Tag: Ramamurthy Nagar

  • ಹೆತ್ತ ತಾಯಿಯ ಮೇಲೆ ಹಲ್ಲೆ ಆರೋಪ – ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲು

    ಹೆತ್ತ ತಾಯಿಯ ಮೇಲೆ ಹಲ್ಲೆ ಆರೋಪ – ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಎಫ್‌ಐಆರ್ ದಾಖಲು

    ಬೆಂಗಳೂರು: ಹೆತ್ತ ತಾಯಿ ಮೇಲೆ ರಾಮಮೂರ್ತಿ ನಗರ (Ramamurthy Nagar) ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (Sub Inspector) ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

    ಮಂಜುನಾಥ್ ಹಲ್ಲೆ ಮಾಡಿದ ಸಬ್ ಇನ್ಸ್‌ಪೆಕ್ಟರ್. ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ತಾಯಿ ಮಂಗಳಮ್ಮ ದೂರು ದಾಖಲಿಸಿದ್ದಾರೆ. ಸಬ್ ಇನ್ಸ್ಪೆಕ್ಟರ್ ಮಂಜುನಾಥ್‌ಗೆ ಮದುವೆಯಾಗಿದ್ದು, ಕೆಆರ್ ಪುರದ (KR Puram) ಅಯ್ಯಪ್ಪ ನಗರದಲ್ಲಿ ಮಹಿಳೆಯೊಬ್ಬರ ಜೊತೆಗೆ ಅನೈತಿಕ ಸಂಬಂಧ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಮಾಹಿತಿ ಪಡೆದ ತಾಯಿ ಮಂಗಳಮ್ಮ ಮತ್ತು ಮಂಜುನಾಥನ ಇಬ್ಬರು ಸಹೋದರಿಯರು ಆ ಮಹಿಳೆಯ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದಾರೆ. ಈ ವಿಚಾರ ತಿಳಿದ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಸ್ಥಳಕ್ಕೆ ಹೋಗಿ ತಾಯಿ ಮಂಗಳಮ್ಮ ಮೇಲೆ ಹಲ್ಲೆ ಮಾಡಿ ಇಲ್ಲಿಂದ ಹೋಗುವಂತೆ ಗಲಾಟೆ ಮಾಡಿದ್ದಾರೆ. ಇದನ್ನೂ ಓದಿ: 270 ಕೆಜಿ ರಾಡ್‌ ಕುತ್ತಿಗೆಗೆ ಬಿದ್ದು ಚಿನ್ನದ ಪದಕ ವಿಜೇತ ಪವರ್‌ಲಿಫ್ಟರ್‌ ಸಾವು

    ಈ ಸಂಬಂಧ ಕೆಆರ್ ಪುರ ಪೊಲೀಸ್ ಠಾಣೆಯಲ್ಲಿ ಮಗ ಮಂಜುನಾಥ್, ಮಹಿಳೆ ಮತ್ತು ಮತ್ತೊಬ್ಬ ವ್ಯಕ್ತಿಯ ಮೇಲೆ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: 7 ತಿಂಗಳ ಮಗು ರೇಪ್ ಮಾಡಿದವನಿಗೆ ಗಲ್ಲು ಶಿಕ್ಷೆ – ಕೋಲ್ಕತ್ತಾ ವಿಶೇಷ ಕೋರ್ಟ್‌ನಿಂದ ತೀರ್ಪು

  • 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ – ಆರೋಪಿ ಅರೆಸ್ಟ್

    ಬೆಂಗಳೂರು: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Ramamurthy Nagar) ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ  ನಡೆದಿದೆ.

    ಬಿಹಾರ ಮೂಲದ ಅಭಿಷೇಕ್ ಎಂಬಾತ ಈ ಕೃತ್ಯವೆಸಗಿದ್ದಾನೆ. ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿ ಕೃತ್ಯವೆಸಗಿದ್ದಾನೆ. ಸದ್ಯ ಆರೋಪಿಯನ್ನು ರಾಮಮೂರ್ತಿ ನಗರ ಪೊಲೀಸರು ಸೋಮವಾರ ರಾತ್ರಿ ಬಂಧಿಸಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರಾದ ಸಚಿವೆ

    ಆರೋಪಿಯನ್ನು ವಶಕ್ಕೆ ನೀಡುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಲಘು ಲಾಠಿಚಾರ್ಜ್ ಮಾಡಿ ಜನರನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಸಂಕ್ರಾಂತಿ ಸುಗ್ಗಿ; ಹಸುಗಳಿಗೆ ಕಿಚ್ಚು ಹಾಯಿಸುವ ಸಂಭ್ರಮ

  • ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ದರ್ಪ ಮೆರೆದ ವ್ಯಕ್ತಿ!

    ಮಲಗಿದ್ದ ನಾಯಿ ಮೇಲೆ ಕಾರು ಹತ್ತಿಸಿ ದರ್ಪ ಮೆರೆದ ವ್ಯಕ್ತಿ!

    ಬೆಂಗಳೂರು: ರಸ್ತೆ ಪಕ್ಕದಲ್ಲಿ ಮಲಗಿದ್ದ ನಾಯಿಯ (Dog) ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿ ದರ್ಪ ಮೆರೆದಿರುವ ಘಟನೆ ಬೆಂಗಳೂರಿನ ಹೊರಮಾವು (Horamavu) ಬಳಿಯ ಬಂಜಾರ ಲೇಔಟ್‍ನಲ್ಲಿ (Banjara Layout) ನಡೆದಿದೆ.

    ವ್ಯಕ್ತಿಯೊಬ್ಬ ಕಾರಿನಲ್ಲಿ ಅಪಾರ್ಟ್‍ಮೆಂಟ್ (Apartment) ಗೆ ಹೋಗುವಾಗ ಮುಂಭಾಗದ ಗೇಟ್ ಬಳಿ ನಾಯಿ ಮಲಗಿರುವುದನ್ನು ನೋಡಿದ್ದಾನೆ. ಆದರೂ ಸಹ ನಾಯಿಯ ಮೇಲೆ ಕಾರು ಹತ್ತಿಸಿಕೊಂಡು ಹೋಗಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಭೀರ ಗಾಯಗೊಂಡ ನಾಯಿಗಾಗಿ ಸಾರ್ವಜನಿಕರು ಮರುಗಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲಿ ಎಡವಟ್ಟು- ಮೊಬೈಲ್ ಕೊಂಡೊಯ್ದು ಸೆಲ್ಫಿ ಕ್ಲಿಕ್ಕಿಸಿದ ಮೇಲ್ವಿಚಾರಕಿ

    ಕಾರು ಹತ್ತಿಸಿದ ವ್ಯಕ್ತಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೃಶ್ಯಾವಳಿ ಸಮೇತ ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಿ ದೂರು ನೀಡಲಾಗಿದೆ. ರಾಮಮೂರ್ತಿ ನಗರದ (Ramamurthy Nagar) ಪೊಲೀಸರಿಗೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ಇದನ್ನೂ ಓದಿ:  ಸರಳತೆ ಮೆರೆದ ಪ್ರಧಾನಿ ಮೋದಿ- VHP ಮುಖಂಡರ ಕಾಲಿಗೆ ನಮಸ್ಕರಿಸಿದ ನಮೋ

  • ಬೆಂಗಳೂರು ಅತ್ಯಾಚಾರ ಪ್ರಕರಣ- ಕಾಮುಕರ ಕಾಲಿಗೆ ಗುಂಡು ಹೊಡೆದ ಪೊಲೀಸರು

    ಬೆಂಗಳೂರು ಅತ್ಯಾಚಾರ ಪ್ರಕರಣ- ಕಾಮುಕರ ಕಾಲಿಗೆ ಗುಂಡು ಹೊಡೆದ ಪೊಲೀಸರು

    ಬೆಂಗಳೂರು: ರಾಮಮೂರ್ತಿ ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಸಂಬಂಧಿಸಿದಂತೆ ಆರೋಪಿಗಳನ್ನು ಸ್ಥಳ ಮಹಾಜರ್‍ ಗೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಕಾಮುಕರ ಕಾಲಿಗೆ ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

    10 ದಿನಗಳ ಹಿಂದೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಗ್ಯಾಂಗ್ ರೇಪ್ ಕೇಸ್‍ಗೆ ಸಂಬಂಧಿಸಿದಂತೆ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಮತ್ತು ಹಕೀಲ್‍ನ್ನು ರಾಮಮೂರ್ತಿ ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದರು. ಬಳಿಕ ಇಂದು ರೇಪ್ ನಡೆದ ಸ್ಥಳಕ್ಕೆ ಆರೋಪಿಗಳನ್ನು ಸ್ಥಳ ಮಹಾಜರ್‍ಗೆ ಕರೆದುಕೊಂಡು ಹೋದಾಗ ಆರೋಪಿಗಳು ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕ ನಗರದ ಚನ್ನ ಸಂದ್ರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಈ ಸಂದರ್ಭ ಪೊಲೀಸರು, ಆರೋಪಿಗಳಾದ ಸಾಗರ್ ಮತ್ತು ರಿದಾಯ್ ಬಾಬು ಕಾಲಿಗೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ. ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ!

    ಘಟನ ಸ್ಥಳಕ್ಕೆ ಪೂರ್ವ ವಿಭಾಗದ ಡಿಸಿಪಿ ಶರಣಪ್ಪ ಬೇಟಿ ಪರಿಶೀಲನೆ ನಡೆಸಿದ್ದಾರೆ. ಪಿಎಸ್‍ಐ ಆರ್. ಅರವಿಂದ್ ಅವರು ಆರೋಪಿಗೆ ಕಾಲಿಗೆ ಗುಂಡು ಹಾರಿಸಿದ್ದು, ಆರೋಪಿಗಳು ವಾಸವಾಗಿದ್ದ ಮನೆಯ ಪಕ್ಕದಲ್ಲೇ ಆರೋಪಿಗಳ ಕಾಲಿಗೆ ಗುಂಡು ಹೊಡೆಯಲಾಗಿದೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೇರಳದ ಕ್ಯಾಲಿಕಟ್ ನಲ್ಲಿರೋದನ್ನು ಪತ್ತೆ ಹಚ್ಚಿರುವ ಪೊಲೀಸರು, ಬಾಣವಾಡಿ ಇನ್ಸ್‌ಪೆಕ್ಟರ್‌ ಸತೀಶ್, ಮಹಿಳಾ ಸಬ್ ಇನ್ಸ್‌ಪೆಕ್ಟರ್‌ ಹಾಗೂ ಒರ್ವ ಮಹಿಳೆಯ ತಂಡ ಕೇರಳದಿಂದ ಸಂತ್ರಸ್ತೆಯನ್ನು ಕರೆದುಕೊಂಡು ಬರುತ್ತಿದ್ದಾರೆ ಎಂದು ವರದಿಯಾಗಿದೆ.

  • ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ!

    ಬೆಂಗ್ಳೂರಿನಲ್ಲೊಂದು ನಿರ್ಭಯಾ ಪ್ರಕರಣ – ಅತ್ಯಾಚಾರಗೈದು ಗುಪ್ತಾಂಗಕ್ಕೆ ಬಾಟಲ್ ಇರಿಸಿ ವಿಕೃತಿ!

    – ಅಸ್ಸಾಂ, ಬಾಂಗ್ಲಾದಲ್ಲಿ ವಿಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ
    – ಬಾಂಗ್ಲಾ ಮೂಲದ ಯುವತಿ ಮೇಲೆ ಪರಿಚಿತ ಯುವಕರಿಂದ ಅತ್ಯಾಚಾರ
    – ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರ ಸಾಥ್

    ಬೆಂಗಳೂರು: ರಾಜಧಾನಿಯಲ್ಲಿ ನಿರ್ಭಯಾ ರೀತಿಯ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ವಿಕೃತಿ ಮರೆದಿದ್ದಾರೆ. 10 ದಿನಗಳ ಹಿಂದೆ ಈ ಘಟನೆ ನಡೆದಿದ್ದು, ವೀಡಿಯೋ ವೈರಲ್ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ನಾಲ್ವರು ಕಾಮುಕರಿಗೆ ಇಬ್ಬರು ಯುವತಿಯರು ಸಾಥ್ ನೀಡಿದ್ದಾರೆ.

    ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹಕೀಲ್ ಬಂಧಿತ ಆರೋಪಿಗಳು. ಆರೋಪಿಗಳು ಬಾಂಗ್ಲಾ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಸಂತ್ರಸ್ಥೆ ಸೇರಿದಂತೆ ಆರೋಪಿಗಳು ರಾಮಮೂರ್ತಿ ನಗರದ ಎನ್.ಆರ್.ಐ ಲೇಔಟ್ ನಲ್ಲಿ ವಾಸವಾಗಿದ್ದರು. ಯುವತಿಯನ್ನು ಅತ್ಯಾಚಾರಗೈದು, ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಾರೆ. ಈ ಎಲ್ಲ ಘಟನೆಯನ್ನು ಕಿರಾತಕರು ವೀಡಿಯೋ ಮಾಡಿದ್ದಾರೆ. ಯುವತಿಯ ಮೇಲೆ ದ್ವೇಷಕ್ಕಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

    ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ಅತ್ಯಾಚಾರದ ವೀಡಿಯೋ ವೈರಲ್ ಆಗಿತ್ತು. ಅಲ್ಲಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಅಸ್ಸಾಂ ರಾಜ್ಯದ ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ವೀಡಿಯೋದಲ್ಲಿ ಬಾಂಗ್ಲಾ ಪ್ರಜೆಗಳು ಭಾಗಿಯಾಗಿದ್ದರಿಂದ ಅಲ್ಲಿನ ಪೊಲೀಸರಿಗೂ ಮಾಹಿತಿ ರವಾನಿಸಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ತೆಯ ಕುಟುಂಬಸ್ಥರನ್ನ ಪತ್ತೆ ಮಾಡಿದ್ದಾರೆ. ಆ ನಂತರ ಘಟನೆ ಬೆಂಗಳೂರಿನಲ್ಲಿ ನಡೆದಿರೋದ ಬಗ್ಗೆ ತಿಳಿದು ಬಂದಿದೆ.

    ಆರೋಪಿಗಳು ಬೆಂಗಳೂರಿನ ಆವಲಹಳ್ಳಿಯಲ್ಲಿ ತಲೆಮರೆಸಿಕೊಂಡಿದ್ದರು. ಸದ್ಯ ರಾಮಮೂರ್ತಿ ನಗರ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ನಾಲ್ವರನ್ನು ಬಂಧಿಸಿರುವ ಪೊಲೀಸರು ಇನ್ನಿಬ್ಬರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಆರೋಪಿಗಳು ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದರು ಎನ್ನಲಾಗಿದೆ.

  • ಮಾದಕ ವಸ್ತು ಮಾರಾಟಮಾಡುತ್ತಿದ್ದ ಅಂತರ್ ರಾಜ್ಯ ಪೆಡ್ಲರ್ ಬಂಧನ

    ಮಾದಕ ವಸ್ತು ಮಾರಾಟಮಾಡುತ್ತಿದ್ದ ಅಂತರ್ ರಾಜ್ಯ ಪೆಡ್ಲರ್ ಬಂಧನ

    ಬೆಂಗಳೂರು: ಮಾದಕ ವಸ್ತುಗಳನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಅಂತರ್ ರಾಜ್ಯ ಪೆಡ್ಲರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

    ರಾಮಬಾಬು ಬಂಧಿತ ಆರೋಪಿಯಾಗಿದ್ದು, ಮೂಲತಃ ಆಂಧ್ರ ಪ್ರದೇಶದವನಾದ ಆರೋಪಿ ನಗರದ ಹಲವಡೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ. ಕೆ.ಆರ್ ಪುರ ರೈಲ್ವೆ ನಿಲ್ದಾಣದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಮುಂದಾಗಿದ್ದಾಗ ಆರೋಪಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

    ಸದ್ಯ ಬಂಧಿತ ಆರೋಪಿಯಿಂದ 3 ಲಕ್ಷ ಬೆಲೆ ಬಾಳುವ 10 ಕೆ.ಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಆರೋಪಿ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎನ್‍ಡಿಪಿಎಸ್ ಕಾಯ್ದೆಯ ಸೆಕ್ಷನ್ 20 (ಬಿ) ಅಡಿಯಲ್ಲಿ ದೂರು ದಾಖಲಾಗಿದೆ.

  • ಮದ್ವೆಯಾದ್ರೆ ಪತ್ನಿ ಪೋಷಕರಿಂದ ದೂರ ಮಾಡೋ ಭಯ- ಟೆಕ್ಕಿ ಆತ್ಮಹತ್ಯೆ

    ಮದ್ವೆಯಾದ್ರೆ ಪತ್ನಿ ಪೋಷಕರಿಂದ ದೂರ ಮಾಡೋ ಭಯ- ಟೆಕ್ಕಿ ಆತ್ಮಹತ್ಯೆ

    ಬೆಂಗಳೂರು: ನಗರದ ಅಪಾರ್ಟ್‍ಮೆಂಟ್ ಮೇಲಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಬೆನ್ನಿಗಾನಹಳ್ಳಿ ಸಮೀಪದ ನಡೆದಿದೆ.

    ಉತ್ತಮ್ ಹೆಗಡೆ (30) ಸಾವನ್ನಪ್ಪಿದ ಟೆಕ್ಕಿ. ಮೃತ ಟೆಕ್ಕಿ ತನ್ನ ಕುಟುಂಬದೊಂದಿಗೆ ಅಪಾರ್ಟ್‍ಮೆಂಟ್‍ನ ಫ್ಲ್ಯಾಟ್‍ವೊಂದರಲ್ಲಿ ವಾಸಮಾಡುತ್ತಿದ್ದ. ನಗರದ ಖಾಸಗಿ ಕಂಪೆನಿಯಲ್ಲಿ ಸಾಫ್ಟ್‍ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಉತ್ತಮ್ ಹೆಗಡೆ, ನಿನ್ನೆ ರಾತ್ರಿ ಎಂದಿನಂತೆ ಎಲ್ಲರೊಂದಿಗೆ ಬೆರೆತು ಊಟ ಮಾಡಿ ಮಲಗಿದ್ದ ಎಂಬ ಮಾಹಿತಿ ಲಭಿಸಿದೆ.

    ಇಂದು ನಸುಕಿವ ಜಾವ 3 ಗಂಟೆ ಸಮಯದಲ್ಲಿ ಅಪಾರ್ಟ್‍ಮೆಂಟ್ ನಿಂದ ಹಾರಿ ಟೆಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸದ್ಯ ಟೆಕ್ಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿವಿ ರಾಮನ್ ನಗರ ಆಸ್ಪತ್ರೆಗೆ ರವಾನಿಸಿದ್ದಾರೆ.

    ಉತ್ತಮ್ ಮನೆಯಲ್ಲಿ ಆತನ ಮದುವೆಗಾಗಿ ಯುವತಿಯನ್ನು ಹುಡುಕುತ್ತಿದ್ದರು. ಆದರೆ ಮದುವೆಯಾದರೆ ಬರುವ ಯುವತಿ ಎಲ್ಲಿ ತನ್ನನ್ನು ಪೋಷಕರೊಂದಿಗೆ ದೂರ ಮಾಡುತ್ತಾಳೋ ಎಂಬ ಭಯ ಉತ್ತಮ್‍ಗೆ ಕಾಡುತ್ತಿತ್ತು. ಹೀಗಾಗಿ ಆತನಿಗೆ ಎರಡು ಮೂರು ಬಾರಿ ಕೌನ್ಸೆಲಿಂಗ್ ಸಹ ಮಾಡಿಸಲಾಗಿತ್ತು. ಏನು ಆಗಲ್ಲ ಎಂದು ಮದುವೆ ಮಾಡಿಕೊಳ್ಳಲು ಕುಟುಂಬಸ್ಥರು ಉತ್ತಮ್ ಮನವೊಲಿಸಲು ಮುಂದಾಗಿದ್ದರು ಎನ್ನಲಾಗಿದೆ. ಈ ನಡುವೆ ಉತ್ತಮ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ಮೂಡಿದೆ. ಘಟನೆ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.