Tag: Ram

  • 20 ಸಾವಿರಕ್ಕೆ ಮಾರಾಟ ಮತ್ತೆ 50 ಸಾವಿರಕ್ಕೆ ಖರೀದಿ – ಈಗ 1.48 ಲಕ್ಷಕ್ಕೆ 8 ತಿಂಗಳ ಟಗರು ಸೇಲ್‌!

    20 ಸಾವಿರಕ್ಕೆ ಮಾರಾಟ ಮತ್ತೆ 50 ಸಾವಿರಕ್ಕೆ ಖರೀದಿ – ಈಗ 1.48 ಲಕ್ಷಕ್ಕೆ 8 ತಿಂಗಳ ಟಗರು ಸೇಲ್‌!

    ಮಂಡ್ಯ: ಕೇವಲ 8 ತಿಂಗಳ ಬಂಡೂರು ತಳಿಯ ಟಗರು (Bandur Breed Ram) ಬರೋಬ್ಬರಿ 1.48 ಲಕ್ಷ ರೂ.ಗೆ ಮಾರಾಟವಾಗುವ ಮೂಲಕ ದಾಖಲೆಯ ಜೊತೆಗೆ ರೈತರಲ್ಲಿ (Farmers) ಅಚ್ಚರಿಯನ್ನು ಮೂಡಿಸಿದೆ.

    ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ತಾಲೂಕಿನ ಕಿರುಗಾವಲು ಗ್ರಾಮದ ಉಲ್ಲಾಸ್‌ಗೌಡ ಎಂಬುವವರಿಗೆ ಸೇರಿದ ಬಂಡೂರು ತಳಿ ಟಗರು ಇದೀಗ ದಾಖಲೆ‌ ಮೊತ್ತಕ್ಕೆ ಮಾರಾಟವಾಗಿದೆ. 8 ತಿಂಗಳ‌ ಹಿಂದೆ ಉಲ್ಲಾಸ್ ಮನೆಯಲ್ಲಿಯೇ ಈ ಬಂಡೂರು ಟಗರು ಜನಸಿತ್ತು. ಬಳಿಕ ಕೆಲ ದಿನದಲ್ಲೇ ಟಿ.ನರಸೀಪುರದ ಮೂಲದವರಿಗೆ 20 ಸಾವಿರ ರೂ.ಗೆ ಟಗರನ್ನು ಮಾರಾಟ ಮಾಡಲಾಗಿತ್ತು.

    ಮಾರಾಟ ಮಾಡಿದ ಬಳಿಕ ಮತ್ತೆ ಆ ಟಗರನ್ನು50 ಸಾವಿರ ರೂ.ಗೆ ಉಲ್ಲಾಸ್ ಹಾಗೂ ಅವರ ತಂದೆ ಮನೋಹರ್ ಖರೀದಿ ಮಾಡಿದ್ದರು. ಇದೀಗ ಶಿವಮೊಗ್ಗ ಮೂಲದ ಉದ್ಯಮಿ ಜವಾದ್‌ಗೆ ಅದೇ ಬಂಡೂರು ಟಗರನ್ನು ಮಾರಾಟ ಮಾಡಲಾಗಿದೆ. 8 ತಿಂಗಳ ಬಂಡೂರು ಟಗರನ್ನು ಬರೋಬ್ಬರಿ 1.48 ಲಕ್ಷ ರೂ.ಗೆ ಖರೀದಿ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರು: ವಿಧವೆ ಮದುವೆಯಾಗಿದ್ದ ಪೊಲೀಸಪ್ಪನ ವಿರುದ್ಧವೇ ವರದಕ್ಷಿಣೆ ಕಿರುಕುಳ ಕೇಸ್

     
    ಮಾರಾಟವಾದ ಈ ಬಂಡೂರು ಟಗರಿಗೆ ವಿಶೇಷ ಪೂಜೆ ಸಲ್ಲಿಸಿ ಹಸ್ತಾಂತರ ಮಾಡಲಾಯಿತು. ಇದೇ ವೇಳೆ ಉಲ್ಲಾಸ್ ತಂದೆ ಮನೋಹರ್‌ಗೆ ಸನ್ಮಾನ ಮಾಡಿ, 1.48 ಲಕ್ಷ ರೂ. ಹಣ ನೀಡಿ ಜವಾದ್ ಟಗರನ್ನು ಕೊಂಡೊಯ್ದುದಿದ್ದಾರೆ. ಮಾಂಸದ ದೃಷ್ಟಿಕ್ಕಿಂತ ಹೆಚ್ಚಾಗಿ ಬಂಡೂರು ತಳಿ ಅಭಿವೃದ್ದಿಗಾಗಿ ಈ ಟಗರು ದಾಖಲೆ ಬೆಲೆಗೆ ಖರೀದಿ‌ ಮಾಡಲಾಗಿದೆ.

  • ನಾನೂ ರಾಮಭಕ್ತ, ಇದರಲ್ಲಿ ರಾಜಕೀಯ ಬೇಡ: ಶಾಸಕ ಇಕ್ಬಾಲ್ ಹುಸೇನ್

    ನಾನೂ ರಾಮಭಕ್ತ, ಇದರಲ್ಲಿ ರಾಜಕೀಯ ಬೇಡ: ಶಾಸಕ ಇಕ್ಬಾಲ್ ಹುಸೇನ್

    ರಾಮನಗರ: ಅತ್ತ ರಾಮಮಂದಿರ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ (Congress- BJP) ನಡುವೆ ಧರ್ಮಯುದ್ಧ ನಡೆಯುತ್ತಿದ್ದರೆ ಇತ್ತ ರಾಮನಗರದ ಕೈ ಶಾಸಕರೊಬ್ಬರು ರಾಮೋತ್ಸವದ ಜಪ ಮಾಡಿದ್ದಾರೆ. ನಾನು ಕೂಡಾ ರಾಮಭಕ್ತ, ನಾನು ರಾಮನನ್ನು ಪೂಜೆ ಮಾಡ್ತೀನಿ ಎಂದು ಶಾಸಕ ಇಕ್ಬಾಲ್ ಹುಸೇನ್ (Iqbal Hussain) ತಿಳಿಸಿದ್ದಾರೆ.

    ರಾಮಮಂದಿರ (Ram Mandir) ಉದ್ಘಾಟನೆ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ ಎಂಬ ಕುರಿತು ಮಾತನಾಡಿದ ಅವರು, ರಾಮನಗರದಲ್ಲಿ ರಾಮೋತ್ಸವವನ್ನ ನಡೆಸಬೇಕು ಅಂತ ಚಿಂತನೆ ಮಾಡಿದ್ವಿ. ಅದನ್ನ ಭಕ್ತಿ ಪೂರ್ವಕವಾಗಿ ಮಾಡಿಯೇ ಮಾಡ್ತೀವಿ. ನಾನೂ ರಾಮನ ಭಕ್ತ, ನಾನು ಎಲ್ಲಾ ದೇವರನ್ನ ಪೂಜಿಸ್ತೇನೆ ಎಂದರು.

    ನಾನು ಚಿಕ್ಕವಯಸ್ಸಿನಿಂದಲೇ ಎಲ್ಲಾ ದೇವರ ಪೂಜೆ ಮಾಡಿದ್ದೇನೆ. ಹಾಗೆಯೇ ರಾಮನ ಪೂಜೆಯನ್ನೂ ಮಾಡುತ್ತೇನೆ. ರಾಮಮಂದಿರ ವಿಚಾರವನ್ನ ಯಾರೋ ರಾಜಕೀಯವಾಗಿ ಬಳಸಿಕೊಳ್ಳಬಹುದು. ಆದರೆ ನಾವು ಇದನ್ನ ರಾಜಕೀಯವಾಗಿ ಬಳಸಿಕೊಳ್ಳಲ್ಲ. ಜನರನ್ನ ಒಡೆದು ಕೆಲವರು ಇದರಲ್ಲಿ ರಾಜಕೀಯ ಮಾಡ್ತಿದ್ದಾರೆ. ಆದರೆ ಕಾಂಗ್ರೆಸ್ ಗೆ ತನ್ನದೇ ಆದ ಬದ್ಧತೆ, ಸಿದ್ದಾಂತ ಇದೆ ಎಂದು ಶಾಸಕರು ಹೇಳಿದರು. ಇದನ್ನೂ ಓದಿ: ರಾಮ ಮಾಂಸಹಾರಿಯಲ್ಲ, ವನವಾಸದಲ್ಲಿ ಹಣ್ಣುಗಳನ್ನು ಸ್ವೀಕರಿಸುತ್ತಿದ್ದ: ಆಚಾರ್ಯ ಸತ್ಯೇಂದ್ರ ದಾಸ್ ತಿರುಗೇಟು

    ಲೋಕಸಭಾ ಚುನಾವಣೆ (Loksabha Election) ದೃಷ್ಟಿಯಿಂದ ಮಾಡ್ತಿದ್ದಾರೋ ಇಲ್ವೋ ಗೊತ್ತಿಲ್ಲ. ಅದು ಅವರಿಗೆ ಬಿಟ್ಟಿರೋ ವಿಚಾರ. ಆದರೆ ನಾವು ರಾಮನನ್ನ ಮನೆ ದೇವರು ಅಂತ ಪೂಜೆ ಮಾಡ್ತೀವಿ. ಅವರಿಗೆ ರಾಮನ ಪೂಜೆ ಹೊಸದಿರಬಹದು, ಆದರೆ ನಮಗೆ ಹೊಸದೇನಲ್ಲ. ಅದಕ್ಕಾಗಿ ರಾಜಕಾರಣಕ್ಕೆ ಬಳಸಿಕೊಳ್ತಿದ್ದಾರೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದ್ರು.

  • ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

    ಶ್ರೀರಾಮ ಮಾಂಸಾಹಾರಿಯಾಗಿದ್ದ.. ಬೇಟೆಯಾಡಿ ತಿನ್ನುವ ರಾಮ ನಮ್ಮವ: ಎನ್‌ಸಿಪಿ ನಾಯಕ ವಿವಾದಾತ್ಮಕ ಹೇಳಿಕೆ

    ನವದೆಹಲಿ: ಭಗವಾನ್‌ ರಾಮ ‘ಬಹುಜನ’ರಿಗೆ ಸೇರಿದವನು. ರಾಮ ಮಾಂಸಾಹಾರಿಯಾಗಿದ್ದ (Sri Ram) ಎಂದು ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಶರದ್ ಪವಾರ್ ಬಣದ ನಾಯಕ ಜಿತೇಂದ್ರ ಅವ್ಹಾದ್ (Jitendra Awhad) ಅವರು ಭಗವಾನ್ ರಾಮನ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಜನವರಿ 22 ರಂದು ಅಯೋಧ್ಯೆಯ (Ayodhya) ಪವಿತ್ರೀಕರಣ ಸಮಾರಂಭದ ದಿನದಂದು ಒಂದು ದಿನದ ಮದ್ಯ ಮತ್ತು ಮಾಂಸವನ್ನು ನಿಷೇಧಿಸುವಂತೆ ಬಿಜೆಪಿ ಶಾಸಕ ರಾಮ್ ಕದಮ್ ಮಹಾರಾಷ್ಟ್ರ ಸರ್ಕಾರವನ್ನು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ಜಿತೇಂದ್ರ ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರಕ್ಕೆ ಬಾಂಬ್ ಬೆದರಿಕೆ – ಇಬ್ಬರ ಬಂಧನ

    ರಾಮ ನಮ್ಮವನು. ರಾಮ ಬಹುಜನರಿಗೆ ಸೇರಿದವನು. ಬೇಟೆಯಾಡಿ ತಿನ್ನುವ ರಾಮ ನಮ್ಮವನು, ನಾವು ಬಹುಜನರಿಗೆ ಸೇರಿದವರು. ನೀವು ನಮ್ಮೆಲ್ಲರನ್ನು ಸಸ್ಯಾಹಾರಿಯನ್ನಾಗಿ ಮಾಡಲು ಹೋದಾಗ, ನಾವು ರಾಮನ ಆದರ್ಶಗಳನ್ನು ಅನುಸರಿಸುತ್ತೇವೆ. ಇಂದು ನಾವು ಕುರಿ ಮಾಂಸವನ್ನು ತಿನ್ನುತ್ತೇವೆ. ಇದು ರಾಮನ ಆದರ್ಶ. ರಾಮ ಸಸ್ಯಾಹಾರಿಯಾಗಿರಲಿಲ್ಲ, ಮಾಂಸಾಹಾರಿಯಾಗಿದ್ದ ಎಂದು ತಿಳಿಸಿದ್ದಾರೆ.

    ಈ ವಿಷಯದ ಬಗ್ಗೆ ಚರ್ಚೆಗೆ ಚಾಲನೆ ನೀಡಿದ ಅವ್ಹಾದ್, 14 ವರ್ಷಗಳಿಂದ ಕಾಡಿನಲ್ಲಿ ವಾಸಿಸುವ ವ್ಯಕ್ತಿಯು ಸಸ್ಯಾಹಾರವನ್ನು ಎಲ್ಲಿ ಹುಡುಕಲು ಹೋಗುತ್ತಾನೆ? ನನ್ನ ಪ್ರಶ್ನೆ ಸರಿಯೋ ಇಲ್ಲವೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ನಾನೂ ಕರಸೇವಕ, ನನ್ನನ್ನೂ ಬಂಧಿಸಿ – ಅಭಿಯಾನ ಆರಂಭಿಸಿದ್ದ ಸುನಿಲ್‌ ಕುಮಾರ್‌ ವಶಕ್ಕೆ

    ಯಾರು ಏನೇ ಹೇಳಲಿ, ಗಾಂಧಿ ಮತ್ತು ನೆಹರೂ ಅವರಿಂದ ಮಾತ್ರ ನಮಗೆ ಸ್ವಾತಂತ್ರ್ಯ ಸಿಕ್ಕಿತು ಎಂಬುದು ಸತ್ಯ. ಗಾಂಧೀಜಿ 1947 ರಲ್ಲಿ ಹತ್ಯೆಯಾಗಲಿಲ್ಲ. ಆದರೆ ಅವರ ಮೇಲೆ ಮೊದಲ ದಾಳಿ ನಡೆದದ್ದು, 1935 ರಲ್ಲಿ. ಎರಡನೆಯದು ದಾಳಿ 1938 ರಲ್ಲಿ ನಡೆಯಿತು. ಮೂರನೇ ದಾಳಿ 1942 ರಲ್ಲಿ ನಡೆಯಿತು ಎಂದು ತಿಳಿಸಿದ್ದಾರೆ.

    ಅಷ್ಟಕ್ಕೂ ಅವರ ಮೇಲೆ ಯಾಕೆ ಇಷ್ಟು ಬಾರಿ ದಾಳಿ ಮಾಡಿದರು? ಗಾಂಧೀಜಿ ವ್ಯಾಪಾರಿ ಮತ್ತು ಒಬಿಸಿ ಆಗಿದ್ದರಿಂದ ಅವರ ಮೇಲೆ ದಾಳಿ ನಡೆಸಲಾಯಿತು. ಅಂತಹ ದೊಡ್ಡ ಸ್ವಾತಂತ್ರ್ಯ ಚಳವಳಿಯ ನಾಯಕ ಒಬಿಸಿ ಆಗಿರುವುದು ಅವರಿಗೆ (ಆರ್‌ಎಸ್‌ಎಸ್) ಸಹಿಸಲಾಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಟೀ ಕುಡಿದಿದ್ದ ಉಜ್ವಲ ಫಲಾನುಭವಿ ಮಹಿಳೆಯ ಮನೆಗೆ‌ ಗಿಫ್ಟ್‌ ಜೊತೆ ಮೋದಿ ಪತ್ರ

    ಜನರಲ್ಲಿ ಐತಿಹಾಸಿಕ ಘಟನೆಗಳ ಅರಿವಿನ ಕೊರತೆಯಿದೆ. ಗಾಂಧೀಜಿಯವರ ಹತ್ಯೆಯ ಹಿಂದಿನ ನಿಜವಾದ ಕಾರಣ ಜಾತೀಯತೆ. ನೀವು ಈ ಇತಿಹಾಸವನ್ನು ಓದುವುದಿಲ್ಲ. ಅದನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ ಎಂದು ತಿಳಿಸಿದ್ದಾರೆ.

  • ನಮ್ಮ ಪಕ್ಷದೊಳಗೆ ರಾಮ, ಹಿಂದೂಗಳನ್ನು ದ್ವೇಷಿಸುವ ನಾಯಕರಿದ್ದಾರೆ: ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

    ನಮ್ಮ ಪಕ್ಷದೊಳಗೆ ರಾಮ, ಹಿಂದೂಗಳನ್ನು ದ್ವೇಷಿಸುವ ನಾಯಕರಿದ್ದಾರೆ: ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ

    ನವದೆಹಲಿ: ನಮ್ಮ ಪಕ್ಷದೊಳಗೆ ರಾಮ (Rama) ಮತ್ತು ಹಿಂದೂಗಳನ್ನು (Hindu) ದ್ವೇಷಿಸುವ ನಾಯಕರು ಇದ್ದಾರೆ ಎಂದು ಉತ್ತರ ಪ್ರದೇಶದ ಕಾಂಗ್ರೆಸ್ (Congress) ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಹೇಳಿದ್ದಾರೆ.

    ಕಾಂಗ್ರೆಸ್‌ನಲ್ಲಿ ರಾಮನನ್ನು ದ್ವೇಷಿಸುವ ಕೆಲವು ನಾಯಕರು ಇದ್ದಾರೆ ಎಂದು ನನಗೆ ಅನಿಸಿದೆ. ಈ ನಾಯಕರು ಹಿಂದೂ ಪದವನ್ನು ದ್ವೇಷಿಸುತ್ತಾರೆ. ಅವರು ಹಿಂದೂ ಧಾರ್ಮಿಕ ಗುರುಗಳನ್ನು ಅವಮಾನಿಸಲು ಬಯಸುತ್ತಾರೆ. ಅವರು ಪಕ್ಷದಲ್ಲಿ ಹಿಂದೂ ಧಾರ್ಮಿಕ ಗುರುಗಳು ಇರುವುದನ್ನು ಇಷ್ಟಪಡುವುದಿಲ್ಲ ಎಂದು ತಿಳಿಸಿದರು.

    ಆಚಾರ್ಯ ಕೃಷ್ಣಂ ಅವರ ಅಭಿಪ್ರಾಯಗಳು ಅಯೋಧ್ಯೆಯ ರಾಮಮಂದಿರ (Ram Mandir) ಲೋಕಾರ್ಪಣೆ ಸಮಾರಂಭಕ್ಕೆ ಕೇವಲ ಎರಡು ತಿಂಗಳ ಮೊದಲು ಬಂದಿರುವುದು ವಿಶೇಷ.  ಇದನ್ನೂ ಓದಿ: ನಾನು‌ ಪಕ್ಷದ ಶಿಸ್ತಿನ ಸಿಪಾಯಿ, ಬೆಂಗ್ಳೂರು ಉತ್ತರಕ್ಕೆ ನನ್ನ ಪುತ್ರನಿಗೆ ಟಿಕೆಟ್ ಕೊಟ್ರೆ ಕೆಲಸ ಮಾಡ್ತೀನಿ: ಅಶೋಕ್‌

    ಸನಾತನ ಧರ್ಮದ ಕುರಿತು ಉದಯನಿಧಿ ಸ್ಟಾಲಿನ್ (Udhayanidhi Stalin) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸನಾತನ ಧರ್ಮದ (Sanatan Dharm) ವಿರುದ್ಧ ಮಾತನಾಡುವವರು ಭಾರತದ ವಿರುದ್ಧವೂ ಇರುತ್ತಾರೆ. ಏಕೆಂದರೆ ಈ ರಾಷ್ಟ್ರವನ್ನು ಸನಾತನಿಗಳು ಇಲ್ಲದೇ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಸನಾತನದ ವಿರುದ್ಧ ಮಾತನಾಡುವವರು ರಾವಣನ ವಂಶಸ್ಥರು ಮತ್ತು ಅವರ ವಿನಾಶ ಖಚಿತ ಎಂದು ಅಭಿಪ್ರಾಯಪಟ್ಟರು.

    ಸನಾತನ ಸಂಸ್ಥೆಯ ವಿರುದ್ಧ ಮಾತನಾಡುವ ರಾಜಕೀಯ ಪಕ್ಷದ ನಾಯಕರನ್ನು INDIA ಬಣದಿಂದ ಹೊರಹಾಕಬೇಕು ಎಂದು ನಾನು ಮೈತ್ರಿಕೂಟದ ಎಲ್ಲಾ ಹಿರಿಯ ನಾಯಕರಲ್ಲಿ ಮನವಿ ಮಾಡಲು ಬಯಸುತ್ತೇನೆ. ಸನಾತನ ಧರ್ಮವನ್ನು ವಿರೋಧಿಸುವುದನ್ನು ನಿಲ್ಲಿಸುವ ನಿರ್ಧಾರವನ್ನು ತೆಗೆದುಕೊಳ್ಳುವ ಸಮಯ ಬಂದಿದೆ ಎಂದು ಹೇಳಿದರು.

    ಕಳೆದ ತಿಂಗಳು ಲಕ್ನೋದ ಕಾಂಗ್ರೆಸ್ ನಾಯಕ ಅವರು ಬಿಎಸ್ಪಿ ವರಿಷ್ಠೆ ಮಾಯಾವತಿ (Mayawati) ಅವರನ್ನು ಮೈತ್ರಿಗೆ ಆಹ್ವಾನಿಸುವಂತೆ INDIA ನಾಯಕರಿಗೆ ಸಲಹೆ ನೀಡಿದ್ದರು. ಮಾಯಾವತಿ ಅವರನ್ನು ಒಕ್ಕೂಟಕ್ಕೆ ಸೇರಿಸದೇ ಇದ್ದರೆ ಬಿಜೆಪಿಯನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದರು.

     

    ಉತ್ತರ ಪ್ರದೇಶದಲ್ಲಿ ಮಾಯಾವತಿ 18%-22% ಮತದಾರರ ಮೇಲೆ ಪ್ರಭಾವ ಬೀರುವ ನಾಯಕಿಯಾಗಿದ್ದಾರೆ. ಮಾಯಾವತಿ ಇಲ್ಲದೆ INDIA ರಚನೆಯಾದರೆ ಅದನ್ನು ‘ಮಹಾಮೈತ್ರಿ’ ಎಂದು ಕರೆಯಲು ಸಾಧ್ಯವಿಲ್ಲ. ಬಿಜೆಪಿಯನ್ನು ಸೋಲಿಸಬೇಕಾದರೆ ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕದಳ, ಕಾಂಗ್ರೆಸ್ ಜೊತೆಗೆ ಮಾಯಾವತಿ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟಿದ್ದರು.

    ಆಚಾರ್ಯ ಪ್ರಮೋದ್ 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಪಡೆದು ಲಕ್ನೋದಿಂದ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ರಾಜನಾಥ್ ಸಿಂಗ್ ವಿರುದ್ಧ ಸೋತಿದ್ದರು.

  • ರಘು ಕೋವಿ ಚಿತ್ರದಲ್ಲಿ ಬಹುಭಾಷಾ ನಟ ಬಾಬಿ ಸಿಂಹ

    ರಘು ಕೋವಿ ಚಿತ್ರದಲ್ಲಿ ಬಹುಭಾಷಾ ನಟ ಬಾಬಿ ಸಿಂಹ

    ಕ್ಷಿಣ ಭಾರತೀಯ ಸಿನಿಮಾರಂಗದ ಖ್ಯಾತ ನಟ ಬಾಬಿ ಸಿಂಹ (Bobby Simha) ಮತ್ತೊಂದು ಕನ್ನಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ‘ಜಿಗರ್‌ಥಂಡ’ ಸಿನಿಮಾದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಈ ಪ್ರತಿಭಾವಂತ ಸ್ಟಾರ್ 777 ಚಾರ್ಲಿ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ್ದರು. ಇದೀಗ ಬಾಬಿ ಸಿಂಹ ರಘು ಕೋವಿ ನಿರ್ದೇಶನದಲ್ಲಿ ತಯಾರಾಗುತ್ತಿದೆ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

    ಬರಹಗಾರರಾಗಿ ಖ್ಯಾತಿ ಪಡೆದಿರುವ ರಾಜ್ಯ ಪ್ರಶಸ್ತಿ ವಿಜೇತ ರಘು ಕೋವಿ (Raghu Kovi) ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ‘ದಿಲ್ ಮಾರ್’ ಸಿನಿಮಾ ಮೂಲಕ ಹೀರೋ ಆಗಿ ಅದೃಷ್ಟ ಪರೀಕ್ಷೆಗಿಳಿದಿರುವ ರಾಮ್ ಗೆ ರಘು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊದಲ ಚಿತ್ರ ಬಿಡುಗಡೆಗೂ ಮುನ್ನವೇ ರಾಮ್ , ರಘು ಕೋವಿ ನಿರ್ದೇಶನದಲ್ಲಿ ನಟಿಸುತ್ತಿದ್ದು, ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ. ಹಂಸಲೇಖ ಕಥಾ ಕಣಜದಿಂದ ಸ್ಯಾಂಡಲ್ ವುಡ್ ಪರಿಚಿತರಾದ ರಘು ಕೋವಿ, ಕೃಷ್ಣಲೀಲಾ ಅತ್ಯುತ್ತಮ ಬರವಣಿಗೆಗೆ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ರಾಜೇಂದ್ರ ಸಿಂಗ್ ಬಾಬು, ಎಸ್.ಎಸ್. ರಾಜಶೇಖರ್ ,  ಕೆ.ವಿ.ರಾಜ್, ಶಶಾಂಕ್, ಉಪೇಂದ್ರ ಸಿನಿಮಾಗಳಲ್ಲಿ ಕೋ ಡೈರೆಕ್ಟರ್ ಆಗಿ ರಘು ಕೋವಿ ದುಡಿದಿದ್ದಾರೆ. ಇದೀಗ ಅವರು ಡೈರೆಕ್ಟರ್ ಕ್ಯಾಪ್ ತೊಟ್ಟು ನಿರ್ದೇಶನದ ಅಖಾಡಕ್ಕಿಳಿದಿದ್ದಾರೆ.

    ಕನ್ನಡ, ತೆಲುಗು, ತಮಿಳು ಹಾಗೂ ಹಿಂದಿ ಭಾಷೆಯಲ್ಲಿ ಮೂಡಿ ಬರ್ತಿರುವ ಈ ಸಿನಿಮಾದಲ್ಲಿ ರಾಮ್ ಹೀರೋ ಆಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಬಾಬಿ ಸಿಂಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಅವರ ಪಾತ್ರ ಏನೂ ಅನ್ನೋದನ್ನು‌ ಚಿತ್ರತಂಡ ಸಸ್ಪೆನ್ಸ್ ಆಗಿ ಇಟ್ಟಿದೆ. ಶೂಟಿಂಗ್ ಹಂತದಲ್ಲಿರುವ ಈ ಸಿನಿಮಾಗೆ ಓ ಮೈ ಗಾಡ್-2 ನಿರ್ಮಾಪಕ ನಿಕುಲ್ ದೇಸಾಯಿ ಕನ್ನಡ ನಿರ್ಮಾಣ ಸಂಸ್ಥೆ ಜೊತೆ ಕೈ ಜೋಡಿಸಿ ಹಣ ಹಾಕುತ್ತಿದ್ದಾರೆ.

    ನೈಜ ಘಟನೆಯಾಧಾರಿತ ಕಥಾಹಂದರ ಹೊಂದಿರುವ  ಸಿನಿಮಾಗೆ ಯುವರತ್ನ, ರಾಜಕುಮಾರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಖ್ಯಾತಿಯ ಎ.ವೆಂಕಟೇಶ್ ಅಂಗುರಾಜ್ ಛಾಯಾಗ್ರಹಣ ಚಿತ್ರಕ್ಕಿರಲಿದೆ. ಸದ್ಯ ಶೂಟಿಂಗ್ ನಲ್ಲಿ‌ ನಿರತರಾಗಿರುವ ಚಿತ್ರತಂಡ ಶೀಘ್ರದಲ್ಲಿಯೇ ಟೈಟಲ್ ರಿವೀಲ್ ಮಾಡಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಳಗಾವಿಯಲ್ಲಿ ಕಣ್ಮರೆಯಾಗಿದ್ದ ಫೈಟರ್ ರಾಕಿ ಟಗರು‌ ಪತ್ತೆ!

    ಬೆಳಗಾವಿಯಲ್ಲಿ ಕಣ್ಮರೆಯಾಗಿದ್ದ ಫೈಟರ್ ರಾಕಿ ಟಗರು‌ ಪತ್ತೆ!

    ಬೆಳಗಾವಿ: ಟಗರು ಕಾಳಗದಲ್ಲಿ (Ram Fighting) ಮಿಂಚುತ್ತಿದ್ದ ರಾಕಿ ಹೆಸರಿನ ಫೈಟರ್‌ ಟಗರನ್ನು (Rocky Tagaru) ಕಳ್ಳತನ ಮಾಡಿ ಮಟನ್ ಮಾರುಕಟ್ಟೆಯಲ್ಲಿ ಖದೀಮರು ಬಿಟ್ಟು ಹೋದ ಘಟನೆ ತಳಕಟನಾಳ ಗ್ರಾಮದಲ್ಲಿ ನಡೆದಿದೆ.

    ಬೆಳಗಾವಿ (Belagavi) ಜಿಲ್ಲೆಯ ಗೋಕಾಕ್‌ (Gokak) ತಾಲೂಕಿನ ತಳಕಟನಾಳ ಗ್ರಾಮದ ಅಜಯ್ ಕಣಿಲ್ದಾರ್ ಎಂಬುವವರಿಗೆ ಸೇರಿದ ಐದು ವರ್ಷದ ಟಗರು ಶನಿವಾರ ಕಳ್ಳತನವಾಗಿತ್ತು. ಈ ಸಂಬಂಧ ಟಗರು ಮಾಲೀಕರು ಗೋಕಾಕ್‌ ತಾಲೂಕಿನ ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.   ಇದನ್ನೂ ಓದಿ: ಬೆಂಗಳೂರಿನ ಜಯನಗರದ BMTC ಡಿಪೋಗೆ ತಲೈವಾ ಸರ್ಪ್ರೈಸ್ ವಿಸಿಟ್

    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದರು. ತಡರಾತ್ರಿ ಗೋಕಾಕ್‌ ಮಟನ್ ಮಾರುಕಟ್ಟೆಯಲ್ಲಿ ಟಗರು ಪತ್ತೆಯಾಗಿದೆ. ಗೆಳೆಯರು ನೀಡಿದ ಮಾಹಿತಿಯ ಮೇರೆಗೆ ರಾಕಿಯನ್ನು ಮನೆಗೆ ವಾಪಸ್ ತಂದಿದ್ದು ಟಗರು ಮಾಲೀಕರು ನಿಟ್ಟುಸಿರು ಬಿಟ್ಟಿದ್ದಾರೆ.

    15 ದಿನದ ಹಿಂದೆ ರಾಕಿಗೆ  2.50 ಲಕ್ಷ ರೂ. ನೀಡುತ್ತೇವೆ. ನಮಗೆ ಕೊಡಿ ಎಂದು ಟಗರು ಪ್ರಿಯರು ಬೇಡಿಕೆ ಇಟ್ಟಿದ್ದರು. ಯಾವುದೇ ಸ್ಥಳದಲ್ಲಿ ಟಗರು ಕಾಳಗ ನಡೆದರೂ ಗೆಲ್ಲುತ್ತಿದ್ದ ರಾಕಿಯನ್ನು ಕೊಡಲು ಟಗರು ಮಾಲೀಕರು ಹಿಂದೇಟು ಹಾಕಿದ್ದರು.  ಟಗರು ಗೆಲ್ಲುವುದನ್ನು ನೋಡಿ ಸಹಿಸಲಾಗದ ವಿರೋಧಿಗಳು ಮನೆಯಲ್ಲಿ ಕಟ್ಟಿದ್ದ ವೇಳೆ ರಾಕಿಯನ್ನು ಕಳ್ಳತನ ಮಾಡಿರಬಹುದು ಎಂಬ ಶಂಕೆ ಈಗ ವ್ಯಕ್ತವಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

    ‘ಕೆಜಿಎಫ್’ ರೈಟರ್ ಮೂಲಕ ಕನ್ನಡಕ್ಕೆ ಬಂದ ಬೋಲ್ಡ್ ಬ್ಯೂಟಿ

    ಕೆಜಿಎಫ್ ಸಿನಿಮಾ ರೈಟರ್ ಚಂದ್ರಮೌಳಿ (Chandramouli) ಇದೀಗ ಡೈರೆಕ್ಟರ್ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ‘ದಿಲ್ ಮಾರ್’ (Dil Mar) ಸಿನಿಮಾ ಮೂಲಕ ಮೊದಲ ಬಾರಿಗೆ ಅವರು ನಿರ್ದೇಶಕರಾಗಿ ಹೆಜ್ಜೆ ಇಡುತ್ತಿದ್ದಾರೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಸಿನಿಮಾದಲ್ಲಿ   ಮಾಸ್ ಮಹಾರಾಜ ರವಿತೇಜಾ ನಟನೆಯ ಕಿಲಾಡಿ ಚಿತ್ರದಲ್ಲಿ ನಟಿಸಿದ್ದ ಬೋಲ್ಡ್ ಬ್ಯೂಟಿ ಡಿಂಪಲ್ ಹಯಾತಿ (Dimple Hayathi) ನಾಯಕಿಯಾಗಿ ನಟಿಸಿದ್ದಾರೆ.

    ಹೀರೋಯಿನ್ ಆಗಿ ಡಿಂಪಲ್ ಗೆ ಇದು ಮೊದಲ ಚಿತ್ರವಾಗಿದ್ದು, ಒಂದೊಳ್ಳೆ ಪಾತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ಹೊಸ ಬಗೆಯ ಪಾತ್ರದ ಮೂಲಕ ಅವರು ಪ್ರೇಕ್ಷಕರ ಮುಂದೆ ನಿಲ್ಲಲಿದ್ದಾರೆ. ಡಿಂಪಲ್ ನಾಯಕಿಯಾದರೆ, ಯುವ ಪ್ರತಿಭೆ ರಾಮ್ (Ram)ನಾಯಕನಾಗಿ ಬಣ್ಣ ಹಚ್ಚಿದ್ದು, ಡೈಲಾಗ್ ಕಿಂಗ್ ಸಾಯಿ ಕುಮಾರ್ ವಿಲನ್ ಆಗಿ ಘರ್ಜಿಸಿದ್ದಾರೆ.   ಇದನ್ನೂ ಓದಿ:ನನ್ನ ಜೀವನದಲ್ಲಿ ಇದೊಂದು ಸಿನಿಮಾ ಕಪ್ಪು ಚುಕ್ಕೆ: ಹಿರಿಯ ನಟ ದತ್ತಣ್ಣ

    ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಮೂಡಿ ಬರ್ತಿರುವ ದಿಲ್ ಮಾರ್ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯದಲ್ಲಿಯೇ ಹಾಡು ಬಿಡುಗಡೆಯಾಗಲಿದೆ. ಇದಾದಾ ಬಳಿಕ ಟ್ರೇಲರ್ ರಿಲೀಸ್ ಮಾಡುವ ಮೂಲಕ ಪ್ರಮೋಷನ್ ಗೆ ಕಿಕ್ ಸ್ಟಾರ್ಟ್ ಕೊಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ.

    ಈ ಸಿನಿಮಾದಲ್ಲಿ ನುರಿತ ತಂತ್ರಜ್ಞಾನ ತಂಡವೇ ಕೆಲಸ ಮಾಡಿದ್ದು, ಅರ್ಜುನ್ ರೆಡ್ಡಿ ಖ್ಯಾತಿಯ ರಾದನ್ ಸಿನಿಮಾಕ್ಕೆ ಸಂಗೀತ ನೀಡಿದ್ದಾರೆ. ಕೆ ಮಹೇಶ್ ಮತ್ತು ನಾಗರಾಜ್ ಭದ್ರಾವತಿ ಬಂಡವಾಳ ಹೂಡಿದ್ದಾರೆ. ಯುವಕರನ್ನೇ ಗುರಿಯಾಗಿಸಿಕೊಂಡು ಈ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ ಎನ್ನುತ್ತಿದೆ ಚಿತ್ರತಂಡ.

  • ರಾಮ ಹಿಂದೂಗಳಿಗಷ್ಟೇ ಅಲ್ಲ, ಎಲ್ಲರಿಗೂ ದೇವರು: ಫಾರೂಕ್ ಅಬ್ದುಲ್ಲಾ

    ರಾಮ ಹಿಂದೂಗಳಿಗಷ್ಟೇ ಅಲ್ಲ, ಎಲ್ಲರಿಗೂ ದೇವರು: ಫಾರೂಕ್ ಅಬ್ದುಲ್ಲಾ

    ಶ್ರೀನಗರ: ಭಗವಂತ ಶ್ರೀರಾಮ (Ram) ಕೇವಲ ಹಿಂದೂಗಳಿಗಷ್ಟೇ (Hindu) ದೇವರಲ್ಲ. ಧರ್ಮದ ಹೊರತಾಗಿ ಆತನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬರಿಗೂ ದೇವರು ಎಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಮಾಜಿ ರಾಷ್ಟ್ರೀಯತಾವಾದಿ ಕಾಂಗ್ರೆಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ (Farooq Abdullah) ಹೇಳಿದ್ದಾರೆ.

    ಗುರುವಾರ ಉದಯಪುರದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ಪಕ್ಷ ಅಧಿಕಾರದಲ್ಲಿ ಉಳಿಯಲು ರಾಮನ ಹೆಸರನ್ನು ಮಾತ್ರ ಬಳಸುತ್ತಿದೆ. ಆದರೆ ರಾಮ ಕೇವಲ ಹಿಂದೂಗಳ ದೇವರಲ್ಲ ಎಂದು ಕಿಡಿಕಾರಿದ್ದಾರೆ.

    ರಾಮ ಕೇವಲ ಹಿಂದೂಗಳ ದೇವರಲ್ಲ. ದಯವಿಟ್ಟು ಈ ಕಲ್ಪನೆಯನ್ನು ನಿಮ್ಮ ಮನಸ್ಸಿನಿಂದ ಕಿತ್ತು ಹಾಕಿ. ಭಗವಂತ ರಾಮ ಪ್ರತಿಯೊಬ್ಬನಿಗೂ ದೇವರು. ಅದು ಮುಸ್ಲಿಂ ಆಗಿರಲಿ ಅಥವಾ ಕಿಶ್ಚಿಯನ್ ಆಗಿರಲಿ, ಅಮೆರಿಕನ್ ಅಥವಾ ರಷ್ಯನ್ ಆಗಿರಲಿ. ಆತನ ಮೇಲೆ ನಂಬಿಕೆಯಿರುವ ಪ್ರತಿಯೊಬ್ಬರಿಗೂ ಆತ ದೇವರಾಗುತ್ತಾನೆ ಎಂದು ಹೇಳಿದರು. ಇದನ್ನೂ ಓದಿ: ನನ್ನನ್ನು ಶೂರ್ಪನಖಿ ಎಂದ ಮೋದಿ ವಿರುದ್ಧ ಮಾನನಷ್ಟ ಕೇಸ್‌ ಹಾಕ್ತೀನಿ: ರೇಣುಕಾ ಚೌಧರಿ

    ನಾವು ರಾಮನ ಭಕ್ತರು ಎಂದು ನಿಮ್ಮ ಬಳಿಗೆ ಬರುವವರು ಮೂರ್ಖರು. ಅವರು ರಾಮನ ಹೆಸರಿನಲ್ಲಿ ಲಾಭ ಪಡೆದುಕೊಳ್ಳಲು ಬಯಸುತ್ತಾರೆ. ಅವರಿಗೆ ರಾಮನ ಮೇಲೆ ಪ್ರೀತಿ ಇರುವುದಿಲ್ಲ. ಬದಲಿಗೆ ಅಧಿಕಾರದ ಮೇಲೆ ಇರುತ್ತದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಘೋಷಣೆಯಾದಾಗ ಅವರು ಸಾಮಾನ್ಯ ಜನರ ಗಮನ ಬೇರೆಡೆಗೆ ತಿರುಗಿಸಲು ರಾಮ ಮಂದಿರವನ್ನು ಉದ್ಘಾಟಿಸುತ್ತಿದ್ದಾರೆ ಎಂಬುದು ತಿಳಿದುಬರುತ್ತದೆ. ಆದ್ದರಿಂದ ದಯವಿಟ್ಟು ಜನರ ನಡುವೆ ಹೋಗಿ ದ್ವೇಷದ ಪ್ರಚಾರವನ್ನು ನಿಲ್ಲಿಸಲು ಮನವಿ ಮಾಡುತ್ತೇವೆ ಎಂದಿದ್ದಾರೆ.

    ಕಳೆದ ವರ್ಷ ನವೆಂಬರ್‌ನಲ್ಲೂ ಅಬ್ದುಲ್ಲಾ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ರಾಮ ಪ್ರತಿಯೊಬ್ಬರಿಗೂ ದೇವರು. ಕೇವಲ ಹಿಂದೂಗಳಿಗಲ್ಲ ಎಂದಿದ್ದರು. ಇದನ್ನೂ ಓದಿ: ಇಂದಿನಿಂದ ರಂಜಾನ್ ಉಪವಾಸ ಆಚರಣೆ – ಪ್ರಧಾನಿ ಮೋದಿ ವಿಶ್

  • ಕೃಷ್ಣನ ಶ್ಲೋಕವನ್ನೇ  ಚಿತ್ರದ ಹೆಸರಾಗಿ ಬಳಸಿದ ನಿರ್ದೇಶಕ ರಾಮ್

    ಕೃಷ್ಣನ ಶ್ಲೋಕವನ್ನೇ ಚಿತ್ರದ ಹೆಸರಾಗಿ ಬಳಸಿದ ನಿರ್ದೇಶಕ ರಾಮ್

    ಹಾಭಾರತದ ಭಗವದ್ಗಿತೆಯ ನಾಲ್ಕನೇ ಅಧ್ಯಾಯದಲ್ಲಿ ಬರುವ ’ನಹಿ ಜ್ಞಾನೇನ ಸದೃಶಂ’ ಶ್ಲೋಕವನ್ನು ಕೃಷ್ಣನು ಅರ್ಜುನನಿಗೆ ಯುದ್ದ ಪ್ರಾರಂಭವಾಗುವ ಮುನ್ನ ಹೇಳುತ್ತಾರೆ. ಈಗ ಇದೇ ಹೆಸರಿನಲ್ಲಿ ಮಕ್ಕಳ ಚಿತ್ರವೊಂದು ಸದ್ದಿಲ್ಲದೆ ತನ್ನೆಲ್ಲಾ ಕೆಲಸಗಳನ್ನು ಮುಗಿಸಿಕೊಂಡು ಪ್ರಚಾರದ ಹಂತವಾಗಿ ಪೋಸ್ಟರ್ ಬಿಡುಗಡೆ ಸಮಾರಂಭವನ್ನು  ಏರ್ಪಾಟು ಮಾಡಿಕೊಂಡಿದ್ದರು. ಶಿಕ್ಷಣ ಜತೆಗೆ ಮನರಂಜನೆ ಅಂತ ಇಂಗ್ಲಿಷ್ ಅಡಿಬರಹವಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್ ಮತ್ತು ಪದಾಧಿಕಾರಿಗಳಾದ ಸುಂದರರಾಜ್, ಕುಶಾಲ್, ಟಿ.ಪಿ.ಸಿದ್ದರಾಜು ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಅಮೆರಿಕಾ ನಿವಾಸಿ ಟೆಕ್ಕಿ ಕನ್ನಡಿಗ ರಾಮ್ ಬಿಡುವು ಮಾಡಿಕೊಂಡು ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವ ಜತೆಗೆ ಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇನ್ನು ನಿರ್ಮಾಣವೆಂದು ಗೆಳಯರೇ ಸೇರಿಕೊಂಡು ಬಂಡವಾಳ ಹೂಡಿದ್ದಾರೆ. ಅದಕ್ಕಾಗಿ ಫ್ರೆಂಡ್ಸ್ ಫಂಡಡ್ ಫಿಲಿಂಸ್ ಎಂದು ಹೇಳಿಕೊಂಡಿದ್ದಾರೆ.

    ಸಿನಿಮಾದ ಕುರಿತು ಹೇಳುವುದಾದರೆ ಆಶ್ರಮ ಸೇರಲು ಅಮೇರಿಕಾದಿಂದ ಬಂದ ರೋಬೊಟಿಕ್ ಇಂಜಿನಿಯರ್ ರಾಮ್, ಕಾರಣಾಂತರಗಳಿಂದ ಬಳ್ಳಾರಿಯ ಬೆಸ್ಟ್ ಶಾಲೆಯಲ್ಲಿ ತಾತ್ಕಾಲಿಕ ಗಣಿತದ ಶಿಕ್ಷಕನಾಗಿ ಸೇರುತ್ತಾನೆ. ಶಾಲೆಯಲ್ಲಿ ತನ್ನದೆ ಆದ ವಿಭಿನ್ನ ರೀತಿಯ ಶಿಕ್ಷಣ ಕೊಡುವ ಶೈಲಿಯಿಂದ ಮಕ್ಕಳು, ಅವರ ಪೋಷಕರು ಹಾಗೂ ಇತರೆ ಶಿಕ್ಷಕರೊಂದಿಗೆ ಹಲವು ಘರ್ಷಣೆಗಳುಂಟಾಗಿ ಅಪವಾದಗಳನ್ನು ಎದುರಿಸುತ್ತಾನೆ. ಈ ಅಪಾರ್ಥಗಳನ್ನು ದೂರ ಮಾಡಲು ಮಕ್ಕಳಿಗೆ ನಿಧಿ ಸಂಗ್ರಹಿಸುವ ಆಟವನ್ನು ಆಡಿಸಿ ಅದರ ಮೂಲಕ ಜ್ಘಾನದ ಪ್ರಾಮುಖ್ಯತೆ ಹಾಗೂ ಅದರ ಉಪಯೋಗದ ಮಹತ್ವವನ್ನು ಎಲ್ಲರಿಗೂ ತಿಳಿಸುವ ತನ್ನ ಉದ್ದೇಶವನ್ನು ವ್ಯಕ್ತಪಡಿಸುತ್ತಾನೆ. ಇದನ್ನೂ ಓದಿ:`ಕೆಜಿಎಫ್ 2’ಗೆ ಸೆಡ್ಡು ಹೊಡೆದ ಕಾಂತಾರ: 100 ಕೋಟಿ ಕಲೆಕ್ಷನ್‌ನತ್ತ ಸಿನಿಮಾ

    ತಾರಗಣದಲ್ಲಿ ಚಿಣ್ಣರುಗಳಾದ ವೇದಿಕಾ, ಅಭಪಾಲಿ, ಮಹೇಶ್.ಎಸ್.ಪಿ, ಬೆಟ್ಟೇಶ್, ಶರತ್, ಗಗನ, ಶ್ರೀನಿಧಿ, ಲಿಂಗೇಶ್ ಇವರೊಂದಿಗೆ ಅರುಣಾಬಾಲರಾಜ್, ಎಸ್.ಪಿ.ಮಹೇಶ್ ರಾಘವೇಂದ್ರನಾಯಕ್, ವಾಸುದೇವಮೂರ್ತಿ ಮುಂತಾದವರು ನಟಿಸಿದ್ದಾರೆ. ಪ್ರಮೋದ್‌ಮರವಂತೆ ಸಾಹಿತ್ಯದ ಎರಡು ಗೀತೆಗಳಿಗೆ ಅರ್ಜುನ್‌ರಾಮು ಸಂಗೀತವಿದೆ. ಸಂಕಲನ ಶಿವಕುಮಾರ್, ಸಾಹಸ ಸುದರ್ಶನ್-ರಾಮ್, ನೃತ್ಯ ರಾಘವೇಂದ್ರ-ಶ್ವೇತಾ-ಜಗನ್-ರುತಿಕ್‌ರೋಷನ್ ಅವರದಾಗಿದೆ. ಸಂಪೂರ್ಣ ಚಿತ್ರೀಕರಣ ಬಳ್ಳಾರಿ ಸುತ್ತಮುತ್ತ ನಡೆಸಲಾಗಿದೆ. ಸೆನ್ಸಾರ್ ಮಂಡಳಿಯು ಪ್ರಶಂಸೆ ವ್ಯಕ್ತಪಡಿಸಿ ಮಕ್ಕಳ ಚಿತ್ರವೆಂದು ಪರಿಗಣಿಸಿ ’ಯು’ ಪ್ರಮಾಣಪತ್ರ ನೀಡಿದೆ. ಅಂದಹಾಗೆ ಸಿನಿಮಾವು ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

  • ರಾಮ ದೇವರಲ್ಲ, ನನಗೆ ನಂಬಿಕೆಯೂ ಇಲ್ಲ: ಬಿಹಾರ್‌ ಮಾಜಿ ಸಿಎಂ

    ರಾಮ ದೇವರಲ್ಲ, ನನಗೆ ನಂಬಿಕೆಯೂ ಇಲ್ಲ: ಬಿಹಾರ್‌ ಮಾಜಿ ಸಿಎಂ

    ಪಟ್ನಾ: ರಾಮ ದೇವರಲ್ಲ, ರಾಮನ ಮೇಲೆ ನನಗೆ ನಂಬಿಕೆಯೂ ಇಲ್ಲ ಎಂದು ಬಿಹಾರ್‌ ಮಾಜಿ ಮುಖ್ಯಮಂತ್ರಿ ಜಿತನ್‌ ರಾಮ್‌ ಮಾನ್ಜಿ ಹೇಳಿದ್ದಾರೆ.

    ಹಿಂದೂಸ್ತಾನ್ ಅವಾಮ್ ಮೋರ್ಚಾ (ಹೆಚ್‌ಎಎಂ) ಮುಖ್ಯಸ್ಥ ಮಾನ್ಜಿ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಇದನ್ನೂ ಓದಿ: ಜೆ‌ಎನ್‌ಯು ಕ್ಯಾಂಪಸ್ ಬಳಿ ಕೇಸರಿ ಧ್ವಜ ಹಾರಿಸಿದ ಹಿಂದೂ ಸೇನೆ

    RAMANAVAMI

    ತುಳಸೀದಾಸ್‌ ಮತ್ತು ವಾಲ್ಮೀಕಿ ಅವರು ತಮ್ಮ ಸಂದೇಶಗಳನ್ನು ಹೇಳಲು ರಾಮ ಎನ್ನುವ ಪಾತ್ರವನ್ನು ಸೃಷ್ಟಿಸಿದ್ದಾರೆ. ಅವರು ಬರೆದಿರುವ ರಾಮಾಯಣ ಮಹಾಕಾವ್ಯದಲ್ಲಿ ಉತ್ತಮ ಅಂಶಗಳು ಇವೆ. ಅದರ ಮೇಲೆ ನನಗೆ ನಂಬಿಕೆ ಇದೆ. ನನಗೆ ತುಳಸೀದಾಸ್‌ ಮತ್ತು ವಾಲ್ಮೀಕಿ ಮೇಲೆ ನಂಬಿಕೆ ಇದೆಯೇ ಹೊರತು ರಾಮನಲ್ಲಲ್ಲ ಎಂದು ಮಾನ್ಜಿ ತಿಳಿಸಿದ್ದಾರೆ.

    ಈ ವಿಶ್ವದಲ್ಲಿರುವುದು ಎರಡೇ ಜಾತಿ. ಶ್ರೀಮಂತ ಮತ್ತು ಬಡವ ಜಾತಿ. ಆದರೆ ನಮ್ಮಲ್ಲಿ ದಲಿತರ ವಿಚಾರವಾಗಿ ಬ್ರಾಹ್ಮಣರು ತಾರತಮ್ಯ ಮಾಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ನಂತರ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕೈಯಲ್ಲಿ ‘ಡೆಲ್ಲಿ ಫೈಲ್ಸ್’

    ಶಬರಿ ಕೊಟ್ಟ ರುಚಿಯ ಹಣ್ಣನ್ನು ರಾಮ ತಿಂದನು ಎಂಬುದು ನಾವು ನಿತ್ಯ ಕೇಳುವ ಕಥೆ. ನಾವು ಕಚ್ಚಿದ ಹಣ್ಣನ್ನು ನೀವು ತಿನ್ನುವುದಿಲ್ಲ. ಆದರೆ ನಾವು ಮುಟ್ಟಿದ್ದನ್ನು ತಿನ್ನುತ್ತೀರಿ ಎಂದು ಚಾಟಿ ಬೀಸಿದ್ದಾರೆ.

    ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿ ಬಿಹಾರ್‌ನಲ್ಲಿ ಬಿಜೆಪಿ, ಜೆಡಿ(ಯು), ಹೆಚ್‌ಎಎಂ, ವಿಐಪಿ ಪಕ್ಷಗಳು ಮೈತ್ರಿ ಸರ್ಕಾರ ಆಡಳಿತ ನಡೆಸುತ್ತಿದೆ. ಮಾನ್ಜಿ ಅವರ ಪುತ್ರ ಸಂತೋಷ್‌ ಮಾನ್ಜಿ ಅವರು ನಿತೀಶ್‌ ಕುಮಾರ್‌ ನೇತೃತ್ವದ ಬಿಹಾರ್‌ ಸಂಪುಟದ ಸಚಿವರಾಗಿದ್ದಾರೆ. ಇದನ್ನೂ ಓದಿ: ಮುಸ್ಲಿಮರ ಮನೆ, ಬದುಕು ಕಸಿಯಲು ಬಿಜೆಪಿ ನಾಯಕರಲ್ಲೇ ಪೈಪೋಟಿ: ಮುಫ್ತಿ