Tag: ramanath kovind

  • ಅಗ್ನಿಪಥ್ ಯೋಜನೆ ವಾಪಸ್ ಪಡೆಯುವಂತೆ ರಾಷ್ಟ್ರಪತಿಗೆ ಕಾಂಗ್ರೆಸ್ ನಾಯಕರ ಮನವಿ

    ಅಗ್ನಿಪಥ್ ಯೋಜನೆ ವಾಪಸ್ ಪಡೆಯುವಂತೆ ರಾಷ್ಟ್ರಪತಿಗೆ ಕಾಂಗ್ರೆಸ್ ನಾಯಕರ ಮನವಿ

    ನವದೆಹಲಿ: ಕೇಂದ್ರ ಸರ್ಕಾರದಿಂದ ಜಾರಿಗೊಳಿಸಲಾಗಿರುವ ಅಗ್ನಿಪಥ್ ಯೋಜನೆಯನ್ನು ಕೂಡಲೇ ಹಿಂಪಡೆಯುವಂತೆ ಕಾಂಗ್ರೆಸ್‌ನ ಇಬ್ಬರು ನಾಯಕರು ಇಂದು ರಾಷ್ಟ್ರತಿಗೆ ಮನವಿ ಸಲ್ಲಿಸಿದ್ದಾರೆ.

    ಕಾಂಗ್ರೆಸ್ ನಾಯಕರಾದ ಜಯರಾಮ್ ರಮೇಶ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ನಾಯಕರಿಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಮನಾಥ್ ಕೋವಿಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಜೂನ್ 23ಕ್ಕೆ ED ಮುಂದೆ ಹಾಜರ್? 

    ಈ ವೇಳೆ ಮಾತನಾಡಿರುವ ಕಾಂಗ್ರೆಸ್ ನಾಯಕರು, ಸಶಸ್ತ್ರ ಪಡೆಗಳ ನೇಮಕಾತಿಯಲ್ಲಿ ಬದಲಾವಣೆ ಘೋಷಿಸುವ ಮೊದಲು ಸರ್ಕಾರವು ವ್ಯಾಪಕವಾದ ಸಮಾಲೋಚನೆಗಳನ್ನು ಅಳವಡಿಸಿಕೊಂಡಿಲ್ಲ. ರಕ್ಷಣಾ ಸ್ಥಾಯಿ ಸಮಿತಿಯಲ್ಲಿ ಯೋಜನೆ ಬಗ್ಗೆ ಚರ್ಚಿಸಿಲ್ಲ. ರಾಜಕೀಯ ಪಕ್ಷಗಳು ಪಾಲುದಾರರ ಸಲಹೆಗಳನ್ನೂ ಪಡೆದಿಲ್ಲ. ತಜ್ಞರ ಸಲಹೆ ಪರಿಗಣಿಸಲಾಗಿದೆ ಎಂಬುದಕ್ಕೆ ಯಾವುದೇ ಆಧಾರವಿಲ್ಲ. ಈ ಯೋಜನೆ ಕೆಟ್ಟದ್ದಾಗಿ ಪ್ರಯೋಗಿಸುವ ಮುನ್ನ ಪ್ರಾಯೋಗಿಕವಾಗಿ ಪರೀಕ್ಷಿಸಬೇಕಿತ್ತು ಎಂದು ರಾಷ್ಟ್ರಪತಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ಎರಡು ವಾರ ಶಟ್‍ಡೌನ್ – ತುರ್ತು ಸೇವೆಗಳು ಮಾತ್ರ ಲಭ್ಯ

    ಈ ಯೋಜನೆಯಲ್ಲಿ ಅತ್ಯಂತ ಕಡಿಮೆ ತರಬೇತಿ ಅವಧಿ ನಿಗದಿ ಮಾಡಲಾಗಿದೆ. ಸೇವೆಯ ಅವಧಿಯೂ ಕಡಿಮೆಯಿದೆ. ಇದರಿಂದ ಸಶಸ್ತ್ರ ಪಡೆಗಳ ಗುಣಮಟ್ಟ, ದಕ್ಷತೆ ಮೇಲೆ ಋಣಾತ್ಮಕ ಪರಿಣಾಮ ಬೀರಬಹುದು ಎಂದು ಹೇಳಿದ್ದಾರೆ.

    Live Tv

  • ಬೆಂಗಳೂರಿನ ಇಸ್ಕಾನ್ ಶ್ರೀ ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿಗಳು  

    ಬೆಂಗಳೂರಿನ ಇಸ್ಕಾನ್ ಶ್ರೀ ರಾಜಾಧಿರಾಜ ಗೋವಿಂದ ದೇವಾಲಯ ಉದ್ಘಾಟಿಸಿದ ರಾಷ್ಟ್ರಪತಿಗಳು  

    ಬೆಂಗಳೂರು: ನಗರದ ವಸಂತಪುರದಲ್ಲಿ ನಿರ್ಮಿಸಲಾದ ಇಸ್ಕಾನ್ ಶ್ರೀ ರಾಜಾಧಿರಾಜ ಗೋವಿಂದ ದೇವಸ್ಥಾನವನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಲೋಕಾರ್ಪಣೆ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

    ಬೆಳಗ್ಗೆ 11 ಗಂಟೆಗೆ ದೇವಸ್ಥಾನಕ್ಕೆ ಆಗಮಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪತ್ನಿ ಸವಿತಾ ಕೋವಿಂದ್‍ಗೆ ದೇವಸ್ಥಾನ ಆಡಳಿತ ಮಂಡಳಿಯಿಂದ ಪೂರ್ಣಕುಂಭ ಸ್ವಾಗತ ನೀಡಲಾಯಿತು. ಬಳಿಕ ರಾಷ್ಟ್ರಪತಿಗಳು ಇಸ್ಕಾನ್ ಸಂಸ್ಥಾಪಕ ಶ್ರೀಲ ಪ್ರಭುಪಾದರ ಪ್ರತಿಮೆಗೆ ನಮಿಸಿ ಆನಂತರ ತಿರುಪತಿ ಮಾದರಿಯಲ್ಲಿ ನಿರ್ಮಿಸಲಾಗಿರುವ ದೇವಸ್ಥಾನವನ್ನು ಲೋಕಾರ್ಪಣೆ ಮಾಡಿದರು. ಇದನ್ನೂ ಓದಿ: ಏನಿದು ಅನ್ಯಾಯ? ಏನು ಕ್ರೈಂ ಮಾಡಿದ್ದಾರೆ? ಅದು ರಾಷ್ಟ್ರದ ಆಸ್ತಿ, ಸ್ವಂತದ್ದಲ್ಲ: ಡಿಕೆಶಿ ಕೆಂಡಾಮಂಡಲ

    ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್, ‘ಭಕ್ತಿಭಾವದ ಪ್ರತೀಕವೇ ಈ ದೇವಾಲಯ. ಇದು ಒಂದು ಸುಂದರ ದೇವಾಲಯ. ದೇವಾಲಯಗಳು ಹಿಂದೂ ಧರ್ಮದ ಚಿಹ್ನೆಗಳು. ಅದ್ವೈತ್ವ, ವಿಶಿಷ್ಟಾದೈತ್ವ, ಜ್ಞಾನ, ಕರ್ಮ, ಭಕ್ತಿ ಮಾರ್ಗಗಳಿಂದ ಬಂದಿವೆ. ಭಗವದ್ಗೀತಾ ಅನೇಕ ಪಾಠಗಳನ್ನು ಅನೇಕ ಬಗೆಯ ಜನರಿಗೆ ನೀಡುತ್ತದೆ. ಭಗವದ್ಗೀತೆಯನ್ನು ಸ್ಮರಿಸುವಾಗ ಪ್ರಭುಪಾದರನ್ನು ನೆನೆಸುತ್ತೇವೆ. ದೇವಸ್ಥಾನಗಳು ಒಂದು ಶಾಂತಿಯುತವಾದ ಸ್ಥಳಗಳು. ಈ ವರ್ಷ ಶ್ರೀಪ್ರಭುಪಾದರು 125ನೇ ವರ್ಷ ಪೂರೈಸುತ್ತಿದ್ದಾರೆ. ನಾನು ಈ ದೇವಾಲಯದ ಕಲೆಯನ್ನು ಗಮನಿಸಿದೆ, ಇದು ನಿಜಕ್ಕೂ ಸುಂದರವಾದ ಕಲೆಯಾಗಿದೆ, ನನಗೆ ಇಷ್ಟವಾಯಿತು ಎಂದು ಹೊಗಳಿದರು.

    ರಾಷ್ಟ್ರಪತಿಗಳ ಬಳಿಕ ಸಿಎಂ ಬಸವರಾಜು ಬೊಮ್ಮಾಯಿ ಮಾತನಾಡಿ, ಇಂದು ಬೆಂಗಳೂರು ನಗರ ಮಾತ್ರ ಅಲ್ಲ. ವಿಶ್ವಕ್ಕೆ ಭಕ್ತಿಯ ಚೈತನ್ಯದ ದಿನ. ಪ್ರಭು ರಾಜಾಧಿರಾಜ ಗೋವಿಂದರ ಆಗಮನ ಇಲ್ಲಿ ಆಗಿದೆ. ಮಧುಪಂಡಿತ್ ದಾಸ್ ಅವರು ಎರಡು ದಶಕಗಳ ಕಾಲ ಸಮಗ್ರ ಅಭಿವೃದ್ಧಿ ಮಾಡಿದ್ದಾರೆ. ದೇವರ ಮೂರ್ತಿ ಪ್ರತಿಷ್ಠಾಪಿಸಿ ಲೋಕ ಕಲ್ಯಾಣ ಸಂಕಲ್ಪ ಮಾಡಿದ್ದಾರೆ. ರಾಷ್ಟ್ರಪತಿಗಳು ಈ ದೇವಸ್ಥಾನ ಲೋಕಾರ್ಪಣೆ ಮಾಡಿದ್ದಾರೆ. ಈ ಮೂಲಕ ನಮ್ಮ ದೇಶ ಎಂಥ ದೈವೀ ಸಂಸ್ಕೃತಿ ಹೊಂದಿದೆ ಎಂಬುದನ್ನು ತೋರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ:  ರಾಯಚೂರಿಗೆ ಕೊನೆಗೂ ಭೇಟಿ ನೀಡಿದ ಉಸ್ತುವಾರಿ ಸಚಿವ: ಸಂತ್ರಸ್ತರಿಗೆ ಪರಿಹಾರ ಚೆಕ್ ವಿತರಣೆ

    ಇದೇ ವೇಳೆ ನಾಗರೀಕತೆ ಹಾಗೂ ಸಂಸ್ಕೃತಿ ಬಗ್ಗೆಯೂ ಮಾತನಾಡಿದ ಬೊಮ್ಮಾಯಿ ಅವರು, ಹಲವರಿಗೆ ಇವೆರಡರ ವ್ಯತ್ಯಾಸ ಗೊತ್ತಿಲ್ಲ. ನಾಗರೀಕತೆ ಅಂದರೆ ನಾವು ಏನು ಎಂದು ಅರ್ಥ, ಸಂಸ್ಕೃತಿ ಎಂದರೆ ನಮ್ಮ ಬಳಿ ಏನಿದೆ ಎಂಬುವುದಾಗಿದೆ. ಸಾಕಷ್ಟು ಜನರಿಗೆ ಸಂಸ್ಕೃತಿ ಹಾಗೂ ಆಧ್ಯಾತ್ಮದ ಜ್ಞಾನ ಕಡಿಮೆ. ಭಾರತದ ದೇಶದಲ್ಲೇ ಅತಿ ಹೆಚ್ಚು ಭಕ್ತಿ ಚಳವಳಿಗಳು ನಡೆದಿವೆ. ಇಸ್ಕಾನ್ ದೇಶದ ಅನೇಕ ಕಡೆ ದೇವಸ್ಥಾನಗಳನ್ನು ನಿರ್ಮಿಸಿದೆ. ಆಧ್ಯಾತ್ಮದ ಚಿಂತನೆಗಳನ್ನು ಸಾರುವಲ್ಲಿ ಇಸ್ಕಾನ್ ಪಾತ್ರ ದೊಡ್ಡದಿದೆ. ಅಕ್ಷಯ ಪಾತ್ರೆ ಯೋಜನೆ ರಾಜ್ಯದಲ್ಲಿ ನಡೆಯುತ್ತಿದೆ. ನಮ್ಮ ಸರ್ಕಾರದ ಪೂರ್ಣ ಸಹಕಾರವನ್ನ ಈ ಯೋಜನೆ ನೀಡುತ್ತದೆ ಎಂದರು.

    ಇನ್ನು ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕನ್ನಡದಲ್ಲಿ ಭಾಷಣ ಆರಂಭಿಸಿದ್ದು ವೀಶೇಷವಾಗಿತ್ತು. ಗೆಹ್ಲೋಟ್ ಧನ್ಯವಾದ, ತಮ್ಮೆಲ್ಲರಿಗೂ ಆಧಾರದ ಸ್ವಾಗತ ಎಂದು ಭಾಷಣ ಆರಂಭಿಸಿದ ರಾಜ್ಯಪಾಲರು, ಬೆಂಗಳೂರಿನ ರಾಜಾಜಿನಗರದ ಇಸ್ಕಾನ್ ದರ್ಶನಕ್ಕೆ ಸೌಭಾಗ್ಯ ಕಲ್ಪಿಸಲಾಗಿತ್ತು. ನಾನು ಕೂಡ ಇಸ್ಕಾನ್‍ಗೆ ಭೇಟಿ ನೀಡಿ ಮೂಕವಿಸ್ಮಿತನಾದೆ. ದೇಶ ವಿದೇಶಗಳಿಂದ ಇಸ್ಕಾನ್ ದೇವಾಲಯಕ್ಕೆ ಭೇಟಿ ನೀಡುತ್ತಾರೆ. ಯಾವುದೇ ಜಾತಿ, ಭೇದ ಇಲ್ಲದೆ ಸರ್ವರಿಗೂ ದೇವಾಲಯಕ್ಕೆ ಪ್ರವೇಶವಿದೆ. ಶ್ರೀಲಾ ಪ್ರಭುಪಾದರು ಹಲವೆಡೆ ದೇವಾಲಯಗಳನ್ನು ಸ್ಥಾಪಿಸಿದ್ದಾರೆ. ರಾಜಾದಿರಾಜ ಗೋವಿಂದ ದೇವಾಲಯ ಭಕ್ತಿ ಭಾವ ನೀಡಿ ಸಕಾರಾತ್ಮಕ ಚಿಂತನೆಯನ್ನು ಜನರ ಮನಸ್ಸಿನಲ್ಲಿ ಬಿತ್ತಲಿಸಿರುವ ವಿಶ್ವಾಸ ನನಗಿದೆ ಎಂದು ಹೇಳಿದರು.

  • ಉಕ್ರೇನ್ ಬಿಕ್ಕಟ್ಟು: ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಮೋದಿಯಿಂದ 4ನೇ ಬಾರಿಗೆ ಉನ್ನತ ಸಭೆ

    ಉಕ್ರೇನ್ ಬಿಕ್ಕಟ್ಟು: ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ ಬೆನ್ನಲ್ಲೇ ಮೋದಿಯಿಂದ 4ನೇ ಬಾರಿಗೆ ಉನ್ನತ ಸಭೆ

    ನವದೆಹಲಿ: ಕರ್ನಾಟಕದ ವಿದ್ಯಾರ್ಥಿಯೊಬ್ಬ ನಿನ್ನೆ ಬೆಳಗ್ಗೆ ಉಕ್ರೇನ್‍ನ ಖಾರ್ಕಿವ್‍ನಲ್ಲಿ ರಷ್ಯಾದ ಶೆಲ್ ದಾಳಿಗೆ ಸಾವನ್ನಪ್ಪಿದ ಬೆನ್ನಲ್ಲೇ ಉಕ್ರೇನ್‍ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಕರೆ ತರುವ ಪ್ರಯತ್ನಗಳನ್ನು ಪರೀಶಿಲಿಸಲು ಪ್ರಧಾನಿ ಮೋದಿ ಮಂಗಳವಾರ 4ನೇ ಬಾರಿಗೆ ಉನ್ನತ ಸಭೆ ಕರೆದಿದ್ದಾರೆ.

    ಪ್ರಧಾನಿ ಮೋದಿ ಕರೆದ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ಸಚಿವ ಎಸ್ ಜೈಶಂಕರ್, ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‍ಎಸ್‍ಎ) ಅಜಿತ್ ದೋವಲ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಇದನ್ನೂ ಓದಿ : ನಟ ಚೇತನ್ ಅಮೆರಿಕಾಗೆ ಗಡಿಪಾರು? : ಆತಂಕದಲ್ಲಿ ಚಿತ್ರ ನಿರ್ಮಾಪಕರು

    ಮೋದಿ ಅವರು ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಉಕ್ರೇನ್-ರಷ್ಯಾ ಯುದ್ಧಕ್ಕೆ ಭಾರತದ ಪ್ರತಿಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವರಿಸಿದರು ಎಂದು ಮೂಲಗಳು ತಿಳಿಸಿವೆ. ಯುದ್ಧ ಪೀಡಿತ ಪ್ರದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯಾಚರಣೆಯನ್ನು ಸಂಘಟಿಸಲು ಭಾರತದ ವಿಶೇಷ ರಾಯಭಾರಿಗಳಾಗಿ ನಾಲ್ವರು ಕೇಂದ್ರ ಸಚಿವರು ಉಕ್ರೇನ್‍ನ ನೆರೆಯ ರಾಷ್ಟ್ರಗಳಿಗೆ ತೆರಳಲು ಈ ಹಿಂದೆ ನಿರ್ಧರಿಸಲಾಗಿತ್ತು.

    ಉಕ್ರೇನ್‍ನ ಖಾರ್ಕಿವ್‍ನಲ್ಲಿ ಅರ್ಖಿಟೆಕ್ಟೋರಾ ಬೆಕೆಟೋವಾ ಮೆಟ್ರೋ ನಿಲ್ದಾಣದ ಬಂಕರ್‍ನಿಂದ ದಿನಸಿ ವಸ್ತುಗಳನ್ನು ತರಲು ಹೊರಟ ನವೀನ್ ಮೇಲೆ ಖಾರ್ಕಿವ್‍ನ ಬೀದಿಯಲ್ಲಿ ಶೆಲ್ ದಾಳಿ ನಡೆಸಲಾಗಿತ್ತು. ಈ ವೇಳೆ ವಿದ್ಯಾರ್ಥಿಯು ಸಾವನ್ನಪ್ಪಿದ್ದಾನೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ತಿಳಿಸಿತ್ತು. ಇದನ್ನೂ ಓದಿ: ಉಕ್ರೇನ್‍ನಲ್ಲಿರುವ ಭಾರತೀಯರನ್ನು ಭೇಟಿಯಾಗಿ ಧೈರ್ಯ ತುಂಬಿದ ಸಿಂಧಿಯಾ

    ಕರ್ನಾಟಕದ ಹಾವೇರಿ ಮೂಲದ ಭಾರತೀಯ ವಿದ್ಯಾರ್ಥಿ ನವೀನ್ ಸಾವನ್ನಪ್ಪಿದ ಹಿನ್ನೆಲೆ ಪ್ರಧಾನಿ ಅವರು ವಿದ್ಯಾರ್ಥಿಯ ಕುಟುಂಬಕ್ಕೆ ಸಾಂತ್ವನ ಹೇಳಿದರು. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೀನ್ ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

  • ಪಾಕ್‌ ವಿಮಾನವನ್ನು ಉರುಳಿಸಿದ್ದ ಅಭಿನಂದನ್‍ಗೆ ವೀರ ಚಕ್ರ ಪ್ರದಾನ

    ಪಾಕ್‌ ವಿಮಾನವನ್ನು ಉರುಳಿಸಿದ್ದ ಅಭಿನಂದನ್‍ಗೆ ವೀರ ಚಕ್ರ ಪ್ರದಾನ

    ನವದೆಹಲಿ: 2019 ಫೆಬ್ರವರಿಯಲ್ಲಿ ಪಾಕಿಸ್ತಾನದ ಅತ್ಯಾಧುನಿಕ ಯುದ್ಧ ವಿಮಾನ ಎಫ್ 16 ಅನ್ನು ಹೊಡೆದುರುಳಿಸಿದ್ದ ವಿಂಗ್ ಕಮಾಂಡರ್, ಸದ್ಯ ಗ್ರೂಪ್ ಕ್ಯಾಪ್ಟನ್ ಆಗಿ ಸೇವೆ ಸಲ್ಲಿಸುತ್ತಿರುವ ವರ್ಧಮಾನ್ ಅಭಿನಂದನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೊವಿಂದ್ ವೀರ ಚಕ್ರ ಪದಕವನ್ನು ನೀಡಿ ಗೌರವಿಸಿದರು.

    ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಧಮಾನ್ ಅಭಿನಂದನ್ ಅವರ ಸಾಹಸ ಮತ್ತು ಸೇವೆಯನ್ನು ಗೌರವಿಸಲಾಯಿತು. ಪರಮವೀರ ಚಕ್ರದ ಬಳಿಕ ವೀರಚಕ್ರ ಮೂರನೇ ಅತ್ಯುನ್ನತ ಶೌರ್ಯ ಪದಕವಾಗಿದೆ. ಈ ಹಿನ್ನೆಲೆ ಅಭಿನಂದನ್ ಅವರಿಗೆ ರಾಮನಾಥ್ ಕೋವಿಂದ್ ಅವರು ವೀರ ಚಕ್ರ ಪ್ರಶಸ್ತಿ ನೀಡಿ ಗೌರವಿಸಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾಗಿಯಾಗಿದ್ದರು.

    ಅಭಿನಂದನ್ ಅವರು ಪಾಕಿಸ್ತಾನದ ಅತ್ಯಾಧುನಿಕ ಎಫ್-16 ಯುದ್ಧ ವಿಮಾನ ಹೊಡೆದುರುಳಿಸಿದ ಏಕೈಕ ಮಿಗ್-21 ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಬೆಳವಣಿಗೆ ಬಳಿಕ ಭಾರತೀಯ ವಾಯುಪಡೆಯು ಯುದ್ಧ ವೀರ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಗ್ರೂಪ್ ಕ್ಯಾಪ್ಟನ್ ಹುದ್ದೆಗೆ ಬಡ್ತಿ ನೀಡಿತ್ತು. ಇದನ್ನೂ ಓದಿ:  ಲಿಂಗ ತಾರತಮ್ಯವಿಲ್ಲದೇ ಒಂದೇ ರೀತಿ ಸಮವಸ್ತ್ರ ನೀಡಿದ ಕೇರಳ ಶಾಲೆ

    ಭಾರತೀಯ ವಾಯುಪಡೆಯಲ್ಲಿರುವ ಮಿಗ್-21 ವಿಮಾನಗಳು 1960ರ ದಶಕದ ಮಾಡೆಲ್‍ಗಳು. ಈ ವಿಮಾನಗಳನ್ನು ಭಾರತ ಮೇಲ್ದರ್ಜೆಗೇರಿಸಿ ಇನ್ನೂ ಬಳಸುತ್ತಿದೆ. ಆದರೆ ಪಾಕಿಸ್ತಾನದ ಬತ್ತಳಿಕೆಯಲ್ಲಿರುವ ಎಫ್-16 ಅತ್ಯಾಧುನಿಕ ಸೌಲಭ್ಯ ಹೊಂದಿದ ವಿಮಾನವಾಗಿತ್ತು. ಅಂತಹ ವಿಮಾನವನ್ನೇ ಅಭಿನಂದನ್ ಅವರು ಹೊಡೆದುರುಳಿಸಿ ಸಾಹಸ ಮೇರೆದಿದ್ದರು.

    ಅಂದು ಏನಾಗಿತ್ತು?
    ಫೆ.14 ರಂದು ಪುಲ್ವಾಮಾದಲ್ಲಿ ನಡೆದ ದಾಳಿಯನ್ನು ಜೈಷ್-ಎ-ಮೊಹಮ್ಮದ್ ಸಂಘಟನೆ ಹೊಣೆ ಹೊತ್ತುಕೊಂಡ ಬಳಿಕ ಭಾರತ ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಏರ್ ಸರ್ಜಿಕಲ್ ಸ್ಟ್ರೈಕ್ ನಡೆಸಿತ್ತು. ಪರಿಣಾಮ ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರ ಬೆನ್ನಲ್ಲೇ ಭಾರತ ನೆಲವನ್ನು ಪ್ರವೇಶಿಸಿದ್ದ ಪಾಕ್ ಯುದ್ಧ ವಿಮಾನಗಳು ದಾಳಿ ನಡೆಸಲು ವಿಫಲವಾಗಿ ಹಿಂದಿರುಗಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನ ಎಫ್-16 ವಿಮಾನವನ್ನು ಹೊಡೆದು ಚೇಸ್ ಮಾಡುತ್ತಿದ್ದಾಗ ಮಿಗ್ ವಿಮಾನ ಪತನಗೊಂಡು ಅಭಿನಂದನ್ ಪ್ಯಾರಾಚೂಟ್ ಸಹಾಯದಿಂದ ಧುಮುಕಿದ್ದರು. ಇದನ್ನೂ ಓದಿ:  ಪತ್ನಿಯನ್ನು ಕೊಂದು ವಿಷ ಸೇವಿಸಿ ಆಸ್ಪತ್ರೆ ಸೇರಿದ್ದ ಪತಿರಾಯ ಈಗ ಪೊಲೀಸರ ಅತಿಥಿ

    ಪಾಕ್ ಅಕ್ರಮಿತ ಪ್ರದೇಶದಲ್ಲಿ ಬಿದ್ದ ವೇಳೆ ಅಭಿನಂದನ್ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ ಪರಿಣಾಮ ಗಾಯಗೊಂಡಿದ್ದರು. ಅದಕ್ಕೂ ಮುನ್ನವೇ ಸೇನೆಗೆ ಸಂಬಂಧಿಸಿದ್ದ ಮುಖ್ಯ ದಾಖಲೆಗಳು ಪಾಕಿಸ್ತಾನದ ಸೇನೆಗೆ ಸಿಗದಂತೆ ಮಾಡಿ ನಾಶ ಪಡಿಸಿದ್ದರು. ಅಲ್ಲದೇ ಕೆಲ ದಾಖಲೆಗಳನ್ನು ತಾವೇ ನುಂಗಿಹಾಕಿದ್ದರು. ಪಾಕಿಸ್ತಾನದಿಂದ ವಾಪಸ್ ಆದ ಬಳಿಕ ಮಾರ್ಚ್ 2 ರಂದು ಅಭಿನಂದನ್ ಅವರನ್ನು ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಆಗಿದ್ದರು. ಆ ಬಳಿಕ ದೆಹಲಿಯ ಸೇನೆಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗಿದ್ದರು

  • ಸ್ವಚ್ಛ ಸರ್ವೇಕ್ಷಣೆ 2021- ಸತತ 5ನೇ ಬಾರಿ ಸ್ವಚ್ಛ ನಗರ ಪ್ರಶಸ್ತಿ ಪಡೆದ ಇಂದೋರ್

    ಸ್ವಚ್ಛ ಸರ್ವೇಕ್ಷಣೆ 2021- ಸತತ 5ನೇ ಬಾರಿ ಸ್ವಚ್ಛ ನಗರ ಪ್ರಶಸ್ತಿ ಪಡೆದ ಇಂದೋರ್

    ನವದೆಹಲಿ: ಮಧ್ಯಪ್ರದೇಶದ ಇಂದೋರ್ ಸತತ 5 ಬಾರಿ ಭಾರತದ ಅತ್ಯಂತ ಸ್ವಚ್ಛ ನಗರ ಪ್ರಶಸ್ತಿ ಗೆಲ್ಲುವುದರ ಮೂಲಕ ಭಾರತದ ಅತ್ಯಂತ ಸ್ವಚ್ಛ ನಗರ ಎಂದು ಗುರುತಿಸಲ್ಪಟ್ಟಿದೆ.

    ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶನಿವಾರ ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ದೇಶದ ಸ್ವಚ್ಛ ನಗರಗಳು ಮತ್ತು ರಾಜ್ಯಗಳಿಗೆ 2021 ರ ಸ್ವಚ್ಛ ಸರ್ವೇಕ್ಷಣೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಪ್ರಶಸ್ತಿ ಪ್ರದಾನದಲ್ಲಿ ಇಂದೋರ್ ಗೆ ಮೊದಲ ಪ್ರಶಸ್ತಿ ಎಂದು ಫೋಷಿಸಲಾಗಿದೆ. ಈ ಮೂಲಕ ಇಂದೋರ್ ಸತತ ಐದನೇ ಬಾರಿಗೆ ಭಾರತದ ಅತ್ಯಂತ ಸ್ವಚ್ಛ ನಗರ ಎಂದು ಗುರುತಿಸಲ್ಪಟ್ಟಿದೆ. ಸೂರತ್(ಗುಜರಾತ್) ಮತ್ತು ವಿಜಯವಾಡ(ಆಂಧ್ರಪ್ರದೇಶ) ಕ್ರಮವಾಗಿ ದೇಶದ ಎರಡನೇ ಮತ್ತು ಮೂರನೇ ಸ್ವಚ್ಛ ನಗರಗಳ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಇದನ್ನೂ ಓದಿ:  ರಸ್ತೆಯಲ್ಲಿದ್ದ ಸಸಿ ಕಿತ್ತುಕೊಂಡು ನೆಟ್ಟಿಗರ ಕಣ್ಣಿಗೆ ಗುರಿಯಾದ ಮಹಿಳೆಯರು – ವೀಡಿಯೋ ವೈರಲ್

    ಭಾರತದ ರಾಜ್ಯಗಳಲ್ಲಿ, ಛತ್ತೀಸ್‍ಗಢವು ದೇಶದ ಸ್ವಚ್ಛ ರಾಜ್ಯವಾಗಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಸ್ವಚ್ಛ ಗಂಗಾ ಪಟ್ಟಣ ವಿಭಾಗದಲ್ಲಿ ವಾರಣಾಸಿ ಪ್ರಥಮ ಸ್ಥಾನ ಪಡೆದಿದೆ. 2021 ರ ಸ್ವಚ್ಛ ಸರ್ವೇಕ್ಷಣೆ ಆವೃತ್ತಿಯಲ್ಲಿ ಒಟ್ಟು 4,320 ನಗರಗಳು ಭಾಗವಹಿಸಿದ್ದು, ಪ್ರಶಸ್ತಿಯನ್ನು ಸಾಮಾನ್ಯವಾಗಿ ನಗರಗಳಿಗೆ ಸ್ಟಾರ್ ರೇಟಿಂಗ್ ನೀಡುವ ಮೂಲಕ ನಿರ್ಧರಿಸಲಾಗಿತ್ತು.

    ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ, ರಾಜ್ಯ ಸಚಿವ ಕೌಶಲ್ ಕಿಶೋರ್, ಮುಖ್ಯಮಂತ್ರಿಗಳು ಮತ್ತು ನಗರಾಭಿವೃದ್ಧಿ ಸಚಿವರು, ರಾಜತಾಂತ್ರಿಕರು, ರಾಜ್ಯ ಮತ್ತು ನಗರ ಆಡಳಿತಗಾರರು ಮತ್ತು ಹಿರಿಯ ಅಧಿಕಾರಿಗಳು, ವಲಯ ಪಾಲುದಾರರು ಮತ್ತು ಬ್ರಾಂಡ್ ಅಂಬಾಸಿಡರ್‍ಗಳು, ಎನ್‍ಜಿಒಗಳು ಮತ್ತು ಸಿಎಸ್‍ಒಗಳನ್ನು ಒಳಗೊಂಡ 1,200 ಅತಿಥಿಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಕಳೆದ ವರ್ಷ, ಇಂದೋರ್(ಮಧ್ಯಪ್ರದೇಶ), ರಾಜ್‍ಕೋಟ್ ಮತ್ತು ಸೂರತ್ (ಗುಜರಾತ್), ಮೈಸೂರು(ಕರ್ನಾಟಕ), ಮುಂಬೈ (ಮಹಾರಾಷ್ಟ್ರ) ಮತ್ತು ಅಂಬಿಕಾಪುರ (ಛತ್ತೀಸ್‍ಗಢ) ಗೆ 5 ರೇಟಿಂಗ್‍ಗಳನ್ನು ನೀಡಲಾಗಿತ್ತು. ಇದನ್ನೂ ಓದಿ:  ನೀನು ನನ್ನ ಮಗ ಎಂದು ಹೇಳಲು ಹೆಮ್ಮೆ ಪಡುತ್ತೇನೆ: ಬಿಗ್ ಬಿ

  • ಇಡಿ, ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷ ವಿಸ್ತರಿಸಿದ ಕೇಂದ್ರ

    ಇಡಿ, ಸಿಬಿಐ ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷ ವಿಸ್ತರಿಸಿದ ಕೇಂದ್ರ

    ನವದೆಹಲಿ: ಭಾರತ ಸರ್ಕಾರವು ಜಾರಿ ನಿರ್ದೇಶನಾಲಯ(ಇಡಿ) ಮತ್ತು ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ನಿರ್ದೇಶಕರ ಅಧಿಕಾರಾವಧಿಯನ್ನು 5 ವರ್ಷಗಳವರೆಗೆ ವಿಸ್ತರಿಸಿದೆ.

    ಕೇಂದ್ರೀಯ ಸಂಸ್ಥೆಗಳ ಮುಖ್ಯಸ್ಥರು ಪ್ರಸ್ತುತ ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಎರಡೂ ಸುಗ್ರೀವಾಜ್ಞೆಗೆ ಅಂಕಿತವನ್ನು ಹಾಕಿದ್ದಾರೆ. ಈ ಮೂಲಕ ಇಡಿ ಮತ್ತು ಸಿಬಿಐ ನಿರ್ದೇಶಕರ ಅಧಿಕಾರಾವಧಿ 5 ವರ್ಷಗಳವರೆಗೆ ವಿಸ್ತರಿಲಾಗಿದೆ ಎಂದು ವರದಿಗಳ ಪ್ರಕಾರ ತಿಳಿದುಬಂದಿದೆ. ಇದನ್ನೂ ಓದಿ:  ಇಂದಿನಿಂದ ಶಬರಿಮಲೆ ಯಾತ್ರೆ ಆರಂಭ – 2 ಡೋಸ್ ಲಸಿಕೆ ಕಡ್ಡಾಯ

    ಈ ಸುಗ್ರೀವಾಜ್ಞೆಯ ಪ್ರಕಾರ, ಉನ್ನತ ಏಜೆನ್ಸಿಗಳ ಮುಖ್ಯಸ್ಥರು ತಮ್ಮ ಎರಡು ವರ್ಷಗಳ ಅಧಿಕಾರಾವಧಿ ಪೂರ್ಣಗೊಳಿಸಿದ ನಂತರ, ತಮ್ಮ ಅಧಿಕಾರವನ್ನು ಮೂರು ವರ್ಷಗಳವರೆಗೆ ವಿಸ್ತರಿಸಿಕೊಳ್ಳಬಹುದು ಎಂದು ತಿಳಿಸಲಾಗಿದೆ.

  • ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ರಾಷ್ಟ್ರಪತಿಗೆ ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

    ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ರಾಷ್ಟ್ರಪತಿಗೆ ಸ್ವಾಗತ ಕೋರಿದ ಸಿಎಂ ಬೊಮ್ಮಾಯಿ

    – ನಾಳೆ ಚಾಮರಾಜನಗರಕ್ಕೆ ರಾಷ್ಟ್ರಪತಿ, ಸಿಎಂ ಭೇಟಿ

    ಬೆಂಗಳೂರು/ಚಾಮರಾಜನಗರ: ರಾಜ್ಯಪ್ರವಾಸಕ್ಕೆ ಆಗಮಿಸಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಸಿಎಂ ಬಸವರಾಜ ಬೊಮ್ಮಾಯಿ ಶಾಲು ಹೊದಿಸಿ ಬರಮಾಡಿಕೊಂಡರು.

    ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಕಾಲ ರಾಜ್ಯದ ಭೇಟಿಗೆ ಆಗಮಿಸಿದ್ದು, ಈ ವೇಳೆ ಬೊಮ್ಮಾಯಿ ಅವರು ಬೆಂಗಳೂರಿನ ಎಚ್.ಎ.ಎಲ್ ವಿಮಾನನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು. ಇದೇ ವೇಳೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಸಹ ಉಪಸ್ಥಿತರಿದ್ದರು.

    ಇತ್ತ ನಾಳೆ ಚಾಮರಾಜನಗರ ಜಿಲ್ಲೆಗೆ ರಾಮನಾಥ್ ಕೋವಿಂದ್ ಮತ್ತು ಬೊಮ್ಮಾಯಿ ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಭರದ ಸಿದ್ಧತೆ ಕೈಗೊಳ್ಳಲಾಗಿದೆ. ಬಿಳಿಗಿರಿರಂಗನ ಬೆಟ್ಟದ ತಪ್ಪಲಿನಲ್ಲಿರುವ ವಡ್ಡಗೆರೆ ಬಳಿ 3 ಹೆಲಿಪ್ಯಾಡ್ ಹಾಗೂ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ಬಳಿ 3 ಹೆಲಿಪ್ಯಾಡ್ ನಿರ್ಮಾಣ ಮಾಡಲಾಗಿದ್ದು, ಬಿಳಿಗಿರಿರಂಗನ ಬೆಟ್ಟಕ್ಕೆ ನಾಳೆ ಬೆಳಗ್ಗೆ 11.40ಕ್ಕೆ ರಾಷ್ಟ್ರಪತಿಗಳು ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಶಾಖೆಗೆ ಬಂದು ಸಂಘದ ಶಿಕ್ಷಣ ಪಡೆಯಿರಿ, ನಿಮಗೂ ಒಳ್ಳೆಯದು – ಹೆಚ್‍ಡಿಕೆಗೆ ಕಟೀಲ್ ಸಲಹೆ

    ಮಧ್ಯಾಹ್ನ 1.25ಕ್ಕೆ ಚಾಮರಾಜನಗರಕ್ಕೆ ಆಗಮಿಸಲಿದ್ದು, ಇದೇ ವೇಳೆ ಮೈಸೂರಿನಿಂದ ರಸ್ತೆ ಮಾರ್ಗ ಚಾಮರಾಜನಗರಕ್ಕೆ ಮುಖ್ಯಮಂತ್ರಿಗಳು ಆಗಮಿಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ 162 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆಯನ್ನು ರಾಮನಾಥ್ ಕೋವಿಂದ್ ಉದ್ಘಾಟಿಸಲಿದ್ದಾರೆ.

    ರಾಮನಾಥ್ ಕೋವಿಂದ್ ಅವರ ಭೇಟಿ ಹಿನ್ನೆಲೆ, ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ 500 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಇಂದು ಮತ್ತು ನಾಳೆ ಬಿಳಿಗಿರಿರಂಗನ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ನಾಳೆ ಚಾಮರಾಜನಗರದ ಸರ್ಕಾರಿ ಮೆಡಿಕಲ್ ಕಾಲೇಜು ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಇದನ್ನೂ ಓದಿ: ಟಯರ್ ಸ್ಫೋಟಗೊಂಡು ತಾಯಿ, ಮಗ ಕಾರಿನಲ್ಲೇ ದುರ್ಮರಣ

  • ಬ್ಯಾಟನ್ ಆಫ್ ಆನರ್ ಪ್ರಶಸ್ತಿ ಸ್ವೀಕರಿಸಿದ ಕಿರಣ್ ಬೇಡಿ

    ಬ್ಯಾಟನ್ ಆಫ್ ಆನರ್ ಪ್ರಶಸ್ತಿ ಸ್ವೀಕರಿಸಿದ ಕಿರಣ್ ಬೇಡಿ

    ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್‍ರವರು ಪುದುಚೇರಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿಯವರಿಗೆ ಬ್ಯಾಟನ್ ಆಫ್ ಆನರ್ ಹಾಗೂ ಮೆಚ್ಚುಗೆಯ ಪತ್ರ ನೀಡಿ ಸೋಮವಾರ ರಾಷ್ಟ್ರಪತಿ ಭವನದಲ್ಲಿ ಗೌರವಿಸಿದರು.

    ಮಾಜಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿಯವರು ಪುದುಚೇರಿಯ ಕೇಂದ್ರಾಡಳಿತಕ್ಕಾಗಿ ಸಲ್ಲಿಸಿದ ಸೇವೆಗಳನ್ನು ಗುರುತಿಸಿ ಬ್ಯಾಟನ್ ಆಫ್ ಆನರ್ ಪ್ರಶಸ್ತಿಯನ್ನು ನೀಡಲಾಗಿದ್ದು, ಇದು ಭಾರತದ ಗಣರಾಜ್ಯದ ಲಾಂಛನ ಚಿಹ್ನೆಯನ್ನು ಹೊಂದಿದೆ. ಇದನ್ನು ಓದಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿ ವಜಾ

    ಪ್ರಶಸ್ತಿ ಕುರಿತಂತೆ ಕಿರಣ್ ಬೇಡಿಯವರು, ಆತ್ಮೀಯ ಸಹೋದರ ಹಾಗೂ ಸಹೋದರಿಯರೇ, ಭಾರತದ ಗೌರವಾನ್ವಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್‍ರವರ ಕೈಯಾರೆ ರಾಷ್ಟ್ರಪತಿ ಭವನದಲ್ಲಿ ನನಗೆ ನೀಡಿದ ಬ್ಯಾಟನ್ ಆಫ್ ಆನರ್ ಮತ್ತು ಮೆಚ್ಚುಗೆ ಪತ್ರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.

    https://twitter.com/thekiranbedi/status/1368811846292054018

    ಫೆಬ್ರವರಿ 16ರಂದು ರಾಷ್ಟ್ರಪತಿಗಳು ಕಿರಣ್ ಬೇಡಿಯವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಸ್ಥಾನದಿಂದ ತೆಗೆದು, ಫೆಬ್ರವರಿ 18ರಂದು ತಮಿಳುನಾಡಿನ ಸೌಂಡರಾಜನ್ ಅವರನ್ನು ಲೆಫ್ಟಿನೆಂಟ್ ಗವರ್ನರ್ ಹೆಚ್ಚುವರಿ ಉಸ್ತುವಾರಿಯಾಗಿ ನೇಮಿಸಿದರು.

  • ಕೃಷಿ ಕಾಯ್ದೆ ವಿರೋಧಿಸಿ ವಿಪಕ್ಷ ನಾಯಕರಿಂದ ರಾಷ್ಟ್ರಪತಿಗಳ ಭೇಟಿ

    ಕೃಷಿ ಕಾಯ್ದೆ ವಿರೋಧಿಸಿ ವಿಪಕ್ಷ ನಾಯಕರಿಂದ ರಾಷ್ಟ್ರಪತಿಗಳ ಭೇಟಿ

    – ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯ

    ನವದೆಹಲಿ: ಕೇಂದ್ರ ಸರ್ಕಾರ ಮೂರು ಹೊಸ ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ಆಗ್ರಹಿಸಲು ವಿಪಕ್ಷ ನಾಯಕರ ನಿಯೋಗ ಬುಧವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನ ಭೇಟಿಯಾಗಲಿದೆ.

    ಕೊರೊನಾ ಹಿನ್ನೆಲೆ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್, ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ, ಸಿಪಿಐ(ಎಂ) ಮಹಾ ಸಚಿವ ಸೀತಾರಾಮ್ ಯೆಚೂರಿ ನೇತೃತ್ವದ ಐವರು ನಾಯಕ ನಿಯೋಗ ಬುಧವಾರ ಸಂಜೆ 5 ಗಂಟೆಗೆ ರಾಷ್ಟ್ರಪತಿಗಳ ಭೇಟಿಗೆ ತೆರಳಲಿದೆ. ಈ ವೇಳೆ ಮೂರು ಕೃಷಿ ಕಾಯ್ದೆಗಳನ್ನ ಹಿಂಪಡೆಯುವಂತೆ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಿದ್ದಾರೆ.

     

    ಕಳೆದ 13 ದಿನಗಳಿಂದ ಸಿಂಘು ಬಾರ್ಡರ್ ನಲ್ಲಿ ರೈತರು ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ಧರಣಿಗೆ ಕುಳಿತಿದ್ದಾರೆ. ದೆಹಲಿ ಪ್ರವೇಶಕ್ಕೆ ಪೊಲೀಸರು ನಿರಾಕರಿಸಿದ ಹಿನ್ನೆಲೆ ರೈತರು ಹೆದ್ದಾರಿಯ ಪಕ್ಕದಲ್ಲಿಯೇ ಬಿಡಾರ ಹೂಡಿಕೊಂಡು ವಾಸ್ತವ್ಯ ಹೂಡಿದ್ದಾರೆ. ಈಗಾಗಲೇ ಸರ್ಕಾರ ಪ್ರತಿಭಟನಾ ನಿರತ ರೈತರ ಮುಖಂಡರ ಜೊತೆ ಐದು ಸುತ್ತಿನ ಮಾತುಕತೆ ನಡೆಸಿದ್ದು ವಿಫಲವಾಗಿದೆ. ನಾಳೆ ಆರನೇ ಸುತ್ತಿನ ಮಾತುಕತೆ ನಡೆಯಲಿದೆ.

  • ರಾಷ್ಟ್ರಪತಿ ಕೋವಿಂದ್ ಪತ್ನಿಯಿಂದ ಮಾಸ್ಕ್ ತಯಾರು

    ರಾಷ್ಟ್ರಪತಿ ಕೋವಿಂದ್ ಪತ್ನಿಯಿಂದ ಮಾಸ್ಕ್ ತಯಾರು

    ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಈ ಸಾಂಕ್ರಾಮಿಕ ರೋಗ ಹರಡುವ ದೃಷ್ಟಿಯಿಂದ ಮಾಸ್ಕ್ ಬಳಕೆ ಕಡ್ಡಾಯವಾಗಿದೆ. ಇದೀಗ ಈ ಮಾಸ್ಕ್ ತಯಾರು ಮಾಡುವಲ್ಲಿ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಧರ್ಮಪತ್ನಿ ಸವಿತಾ ಕೋವಿಂದ್ ಅವರು ನಿರತರಾಗಿದ್ದಾರೆ.

    ಹೌದು. ಆಶ್ರಯತಾಣಗಳಲ್ಲಿ ವಾಸಿಸುತ್ತಿರುವ ಬಡವರು ಕೋವಿಡ್ 19 ಜೊತೆ ಹೋರಾಡಲು ಸವಿತಾ ಅವರು ತಾವೇ ತಮ್ಮ ಕೈಯಾರೇ ಮಾಸ್ಕ್ ತಯಾರಿಸಿ ಹಂಚುತ್ತಿದ್ದಾರೆ. ಈ ಮೂಲಕ ಬಡ ಜನರ ನೆರವಿಗೆ ಧಾವಿಸಿದ್ದಾರೆ.

    ದೆಹಲಿಯ ಶಕ್ತಿ ಹಾತ್ ನಲ್ಲಿರುವ ರಾಷ್ಟ್ರಪತಿಗಳ ಎಸ್ಟೇಟ್ ನಲ್ಲಿ ಸವಿತಾ ಅವರು ಹೊಲಿಗೆ ಯಂತ್ರದ ಮೂಲಕ ಮಾಸ್ಕ್ ತಯಾರು ಮಾಡುತ್ತಿದ್ದಾರೆ. ಬಳಿಕ ಅವುಗಳನ್ನು ನಗರ ಪ್ರದೇಶಗಳಲ್ಲಿರುವ ಹಲವು ಆಶ್ರಯತಾಣಗಳಿಗೆ ನೀಡುತ್ತಾರೆ. ಸವಿತಾ ಅವರು ಕೆಂಪು ಬಣ್ಣದ ಮಾಸ್ಕ್ ಧರಿಸಿಯೇ ಅವುಗಳನ್ನು ತಯಾರು ಮಾಡಿದ್ದಾರೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

    ತಾವೇ ಮಾಸ್ಕ್ ತಯಾರು ಮಾಡುವ ಮೂಲಕ ಮಾಸ್ಕ್ ಧರಿಸಿ ಒಗ್ಗಟ್ಟಿನಿಂದ ಈ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ ಮಾಡೋಣ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಆರೋಗ್ಯ ತಜ್ಞರು ಕೂಡ ಕೋವಿಡ್ ವಿರುದ್ಧ ಹೋರಾಡಲು ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವುದು ಮುಖ್ಯ ಎಂದು ಹೇಳಿದ್ದಾರೆ.