Tag: Rama Janmabhoomi

  • Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

    Ayodhya Ram Mandir: ಆನೆ, ಸಿಂಹ, ಹನುಮಾನ್, ಗರುಡ ಮೂರ್ತಿಗಳ ಫೋಟೋ ಬಿಡುಗಡೆ

    ಅಯೋಧ್ಯೆ: ರಾಮಮಂದಿರ (Ayodhya Ram Mandir) ಲೋಕಾರ್ಪಣೆಗೆ ಇನ್ನು 18 ದಿನ ಮಾತ್ರ ಉಳಿದಿದೆ. ಇಡೀ ಅಯೋಧ್ಯಾ ನಗರಿ ಸರ್ವಾಂಗ ಸುಂದರವಾಗಿ ರೆಡಿಯಾಗ್ತಿದೆ. ಮಂದಿರದ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿದೆ. ಗ್ರೌಂಡ್ ಫ್ಲೋರ್ ಕೆಲಸಗಳು ಈಗಾಗಲೇ ಪೂರ್ಣಗೊಂಡಿದೆ. ಈಗಾಗಲೇ ಮಂದಿರ ರೂಪ ಸಿಕ್ಕಿದೆ. ಈ ಸಂಬಂಧ ಶ್ರೀರಾಮಮಂದಿರ ತೀರ್ಥ ಟ್ರಸ್ಟ್ ಮಂದಿರದ ಪ್ರಮುಖ ವಿಶೇಷಗಳನ್ನು ಹಂಚಿಕೊಂಡಿದೆ.

    ಈ ಸಂಬಂಧ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರದಿಂದ ಎಕ್ಸ್ ಮಾಡಲಾಗಿದೆ. ಈ ಮೂಲಕ ಪ್ರವೇಶ ದ್ವಾರದಲ್ಲಿ ಆನೆ (Elephant), ಸಿಂಹ (Lion), ಹನುಮಾನ್ (hanuman) ಮತ್ತು ಗರುಡ ಮೂರ್ತಿಗಳ (Garuda)  ಫೋಟೋ ಬಿಡುಗಡೆ ಮಾಡಲಾಗಿದೆ. ಅಲ್ಲದೆ ಈ ಪ್ರತಿಮೆಗಳನ್ನು ರಾಜಸ್ಥಾನದ ಬನ್ಸಿ ಪಹಾರ್‍ಪುರ ಗ್ರಾಮದ ತಿಳಿ ಗುಲಾಬಿ ಬಣ್ಣದ ಮರಳುಗಲ್ಲಿನಿಂದ ಮಾಡಲಾಗಿದೆ ಎಂದು ಎಕ್ಸ್ ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನದವರೆಗೆ ಯುಪಿ ಸರ್ಕಾರಿ ಬಸ್‌ಗಳಲ್ಲಿ ರಾಮ ಭಜನೆ ಪ್ರಸಾರ

    ಪೂರ್ವ ದಿಕ್ಕಿನಲ್ಲಿರುವ ಮಂದಿರದ ಪ್ರಧಾನ ಪ್ರವೇಶದ್ವಾರವಾದ ಸಿಂಹದ್ವಾರವನ್ನು ಅನಾವರಣ ಮಾಡಿದೆ. ಯಾರೇ ಆಗಲಿ ಈ ಸಿಂಹದ್ವಾರದ ಮೂಲಕ ಮಂದಿರ ಪ್ರವೇಶಿಸಬೇಕು. ಇದಕ್ಕೆ 32 ಮೆಟ್ಟಿಲುಗಳಿವೆ. ಮಂದಿರದ ಸನಿಹದಲ್ಲೇ ಇರುವ ಪುರಾತನ ಸೀತಾಬಾವಿಯನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಅಯೋಧ್ಯೆಯಲ್ಲಿ ಸೂರ್ಯೋದಯದಿಂದ ಸೂರ್ಯಾಸ್ತದವರೆಗೂ ಇದ್ದ ಬಾಲರಾಮನ ದರ್ಶನದ ಅವಧಿಯನ್ನು ವಿಸ್ತರಿಸಲು ಟ್ರಸ್ಟ್ ಮುಂದಾಗಿದೆ. ಹೀಗಾಗಿ ತಂಪಾದ ಬೆಳದಿಂಗಳಲ್ಲೂ ರಾಮ್‍ಲಲ್ಲಾ ದರ್ಶನ ಪಡೆಯುವ ಸೌಭಾಗ್ಯ ಭಕ್ತರಿಗೆ ಸಿಗಲಿದೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

    ಜೊತೆಗೆ ಬಾಲರಾಮನಿಗೆ ಮಂಗಳ, ಶಯನ ಆರತಿಗಳನ್ನು ಆರಂಭಿಸಲಾಗುತ್ತದೆ. ಇದೇ ವೇಳೆ ರಾಮಮಂದಿರದ ಭದ್ರತೆಗೆ ಕೃತಕ ಬುದ್ದಿಮತ್ತೆ ತಂತ್ರಜ್ಞಾನ ಅಳವಡಿಸಲು ತೀರ್ಮಾನಿಸಲಾಗಿದೆ. ಮಂದಿರ ಲೋಕಾರ್ಪಣೆ ದಿನ ಉತ್ತರಪ್ರದೇಶ ಪೊಲೀಸರು, ಪ್ಯಾರಾಮಿಲಿಟರಿ ಸೇರಿ 11ಸಾವಿರ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗುತ್ತದೆ. ಜೊತೆಗೆ ಹೆಚ್ಚಿನ ನಿಗಾವಹಿಸಲು, ಪ್ರತಿಯೊಬ್ಬರ ಚಲನವಲನದ ಮೇಲೆ ನಿಗಾ ಇಡಲು ಎಐ ಟೆಕ್ನಾಲಜಿ ಬಳಸಿಕೊಳ್ಳಲಾಗುತ್ತದೆ.

    ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯ ದಿನ ಮಂದಿರಕ್ಕೆ ಬರುವ ಭಕ್ತರಿಗೆ ಏಲಕ್ಕಿ ಮತ್ತು ಸಕ್ಕರೆಯಿಂದ ತಯಾರಿಸಿದ ಪ್ರಸಾದ ವಿತರಿಸಲು ದೇಗುಲದ ಆಡಳಿತ ಮಂಡಳಿ ತೀರ್ಮಾನಿಸಿದೆ. ಇದಕ್ಕಾಗಿ 5 ಲಕ್ಷ ಪ್ರಸಾದ ಪಾಕೆಟ್‍ಗಳನ್ನು ಸಿದ್ದ ಮಾಡಲಾಗುತ್ತಿದೆ.

  • ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್‌

    ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್‌

    ಲಕ್ನೋ: ಈ ಹಿಂದೆ ಅಯೋಧ್ಯೆಗೆ ಹೋಗಲು ಹಿಂದೇಟು ಹಾಕುತ್ತಿದ್ದವರು ಇದೀಗ ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಹೇಳಿದ್ದಾರೆ.

    ಮಥುರಾದಲ್ಲಿ (Mathura) ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಒಂದು ಕಾಲದಲ್ಲಿ ಅಯೋಧ್ಯೆಗೆ ಹೋಗಲು ಹಿಂದೇಟು ಹಾಕುತ್ತಿದ್ದ ಜನ ಈಗ ಜನವರಿ 22 ರಂದು ರಾಮಮಂದಿರ (Ram Mandir) ಉದ್ಘಾಟನೆಗೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಕೆಲವರು ದೂರುತ್ತಿದ್ದಾರೆ ಎಂದು ಟಾಂಗ್‌ ನೀಡಿದರು.

    ಇದೇ ವೇಳೆ ಸಿಎಂ ಅವರು, ಬಿಜೆಪಿ (BJP) ಸರ್ಕಾರದ ಆಡಳಿತದಲ್ಲಿ ದೇವಸ್ಥಾನದ ಸುತ್ತಮುತ್ತ ಆಗಿರುವ ಬೃಹತ್ ಅಭಿವೃದ್ಧಿಯನ್ನು ವಿವರಿಸಿದರು. ಈ ಹಿಂದೆ ರಸ್ತೆಗಳು ಕೂಡ ಕಳಪೆ ಸ್ಥಿತಿಯಲ್ಲಿದ್ದು, ನಗರಕ್ಕೆ ಸಂಪರ್ಕ ಕಲ್ಪಿಸುವ ಒಂದೇ ರೈಲು ಮಾರ್ಗವಿತ್ತು. ಆದರೆ ಈಗ ಎಲ್ಲಾ ಕಡೆಯಿಂದ ನಾಲ್ಕು ಪಥದ ಸಂಪರ್ಕವಿದೆ. ಜನವರಿ 22 ರ ನಂತರ ಅಯೋಧ್ಯೆಗೆ ಭೇಟಿ ನೀಡುವುದು ತ್ರೇತಾ ಯುಗವನ್ನು ನೆನಪಿಸುತ್ತದೆ ಎಂದರು. ಇದನ್ನೂ ಓದಿ: ಇದು ಇಡೀ ಭಾರತದ ಶ್ರೇಷ್ಠ ಕ್ಷಣ – ಶ್ರೀರಾಮನ ಪ್ರಾಣಪ್ರತಿಷ್ಠೆಗೆ ಆಹ್ವಾನ ಪಡೆದ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ

    ಸಾವಿರಾರು ವರ್ಷಗಳ ಹಿಂದೆ ರಾಮನು ಪುಷ್ಪಕ ವಿಮಾನದಿಂದ (Pushpak Viman) ಅಯೋಧ್ಯೆಗೆ ಬಂದನು ಎಂದು ಹೇಳಲಾಗುತ್ತಿದೆ. ಅಂತೆಯೇ ಈಗಾಗಲೇ ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಹ ಉದ್ಘಾಟಿಸಲಾಗಿದೆ. ರೈಲು ಮಾರ್ಗವನ್ನು ಡಬಲ್ ಲೈನ್‌ನೊಂದಿಗೆ ಸಂಪರ್ಕಿಸಲಾಗಿದೆ. ಇದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ಅಯೋಧ್ಯೆ ಮತ್ತು ಸುತ್ತಮುತ್ತ ಇನ್ನೂ 5-6 ಹೊಸ ನಿಲ್ದಾಣಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಸಿಎಂ ಹೇಳಿದರು.

    ಅಯೋಧ್ಯೆಯನ್ನು ಜಲಮಾರ್ಗದ ಮೂಲಕವೂ ಸಂಪರ್ಕಿಸಲು ಸರ್ಕಾರ ಹಲವು ಪ್ರಯತ್ನಗಳನ್ನು ಪ್ರಾರಂಭಿಸಿದೆ ಎಂದು ಅವರು ಇದೇ ವೇಳೆ ಹೇಳಿದರು.

  • ಮೋದಿ ಶ್ರೀರಾಮನನ್ನು ಅಯೋಧ್ಯೆಗೆ ಕರೆತರಲಿದ್ದಾರೆ: ಯೋಗಿ ಆದಿತ್ಯನಾಥ್‌

    ಮೋದಿ ಶ್ರೀರಾಮನನ್ನು ಅಯೋಧ್ಯೆಗೆ ಕರೆತರಲಿದ್ದಾರೆ: ಯೋಗಿ ಆದಿತ್ಯನಾಥ್‌

    ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ಶ್ರೀರಾಮನನ್ನು ಅಯೋಧ್ಯೆಗೆ ಕರೆತರಲಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಹೇಳಿದರು.

    ವಿವಿಧ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿಯನ್ನು ಹಾಡಿ ಹೊಗಳಿದರು. ಜನವರಿ 22 ರಂದು ಭಗವಾನ್ ಶ್ರೀರಾಮನು ತನ್ನ ದೇವಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಆಸೀನನಾಗಲಿದ್ದಾನೆ. ಈ ಮೂಲಕ ಸುಮಾರು 500 ವರ್ಷಗಳ ಕಾಯುವಿಕೆ ಕೊನೆಗೊಳ್ಳಲಿದೆ ಎಂದರು.

    ಭಗವಂತನ ಆಗಮನದ ಮೊದಲು ಅಯೋಧ್ಯೆಯನ್ನು (Ayodhya Ram Mandir) ವಿಶ್ವದ ಅತ್ಯಂತ ಸುಂದರವಾದ ನಗರವನ್ನಾಗಿ ಸ್ಥಾಪಿಸಲು ಪ್ರಧಾನಿ ಸಂಕಲ್ಪ ಮಾಡಿದ್ದರು. ಅದರಂತೆ ಇಂದು ವಿವಿಧ ಯೋಜನೆಗಳನ್ನು ಉದ್ಘಾಟನೆ ಮಾಡಿದ್ದಾರೆ. ಇಂದು ಅಯೋಧ್ಯೆಯ ಜನರು ಪ್ರಧಾನಿಯನ್ನು ಸ್ವಾಗತಿಸಿರುವ ರೀತಿ ನಾವೆಲ್ಲರೂ ನವ ಭಾರತದ ಹೊಸ ಅಯೋಧ್ಯೆಯನ್ನು ನೋಡುವಂತೆ ಮಾಡುತ್ತದೆ ಎಂದು ಹೇಳಿದರು.

    ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಮೋದಿಯವರು ಸಾಕಷ್ಟು ಶ್ರಮವಹಿಸಿದ್ದಾರೆ. ಇಂದು ಅಯೋಧ್ಯೆ ಅಭಿವೃದ್ಧಿಯತ್ತ ಸಾಗುತ್ತಿದೆ ಎಂದು ಹೇಳುತ್ತಾ ಯೋಗಿ ಆದಿತ್ಯನಾಥ್‌ ಅವರು ಪ್ರಧಾನಿಯವರಿಗೆ ಧನ್ಯವಾದಗಳನ್ನು ಸಮರ್ಪಿಸಿದರು. ಇದನ್ನೂ ಓದಿ: Modi In Ayodhya: ಪ್ರಧಾನಿ ಮೋದಿಯಿಂದ ʻಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣʼ ಲೋಕಾರ್ಪಣೆ

    ಇಂದು ಬೆಳಗ್ಗೆ 10.45ರ ಸುಮಾರಿಗೆ ಅಯೋಧ್ಯೆಗೆ ಆಗಮಿಸಿರುವ ಪ್ರಧಾನಿ ಮೋದಿಯವರು ಮೊದಲು ರೋಡ್‌ ಶೋ ನಡೆಸಿದರು. ಬಳಿಕ ರೈಲ್ವೆ ನಿಲ್ದಾಣ ಉದ್ಘಾಟನೆ ಮಾಡಿದರು. ಇದೇ ವೇಳೆ ಕರ್ನಾಟಕದ 3 ರೈಲು ಸೇರಿ 8 ಹೊಸ ರೈಲುಗಳಿಗೆ ಮೋದಿ ಹಸಿರು ನಿಶಾನೆ ತೋರಿದರು. ಅದಾದ ಬಳಿಕ ವಿಮಾನ ನಿಲ್ದಾಣ ಉದ್ಘಾಟಿಸಿದರು.  ಇದನ್ನೂ ಓದಿ:  ಅಯೋಧ್ಯೆಯಲ್ಲಿ ಮಕ್ಕಳಿಬ್ಬರ ಭೇಟಿಯಾಗಿ ಸೆಲ್ಫಿ, ಆಟೋಗ್ರಾಫ್‌ ನೀಡಿದ ಪ್ರಧಾನಿ

  • ರಾಮಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ: ಫಾರೂಕ್‌ ಅಬ್ದುಲ್ಲಾ

    ರಾಮಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ಅಭಿನಂದನೆ: ಫಾರೂಕ್‌ ಅಬ್ದುಲ್ಲಾ

    ಜಮ್ಮು-ಕಾಶ್ಮೀರ: ಅಯೋಧ್ಯೆ ರಾಮ ಮಂದಿರವು (Ayodhya Ram Mandir) ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗುತ್ತಿದೆ. ಈ ಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ (Farooq Abdullah) ಹೇಳಿದ್ದಾರೆ.

    ಅಯೋಧ್ಯೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಕಠಿಣ ಪರಿಶ್ರಮದಿಂದ ಇಂದು ರಾಮಮಂದಿರವು (Ayodhya Ram Temple) ತಲೆ ಎತ್ತಿ ನಿಂತಿದೆ. ಭಗವಾನ್ ರಾಮನು ಹಿಂದೂಗಳಿಗೆ ಮಾತ್ರ ಸೇರಿದವರಲ್ಲ, ಅವರು ಪ್ರಪಂಚದ ಎಲ್ಲರಿಗೂ ಸೇರಿದವರು ಎಂದು ಹೇಳಲು ಇಚ್ಛಿಸುತ್ತೇನೆ. ಪುಸ್ತಕಗಳಲ್ಲಿಯೂ ಇದನ್ನೇ ಬರೆಯಲಾಗಿದೆ ಎಂದು ಹೇಳಿದರು.

    ಭಗವಾನ್‌ ರಾಮ ಸಹೋದರತ್ವ, ಪ್ರೀತಿ ಮತ್ತು ಏಕತೆಯ ಬಗ್ಗೆ ಮಾತನಾಡಿದ್ದಾರೆ. ಅವರು ಯಾವತ್ತೂ ಭಾಷೆ ಹಾಗೂ ಧರ್ಮದ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಪ್ರೀತಿ ಹಾಗೂ ಒಗ್ಗಟ್ಟಿನಿಂದ ಬಾಳಬೇಕು ಎಂದು ಇಡೀ ಜಗತ್ತಿಗೆ ಸಾರಿದವರಾಗಿದ್ದಾರೆ ಎಂದು ಫಾರೂಕ್‌ ಅಬ್ದುಲ್ಲಾ ತಿಳಿಸಿದರು. ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ವೈಯಕ್ತಿಕ ಆಹ್ವಾನ ಪತ್ರದಲ್ಲೇನಿದೆ..?

    2024ರ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ. ಹೀಗಾಗಿ ಅವರು ಜಗತ್ತಿಗೆ ಸಾರಿದ್ದ ಆ ಸಹೋದರತ್ವದ ಸಂದೇಶವನ್ನು ಕಾಪಾಡಿಕೊಂಡು ಅದರಂತೆ ಬದುಕುವಂತೆ ನಾನು ಎಲ್ಲರಿಗೂ ಹೇಳಲು ಬಯಸುತ್ತೇನೆ ಎಂದರು.

  • Ram Mandir Inauguration: ಈ ಐವರಿಗೆ ಮಾತ್ರ ರಾಮಮಂದಿರದ ಗರ್ಭಗುಡಿ ಪ್ರವೇಶಕ್ಕೆ ಅವಕಾಶ

    Ram Mandir Inauguration: ಈ ಐವರಿಗೆ ಮಾತ್ರ ರಾಮಮಂದಿರದ ಗರ್ಭಗುಡಿ ಪ್ರವೇಶಕ್ಕೆ ಅವಕಾಶ

    ಅಯೋಧ್ಯೆ: 2024ರ ಜನವರಿ 22 ರಂದು ರಾಮಜನ್ಮಭೂಮಿಯಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣಪ್ರತಿಷ್ಠಾನೆ ಕಾರ್ಯಕ್ರಮ ನಡೆಯಲಿದ್ದು, ಸಿದ್ಧತೆಗಳು ಅಂತಿಮ ಹಂತಕ್ಕೆ ತಲುಪುತ್ತಿದೆ. ಪ್ರತಿಷ್ಠಾಪನಾ ಕಾರ್ಯಕ್ರಮದಂದು (Consecration Ceremony) ಕೇವಲ 5 ಜನರಿಗೆ ಮಾತ್ರ ರಾಮಮಂದಿರದ ಗರ್ಭಗುಡಿಗೆ (Sanctum) ಪ್ರವೇಶ ಮಾಡಲು ಅವಕಾಶ ನೀಡಲಾಗಿದೆ.

    ಹೌದು. ಈ ಐದು ಜನರನ್ನು ಹೊರತುಪಡಿಸಿ ಯಾರಿಗೂ ಗರ್ಭಗುಡಿ ಒಳಗೆ ಪ್ರವೇಶ ಮಾಡಲು ಅವಕಾಶವಿಲ್ಲ. ಅಲ್ಲದೆ ಈ ಸಂದರ್ಭದಲ್ಲಿ ಗರ್ಭಗುಡಿಯನ್ನು ಪರದೆಯಿಂದ ಮುಚ್ಚಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ದೇಶಾದ್ಯಂತ 50,000 ಕೋಟಿ ರೂ. ವಹಿವಾಟು ಸಾಧ್ಯತೆ

    ಆ ಐವರು ಯಾರು..?: ಗರ್ಭಗುಡಿ ಒಳಗೆ ನರೇಂದ್ರ ಮೋದಿ (Narendra Modi) ಸಹಿತ ಐವರಷ್ಟೇ ಒಳಗೆ ಪ್ರವೇಶಿಸಬಹುದಾಗಿದೆ. ಪ್ರಧಾನಿ ಜೊತೆಗೆ ಯುಪಿ ಗವರ್ನರ್ ಆನಂದಿ ಬೆನ್ ಪಟೇಲ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹಾಗೂ ರಾಮಮಂದಿರದ ಮುಖ್ಯ ಅರ್ಚಕ ಸತ್ಯೇಂದ್ರ ಅವರು ಮಾತ್ರ ಉಪಸ್ಥಿತರಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

    ಅಂದು ಪೂಜಾ ಕಾರ್ಯಕ್ರಮಕ್ಕೆ ಅರ್ಚಕರ ಮೂರು ತಂಡಗಳನ್ನು ರಚಿಸಲಾಗಿದೆ. ಮೊದಲ ತಂಡದ ನೇತೃತ್ವವನ್ನು ಸ್ವಾಮಿ ಗೋವಿಂದ್ ದೇವ್ ಗಿರಿ ವಹಿಸಲಿದ್ದಾರೆ. ಕಂಚಿ ಕಾಮಕೋಟಿ ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ನೇತೃತ್ವದಲ್ಲಿ ಎರಡನೇ ಅರ್ಚಕರ ತಂಡ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಿದೆ. ಇನ್ನು ಮೂರನೇ ತಂಡದಲ್ಲಿ ಕಾಶಿಯ 21 ಮಂದಿ ವಿದ್ವಾಂಸರು ಭಾಗವಹಿಸುತ್ತಾರೆ.

    ನಂಬಿಕೆ ಏನು..?: ರಾಮಲಾಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾ ಸಮಯದಲ್ಲಿ ಗರ್ಭಗುಡಿಯ ಪರದೆಯು ಮುಚ್ಚಿರುತ್ತದೆ. ರಾಮನ ವಿಗ್ರಹಕ್ಕೆ ಕಟ್ಟಿದ ಪಟ್ಟಿಯನ್ನು ತೆಗೆದ ನಂತರ ವಿಗ್ರಹಕ್ಕೆ ಕನ್ನಡಿ ತೋರಿಸಲಾಗುತ್ತದೆ. ಇದರಿಂದ ಶ್ರೀರಾಮನು ಮೊದಲು ತನ್ನ ಮುಖವನ್ನು ತಾನೇ ನೋಡುತ್ತಾನೆ ಎಂಬ ನಂಬಿಕೆ ಇದ್ದು, ನಂತರ ಭಕ್ತರಿಗೆ ಶ್ರೀರಾಮನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂಬುದಾಗಿ ತಿಳಿದುಬಂದಿದೆ.

  • ಬಳ್ಳಾರಿಯ ಕಿಷ್ಕಿಂಧೆಯಲ್ಲಿ ತಲೆ ಎತ್ತಲಿದೆ ವಿಶ್ವದ ಎತ್ತರದ ಹನುಮಾನ್ ಪ್ರತಿಮೆ

    ಬಳ್ಳಾರಿಯ ಕಿಷ್ಕಿಂಧೆಯಲ್ಲಿ ತಲೆ ಎತ್ತಲಿದೆ ವಿಶ್ವದ ಎತ್ತರದ ಹನುಮಾನ್ ಪ್ರತಿಮೆ

    – ಅಂದಾಜು 1,200 ಕೋಟಿ ರೂ. ವೆಚ್ಚದಲ್ಲಿ ಪ್ರತಿಮೆ ನಿರ್ಮಾಣ

    ಲಕ್ನೋ: ಹನುಮ ಜನ್ಮಭೂಮಿಯಾದ ಬಳ್ಳಾರಿ ಜಿಲ್ಲೆಯ ಕಿಷ್ಕಿಂದೆಯಲ್ಲಿ ವಿಶ್ವದ ಅತೀ ಎತ್ತರದ ಹನುಮಂತನ ಪ್ರತಿಮೆಯನ್ನು ಶೀಘ್ರವೇ ನಿರ್ಮಿಸಲಾಗುವುದು ಎಂದು ಹನುಮಂತ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಸ್ವಾಮಿ ಗೋವಿಂದ ಆನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ.

    ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಈ ಕುರಿತು ಮಾತನಾಡಿದ ಅವರು, 215 ಮೀಟರ್ ಎತ್ತರದ ಪ್ರತಿಮೆಯನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದ್ದು, 1,200 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಇದು ವಿಶ್ವದಲ್ಲೇ ಅತ್ಯಂತ ಎತ್ತರದ ಹನುಮಂತನ ಪ್ರತಿಮೆಯಾಗಲಿದೆ. ಬಳ್ಳಾರಿಯ ಪಂಪಾಪುರ ಕಿಷ್ಕಿಂಧೆಯಲ್ಲಿ ನಿರ್ಮಿಸಲಾಗುತ್ತಿದೆ. ರಾಷ್ಟ್ರಾದ್ಯಂತ ರಥಯಾತ್ರೆ ಮಾಡುವ ಮೂಲಕ ಪ್ರತಿಮೆ ನಿರ್ಮಾಣಕ್ಕೆ ಹಣ ಸಂಗ್ರಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

    ಇದೇ ವೇಳೆ ರಾಮಜನ್ಮಭೂಮಿಯಲ್ಲಿ ರಥ ನಿರ್ಮಾಣದ ಕುರಿತು ಮಾತನಾಡಿರುವ ಅವರು, ರಾಮಜನ್ಮ ಭೂಮಿಯಲ್ಲಿ ಸುಮಾರು 2 ಕೋಟಿ ರೂ.ವೆಚ್ಚದಲ್ಲಿ 80 ಅಡಿ ಎತ್ತರದ ರಥ ನಿರ್ಮಾಣ ಮಾಡಲಾಗುತ್ತಿದೆ. ಇನ್ನೆರಡು ವರ್ಷದಲ್ಲಿ ರಥ ನಿರ್ಮಾಣವಾಗಲಿದೆ ಎಂದು ತಿಳಿಸಿದ್ದಾರೆ.

    ಈ ತಿಂಗಳ ಆರಂಭದಲ್ಲಿ ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಬೋನೊ ವಿನ್ಯಾಸದ ಕಲ್ಪನೆಗಳನ್ನು ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಇದನ್ನು ರಾಮ ಮಂದಿರ ನಿರ್ಮಾಣದ ಅಂತಿಮ ಮಾಸ್ಟರ್ ಪ್ಲಾನ್‍ನಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಟ್ರಸ್ಟ್ ಹೇಳಿದೆ. ಧಾರ್ಮಿಕ ಯಾತ್ರೆ, ಆಚರಣೆಗಳು, ಸಂಸ್ಕೃತಿ ಹಾಗೂ ವೈಜ್ಞಾನಿಕ ಯೋಜನೆಗಳ ಪ್ರಮುಖ ಅಂಶಗಳ ಆಲೋಚನೆಗಳನ್ನು ತಿಳಿಸುವಂತೆ ಹೇಳಿದೆ.