Tag: ram navami

  • ಕಾಶಿಯಲ್ಲಿ ಮುಸ್ಲಿಂ ಮಹಿಳೆಯರಿಂದ ʻಶ್ರೀರಾಮ ಆರತಿʼ – ಏಕತೆ ಸಂದೇಶ ಸಾರಿದ ರಾಮನವಮಿ ಆಚರಣೆ

    ಕಾಶಿಯಲ್ಲಿ ಮುಸ್ಲಿಂ ಮಹಿಳೆಯರಿಂದ ʻಶ್ರೀರಾಮ ಆರತಿʼ – ಏಕತೆ ಸಂದೇಶ ಸಾರಿದ ರಾಮನವಮಿ ಆಚರಣೆ

    – ಶ್ರೀರಾಮನ ಶ್ಲೋಕ ಪಠಿಸಿ ಆರತಿ ಬೆಳಗಿದ ಮುಸ್ಲಿಂ ಮಹಿಳೆಯರು

    ಲಕ್ನೋ: ಭಾರತೀಯ ಸಂಸ್ಕೃತಿಯ ಬುನಾದಿಯೇ ರಾಮಾಯಣ ಮಹಾಕಾವ್ಯ. ಯುಗಯುಗಾಂತರಗಳಿಂದ ಧರ್ಮದ ಬೇರಾಗಿ, ಜನಪದ ಜೀವನ ಸೂತ್ರವಾಗಿ, ಭರತಖಂಡದ ಮಾರ್ಗದರ್ಶಿಯಾಗಿದೆ. ರಾಮನ ಆದರ್ಶ, ಲಕ್ಷ್ಮಣನ ತ್ಯಾಗ, ಸೀತೆಯ ನಿಷ್ಠೆ, ಹನುಮಂತನ ಸ್ವಾಮಿ ಭಕ್ತಿ, ರಾಮರಾಜ್ಯದ ಕನಸುಗಳು ಇಂದಿಗೂ ಭಾರತೀಯ ವಿಚಾರಧಾರೆಯ ಸ್ಪೂರ್ತಿಸೆಲೆಯಾಗಿದೆ. ಹಾಗಾಗಿಯೇ ಪ್ರತಿ ವರ್ಷ ರಾಮನವಮಿ ಆಚರಣೆ ಮಾಡಲಾಗುತ್ತದೆ. ಇಂತಹ ಹಬ್ಬಗಳ ಆಚರಣೆಗಳಿಗೆ ಯಾವುದೇ ಧರ್ಮ, ಜಾತಿಯ ಭೇದವಿಲ್ಲ. ಅದರಲ್ಲೂ ಭಾರತದಲ್ಲಿ ವಿವಿಧ ಧರ್ಮದ ಜನ ಕೂಡ ಹಬ್ಬ ಆಚರಣೆ ಮಾಡುವ ಮೂಲಕ ಏಕತೆ, ಪ್ರೀತಿ ಸಂದೇಶ ಸಾರುತ್ತಿದ್ದಾರೆ. ಇದಕ್ಕೆ ವಾರಣಾಸಿಯಲ್ಲಿ (Varanasi) ನಡೆದ ಪ್ರಸಂಗ ಸಾಕ್ಷಿಯಾಗಿದೆ.

    RAMANAVAMI

    ಶ್ರೀರಾಮನವಮಿಯ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಯರು (Muslim Women) ಶ್ರೀರಾಮನ ಆರತಿ ನೆರವೇರಿಸುವ ಮೂಲಕ ಕೋಮು ಸೌಹಾರ್ಧತೆ, ಏಕತೆ, ಪ್ರೀತಿಯ ಸಂದೇಶ ಸಾರಿದ್ದಾರೆ. ಉರ್ದುವಿನಲ್ಲಿ ಬರೆದ ಶ್ಲೋಕಗಳನ್ನು ಪಠಣ ಮಾಡುತ್ತಾ ಬುರ್ಖಾ ಧರಿಸಿಯೇ ಶ್ರೀರಾಮನ ಆರತಿ ನೆರವೇರಿಸಿದ್ದಾರೆ. ಜೊತೆಗೆ ಜೈಶ್ರೀರಾಮ್‌ ಘೋಷಣೆಗಳನ್ನೂ ಕೂಗಿದ್ದಾರೆ. ಇದನ್ನೂ ಓದಿ: ಆಧ್ಯಾತ್ಮಿಕ ಶಕ್ತಿ ನೀಡುವ ಶ್ರೀರಾಮ ದೇವಾಲಯಗಳಿವು…!

    ಮುಸ್ಲಿಂ ಮಹಿಳಾ ಫೌಂಡೇಶನ್ ಮತ್ತು ವಿಶಾಲ ಭಾರತ ಸಂಸ್ಥಾನದ ಜಂಟಿ ಆಶ್ರಯದಲ್ಲಿ, ಲಮ್ಹಿಯ ಸುಭಾಷ್ ಭವನದಲ್ಲಿ ಶ್ರೀರಾಮ ಮಹಾ ಆರತಿ ಆಯೋಜಿಸಲಾಗಿತ್ತು. ಈ ವೇಳೆ ಮುಸ್ಲಿಂ ಮಹಿಳೆಯರು ಸಹ ರಂಗೋಲಿಯ ಮೇಲೆ ಜೈಶ್ರೀರಾಮ್‌ ಎಂದು ಬರೆದು ರಾಮಶ್ಲೋಕವನ್ನು ಪಠಿಸಿದ್ದಾರೆ. ಹಿಂದೂ ಮಹಿಳೆಯರೊಂದಿಗೆ ಸೇರಿ ರಾಮನವಮಿ ಆಚರಿಸುವ ಮೂಲಕ ಹಿಂದೂ-ಮುಸ್ಲಿಂ ಭಾಯಿ ಭಾಯಿ ಸಂದೇಶ ಸಾರಿದ್ದಾರೆ.  ಇದನ್ನೂ ಓದಿ: ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    ಈ ವೇಳೆ ವಿಶಾಲ ಭಾರತ ಸಂಸ್ಥಾನದ ಡಾ.ನಜ್ಮಾ ಪರ್ವೀನ್ ಮಾತನಾಡಿ, ರಾಮನವಮಿ ನಮ್ಮ ದೇಶದ ಸಂಸ್ಕೃತಿಯ ಭಾಗವಾಗಿದೆ. ಪ್ರೀತಿಯ ಸಂದೇಶ ನೀಡಲು, ಸಂಸ್ಕೃತಿ ಅನುಸರಿಸಲು ಏಕೆ ಹಿಂಜರಿಕೆ ಬೇಕು. ಈ ದೇಶ ನಮ್ಮದು, ನಮ್ಮ ಪೂರ್ವಜರು ಇಲ್ಲಿಂದಲೇ ಬಂದವರು, ರಾಮ್ ಜಿ ಕೂಡ ನಮ್ಮವರೇ. ಅವರ ಆರತಿ ಮಾಡುವುದರಲ್ಲಿ ನಮಗೆ ಹೆಮ್ಮೆ ಇದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.  ಇದನ್ನೂ ಓದಿ: ಸಂಸದ ಸಾಗರ್ ಖಂಡ್ರೆ ಮನೆ ವಿದ್ಯುತ್ ಸಂಪರ್ಕ ಕಡಿತ – ಅಪಾರ್ಟ್‌ಮೆಂಟ್ ಮ್ಯಾನೇಜರ್ ವಿರುದ್ಧ ಎಫ್‌ಐಆರ್

  • ಅಯೋಧ್ಯೆ ಸೂರ್ಯ ತಿಲಕದ ವೇಳೆಯೇ ರಾಮಸೇತು ದರ್ಶನ ಪಡೆದ ಮೋದಿ

    ಅಯೋಧ್ಯೆ ಸೂರ್ಯ ತಿಲಕದ ವೇಳೆಯೇ ರಾಮಸೇತು ದರ್ಶನ ಪಡೆದ ಮೋದಿ

    ನವದೆಹಲಿ: ಶ್ರೀಲಂಕಾದಿಂದ ಭಾರತಕ್ಕೆ ಹಿಂದಿರುಗುವಾಗ ವಿಮಾನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಮಸೇತು (Ram Setu) ದರ್ಶನ ಪಡೆದಿದ್ದಾರೆ.

    ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಅವರು, ಸ್ವಲ್ಪ ಸಮಯದ ಹಿಂದೆ ಶ್ರೀಲಂಕಾದಿಂದ ಹಿಂತಿರುಗುವಾಗ, ರಾಮಸೇತು ದರ್ಶನ ಪಡೆಯುವ ಪುಣ್ಯ ಸಿಕ್ಕಿತು. ಕಾಕತಾಳೀಯ ಎಂಬಂತೆ ರಾಮನವಮಿಯಂದು (Ram Navami) ಅಯೋಧ್ಯೆಯಲ್ಲಿ ಸೂರ್ಯ ತಿಲಕ ನಡೆಯುತ್ತಿದ್ದ ಸಮಯದಲ್ಲಿ ನನಗೆ ರಾಮಸೇತು ದರ್ಶನ ಭಾಗ್ಯ ಸಿಕ್ಕಿತು. ಪ್ರಭು ಶ್ರೀರಾಮ ನಮ್ಮೆಲ್ಲರಿಗೂ ಒಗ್ಗೂಡಿಸುವ ಶಕ್ತಿ. ಅವನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 1996ರ ವಿಶ್ವಕಪ್ ಗೆದ್ದ ಲಂಕಾ ಕ್ರಿಕೆಟ್‌ ದಿಗ್ಗಜರ ಜೊತೆ ಮೋದಿ ಸಂವಾದ!

    ರಾಮಸೇತುವು ಭಾರತದಲ್ಲಿ ಅನೇಕರಿಂದ ರಾಮ ಮತ್ತು ಲಂಕಾಗೆ ಹೋಗಿ ರಾವಣನ ಮೇಲೆ ಯುದ್ಧ ಮಾಡಲು ನಿರ್ಮಿಸಿದ ಸೇತುವೆಯ ಭಾಗ ಎಂದು ನಂಬಲಾಗಿದೆ.

    ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲು ಮತ್ತು ರಾಮನವಮಿಯ ಸಂದರ್ಭದಲ್ಲಿ ಪ್ರಾರ್ಥಿಸಲು ಮೋದಿ ಇಂದು ತಮಿಳುನಾಡಿಗೆ ತೆರಳಿದ್ದಾರೆ. ಇದನ್ನೂ ಓದಿ: ನಮ್ಮ ಭೂಮಿಯನ್ನು ಭಾರತದ ಭದ್ರತಾ ಹಿತಾಸಕ್ತಿಗೆ ವಿರುದ್ಧವಾಗಿ ಬಳಸಲು ಬಿಡಲ್ಲ: ಶ್ರೀಲಂಕಾ ಭರವಸೆ

  • ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ರಾಮನವಮಿ (Ram Navami) ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.

    ಸೂರ್ಯನ ಕಿರಣವು (Surya Tilak) ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂತು. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕವನ್ನು ರೂಪಿಸಿತು. ಇದನ್ನೂ ಓದಿ: ಬೆಂಗಳೂರಿನ ಎಲ್ಲೆಡೆ ರಾಮನವಮಿಯ ಸಂಭ್ರಮ – ಬಾಲರಾಮನ ವೇಷ ತೊಟ್ಟು ಬಂದ ಪುಟಾಣಿಗಳು

    ಸೂರ್ಯ ಕಿರಣವು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.

    ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದು ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮ ವಾರ್ಷಿಕೋತ್ಸವದ ದಿನ. ಜನರು ದೇವಾಲಯಗಳಿಗೆ ತೆರಳಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆಗಳು, ಮೆರವಣಿಗೆಗಳು ಮತ್ತು ಜಪಗಳು ನಡೆಯುತ್ತಿವೆ. ದೃಕ್ ಪಂಚಾಂಗದ ಪ್ರಕಾರ, ಭಗವಾನ್ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದ.

    ರಾಮನವಮಿ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಲಕ್ಷಾಂತರ ಭಕ್ತರು ರಾಮಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

  • ಬೆಂಗಳೂರಿನ ಎಲ್ಲೆಡೆ ರಾಮನವಮಿಯ ಸಂಭ್ರಮ – ಬಾಲರಾಮನ ವೇಷ ತೊಟ್ಟು ಬಂದ ಪುಟಾಣಿಗಳು

    ಬೆಂಗಳೂರಿನ ಎಲ್ಲೆಡೆ ರಾಮನವಮಿಯ ಸಂಭ್ರಮ – ಬಾಲರಾಮನ ವೇಷ ತೊಟ್ಟು ಬಂದ ಪುಟಾಣಿಗಳು

    – ರಾಜಾಜಿನಗರದ ರಾಮಮಂದಿರದಲ್ಲಿ ವಿಶೇಷ ಪೂಜೆ

    ಬೆಂಗಳೂರು: ರಾಜಧಾನಿಯಲ್ಲಿ ಇಂದು ಎಲ್ಲೆಡೆ ರಾಮನವಮಿ(Ram Navami) ಸಂಭ್ರಮ ಮನೆಮಾಡಿದ್ದು, ದೇವಾಲಯಗಳಲ್ಲಿ ರಾಮನಾಮ ಸ್ಮರಣೆ ಮೊಳಗಿದೆ. ರಾಮನವಮಿ ಪ್ರಯುಕ್ತ ರಾಜಾಜಿನಗರದ(RajajiNagara) ರಾಮಮಂದಿರದಲ್ಲಿ ವಿಶೇಷ ಪೂಜೆ-ಪುನಸ್ಕಾರ ನೆರವೇರಿತು.

    ರಾಮನವಮಿ ಪ್ರಯುಕ್ತ ದೇವರಿಗೆ ವಿಶೇಷ ಅಲಂಕಾರ, ಪೂಜೆ ಮಾಡಲಾಗಿದೆ. ಇದೀಗ ಭಕ್ತಗಣ ರಾಮನ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ಅಲ್ಲದೇ 63 ಅಡಿ ಎತ್ತರದ ರಾಮಾಂಜನೇಯ ಮೂರ್ತಿ ಕಣ್ತುಂಬಿಕೊಳ್ಳುತ್ತಿದ್ದಾರೆ. ಬೆಳಗ್ಗೆಯಿಂದಲೇ ದೇಗುಲದತ್ತ ಭಕ್ತ ಸಾಗರ ಹರಿದುಬರುತ್ತಿದೆ. ಇದನ್ನೂ ಓದಿ: ಹಸೆಮಣೆ ಏರಬೇಕಿದ್ದ ಮಹಿಳೆ ರೋಲರ್‌ ಕೋಸ್ಟರ್‌ ಆಡುವಾಗ ಕೆಳಗೆ ಬಿದ್ದು ಸಾವು

    ರಥೋತ್ಸವ ಮೆರವಣಿಗೆಗೆ ಬ್ರಹ್ಮರಥವು ಸಜ್ಜಾಗಿ ನಿಂತಿದ್ದು, ದೇವಾಲಯದಲ್ಲಿ ಮಂಡಲ ಹಾಕಿ ವಿಶೇಷ ಪೂಜೆ-ಪುನಸ್ಕಾರ ನೆರವೇರಿಸಲಾಯಿತು. ಇದನ್ನೂ ಓದಿ: ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ: ಮಧೂರು ದೇವಸ್ಥಾನದಲ್ಲಿ ಡಿಕೆಶಿ ಪ್ರಾರ್ಥನೆ

    ಇತ್ತ ಪುಟಾಣಿಗಳು ಬಾಲರಾಮನ ವೇಷ ತೊಟ್ಟು ಬಂದಿದ್ದು, ರಥೋತ್ಸವದಲ್ಲಿ ಎಲ್ಲರ ಗಮನ ಸೆಳೆಯಿತು. ಇನ್ನೂ ಶ್ರೀರಾಮನ ಭವ್ಯ ರಥವು ರಾಜಾಜಿನಗರದ ರಾಜಬೀದಿಯಲ್ಲಿ ಸಾಗಿತು.

  • ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

    ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

    ಲಕ್ನೋ: ರಾಮನವಮಿ (Ram Navami) ಹಿನ್ನೆಲೆ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ (Ram Mandir) ಸಾಗರೋಪಾದಿಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ಒಂದೇ ದಿನ ಐವತ್ತು ಲಕ್ಷ ಭಕ್ತರು ಬಾಲರಾಮನ ದರ್ಶನ ಪಡೆಯುವ ಸಾಧ್ಯತೆಯಿದೆ.

    ಅಯೋಧ್ಯೆಯಲ್ಲಿ (Ayodhya) ಜನದಟ್ಟಣೆ ಹಿನ್ನೆಲೆ ಭಾರೀ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕುಂಭಮೇಳದ ಮಾದರಿಯಲ್ಲಿ ಭದ್ರತೆ, ಡ್ರೋನ್ ಕಣ್ಗಾವಲು ಕಲ್ಪಿಸಲಾಗಿದೆ. ರಾಮನವಮಿ ಹಿನ್ನೆಲೆ ಪ್ರಭು ಶ್ರೀರಾಮನಿಗೆ ವಿಶೇಷ ಪೂಜೆ ನಡೆಯಲಿದೆ. ಇದನ್ನೂ ಓದಿ: ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

    ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಎಲ್ಲಾ ವಿಶೇಷ ಪಾಸ್‌ಗಳನ್ನು ರದ್ದುಗೊಳಿಸಲಾಗಿದೆ. ದೇವಸ್ಥಾನ, ಸರಯೂ ನದಿ ಸೇರಿ ಎಲ್ಲ ಕಡೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    ಮಧ್ಯಾಹ್ನದ ವೇಳೆಗೆ ಬಾಲರಾಮನ ವಿಗ್ರಹದ ಹಣೆ ಮೇಲೆ ಸೂರ್ಯ ರಶ್ಮಿ ಬೀಳಲಿದ್ದು, ಅಪರೂಪದ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ .ಸಂಜೆ ಸರಯೂ ನದಿ ತೀರದ ರಾಮಕೀ ಪೌಡಯಲ್ಲಿ ಎರಡು ಲಕ್ಷ ಹಣತೆಗಳು ಬೆಳಗಲಿದೆ. ಇದನ್ನೂ ಓದಿ: ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?

  • ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

    ಪ್ರಧಾನಿ ಮೋದಿಯಿಂದ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆ ಇಂದು ಉದ್ಘಾಟನೆ

    ನವದೆಹಲಿ: ತಮಿಳುನಾಡಿನ ರಾಮೇಶ್ವರಂನಲ್ಲಿ ರಾಮನವಮಿಯಂದು ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಪಂಬನ್ ಎಂದು ಕರೆಯಲ್ಪಡುವ ಈ ರೈಲು ಸೇತುವೆಯನ್ನು 550 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.‌

    ಮಧ್ಯಾಹ್ನ 12 ಗಂಟೆಗೆ ಪಂಬನ್ ಮತ್ತು ರಾಮೇಶ್ವರಂ ನಡುವಿನ ದೇಶದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು (Vertical Lift Sea Bridge) ಮೋದಿ ಉದ್ಘಾಟಿಸಲಿದ್ದಾರೆ. ಆ ಮೂಲಕ ಅವರು ರಸ್ತೆ ಸೇತುವೆಯಿಂದ ರೈಲು ಮತ್ತು ಹಡಗು ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ ಸೇತುವೆಯ ಕಾರ್ಯಾಚರಣೆಯನ್ನು ವೀಕ್ಷಿಸಲಿದ್ದಾರೆ. ಇದನ್ನೂ ಓದಿ: ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    ಪುರಾಣಗಳಲ್ಲಿ ಬೇರೂರಿರುವ ಈ ಸೇತುವೆಯು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ರಾಮೇಶ್ವರಂ ಬಳಿಯ ಧನುಷ್ಕೋಡಿಯಿಂದ ರಾಮಸೇತು ನಿರ್ಮಾಣ ಕಾರ್ಯ ಪ್ರಾರಂಭವಾಯಿತು ಎಂದು ರಾಮಾಯಣದಲ್ಲಿ ಉಲ್ಲೇಖವಾಗಿದೆ.

    ವರ್ಟಿಕಲ್‌ ಲಿಫ್ಟ್‌ ಸಮುದ್ರ ಸೇತುವೆಯನ್ನು 550 ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದರ ಉದ್ದ 2.08 ಕಿಲೋಮೀಟರ್. ಇದು 99 ಸ್ಪ್ಯಾನ್‌ಗಳನ್ನು ಮತ್ತು 72.5 ಮೀಟರ್‌ಗಳ ವರ್ಟಿಕಲ್ ಲಿಫ್ಟ್ ಸ್ಪ್ಯಾನ್ ಅನ್ನು ಹೊಂದಿದೆ ಮತ್ತು 17 ಮೀಟರ್ ಎತ್ತರಕ್ಕೆ ಏರುತ್ತದೆ. ಇದು ಹಡಗುಗಳ ಸುಗಮ ಚಲನೆಗೆ ಅನುಕೂಲವಾಗುತ್ತದೆ ಮತ್ತು ರೈಲು ಕಾರ್ಯಾಚರಣೆಯನ್ನು ಅಡೆತಡೆಯಿಲ್ಲದೆ ಖಚಿತಪಡಿಸುತ್ತದೆ. ಇದನ್ನೂ ಓದಿ: ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ

    ಮಧ್ಯಾಹ್ನ 12:45ರ ಸುಮಾರಿಗೆ ಪ್ರಧಾನಿಯವರು ರಾಮೇಶ್ವರದ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 1:30ರ ಸುಮಾರಿಗೆ ರಾಮೇಶ್ವರಂನಲ್ಲಿ 8,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.

  • ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    ದೇಶದ ಜನತೆಗೆ ಶ್ರೀರಾಮನವಮಿ ಶುಭಾಶಯ ತಿಳಿಸಿದ ಮೋದಿ

    – ಪ್ರಭು ಶ್ರೀರಾಮನ ಆಶೀರ್ವಾದ ಯಾವಾಗಲೂ ನಮ್ಮ ಮೇಲಿರಲಿ: ಪ್ರಧಾನಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ದೇಶದ ಜನತೆಗೆ ಶ್ರೀರಾಮನವಮಿ (Ram Navami) ಶುಭಾಶಯ ತಿಳಿಸಿದ್ದಾರೆ. ಶ್ರೀರಾಮನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಎಂದು ಪ್ರಾರ್ಥಿಸಿದ್ದಾರೆ.

    ಶ್ರೀರಾಮನವಮಿ ಹಿನ್ನೆಲೆಯಲ್ಲಿ ಎಕ್ಸ್‌ ಪೋಸ್ಟ್‌ ಹಾಕಿದ ಮೋದಿ, ಎಲ್ಲರಿಗೂ ರಾಮ ನವಮಿಯ ಶುಭಾಶಯಗಳು. ಪ್ರಭು ಶ್ರೀರಾಮನ ಆಶೀರ್ವಾದ ಯಾವಾಗಲೂ ನಮ್ಮ ಮೇಲೆ ಇರಲಿ ಮತ್ತು ನಮ್ಮ ಎಲ್ಲಾ ಪ್ರಯತ್ನಗಳಲ್ಲಿ ನಮಗೆ ಮಾರ್ಗದರ್ಶನ ನೀಡಲಿ. ಇಂದು ತಡವಾಗಿ ರಾಮೇಶ್ವರಂನಲ್ಲಿ ಇರಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀ ರಾಮನವಮಿ ಇತಿಹಾಸ, ಆಚರಣೆಯ ಮಹತ್ವವೇನು?

    ಪ್ರಧಾನಿಯವರು ಇಂದು ಮಧ್ಯಾಹ್ನ ತಮಿಳುನಾಡಿನ ರಾಮೇಶ್ವರಂಗೆ ಭೇಟಿ ನೀಡಲಿದ್ದು, ರಾಮನಾಥಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

    ರಾಮೇಶ್ವರಂನಲ್ಲಿ ಮೋದಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಾರತದ ಮೊದಲ ವರ್ಟಿಕಲ್ ಲಿಫ್ಟ್ ಸಮುದ್ರ ಸೇತುವೆಯನ್ನು (ಹೊಸ ಪಂಬನ್ ರೈಲು ಸೇತುವೆ) ಉದ್ಘಾಟಿಸಲಿದ್ದಾರೆ. ನಂತರ ಮಧ್ಯಾಹ್ನ 12:45 ರ ಸುಮಾರಿಗೆ ಅವರು ರಾಮೇಶ್ವರಂನಲ್ಲಿರುವ ರಾಮನಾಥಸ್ವಾಮಿ ದೇವಸ್ಥಾನದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಲಿದ್ದಾರೆ.

    ಮಧ್ಯಾಹ್ನ 1:30 ರ ಸುಮಾರಿಗೆ ರಾಮೇಶ್ವರಂನಲ್ಲಿ ಅವರು ತಮಿಳುನಾಡಿನಲ್ಲಿ 8,300 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ವಿವಿಧ ರೈಲು ಮತ್ತು ರಸ್ತೆ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದನ್ನೂ ಓದಿ: ಆಧ್ಯಾತ್ಮಿಕ ಶಕ್ತಿ ನೀಡುವ ಶ್ರೀರಾಮ ದೇವಾಲಯಗಳಿವು…!

  • ಹಬ್ಬಗಳನ್ನೂ ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿರೋದು ದುರ್ದೈವ: ಪ್ರಿಯಾಂಕ್ ಖರ್ಗೆ ವಿಷಾದ

    ಹಬ್ಬಗಳನ್ನೂ ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿರೋದು ದುರ್ದೈವ: ಪ್ರಿಯಾಂಕ್ ಖರ್ಗೆ ವಿಷಾದ

    ಕಲಬುರಗಿ: ಇಂದಿನ ದಿನಗಳಲ್ಲಿ ಹಬ್ಬಗಳನ್ನೂ (Festivals) ಪೊಲೀಸರ ಬಂದೋಬಸ್ತ್‌ನಲ್ಲಿ ಆಚರಿಸಬೇಕಾದ ಸ್ಥಿತಿ ಬಂದಿರುವುದು ದುರ್ದೈವ. ಕಳೆದ 10 ವರ್ಷಗಳಿಂದ ಇಂತಹ ಪರಿಸ್ಥಿತಿ ಬಂದಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಿಷಾದ ವ್ಯಕ್ತಪಡಿಸಿದ್ದಾರೆ.

    ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೈ ಶ್ರೀರಾಮ್ (Jai Sri Ram) ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಜೈ ಶ್ರೀರಾಮ್‌ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ; ನಾಲ್ವರ ಬಂಧನ

    ಎಲ್ಲಾ ಧರ್ಮಗಳಲ್ಲೂ ಶಾಂತಿ ಕದಡುವವರು ಕೆಲವರು ಇರ್ತಾರೆ. ಕೆಲವರು ಅವರದ್ದೇ ಧರ್ಮ ಶ್ರೇಷ್ಠ ಅಂತಾ ಭಾವಿಸುತ್ತಾರೆ ಇದು ದುರ್ದೈವ. ನಾನು ಅದಮಾರ ಮಠದ ಶಾಲೆಯಲ್ಲಿ ಓದಿದ್ದೇನೆ. ಆಗ ನಮಗೆ ರಂಜಾನ್, ಗಣೇಶ್ ಹಬ್ಬ, ಕ್ರಿಸ್ಮಸ್, ರಾಮನವಮಿಗೆ ರಜೆ ಸಿಗ್ತಿತ್ತು. ರಂಜಾನ್, ರಾಮನವಮಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದರು ಎಂದು ಸ್ಮರಿಸಿದ್ದಾರೆ.

    ಈ ಹಿಂದೆ ರಂಜಾನ್ ಬಂದ್ರೆ ನಾವು ಅವರ ಮನೆಗೆ ಹೋಗಿ ಬಿರಿಯಾನಿ ತಿಂದು ಬರ್ತಿದ್ವಿ, ಕ್ರಿಸ್ಮಸ್‌ಗೆ ಹೋಗಿ ಕೇಕ್ ತಿನ್ನುತ್ತಿದ್ವಿ. ಯುಗಾದಿ ಬಂದಾಗ ಅವರು ನಮ್ಮ ಮನೆಗೆ ಬಂದು ಹೋಳಿಗೆ ಊಟ ಮಾಡ್ತಿದ್ದರು. ಆದ್ರೆ ಈಗ ಎಲ್ಲ ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಣೆ ಮಾಡಬೇಕಿದೆ. 144 ಸೆಕ್ಷನ್ ವಿಧಿಸಿ ಹಬ್ಬ ಆಚರಣೆ ಮಾಡಬೇಕಾದಂತಹ ಪರಿಸ್ಥಿತಿ ಬಂದಿದೆ. ಇದು ಯಾರಿಂದ ಮತ್ತು ಯಾಕೆ ಆಗಿದೆ ಅನ್ನೋದನ್ನ ಯೋಚಿಸಬೇಕು ಎಂದು ಸಲಹೆ ನೀಡಿದ್ದಾರೆ.

    ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಹಬ್ಬಗಳನ್ನು ಪೊಲೀಸ್ ಬಂದೋಬಸ್ತ್‌ನಲ್ಲಿ ಆಚರಿಸಬೇಕಿದೆ. ಯಾರೋ ನಾಲ್ಕು ಜನ ಬಂದು ನಮ್ಮ ಧರ್ಮ ಶ್ರೇಷ್ಠ ಅಂತ ಹೇಳುವುದರಿಂದ ಪೊಲೀಸರು ಎಲ್ಲದಕ್ಕೂ ಭದ್ರತೆ ನೀಡಬೇಕಿದೆ. ಇದು ದುರ್ದೈವದ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 56 ಇಂಚಿನ ಎದೆ ಇರೋ ಮೋದಿ ಮಣಿಪುರದ ಬೆತ್ತಲೆ ಮೆರವಣಿಗೆ ಪ್ರಕರಣದ ಬಗ್ಗೆ ಮಾತಾಡಲಿಲ್ಲ: ಹರಿಪ್ರಸಾದ್

  • ರಾಮಮಂದಿರದಲ್ಲಿ ಅದ್ಧೂರಿ ರಾಮನವಮಿ – ಮದುವಣಗಿತ್ತಿಯಂತೆ ಶೃಂಗಾರಗೊಂಡ ಅಯೋಧ್ಯೆ

    ರಾಮಮಂದಿರದಲ್ಲಿ ಅದ್ಧೂರಿ ರಾಮನವಮಿ – ಮದುವಣಗಿತ್ತಿಯಂತೆ ಶೃಂಗಾರಗೊಂಡ ಅಯೋಧ್ಯೆ

    ನವದೆಹಲಿ/ಲಕ್ನೋ: ರಾಮಮಂದಿರ (Ram Mandir) ನಿರ್ಮಾಣದ ಬಳಿಕ ಇದು ಮೊದಲ ರಾಮನವಮಿ (Ram Navami) ಆಗಿದ್ದು, ಇದನ್ನು ಅದ್ಧೂರಿಯಾಗಿ ಆಚರಿಸಲು ಅಯೋಧ್ಯೆ (Ayodhya) ಸಜ್ಜಾಗಿದೆ.

    ಇಂದು ಅಯೋಧ್ಯೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದ್ದು, ಜನಸಂದಣಿಯ ನಿಯಂತ್ರಣಕ್ಕೆ ಎಲ್ಲಾ ವಿಶೇಷ ದರ್ಶನಗಳ ವ್ಯವಸ್ಥೆ ರದ್ದು ಮಾಡಿದೆ. ಇದಲ್ಲದೇ ವಿಶೇಷ ಪ್ರಸಾದ ವ್ಯವಸ್ಥೆಯೂ ಮಾಡಲಾಗಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಅಯೋಧ್ಯೆಯಲ್ಲಿ ರಾಮನವಮಿ ಆಚರಿಸಲಾಗುತ್ತಿದ್ದು, ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಎಲ್ಲೆಡೆ ತಳಿರು ತೋರಣ ಕಂಗೊಳಿಸುತ್ತಿದ್ದು, ಮಂದಿರಕ್ಕೆ ವಿಶೇಷ ಅಲಂಕಾರ ಮಾಡಲಾಗಿದೆ. ರಾಮನವಮಿ ಹಿನ್ನೆಲೆ ವಿಶೇಷ ಪೂಜೆ ಕೈಕಂಕರ್ಯಗಳನ್ನು ಮಾಡಲಾಗುತ್ತಿದೆ. ಇದನ್ನೂ ಓದಿ:‌ ಮರುಭೂಮಿ ದೇಶ ದುಬೈನಲ್ಲಿ ಧಾರಾಕಾರ ಮಳೆ – ಕೆರೆಯಂತಾದ ವಿಮಾನ ನಿಲ್ದಾಣ

    ಬೆಳಗ್ಗೆ 3:30 ರಿಂದ ಬಾಲರಾಮನ ದರ್ಶನ ಪ್ರಾರಂಭವಾಗಿದೆ. ಬ್ರಾಹ್ಮೀ ಮುಹೂರ್ತದ 3:30ಕ್ಕೆ ಮಂಗಳಾರತಿ ನಂತರ ಅಭಿಷೇಕ, ಶೃಂಗಾರ ಮತ್ತು ದರ್ಶನ ಸೇರಿ ಮುಂಜಾನೆಯ ಧಾರ್ಮಿಕ ವಿಧಿಗಳು ಪ್ರಾರಂಭವಾಗಿವೆ. ಮುಂಜಾನೆ 5:00 ಗಂಟೆಗೆ ಶೃಂಗಾರ ಆರತಿ ನಂತರ ಪರಿಸ್ಥಿತಿಗೆ ಅನುಗುಣವಾಗಿ ನೈವೇದ್ಯ ಮತ್ತು ಶಯನ ಆರತಿ ವ್ಯವಸ್ಥೆ ಇದ್ದು, ಶಯನ ಆರತಿಯ ನಂತರ ಮಂದಿರ ನಿರ್ಗಮನ ದ್ವಾರದ ಬಳಿ ಪ್ರಸಾದ ವಿನಿಯೋಗವಾಗುತ್ತಿದೆ. ಮಂಗಳಾರತಿಯಿಂದ ಆರಂಭಗೊಂಡು ರಾತ್ರಿ 11 ಗಂಟೆಯವರೆಗೆ ದರ್ಶನ ನಡೆಯಲಿದೆ. ನಾಲ್ಕು ಭೋಗ್ ನೈವೇದ್ಯಗಳ ಸಮಯದಲ್ಲಿ ಕೇವಲ ಐದು ನಿಮಿಷಗಳ ಕಾಲ ಪರದೆ ಮುಚ್ಚಲಿದ್ದು, ಬಾಕಿ ಸಮಯದಲ್ಲಿ ಭಕ್ತರ ದರ್ಶನಕ್ಕೆ ವ್ಯವಸ್ಥೆ ಮಾಡಿದೆ. ಇದನ್ನೂ ಓದಿ: ರಾಮನವಮಿಯ ಹಿನ್ನೆಲೆ ಏನು?- ಆಚರಣೆ ಹೇಗೆ?

    ಬಾಲರಾಮನ ಹಣೆಗೆ ಸೂರ್ಯರಶ್ಮಿ ತಿಲಕ:
    ಇನ್ನು ರಾಮನವಮಿ ದಿನದಂದು ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿರುವ ರಾಮಲಲ್ಲಾನ ಹಣೆ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳುತ್ತದೆ. ಇದು ಈ ಬಾರಿಯ ವಿಶೇಷವಾಗಿದೆ. ಈ ವರ್ಷದಿಂದ ಪ್ರತಿ ವರ್ಷ ರಾಮಮಂದಿರದ ಗರ್ಭಗುಡಿಯಲ್ಲಿರುವ ರಾಮಲಲ್ಲಾನ ಹಣೆ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳಲು ವ್ಯವಸ್ಥೆ ಮಾಡಿದೆ. ಇದನ್ನೂ ಓದಿ: ಚಿತ್ರರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ- ನರೇಂದ್ರ ಮೋದಿ ಸಂತಾಪ

    ವಿಶೇಷ ಅಂದರೆ ಇದಕ್ಕೆ ಸಹಕಾರಿಯಾದ ಆಪ್ಟಿಕಲ್ ಯಂತ್ರವನ್ನು ಬೆಂಗಳೂರು ಮೂಲದ ಕಂಪನಿಯೊಂದು ರಾಮ ಜನ್ಮಭೂಮಿ ಟ್ರಸ್ಟ್ಗೆ ಕೊಡುಗೆಯಾಗಿ ನೀಡಿದೆ. ಎರಡು ಸಾರ್ವಜನಿಕ ಸಂಸ್ಥೆಗಳು ಮತ್ತು ಜೈನ ಕುಟುಂಬ ನಿರ್ವಹಿಸುತ್ತಿರುವ ಬೆಂಗಳೂರು ಮೂಲದ ಕಂಪನಿಯು ಅಯೋಧ್ಯೆ ರಾಮಮಂದಿರಕ್ಕೆ ‘ಸೂರ್ಯ ತಿಲಕ ಯಂತ್ರ’ವನ್ನು ಕೊಡುಗೆಯಾಗಿ ನೀಡಿದೆ. 84 ಲಕ್ಷ ರೂ. ಮೌಲ್ಯದ ಈ ಯಂತ್ರವನ್ನು ಜಿಗಣಿ ಲಿಂಕ್ ರಸ್ತೆಯಲ್ಲಿರುವ ಆಪ್ಟಿಕ್ಸ್ & ಅಲೈಡ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ ಕೊಡುಗೆಯಾಗಿ ನೀಡಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ ಯಂತ್ರ ಅಭಿವೃದ್ಧಿಪಡಿಸಲಾಗಿದೆ. ಇದನ್ನೂ ಓದಿ: ಅಯೋಧ್ಯೆಯಲ್ಲಿ ‘ಜೈ ಶ್ರೀರಾಮ್‌’ ಎಂದ ಶಿಲ್ಪಿ ಅರುಣ್‌ ಯೋಗಿರಾಜ್‌ ಕುಟುಂಬ

    ಟೈಟಾನಿಯಂ, ಹಿತ್ತಾಳೆ ಮತ್ತು ಕಂಚು ಬಳಸಿ ಯಂತ್ರ ರೂಪಿಸಲಾಗಿದೆ. ಇದು ಪೆರಿಸ್ಕೋಪ್‌ನಂತೆ ಕಾರ್ಯನಿರ್ವಹಿಸುತ್ತದೆ. ಪೆರಿಸ್ಕೋಪಿಕ್ ವ್ಯವಸ್ಥೆಯಲ್ಲಿನ ಕನ್ನಡಿಯು ರಾಮನವಮಿಯಂದು ನಿರ್ದಿಷ್ಟ ಕೋನದಲ್ಲಿ ಸೂರ್ಯನ ಬೆಳಕನ್ನು ಸೆರೆಹಿಡಿಯುತ್ತದೆ. ಸೆರೆ ಹಿಡಿದ ಬೆಳಕು ವಿಗ್ರಹದ ಹಣೆ ಮೇಲೆ ನಿಖರವಾಗಿ ಮೂಡುತ್ತದೆ ಎಂದು ಹೇಳಲಾಗಿದೆ. ರಾಮನ ಹಣೆಗೆ ಬೀಳುವ ಸೂರ್ಯನ ರಶ್ಮಿ ಭಕ್ತರನ್ನು ಮಂತ್ರ ಮುಗ್ದರನ್ನಾಗಿಸಲಿದೆ. ಇದನ್ನೂ ಓದಿ: UPSC Result: 25ಕ್ಕೂ ಹೆಚ್ಚು ಕನ್ನಡಿಗರ ಆಯ್ಕೆ- ಪಬ್ಲಿಕ್‌ ಟಿವಿ ‘ಬೆಳಕು’ ಹೀರೋ ಶಾಂತಪ್ಪ 644ನೇ ರ‍್ಯಾಂಕ್‌

    1,11,111 ಕೆಜಿ ಲಡ್ಡುಗಳ ನೈವೇದ್ಯ:
    ರಾಮನವಮಿ ಹಿನ್ನೆಲೆ ಅಯೋಧ್ಯೆಯ ರಾಮಮಂದಿರಕ್ಕೆ 1,11,111 ಕೆಜಿ ಲಡ್ಡುಗಳನ್ನು ನೈವೇದ್ಯ ಮತ್ತು ಭಕ್ತರ ವಿತರಣೆಗಾಗಿ ಕಳುಹಿಸಲಾಗಿದೆ. ದೇವ್ರಹ ಹನ್ಸ್ ಬಾಬಾ ಟ್ರಸ್ಟ್ನ ಟ್ರಸ್ಟ್ ಕಡೆಯಿಂದ ಈ ಲಡ್ಡುಗಳನ್ನು ನೀಡಲಾಗುತ್ತಿದೆ. ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನು ಅಯೋಧ್ಯೆ ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶದೆಲ್ಲೆಡೆ ಸ್ಥಾಪಿಸಲಾದ 80 ರಿಂದ 100 ಎಲ್‌ಇಡಿ ಪರದೆಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಇದನ್ನೂ ಓದಿ: ಸುರ್ಜೇವಾಲಾಗೆ ಶಾಕ್‌ – 2 ದಿನ ಚುನಾವಣಾ ಪ್ರಚಾರಕ್ಕೆ ನಿಷೇಧ

  • ರಾಮನವಮಿಯ ಹಿನ್ನೆಲೆ ಏನು?- ಆಚರಣೆ ಹೇಗೆ?

    ರಾಮನವಮಿಯ ಹಿನ್ನೆಲೆ ಏನು?- ಆಚರಣೆ ಹೇಗೆ?

    ಚೈತ್ರಮಾಸದಲ್ಲಿ ಯುಗಾದಿಯ ನಂತರ ಬರುವ ಅತಿಮುಖ್ಯ ಹಬ್ಬವೆಂದರೆ ಅದು ಶ್ರೀರಾಮನವಮಿ. ಭಾರತ ದೇಶದಲ್ಲಿ ಆರ್ಯ ಸಂಸ್ಕೃತಿಗೆ ಸೇರಿದ ಎಲ್ಲಾ ಜನರು ಆತ್ಮೀಯತೆಯಿಂದ ಆಚರಿಸುವ ಹಬ್ಬ ಇದಾಗಿದೆ. ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ (Ram Navami) ಹಬ್ಬವೆಂದು ಆಚರಣೆ ಮಾಡಲಾಗುತ್ತದೆ.

    ಪೌರಾಣಿಕ ಹಿನ್ನೆಲೆ:
    ಧರ್ಮ ಶಾಸ್ತ್ರಗಳ ಪ್ರಕಾರ, ಅಯೋಧ್ಯೆಯ ರಾಜನಾದ ದಶರಥನಿಗೆ ಕೌಸಲ್ಯಾ, ಕೈಕೇಯೀ ಹಾಗೂ ಸುಮಿತ್ರೆ ಎಂಬ ಮೂರು ಜನ ಪತ್ನಿಯರಿದ್ದರು. ಆದರೆ ಯಾರಿಗೂ ಪುತ್ರ ಸಂತಾನವಾಗಿರಲಿಲ್ಲ. ನಂತರ ದಶರಥನು ಋಷಿಮುನಿಗಳ ಸಲಹೆಯಂತೆ ಪುತ್ರಕಾಮೇಷ್ಠಿ ಯಾಗವನ್ನು ಮಾಡಿಸಿದ. ಈ ಯಜ್ಞದಿಂದ ಸಂತುಷ್ಟನಾದ ಪ್ರಜಾಪತಿಯು ದಶರಥನಿಗೆ ದಿವ್ಯಪಾಯಸವನ್ನು ನೀಡುತ್ತಾನೆ. ಈ ದಿವ್ಯ ಪಾಯಸವನ್ನು ದಶರಥನು ತನ್ನ ಮೂವರು ಪತ್ನಿಯರಿಗೂ ಹಂಚುತ್ತಾನೆ. ಇದರಂತೆ ಚೈತ್ರ ಮಾಸದ ಶುಕ್ಲಪಕ್ಷದ ನವಮಿ ತಿಥಿಯಂದು ಮಧ್ಯಾಹ್ನ ಪುನರ್ವಸು ನಕ್ಷತ್ರದಲ್ಲಿ ಕೌಸಲ್ಯೆಗೆ ರಾಮನೂ, ಪುಷ್ಯನಕ್ಷತ್ರದ ದಶಮಿಯಂದು ಸೂರ್ಯೋದಯಕ್ಕೆ ಮುನ್ನ ಕೈಕೇಯಿಗೆ ಭರತನೂ, ಅದೇ ದಿನ ಆಶ್ಲೇಷಾ ನಕ್ಷತ್ರದಲ್ಲಿ ಮಧ್ಯಾಹ್ನ ಲಕ್ಷ್ಮಣ, ಶತ್ರುಘ್ನರೂ ಜನಿಸುತ್ತಾರೆ. ಹೀಗೆ ರಾಮನು ಜನಿಸಿದ ನವಮಿಯಂದು ರಾಮನವಮಿಯನ್ನಾಗಿ ಆಚರಿಸುತ್ತಾರೆ.

    ಅಯೋಧ್ಯೆಯ ರಾಜ ದಶರಥ ಹಾಗೂ ಕೌಸಲ್ಯೆಯ ಪುತ್ರನಾಗಿ ಮಹಾವಿಷ್ಣುವಿನ ಏಳನೇ ಅವತಾರವಾಗಿ ಶ್ರೀರಾಮನು ಜನಿಸುತ್ತಾನೆ. ಹಿಂದೂ ಗ್ರಂಥಗಳಲ್ಲಿ ಉಲ್ಲೇಖವಿರುವಂತೆ ನಾಲ್ಕು ಯುಗಗಳಲ್ಲಿ ಒಂದಾದ ತ್ರೇತಾಯುಗದಲ್ಲಿ ರಾಮನು ಜನಿಸಿದನು. ಈ ದಿನ ಶ್ರೀರಾಮನನ್ನು ಪೂಜಿಸಿದರೆ ಕೆಟ್ಟ ಶಕ್ತಿಗಳು ನಿವಾರಣೆಯಾಗಿ, ಭೂಮಿಯ ಮೇಲೆ ದೈವೀಕ ಶಕ್ತಿಯು ನೆಲೆಸುತ್ತದೆ ಎಂಬ ನಂಬಿಕೆಯಿದೆ.

    ಆಚರಣೆ ಹೇಗೆ?
    ಅನೇಕ ಕಡೆಗಳಲ್ಲಿ ಚೈತ್ರ ಮಾಸದ ಪ್ರತಿಪಾದದಿಂದ ಒಂಭತ್ತು ದಿನಗಳವರೆಗೆ ರಾಮನವಮಿ ಉತ್ಸವವು ನಡೆಯುತ್ತದೆ. ರಾಮನವಮಿಯಂದು ಶ್ರೀರಾಮನನ್ನು ಪೂಜಿಸಿ, ಅರ್ಚಿಸಲಾಗುತ್ತದೆ. ಈ ದಿನದಂದು ಉಪವಾಸವನ್ನು ಮಾಡಿದರೆ ಅತ್ಯಂತ ಶ್ರೇಷ್ಠ. ರಾಮನವಮಿಯಂದು ಬೆಳಗ್ಗೆಯಿಂದ ಮರುದಿನ ಬೆಳಗ್ಗೆಯವರೆಗೂ ಉಪವಾಸವನ್ನು ಕೈಗೊಳ್ಳಬೇಕು. ಈ ಸಮಯದಲ್ಲಿ ಶ್ರೀರಾಮ ಜಪ, ರಾಮಾಯಣ ಪಾರಾಯಣ, ಶ್ರೀರಾಮ ಸೀತಾ ಕಲ್ಯಾಣ್ಯೋತ್ಸವವನ್ನೂ ಮಾಡಬಹುದು.

    ಕೆಲವೆಡೆ ಪ್ರತಿಪಾದದಿಂದ ನವಮಿಯವರೆಗೂ ಒಂಭತ್ತು ದಿನಗಳಲ್ಲಿ ಭಜನೆ ಹಾಗೂ ಕೀರ್ತನೆಗಳನ್ನು ಆಯೋಜಿಸುತ್ತಾರೆ. ಈ ದಿನ ಕೆಲವು ಭಕ್ತರು ಕಟ್ಟುನಿಟ್ಟಾದ ಉಪವಾಸ ವ್ರತವನ್ನು ಆಚರಿಸುತ್ತಾರೆ ಮತ್ತು ನಿರಾಹಾರ ಉಪವಾಸವನ್ನೂ ಮಾಡುವವರಿದ್ದಾರೆ. ಕೆಲವರು ಸೌಮ್ಯವಾದ ಉಪವಾಸವನ್ನು ಆಚರಿಸಿ, ನೀರು ಹಾಗೂ ಹಣ್ಣುಗಳನ್ನು ಸೇವಿಸುತ್ತಾರೆ. ರಾಮನವಮಿಯಂದು ಶ್ರೀರಾಮನ ಜನ್ಮಸ್ಥಳವಾದ ಅಯೋಧ್ಯೆಗೆ ಭೇಟಿ ನೀಡಿ ಸರಯೂ ನದಿಯಲ್ಲಿ ಮಿಂದು ಶ್ರೀರಾಮನ ದರ್ಶನ ಮಾಡಿ ಪಾವನರಾಗುತ್ತಾರೆ.

    ಅಯೋಧ್ಯೆಯಲ್ಲಿ ರಾಮನವಮಿ ಆಚರಣೆ:
    ಶ್ರೀರಾಮ ಜನಿಸಿದ ಸ್ಥಳ ಅಯೋಧ್ಯೆಯಲ್ಲಿ ರಾಮನವಮಿ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಹಬ್ಬದ ದಿನದಂದು ರಾಮನ ಭಜನೆ, ಕೀರ್ತನೆ ಹಾಗೂ ಮೆರವಣಿಗಳನ್ನು ನಡೆಸಲಾಗುತ್ತದೆ. ರಾಮನವಮಿಯಂದು ಸೂರ್ಯ ದೇವನ ಪ್ರಾರ್ಥನೆಯೊಂದಿಗೆ ಹಬ್ಬ ಆರಂಭವಾಗುತ್ತದೆ. ಏಕೆಂದರೆ, ಶ್ರೀರಾಮನು ಸೂರ್ಯವಂಶಸ್ಥನಾಗಿದ್ದು, ಶಕ್ತಿಯ ಪ್ರತೀಕವಾಗಿರುವ ಸೂರ್ಯ ದೇವರ ಆರಾಧನೆ ಮೂಲಕ ರಾಮನವಮಿ ಆರಂಭವಾಗುತ್ತದೆ. ಹಬ್ಬದ ದಿನದಂದು ರಾಮನ ಸ್ತೋತ್ರ ಹಾಗೂ ಭಜನೆಗಳನ್ನು ಹಾಡುವ ಮೂಲಕ ದೇವರನ್ನು ಸಂಪ್ರೀತಿಗೊಳಿಸಲಾಗುತ್ತದೆ.

    ಹಬ್ಬದ ದಿನದಂದು ಪ್ರತಿಯೊಬ್ಬರೂ ಜಾತಿ, ಧರ್ಮವೆಂಬ ಕಟ್ಟಳೆಗಳನ್ನು ಬದಿಗೊತ್ತಿ ಕೋಸಂಬರಿ, ಮಜ್ಜಿಗೆ ಹಾಗೂ ಪಾನಕಗಳನ್ನು ಹಂಚುವ ಮೂಲಕ ಸೌಹಾರ್ದತೆಯನ್ನು ಮೆರೆಯುತ್ತಾರೆ.