Tag: ramachandrapura mutt

  • ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ- ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಎಸ್‍ಕೆ ಮುಖರ್ಜಿ

    ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರ- ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಎಸ್‍ಕೆ ಮುಖರ್ಜಿ

    ಬೆಂಗಳೂರು: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯಿಂದ ನ್ಯಾಯಮೂರ್ತಿ ಎಸ್.ಕೆ. ಮುಖರ್ಜಿ ಹಿಂದೆ ಸರಿದಿದ್ದಾರೆ.

    “ನನ್ನ ವಿರುದ್ಧ ಪ್ರತಿವಾದಿ ಮಠದವರು ಪೂರ್ವಾಗ್ರಹ ಭಾವನೆ ವ್ಯಕ್ತಪಡಿಸಿರುವುದರಿಂದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ” ಎಂಬ ಕಾರಣ ನೀಡಿ ನ್ಯಾ. ಎಸ್.ಕೆ. ಮುಖರ್ಜಿ ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

    ಈ ಮೂಲಕ ರಾಘವೇಶ್ವರ ಶ್ರೀ ವಿರುದ್ಧದ ದಾಖಲಾದ ಪ್ರಕರಣದಿಂದ ಹಿಂದೆ ಸರಿದ ಏಳನೇ ನ್ಯಾಯಮೂರ್ತಿಯಾಗಿದ್ದಾರೆ.

    ಮುಖರ್ಜಿ ಅವರು ಕೋರ್ಟ್‌ನಲ್ಲಿ ನಡೆಸಿದ ವಿಚಾರಣೆ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಈ ವರದಿ ನೋಡಿದರೆ ಅವರು ಈ ಪ್ರಕರಣದಲ್ಲಿ ಪೂರ್ವಗ್ರಹ ಪೀಡಿತರಾಗಿದ್ದಾರೆ. ಈ ಕಾರಣಕ್ಕೆ ನಮಗೆ ಈ ಪ್ರಕರಣದಲ್ಲಿ ನ್ಯಾಯ ಸಿಗುವ ಸಾಧ್ಯತೆ ಕಾಣುತ್ತಿಲ್ಲ. ಆದ್ದರಿಂದ ಅವರು  ತಮ್ಮ ಮುಂದಿರುವ ರಾಮಚಂದ್ರಾಪುರ ಮಠದ ವಿರುದ್ಧದ ಪಿಐಎಲ್‌ ವಿಚಾರಣೆಯಿಂದ ಹಿಂದೆ ಸರಿಯಬೇಕು ಎಂದು ಅಖಿಲ ಹವ್ಯಕ ಮಹಾಸಭಾ ಈ ಹಿಂದೆ ಕೋರ್ಟಿಗೆ ಪ್ರಮಾಣಪತ್ರ ಸಲ್ಲಿಸಿತ್ತು.

    ಈ ಹಿಂದೆ ಅತ್ಯಾಚಾರ ಆರೋಪ ಬಂದಾಗ ಆರು ನ್ಯಾಯಾಧೀಶರು ವಿಚಾರಣೆ ನಡೆಸೋದಿಲ್ಲ ಅಂತ ಪ್ರಕರಣದಿಂದ ಹಿಂದೆ ಹೋಗಿದ್ರು. ನ್ಯಾ. ಕೆ.ಎನ್ ಫಣೀಂದ್ರ, ನ್ಯಾ. ರಾಮ್‍ಮೋಹನ್ ರೆಡ್ಡಿ, ನ್ಯಾ. ಎನ್ ಕುಮಾರ್, ನ್ಯಾ. ಹೆಚ್‍ಜಿ ರಮೇಶ್, ನ್ಯಾ ಭಜಂತ್ರಿ ಹಾಗೂ ನ್ಯಾ. ಸುಭ್ರೋ ಕಮಲ್ ಮುಖರ್ಜಿ ವಿವಿಧ ಕಾರಣಗಳಿಂದ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು.

    ರಾಮಚಂದ್ರಪುರ ಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಿಸಬೇಕೆಂದು ಎದುರ್ಕಳ ಈಶ್ವರ ಭಟ್ ಮತ್ತು ಜೈಕೃಷ್ಣ ಅವರು ಹೈಕೋರ್ಟ್ ಮೊರೆ ಹೋಗಿದ್ದರು. 22 ಬ್ಯಾಂಕ್ ಅಕೌಂಟ್‍ಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರಕ್ಕೆ ತನಿಖೆ ನಡೆಸುವಂತೆ ಆದೇಶಿಸಿತ್ತು.

    ಮನವಿಯಲ್ಲಿ ಏನಿತ್ತು?: ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಮತ್ತು ಸ್ವಾಮೀಜಿ ಮಠದಲ್ಲಿದ್ದು ಅಧಿಕಾರ ಚಲಾಯಿಸುವುದನ್ನು ತಡೆಯಬೇಕು ಎಂದು ಒತ್ತಾಯಿಸಿಎದುರ್ಕಳ ಈಶ್ವರ ಭಟ್ ಮತ್ತು ಜೈಕೃಷ್ಣ ಅವರು 2016ರ ಏಪ್ರಿಲ್ 30 ರಂದು ಅಂದಿನ ಮುಖ್ಯಕಾರ್ಯದರ್ಶಿ ಅರವಿಂದ್ ಜಾಧವ್ ಅವರಿಗೆ ಮನವಿ ಸಲ್ಲಿಸಿದ್ದರು. ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಶ್ರೀಗಳನ್ನು ಕೆಳಗಿಳಿಸಬೇಕು. ಮಠದ ಸ್ಥಿರ ಮತ್ತು ಚರಾಸ್ತಿ ಮೇಲೆ ನಿಯಂತ್ರಣ ಹೊಂದದಂತೆ ಸೂಚಿಸಬೇಕು. ಪೂಜಾ ಕಾರ್ಯವನ್ನು ಹೊರತು ಪಡಿಸಿ ಮಠದ ಎಲ್ಲ ವ್ಯವಹಾರಗಳನ್ನು ನೋಡಿಕೊಳ್ಳಲು ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದರು.

     

  • ಬ್ಲಾಕ್‍ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಕ್ಲೀನ್‍ಚಿಟ್

    ಬ್ಲಾಕ್‍ಮೇಲ್ ಕೇಸ್: ಪ್ರೇಮಲತಾ ದಂಪತಿಗೆ ಕ್ಲೀನ್‍ಚಿಟ್

    ಕಾರವಾರ: ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀ ಬ್ಲಾಕ್ ಮೇಲ್ ಕೇಸ್‍ನಲ್ಲಿ ಪ್ರೇಮಲತಾ ದಂಪತಿಗೆ ಕ್ಲೀನ್ ಚಿಟ್ ಸಿಕ್ಕಿದೆ. ಬ್ಲಾಕ್‍ಮೇಲ್ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಸಿಐಡಿ ಯಾವುದೇ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿರುವ ಜಿಎಂಎಫ್‍ಸಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್  ಸಲ್ಲಿಸಿದೆ.

    ರಾಮಕಥಾ ಗಾಯಕಿ ಪ್ರೇಮಲತಾ, ಶ್ರೀಗಳ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸುವ, ಒಂದು ದಿನದ ಮುಂಚೆಯೇ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣ ದುರದ್ದೇಶದಿಂದ ದಾಖಲಿಸಿದಂತೆ ಕಾಣುತ್ತದೆ. ಹೀಗಾಗಿ ಪ್ರಕರಣದಲ್ಲಿ ಯಾವುದೇ ಸತ್ಯಾಂಶ ಕಂಡುಬಂದಿಲ್ಲ ಎಂದು ಬಿ ರಿಪೋರ್ಟ್ ನಲ್ಲಿ ಸಿಐಡಿ ಉಲ್ಲೇಖಿಸಿದೆ.

    ಏನಿದು ಪ್ರಕರಣ?
    ರಾಮಕಥಾ ಗಾಯಕಿ ಪ್ರೇಮಲತಾ ದಿವಾಕರ ಶಾಸ್ತ್ರಿ  ದಂಪತಿ ಮೂರು ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಒಂದು ವೇಳೆ ಈ ಹಣವನ್ನು ನೀಡದೇ ಇದ್ದರೆ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿ ರಾಘವೇಶ್ವರ ಶ್ರೀ ಹೊನ್ನಾವರ ಪೊಲೀಸ್ ಠಾಣೆಯಲ್ಲಿ 2014ರ ಆಗಸ್ಟ್ ನಲ್ಲಿ ಬ್ಲಾಕ್‍ಮೇಲ್ ಪ್ರಕರಣ ದಾಖಲಿಸಿದ್ದರು.

    ಪ್ರಕರಣ ದಾಖಲಾದ ಬಳಿಕ ದಿವಾಕರ ಶಾಸ್ತ್ರಿ, ಪ್ರೇಮಲತಾ ಹಾಗೂ ನಾರಾಯಣ ಶಾಸ್ತ್ರಿ ಅವರನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನಲ್ಲಿದ್ದ ಆರೋಪಿಗಳಿಗೆ 21 ದಿನಗಳ ಬಳಿಕ ಜಾಮೀನು ಸಿಕ್ಕಿತ್ತು.