖರ್

    ಈಶಾನ್ಯ ರಾಜ್ಯದಲ್ಲಿ ಬಿಜೆಪಿ-ಐಪಿಎಫ್‍ಟಿ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವದ ಅಂಗವಾಗಿ ಅಗರ್ತಲಾದಲ್ಲಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಪ್ಲಬ್ ದೇಬ್ ಅವರ ಆಡಳಿತವು ರಾಜಕೀಯ ಹಿಂಸಾಚಾರಕ್ಕೆ ಪೂರ್ಣ ವಿರಾಮ ಹಾಕಿದೆ. ನಾವು 200 ಕೋಟಿ ರೂಪಾಯಿ ವೆಚ್ಚದಲ್ಲಿ ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯವನ್ನು ಸ್ಥಾಪಿಸುತ್ತೇವೆ. ರಾಜ್ಯದ ಯುವಜನರಿಗಾಗಿ ಕೇವಲ 4 ವರ್ಷಗಳಲ್ಲಿ ಪ್ರತಿ ವ್ಯಕ್ತಿಯ ಆದಾಯವು 13% ರಿಂದ 1.30 ಲಕ್ಷಕ್ಕೆ ಏರಿದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಪ್ರಸ್ತುತ ನಮ್ಮ ಸರ್ಕಾರದ ಅಡಿಯಲ್ಲಿ ರೈತರ ಆದಾಯವು ದ್ವಿಗುಣಗೊಂಡಿದೆ. ತಲಾ ಆದಾಯವು ರೂ 1.3 ಲಕ್ಷಕ್ಕೆ ಏರಿದೆ. ರೈಲಿನ ಮೂಲಕ ಅಗರ್ತಲಾವನ್ನು ದೇಶದ ಇತರ ಭಾಗಗಳೊಂದಿಗೆ ಸಂಪರ್ಕಿಸಲಾಗಿದೆ. ಒಟ್ಟು 542 ಕಿಮೀ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ತ್ರಿಪುರಾದಲ್ಲಿ ನಡೆಯುವ ಘೋರ ಅಪರಾಧಗಳಲ್ಲಿ ಶೇ. 30ರಷ್ಟು ಇಳಿಕೆಯಾಗಿದೆ. ಶಿಕ್ಷೆಯ ಪ್ರಮಾಣವು ಶೇ.5 ರಿಂದ ಶೇ.53ಕ್ಕೆ ಏರಿದೆ ಎಂದು ತಿಳಿಸಿದರು.

    ಹಿಂದಿನ ಪ್ರಣಾಳಿಕೆಯಲ್ಲಿ ನೀಡಿದ ಎಲ್ಲಾ ಭರವಸೆಗಳನ್ನು ಆಡಳಿತ ವ್ಯವಸ್ಥೆಯು ಈಡೇರಿಸುತ್ತದೆ. ಮುಂದಿನ ವರ್ಷದ ಆರಂಭದಲ್ಲಿ ಈಶಾನ್ಯ ರಾಜ್ಯ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಹೀಗಾಗಿ ಮತ ಕೇಳಲು ತ್ರಿಪುರಾಕ್ಕೆ ಮತ್ತೆ ಹಿಂದಿರುಗುತ್ತೇನೆ ಎಂದರು.

  • ರೋಡ್‌ ಶೋ ವೇಳೆ ಮಟ್ಕಾ ಚಾಯ್ ಸವಿದ ಪ್ರಧಾನಿ ಮೋದಿ

    ರೋಡ್‌ ಶೋ ವೇಳೆ ಮಟ್ಕಾ ಚಾಯ್ ಸವಿದ ಪ್ರಧಾನಿ ಮೋದಿ

    ಲಕ್ನೋ: ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra modi) ಅವರು ಮಟ್ಕಾ ಚಾಯ್ (Matka Chai) ಸವಿದಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

    ಉತ್ತರ ಪ್ರದೇಶದಲ್ಲಿ ಮಾರ್ಚ್ 7 ರಂದು ಏಳನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂಸದೀಯ ಕ್ಷೇತ್ರ ವಾರಣಾಸಿಯ ವಿವಿಧ ಪ್ರದೇಶಗಳಲ್ಲಿ ಬೃಹತ್ ರೋಡ್‍ಶೋ ನಡೆಸಿದ್ದಾರೆ. ನಗರದ ಪ್ರಸಿದ್ಧ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ನಂತರ ಮೋದಿ ಅವರು ನಗರದ ಸ್ಥಳೀಯ ಟೀ ಸ್ಟಾಲ್‍ವೊಂದರಲ್ಲಿ ಮಟ್ಕಾ ಚಾಯ್ ಸವಿದಿದ್ದಾರೆ. ಕುಡಿಕೆಯಲ್ಲಿ ಚಹಾವನ್ನು ಮೋದಿ ಜೊತೆಗೆ ಅನೇಕ ನಾಯಕರು ಸಹ  ಸವಿದಿದ್ದಾರೆ.

    ಮೋದಿ ಅವರು ಸ್ಥಳೀಯ ಟೀ ಸ್ಟಾಲ್‍ನಲ್ಲಿ (tea stall) ಕುಳಿತು ಜನರೊಂದಿಗೆ ಸಂವಹನ ನಡೆಸಿದ್ದಾರೆ. ಚಹಾವನ್ನು ಸವಿಯುತ್ತಾ ಆನಂದಿಸುತ್ತಿರುವುದನ್ನು ನಾವು ವೀಡಿಯೋದಲ್ಲಿ ನೋಡಬಹುದಾಗಿದೆ. ಮೋದಿ ಮಾರ್ಚ್ 4, 5 ರಂದು ವಾರಣಾಸಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಈಗಾಗಲೇ ನಡೆದಿರುವ ರೋಡ್‍ಶೋ ಉದ್ದಕ್ಕೂ ಜನಸಮೂಹ ಮೋದಿಯನ್ನು ಹಿಂಬಾಲಿಸಿತು ಮತ್ತು ಅನೇಕ ಜನರು ಬಾಲ್ಕನಿಗಳು ಮತ್ತು ಮೇಲ್ಛಾವಣಿಗಳ ಮೇಲೆ ನಿಂತು ಅವರತ್ತ ಕೈ ಬೀಸುತ್ತಾ ರೋಡ್‌ ಶೋನಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಒಂದೇ ಹಳಿಯಲ್ಲಿ ಎರಡು ರೈಲು – ಅಪಾಯದಿಂದ ಪಾರಾಗುವ ಹೊಸ ತಂತ್ರಜ್ಞಾನ ಪರೀಕ್ಷೆ ಯಶಸ್ವಿ

  • ಸೇನೆಯಲ್ಲಿ ನೇಮಕಾತಿ ಆರಂಭಿಸಿ ಎಂದು ಕೂಗಿ ರಕ್ಷಣಾ ಸಚಿವರ ಭಾಷಣಕ್ಕೆ ಯುವಕರು ಅಡ್ಡಿ

    ಸೇನೆಯಲ್ಲಿ ನೇಮಕಾತಿ ಆರಂಭಿಸಿ ಎಂದು ಕೂಗಿ ರಕ್ಷಣಾ ಸಚಿವರ ಭಾಷಣಕ್ಕೆ ಯುವಕರು ಅಡ್ಡಿ

    ಲಕ್ನೋ: ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆಯಲ್ಲಿ ಸಮಾರಂಭವೊಂದರಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಭಾಷಣ ಮಾಡುವಾಗ, ʻಸೇನೆಯಲ್ಲಿ ಉದ್ಯೋಗಾವಕಾಶ ಕೊಡಿʼ ಎಂದು ಯುವಕರ ಗುಂಪೊಂದು ಕೂಗಿ ಭಾಷಣಕ್ಕೆ ಅಡ್ಡಿಪಡಿಸಿರುವ ಪ್ರಸಂಗ ನಡೆದಿದೆ.

    ಗೊಂಡಾ ಜಿಲ್ಲೆಯಲ್ಲಿ ರ‍್ಯಾಲಿ ಆಯೋಜಿಸಲಾಗಿತ್ತು. ಭಾಷಣಕ್ಕೆ ವೇದಿಕೆ ಸಿದ್ಧವಾಗಿತ್ತು. ರಾಜನಾಥ್‌ ಸಿಂಗ್‌ ಅವರು ಮಾತನಾಡಲು ಆರಂಭಿಸಿದಾಗ, ಯುವಕರ ಗುಂಪು ಘೋಷಣೆ ಕೂಗಿ ಭಾಷಣಕ್ಕೆ ಅಡ್ಡಿಪಡಿಸಿದ್ದಾರೆ. ಸೇನೆಯಲ್ಲಿ ನೇಮಕ ಮಾಡಿಕೊಳ್ಳಿ ಎಂದು ಯುವಕ ಕೂಗಿ ಕೇಳಿದ್ದಾರೆ.  ಇದನ್ನೂ ಓದಿ: ಉಕ್ರೇನ್‍ನ ಸಮುದ್ರ, ಭೂ-ಆಧಾರಿತ ಪ್ರದೇಶದ ಮೇಲೆ ರಷ್ಯಾ ದಾಳಿ!

    ʼಸೇನಾ ಭಾರತಿ ಚಲು ಕರೋ (ಸೇನೆಯಲ್ಲಿ ನೇಮಕಾತಿ ಆರಂಭಿಸಿ), ಹಮಾರಿ ಮನ್‌ಜೆ ಪೂರಿ ಕರೋ (ನಮ್ಮ ಬೇಡಿಕೆಯನ್ನು ಈಡೇರಿಸಿ) ಎಂದು ಯುವಕರು ಘೋಷಣೆ ಮೂಲಕ ಬೇಡಿಕೆ ಇಟ್ಟಿದ್ದಾರೆ. ಯುವಕರ ಬೇಡಿಕೆಯನ್ನು ಅರಿತ ರಕ್ಷಣಾ ಸಚಿವರು, ಚಿಂತಿಸಬೇಡಿ.. ಶೀಘ್ರವೇ ಕ್ರಮವಹಿಸುತ್ತೇವೆ ಎಂದು ಭರವಸೆಯ ನುಡಿಯನ್ನಾಡಿ, ಯುವಕರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದ್ದಾರೆ.

    ನಿಮ್ಮ ಚಿಂತೆ ನಮಗೂ ಇದೆ. ಕೊರೊನಾ ಸಾಂಕ್ರಾಮಿಕ ಕಾರಣದಿಂದಾಗಿ ಕೆಲವು ತೊಂದರೆಗಳಿವೆ ಎಂದು ಯುವಕರಿಗೆ ಮನವರಿಕೆ ಮಾಡಲು ಸಚಿವರು ಯತ್ನಿಸಿದ್ದಾರೆ. ಸಚಿವರಿಂದ ಈ ಮಾತು ಬರುತ್ತಿದ್ದಂತೆ, ಯುವಕರೆಲ್ಲರೂ ಭಾರತ್‌ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್

    ಬಿಜೆಪಿ ಕಳೆದ ವಾರ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದ ಪ್ರತಿ ಕುಟುಂಬದ ಕನಿಷ್ಠ ಒಬ್ಬ ಸದಸ್ಯನಿಗೆ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಅವಕಾಶಗಳ ಭರವಸೆ ನೀಡಿದೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಈಗಾಗಲೇ ಆರಂಭವಾಗಿದ್ದು, ವಿವಿಧ ಹಂತಗಳಲ್ಲಿ ಮತದಾನ ನಡೆಯಲಿದೆ. ಮಾ.10 ರಂದು ಫಲಿತಾಂಶ ಪ್ರಕಟವಾಗಲಿದೆ.

  • ಗೋವಾದಲ್ಲಿ ಇಂದು ಮೆಗಾ ರ್‍ಯಾಲಿ ನಡೆಸಲಿರುವ ಮೋದಿ

    ಗೋವಾದಲ್ಲಿ ಇಂದು ಮೆಗಾ ರ್‍ಯಾಲಿ ನಡೆಸಲಿರುವ ಮೋದಿ

    ಪಣಜಿ: ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಪುಸಾದಲ್ಲಿ ಬೃಹತ್ ರ್‍ಯಾಲಿ ನಡೆಸಲಿದ್ದಾರೆ.

    ಗೋವಾದಲ್ಲಿ ಚುನಾವಣಾ ಪ್ರಚಾರ ಮುಗಿಯುವ ಒಂದು ದಿನದ ಮುನ್ನ ಮೋದಿ ಅವರು ಸಂಜೆ 5 ಗಂಟೆಗೆ ಬೋಡ್ಗೇಶ್ವರ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಈಗಾಗಲೇ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. ಇದನ್ನೂ ಓದಿ: ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

    ಸುಂದರವಾದ ದೀಪಾಲಂಕಾರ ಮತ್ತು ಬೃಹತ್ ಪೆಂಡಾಲ್ ಜನರಿಗೆ ಪ್ರಮುಖ ಆಕರ್ಷಣೆಯಾಗಲಿದೆ ಮತ್ತು ದೊಡ್ಡ ಸ್ವಾಗತ ಫಲಕಗಳನ್ನು ನಿರ್ಮಿಸಲಾಗಿದೆ. ಮೋದಿ ಅವರು ನಡೆಸಲಿರುವ ರ್‍ಯಾಲಿಯು ಸಾರ್ವಜನಿಕರ, ರಾಷ್ಟ್ರೀಯ ಮತ್ತು ರಾಜ್ಯ ಮಾಧ್ಯಮಗಳ ಗಮನ ಸೆಳೆಯಲಿದೆ. ಇದನ್ನೂ ಓದಿ: ನಿಮ್ಮ ಮತವೇ ಉಜ್ವಲ ಭವಿಷ್ಯಕ್ಕೆ ಆಧಾರ: ಯುಪಿ ಮತದಾರರಿಗೆ ಅಮಿತ್ ಶಾ ಕರೆ

    ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಬದ್ಧವಾಗಿ ಪಕ್ಷವು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಬಿಜೆಪಿ ತಿಳಿಸಿದೆ. ಕೋವಿಡ್-19 ನಿಯಮಗಳ ಅನುಸಾರವಾಗಿ ಕ್ರಮ ಕೈಗೊಳ್ಳಲಾಗಿದ್ದು, ಕೋವಿಡ್-19 ಪ್ರೋಟೋಕಾಲ್‍ಗಳನ್ನು ಅನುಸರಿಸಲು ನಾವು ಪ್ರತಿಯೊಬ್ಬರನ್ನು ಒತ್ತಾಯಿಸುತ್ತೇವೆ ಎಂದು ತಿಳಿಸಲಾಗಿದೆ. ಗೋವಾ ವಿಧಾನಸಭಾ ಚುನಾವಣೆ ಫೆಬ್ರವರಿ 14 ರಂದು ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

  • ಪಂಜಾಬ್‍ನಲ್ಲಿ ಮೋದಿಗೆ ಆದ ಅವಮಾನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

    ಪಂಜಾಬ್‍ನಲ್ಲಿ ಮೋದಿಗೆ ಆದ ಅವಮಾನ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

    ಧಾರವಾಡ: ಪಂಜಾಬ್‍ನಲ್ಲಿ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರಿಗಾದ ಅವಮಾನ ಖಂಡಿಸಿ ನಗರದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ವತಿಯಿಂದ ಪ್ರತಿಭಟನೆ ನಡೆಸಿದ್ದಾರೆ.

    ನಗರದ ಸುಭಾಸ ರಸ್ತೆಯ ಬಿಜೆಪಿ ಕಚೇರಿಯಿಂದ ರಿಗಲ್ ವೃತದ ಕಾಂಗ್ರೆಸ್ ಕಚೇರಿವರೆಗೆ ರ್ಯಾಲಿ ನಡೆಸಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದ್ದಾರೆ. ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದು, ಪಂಜಾಬ್ ಸಿಎಂ ಭಾವಚಿತ್ರ ಸುಟ್ಟು ರ್ಯಾಲಿ ಮಾಡಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನನ್ನ ಹೆಸರು Kovid, ಆದ್ರೆ ನಾನು ವೈರಸ್ ಅಲ್ಲ: ಬೆಂಗಳೂರು ಉದ್ಯಮಿ

    ಪ್ರತಿಭಟನೆ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಮಾಸ್ಕ್ ಇಲ್ಲದೇ ಬಂದಿದ್ದು, ಇನ್ನೂ ಸಾಮಾಜಿಕ ಅಂತರ ಕೂಡಾ ಇಲ್ಲದೇ ಪ್ರತಿಭಟನೆ ನಡೆಸಿರುವುದು ಕಂಡುಬಂತು. ಪ್ರತಿಭಟನೆ ವೇಳೆ ಕಾರ್ಯಕರ್ತರು ಟಯರ್ ಸುಟ್ಟು ಆಕ್ರೋಶ ವ್ಯಕ್ತಪಡಿಸುತ್ತಿದ್ದ ಸಂದರ್ಭದಲ್ಲಿ ನಗರದ ಇನ್ಸ್ ಪೆಕ್ಟರ್‍ರೊಬ್ಬರು ಟಯರ್‍ಗೆ ನೀರು ಹಾಕಿದ್ದು, ಬಿಜೆಪಿ ಮಾಜಿ ಶಾಸಕಿ ಸೀಮಾ ಮಸೂತಿ ಇನ್ಸ್ ಪೆಕ್ಟರ್‍ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ಕಾಂಗ್ರೆಸ್‍ಗೆ ಬೆಂಬಲ ಕೊಡುತ್ತೀರಾ ಎಂದು ಅವಾಜ್ ಹಾಕಿದ್ದಾರೆ. ಇದನ್ನೂ ಓದಿ: ವಯೋಮಿತಿ ಏರಿಕೆ ಭೀತಿ- ಮುಸ್ಲಿಮರು ತರಾತುರಿ ಲಗ್ನ

    ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪಂಜಾಬ್‍ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದ ವೇಳೆ ಭದ್ರತಾ ಲೋಪದಿಂದ ಫೈಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಈ ಘಟನೆಗೆ ಪಂಜಾಬ್ ಪೊಲೀಸ್ ಇಲಾಖೆ ನೇರ ಕಾರಣ ಎಂದು ಕೇಂದ್ರ ಗೃಹ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಆರೋಪಿಸಿದ್ದರು.

  • ಕೊರೊನಾ ನಿಯಮ ಪಾಲಿಸದ ರ‍್ಯಾಲಿಗಳನ್ನು ನಿಷೇಧಿಸ್ತೇವೆ: ಚುನಾವಣಾ ಆಯೋಗ

    ಕೊರೊನಾ ನಿಯಮ ಪಾಲಿಸದ ರ‍್ಯಾಲಿಗಳನ್ನು ನಿಷೇಧಿಸ್ತೇವೆ: ಚುನಾವಣಾ ಆಯೋಗ

    ನವದೆಹಲಿ: ಕೊರೊನಾ ನಿಯಮ ಉಲ್ಲಂಘಿಸಿದರೆ ಸಾರ್ವಜನಿಕ ಸಭೆ, ರ‍್ಯಾಲಿಗಳನ್ನು ನಿಷೇಧಿಸುವುದಕ್ಕೆ ಹಿಂದೇಟು ಹಾಕುವುದಿಲ್ಲ ಎಂದು ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

    ದೇಶದೆಲ್ಲೆಡೆ ಹೆಚ್ಚಾಗುತ್ತಿರುವ ಕೊರೊನಾ ಸೋಂಕಿನ ಮಧ್ಯೆ, ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೆ ಪ್ರಮುಖ ಪ್ರಚಾರಕರು, ರಾಜಕಾರಣಿಗಳು ಚುನಾವಣಾ ರ‍್ಯಾಲಿಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

    ಕೊರೊನಾ ನಿಯಮ ಉಲ್ಲಂಘಿಸಿ ನಡೆಯುವ ಸಾರ್ವಜನಿಕ ಸಭೆ, ರ್ಯಾಲಿಗಳನ್ನು ನಿಷೇಧಿಸುವುದಕ್ಕೆ ಹಿಂದೇಟು ಹಾಕುವುದಿಲ್ಲ, ಕೋವಿಡ್-19 ನಿಯಮ ಉಲ್ಲಂಘಿಸುವ ಅಭ್ಯರ್ಥಿಗಳು, ರಾಜಕೀಯ ನಾಯಕರು ಮತ್ತು ಪಕ್ಷಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರಾಜಕೀಯ ನಾಯಕರು, ಅಭ್ಯರ್ಥಿಗಳು ರ‍್ಯಾಲಿಗಳಲ್ಲಿ ಭಾಗವಹಿಸುವ ಜನರನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ. ನಿಯಮವನ್ನು ಗಾಳಿಗೆ ತೂರಲಾಗುತ್ತಿದೆ, ಚುನಾವಣಾ ಆಯೋಗದ ನಿಯಮಗಳನ್ನು ಧಿಕ್ಕರಿಸಲಾಗುತ್ತಿದೆ. ವೇದಿಕೆಗಳಲ್ಲಿ ಇರುವಾಗ ಮಾಸ್ಕ್ ಧರಿಸುತ್ತಿಲ್ಲ ಎಂದು ಆಯೋಗ ಪತ್ರದಲ್ಲಿ ವಿವರಿಸಿದೆ.

    ನಿನ್ನೆ ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರಕ್ಕೆ ನೊಟೀಸ್ ನೀಡಿದ್ದ ದೆಹಲಿ ಹೈಕೋರ್ಟ್ ರಾಜಕೀಯ ರ‍್ಯಾಲಿಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಬಗ್ಗೆ ಪ್ರತಿಕ್ರಿಯೆ ಕೇಳಿತ್ತು.

  • ರ‍್ಯಾಲಿ ವೇಳೆ ಸೆಲ್ಫಿಗೆಂದು ಬಂದ ಅಭಿಮಾನಿಯನ್ನು ದೂಡಿದ ಜಯಾ ಬಚ್ಚನ್

    ರ‍್ಯಾಲಿ ವೇಳೆ ಸೆಲ್ಫಿಗೆಂದು ಬಂದ ಅಭಿಮಾನಿಯನ್ನು ದೂಡಿದ ಜಯಾ ಬಚ್ಚನ್

    ಕೋಲ್ಕತ್ತಾ: ಬಾಲಿವುಡ್ ನಟಿ ಕಮ್ ರಾಜಕಾರಣಿ ಜಯಾ ಬಚ್ಚನ್ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಬೆಂಬಲಿಸಿ ಶುಕ್ರವಾರ ಹೌರದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ ನೆಚ್ಚಿನ ನಟಿ ಜಯಾ ಬಚ್ಚನ್ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಬಂದ ಅಭಿಮಾನಿಯನ್ನು ದೂಡಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಮೊದಲಿನಿಂದಲೂ ಫೋಟೋ ಹಿಡಿದುಕೊಳ್ಳುವುದೆಂದರೆ ಜಯಾ ಬಚ್ಚನ್‍ಗೆ ಇಷ್ಟವಾಗುವುದಿಲ್ಲ ಎಂಬುವುದು ಎಲ್ಲರಿಗೂ ತಿಳಿದಿರುವ ವಿಚಾರವೇ. ಅದರಲ್ಲೂ ಅನುಮತಿ ಇಲ್ಲದೇ ಫೋಟೋ ಕ್ಲಿಕ್ಕಿಸಿಕೊಳ್ಳುವವರೆಂದರೆ ಇನ್ನೂ ಇಷ್ಟವಾಗುವುದಿಲ್ಲ. ಈ ಹಿಂದೆ ಹಲವು ಪತ್ರಕರ್ತರು, ಛಾಯಾಗ್ರಹಕರು, ಅಭಿಮಾನಿಗಳ ವಿರುದ್ಧ ಇದೇ ವಿಚಾರವಾಗಿ ಕಿಡಿಕಾರಿದ್ದಾರೆ.

    ಸದ್ಯ ಇತ್ತೀಚೆಗೆ ನಡೆಸಿದ ರ‍್ಯಾಲಿ ವೇಳೆ ವ್ಯಕ್ತಿಯೋರ್ವ ಜಯಾ ಬಚ್ಚನ್ ಜೊತೆ ಫೋನ್ ಮೂಲಕ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಟ್ರೈ ಮಾಡಿದ್ದಾನೆ. ಈ ವೇಳೆ ಜಯಾ ಬಚ್ಚನ್ ವ್ಯಕ್ತಿಯ ತಲೆಯನ್ನು ತಳ್ಳಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಇದು ಅಸಭ್ಯಕರ ವರ್ತನೆ ಹಾಗೂ ಅವಮಾನಕರ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

    ಮತ್ತೆ ಕೆಲವರು ಇದೇ ರೀತಿ ಪುರುಷ ರಾಜಕಾರಣಿಗಳು ಮಹಿಳೆಯರಿಗೆ ಮಾಡಿದ್ದರೆ, ಈ ಘಟನೆ ಹೆಚ್ಚು ಸುದ್ದಿಯಾಗುತ್ತಿತ್ತು ಎಂದು ಕಮೆಂಟ್ ಮಾಡಿದ್ದಾರೆ.

  • ರಾಜಧಾನಿಯಲ್ಲಿಂದು ವಿಂಟೇಜ್ ಕಾರುಗಳ ರಾಯಲ್ ರ‍್ಯಾಲಿ

    ರಾಜಧಾನಿಯಲ್ಲಿಂದು ವಿಂಟೇಜ್ ಕಾರುಗಳ ರಾಯಲ್ ರ‍್ಯಾಲಿ

    ಬೆಂಗಳೂರು: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ರಾಜಧಾನಿಯಲ್ಲಿಂದು ವಿಂಟೇಜ್ ಕಾರ್‌ಗಳ ರಾಯಲ್ ರ‍್ಯಾಲಿ ಮಾಡಲಾಗಿದೆ.

    ಸಾರಿಗೆ ಇಲಾಖೆ ವತಿಯಿಂದ 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಸ್ತೆ ಸುರಕ್ಷತೆ – ಜೀವನದ ರಕ್ಷೆ ಎಂಬ ಧ್ಯೇಯದೊಂದಿಗೆ ಜನರಲ್ಲಿ ರಸ್ತೆ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತ್ತು.

    ಈ ರ‍್ಯಾಲಿಯಲ್ಲಿ ವಿಶೇಷವಾಗಿ ವಿಂಟೇಜ್ ಕಾರ್, ಬೈಕ್ ಹಾಗೂ ಆಟೋಗಳ ರ‍್ಯಾಲಿ ನಡೆಸಲಾಯಿತು. ಈ ವಿಶೇಷ ಕಾರ್‌ಗ ರ‍್ಯಾಲಿಗೆ ಸಾರಿಗೆ ಆಯುಕ್ತ ನರೇಂದ್ರ ಹೊಲ್ಕರ್ ಚಾಲನೆ ನೀಡಿದರು. ನಗರದ ಕಸ್ತೂರಿ ನಗರದಿಂದ ಕಸ್ತೂರಬಾ ರೋಡ್‍ವರೆಗೂ ನಡೆದ ರಾಯಲ್ ಕಾರ್‌ಗಳ ರ‍್ಯಾಲಿ ಜನರ ಗಮನ ಸೆಳೆಯಿತು.


    ಈ ರ‍್ಯಾಲಿಯಲ್ಲಿ ಡೈಂಮ್ಲರ್ ಬಿಬಿ18, ಫೋರ್ಡ್ ಎ, ಆಸ್ಟೀನ್, ಮೋರೆಸ್ , ಕ್ಯಾಡಿಲ್ಯಾಕ್, ಮರ್ಸಿಡಿಸ್, ಅಂಬಾಸಿಡರ್, ಶೆವರ್ಲೆ, ಸೇರಿದಂತೆ ಹಲವು ಕಾರ್‌ಗಳಿದ್ದವು. ಮೈಸೂರು ಮಹಾರಾಜರು ಬಳಸುತ್ತಿದ್ದ ಕಾರು ಸೇರಿದಂತೆ ಹಲವು ದೇಶಗಳಿಂದ ಆಮದು ಆಗಿದ್ದ ಕಾರ್‍ಗಳಿದ್ದವು. ಬೈಕರ್ಸ್, ಲೇಡಿ ಆಟೋ ಡ್ರೈವರ್‍‍ಗಳು ರ‍್ಯಾಲಿ ಮಾಡುವುದರ ಮೂಲಕ ಸಾರ್ವಜನಿಕರಿಗೆ ರಸ್ತೆ ನಿಯಮಗಳ ಬಗ್ಗೆ ಅರಿವು ಮೂಡಿಸಿದರು.

    ಪ್ರತಿ ಬಾರಿಯೂ ರಸ್ತೆ ಸುರಕ್ಷತಾ ಸಪ್ತಾಹ ನಡೆಯುತ್ತಿದ್ದು ಸಾರಿಗೆ ಇಲಾಖೆ ಜನರಿಗೆ ಅರಿವು ಮೂಡಿಸುತ್ತಲೇ ಇರುತ್ತದೆ. ಆದರೆ ಈ ಬಾರಿ ಸ್ವಲ್ಪ ವಿಭಿನ್ನವಾಗಿ ಮತ್ತು ವಿಶೇಷವಾಗಿ ರೋಡ್ ರೂಲ್ಸ್‍ಗಳನ್ನ ಜನರಿಗೆ ಹೇಳಿ ಕೊಡಲಾಗಿದೆ.