Tag: Ram temple

  • ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ಅಯೋಧ್ಯೆ: ರಾಮಮಂದಿರಕ್ಕೆ (Ayodhya Ram Mandir) 3,000 ಕೋಟಿ ರೂ. ಹರಿದುಬಂದಿದ್ದು, ಅದರಲ್ಲಿ ದೇಗುಲ ಸಂಪೂರ್ಣ ನಿರ್ಮಾಣಕ್ಕೆ 1,500 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ತಿಳಿಸಿದೆ.

    ಅಯೋಧ್ಯೆ ರಾಮಮಂದಿರವನ್ನು ಈಗ ಸಂಪೂರ್ಣವಾಗಿ ನಿರ್ಮಿಸಲಾಗಿದೆ. ಭಗವಾನ್ ರಾಮನಿಗೆ ಸಮರ್ಪಿತವಾದ ಭವ್ಯ ದೇವಾಲಯವು ಪವಿತ್ರ ಸಂಕೀರ್ಣದ ಒಳಗೆ ಆರು ಸಹಾಯಕ ದೇವಾಲಯಗಳೊಂದಿಗೆ ಪೂರ್ಣಗೊಂಡಿದೆ. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಶಿವ, ಗಣೇಶ, ಹನುಮಾನ್, ಸೂರ್ಯ, ಭಗವತಿ ಮತ್ತು ಅನ್ನಪೂರ್ಣ ದೇವಿಗೆ ಮೀಸಲಾಗಿರುವ ದೇವಾಲಯಗಳ ನಿರ್ಮಾಣವೂ ಪೂರ್ಣಗೊಂಡಿದೆ ಎಂದು ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯ ನಿರ್ಮಾಣ ಪೂರ್ಣಗೊಂಡಿದೆ ಎಂಬುದನ್ನು ಸಂಕೇತಿಸಲು ಪ್ರತಿ ದೇವಾಲಯದ ಮೇಲೆ ಧ್ವಜಗಳು ಮತ್ತು ಕಲಶಗಳನ್ನು ಸ್ಥಾಪಿಸಲಾಗಿದೆ.

    ದೇವಾಲಯದ ನಿರ್ಮಾಣ ಕಾರ್ಯ ಪೂರ್ಣಗೊಂಡ ಔಪಚಾರಿಕ ಆಚರಣೆಗಾಗಿ ನ.25 ರಂದು ಅದ್ಧೂರಿ ಧ್ವಜಾರೋಹಣ ಸಮಾರಂಭಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದ್ದು, ಭಾರತ ಮತ್ತು ವಿದೇಶಗಳಿಂದ ಸಾವಿರಾರು ಭಕ್ತರು, ಸಂತರು, ಗಣ್ಯರು ಆಗಮಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಸ್ವಾಮೀಜಿಯಾಗಿ ಕೀಳುಮಟ್ಟದ ಹೇಳಿಕೆ ನೀಡೋದು ಸರಿಯಲ್ಲ, ಗಂಭೀರವಾಗಿರಬೇಕು – ಕನ್ನೇರಿ ಶ್ರೀಗಳಿಗೆ ಸುಪ್ರೀಂ ತರಾಟೆ

    ರಾಮಮಂದಿರ ಟ್ರಸ್ಟ್‌ಗೆ ಪ್ರಪಂಚದಾದ್ಯಂತ ಭಕ್ತರಿಂದ ಅಗಾಧ ಬೆಂಬಲ ವ್ಯಕ್ತವಾಗಿದೆ. ಟ್ರಸ್ಟ್ 3,000 ಕೋಟಿ ರೂ.ಗಳಿಗೂ ಹೆಚ್ಚು ದೇಣಿಗೆ ಸಂಗ್ರಹಿಸಿದೆ. ಇದರಲ್ಲಿ 1,500 ಕೋಟಿ ರೂ.ಗಳನ್ನು ಈಗಾಗಲೇ ದೇವಾಲಯ ನಿರ್ಮಾಣ, ಮೂಲಸೌಕರ್ಯ ಮತ್ತು ಆವರಣದ ಸುತ್ತಮುತ್ತಲಿನ ಅಭಿವೃದ್ಧಿಗೆ ಖರ್ಚು ಮಾಡಲಾಗಿದೆ. ಉಳಿದ 1,800 ಕೋಟಿ ರೂ.ಗಳನ್ನು ದೇವಾಲಯ ಮತ್ತು ಪಕ್ಕದ ಸೌಲಭ್ಯಗಳ ಅಂತಿಮ ಸ್ಪರ್ಶ, ಸೌಂದರ್ಯೀಕರಣ ಮತ್ತು ನಿರ್ವಹಣೆಗೆ ಬಳಸಲಾಗುವುದು.

  • ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ರಾಮನವಮಿ| ಅಯೋಧ್ಯೆ ಬಾಲರಾಮನ ಹಣೆ ಮೇಲೆ ಮೂಡಿದ ʼಸೂರ್ಯ ತಿಲಕʼ

    ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ರಾಮನವಮಿ (Ram Navami) ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ ತಿಲಕ ಮೂಡಿದೆ.

    ಸೂರ್ಯನ ಕಿರಣವು (Surya Tilak) ನೇರವಾಗಿ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ದಿವ್ಯ ದೃಶ್ಯ ಕಂಡುಬಂತು. ನಿಖರವಾಗಿ ಮಧ್ಯಾಹ್ನ 12 ಗಂಟೆಗೆ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಬಿದ್ದ ಸೂರ್ಯನ ಕಿರಣ, ದಿವ್ಯ ತಿಲಕವನ್ನು ರೂಪಿಸಿತು. ಇದನ್ನೂ ಓದಿ: ಬೆಂಗಳೂರಿನ ಎಲ್ಲೆಡೆ ರಾಮನವಮಿಯ ಸಂಭ್ರಮ – ಬಾಲರಾಮನ ವೇಷ ತೊಟ್ಟು ಬಂದ ಪುಟಾಣಿಗಳು

    ಸೂರ್ಯ ಕಿರಣವು ದೇವರ ಹಣೆಯನ್ನು ಬೆಳಗಿಸಿ, ಆಚರಣೆಗಳಿಗೆ ಆಧ್ಯಾತ್ಮಿಕ ಹೊಳಪನ್ನು ನೀಡಿತು.

    ದೇಶಾದ್ಯಂತ ರಾಮನವಮಿಯನ್ನು ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಇದು ವಿಷ್ಣುವಿನ ಏಳನೇ ಅವತಾರವಾದ ಭಗವಾನ್ ರಾಮನ ಜನ್ಮ ವಾರ್ಷಿಕೋತ್ಸವದ ದಿನ. ಜನರು ದೇವಾಲಯಗಳಿಗೆ ತೆರಳಿ ಶ್ರೀರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಅಲ್ಲಲ್ಲಿ ಭಜನೆಗಳು, ಮೆರವಣಿಗೆಗಳು ಮತ್ತು ಜಪಗಳು ನಡೆಯುತ್ತಿವೆ. ದೃಕ್ ಪಂಚಾಂಗದ ಪ್ರಕಾರ, ಭಗವಾನ್ ರಾಮನು ಚೈತ್ರ ಮಾಸದ ಶುಕ್ಲ ಪಕ್ಷದ ನವಮಿ ತಿಥಿಯಂದು ಜನಿಸಿದ್ದ.

    ರಾಮನವಮಿ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರವು ಹೂವು, ದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಲಕ್ಷಾಂತರ ಭಕ್ತರು ರಾಮಮಂದಿರಕ್ಕೆ ತೆರಳಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ರಾಮನವಮಿ | 50 ಲಕ್ಷ ಭಕ್ತರಿಂದ ಅಯೋಧ್ಯೆ ಶ್ರೀರಾಮನ ದರ್ಶನ ಸಾಧ್ಯತೆ

  • ಅಯೋಧ್ಯೆ ಬಾಲರಾಮನಿಗೆ ಮಹಾ ಅಭಿಷೇಕ, ಭಕ್ತರಿಗೆ ಮಂಗಳ ದರ್ಶನ

    ಅಯೋಧ್ಯೆ ಬಾಲರಾಮನಿಗೆ ಮಹಾ ಅಭಿಷೇಕ, ಭಕ್ತರಿಗೆ ಮಂಗಳ ದರ್ಶನ

    ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆ (Ayodhya) ರಾಮಮಂದಿರದಲ್ಲಿ (Ram Mandir) ರಾಮಲಲ್ಲಾ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಸಂಭ್ರಮ ಮನೆ ಮಾಡಿದೆ. ವಾರ್ಷಿಕೋತ್ಸವ ಹಿನ್ನೆಲೆಯಲ್ಲಿ ರಾಮಮಂದಿರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ಜರುಗಿವೆ.

    ಪ್ರತಿಷ್ಠಾ ದ್ವಾದಶಿಯಂದು ಬಾಲರಾಮಮೂರ್ತಿಗೆ ಮಹಾ ಅಭಿಷೇಕ ಮಾಡಲಾಯಿತು. ನಂತರ ಅವರ ಮಂಗಲ ದರ್ಶನ ನಡೆಯಿತು. ಈ ವಿಶೇಷ ದಿನದಂದು ರಾಮಮಂದಿರವನ್ನು ಭವ್ಯವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಾಮಲಲ್ಲಾನ (Ram Lalla) ದರ್ಶನ ಪಡೆದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರಕ್ಕೆ ವರ್ಷದ ಸಂಭ್ರಮ – ಮಂದಿರ ಅಲಂಕಾರಕ್ಕೆ 50 ಕ್ವಿಂಟಾಲ್‌ ಹೂವು

    ಅಯೋಧ್ಯೆಯಲ್ಲಿ ಹಬ್ಬದ ವಾತಾವರಣವೇ ಇತ್ತು. ಭಕ್ತರು ನೃತ್ಯ ಮಾಡುತ್ತಾ ಮತ್ತು ಹಾಡುತ್ತ ಮೆರವಣಿಗೆ ಸಾಗಿ ರಾಮಲಲ್ಲಾನ ಆಸ್ಥಾನಕ್ಕೆ ಬಂದ ದೃಶ್ಯಗಳು ಕಂಡುಬಂದವು. ಎಲ್ಲರೂ ಶ್ರೀರಾಮನ ಭಕ್ತಿಯಲ್ಲಿ ಮಿಂದೆದ್ದರು. ಆರಾಧ್ಯ ದೈವ ರಾಮನ ದರ್ಶನಕ್ಕೆ ಕುಟುಂಬ ಸಮೇತರಾಗಿ ಭಕ್ತರು ಆಗಮಿಸಿದ್ದರು.

    ಧಾರ್ಮಿಕ ಕಾರ್ಯಗಳಲ್ಲಿ, ದೇವರಿಗೆ ನೈವೇದ್ಯ ಅರ್ಪಿಸಲಾಯಿತು. ಇದಾದ ನಂತರ ಮಹಾ ಆರತಿ ಮಾಡಲಾಯಿತು. ನಂತರ ದೇವಾಲಯದ ಬಾಗಿಲುಗಳನ್ನು ಮುಚ್ಚಲಾಯಿತು. ರಾಜಭೋಗ್ ಪ್ರಕ್ರಿಯೆ ಪೂರ್ಣಗೊಂಡ ನಂತರ, ರಾಮಲಲ್ಲಾ ವಿರಾಜಮಾನನಾಗಿರುವ ಗರ್ಭಗುಡಿಯ ಬಾಗಿಲು ತೆರೆಯಲಾಯಿತು. ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರ ನೇತೃತ್ವದಲ್ಲಿ ಮಹಾ ಆರತಿ ನೆರವೇರಿಸಲಾಯಿತು. ಮಹಾ ಆರತಿಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಅಯೋಧ್ಯೆಯ ಶ್ರೀರಾಮನ ಮೂರ್ತಿಗೆ `ರಾಮಲಲ್ಲಾʼ ಅಂತ ಕರೆಯುವುದೇಕೆ?

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ ಮಂದಿರ ಸಂಕೀರ್ಣದ ಅಂಗದ್ ತಿಲಾದಲ್ಲಿ ಪ್ರತಿಷ್ಠಾ ದ್ವಾದಶಿ ಸಮಾರಂಭವನ್ನು ಉದ್ಘಾಟಿಸಿದರು. ಬಳಿಕ ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಸಂತರು ಮತ್ತು ಮಹಾಂತರೊಂದಿಗೆ ಅನ್ನ ಪ್ರಸಾದ ಸ್ವೀಕರಿಸಿದರು.

  • ಅಯೋಧ್ಯೆ ರಾಮಮಂದಿರ – ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

    ಅಯೋಧ್ಯೆ ರಾಮಮಂದಿರ – ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ನಿಧನ

    ಲಕ್ನೋ: ಅಯೋಧ್ಯೆ ರಾಮಮಂದಿರದ (Ayodhya Ram Mandir) ರಾಮಲಲ್ಲಾನ ಪ್ರಾಣಪ್ರತಿಷ್ಠೆಯಲ್ಲಿ ಭಾಗಿಯಾಗಿದ್ದ ಅರ್ಚಕ ಪಂಡಿತ್‌ ಲಕ್ಷ್ಮೀಕಾಂತ್‌ ದೀಕ್ಷಿತ್‌ (Pandit Laxmikant Dixit) ನಿಧನರಾಗಿದ್ದಾರೆ.

    ಕಾಶಿಯ ಪ್ರಧಾನ ಅರ್ಚಕರೂ ಆಗಿದ್ದ ದೀಕ್ಷಿತ್‌ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಾಶಿಯ ಪ್ರಖ್ಯಾತ ವೈದಿಕ ಶ್ರೌತ-ಸ್ಮಾರ್ತ ಸಂಸ್ಕಾರ ತಜ್ಞ, ಸಾಂಗ್ವೇದ ವಿದ್ಯಾಲಯದ ಯಜುರ್ವೇದ ಶಿಕ್ಷಕ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನದಿಂದ ಸನಾತನಿ ಜಗತ್ತು ತುಂಬಲಾರದ ನಷ್ಟವನ್ನು ಅನುಭವಿಸಿದೆ. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ YSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ – ಸೇಡಿನ ರಾಜಕಾರಣ ಎಂದು ಆಕ್ರೋಶ

    ದೀಕ್ಷಿತ್‌ ಅವರ ನೇತೃತ್ವದಲ್ಲಿ ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪಿಸಲಾಯಿತು. ರಾಮಮಂದಿರದಲ್ಲಿ ಎಲ್ಲಾ ಪೂಜೆಗಳು ನೆರವೇರಿದ್ದವು. 2021ರ ಕಾಶಿ ವಿಶ್ವನಾಥ ಧಾಮದ ಉದ್ಘಾಟನೆಯ ಪೂಜೆಯಲ್ಲಿ ಅವರು ಪಾಲ್ಗೊಂಡಿದ್ದರು.

    ಕಾಶಿಯ ವಿದ್ವಾಂಸರೂ, ಶ್ರೀರಾಮ ಜನ್ಮಭೂಮಿ ಪ್ರಾಣಪ್ರತಿಷ್ಠೆಯ ಪ್ರಧಾನ ಅರ್ಚಕರೂ ಆದ ವೇದಮೂರ್ತಿ ಅವರು, ಆಚಾರ್ಯ ಶ್ರೀ ಲಕ್ಷ್ಮೀಕಾಂತ ದೀಕ್ಷಿತ್ ಅವರ ನಿಧನ ಅಧ್ಯಾತ್ಮ ಮತ್ತು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಸಂಸ್ಕೃತ ಭಾಷೆ ಮತ್ತು ಭಾರತೀಯ ಸಂಸ್ಕೃತಿಗೆ ಅವರು ಮಾಡಿದ ಸೇವೆಗಾಗಿ ಅವರು ಯಾವಾಗಲೂ ಸ್ಮರಣೀಯರಾಗಿದ್ದಾರೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಅಕ್ರಮ ತಡೆಗಟ್ಟಲು ಕೇಂದ್ರ ಸರ್ಕಾರದಿಂದ ಹೊಸ ಕಾನೂನು; 5-10 ವರ್ಷ ಜೈಲು, ಒಂದು ಕೋಟಿ ಕನಿಷ್ಠ ದಂಡ

    ಇದೇ ವರ್ಷದ ಜ.22 ರಂದು ಅಯೋಧ್ಯೆ ರಾಮಮಂದಿರದಲ್ಲಿ ಬಾಲಕರಾಮ ಪ್ರಾಣಪ್ರತಿಷ್ಠೆ ಸಮಾರಂಭ ಜರುಗಿತು. ಪ್ರಧಾನಿ ಮೋದಿ ನೇತೃತ್ವದಲ್ಲಿ ಪ್ರಾಣಪ್ರತಿಷ್ಠೆ ನಡೆಯಿತು. ಅನೇಕ ಗಣ್ಯರು, ಸಿನಿತಾರೆಯರು, ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾದ ರಾಮಲಲ್ಲಾನನ್ನು ಕಣ್ತುಂಬಿಕೊಂಡಿದ್ದರು.

  • ಅಯೋಧ್ಯೆ ರಾಮನಿಗೆ ಬೆಳ್ಳಿಯ ಬಿಲ್ಲು-ಬಾಣ ಕೊಡುಗೆ

    ಅಯೋಧ್ಯೆ ರಾಮನಿಗೆ ಬೆಳ್ಳಿಯ ಬಿಲ್ಲು-ಬಾಣ ಕೊಡುಗೆ

    – ಬಿಲ್ಲು-ಬಾಣಕ್ಕೆ ಪೂಜೆ ಸಲ್ಲಿಸಿದ ಶೃಂಗೇರಿ ಮಠದ ಶ್ರೀಗಳು

    ಚಿಕ್ಕಮಗಳೂರು: ಅಯೋಧ್ಯೆಯ (Ayodhya) ಬಾಲರಾಮನಿಗೆ (Ram Lalla) ಭಕ್ತರೊಬ್ಬರು ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನು ನೀಡುವ ಮೂಲಕ ಭಕ್ತಿ ಸಮರ್ಪಿಸಿದ್ದಾರೆ. ಬೆಳ್ಳಿಯ ಬಿಲ್ಲು-ಬಾಣವನ್ನ ಮಾಡಿಸಿದ ಆಂಧ್ರಪ್ರದೇಶ ಮೂಲದ ಭಕ್ತರು ಅದನ್ನು ಶೃಂಗೇರಿಗೆ ತಂದು ಪೂಜೆ ಮಾಡಿಸಿದ್ದಾರೆ.

    ಬಾಲರಾಮನ ಬೆಳ್ಳಿಯ ಬಿಲ್ಲು ಹಾಗೂ ಬಾಣಕ್ಕೆ ಶೃಂಗೇರಿ ಮಠದ ಹಿರಿಯ ಗುರುಗಳಾದ ಶ್ರೀ ಭಾರತಿ ತೀರ್ಥ ಸ್ವಾಮೀಜಿ ಪೂಜೆ ಸಲ್ಲಿಸಿದ್ದಾರೆ. ಶೃಂಗೇರಿ ಮಠದ ಕಿರಿಯ ಗುರುಗಳಾದ ಮಿಧುಶೇಖರ ಶ್ರೀಗಳು ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನು ಕೈಯಲ್ಲಿ ಹಿಡಿದು ನೋಡಿದ್ದಾರೆ. ನೋಡಲು ಅತ್ಯಂತ ಸುಂದರ ಹಾಗೂ ಮನಮೋಹಕವಾಗಿರುವ ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನ ಆಂಧ್ರಪ್ರದೇಶ ಮೂಲದ ರಾಮನ ಭಕ್ತ ಚಲ್ಲಾ ಶ್ರೀನಿವಾಸ್ ಎಂಬ ಭಕ್ತರು ಅಯೋಧ್ಯೆಯ ರಾಮನಿಗೆ ಭಕ್ತಿ ಪೂರ್ವಕವಾಗಿ ನೀಡಿದ್ದಾರೆ. ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗದಲ್ಲಿ ವಯಾಡಕ್ಟ್ ಪರಿಶೀಲನಾ ಕಾರ್ಯ ಆರಂಭ

    ಜನವರಿ 22 ರಂದು ಅಯೋಧ್ಯೆಯ ರಾಮನ ಪ್ರಾಣಪ್ರತಿಷ್ಠಾಪನೆ (Ayodhya Ram Mandir) ದಿನ ಶೃಂಗೇರಿಯ ಋತ್ವಿಜರು ಹಾಗೂ ಪುರೋಹಿತರು ಕೂಡ ಅಯೋಧ್ಯೆಯ ಧಾರ್ಮಿಕ ಕಾರ್ಯಕ್ರಮ, ವಿಧಿ-ವಿಧಾನಗಳಲ್ಲಿ ಪಾಲ್ಗೊಂಡಿದ್ದರು. ಅಯೋಧ್ಯೆ ರಾಮನ ಜಲಾಭಿಷೇಕಕ್ಕೆಂದು ಶೃಂಗೇರಿ ಶಾರದಾಂಭೆ ನೆಲೆಸಿರುವ ತುಂಗಾ ನದಿಯಿಂದಲೂ ಜಲವನ್ನ ಕೊಂಡೊಯ್ದಿದ್ದರು. ತುಂಗಾ ನದಿ ಜೊತೆ ಜಿಲ್ಲೆಯ ಭದ್ರಾ ಹಾಗೂ ಹೇಮಾವತಿ ನದಿಯಿಂದಲೂ ಜಲವನ್ನ ಕೊಂಡೊಯ್ದಿದ್ದರು.

    ಇದರ ಮಧ್ಯೆ ಅಯೋಧ್ಯೆಯ ಶ್ರೀರಾಮನಿಗೂ ಶೃಂಗೇರಿಗೂ ಅವಿನಾಭಾವ ಸಂಬಂಧವಿದೆ. ಶ್ರೀರಾಮನ ಸಹೋದರಿ ಶಾಂತ ಅವರ ದೇಗುಲವಿರುವ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರ ದೇಗುಲದಿಂದಲೂ ರಾಮನ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮದ ದಿನ ರಾಮನ ಪೂಜೆಗಾಗಿ ಪಂಜೆ, ಶಲ್ಯ, ಸೀರೆ, ಅರಿಶಿನ-ಕುಂಕುಮ ಸೇರಿದಂತೆ ವಿವಿಧ ಧಾರ್ಮಿಕ ವಸ್ತುಗಳನ್ನ ಕೊಂಡೊಯ್ದಿದ್ದರು. ಇದನ್ನೂ ಓದಿ: 24 ಗಂಟೆಯೊಳಗೆ ಚುನಾವಣಾ ಕಣದಿಂದ ನಿವೃತ್ತರಾಗಿ: ರಘುಪತಿ ಭಟ್‍ಗೆ ಸುನಿಲ್ ಕುಮಾರ್ ಎಚ್ಚರಿಕೆ

    ಮಳೆ ದೇವರು ಎಂದೇ ಖ್ಯಾತಿಯಾಗಿರುವ ಕಿಗ್ಗಾದ ಶಾಂತಾ ಸಮೇತ ಋಷ್ಯಶೃಂಗೇಶ್ವರರು ಅಯೋಧ್ಯೆಯ ಶ್ರೀರಾಮನ ಅಕ್ಕ ಎಂದು ಪುರಾಣಗಳಲ್ಲಿ ಉಲ್ಲೇಖವಿದೆ. ಇಂದು ಭಕ್ತರೊಬ್ಬರು ಅಯೋಧ್ಯೆಯ ಶ್ರೀರಾಮನಿಗೆ ಬೆಳ್ಳಿಯ ಬಿಲ್ಲು ಹಾಗೂ ಬಾಣವನ್ನ ಮಾಡಿಸಿ ಶೃಂಗೇರಿ ಶಾರದಾಂಬೆ ದೇಗುಲದಲ್ಲಿ ಪೂಜೆ ಸಲ್ಲಿಸಿ ಅಯೋಧ್ಯೆಗೆ ತಲುಪಿಸಿದ್ದಾರೆ.

  • ಚುನಾವಣಾ ಭರಾಟೆ ನಡುವೆ ಅಯೋಧ್ಯೆ ಭೇಟಿ – ರಾಮಲಲ್ಲಾನ ದರ್ಶನ ಪಡೆದ ಮೋದಿ

    ಚುನಾವಣಾ ಭರಾಟೆ ನಡುವೆ ಅಯೋಧ್ಯೆ ಭೇಟಿ – ರಾಮಲಲ್ಲಾನ ದರ್ಶನ ಪಡೆದ ಮೋದಿ

    – ಅಯೋಧ್ಯೆಯಲ್ಲಿ ಸಿಎಂ ಯೋಗಿ ಆದಿತ್ಯನಾಥ್‌ ಜೊತೆ ಪ್ರಧಾನಿ ರೋಡ್‌ಶೋ

    ಅಯೋಧ್ಯೆ (ರಾಮಮಂದಿರ): ಚುನಾವಣಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರವ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಭಾನುವಾರ) ಅಯೋಧ್ಯೆಗೆ ಭೇಟಿ ನೀಡಿದ್ದರು. ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು ಅಯೋಧ್ಯೆಗೆ (Ayodhya) ತೆರಳಿ ರಾಮಲಲ್ಲಾ ದರ್ಶನ ಪಡೆದರು. ಬಳಿಕ ಅಯೋಧ್ಯೆಯಲ್ಲಿ ಬೃಹತ್ ರೋಡ್ ಶೋ ನಡೆಸಿದರು.

    ಚುನಾವಣಾ ಕಣದಲ್ಲಿ ಧಣಿವರಿಯದೇ ಪ್ರಚಾರ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಗೆ ಭೇಟಿ ನೀಡಿದ್ದರು. ಚುನಾವಣಾ ಪ್ರಚಾರ ಕಾರ್ಯಗಳ ನಡುವೆ ಅವರು ಬಾಲರಾಮನ ದರ್ಶನ ಪಡೆದರು. ಜಾರ್ಖಂಡ್ ಮತ್ತು ಬಿಹಾರದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ ಅವರು ನೇರ ಅಯೋಧ್ಯೆಗೆ ತೆರಳಿ ರಾಮಲಲ್ಲಾ ದರ್ಶನ ಪಡೆದು ಧೀರ್ಘ ದಂಡ ನಮಸ್ಕಾರ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಇದನ್ನೂ ಓದಿ: ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದು ಜೆಡಿಯು ಅಭ್ಯರ್ಥಿ ಪರ ಮಾಜಿ ಶಾಸಕ ರೋಡ್‌ಶೋ

    ರಾಮಮಂದಿರ ಉದ್ಘಾಟನೆ ಬಳಿಕ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ಮೊದಲ ಬಾರಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆ ಅಯೋಧ್ಯೆಯನ್ನು ಅಲಂಕೃತಗೊಳಿಸಲಾಗಿತ್ತು. ರಾಮಮಂದಿರ ಸುತ್ತಮುತ್ತಲಿನ ಪ್ರದೇಶ, ರಸ್ತೆಗಳನ್ನು ಶೃಂಗರಿಸಲಾಗಿತ್ತು. ಎಲ್ಲ ಕಡೆ ಪ್ರಧಾನಿ ಮೋದಿ ಅವರಿಗೆ ಸ್ವಾಗತ ಕೋರುವ ಕಟೌಟ್‌ಗಳನ್ನು ಹಾಕಲಾಗಿತ್ತು.

    ಸಂಜೆ ರಾಮಲಲ್ಲಾ ದರ್ಶನ ಪಡೆದ ಮೋದಿ ಸುಗ್ರೀವ ಕೋಟೆಯಿಂದ ಲತಾ ಚೌಕ್ ತನಕ ರೋಡ್‌ ವರೆಗೂ ಎರಡು ಕಿಲೋ ಮೀಟರ್ ರೋಡ್ ಶೋ ನಡೆಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೋದಿ ಅವರಿಗೆ ಸಾಥ್​ ನೀಡಿದರು. ರೋಡ್ ಶೋ ನಲ್ಲಿ ಮೋದಿ ಕಂಡು ಹರ್ಷೋಧ್ಘಾರ ವ್ಯಕ್ತಪಡಿಸಿದರು. ಫೈಜಾಬಾದ್‌ನ ಹಾಲಿ ಬಿಜೆಪಿ ಸಂಸದ ಲಲ್ಲು ಸಿಂಗ್ ಮತ್ತು ನೆರೆಯ ಜಿಲ್ಲೆಗಳಿಂದ ಸ್ಪರ್ಧಿಸುತ್ತಿರುವವರಿಗೆ ರೋಡ್ ಶೋ ಮೂಲಕ ಮೋದಿ ಬೆಂಬಲ ಕೋರಿದರು. ಇದನ್ನೂ ಓದಿ: ಕಾಂಗ್ರೆಸ್ ಬೆಂಕಿಯೊಂದಿಗೆ ಆಟವಾಡುತ್ತಿದೆ: ರಾಜನಾಥ್ ಸಿಂಗ್

    ಉತ್ತರ ಪ್ರದೇಶದಲ್ಲಿ ಏಳು ಹಂತಗಳಲ್ಲೂ ಮತದಾನ ನಡೆಯುತ್ತಿದ್ದು ಮೂರನೇ ಹಂತದ ಮತದಾನಕ್ಕೆ ಎರಡು ದಿನಗಳ ಮುನ್ನ ಅಯೋಧ್ಯೆಯಲ್ಲಿ ಮೋದಿ ರೋಡ್ ಶೋ ಭರ್ಜರಿ ಯಶಸ್ವಿಯಾಗಿದೆ.

  • ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

    ಮೊದಲ ಬಾರಿಗೆ ಅಯೋಧ್ಯೆಗೆ ರಾಷ್ಟ್ರಪತಿ ಭೇಟಿ – ಬಾಲರಾಮನ ದರ್ಶನ, ವಿಶೇಷ ಪೂಜೆ ಸಲ್ಲಿಕೆ

    ಅಯೋಧ್ಯೆ: ಉದ್ಘಾಟನೆ ಬಳಿಕ ಮೊದಲ ಬಾರಿಗೆ ಅಯೋಧ್ಯೆ (Ayodhya) ರಾಮಮಂದಿರಕ್ಕೆ (Ram Temple) ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭೇಟಿ ನೀಡಿ ಭಗವಾನ್‌ ರಾಮಲಲ್ಲಾನ ದರ್ಶನ ಪಡೆದರು.

    ಅಯೋಧ್ಯಾಧಾಮ ತಲುಪಿ ಮೊದಲು ಹನುಮಾನ್ ಗರ್ಹಿಯಲ್ಲಿ ದೇವರ ದರ್ಶನ ಮತ್ತು ಪೂಜೆ ಸಲ್ಲಿಸಿದರು. ಅರ್ಚಕ ರಾಜು ದಾಸ್, ರಾಷ್ಟ್ರಪತಿಗೆ ಬೆಳ್ಳಿ ಗದೆ, ಬೆಳ್ಳಿ ರಾಮ್ ದರ್ಬಾರ್ ಮತ್ತು ಹಸುವಿನ ಪ್ರತಿಕೃತಿಯನ್ನು ನೀಡಿದರು. ಇದನ್ನೂ ಓದಿ: ಟಿಎಂಸಿಗಿಂತ ಬಿಜೆಪಿಗೆ ವೋಟ್‌ ಹಾಕೋದು ಉತ್ತಮ: ಕೈ ನಾಯಕ ಅಧೀರ್‌ ರಂಜನ್‌

    ಹನುಮಂತನಗರಕ್ಕೆ ಭೇಟಿ ನೀಡಿದ ನಂತರ ರಾಷ್ಟ್ರಪತಿಗಳು ಸರಯೂ ಘಾಟ್‌ನ ಆರತಿ ಸ್ಥಳಕ್ಕೆ ತಲುಪಿದರು. ಅಲ್ಲಿ ಅವರು ಮಹಾ ಆರತಿಯಲ್ಲಿ ಭಾಗವಹಿಸಿದರು. ಸರಯೂ ಘಾಟ್‌ನ ಸುತ್ತಲೂ ವೇದಮಂತ್ರಗಳ ಪ್ರತಿಧ್ವನಿ ಕೇಳಿಬಂತು.

    ರಾಷ್ಟ್ರಪತಿಯವರೊಂದಿಗೆ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಮತ್ತು ಯುಪಿ ಸರ್ಕಾರದ ಸಚಿವ ಸೂರ್ಯ ಪ್ರತಾಪ್ ಶಾಹಿ ಉಪಸ್ಥಿತರಿದ್ದರು. ಇದನ್ನೂ ಓದಿ: ಮತ ಪ್ರಮಾಣ ದಿಢೀರ್‌ ಹೆಚ್ಚಳ – ಮತ್ತೆ ಇವಿಎಂ ವಿಶ್ವಾಸರ್ಹತೆಯನ್ನು ಪ್ರಶ್ನಿಸಿದ ಮಮತಾ

  • ಅಯೋಧ್ಯೆ ರಾಮಮಂದಿರಕ್ಕೆ ಬೆಂಗಳೂರಿನ ಕಂಪನಿಯಿಂದ ‘ಸೂರ್ಯ ತಿಲಕ ಯಂತ್ರ’ ಕೊಡುಗೆ – ಏನಿದರ ವೈಶಿಷ್ಟ್ಯ?

    ಅಯೋಧ್ಯೆ ರಾಮಮಂದಿರಕ್ಕೆ ಬೆಂಗಳೂರಿನ ಕಂಪನಿಯಿಂದ ‘ಸೂರ್ಯ ತಿಲಕ ಯಂತ್ರ’ ಕೊಡುಗೆ – ಏನಿದರ ವೈಶಿಷ್ಟ್ಯ?

    – ರಾಮನವಮಿಯಂದು ರಾಮಲಲ್ಲಾನ ಹಣೆ ಮೇಲೆ ತಿಲಕದಂತೆ ಬೀಳುತ್ತೆ ಸೂರ್ಯನ ಕಿರಣ!

    ಅಯೋಧ್ಯೆ/ರಾಮಮಂದಿರ: ರಾಮನವಮಿ (Ram Navami) ದಿನದಂದು ಅಯೋಧ್ಯೆ ರಾಮಮಂದಿರದ (Ayodhya Ram Mandir) ಗರ್ಭಗುಡಿಯಲ್ಲಿರುವ ರಮಲಲ್ಲಾನ ಹಣೆ ಮೇಲೆ ತಿಲಕದಂತೆ ಸೂರ್ಯನ ಕಿರಣ ಬೀಳುತ್ತದೆ. ಅದಕ್ಕೆ ಸಹಕಾರಿಯಾದ ಆಪ್ಟಿಕಲ್‌ ಯಂತ್ರವನ್ನು (Surya Tilak Machine) ಬೆಂಗಳೂರು ಮೂಲದ ಕಂಪನಿಯೊಂದು ರಾಮ ಜನ್ಮಭೂಮಿ ಟ್ರಸ್ಟ್‌ಗೆ ಕೊಡುಗೆಯಾಗಿ ನೀಡಿರುವುದು ವಿಶೇಷ.

    ಎರಡು ಸಾರ್ವಜನಿಕ ಸಂಸ್ಥೆಗಳು ಮತ್ತು ಜೈನ ಕುಟುಂಬ ನಿರ್ವಹಿಸುತ್ತಿರುವ ಬೆಂಗಳೂರು ಮೂಲದ ಕಂಪನಿಯು ಅಯೋಧ್ಯೆ ರಾಮಮಂದಿರಕ್ಕೆ ‘ಸೂರ್ಯ ತಿಲಕ ಯಂತ್ರ’ವನ್ನು ಕೊಡುಗೆಯಾಗಿ ನೀಡಿದೆ. ಇದನ್ನೂ ಓದಿ: ಗೆಲುವಿಗಾಗಿ ಪ್ರಚಾರದ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ – ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಾಂಕ್ ಕಬ್ಜಕ್ಕೆ ಕ್ಯಾಂಪೇನ್

    84 ಲಕ್ಷ ರೂ. ಮೌಲ್ಯದ ಈ ಯಂತ್ರವನ್ನು ಜಿಗಣಿ ಲಿಂಕ್ ರಸ್ತೆಯಲ್ಲಿರುವ ಆಪ್ಟಿಕ್ಸ್ & ಅಲೈಡ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್ (OPTICA) ಕೊಡುಗೆಯಾಗಿ ನೀಡಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ (CBRI) ಸಹಯೋಗದಲ್ಲಿ ಯಂತ್ರ ಅಭಿವೃದ್ಧಿಪಡಿಸಲಾಗಿದೆ.

    ಕಂಪನಿಯು ಈ ಆಪ್ಟಿಕಲ್ ವ್ಯವಸ್ಥೆಯನ್ನು ಸದ್ಭಾವನೆಯ ಸೂಚಕವಾಗಿ ಅಭಿವೃದ್ಧಿಪಡಿಸಿದೆ. ಈ ಯಂತ್ರದ ವಿನ್ಯಾಸಕ್ಕೆ ನಾಲ್ಕು ತಿಂಗಳ ಸಮಯ ಬೇಕಾಯಿತು. ಪ್ರತಿ ರಾಮನವಮಿಯಂದು 3-4 ನಿಮಿಷಗಳ ಕಾಲ ರಾಮಲಲ್ಲಾ ವಿಗ್ರಹದ ಹಣೆಯ ಮೇಲೆ ಸೂರ್ಯನ ಬೆಳಕು ಬೀಳಲು ಇದು ಸಹಕಾರಿಯಾಗಲಿದೆ ಎಂದು OPTICA ಕಂಪನಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಕೊಟಾರಿಯಾ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಸೇರ್ಪಡೆ ಆಗ್ತಾರಾ ಕರಡಿ ಸಂಗಣ್ಣ?- ಲಕ್ಷ್ಮಣ ಸವದಿ ಭೇಟಿ ಬೆನ್ನಲ್ಲೇ ಕುತೂಹಲ

    ಟೈಟಾನಿಯಂ, ಹಿತ್ತಾಳೆ ಮತ್ತು ಕಂಚು ಬಳಸಿ ಯಂತ್ರ ರೂಪಿಸಲಾಗಿದೆ. ಇದು ಪೆರಿಸ್ಕೋಪ್‌ನಂತೆ ಕಾರ್ಯನಿರ್ವಹಿಸುತ್ತದೆ. ಪೆರಿಸ್ಕೋಪಿಕ್ ವ್ಯವಸ್ಥೆಯಲ್ಲಿನ ಕನ್ನಡಿಯು ರಾಮನವಮಿಯಂದು ನಿರ್ದಿಷ್ಟ ಕೋನದಲ್ಲಿ ಸೂರ್ಯನ ಬೆಳಕನ್ನು ಸೆರೆಹಿಡಿಯುತ್ತದೆ. ಸೆರೆ ಹಿಡಿದ ಬೆಳಕು ವಿಗ್ರಹದ ಹಣೆ ಮೇಲೆ ನಿಖರವಾಗಿ ಮೂಡುತ್ತದೆ ಎಂದು ಹೇಳಿದ್ದಾರೆ.

  • ಅಯೋಧ್ಯೆ ಬಾಲಕರಾಮನಿಗೆ ನಿತ್ಯ ಬೆಳಗ್ಗೆ ಆರತಿ – ದೂರದರ್ಶನದಲ್ಲಿ ನೇರಪ್ರಸಾರ

    ಅಯೋಧ್ಯೆ ಬಾಲಕರಾಮನಿಗೆ ನಿತ್ಯ ಬೆಳಗ್ಗೆ ಆರತಿ – ದೂರದರ್ಶನದಲ್ಲಿ ನೇರಪ್ರಸಾರ

    ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ (Ayodhya Ram Mandir) ಪ್ರತಿಷ್ಠಾಪನೆಗೊಂಡಿರುವ ಬಾಲಕರಾಮನಿಗೆ (Ramlala) ಪ್ರತಿ ದಿನ ಬೆಳಗ್ಗೆ 6:30 ಕ್ಕೆ ಆರತಿ ಬೆಳಗಲಾಗುವುದು. ಇದನ್ನು ದೂರದರ್ಶನದಲ್ಲಿ ನೇರ ಪ್ರಸಾರ ಮಾಡಲಾಗುವುದು.

    ಈಗ ಪ್ರತಿದಿನವೂ ಭಗವಾನ್ ರಾಮಲಲ್ಲಾನ ದಿವ್ಯ ದರ್ಶನವಾಗುತ್ತದೆ. ಅಯೋಧ್ಯೆಯ ಬಾಲಕರಾಮನಿಗೆ ಪ್ರತಿ ದಿನ ಆರತಿ ಬೆಳಗುವುದರ ನೇರ ಪ್ರಸಾರವನ್ನು ವೀಕ್ಷಿಸಬಹುದು. ಪ್ರತಿದಿನ ಬೆಳಗ್ಗೆ 6:30 ಕ್ಕೆ #DDNational ನೇರ ಪ್ರಸಾರವಾಗಲಿದೆ ಎಂದು ಸಾರ್ವಜನಿಕ ಪ್ರಸಾರಕರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಸ್ಪರ್ಧೆಗೆ ಮಲ್ಲಿಕಾರ್ಜುನ ಖರ್ಗೆ ಹಿಂದೇಟು?

    ರಾಮನ ವಿಗ್ರಹದ ಪ್ರತಿಷ್ಠಾಪನೆಯ ನಂತರ, ನಾವು ಬೆಳಗ್ಗೆ ದೈನಂದಿನ ಆರತಿಯ ನೇರ ಪ್ರಸಾರಕ್ಕೆ ಅನುಮತಿ ಪಡೆಯಲು ಪ್ರಯತ್ನಿಸುತ್ತಿದ್ದೆವು. ಈಗ ಅನುಮೋದನೆ ನೀಡಲಾಗಿದೆ. ವಿವಿಧ ಕಾರಣಗಳಿಂದ ಅಯೋಧ್ಯೆಗೆ ಭೇಟಿ ನೀಡಲು ಸಾಧ್ಯವಾಗದ ಎಲ್ಲ ಭಕ್ತರು ಡಿಡಿ ನ್ಯಾಷನಲ್ ಮೂಲಕ ಶ್ರೀರಾಮನ ಮಂಗಳಕರ ದರ್ಶನವನ್ನು ಪಡೆಯಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಅಯೋಧ್ಯೆ ರಾಮಮಂದಿರದಲ್ಲಿ ಜ.22 ರಂದು ರಾಮಮಂದಿರದಲ್ಲಿ ರಾಮಲಲ್ಲಾನ ಪ್ರತಿಷ್ಠಾಪನೆ ನೆರವೇರಿಸಲಾಯಿತು. ರಾಮಲಲ್ಲಾನ ದರ್ಶನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಇದನ್ನೂ ಓದಿ: ಬಿಜೆಪಿ ಕರ್ನಾಟಕ ಫಸ್ಟ್ ಲಿಸ್ಟ್ ಇಂದೇ ರಿಲೀಸ್ ಸಾಧ್ಯತೆ- ಸಂಭಾವ್ಯ ಅಭ್ಯರ್ಥಿಗಳು ಯಾರು?

  • ಅಯೋಧ್ಯೆ ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದ ಆರ್‌ಎಸ್‌ಎಸ್‌ ಕಾರ್ಯಕರ್ತ

    ಅಯೋಧ್ಯೆ ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದ ಆರ್‌ಎಸ್‌ಎಸ್‌ ಕಾರ್ಯಕರ್ತ

    ಉಡುಪಿ: ಇಲ್ಲಿನ ಹಿರಿಯ ಆರ್‌ಎಸ್‌ಎಸ್‌ (RSS) ಕಾರ್ಯಕರ್ತರೊಬ್ಬರು ಅಯೋಧ್ಯೆ ರಾಮಮಂದಿರದ (Ram Mandir) ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದಿದ್ದಾರೆ.

    ಉಡುಪಿಯ (Udupi) ಆರ್‌ಎಸ್‌ಎಸ್‌ ಕಾರ್ಯಕರ್ತ ಪಾಂಡುರಂಗ ಶಾನುಭೋಗ್‌ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ದುಡಿದು ನಿವೃತ್ತರಾಗಿದ್ದರು. ಇದನ್ನೂ ಓದಿ: ರಾಮಮಂದಿರ ಮುಂದಿನ ತಲೆಮಾರಿಗೆ ಹೆಮ್ಮೆಯ ಸಂಕೇತ: ಮೋದಿ

    ರಾಮಲಲ್ಲಾನ (Ram Lalla) ಮಂದಿರಕ್ಕೆ (ರಾಮಮಂದಿರ) ಹೋಗಬೇಕೆಂದು ಅಯೋಧ್ಯೆಗೆ (Ayodhya) ತೆರಳಿದ್ದರು. ಬೆಳಗ್ಗೆ ರಾಮಲಲ್ಲಾನಿಗೆ ಕೈಮುಗಿದು ಧನ್ಯತೆ ವ್ಯಕ್ತಪಡಿಸಿದ್ದರು. ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ಪ್ರಸಾದ ಪಡೆದಿದ್ದರು. ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವ ವೇಳೆ ಹೃದಯಘಾತವಾಗಿ ಮೃತಪಟ್ಟಿದ್ದಾರೆ.

    ಪಾಂಡುರಂಗ ಶಾನುಭೋಗ್‌ ಅವರು ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ. ದೃಷ್ಟಿ ಇಲ್ಲದಿದ್ದರೂ ಸಾಮಾಜಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದರು. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ರಾಜರಾಮ ‘ದರ್ಬಾರ್’ ಈ ವರ್ಷದ ಅಂತ್ಯದಲ್ಲಿ ಪೂರ್ಣ