Tag: Ramakrishna Hegde

  • ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಭರವಸೆ

    ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಹೆಸರು: ಡಿಕೆಶಿ ಭರವಸೆ

    ಬೆಂಗಳೂರು: ನಗರದ ಪ್ರಮುಖ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ (Ramakrishna Hegde) ಅವರ ಹೆಸರನ್ನು ಇಡಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಭರವಸೆ ನೀಡಿದರು.

    ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಮಕೃಷ್ಣ ಹೆಗಡೆ ಅವರ ಹೆಸರು ಶಾಶ್ವತವಾಗಿ ಉಳಿದುಕೊಳ್ಳಬೇಕು. ಹೀಗಾಗಿ ನಿಮ್ಮೆಲ್ಲರ ಜೊತೆ ಒಂದು ದಿನ ಚರ್ಚೆ ಮಾಡಿ, ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ಅವರ ಹೆಸರು ಇಡಲಾಗುವುದು. ಇದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.ಇದನ್ನೂ ಓದಿ: ಕಳಸದಲ್ಲಿ ಧಾರಾಕಾರ ಮಳೆ – ಟೀ ಎಸ್ಟೇಟ್‍ಗೆ ನುಗ್ಗಿದ ನೀರು, ಕಾರ್ಮಿಕರ ಪರದಾಟ

    ಹೆಗಡೆ ಅವರದ್ದು ಪರಿಶುದ್ಧ ಆಡಳಿತ ಹಾಗೂ ರಾಜಕಾರಣ:
    ರಾಮಕೃಷ್ಣ ಹೆಗಡೆ ಅವರಲ್ಲಿ ಕ್ಷಮಿಸುವ ಗುಣ, ಹೃದಯ ಶ್ರೀಮಂತಿಕೆ ಇತ್ತು. ನಾವು ಎಂದಿಗೂ ಅವರಲ್ಲಿ ದ್ವೇಷ ರಾಜಕಾರಣ ನೋಡಲಿಲ್ಲ. ಇದು ನಮ್ಮೆಲ್ಲರಿಗೂ ದೊಡ್ಡ ಆದರ್ಶ. ಅವರದ್ದು ಪರಿಶುದ್ಧ ಆಡಳಿತ ಹಾಗೂ ರಾಜಕಾರಣ. ರಾಮಕೃಷ್ಣ ಹೆಗಡೆ ಅವರು ಕನಕಪುರದಿಂದ ಸ್ಪರ್ಧೆ ಮಾಡಿದ್ದರು. ಅವರನ್ನು ಸೋಲಿಸಲು ನಾನು ವಿದ್ಯಾರ್ಥಿ ನಾಯಕನಾಗಿ ಹೋರಾಟ ಮಾಡಿದ್ದೆ. ನನ್ನ ಹೋರಾಟ ಗಮನಿಸಿ 1985ರಲ್ಲಿ ಪಕ್ಷ ನನಗೆ ಟಿಕೆಟ್ ನೀಡಿತ್ತು. ಅವರು ಮುಖ್ಯಮಂತ್ರಿ ಆಗಿದ್ದಾಗ ನಡೆದ ಲೋಕಸಭೆ ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಆಗ ನನ್ನ ನಾಯಕತ್ವಕ್ಕೆ ಬೆಂಬಲ ಸಿಗಲಿಲ್ಲ ಎಂದು ಮತ್ತೆ ಚುನಾವಣೆಗೆ ಹೋದರು ಎಂದು ಮೆಲುಕು ಹಾಕಿದರು.

    1985ರಲ್ಲಿ ನನಗೆ ದೇವೇಗೌಡರ ವಿರುದ್ಧ ಸಾತನೂರಿನಲ್ಲಿ ಸ್ಪರ್ಧಿಸಲು ಪಕ್ಷ ಟಿಕೆಟ್ ನೀಡಿತ್ತು. ಆಗ ನಾನು ಸೇರಿದಂತೆ ಬಹುತೇಕರು ಹೆಗಡೆ ಅವರ ಹೆಸರಿನ ಅಲೆಯಲ್ಲಿ ಕೊಚ್ಚಿ ಹೋದೆವು. ನಂತರ ನಾನು ಜಿಲ್ಲಾ ಪರಿಷತ್ ಸದಸ್ಯನಾಗಿ ರಾಜಕೀಯ ಮುಂದುವರಿಸಿದೆ. ರಾಜೀವ್ ಗಾಂಧಿ ಅವರು ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಮಾಡಿದಾಗ ಕರ್ನಾಟಕಕ್ಕೆ ಬಂದು ರಾಮಕೃಷ್ಣ ಹೆಗಡೆ ಅವರು ಹಾಕಿದ್ದ ಅಡಿಪಾಯದ ಅಧ್ಯಯನ ಮಾಡಿದ್ದರು. ಅದರ ಪರಿಣಾಮ ಇಂದು ನಾವು ಪಂಚಾಯಿತಿಯಿಂದ ಪಾರ್ಲಿಮೆಂಟ್‌ವರೆಗೂ ಸಾವಿರಾರು ನಾಯಕರನ್ನು ತಯಾರು ಮಾಡುತ್ತಿದ್ದೇವೆ ಎಂದು ಸ್ಮರಿಸಿದರು.

    ನಾನು ವಿಧಾನಸಭೆಯಲ್ಲಿ ರಾಮಕೃಷ್ಣ ಹೆಗಡೆ ಅವರನ್ನು ನೋಡಿದ್ದೇನೆ. ಟೆಲಿಫೋನ್ ಟ್ಯಾಪಿಂಗ್ ಬಗ್ಗೆ ನಡೆದ ಚರ್ಚೆಯಲ್ಲಿ ಹೆಗಡೆ ಅವರು ಮಾಡಿದ ಭಾಷಣ ನಾನು ಕಂಡ ಅತ್ಯುತ್ತಮ ಭಾಷಣಗಳಲ್ಲಿ ಒಂದು. ವೀರೇಂದ್ರ ಪಾಟೀಲರ ಜೊತೆ ಉತ್ತಮ ಸ್ನೇಹ ಹೊಂದಿದ್ದರೂ ಕೂಡ ಅವರು ತಮ್ಮ ಪಕ್ಷದ ಸಿದ್ಧಾಂತದ ಗೆರೆ ದಾಟಲಿಲ್ಲ ಎಂದು ಶ್ಲಾಘಿಸಿದರು.ಇದನ್ನೂ ಓದಿ: ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ ಪ್ರಭು ಚೌಹಾಣ್ – 1 ಲಕ್ಷ ದಂಡ ವಿಧಿಸಿದ ಕಲಬುರಗಿ ಪೀಠ

    ಹೆಗಡೆ ಅವರ ಬೆಂಬಲ ಕೋರಿದ್ದೆ:
    ಎಸ್.ಎಂ ಕೃಷ್ಣ ಅವರ ಕಾಲದಲ್ಲಿ ಸಂಸತ್ ಚುನಾವಣೆಗೆ ನಿಲ್ಲಬೇಕಾದ ಪರಿಸ್ಥಿತಿ ಬಂದಿತ್ತು. ಆಗ ದೇವೇಗೌಡರು ಹಾಗೂ ರಾಮಕೃಷ್ಣ ಹೆಗಡೆ ಅವರ ನಡುವೆ ಭಿನ್ನಾಭಿಪ್ರಾಯ ಇತ್ತು. ಆಗ ನಾನು ಹೆಗಡೆ ಅವರ ಬೆಂಬಲ ಕೋರಲು ಹೋಗಿ ಭೇಟಿ ಮಾಡಿದ್ದೆ. ಆಗ ಹೆಗಡೆ ಅವರು, ನಾನು ಪಕ್ಷದ ವ್ಯವಸ್ಥೆಯಲ್ಲಿದ್ದೇನೆ, ಹೀಗಾಗಿ ನಿನಗೆ ಬೆಂಬಲ ನೀಡುವ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ನಿನಗೆ ಒಳ್ಳೆಯದಾಗಲಿ ಎಂದು ನೇರವಾಗಿ ಹೇಳಿದ್ದರು. ಅಂದು ಅವರ ಪಕ್ಷದ ಅಭ್ಯರ್ಥಿಗೆ ಹೆಗಡೆ ಅವರು ಸಹಾಯ ಮಾಡದೇ ಇದ್ದಿದ್ದರೆ ಆ ಚುನಾವಣೆಯಲ್ಲಿ ನಾನು ಗೆದ್ದು ಸಂಸತ್ತಿಗೆ ಹೋಗುತ್ತಿದ್ದೆ ಎಂದು ತಿಳಿಸಿದರು.

    ಬೆಂಗಳೂರಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದೇ ಅವರು:
    ಬೆಂಗಳೂರು ಜಾಗತಿಕ ನಗರವಾಗಿದೆ. 25 ಲಕ್ಷ ಐಟಿ ಉದ್ಯೋಗಿಗಳು ಇಲ್ಲಿದ್ದಾರೆ. 2 ಲಕ್ಷ ವಿದೇಶಿ ಪಾಸ್‌ಪೋರ್ಟ್ ಹೊಂದಿರುವವರು ಕೆಲಸ ಮಾಡುತ್ತಿದ್ದಾರೆ. ಬೆಂಗಳೂರು (Bengaluru) ಇಂದು ಈ ಮಟ್ಟಕ್ಕೆ ಬೆಳೆಯಲು ರಾಮಕೃಷ್ಣ ಅವರ ಕಾಲದಲ್ಲಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಕೊಟ್ಟ ಅನುಮತಿಯೂ ಒಂದು ಕಾರಣ. ಅದರಿಂದ ಬೆಂಗಳೂರಿನಲ್ಲಿ ಕೈಗಾರಿಕಾ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಯಿತು. ಇಲ್ಲಿನ ಎಂಜಿನಿಯರ್ ಕಾಲೇಜುಗಳಲ್ಲಿ ಸಜ್ಜನ್ ಜಿಂದಾಲ್ ಸೇರಿದಂತೆ ಅನೇಕ ಉದ್ಯಮಿಗಳು ಹೊರಗಿನಿಂದ ಬಂದು ಇಲ್ಲಿ ಓದುತ್ತಿದ್ದಾರೆ ಎಂದರು.

    ಬೆಂಗಳೂರಿಗೆ ಕಾವೇರಿ ನೀರು ಬರಲು ರಾಮಕೃಷ್ಣ ಹೆಗಡೆ ಅವರೇ ಕಾರಣ. ನಾವು ಈಗ ಆರನೇ ಹಂತದ ಯೋಜನೆಗೆ ಮುಂದಾಗಿದ್ದೇವೆ ಎಂದು ತಿಳಿಸಿದರು.ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್ ಬೆಂಗಳೂರಿಗೆ ಲಿಂಕ್; ಬೆಂಗಳೂರಿನತ್ತ ಮಾಸ್ಕ್ ಮ್ಯಾನ್ ಚಿನ್ನಯ್ಯ

  • ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

    ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

    ರಾಮನಗರ: ರಾಜ್ಯಕ್ಕೆ ನಾಲ್ಕು ಮಂದಿ ಮುಖ್ಯಮಂತ್ರಿಗಳನ್ನು (Chief Minister) ಕೊಟ್ಟ ಹೆಗ್ಗಳಿಕೆಗೆ ರಾಮನಗರ (Ramanagara) ಜಿಲ್ಲೆ ಪಾತ್ರವಾಗಿದೆ. ರಾಜಕೀಯ (Politics) ಘಟನಾವಳಿಗಳ ತವರಾಗಿರುವ ರಾಮನಗರದ ರಾಜಕೀಯ ಇತಿಹಾಸವೇ ರೋಚಕ.

    ರಾಜ್ಯದ ಎರಡನೇ ಮುಖ್ಯಮಂತ್ರಿ ಹಾಗೂ ಮೊದಲ ಚುನಾಯಿತ ಮುಖ್ಯಮಂತ್ರಿ ಎಂದೇ ಹೆಸರುವಾಸಿಯಾಗಿರುವ ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯ (Kengal Hanumanthaiah) ಸ್ಪರ್ಧೆ ಮಾಡಿದ್ದು ಇದೇ ರಾಮನಗರ ಕ್ಷೇತ್ರದಲ್ಲಿ. 1952ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕೆಂಗಲ್ ಹನುಮಂತಯ್ಯ, ಅಂದಿನ ಮೈಸೂರು (Mysuru) ಸರ್ಕಾರದ ಮುಖ್ಯಮಂತ್ರಿಯಾಗಿದ್ದರು. ಮೂಲತಃ ರಾಮನಗರ ತಾಲೂಕಿನ ಲಕ್ಕಪ್ಪನಹಳ್ಳಿಯಲ್ಲಿ ಜನಿಸಿದ್ದ ಕೆಂಗಲ್ ಹನುಮಂತಯ್ಯ ಸ್ವಾತಂತ್ರ‍್ಯ ಹೋರಾಟದಲ್ಲಿಯೂ ಭಾಗಿಯಾಗಿದ್ದರು. 1952ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ದಕ್ಷ ಆಡಳಿತವನ್ನು ನೀಡಿದ್ದರು. ಇದನ್ನೂ ಓದಿ: ಜಾತಿ ಬಲ ಇಲ್ಲದಿದ್ದರೂ, ಅಭಿವೃದ್ಧಿ ನಂಬಿ ಗೆದ್ದು ಸಚಿವರಾದ ಬಿ.ಸಿ. ನಾಗೇಶ್ 

    1983ರಲ್ಲಿ ರಾಮಕೃಷ್ಣ ಹೆಗಡೆ (Ramakrishna Hegde) ಅವರು ಮುಖ್ಯಮಂತ್ರಿಯಾಗಿದ್ದರು. ಆದರೆ ಅವರು ಶಾಸಕರಾಗಿರಲಿಲ್ಲ. ಹೀಗಾಗಿ ಕನಕಪುರ (Kanakapura) ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಮಂಜುನಾಥ್ ಕುನ್ನೂರು, ಪುತ್ರ ಶೀಘ್ರವೇ ಕಾಂಗ್ರೆಸ್‌ಗೆ ಸೇರ್ಪಡೆ 

    1994ರಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದ ಹೆಚ್.ಡಿ ದೇವೇಗೌಡರು (H.D.Deve Gowda) ಸಿಎಂ ಸ್ಥಾನ ಅಲಂಕರಿಸಿದ್ದರು. ಬಳಿಕ 1996ರಲ್ಲಿ ವಿಧಾನಸಭೆಗೆ ರಾಜಿನಾಮೆ ನೀಡಿ ಪ್ರಧಾನಿ ಹುದ್ದೆಗೇರಿದರು. ಆಗ ಅವರ ರಾಜೀನಾಮೆಯಿಂದ ತೆರವಾಗಿದ್ದ ರಾಮನಗರ ವಿಧಾನಸಭೆ ಚುನಾವಣೆಗೆ ಅಂಬರೀಶ್ (Ambareesh) ಸ್ಪರ್ಧಿಸಿದ್ದರು. ಆದರೆ ಕಾಂಗ್ರೆಸ್‌ನ (Congress) ಸಿ.ಎಂ.ಲಿಂಗಪ್ಪ ಅವರ ಎದುರು ಅಂಬರೀಶ್ ಸೋಲುಂಡಿದ್ದರು. ಇದನ್ನೂ ಓದಿ: ದೇವರು ಮಗಳ ರೂಪದಲ್ಲಿ ಉಡುಗೊರೆ ಕಳುಹಿಸಿದ್ದಾರೆ – ಮೊದಲ ಮಗುವನ್ನು ಸ್ವಾಗತಿಸಿದ ತೇಜಸ್ವಿ ಯಾದವ್ 

    2004ರಲ್ಲಿ ರಾಮನಗರದಿಂದ ಪ್ರಪ್ರಥಮ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಹೆಚ್.ಡಿ ಕುಮಾರಸ್ವಾಮಿ (H.D.Kumaraswamy) ಮುಖ್ಯಮಂತ್ರಿಯಾಗಿ 20 ತಿಂಗಳ ಅಧಿಕಾರ ನಡೆಸಿ ಮನೆಮಾತಾಗಿದ್ದರು. ನಂತರ 2018ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ, ಚನ್ನಪಟ್ಟಣ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಹೆಚ್.ಡಿ ಕುಮಾರಸ್ವಾಮಿ ಮತ್ತೊಮ್ಮೆ ರಾಜ್ಯದ ಚುಕ್ಕಾಣಿ ಹಿಡಿದರು. ಅವರು ರಾಮನಗರ ಕ್ಷೇತ್ರ ತೊರೆದು, ಚನ್ನಪಟ್ಟಣ (Channapatna) ಕ್ಷೇತ್ರವನ್ನು ಉಳಿಸಿಕೊಂಡರು. ಇದನ್ನೂ ಓದಿ: ಶಾಸಕ ಸ್ಥಾನಕ್ಕೆ ಗುಬ್ಬಿ ಶ್ರೀನಿವಾಸ್ ಇಂದು ರಾಜೀನಾಮೆ

    ಜಿಲ್ಲೆಯ ನಾಲ್ಕು ತಾಲೂಕುಗಳ ಪೈಕಿ ಮೂರು (ರಾಮನಗರ, ಕನಕಪುರ, ಚನ್ನಪಟ್ಟಣ) ತಾಲೂಕುಗಳಿಗೆ ಮುಖ್ಯಮಂತ್ರಿ ಸ್ಥಾನ ಒಲಿದಿದೆ. ಅದರಲ್ಲೂ ರಾಮನಗರ ಕ್ಷೇತ್ರಕ್ಕೆ ಮೂರು ಬಾರಿ ಸಿಎಂ ಹುದ್ದೆ ದೊರೆತಿದೆ. ಆದರೆ, ಜಿಲ್ಲೆಯಿಂದ ಆಯ್ಕೆಯಾಗಿ ಮುಖ್ಯಮಂತ್ರಿಯಾದ ಯಾವೊಬ್ಬ ನಾಯಕರೂ ತಮ್ಮ ಅಧಿಕಾರವಧಿಯನ್ನು ಪೂರ್ಣಗೊಳಿಸಿಲ್ಲ ಎಂಬುದು ವಿಶೇಷ. ಇದನ್ನೂ ಓದಿ: ಯುಪಿ ಪೊಲೀಸರಿಂದ ಹತ್ಯೆಯಾಗುವ ಭಯವಿದೆ – ಬಂಧನದಲ್ಲಿರುವ ಮಾಜಿ ಸಂಸದ ಅತಿಕ್ ಅಹಮ್ಮದ್

  • ಚಾಮುಂಡೇಶ್ವರಿ ಉಪ ಚುನಾವಣೆ ನೆನೆದರೆ ಈಗಲೂ ಬೆಚ್ಚುತ್ತಾರೆ ಸಿದ್ದು!

    ಚಾಮುಂಡೇಶ್ವರಿ ಉಪ ಚುನಾವಣೆ ನೆನೆದರೆ ಈಗಲೂ ಬೆಚ್ಚುತ್ತಾರೆ ಸಿದ್ದು!

    ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) 2006ರಲ್ಲಿ ಎದುರಿಸಿದ ಚಾಮುಂಡೇಶ್ವರಿ ಕ್ಷೇತ್ರದ (Chamundeshwari Assembly Constituency) ಉಪ ಚುನಾವಣೆಯನ್ನು (By-election)ಈಗಲೂ ನೆನೆಸಿಕೊಂಡರೆ ಬೆಚ್ಚುತ್ತಾರೆ. `ಸಾಕಪ್ಪ ಸಾಕು’ ಎಂದು ಕೈ ಮುಗಿಯುತ್ತಾರೆ.

    1978 ರಲ್ಲಿ ಮೈಸೂರು ತಾಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾಗಿದ್ದ ಸಿದ್ದರಾಮಯ್ಯ ಅವರು, ನಂತರ ರೈತ ಸಂಘಟನೆಯಲ್ಲಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರೊಂದಿಗೆ ಓಡಾಡಿಕೊಂಡಿದ್ದರು. 1980 ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. 1978 ರಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದಿದ್ದ ಕಾಂಗ್ರೆಸ್ ಡಿ.ಜಯದೇವರಾಜ ಅರಸರ (D.Devaraj Arasu)  ಉಪಟಳ ತಡೆಯಲಾಗದೇ ಅವರನ್ನು ಹೇಗಾದರೂ ಮಾಡಿ ಸೋಲಿಸಲೇಬೇಕೆಂದು ಮಾಜಿ ಶಾಸಕ ಕೆಂಪೀರೇಗೌಡ ಸೇರಿದಂತೆ ಮೈಸೂರು ತಾಲೂಕಿನ ಹಲವು ಮುಖಂಡರು 1983ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಪಕ್ಷೇತರ ಅಭ್ಯರ್ಥಿಯನ್ನಾಗಿ ನಿಲ್ಲಿಸಿದ್ದರು. ಆಗ ಸಿದ್ದರಾಮಯ್ಯ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಹನಗಳ ಪರಿಶೀಲನೆ ಆರಂಭ – ಮೊದಲ ದಿನವೇ 10 ಕೆಜಿ ಬೆಳ್ಳಿ ವಶ

    ಅದೇ ಮೊದಲ ಬಾರಿಗೆ ರಾಜ್ಯದಲ್ಲಿ ರಾಮಕೃಷ್ಣ ಹೆಗಡೆ (Ramakrishna Hegde) ನೇತೃತ್ವದಲ್ಲಿ ಕಾಂಗ್ರೆಸ್ಸೇತರ ಸರ್ಕಾರ ಅಸ್ತಿತ್ವಕ್ಕೆ ಬಂದಿತು. ಆಗ ಬಿಜೆಪಿ ಹಾಗೂ ಪಕ್ಷೇತರರರ ಬೆಂಬಲ ಪಡೆಯಲಾಗಿತ್ತು. ಸಿದ್ದರಾಮಯ್ಯ ಅವರಿಗೆ ಕನ್ನಡ ಕಾವಲು ಸಮಿತಿಯ ಅಧ್ಯಕ್ಷ ಸ್ಥಾನ ನೀಡಲಾಯಿತು. ನಂತರ ಸಚಿವರಾದರು. 1985ರಲ್ಲಿ ಮಧ್ಯಂತರ ಚುನಾವಣೆ ಎದುರಾದಾಗ ಸಿದ್ದರಾಮಯ್ಯ ಜನತ ಪಕ್ಷದ ಅಭ್ಯರ್ಥಿಯಾಗಿ 2ನೇ ಬಾರಿಗೆ ಆಯ್ಕೆಯಾದರು. ಮತ್ತೆ ಸಚಿವರಾದರು. 1989ರಲ್ಲಿ ಜನತಾದಳ ಅಭ್ಯರ್ಥಿಯಾಗಿ ಚಾಮುಂಡೇಶ್ವರಿಯಲ್ಲಿ ಕಾಂಗ್ರೆಸ್‍ನ ಎಂ. ರಾಜಶೇಖರಮೂರ್ತಿ ಅವರೆದುರು ಸೋತರು. 1994ರಲ್ಲಿ ಜನತಾದಳ ಅಭ್ಯರ್ಥಿಯಾಗಿ ಗೆದ್ದರು.

    ದೇವೇಗೌಡರ ಸಂಪುಟದಲ್ಲಿ ಹಣಕಾಸು, ಜೆ.ಎಚ್.ಪಟೇಲರ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾದರು. 1999ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಎ.ಎಸ್. ಗುರುಸ್ವಾಮಿ, ಅವರೆದುರು ಸೋತರು. 2004ರಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಎಲ್.ರೇವಣಸಿದ್ದಯ್ಯ ಅವರೆದುರು ಜಯ ಗಳಿಸಿದರು. ಆ ವರ್ಷ ಎನ್.ಧರಂಸಿಂಗ್ ನೇತೃತ್ವದ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗ 2ನೇ ಬಾರಿಗೆ ಉಪ ಮುಖ್ಯಮಂತ್ರಿಯಾದರು.

    ಹುಬ್ಬಳ್ಳಿಯಲ್ಲಿ (Hubballi) ಅಹಿಂದ ಸಮಾವೇಶ ನಡೆಸುವ ಸಂಬಂಧ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ (H.D.Deve Gowda) ಹಾಗೂ ಸಿದ್ದರಾಮಯ್ಯ ನಡುವಿನ ಭಿನ್ನಮತ ತಲೆದೋರಿ, ಕೊನೆಗೆ ಸಿದ್ದರಾಮಯ್ಯ ಅವರ ತಲೆದಂಡವಾಯಿತು. ಡಿಸಿಎಂ ಸ್ಥಾನದಿಂದ ಪದಚ್ಯುತರಾದರು. 2006 ರಲ್ಲಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಿ, ಕಾಂಗ್ರೆಸ್ (Congress) ಸೇರಿದರು. ಆಗ ಎದುರಾಗಿದ್ದೆ ಚಾಮುಂಡೇಶ್ವರಿ ಉಪ ಚುನಾವಣೆ. ಆ ವೇಳೆಗೆ ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್- ಬಿಜೆಪಿ ಸಮ್ಮಿಶ್ರ ಸರ್ಕಾರವಿತ್ತು. ಬಿ.ಎಸ್. ಯಡಿಯೂರಪ್ಪ ಉಪ ಮುಖ್ಯಮಂತ್ರಿಯಾಗಿದ್ದರು.

    ಉಪ ಚುನಾವಣೆಯಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಅಭ್ಯರ್ಥಿ, ಜೆಡಿಎಸ್- ಬಿಜೆಪಿ (BJP) ಜಂಟಿಯಾಗಿ ಶಿವಬಸಪ್ಪ ಎಂಬವರನ್ನು ಕಣಕ್ಕಿಳಿಸಿದರು. ಎಲ್ಲರೂ ಸಿದ್ದರಾಮಯ್ಯ ಗೆಲುವು ಸುಲಭ ಎಂದೇ ಭಾವಿಸಿದ್ದರು. ಆದರೆ ಇಡೀ ಸರ್ಕಾರ, ಜಾತಿ, ಹಣ ಎಲ್ಲಾ ಕೆಲಸ ಮಾಡಿತು. ಸಿದ್ದರಾಮಯ್ಯ ಸೋತೆ ಹೋದರೂ ಎಂದು ಎಣಿಸಲಾಗಿತ್ತು. ಆದರೆ ಕೊನೆ ಸುತ್ತಿನಲ್ಲಿ 257 ಮತಗಳ ಕೂದಲೆಳೆಯ ಅಂತರದಲ್ಲಿ ಜಯಗಳಿಸಿ, ರಾಜಕೀಯವಾಗಿ ಪುನರ್ಜನ್ಮ ಪಡೆದರು. ಅವರಿಗೆ 1,15,512 ಮತಗಳು ದೊರೆತ ಶಿವಬಸಪ್ಪ ಅವರಿಗೆ 1,15,255 ಮತಗಳು ದೊರೆತವು. ಇದರಿಂದ ಹತಾಶರಾದ ಸಿದ್ದರಾಮಯ್ಯ `ಸಾಕಪ್ಪ ಸಾಕು ಉಪ ಚುನಾವಣೆ ಸಹವಾಸ, ಇನ್ನೆಂದೂ ಉಪ ಚುನಾವಣೆಗೆ ನಿಲ್ಲುವುದಿಲ್ಲ’ ಎಂದು ಶಪಥ ಮಾಡಿದರು. ವಿಧಾನಸಭೆಯ ಒಳಗೆ, ಹೊರಗೆ ಈ ವಿಷಯವನ್ನು ಸಿದ್ದರಾಮಯ್ಯ ಆಗಾಗ ಪ್ರಸ್ತಾಪಿಸುತ್ತಾರೆ. ಇದನ್ನೂ ಓದಿ: ದೇಶದಲ್ಲೇ ಮೊದಲ ಉಪಚುನಾವಣೆ ನಡೆದಿದ್ದು ಚಿಕ್ಕಮಗಳೂರಿನ ತರೀಕೆರೆಯಲ್ಲಿ

  • ಸಿದ್ದರಾಮಯ್ಯನನ್ನು ಕಾಂಗ್ರೆಸ್‌ನಿಂದಲೇ ಹೊರಹಾಕ್ತಾರೆ: ಮುನಿರತ್ನ ಹೊಸ ಬಾಂಬ್

    ಸಿದ್ದರಾಮಯ್ಯನನ್ನು ಕಾಂಗ್ರೆಸ್‌ನಿಂದಲೇ ಹೊರಹಾಕ್ತಾರೆ: ಮುನಿರತ್ನ ಹೊಸ ಬಾಂಬ್

    ಬೆಂಗಳೂರು: 2023ರ ಒಳಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಕಾಂಗ್ರೆಸ್‌ನಿಂದಲೇ ಹೊರಹಾಕ್ತಾರೆ ಎಂದು ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ.

    ಅವರಿಂದು ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, 2023ರ ಒಳಗೆ ಸಿದ್ದರಾಮಯ್ಯನನ್ನು ಪಾರ್ಟಿಯಿಂದಲೇ ಹೊರಹಾಕ್ತಾರೆ ನೋಡಿ. ರಾಮಕೃಷ್ಣ ಹೆಗಡೆ ಜಾಗದಲ್ಲಿ ಸಿದ್ದರಾಮಯ್ಯ ಇದ್ದಾರೆ. 1994ರಲ್ಲಿ ಆಗಿದ್ದ ಘಟನೆ ಮತ್ತೆ 2023ಕ್ಕೆ ಆಗುತ್ತೆ ನೋಡಿ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ಸ್ವಾಮೀಜಿಗಳ ಪಲ್ಲಕ್ಕಿ ಉತ್ಸವಕ್ಕೆ ಬ್ರೇಕ್ – ನಿರ್ಬಂಧ ಹೇರಿದ್ರೆ ನಾನೇ ಪಲ್ಲಕ್ಕಿ ಹೊರುತ್ತೇನೆಂದ ಅಣ್ಣಾಮಲೈ 

    sumalatha ambarish

    ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಸುಮಲತಾ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರ ಕುರಿತು ವರಿಷ್ಠರು ನಿರ್ಧಾರ ಮಾಡ್ತಾರೆ. ನನಗೆ ಜವಬ್ದಾರಿ ವಹಿಸಿದ್ರೆ ನಾನು ಇಂದೇ ಸುಮಲತಾ ಪಕ್ಷಕ್ಕೆ ಕರೆತರುವ ಕೆಲಸ ಆರಂಭ ಮಾಡ್ತೇನೆ ಎಂದು ಹೇಳಿದ್ದಾರೆ.

  • ಮಾಜಿ ಶಾಸಕ ಜಿ.ವಿ.ಮಂಟೂರ ವಿಧಿವಶ

    ಮಾಜಿ ಶಾಸಕ ಜಿ.ವಿ.ಮಂಟೂರ ವಿಧಿವಶ

    ಬಾಗಲಕೋಟೆ: ಜಿಲ್ಲೆಯ ಮಾಜಿ ಶಾಸಕ ಜಿ.ವಿ.ಮಂಟೂರ (92) ಬೆಳಗ್ಗೆ 5.30ಕ್ಕೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

    ಮಂಟೂರವರು ಬಾಗಲಕೋಟೆ ಕ್ಷೇತ್ರದಲ್ಲಿ ಎರಡು ಸಲ ಶಾಸಕರಾಗಿದ್ದರು. 1983ರಲ್ಲಿ ಪಕ್ಷೇತರರಾಗಿ ಹಾಗೂ 1985 ರಲ್ಲಿ ಜನತಾ ಪಕ್ಷದಿಂದ ಗೆದ್ದು ಶಾಸಕರಾಗಿದ್ದರು. ಮಂಟೂರ ಅವರು ಮಾಜಿ ಸಿಎಂ ರಾಮಕೃಷ್ಟ ಹೆಗಡೆ ಅವರ ಕಟ್ಟಾ ಅನುಯಾಯಿಯಾಗಿದ್ದರು. 1985ರಲ್ಲಿ ಹೆಗಡೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಾರದು ಎನ್ನುವುದಕ್ಕೆ ಬಿಗಿಪಟ್ಟು ಹಿಡಿದು ಕುಳಿತಿದ್ದರು. ಕೊನೆಗೆ ಹೆಗಡೆ ಅವರು ರಾಜಭವನಕ್ಕೆ ತೆರಳದಂತೆ ಅವರ ಶೂ ತೆಗೆದಿಟ್ಟು ಗಮನ ಸೆಳೆದಿದ್ದರು. ಇದನ್ನೂ ಓದಿ: ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ

    ಬಾಗಲಕೋಟೆ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಮಂಟೂರ ಅವರ ಪ್ರಯತ್ನವೇ ಕಾರಣವಾಗಿದೆ. ಮುಳುಗಡೆ ಸಮಸ್ಯೆ ಬಗ್ಗೆ ಹೆಗಡೆ ಅವರಿಗೆ ಮನದಟ್ಟು ಮಾಡಿ ಬಿಟಿಡಿಎ ಸ್ಥಾಪನೆಗೆ ಕಾರಣರಾಗಿದ್ದರು. 1984ರಲ್ಲಿ ಬಿಟಿಡಿಎ ಸ್ಥಾಪನೆಯಾಗಿ, ಆರಂಭದಲ್ಲಿ ಮೂರ್ನಾಲ್ಕು ತಿಂಗಳು ಮಂಟೂರ ಅವರೇ ಪ್ರಥಮ ಅಧ್ಯಕ್ಷರಾಗಿದ್ದರು. ಇದನ್ನೂ ಓದಿ: Karnataka Hijab Row: ಹೈಸ್ಕೂಲ್‌, ಕಾಲೇಜುಗಳಿಗೆ 3 ದಿನ ರಜೆ

    ಮಂಟೂರ ಅವರು ಇಂದು ಮೂವರು ಪುತ್ರರು ಹಾಗೂ ಒರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಸಂಜೆ ಅವರ ಸ್-ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಿತು.