Tag: rally

  • ಒಂದೇ ನಿಮಿಷದಲ್ಲಿ ರ‍್ಯಾಲಿ ಮುಗಿಸಿದ್ದು ಯಾಕೆ – ಸ್ಪಷ್ಟನೆ ಕೊಟ್ಟ ಉಪೇಂದ್ರ

    ಒಂದೇ ನಿಮಿಷದಲ್ಲಿ ರ‍್ಯಾಲಿ ಮುಗಿಸಿದ್ದು ಯಾಕೆ – ಸ್ಪಷ್ಟನೆ ಕೊಟ್ಟ ಉಪೇಂದ್ರ

    ಚಿತ್ರದುರ್ಗ: ರಿಯಲ್ ಸ್ಟಾರ್ ಉಪೇಂದ್ರ ಚಿತ್ರದುರ್ಗ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿ ಟೈಲರ್ ದೇವೇಂದ್ರಪ್ಪ ಪರ ಪ್ರಚಾರ ಮಾಡಿದ್ದಾರೆ. ಈ ವೇಳೆ ಅವರು ಒಂದೇ ನಿಮಿಷದಲ್ಲಿ ರ‍್ಯಾಲಿ ಏಕೆ ಮುಗಿಯಿತು ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

    ಒಂದು ನಿಮಿಷ ರೋಡ್ ಶೋ ಮಾಡಿದ ಬಗ್ಗೆ ಮಾತನಾಡಿದ ಉಪೇಂದ್ರ, “ಬಿಸಿಲಿನ ತಾಪಕ್ಕೆ ನಾನು ಹೆದರಿಲ್ಲ. ನನಗೆ ರೋಡ್ ಶೋ ಮಾಡುವ ಅಗತ್ಯವಿಲ್ಲ. ಜನರನ್ನು ತಲುಪಲು ನಮಗೆ ರೋಡ್ ಶೋ ಬೇಕಿಲ್ಲ. ನನ್ನ ಪ್ರಜಾಕೀಯ ಪಕ್ಷದಲ್ಲಿ ರ‍್ಯಾಲಿ ಮಾಡಿ ಜನರಿಗೆ ಕಷ್ಟ ಕೊಡುವುದಿಲ್ಲ. ನಮ್ಮ ಅಭ್ಯರ್ಥಿ ಹಾಗೂ ಜೊತೆಯಲ್ಲಿ ಇರುವವರು ಉಪೇಂದ್ರ ಬರುತ್ತಾರೆ ಎಂದು ಈ ರೀತಿ ಮಾಡಿದ್ದಾರೆ. ಇಷ್ಟು ದಿನ ರಾಜಕೀಯದಲ್ಲಿ ಹೀಗೆ ನಡೆಯುತ್ತಿತ್ತು. ಇದನ್ನು ನೋಡಿ ಇಲ್ಲಿಯೂ ರೋಡ್ ಶೋ ಮಾಡಲು ಮುಂದಾಗಿದ್ದರು” ಎಂದು ತಿಳಿಸಿದರು.

    ಇಲ್ಲಿ ಮೋದಿ ಹವಾ ಇಲ್ಲ. ಪ್ರಜಾ ಹವಾ ಇದೆ. ಇಲ್ಲಿ ಪ್ರಜಾಕೀಯನೇ ಗೆಲ್ಲುವುದು. ನೀವು ಆಟೋಗೆ ವೋಟ್ ಹಾಕಿ, ಆಟೋಮ್ಯಾಟಿಕ್ ಆಗಿ ಎಲ್ಲಾ ಸರಿಯಾಗುತ್ತದೆ. ಅಭ್ಯರ್ಥಿಗಳ ಆಯ್ಕೆ, ಪ್ರಚಾರದ ಒತ್ತಡದ ಕಾರಣಕ್ಕೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ. ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧಿಸುತ್ತೇನೆ. ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಯಾವ ಕ್ಷೇತ್ರದಿಂದ ನಿಲ್ಲಬೇಕು ಎಂಬುದನ್ನು ಇನ್ನು ನಿರ್ಧರಿಸಿಲ್ಲ ಎಂದರು.


    ರಾಜಕೀಯವನ್ನು ಸಂಪೂರ್ಣ ಬದಲಾಯಿಸಿ ಒಳ್ಳೆಯ ಪ್ರಜಾಪ್ರಭುತ್ವ ತರಬೇಕಿದೆ. ಉತ್ತಮ ಪ್ರಜಾಕೀಯ ಪಕ್ಷ ಎನ್ನುವ ಉದ್ದೇಶಕ್ಕೆ ಅಸ್ತಿತ್ವಕ್ಕೆ ಬಂದಿದೆ. ಇನ್ನು ಪಕ್ಷದ ಪ್ರಣಾಳಿಕೆ ಕಾನೂನುಗಳ ಪ್ರಕಾರ ಆಗಬೇಕು. ನಾವು ಕೊಟ್ಟ ಭರವಸೆ ಈಡೇರಿಸದಿದ್ದರೆ ಕಾನೂನು ಕ್ರಮ ಆಗಬೇಕು. ಅಲ್ಲಿಯವರೆಗೂ ನಾವು ಪ್ರಣಾಳಿಕೆಯನ್ನು ತರಲ್ಲ ಎಂದರು.

    ಇಂದು ಉಪೇಂದ್ರ ಬರಲಿರುವ ಹಿನ್ನೆಲೆಯಲ್ಲಿ ಮೊದಲೇ ರೋಡ್ ಶೋಗೆ ಪ್ರಜಾಕೀಯ ಪಕ್ಷ ಅನುಮತಿಯನ್ನು ಪಡೆದುಕೊಂಡಿತ್ತು. ಹೊಸದುರ್ಗ ಪಟ್ಟಣದ ವೀರಭದ್ರಸ್ವಾಮಿ ದೇವಾಲಯದಲ್ಲಿ ಉಪೇಂದ್ರ ಪೂಜೆ ಸಲ್ಲಿಸಿ ರೋಡ್ ಶೋ ವಾಹನ ಏರಿ ತಕ್ಷಣ ಇಳಿದಿದ್ದಾರೆ.

    ಇಂದು ಬೆಳಗ್ಗೆ 9 ಗಂಟೆಗೆ ರೋಡ್ ಶೋ ನಿಗದಿಯಾಗಿತ್ತು. ಆದರೆ ನಟ ಉಪೇಂದ್ರ ಅರ್ಧ ಗಂಟೆ ತಡವಾಗಿ ರ‍್ಯಾಲಿಗೆ ಆಗಮಿಸಿ 1 ನಿಮಿಷ ಮಾತನಾಡಿ ರ‍್ಯಾಲಿ ಮುಗಿಸಿದರು.

  • ಬಿಸಿಲಿಗೆ ಹೆದರಿ 1 ನಿಮಿಷಕ್ಕೆ ರ‍್ಯಾಲಿ ಮುಗಿಸಿದ ನಟ ಉಪೇಂದ್ರ

    ಬಿಸಿಲಿಗೆ ಹೆದರಿ 1 ನಿಮಿಷಕ್ಕೆ ರ‍್ಯಾಲಿ ಮುಗಿಸಿದ ನಟ ಉಪೇಂದ್ರ

    ಚಿತ್ರದುರ್ಗ: ರಿಯಲ್ ಸ್ಟಾರ್ ಉಪೇಂದ್ರ ಕೋಟೆನಾಡು ಚಿತ್ರದುರ್ಗದ ಬಿಸಿಲಿನ ತಾಪಕ್ಕೆ ಹೆದರಿ ಒಂದೇ ನಿಮಿಷದಲ್ಲಿ ತಮ್ಮ ಪ್ರಜಾಕೀಯ ಪಕ್ಷದ ರ‍್ಯಾಲಿಯನ್ನು ಮುಗಿಸಿದರು.

    ಚಿತ್ರದುರ್ಗ ಜಿಲ್ಲೆ ಹೊಸದುರ್ಗ ಪಟ್ಟಣದ ವೀರಭದ್ರಸ್ವಾಮಿ ದೇವಾಲಯದಿಂದ ರೋಡ್ ಶೋ ಆರಂಭವಾಗಬೇಕಿತ್ತು. ವೀರಭದ್ರ ಸ್ವಾಮಿ ದೇವಾಲಯದಲ್ಲಿ ಉಪೇಂದ್ರ ಪೂಜೆ ಸಲ್ಲಿಸಿ ರೋಡ್ ಶೋ ವಾಹನ ಏರಿ ತಕ್ಷಣ ಇಳಿದಿದ್ದಾರೆ. ಬಿಸಿಲಿಗೆ ಹೆದರಿ ಒಂದು ನಿಮಿಷದಲ್ಲೇ ರ‍್ಯಾಲಿ ಮುಗಿಸಿ ಹಿಂದಿರುಗಿದರು.

    ಉಪೇಂದ್ರ ತಮ್ಮ ಉತ್ತಮ ಪ್ರಜಾಕೀಯ ಪಕ್ಷದ ಪ್ರಚಾರಕ್ಕಾಗಿ ಚಿತ್ರದುರ್ಗಕ್ಕೆ ಆಗಮಿಸಿದರು. ಇಂದು ಬೆಳಗ್ಗೆ 9 ಗಂಟೆಗೆ ರೋಡ್ ಶೋ ನಿಗದಿಯಾಗಿತ್ತು. ಆದರೆ ನಟ ಉಪೇಂದ್ರ ಅರ್ಧ ಗಂಟೆ ತಡವಾಗಿ ರ‍್ಯಾಲಿಗೆ ಆಗಮಿಸಿದರು. ಬಳಿಕ ಉಪೇಂದ್ರ 1 ನಿಮಿಷದಲ್ಲಿ ಮಾತನಾಡಿ ರ‍್ಯಾಲಿ ಮುಗಿಸಿದರು.

    https://www.youtube.com/watch?v=_WlVfeGH3sk

  • ದೋಸ್ತಿ ಸಮಾವೇಶಕ್ಕೆ ಆರಂಭದಲ್ಲೇ ವಿಘ್ನ!

    ದೋಸ್ತಿ ಸಮಾವೇಶಕ್ಕೆ ಆರಂಭದಲ್ಲೇ ವಿಘ್ನ!

    – ಸಿದ್ದರಾಮಯ್ಯ ಫೋಟೋವಿಲ್ಲದ ಫ್ಲೆಕ್ಸ್ ಧರೆಗೆ
    – ಕೆಲಕಾಲ ಟ್ರಾಫಿಕ್ ಜಾಂ

    ಬೆಂಗಳೂರು: ನಗರದ ಹೊರವಲಯ ನೆಲಮಂಗಲ ಸಮೀಪ ಇರೋ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ದೋಸ್ತಿಗಳು ಜಂಟಿಯಾಗಿ ಬೃಹತ್ ಸಮಾವೇಶ ಆಯೋಜಿಸಿದ್ದು, ಇದೀಗ ಕಾರ್ಯಕ್ರಮಕ್ಕೆ ಮುನ್ನವೇ ವಿಘ್ನವೊಂದು ಎದುರಾಗಿದೆ.

    ಹೌದು. ಕಾರ್ಯಕ್ರಮದ ಅಂಗವಾಗಿ ದೋಸ್ತಿ ನಾಯಕರ ಫೊಟೋಗಳಿರುವ ಬೃಹತ್ ಗಾತ್ರದ ಫ್ಲೆಕ್ಸ್ ಗಾಳಿಯಿಂದಾಗಿ ಧರೆಗೆ ಉರುಳಿದೆ. ಸುಮಾರು ಅರ್ಧಗಂಟೆಯಿಂದ ಫ್ಲೆಕ್ಸ್ ರಸ್ತೆಯಲ್ಲಿ ಬಿದ್ದಿದೆ. ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೆಲ ಕಾಲ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.

    ಸಿದ್ದರಾಮಯ್ಯ ಫೋಟೋ ಇಲ್ಲ:
    ಬೃಹತ್ ಸಮಾವೇಶದ ಕುರಿತು ಹಾಕಲಾದ ಬ್ಯಾನರ್, ಫ್ಲೆಕ್ಸ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಇಲ್ಲ. ಹೀಗಾಗಿ ಅವರನ್ನು ಕಡೆಗಣಿಸಿದ್ದಾರಾ ಅಥವಾ ಬೇಕಂತಲೇ ಅವರ ಫೋಟೋ ಹಾಕಿಲ್ವಾ ಅನ್ನೋ ಅನುಮಾನ ಮೂಡಿದೆ. ಮಾದಾವರದ ಬಿಐಇಸಿ ಮೈದಾನದಲ್ಲಿ ಹಾಕಿರುವ ಯಾವುದೇ ಫ್ಲೆಕ್ಸ್‍ನಲ್ಲಿ ಸಿದ್ದರಾಮಯ್ಯನವರ ಫೋಟೋ ಕಾಣಿಸುತ್ತಿಲ್ಲ. ಹೀಗಾಗಿ ಈ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯರನ್ನು ಡಮ್ಮಿ ಎಂದು ಬಿಂಬಿಸುವ ಪ್ರಯತ್ನ ನಡೀತಿದ್ಯಾ ಅನ್ನೋ ಪ್ರಶ್ನೆ ಕೂಡ ಕಾಡುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನ ಭಾವಚಿತ್ರ ಹಾಕದೇ ಇರಲು ಯಾರಾದ್ರೂ ಖಡಕ್ ಸೂಚನೆ ಕೊಟ್ಟಿದ್ದಾರಾ ಅಥವಾ ಕಣ್ತಪ್ಪಿನಿಂದ ಈ ಎಡವಟ್ಟು ಆಗಿದೆಯಾ ಎಂದು ಅಲ್ಲಿನ ಜನಸಾಮಾನ್ಯರು ಮಾತನಾಡಿಕೊಳ್ಳುತ್ತಿದ್ದಾರೆ.

    ಒಟ್ಟಿನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ನಡೆಯುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ಪ್ರಧಾನಿ ಮೋದಿ ವಿರುದ್ಧ ಘರ್ಜಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 5 ಲಕ್ಷ ಕಾರ್ಯಕರ್ತರು ಬರುವ ನಿರೀಕ್ಷೆಯಿದೆ.

  • ದೋಸ್ತಿ ಸರ್ಕಾರದಿಂದ ಸಿದ್ದರಾಮಯ್ಯ ಕಡೆಗಣನೆ!

    ದೋಸ್ತಿ ಸರ್ಕಾರದಿಂದ ಸಿದ್ದರಾಮಯ್ಯ ಕಡೆಗಣನೆ!

    ಬೆಂಗಳೂರು: ದೋಸ್ತಿ ಸರ್ಕಾರದ ಇಂದಿನ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಕಡೆಗಣಿಸಲಾಗಿದ್ಯಾ ಎನ್ನುವ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

    ಇಂದು ಬೆಂಗಳೂರು ಹೊರವಲಯ ನೆಲಮಂಗಲ ಸಮೀಪ ಇರುವ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ದೋಸ್ತಿಗಳು ಜಂಟಿಯಾಗಿ ಬೃಹತ್ ಸಮಾವೇಶವನ್ನು ಆಯೋಜಿಸಿವೆ. ಈ ಕುರಿತು ಹಾಕಲಾದ ಬ್ಯಾನರ್, ಫ್ಲೆಕ್ಸ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಇಲ್ಲ. ಹೀಗಾಗಿ ಅವರನ್ನು ಕಡೆಗಣಿಸಿದ್ದಾರಾ ಅಥವಾ ಬೇಕಂತಲೇ ಅವರ ಫೋಟೋ ಹಾಕಿಲ್ವಾ ಅನ್ನೋ ಅನುಮಾನ ಮೂಡಿದೆ.

    ಮಾದಾವರದ ಬಿಐಇಸಿ ಮೈದಾನದಲ್ಲಿ ಹಾಕಿರುವ ಯಾವುದೇ ಫ್ಲೆಕ್ಸ್ ನಲ್ಲಿ ಸಿದ್ದರಾಮಯ್ಯನವರ ಫೋಟೋ ಕಾಣಿಸುತ್ತಿಲ್ಲ. ಹೀಗಾಗಿ ಈ ಮೂಲಕ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮುಂದೆ ಸಿದ್ದರಾಮಯ್ಯರನ್ನು ಡಮ್ಮಿ ಎಂದು ಬಿಂಬಿಸುವ ಪ್ರಯತ್ನ ನಡೀತಿದ್ಯಾ ಅನ್ನೋ ಪ್ರಶ್ನೆ ಕೂಡ ಕಾಡುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯನ ಭಾವಚಿತ್ರ ಹಾಕದೇ ಇರಲು ಯಾರಾದ್ರೂ ಖಡಕ್ ಸೂಚನೆ ಕೊಟ್ಟಿದ್ದಾರಾ ಅಥವಾ ಕಣ್ತಪ್ಪಿನಿಂದ ಈ ಎಡವಟ್ಟು ಆಗಿದೆಯಾ ಎಂದು ಅಲ್ಲಿನ ಜನಸಾಮಾನ್ಯರು ಮಾತನಾಡಿಕೊಳ್ಳುತ್ತಿದ್ದಾರೆ.

    ಒಟ್ಟಿನಲ್ಲಿ ಇಂದು ಸಂಜೆ 4 ಗಂಟೆ ಸುಮಾರಿಗೆ ನಡೆಯುವ ಕಾರ್ಯಕ್ರಮದಲ್ಲಿ ರಾಹುಲ್ ಗಾಂದಿ ಹಾಗೂ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದು, ಪ್ರಧಾನಿ ಮೋದಿ ವಿರುದ್ಧ ಘರ್ಜಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 5 ಲಕ್ಷ ಕಾರ್ಯಕರ್ತರು ಬರುವ ನಿರೀಕ್ಷೆ ದೋಸ್ತಿ ಸರ್ಕಾರಕ್ಕಿದೆ.

  • ಇಂದು ರಾಜ್ಯದಲ್ಲಿ ದೋಸ್ತಿಗಳ ಶಕ್ತಿ ಪ್ರದರ್ಶನ – ಬೆಂಗ್ಳೂರಲ್ಲಿ ರಣಕಹಳೆ ಮೊಳಗಿಸ್ತಾರೆ ರಾಹುಲ್, ಗೌಡ್ರು

    ಇಂದು ರಾಜ್ಯದಲ್ಲಿ ದೋಸ್ತಿಗಳ ಶಕ್ತಿ ಪ್ರದರ್ಶನ – ಬೆಂಗ್ಳೂರಲ್ಲಿ ರಣಕಹಳೆ ಮೊಳಗಿಸ್ತಾರೆ ರಾಹುಲ್, ಗೌಡ್ರು

    – 5 ಲಕ್ಷ ಕಾರ್ಯಕರ್ತರು ಬರುವ ನಿರೀಕ್ಷೆ

    ಬೆಂಗಳೂರು: ಕರುನಾಡಲ್ಲಿ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಲೋಕ ಸಮರದ ಕಹಳೆ ಮೊಳಗಿಸಲಿದ್ದಾರೆ. ರಾಜ್ಯಕ್ಕೆ ಬರ್ತಿರೋ ರಾಹುಲ್ ಗಾಂಧಿ, ಬೆಂಗಳೂರು ಹೊರವಲಯ ನೆಲಮಂಗಲ ಸಮೀಪ ಇರೋ ಮಾದಾವರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ದೋಸ್ತಿಗಳು ಜಂಟಿಯಾಗಿ ಆಯೋಜಿಸಿರೋ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮೋದಿ ವಿರುದ್ಧ ಘರ್ಜಿಸಲಿದ್ದಾರೆ.

    ದೋಸ್ತಿಗಳ ರ‍್ಯಾಲಿಯಾದ ಕಾರಣ ವೇದಿಕೆಯಲ್ಲಿ ರಾಹುಲ್ ಜೊತೆಗೆ ಜೆಡಿಎಸ್ ವರಿಷ್ಠರಾದ ಹೆಚ್‍ಡಿ ದೇವೇಗೌಡರು, ಸಿಎಂ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್ ಸೇರಿದಂತೆ ಹಲವರು ಪಾಲ್ಗೊಂಡು, ದೇಶಕ್ಕೆ ಮಹಾಘಟಬಂಧನ್ ಸಂದೇಶ ರವಾನಿಸಲಿದ್ದಾರೆ.

    ಇಂದಿನ ಸಮಾವೇಶ ದೊಡ್ಡ ಮಟ್ಟದ ಶಕ್ತಿ ಪ್ರದರ್ಶನದ ವೇದಿಕೆಯಾಗಿದ್ದು, ಆ ವೇದಿಕೆ ಮೂಲಕವೇ ವಿಪಕ್ಷ ಬಿಜೆಪಿಗೆ ಸ್ಪಷ್ಟ ಸಂದೇಶ ರವಾನಿಸಲು ದೋಸ್ತಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಜಂಟಿ ಸಮಾವೇಶದ ಮೂಲಕ ಪಕ್ಷದ ಕಾರ್ಯಕರ್ತರಿಗೆ ಹಾಗೂ ಮುಖಂಡರುಗಳಿಗೆ ಹೊಸ ಸಂದೇಶ ರವಾನಿಸುವ ಗುರಿ ದೋಸ್ತಿ ನಾಯಕರದ್ದಾಗಿದೆ. ಬೆಂಗಳೂರಿನಲ್ಲಿ ಆದ ದೋಸ್ತಿ, ಬೂತ್ ಮಟ್ಟದಲ್ಲಿ ಆಗಿಲ್ಲ ಎಂಬ ಆತಂಕವು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಲ್ಲಿದೆ.

    ಎರಡು ಪಕ್ಷದ ರಾಜ್ಯ ಹಾಗೂ ರಾಷ್ಟ್ರ ನಾಯಕರು ಜಂಟಿ ಸಮಾವೇಶ ನಡೆಸುವ ಮೂಲಕ ಒಗ್ಗಟ್ಟಿನ ಸಂದೇಶ ರವಾನಿಸಲು ತೀರ್ಮಾನಿಸಿದ್ದಾರೆ. ಅಲ್ಲದೆ ಕ್ಷೇತ್ರವಾರು ಮುಖಂಡರುಗಳ ನಡುವಿನ ಭಿನ್ನಾಭಿಪ್ರಾಯ ದೂರ ಮಾಡಲು ಕೂಡ ಈ ಸಭೆ ನೆರವಾಗಲಿದೆ ಎನ್ನುವುದು ದೋಸ್ತಿಗಳ ನಿರೀಕ್ಷೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ದೊಡ್ಡ ಮಟ್ಟದಲ್ಲಿ ಫೈಟ್ ನೀಡುತ್ತೆ ಎನ್ನುವ ರಾಜಕೀಯ ವಾತಾವರಣ ಸೃಷ್ಟಿಸುವ ಪ್ರಯತ್ನದ ಭಾಗವಾಗಿ ಈ ಸಮಾವೇಶ ನಡೆಸಲಾಗುತ್ತಿದೆ. ಅಂದಾಜು 5 ಲಕ್ಷ ಜನರನ್ನ ಸೇರಿಸಿ ಶಕ್ತಿ ಪ್ರದರ್ಶನದ ಮೂಲಕ ಕಾರ್ಯಕರ್ತರಲ್ಲಿ ಜೋಶ್ ತುಂಬುವ ಪ್ರಯತ್ನವು ಇದಾಗಿದೆ.

    ಹಳೆ ಮೈಸೂರು ಭಾಗದಲ್ಲಿ ಎರಡು ಪಕ್ಷಗಳಿಗೆ ಈ ಸಮಾವೇಶದ ಮೂಲಕ ಹೊಸ ಹುರುಪು ಬರಬಹುದು. ಕಾಂಗ್ರೆಸ್ ಹೆಚ್ಚು ಸ್ಥಾನ ಪಡೆದಿರುವ ಉತ್ತರ ಕರ್ನಾಟಕದ ಭಾಗದಲ್ಲಿ ಸಹ ಜೆಡಿಎಸ್ ಕಾಂಗ್ರೆಸ್ ಜಂಟಿ ಪ್ರಚಾರಕ್ಕೆ ಸಮಾವೇಶದ ಮೂಲಕ ದೋಸ್ತಿ ನಾಯಕರು ಸಂದೇಶ ರವಾನಿಸಲಿದ್ದಾರೆ. ವಿಶೇಷವಾಗಿ ಹಾಸನ ಹಾಗೂ ಮಂಡ್ಯದಲ್ಲಿನ ಕಾಂಗ್ರೆಸ್ ನಾಯಕರ ಭಿನ್ನರಾಗವು ಈ ಸಮಾವೇಶದ ನಂತರ ಸರಿಯಾಗಬಹುದು ಎಂಬುದು ಮುಖಂಡರ ನಿರೀಕ್ಷೆಯಾಗಿದೆ. ಇಂದಿನ ಸಮಾವೇಶದ ನಂತರ ಜೆಡಿಎಸ್ ಕಾಂಗ್ರೆಸ್ ನಾಯಕರು ಎಲ್ಲಾ 28 ಕ್ಷೇತ್ರದಲ್ಲೂ ಜೊತೆ ಜೊತೆಯಲ್ಲಿ ಹೆಜ್ಜೆ ಇಡಲು ಇದು ಆರಂಭಿಕ ಹೆಜ್ಜೆಯಾಗಲಿದೆ.

    ರಾಹುಲ್ ಗಾಂಧಿ ಹಾಗೂ ದೇವೇಗೌಡರು ಒಟ್ಟಾಗಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ಮುಖಂಡರ ಹಾಗೂ ಕಾರ್ಯಕರ್ತರ ಅನುಮಾನಗಳನ್ನು ದೂರ ಮಾಡುವ ಗುರಿ ದೋಸ್ತಿ ನಾಯಕರದ್ದಾಗಿದೆ. ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ವೇದಿಕೆ ಹಂಚಿಕೊಳ್ಳುವ ಮೂಲಕ ಹಳೆತನವನ್ನ ನಾವು ಮರೆತಿದ್ದೇವೆ. ನೀವು ಮರೆಯಿರಿ ಎನ್ನುವ ಸಂದೇಶ ರವಾನಿಸಲು ತೀರ್ಮಾನಿಸಿದ್ದಾರೆ. ಹೀಗೆ ಲೋಕಸಭಾ ಚುನಾವಣೆಗೆ ದೋಸ್ತಿಗಳ ಅಧಿಕೃತ ರಣಕಹಳೆಯಾಗಿ ಇಂದು ಮೊಳಗಲಿದೆ.

  • ಸಚಿವರ ಹೆಗಲಿಗೆ ಅಭ್ಯರ್ಥಿಗಳನ್ನ ಗೆಲ್ಲಿಸುವ ಹೊಣೆ

    ಸಚಿವರ ಹೆಗಲಿಗೆ ಅಭ್ಯರ್ಥಿಗಳನ್ನ ಗೆಲ್ಲಿಸುವ ಹೊಣೆ

    – ನಾಳೆ ಬೃಹತ್ ರ‍್ಯಾಲಿ
    -ಪಕ್ಷ ವಿರೋಧಿಗಳಿಗೆ ಕಾಂಗ್ರೆಸ್ ಎಚ್ಚರಿಕೆ

    ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ತಡರಾತ್ರಿವರೆಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ನಡಿದಿದೆ. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಆಯಾಯ ಜಿಲ್ಲೆಯ ಸಚಿವರಿಗೆ ಅಭ್ಯರ್ಥಿಗಳನ್ನ ಗೆಲ್ಲಿಸುವ ಹೊಣೆಯವನ್ನು ನೀಡಲಾಗಿದೆ.

    ಲೋಕಸಭಾ ಚುನಾವಣೆಗೆ ಯಾವೆಲ್ಲ ರಣತಂತ್ರಗಳನ್ನು ಉಪಯೋಗಿಸಬೇಕು ಅನ್ನೋದರ ಜೊತೆಗೆ ಸಂಬಂಧಪಟ್ಟ ಜಿಲ್ಲಾ ಉಸ್ತುವಾರಿ ಸಚಿವರು, ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಕೆಲಸ ಮಾಡಬೇಕು ಹಾಗೂ ಯಾವುದೇ ಪಕ್ಷ ವಿರೋಧಿ ಚಟುವಟಿಗಳಿಗೆ ಅವಕಾಶ ನೀಡಬಾರದು. ಒಂದು ವೇಳೆ ನೀಡಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೋದಾಗಿ ಎಚ್ಚರಿಯನ್ನು ನೀಡಲಾಗಿದೆ.

    ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತಾಡಿದ ವೇಣುಗೋಪಾಲ್, ಮೋದಿ ಒಬ್ಬ ಸುಳ್ಳುಗಾರ, ಪೊಳ್ಳು ಭರವಸೆಗಳನ್ನು ಕೊಟ್ಟು ಜನರನ್ನು ಯಾಮಾರಿಸಿದ್ದಾರೆ. ಐಟಿ ಇಲಾಖೆಯನ್ನು ಬಳಸಿಕೊಂಡು ರಾಜಕೀಯ ಅಸ್ಥಿರಗೊಳಿಸಲು ಯತ್ನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದೇ 31 ರಂದು ಬೆಂಗಳೂರಿನಲ್ಲಿ ನಡೆಯುವ ಸಮಾವೇಶಕ್ಕೆ ರಾಹುಲ್ ಗಾಂಧಿ ಬರಲಿದ್ದಾರೆ. ಎಚ್.ಡಿ ದೇವೇಗೌಡ ಮತ್ತು ರಾಹುಲ್ ಗಾಂಧಿ ನಾಯಕತ್ವದಲ್ಲಿ ಅದ್ಧೂರಿ ಸಮಾವೇಶ ನಡೆಯಲಿದೆ ಎಂದರು.

  • ಕರ್ನಾಟಕದಲ್ಲಿ 7 ಮೋದಿ  ರ‍್ಯಾಲಿ – ಏ.8ಕ್ಕೆ ಮೈಸೂರು, ಚಿತ್ರದುರ್ಗದಲ್ಲಿ ಪ್ರಚಾರ

    ಕರ್ನಾಟಕದಲ್ಲಿ 7 ಮೋದಿ ರ‍್ಯಾಲಿ – ಏ.8ಕ್ಕೆ ಮೈಸೂರು, ಚಿತ್ರದುರ್ಗದಲ್ಲಿ ಪ್ರಚಾರ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ಮತ್ತು ಚಿತ್ರದುರ್ಗದಲ್ಲಿ ಏಪ್ರಿಲ್ 8 ರಂದು ಬೃಹತ್ ರ‍್ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ತಿಳಿಸಿದ್ದಾರೆ.

    ಡಾಲರ್ಸ್ ಕಾಲೋನಿಯಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮೋದಿ ರ‍್ಯಾಲಿ ನಡೆಯುತ್ತದೆ. ಈ ನಿಟ್ಟಿನಲ್ಲಿ ದಿನಾಂಕ ಕೂಡ ನಿಗದಿಯಾಗಿದ್ದು, ಏಪ್ರಿಲ್ 8 ರಂದು ಬೆಳಗ್ಗೆ ಬೆಳಗ್ಗೆ ಮೈಸೂರು ಹಾಗೂ ಸಂಜೆ ಚಿತ್ರದುರ್ಗದಲ್ಲಿ ನಡೆಯುವ ಬೃಹತ್ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು 7 ರ‍್ಯಾಲಿಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

    ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ತಪ್ಪಲು ಯಾರು ಕಾರಣ ಎನ್ನುವ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಈಗಾಗಲೇ ಕಾರಣ ಯಾರು ಅಂತ ಮಾಧ್ಯಮಗಳಲ್ಲಿ ಬಂದಿದೆ ಎಂದು ಪರೋಕ್ಷವಾಗಿ ಬಿ.ಎಲ್.ಸಂತೋಷ್ ವಿರುದ್ಧ ಆರೋಪಿಸಿದರು.

    ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆಯಲ್ಲಿ ಗೊಂದಲ ಆಗಿದ್ದು ನಿಜ. ಆದರೆ ಇದು ಪಕ್ಷ ತೀರ್ಮಾನವಾಗಿದೆ. ಹೀಗಾಗಿ ಅಭ್ಯರ್ಥಿ ಯಾರೇ ಆಗಲಿ ಮುಖ್ಯವಲ್ಲ, ಪಕ್ಷ ಮುಖ್ಯ. ತೇಜಸ್ವಿ ಸೂರ್ಯ ಅವರ ಪರ ಪ್ರಚಾರಕ್ಕೆ ನಾವು ಕೆಲಸ ಶುರು ಮಾಡಿದ್ದೇವೆ. ರಾಜ್ಯದ 28 ಕ್ಷೇತ್ರಗಳಲ್ಲಿಯೂ ಮೋದಿ ಅವರೇ ಅಭ್ಯರ್ಥಿ ಎಂದು ಬಿಂಬಿಸಲಾಗಿದೆ. ಪಕ್ಷ ದೊಡ್ಡದು, ಪಕ್ಷಕ್ಕೆ ನಿಷ್ಠರಾಗಿರಬೇಕು ಎಂದ ಅವರು, ತೇಜಸ್ವಿನಿ ಅನಂತ್‍ಕುಮಾರ್ ಅವರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

  • ಮಂಡ್ಯದಲ್ಲಿ ಜೆಡಿಎಸ್ ಹಬ್ಬ – ಸಾಗರದಂತೆ ಹರಿದು ಬಂದ ಜನರು

    ಮಂಡ್ಯದಲ್ಲಿ ಜೆಡಿಎಸ್ ಹಬ್ಬ – ಸಾಗರದಂತೆ ಹರಿದು ಬಂದ ಜನರು

    ಮಂಡ್ಯ: ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕಾರ್ಯಕ್ರಮವನ್ನು ಜೆಡಿಎಸ್ ಕಾರ್ಯಕರ್ತರು ಹಬ್ಬದಂತೆ ಸಂಭ್ರಮಿಸುತ್ತಿದ್ದು, ಸುಮಾರು ಎರಡು ಕಿಲೋ ಮೀಟರ್ ವರೆಗೂ ರ‍್ಯಾಲಿಯಲ್ಲಿ ಹೊರಟಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದ ಕಾಳಿಕಾಂಬ ದೇವಸ್ಥಾನದಲ್ಲಿ ನಿಖಿಲ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆಯ ಬಳಿಕ ಸಿಎಂ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಮತ್ತು ಜೆಡಿಎಸ್ ಮುಖಂಡರ ಜೊತೆಗೆ ಕಾಳಿಕಾಂಬ ದೇವಸ್ಥಾನದ ಆವರಣದಿಂದ ರ‍್ಯಾಲಿ ಪ್ರಾರಂಭಿಸಿದ್ದು, ಡೊಳ್ಳು ಕುಣಿತ, ಪಟ ಕುಣಿತ, ಗೊಂಬೆ ಕುಣಿತಗಳ ಜೊತೆ ನಿಖಿಲ್ ಪ್ರಚಾರದ ರ‍್ಯಾಲಿ ಹೊರಟಿದೆ.

    ಸುಮಾರು ಎರಡು ಕಿಲೋ ಮೀಟರ್ ರ‍್ಯಾಲಿ ಹೋಗಲಿದ್ದು, ನಿಖಿಲ್ ಕುಮಾರಸ್ವಾಮಿ ಅವರು ತೆರೆದ ವಾಹನದಲ್ಲಿ ನಿಂತು ಕಾರ್ಯಕರ್ತರಿಗೆ ಕೈ ಬೀಸುತ್ತಿದ್ದಾರೆ. ನಿಖಿಲ್ ತೆರೆದ ವಾಹನ ಹಿಂದೆ, ಮುಂದೆ ಮತ್ತು ಅಕ್ಕ-ಪಕ್ಕದಲ್ಲಿ ಜನ ಸೇರಿದ್ದಾರೆ. ಎತ್ತ ನೋಡಿದರೂ ಬರೀ ಜನರೇ ಕಾಣಿಸುತ್ತಿದ್ದಾರೆ. ಬಿಸಿಲು ಎಂದು ನೋಡದೇ ಜನರು ನಿಖಿಲ್ ಎಂದು ಕೂಗುತ್ತಾ ಒಂದು ರೀತಿ ಮಂಡ್ಯದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗಿದೆ.

    ರ‍್ಯಾಲಿಗಾಗಿ ಎರಡು ಲಾರಿ ಸಿದ್ಧತೆ ಮಾಡಿಕೊಂಡಿದ್ದು, ಜೆಡಿಎಸ್ ಬ್ಯಾನರ್ ನಿಂದ ಅಲಂಕಾರ ಮಾಡಲಾಗಿದೆ. ಲಾರಿ ಸುತ್ತ ಹಾಕಿರುವ ಬ್ಯಾನರ್ ನಲ್ಲಿ ನಿಖಿಲ್ ಕುಮಾರ್ ರಾರಾಜಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ಮುಖಂಡರ ಫೋಟೋ ಕೂಡ ಇದೆ. ಉಳುವ ಯೋಗಿಯ ನೋಡಲ್ಲಿ ಹಾಡಿಗೆ ಹಸಿರು ಸೀರೆ ಉಟ್ಟು, ಹೊರೆ ಹೊತ್ತ ಮಹಿಳೆಯರಿಂದ ನೃತ್ಯದ ಮೂಲಕ ಮನರಂಜನೆ ನೀಡಲಾಗುತ್ತಿದೆ.

    ಭದ್ರತೆ:
    ಭದ್ರತೆಗಾಗಿ ಒಬ್ಬರು ಎಸ್‍ಪಿ, 10 ಡಿವೈಎಸ್‍ಪಿ, 20 ಸಿಪಿಐ, 35 ಪಿಎಸ್‍ಐ, 800 ಜನ ಸಿಬ್ಬಂದಿ, 5 ಡಿಆರ್ ಸಿಬ್ಬಂದಿ ಮತ್ತು 5 ಕೆಎಸ್‍ಆರ್ ಪಿ ನಿಯೋಜನೆ ಮಾಡಲಾಗಿದೆ. ನಿಖಿಲ್ ನಾಮಪತ್ರ ಸಲ್ಲಿಕೆ ನಂತರ ಕಾವೇರಿ ಉದ್ಯಾನವನದ ಬಳಿ ಬೃಹತ್ ಬಹಿರಂಗ ಭಾಷಣ ಮಾಡಲಿದ್ದಾರೆ. ಬಹಿರಂಗ ಭಾಷಣ ವೀಕ್ಷಿಸಲು ಬೃಹತ್ ಎಲ್‍ಇಡಿ ಪರದೆ ಅಳವಡಿಕೆ ಮಾಡಲಾಗಿದೆ. ಸುಮಾರು ಹತ್ತು ಎಲ್‍ಇಡಿ ಅಳವಡಿಕೆ ಮಾಡಲಾಗಿದ್ದು, ಪಾರ್ಕ್ ಸುತ್ತ ಬ್ಯಾರಿಕೇಡ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್ ನಲ್ಲಿ ನಿಖಿಲ್ ಫೋಟೋ ಹಿಡಿದು ಜಯಕಾರ ಕೂಗುತ್ತಾ ಜೆಡಿಎಸ್ ಕಾರ್ಯಕರ್ತರ ಸಂಭ್ರಮಿಸುತ್ತಿದ್ದಾರೆ.

  • ಭಾರತೀಯ ಯೋಧರ ಪರ ರ‍್ಯಾಲಿಯಲ್ಲಿ ಶಾಸಕ ಸುಧಾಕರ್‌ಗೆ ಅವಮಾನ..!

    ಭಾರತೀಯ ಯೋಧರ ಪರ ರ‍್ಯಾಲಿಯಲ್ಲಿ ಶಾಸಕ ಸುಧಾಕರ್‌ಗೆ ಅವಮಾನ..!

    ಚಿಕ್ಕಬಳ್ಳಾಪುರ: ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಧಾಕರ್ ಅವರನ್ನು ಸುತ್ತುವರಿದು ಮೋದಿ ಮೋದಿ ಎಂದು ಘೋಷಣೆ ಕೂಗುವ ಮೂಲಕ ಸುಧಾಕರ್ ಅವರಿಗೆ ಅವಮಾನ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ಹಳೇ ಎಸ್ಪಿ ಕಚೇರಿ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಪರ ನಾಗರೀಕರು ರ‍್ಯಾಲಿ ಕೈಗೊಂಡಿದ್ದರು. ಪಕ್ಷಾತೀತವಾಗಿ ಹಲವು ಮಂದಿ ನಾಗರೀಕರು ಭಾರತೀಯ ಯೋಧರ ಪರ ಮೆರವಣಿಗೆ ನಡೆಸಿದ್ದರು. ಮೆರವಣಿಗೆ ವೇಳೆ ಕಾರಿನಲ್ಲಿ ಶಾಸಕ ಸುಧಾಕರ್ ಅದೇ ಮಾರ್ಗವಾಗಿ ಹಾದು ಹೋಗುತ್ತಿದ್ದರು.

    ಈ ವೇಳೆ ಶಾಸಕ ಸುಧಾಕರ್ ಬಳಿ ನಾಗರಿಕರೊಬ್ಬರು ಬಂದು ರ‍್ಯಾಲಿಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅವರ ಮನವಿಗೆ ಸ್ಪಂದಿಸಿದ ಸುಧಾಕರ್ ಅವರು ರ‍್ಯಾಲಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಶಾಸಕ ಸುಧಾಕರ್ ಅವರನ್ನು ಸುತ್ತುವರಿದು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದಾರೆ.

    ಬಿಜೆಪಿ ಕಾರ್ಯಕರ್ತರ ಘೋಷಣೆಯಿಂದ ಕಸಿವಿಸಿಗೊಂಡ ಸುಧಾಕರ್ ರ‍್ಯಾಲಿಯಿಂದ ವಾಪಸ್ ಹೋಗಿದ್ದು, ಬಿಜೆಪಿ ಕಾರ್ಯಕರ್ತರ ವರ್ತನೆಗೆ ಶಾಸಕ ಸುಧಾಕರ್ ಅಸಮಾಧಾನಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಎಸ್‍ವೈ ಜೊತೆ ಮಾತನಾಡಲೇ ಇಲ್ಲ ಮೋದಿ?

    ಬಿಎಸ್‍ವೈ ಜೊತೆ ಮಾತನಾಡಲೇ ಇಲ್ಲ ಮೋದಿ?

    – ಪ್ರಧಾನಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಸೈಡ್‍ಲೈನ್!

    ಹುಬ್ಬಳ್ಳಿ: ಧಾರವಾಡ ಹಾಗೂ ಹುಬ್ಬಳ್ಳಿಯಲ್ಲಿ ನಡೆದ ಎರಡೂ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿಲ್ಲ ಎನ್ನುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಧಾರವಾಡದಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬಳಿಕ ಅಲ್ಲಿಂದ ನಿರ್ಗಮಿಸಿದ ಅವರು, ತಮ್ಮ ಹಿಂದೆ ಕುಳಿತಿದ್ದ ಶಾಸಕ ಅಮೃತ್ ದೇಸಾಯಿ, ಸೇರಿದಂತೆ ಕೆಲವು ನಾಯಕರಿಗೆ ಧನ್ಯವಾದ ತಿಳಿಸಿದರು. ಬಿ.ಎಸ್.ಯಡಿಯೂರಪ್ಪ ಕೈ ಮುಗಿದುಕೊಂಡು ನಿಂತಿದ್ದರೂ ಅದನ್ನು ನೋಡದೇ, ಅಲ್ಲಿಂದ ಸ್ವಲ್ಪ ಮುಂದೆ ಬಂದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಕೈಮುಗಿದು ನಮಸ್ಕರಿಸಿ ವೇದಿಕೆಯಿಂದ ನಿರ್ಗಮಿಸಿದರು.

    ಧಾರವಾಡದಿಂದ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಸಮೀಪ ಕೆಎಲ್‍ಇ ಮೈದಾನದ ಸಮಾವೇಶದಲ್ಲಿ ತಮ್ಮ ಪಕ್ಕದಲ್ಲೇ ಬಿ.ಎಸ್.ಯಡಿಯೂರಪ್ಪ ಕುಳಿತಿದ್ದರೂ ಪ್ರಧಾನಿ ಮೋದಿ ಮಾತನಾಡಲಿಲ್ಲ. ಹಾರ ಹಾಕುವ ವೇಳೆ ಥ್ಯಾಂಕ್ಸ್ ಮಾತ್ರ ಹೇಳಿದರು. ಭಾಷಣದ ವೇಳೆಯೂ ಬಿ.ಎಸ್.ಯಡಿಯೂರಪ್ಪ ಅವರ ಹೆಸರನ್ನು ಕಡೆಗಣನೆ ಮಾಡಿದರು.

    ಈ ಎಲ್ಲ ಬೆಳವಣಿಗೆಗಳಿಂದ ಬಿ.ಎಸ್.ಯಡಿಯೂರಪ್ಪ ಅವರು ಸೈಡ್‍ಲೈನ್ ಆದರೆ ಎನ್ನುವುದು ಬಿಜೆಪಿ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಆಡಿಯೋ ಪ್ರಕರಣವನ್ನು ಬಿ.ಎಸ್.ಯಡಿಯೂರಪ್ಪನವರು ಒಪ್ಪಿಕೊಂಡಿದ್ದಕ್ಕೆ ಪ್ರಧಾನಿ ಮೋದಿ ಫುಲ್ ಗರಂ ಆಗಿದ್ದರು. ರಾಜ್ಯದಲ್ಲಿ ಸರ್ಕಾರ ರಚಿಸಲು ವಿಫಲವಾಗಿದ್ದಾರೆ ಎನ್ನುವ ಕಾರಣಕ್ಕೆ ಮೋದಿ ಮುನಿಸಿಕೊಂಡಿದ್ದರು ಎನ್ನುವ ಮಾತುಗಳು ಬಿಜೆಪಿ ನಾಯಕರಿಂದ ಕೇಳಿಬರುತ್ತಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv