Tag: Ram Sena

  • ಮಸಾಜ್ ಪಾರ್ಲರ್ ಮೇಲೆ ದಾಳಿ – ರಾಮ್ ಸೇನಾ ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನ

    ಮಸಾಜ್ ಪಾರ್ಲರ್ ಮೇಲೆ ದಾಳಿ – ರಾಮ್ ಸೇನಾ ಕಾರ್ಯಕರ್ತರಿಗೆ 14 ದಿನ ನ್ಯಾಯಾಂಗ ಬಂಧನ

    ಮಂಗಳೂರು: ಮಸಾಜ್ ಪಾರ್ಲರ್ (Massage Parlor) ಮೇಲೆ ದಾಳಿ ನಡೆಸಿದ್ದ ಆರೋಪಿಗಳಿಗೆ ಮಂಗಳೂರು (Mangaluru) ಜೆಎಂಎಫ್‍ಸಿ 6ನೇ ಕೋರ್ಟ್ (Court) 14 ದಿನಗಳ ಕಾಲ (ಫೆ.7ರ ವರೆಗೆ) ನ್ಯಾಯಾಂಗ ಬಂಧನ ವಿಧಿಸಿದೆ.

    ರಾಮ್ ಸೇನಾ (Ram Sena) ಸಂಸ್ಥಾಪಕ ಪ್ರಸಾದ್ ಅತ್ತಾವರ ಸೇರಿದಂತೆ 14 ಆರೋಪಿಗಳನ್ನು ಬರ್ಕೆ ಪೊಲೀಸರು ಇಂದು (ಶುಕ್ರವಾರ) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

    ಮಸಾಜ್ ಪಾರ್ಲರ್ ಮೇಲೆ ರಾಮ್ ಸೇನಾ ಕಾರ್ಯಕರ್ತರು ಗುರುವಾರ ದಾಳಿ ನಡೆಸಿದ್ದರು. ಈ ವೇಳೆ ಮಸಾಜ್ ಪಾರ್ಲರ್‌ನಲ್ಲಿ ಮೂವರು ಯುವತಿಯರು ಹಾಗೂ ಓರ್ವ ಯುವಕ ಇದ್ದರು. ಯುವಕನ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿ, ಪೀಠೋಪಕರಣ ಧ್ವಂಸ ಮಾಡಿದ್ದರು.

    ಈ ಸಂಬಂಧ ಸಂಘಟನೆಯ ಮುಖ್ಯಸ್ಥ ಪ್ರಸಾದ್ ಅತ್ತಾವರ ಸೇರಿದಂತೆ ಕಾರ್ಯಕರ್ತರಾದ ಹರ್ಷ ರಾಜ್, ಮೋಹನ್ ದಾಸ್, ಪುರಂದರ, ಸಚಿನ್, ರವೀಶ್, ಸುಕೇಶ್, ಅಂಕಿತ್, ಕಾಳಿ ಮುತ್ತು, ಅಭಿಲಾಷ್, ದೀಪಕ್, ವಿಘ್ನೇಶ್, ಶರಣ್ ರಾಜ್ ಮತ್ತು ಪ್ರದೀಪ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದರು.

    ಆರೋಪಿಗಳ ವಿರುದ್ಧ ಬಿಎನ್‍ಎಸ್ ಆಕ್ಟ್ 329(2), 324(5), 74, 351(3), 115(2), 109, 352, 190 ಅಡಿ ಪ್ರಕರಣ ದಾಖಲಾಗಿದೆ.

  • ಮಸಾಜ್‌ ಪಾರ್ಲರ್‌ ಮೇಲೆ ದಾಳಿ – ರಾಮ್ ಸೇನಾ ಸಂಸ್ಥಾಪಕ ಪೊಲೀಸ್‌ ವಶಕ್ಕೆ

    ಮಸಾಜ್‌ ಪಾರ್ಲರ್‌ ಮೇಲೆ ದಾಳಿ – ರಾಮ್ ಸೇನಾ ಸಂಸ್ಥಾಪಕ ಪೊಲೀಸ್‌ ವಶಕ್ಕೆ

    ಮಂಗಳೂರು: ಮಸಾಜ್ ಪಾರ್ಲರ್ (Massage Parlor) ಮೇಲೆ ದಾಳಿ ನಡೆಸಿದ್ದ ರಾಮ್ ಸೇನಾ (Ram Sena) ಸಂಸ್ಥಾಪಕ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಮಂಗಳೂರು (Mangaluru) ಹೊರವಲಯದ ಕುಡುಪು ಮನೆಯಲ್ಲಿದ್ದ ಅವರನ್ನು, ಅಲ್ಲಿಂದಲೇ ಪೊಲೀಸರು ಅವರನ್ನು ಎಳೆದೊಯ್ದಿದ್ದಾರೆ. ಇದಕ್ಕೂ ಮುನ್ನ ಮಸಾಜ್ ಪಾರ್ಲರ್‌ಗೆ ಕಾನೂನು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

    ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‌ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದರು. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದರು.

    ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದರು. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದರು.

    ಇದೇ ಮಸಾಜ್ ಪಾರ್ಲರ್‌ಗೆ ಈ ಹಿಂದೆ ಅಂದಿನ ಮೇಯರ್ ಕವಿತಾ ಸನಿಲ್ ಸಹ ದಾಳಿ ನಡೆಸಿದ್ದರು. ಈ ವೇಳೆ ಅನೈತಿಕ ಚಟುವಟಿಕೆ ಬಯಲಿಗೆ ಬಂದಿತ್ತು.

  • ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ರಾಮ್ ಸೇನಾ ಕಾರ್ಯಕರ್ತರಿಂದ ದಾಳಿ – ವ್ಯಕ್ತಿಯ ಮೇಲೆ ಹಲ್ಲೆ

    ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ರಾಮ್ ಸೇನಾ ಕಾರ್ಯಕರ್ತರಿಂದ ದಾಳಿ – ವ್ಯಕ್ತಿಯ ಮೇಲೆ ಹಲ್ಲೆ

    ಮಂಗಳೂರು: ಮಸಾಜ್ ಪಾರ್ಲರ್ (Massage Parlor) ಒಂದರ ಮೇಲೆ ರಾಮ್ ಸೇನಾ (Ram Sena) ಕರ್ನಾಟಕದ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಮಂಗಳೂರಿನಲ್ಲಿ (Mangaluru) ನಡೆದಿದೆ.

    ಪ್ರಸಾದ್ ಅತ್ತಾವರ ನೇತೃತ್ವದ ಸಂಘಟನೆಯ ಹತ್ತು ಜನ ಕಾರ್ಯಕರ್ತರು ಬಿಜೈ ಕೆಎಸ್‍ಆರ್‍ಟಿಸಿ ಬಳಿಯ ಕಲರ್ಸ್ ಯೂನಿಸೆಕ್ಸ್ ಸೆಲೂನ್ ಮೇಲೆ ದಾಳಿ ನಡೆಸಿದ್ದಾರೆ. ಸೆಲೂನ್‍ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದ್ದಾರೆ.

    ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್‍ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್‍ಗಳನ್ನು ಮುಚ್ಚುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ.

    ಸ್ಥಳಕ್ಕೆ ಬರ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

  • ರಾಮ್‍ಸೇನಾ ಕರ್ನಾಟಕದಿಂದ ಯೋಗಿ ಮಠದಲ್ಲಿ ಭಜನೆ, ವಿಶೇಷ ಪೂಜೆ

    ರಾಮ್‍ಸೇನಾ ಕರ್ನಾಟಕದಿಂದ ಯೋಗಿ ಮಠದಲ್ಲಿ ಭಜನೆ, ವಿಶೇಷ ಪೂಜೆ

    – ಪಟಾಕಿ ಸಿಡಿಸಿ ಸಂಭ್ರಮಾಚರಣೆ

    ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಸ್ಥಾನದ ಪುಣ್ಯಭೂಮಿಯಲ್ಲಿ ನಡೆಯುತ್ತಿರುವ ಶ್ರೀರಾಮ ಮಂದಿರದ ಭೂಮಿ ಪೂಜೆ ನಿಮಿತ್ತ ರಾಮಸೇನೆ ಕರ್ನಾಟಕ ಮಂಗಳೂರು ಇವರ ವತಿಯಿಂದ ರಾಮ ತಾರಕ ಮಂತ್ರ ಪಠಣ ಮತ್ತು ಭಜನಾ ಕಾರ್ಯಕ್ರಮ ಮಂಗಳೂರು ಕದ್ರಿ ಬಳಿ ಇರುವ ಯೋಗಿ ಮಠದಲ್ಲಿ ನಡೆಸಲಾಯಿತು.

    ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧ್ಯಕ್ಷರಾಗಿರುವ ನಾಥ ಪಂಥದ ಜೋಗಿ ಮಠದ ಒಂಬತ್ತನೇ ಮಠವಾದ ಕದ್ರಿಯ ಯೋಗಿ ಮಠದಲ್ಲಿ ರಾಮ್‍ಸೇನಾ ಕರ್ನಾಟಕ ಈ ಪೂಜಾ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಸಂದರ್ಭದಲ್ಲಿ ಶ್ರೀರಾಮನ ಭಾವಚಿತ್ರಕ್ಕೆ ಮಂಗಳಾರತಿ ಮಾಡಲಾಯಿತು.

    ಯೋಗಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರು ಜ್ಯೋತಿ ಬೆಳಗಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಆಶೀರ್ವಚನ ಮಾಡಿದರು, ಈ ಸಂದರ್ಭದಲ್ಲಿ ರಾಮ್ ಸೇನಾ ಸಂಸ್ಥಾಪಕರಾದ ಪ್ರಸಾದ್ ಅತ್ತಾವರ್ ಹಾಗೂ ಪದಾಧಿಕಾರಿಗಳಾದ ಮಂಜುನಾಥ್ ಕುಂದರ್, ದಿನೇಶ್ ಹಾಗೂ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ರಾಮ್‍ಸೇನೆ ಕಾರ್ಯಕರ್ತರು ಮಂಗಳೂರು ಮಹಾನಗರ ಪಾಲಿಕೆ ಎದುರು ಜಿಲ್ಲೆಯಲ್ಲಿ ಸೆಕ್ಷನ್ ಇದ್ದರೂ ಕೂಡ ನಿಯಮ ಉಲ್ಲಂಘಿಸಿ ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.