Tag: Ramanath Rai

  • ಚುನಾವಣೆಯಲ್ಲಿ ಸೋತ್ರೂ ನೈತಿಕವಾಗಿ ನಾವು ಗೆದ್ದಿದ್ದೇವೆ: ರಮಾನಾಥ ರೈ

    ಚುನಾವಣೆಯಲ್ಲಿ ಸೋತ್ರೂ ನೈತಿಕವಾಗಿ ನಾವು ಗೆದ್ದಿದ್ದೇವೆ: ರಮಾನಾಥ ರೈ

    ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸೋತರೂ ನಾವು ನೈತಿಕವಾಗಿ ಗೆದ್ದಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ (Ramanatha Rai) ಹೇಳಿದ್ದಾರೆ.

    ಚುನಾವಣಾ ಫಲಿತಾಂಶದ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನೈತಿಕವಾಗಿ ಸೋತಿದ್ದಾರೆ. ಚಾರ್ ಸೊ ಪಾರ್ ಅನ್ನುತ್ತಿದ್ದವರು ಈಗ ಅಧಿಕಾರ ಉಳಿಸಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ ಎಂದರು.

    ಬೇರೆ ಬೇರೆ ರೀತಿಯಲ್ಲಿ ನಮ್ಮ ಒಕ್ಕೂಟವನ್ನ ಸೋಲಿಸುವ ಕೆಲಸ ಮಾಡಿದ್ದಾರೆ. ಇಡಿ, ಐಟಿ ಬಳಸಿ ನಮ್ಮ ಬ್ಯಾಂಕ್ ಖಾತೆ, ಹಣವನ್ನ ಫ್ರೀಜ್ ಮಾಡುವ ಕೆಲಸ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಎನ್‌ಡಿಎ 293, ಇಂಡಿಯಾ ಒಕ್ಕೂಟ 232 ಮತ್ತು ಇತರರು 18 ಸ್ಥಾನಗಳನ್ನು ಗೆದ್ದಿದ್ದಾರೆ. ಬಹುಮತಕ್ಕೆ 272 ಸದಸ್ಯರ ಅಗತ್ಯವಿದೆ.

  • ಕೊಲ್ಲೂರು ದೇಗುಲದಿಂದ ಬರ್ತಿದ್ದ ಒಂದು ಹಿಡಿ ಅಕ್ಕಿಯನ್ನೂ ನಿಲ್ಲಿಸಿರಲಿಲ್ಲ, ಆದ್ರೂ ಪ್ರತಿಭಟಿಸಿದ್ರು: ರಮಾನಾಥ ರೈ

    ಕೊಲ್ಲೂರು ದೇಗುಲದಿಂದ ಬರ್ತಿದ್ದ ಒಂದು ಹಿಡಿ ಅಕ್ಕಿಯನ್ನೂ ನಿಲ್ಲಿಸಿರಲಿಲ್ಲ, ಆದ್ರೂ ಪ್ರತಿಭಟಿಸಿದ್ರು: ರಮಾನಾಥ ರೈ

    – ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್

    ಮಂಗಳೂರು: ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ವಿ. ನಾನು ಕೊಲ್ಲೂರು ದೇವಸ್ಥಾನ (Kolluru Temple) ದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು ಎಂದು ಮಾಜಿ ಸಚಿವ ರಮಾನಾಥ ರೈ (Ramanatha Rai) ಯವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

    ರಾಜ್ಯ ಸರ್ಕಾರದ ಪ್ರತಿಷ್ಠಿತ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರದ ಅಸಹಕಾರ ವಿರೋಧಿಸಿ ನಗರದ ಕ್ಲಾಕ್ ಟಾವರ್ ಸರ್ಕಲ್‍ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಪ್ರತಿಭಟನೆ ನಡೆಯುತ್ತಿದೆ. ಊಟದ ತಟ್ಟೆಗಳನ್ನು ಹಿಡಿದುಕೊಂಡು ತಟ್ಟೆ ಬಡಿಯುತ್ತಾ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರು, ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರ್ಕಾರ (BJP Government) ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ಆರೋಪ ಮಾಡಿದರು. ಇದನ್ನೂ ಓದಿ; ಸರ್ಕಾರದಿಂದ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ಬರುತ್ತಿದ್ದ ಅನುದಾನ ಕಟ್: ರಮಾನಾಥ ರೈ ಹೀಗಂದ್ರು!

    ಈ ವೇಳೆ ಮಾತನಾಡಿದ ರಮಾನಾಥ ರೈ, ಈ ಹಿಂದೆ ನಾನು ಅಧಿಕಾರದಲ್ಲಿದ್ದಾಗ ಮಕ್ಕಳಿಗೆ ಕೊಡುವ ಅನ್ನ ನಿಲ್ಲಿಸಿದ್ದೇನೆಂದು ಬಿಜೆಪಿಯವರು ಪ್ರತಿಭಟಿಸಿದ್ದರು. ನನ್ನ ವಿರುದ್ಧ ಅನ್ನದ ಬಟ್ಟಲು ತಟ್ಟಿ ಪ್ರತಿಭಟಿಸಿದ್ರು. ಅಂದು ನಾವು ಮಕ್ಕಳಿಗೆ ಕೊಡುವ ಅನ್ನವನ್ನೂ ನಿಲ್ಲಿಸಿರಲಿಲ್ಲ. ದೇವಸ್ಥಾನದ ಹಣ ದುರುಪಯೋಗ ಆಗಬಾರದೆಂದು ತಡೆದಿದ್ದೆವು. ನಾನು ಕೊಲ್ಲೂರು ದೇವಸ್ಥಾನದಿಂದ ಬರುತ್ತಿದ್ದ ಒಂದು ಹಿಡಿ ಅಕ್ಕಿಯನ್ನ ಕೂಡ ನಿಲ್ಲಿಸಿರಲಿಲ್ಲ. ಆದರೂ ನನ್ನ ವಿರುದ್ಧ ಪ್ರತಿಭಟನೆ ಮಾಡಿದ್ರು. ಈಗ ನಮ್ಮ ಸರ್ಕಾರದ ಅನ್ನ ಭಾಗ್ಯ ಯೋಜನೆಗೆ ವಿರೋಧ ಮಾಡಲಾಗಿದೆ. ಕೇಂದ್ರ ಸರ್ಕಾರ (Central Government) ಈ ಯೋಜನೆಯನ್ನ ತಡೆದು ಬಡವರಿಗೆ ದ್ರೋಹ ಮಾಡುತ್ತಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಿಸಿಯೂಟ, ಶರತ್ ಮಡಿವಾಳ ಹತ್ಯೆ ಕುರಿತ ಆರೋಪಕ್ಕೆ ರಮಾನಾಥ ರೈ ಬೇಸರ

    ನಮಗೆ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕಾಗಿದೆ. ನಮ್ಮ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಬೇಕೆಂದೆ ಈ ರೀತಿ ಮಾಡಲಾಗಿದೆ. ಯಡಿಯೂರಪ್ಪ ನೇತೃತ್ವದ ಸರ್ಕಾರ ಶಾಲಾ ಮಕ್ಕಳಿಗೆ ಸೈಕಲ್ ನೀಡಿತ್ತು. ಆದರೆ ಒಂದು ವರ್ಷದಲ್ಲಿ ಸೈಕಲ್ (Cycle) ಮೂಲೆ ಸೇರಿತ್ತು. ಬಿಜೆಪಿ ಸರ್ಕಾರ ಮಕ್ಕಳಿಗೆ ನೀಡಿದ್ದು ಪೊಟ್ಟು ಸೈಕಲ್. ಬಿಜೆಪಿ ನಾಯಕರು ನೀಡಿದ್ದ ಭರವಸೆಯನ್ನು ಈವರೆಗೆ ಈಡೇರಿಸಲು ಸಾಧ್ಯವಾಗಿಲ್ಲ. ಹೊರ ದೇಶದಲ್ಲಿರುವ ಕಪ್ಪು ಹಣವನ್ನು ಈವರೆಗೂ ತರಲು ಇವರಿಗೆ ಸಾಧ್ಯವಾಗಿಲ್ಲ. ಈ ಬಿಜೆಪಿ ನಾಯಕರು ಆತ್ಮಹತ್ಯೆ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರಿಗೆ ನಾಚಿಕೆ ಮಾನ ಮರ್ಯಾದೆ ಇಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ – ಸರ್ಕಾರದ ವಿರುದ್ಧ ಅಶೋಕ್‌ ಕಿಡಿ

  • ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಮಾಜಿ ಸಚಿವ ರಮಾನಾಥ್ ರೈ

    ಚುನಾವಣಾ ರಾಜಕೀಯದಿಂದ ಹಿಂದೆ ಸರಿದ ಮಾಜಿ ಸಚಿವ ರಮಾನಾಥ್ ರೈ

    ಮಂಗಳೂರು: ಬಂಟ್ವಾಳ (Bantwal) ದಲ್ಲಿ ನನಗೆ ಸಣ್ಣ ಅಂತರದ ಸೋಲಾಗಿದೆ. ನನಗಿಂತಲೂ ಪಕ್ಷದಲ್ಲಿ ಹಿರಿಯರಿದ್ದಾರೆ. ಆದರೆ ನನಗೆ ವಯಸ್ಸಾಯಿತೆಂದು ನನ್ನ ಸ್ಪರ್ಧೆಗೆ ನಮ್ಮಲ್ಲಿ ಅಪಸ್ವರ ಬಂತು. ಹಾಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯೋ ನಿರ್ಧಾರಕ್ಕೆ ಬಂದಿದ್ದೇನೆ ಎಂದು ಮಾಜಿ ಸಚಿವ ರಮಾನಾಥ್ ರೈ (Ramanath Rai) ಹೇಳಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್‍ (Congress) ಗೆ ದ.ಕ ಜಿಲ್ಲೆಯಲ್ಲಿ ಹಿನ್ನಡೆಯಾಗಿದೆ. ಗೆದ್ದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕಾಂಗ್ರೆಸ್ ಮೇಲೆ ವಿಶ್ವಾಸವನ್ನಿಟ್ಟು ಜನ ಮತ ನೀಡಿದ್ದಾರೆ. ಜಿಲ್ಲೆಯಲ್ಲಿ ಸೋತರೂ ರಾಜ್ಯದಲ್ಲಿ ಸರ್ಕಾರ ನಮ್ಮದೇ ಇದೆ. ಜಿಲ್ಲೆಯಲ್ಲಿ ಕಾರ್ಯಕರ್ತರು ಎದೆಗುಂದಬಾರದು. ನಾನು ಕಡೆಯ ಬಾರಿ ಚುನಾವಣೆ ಸ್ಪರ್ಧೆ ಮಾಡೋದಾಗಿ ಹೇಳಿದ್ದೆ. ಚುನಾವಣಾ ರಾಜಕೀಯದಿಂದ ದೂರವಿದ್ದರೂ ಪಕ್ಷದ ಕಾರ್ಯಕ್ರಮದಲ್ಲಿ ಮುಂಚೂಣಿಯಲ್ಲಿರುತ್ತೇನೆ ಎಂದು ಹೇಳಿದರು.

    ಬಿಜೆಪಿ (BJP) ರಾಜ್ಯದಲ್ಲಿ ಸ್ಪಷ್ಟ ಬಹುಮತವನ್ನು ಯಾವತ್ತೂ ಪಡೆದಿಲ್ಲ. ಜನಸಂಘ ಇರುವಾಗಲೂ ಬಾಹ್ಯ ಬೆಂಬಲದಿಂದಲೇ ಗೆದ್ದಿದ್ದರು. ಜಿಲ್ಲೆಯಲ್ಲಿ ಸೋತರೂ ಗೆದ್ದರೂ ಪಕ್ಷವನ್ನು ಪ್ರಬಲವಾಗಿ ಕಟ್ಟಿದ್ದೇವೆ. ರಾಜ್ಯದ ಜನ ಯಾವತ್ತೂ ಬಿಜೆಪಿಗೆ ಬೆಂಬಲ ನೀಡಿಲ್ಲ. ಇದು ಬಸವಣ್ಣ (Basavanna) ಹುಟ್ಟಿದ ನಾಡು, ಇಲ್ಲಿ ಜ್ಯಾತ್ಯಾತೀತ ನಿಲುವಿನ ಜನರಿಗೆ ಜನ ಮಣೆ ಹಾಕುತ್ತಾರೆ. ಭವಿಷ್ಯದಲ್ಲಿ ಬಿಜೆಪಿ ಖಂಡಿತಾ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ ಎಂದು ಭವಿಷ್ಯ ನುಡಿದರು.

    ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನವನ್ನು ರಾಜ್ಯದಲ್ಲಿ ಕಾಂಗ್ರೆಸ್ ಗಳಿಸಲಿದೆ. ಗ್ಯಾರಂಟಿ ಕಾರ್ಯಕ್ರಮ ಪ್ರಮಾಣವಚನ ಸ್ವೀಕಾರವಾದ ತಕ್ಷಣ ಅನುಷ್ಠಾನಕ್ಕೆ ಬರಲಿದೆ. ಕಾಂಗ್ರೆಸ್‍ನ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚು ಪ್ರಯೋಜನ ತಂದಿದೆ ಎಂದರು. ಇದನ್ನೂ ಓದಿ: ಬಿಎಸ್‍ವೈ ಕಣ್ಣೀರು ಹಾಕಿ ರಾಜೀನಾಮೆ ಕೊಟ್ಟು ಬಂದಾಗಿನಿಂದ ಇಂಪ್ಯಾಕ್ಟ್ ಆಯ್ತು: ಶೆಟ್ಟರ್

    ಪಾರ್ಟಿ ವಿರುದ್ಧ ನಾನು ಈವರೆಗೂ ಒಂದು ಶಬ್ದದ ಅಪಸ್ವರವನ್ನು ಎತ್ತಿಲ್ಲ. ಪಕ್ಷದ ಋಣವನ್ನು ಜೀವನ ಪರ್ಯಂತ ತೀರಿಸುತ್ತೇನೆ. ಸೋಲಿನ ಅವಲೋಕನವನ್ನು ಮಾಡಿದ್ದೇನೆ. ಚುನಾವಣೆ ಅನ್ನೋದು ನಾವು ಗ್ರಹಿಸಿದ ರೀತಿ ಅಗೋದಿಲ್ಲ. ಚುನಾವಣೆ ಗೆಲ್ಲುವ ವಿಶ್ವಾಸದಲ್ಲಿದ್ದೆ, ಸಮೀಕ್ಷೆಗಳೂ ಗೆಲ್ಲುವ ರೀತಿ ಇತ್ತು. ಸೋಲಿನ ಬಗ್ಗೆ ಅವಲೋಕನ ಮಾಡುತ್ತಿದ್ದೇನೆ. ಮಂಗಳೂರು, ಪುತ್ತೂರು ಹೊರತುಪಡಿಸಿ ಬೇರೆ ಎಲ್ಲಾ ಕಡೆ ಹಿನ್ನಡೆಯಾಗಿದೆ ಎಂದು ತಿಳಿಸಿದರು.

  • ಬಿಜೆಪಿಯ ದುರಾಡಳಿತದಿಂದ ಚಿಕ್ಕಮಗಳೂರು ನಗರ ದುಸ್ಥಿತಿಗೆ ತಲುಪಿದೆ: ರಮಾನಾಥ್ ರೈ

    ಬಿಜೆಪಿಯ ದುರಾಡಳಿತದಿಂದ ಚಿಕ್ಕಮಗಳೂರು ನಗರ ದುಸ್ಥಿತಿಗೆ ತಲುಪಿದೆ: ರಮಾನಾಥ್ ರೈ

    ಚಿಕ್ಕಮಗಳೂರು: ಚಿಕ್ಕಮಗಳೂರು ನಗರಸಭೆಯಲ್ಲಿ ಕಳೆದ 10 ವರ್ಷಗಳಿಂದ ಬಿಜೆಪಿ ಅಧಿಕಾರ ನಡೆಸುತ್ತಿದೆ. ಆದರೆ, ಅವರ ದುರಾಡಳಿತದಿಂದ ಸುಂದರ ನಗರದ ವ್ಯವಸ್ಥೆ ದುಸ್ಥಿತಿಗೆ ತಲುಪಿದೆ ಎಂದು ಮಾಜಿ ಸಚಿವ ರಮಾನಾಥ್ ರೈ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.

    ನಗರದ ವಿವಿಧ ವಾರ್ಡ್​​​ಗಳಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ನಗರದ ಅಭಿವೃದ್ಧಿ ಶೂನ್ಯವಾಗಿದೆ. ಕುಡಿಯುವ ನೀರು, ವಿದ್ಯುತ್, ಒಳಚರಂಡಿ ವ್ಯವಸ್ಥೆ ಕೆಟ್ಟ ಸ್ಥಿತಿಗೆ ತಲುಪಿದೆ. ಬಿಜೆಪಿಯ ದುರಾಡಳಿತದಿಂದ ನಗರ ಸೇರಿದಂತೆ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

    bjp - congress

    ನಿಗದಿತ ಸಮಯದಲ್ಲಿ ನಗರಸಭೆಗೆ ಚುನಾವಣೆ ನಡೆಯುತ್ತಿಲ್ಲ. ನ್ಯಾಯಾಲಯದ ನಿರ್ದೇಶನದ ಮೇಲೆ ಚುನಾವಣೆ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರಿಗೆ ಒಂದೇ ಒಂದು ಮನೆಯನ್ನೂ ನೀಡಿಲ್ಲ. ಚುನಾಯಿತ ಜನಪ್ರತಿನಿಧಿಗಳ ನಿರ್ಲಕ್ಷö್ಯದಿಂದ ನಗರದಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕ್ರಿಸ್‌ಮಸ್‌ ವಿಶೇಷ – ಸಮುದ್ರ ತೀರದ ಮರಳಿನಲ್ಲಿ 5,400 ಗುಲಾಬಿ ಹೂಗಳಿಂದ ಅರಳಿದ ಸಂತಾ ಕ್ಲಾಸ್‌ ಕಲಾಕೃತಿ

    ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತದಿಂದ ಅಡುಗೆ ಅನಿಲ, ಇಂಧನ ಬೆಲೆ ಹೆಚ್ಚಳವಾಗುತ್ತಿದ್ದು, ದಿನನಿತ್ಯದ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಇದರಿಂದ ಬಡವರ ಬದುಕು ದುಸ್ತರವಾಗಿದೆ. ಬೆಲೆ ಏರಿಕೆಯಿಂದ ಬೇಸತ್ತಿರುವ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಲವು ತೋರುತ್ತಿದ್ದಾರೆ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸ್ವಚ್ಛ, ಪ್ರಾಮಾಣಿಕ, ಅಭಿವೃದ್ಧಿ ಪೂಕರ ಆಡಳಿತ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಕೆಆರ್‌ಎಸ್ ಜಲಾಶಯ ಸತತ 53 ದಿನಗಳವರೆಗೆ ಸಂಪೂರ್ಣ ಭರ್ತಿ – 90 ವರ್ಷಗಳ ಇತಿಹಾಸದಲ್ಲೇ ದಾಖಲೆ

    ಜಿಲ್ಲೆ ಪ್ರವಾಸೋದ್ಯಮಕ್ಕೆ ಪೂರಕವಾಗಿದೆ. ಇಲ್ಲಿ ವಾಣಿಜ್ಯ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಕೈಗಾರಿಕೆಗಳ ಸ್ಥಾಪನೆಯಾಗಬೇಕಿದೆ. ಈ ನಿಟ್ಟಿನಲ್ಲಿ ನಗರದ ಅಭಿವೃದ್ಧಿ ಬಹುಮುಖ್ಯ ಪಾತ್ರವಹಿಸಲಿದ್ದು, ಕಾಂಗ್ರೆಸ್ ಪಕ್ಷ ನಗರಸಭೆ ಆಡಳಿತದ ಚುಕ್ಕಾಣಿ ಹಿಡಿದು ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಲಿದೆ ಎಂದು ಹೇಳಿದರು.

  • ಸಿಎಂ ನೈತಿಕ ಪೊಲೀಸ್‍ಗಿರಿಗೆ ಪುಷ್ಠಿ ನೀಡುವಂತೆ ಮಾತನಾಡಿದ್ದಾರೆ: ರಮಾನಾಥ ರೈ

    ಸಿಎಂ ನೈತಿಕ ಪೊಲೀಸ್‍ಗಿರಿಗೆ ಪುಷ್ಠಿ ನೀಡುವಂತೆ ಮಾತನಾಡಿದ್ದಾರೆ: ರಮಾನಾಥ ರೈ

    ಹಾವೇರಿ: ನಮ್ಮ ಭಾಗದಲ್ಲಿ ನೈತಿಕ ಪೊಲೀಸ್‍ಗಿರಿ ನಡೆಯುತ್ತಿದೆ. ಬಿಜೆಪಿ ಯಾವಾಗ ನೆಲೆ ಕಳೆದುಕೊಳ್ಳುತ್ತದೆ ಆಗ ಇಂತಹ ಘಟನೆಗಳು ನಡೆಯುತ್ತದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಅವರು ಕೂಡ ನೈತಿಕ ಪೊಲೀಸ್‍ಗಿರಿಗೆ ಪುಷ್ಠಿ ನೀಡುವಂತೆ ಮಾತನಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಮಾನಾಥ ರೈ ಸಿಎಂ ವಿರುದ್ಧ ಕಿಡಿ ಕಾರಿದ್ದಾರೆ.

    ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದಲ್ಲಿ ಮಾತನಾಡಿದ ಅವರು, ಸಂಘ ಪರಿವಾರದ ಕೆಲವು ಸಂಘಟನೆಗಳು ಈ ರೀತಿ ಕೆಲಸಗಳನ್ನು ಮಾಡುತ್ತಿದೆ. ಅವುಗಳನ್ನು ಆ ರೀತಿ ಮಾಡಿಸಲಾಗುತ್ತಿದೆ. ಇದು ನೈತಿಕ ಪೊಲೀಸ್‍ಗಿರಿ ಅಲ್ಲ, ಅನೈತಿಕ ಪೊಲೀಸ್‍ಗಿರಿ. ಇದರಿಂದ ಮತೀಯ ಸಾಮರಸ್ಯ ಕದಡುವಂತಾಗುತ್ತದೆ. ಜವಾಬ್ದಾರಿ ಸ್ಥಾನದಲ್ಲಿರುವವರು ಈ ರೀತಿ ಮಾತನಾಡಬಾರದು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ರಾಜ್ಯದಲ್ಲಿ ಶಾಂತಿ, ಸಮಾಧಾನ ಇರಬೇಕು. ಮನುಷ್ಯರ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಹೀಗಾಗಿ ಸಿಎಂ ಅವರ ಹೇಳಿಕೆಯನ್ನು ಖಂಡಿಸುತ್ತೇನೆ. ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ಪಕ್ಷ ಕಾಂಗ್ರೆಸ್. ಸಂವಿಧಾನವನ್ನು ಯಥಾವತ್ತಾಗಿ ಜನರಿಗೆ ಕೊಡಬೇಕು ಅನ್ನೋದು ನಮ್ಮ ಪಕ್ಷದ ನಿಲುವು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ

  • ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕ್ವಾರಂಟೈನ್

    ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕ್ವಾರಂಟೈನ್

    ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

    ನಾನು ಎರಡು ದಿನಗಳಿಂದ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

    ಇದೇ ವೇಳೆ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವಾನ್ ಡಿಸೋಜಾ ಹಾಗೂ ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಕುಂತಲಾ ಟಿ. ಶೆಟ್ಟಿಯವರು ಕೂಡ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

  • ಬಿಜೆಪಿಯಿಂದ ಧರ್ಮದ ಆಧಾರದಲ್ಲಿ ಪ್ರಚೋದನೆ: ರಮಾನಾಥ ರೈ

    ಬಿಜೆಪಿಯಿಂದ ಧರ್ಮದ ಆಧಾರದಲ್ಲಿ ಪ್ರಚೋದನೆ: ರಮಾನಾಥ ರೈ

    ಮಂಗಳೂರು: ರಾಮನಗರ ಜಿಲ್ಲೆಯ ಕನಕಪುರದಲ್ಲಿ ಯೇಸು ಕ್ರಿಸ್ತನ ಪ್ರತಿಮೆ ಸ್ಥಾಪನೆ ವಿರುದ್ಧ ಪ್ರತಿಭಟನೆ ಮಾಡುವ ಮೂಲಕ ಬಿಜೆಪಿ ಧರ್ಮದ ಆಧಾರದಲ್ಲಿ ಪ್ರಚೋದನೆ ಉಂಟು ಮಾಡುತ್ತಿದೆ. ಈ ಮೂಲಕ ಸಮುದಾಯದ ಬೀದಿಗಿಳಿದಾಗ ರಾಜಕೀಯ ಲಾಭ ಪಡೆಯುವ ಹುನ್ನಾರವನ್ನು ಸೃಷ್ಟಿಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಆರೋಪಿಸಿದ್ದಾರೆ.

    ಮಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯನ್ನು ಮತೀಯ ಪ್ರಯೋಗಾಲಯ ಮಾಡಲು ಪ್ರಯತ್ನಿಸಿದ ಸಂಘಟನೆಯ ನಾಯಕರು ಕನಕಪುರದಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದಾರೆ. ಜೊತೆಗೆ ಶಾಂತಿ ಹಾಗೂ ಸಹಬಾಳ್ವೆಯನ್ನು ಬಯಸುವ ಸಮುದಾಯವನ್ನು ಪ್ರಚೋದಿಸುವ ಕೆಲಸ ಮಾಡಿದ್ದಾರೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಹೆಸರು ಹೇಳದೇ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಓದಿ: ವೋಟ್, ಸೀಟ್ ಆಯ್ತು ಈಗ ನೋಟಿಗಾಗಿ ಏಸು ಪ್ರತಿಮೆ: ಡಿಕೆಶಿ ವಿರುದ್ಧ ಕಲ್ಲಡ್ಕ ಕಿಡಿ

    ಇಲ್ಲಿನ ಕ್ರೈಸ್ತ ಸಮುದಾಯ ಈ ಹಿಂದೆ ಚರ್ಚ್ ದಾಳಿ ಸಂದರ್ಭದಲ್ಲೂ ಪ್ರಚೋದನೆಗೆ ಒಳಗಾಗದೆ ಸಾಮರಸ್ಯವನ್ನು ಉಳಿಸಿಕೊಂಡಿತ್ತು. ಅಂತಹ ಸಮುದಾಯವನ್ನು ಪ್ರಚೋದನೆಗೊಳಿಸುವ ಕೆಲಸವನ್ನು ಮಾಡಲಾಗುತ್ತಿದೆ. ಬಹುತ್ವದ, ಜಾತ್ಯತೀಯತೆಯ ಶ್ರೀಮಂತ ಇತಿಹಾಸವುಳ್ಳ ಭಾರತದ ಬಗ್ಗೆ ಜಗತ್ತೇ ಕೊಂಡಾಡುತ್ತದೆ. ಆದರೆ ಬಿಜೆಪಿ ಮಾತ್ರ ಧರ್ಮದ ಆಧಾರದಲ್ಲಿ ಆ ಗೌರವಕ್ಕೆ ಚ್ಯುತಿ ತರುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

    ಕಲ್ಲಡ್ಕದ ಶ್ರೀರಾಮ ವಿದ್ಯಾ ಸಂಸ್ಥೆಗೆ ಒಂದು ಕೆಜಿ ಅಕ್ಕಿಯೂ ಹೋಗಿಲ್ಲ. ಚೆಕ್ ರೂಪದಲ್ಲಿ ದುಡ್ಡು ಹೋಗಿದೆ. ಅದನ್ನು ಅನ್ನ ದಾಸೋಹಕ್ಕೆ ಬಳಸದೆ ದುರುಪಯೋಗಪಡಿಸಲಾಗಿದೆ. ಪ್ರತಿ ತಿಂಗಳು 4 ಲಕ್ಷ ರೂ. ಚೆಕ್ ಶಾಲೆಗೆ ಪಾವತಿಯಾಗತ್ತಿತ್ತು ಎಂದು ರಮಾನಾಥ ರೈ ದೂರಿದರು.

  • ಕಾರು ಬಿಟ್ಟು ಬಸ್ಸಿನಲ್ಲಿ ಪ್ರಯಾಣಿಸಿದ ಮಾಜಿ ಸಚಿವ ರಮಾನಾಥ ರೈ

    ಕಾರು ಬಿಟ್ಟು ಬಸ್ಸಿನಲ್ಲಿ ಪ್ರಯಾಣಿಸಿದ ಮಾಜಿ ಸಚಿವ ರಮಾನಾಥ ರೈ

    ಮಂಗಳೂರು: ಕಾರಿನಲ್ಲೇ ದಿನವಿಡೀ ಓಡಾಟ ಮಾಡುತ್ತಿದ್ದ ಮಾಜಿ ಸಚಿವ ರಮಾನಾಥ ರೈ ಇಂದು ಮಾತ್ರ ಖಾಸಗಿ ಬಸ್ಸಿನಲ್ಲಿ ಇತರ ಪ್ರಯಾಣಿಕರೊಂದಿಗೆ ಪ್ರಯಾಣ ಬೆಳೆಸಿದರು.

    ಮಾಜಿ ಸಚಿವ ರಮಾನಾಥ ರೈ ತಮ್ಮ ಊರು ಬಂಟ್ವಾಳದಿಂದ ಖಾಸಗಿ ಸಾರಿಗೆ ಬಸ್ಸಿನಲ್ಲಿ ಮಂಗಳೂರಿಗೆ ಆಗಮಿಸಿ, ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಮಂಗಳೂರಿನ ಗೋಲಿಬಾರ್ ಘಟನೆ ಖಂಡಿಸಿ, ಮಂಗಳೂರಿನ ಪುರಭವನದ ಮುಂಭಾಗದಲ್ಲಿ ಒಂದು ದಿನದ ಧರಣಿ ನಡೆಸಲಾಗುತ್ತಿದೆ. ಈ ವೇಳೆ, ಧರಣಿಯಲ್ಲಿ ಪಾಲ್ಗೊಳ್ಳಲು ರಮಾನಾಥ ರೈ ಮಂಗಳೂರಿಗೆ ಬಸ್ಸಿನಲ್ಲಿ ಆಗಮಿಸಿ ಗಮನ ಸೆಳೆದರು.

    ಬಂಟ್ವಾಳದ ಬಿ.ಸಿ.ರೋಡ್‍ನಲ್ಲಿ ಬಸ್ ಹತ್ತಿ ಕುಳಿತ ರಮಾನಾಥ ರೈ ಅವರು ಯಾವುದೇ ಭದ್ರತೆ ಇಲ್ಲದೆ ಜನಸಾಮಾನ್ಯರ ಜೊತೆ ಪ್ರಯಾಣ ಮಾಡಿದರು. ಸಚಿವರಾಗಿದ್ದ ವೇಳೆ ಸದಾ ಬ್ಯುಸಿಯಾಗಿರುತ್ತಿದ್ದ ರಮಾನಾಥ ರೈ, ಈಗಲೂ ಬ್ಯುಸಿ. ಆದರೆ ಸೋತರೂ ಜನಸಾಮಾನ್ಯರ ಜೊತೆಗಿದ್ದೇನೆ ಎನ್ನುವುದನ್ನು ಬಸ್ಸಿನಲ್ಲಿ ಓಡಾಡುವ ಮೂಲಕ ಪರೋಕ್ಷವಾಗಿ ತೋರಿಸಿದ್ದಾರೆ.

  • ಸೂಲಿಬೆಲೆಗೆ ಮೋದಿ ಪರ ನಿಂತು ಸಾಕಾಗಿರಬಹುದು- ರಮಾನಾಥ ರೈ

    ಸೂಲಿಬೆಲೆಗೆ ಮೋದಿ ಪರ ನಿಂತು ಸಾಕಾಗಿರಬಹುದು- ರಮಾನಾಥ ರೈ

    ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆಗೆ ಪ್ರಧಾನಿ ನರೇಂದ್ರ ಮೋದಿ ಪರ ನಿಂತು ಸಾಕಾಗಿರಬಹುದು ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯವಾಡಿದ್ದಾರೆ.

    ಬಿಜೆಪಿ ಸಂಸದರ ವಿರುದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವಿಚಾರ ಸಂಬಂಧ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೂಲಿಬೆಲೆ ಈ ಹಿಂದೆ ಹೇಳಿದ ಯಾವುದೇ ಮಾತು ಅನುಷ್ಠಾನ ಆಗಿಲ್ಲ. ಕಪ್ಪು ಹಣ ಸೇರಿದಂತೆ ಇತರ ಯೋಜನೆಗಳು ಸುಳ್ಳಾಗಿದೆ. ಸೂಲಿಬೆಲೆ ಹೇಳೋದೆಲ್ಲಾ ಸುಳ್ಳು ಎಂದು ಜನರಿಗೆ ಆಗಿದೆ. ಹೀಗಾಗಿ ತಾನು ಹೇಳಿದ್ದು ಸುಳ್ಳಾಯ್ತು ಎಂದು ಸೂಲಿಬೆಲೆ ಆತ್ಮಸಾಕ್ಷಿಗೆ ಅರ್ಥವಾಗಿರಬೇಕು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ವ್ಯಕ್ತಪಡಿಸಿರಬಹುದು ಎಂದು ತಿಳಿಸಿದ್ದಾರೆ.

    ಬಿಜೆಪಿ ಸಂದರ ವಿರುದ್ಧ ಚಕ್ರವರ್ತಿ ಕಿಡಿ:
    ಸೆ.30 ರಂದು ಈ ಸಂಬಂಧ ತಮ್ಮ ಯುವಲೈವ್ ವೆಬ್‍ಸೈಟಿನಲ್ಲಿ ಬರಹ ಪ್ರಕಟಿಸಿರುವ ಸೂಲಿಬೆಲೆ, ನಿಜ ಹೇಳಬೇಕೆಂದರೆ ಪ್ರವಾಹದ ನಂತರವೇ ಬೆಂಗಳೂರಿನ ಸಂಸದ ಅನಂತ್ ಕುಮಾರ್ ಅವರ ಅನುಪಸ್ಥಿತಿ ಎದ್ದು ಕಾಣುತ್ತಿರುವುದು. ಕೇಂದ್ರ ಸರ್ಕಾರದಲ್ಲಿ ಕರ್ನಾಟಕದ ದನಿಯನ್ನು ಪ್ರಭಾವಿಯಾಗಿ ಮಂಡಿಸಬಲ್ಲ ಸಂಸದರೇ ಇಲ್ಲವೇನೋ ಎನಿಸುತ್ತದೆ ಬೇಸರ ವ್ಯಕ್ತಪಡಿಸಿದ್ದರು.

    ಕರ್ನಾಟಕದ ಒಳಿತಿಗಾಗಿ ಕೇಂದ್ರದೊಂದಿಗೆ ಗುದ್ದಾಡಿ ಬೇಕಾದ್ದನ್ನು ಪಡೆದುಕೊಂಡು ಬರಬಲ್ಲ ಸಾಮರ್ಥ್ಯ ಯಾವ ಸಂಸದರಿಗೂ ಇಲ್ಲವಲ್ಲ ಎಂಬುದೇ ದುಃಖದ ಸಂಗತಿ. ಮತ್ತು ಇವರು ಒಬ್ಬಿಬ್ಬರಲ್ಲ, ಬರೋಬ್ಬರಿ 25 ಜನ. ಇನ್ನುಳಿದ ಮೂವರಲ್ಲಿ ಒಬ್ಬರು ಈಗ ತಾನೇ ಸಂಸತ್ತು ಪ್ರವೇಶಿಸಿರುವ ಸುಮಲತಾ ಆದರೆ ಪ್ರಜ್ವಲ್ ಅವರದ್ದೂ ಹೆಚ್ಚು ಕಡಿಮೆ ಅದೇ ಸ್ಥಾನ. ಇವರುಗಳಿಗೆ ಸಂಸತ್ತಿನ ಕಾರ್ಯವೈಖರಿಯ ಅರಿವಾಗುವುದರೊಳಗೆ ಅದರ ಕಾರ್ಯ ಅವಧಿ ಮುಗಿದು ಹೋಗಿರುತ್ತದೆ. ಕಾಂಗ್ರೆಸ್ಸಿನ ಒಬ್ಬೇ ಒಬ್ಬ ಸಂಸದ ಅಣ್ಣನನ್ನು ಬಿಡಿಸಿಕೊಂಡು ಬರುವುದರಲ್ಲಿ ತಿಪ್ಪರಲಾಗ ಹಾಕುತ್ತಿದ್ದಾರೆ. ಹೀಗಾಗಿ ಕರ್ನಾಟಕದ ಪರವಾಗಿ, ಕನ್ನಡದ ಪರವಾಗಿ ಸಮರ್ಥವಾಗಿ ದನಿ ಎತ್ತಬಲ್ಲವರೇ ಇಲ್ಲವಾಗಿಬಿಟ್ಟಿದ್ದಾರೆ ಎಂದಿದ್ದರು. ಇದನ್ನೂ ಓದಿ: ಮೋದಿ ಅಮೆರಿಕಗೆ ಹೋದ್ರೆ ಇಲ್ಲಿ ಯಾರೂ ಊಟ, ತಿಂಡಿ ಮಾಡಲ್ವಾ – ಸಂಸದರಿಗೆ ಸೂಲಿಬೆಲೆ ಪ್ರಶ್ನೆ

    ಅನಂತ್‍ಕುಮಾರ್ ಇದ್ದಾಗ ಕೇಂದ್ರದ ಇತರೆ ಮಂತ್ರಿಗಳೊಂದಿಗೆ ಅವರು ಬೆಳೆಸಿಕೊಂಡಿದ್ದ ಸಂಬಂಧ ಅವರ ಮಾತಿಗೆ ಗೌರವ ತಂದುಕೊಡುವಂತಿತ್ತು. ಅವರಷ್ಟೇ ಬಾರಿ ಸಂಸದರಾಗಿದ್ದರೂ ಅಂಥದ್ದೊಂದು ಬಾಂಧವ್ಯವನ್ನೇ ಬೆಳೆಸಿಕೊಳ್ಳದ ಅನೇಕರನ್ನು ಕಂಡಾಗ ಸಂಕಟವೆನಿಸುತ್ತದೆ. ಕರ್ನಾಟಕದಿಂದಲೇ ಮಂತ್ರಿಗಳಾದವರು ಎಷ್ಟೋ ಜನರಿದ್ದಾರೆ. ಆದರೆ ಪ್ರತ್ಯಕ್ಷ ಕೇಂದ್ರದಲ್ಲಿ ಪ್ರಭಾವ ಬೀರುವ ವಿಚಾರ ಬಂದಾಗ ಕೆಲಸಕ್ಕೆ ಬಾರದವರಾಗಿ ಬಿಡುತ್ತಾರಲ್ಲಾ ಎಂಬುದೇ ನೋವಿನ ಸಂಗತಿ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದರು.

    ನಮ್ಮ ಸಂಸದರು ತಮಿಳುನಾಡಿನಿಂದ, ಕೇರಳದ ಸಂಸದರಿಂದ ಕಲಿಯುವುದು ಸಾಕಷ್ಟಿದೆ. ಅವರು ಹಠಕ್ಕೆ ಬಿದ್ದಾದರೂ ಕೊನೆಗೆ ರಾಜಿನಾಮೆ ಕೊಟ್ಟಾದರೂ ತಮ್ಮ ರಾಜ್ಯದ ಹಿತಾಸಕ್ತಿ ಉಳಿಸಿಕೊಳ್ಳಲು ಕೇಂದ್ರದ ಸಹಕಾರವನ್ನು ತರುತ್ತಾರೆ. ನಾಡಿನ ಗೌರವವನ್ನು ರಾಷ್ಟ್ರಮಟ್ಟದಲ್ಲಿ ಬಲಿಕೊಡಲು ಅವರೆಂದಿಗೂ ಸಿದ್ಧರಾಗುವುದಿಲ್ಲ. ಮೋದಿಯವರ ಪ್ರತಿಯೊಂದು ನಡೆಯಲ್ಲಿಯೂ ಭವಿಷ್ಯದ ದೃಷ್ಟಿಕೋನ ಇದ್ದೇ ಇರುತ್ತದೆ ಎಂಬುದನ್ನು ನಂಬಿಕೊಂಡಿರುವ ಅನೇಕರಿಗೆ ಈ ನಿರ್ಲಕ್ಷ್ಯದ ಹಿಂದಿನ ದೃಷ್ಟಿ ಖಂಡಿತ ಅರಿವಾಗುತ್ತಿಲ್ಲ. ಗೊತ್ತಿದ್ದವರು ತಿಳಿಸಿಕೊಡಬೇಕು. ಒಂದೋ ಕರ್ನಾಟಕದ ಜನತೆಗೆ, ಇಲ್ಲವೇ ಸ್ವತಃ ಮೋದಿಗೆ ಎಂದು ನೇರವಾಗಿ ಬರೆದು ಚಾಟಿ ಬೀಸಿದ್ದರು.

    ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚಕ್ರವರ್ತಿ ಸೂಲಿಬೆಲೆಯವರು ನರೇಂದ್ರ ಮೋದಿ ಅವರ ಪರವಾಗಿ ರಾಜ್ಯವಾಪಿ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ಚುನಾವಣೆ ಹತ್ತಿರ ಬಂದಾಗ ಸಮಸ್ಯೆ ಇದೆ ಎಂದು ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನೆ ಮಾಡುವುದಲ್ಲ. ಮತವನ್ನು ಚಲಾಯಿಸಿ ಮೌನವಾಗಿ ಕುಳಿತುಕೊಳ್ಳುವುದಲ್ಲ. ಆರಂಭದಿಂದಲೇ ಸಮಸ್ಯೆಯ ಬಗ್ಗೆ ಒತ್ತಡ ಹೇರಿ ಜನಪ್ರತಿನಿಧಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು ಎಂದು ಹೇಳಿದ್ದರು.

  • ಮೋದಿ, ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು: ರಮಾನಾಥ್ ರೈ

    ಮೋದಿ, ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು: ರಮಾನಾಥ್ ರೈ

    ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು. ಇಬ್ಬರೂ ಅವರವರ ಲಾಭಕ್ಕಾಗಿ ದೇಶವನ್ನು ಬಯ್ಯುತ್ತಾರೆ ಎಂದು ಕಾಂಗ್ರೆಸ್ ನಾಯಕ ರಮಾನಾಥ್ ರೈ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

    ಮೋದಿ ಹಾಗೂ ಇಮ್ರಾನ್ ಖಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ರಮಾನಾಥ್ ರೈ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಮಂಗಳೂರಿನಲ್ಲಿ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ಮುಗಿಸಿ ಹೋಗುತ್ತಿದ್ದ ವೇಳೆ, ಮೋದಿ ಹಾಗೂ ಇಮ್ರಾನ್ ಖಾನ್ ಒಂದೇ ತಾಯಿಯ ಮಕ್ಕಳು ಎಂದು ರಮಾನಾಥ್ ರೈ ಅವರು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಮೋದಿ ಹಾಗೂ ಇಮ್ರಾನ್ ಖಾನ್ ಇಬ್ಬರೂ ತಮ್ಮ ಲಾಭಕ್ಕಾಗಿ ದೇಶವನ್ನು ಬಯ್ಯುತ್ತಾರೆ. ಇಮ್ರಾನ್ ಖಾನ್ ವೋಟ್‍ಗಾಗಿ ಭಾರತವನ್ನು ಬಯ್ಯುತ್ತಾನೆ. ಮೋದಿ ವೋಟ್‍ಗಾಗಿ ಪಾಕಿಸ್ತಾನವನ್ನು ಬಯ್ಯುತ್ತಾರೆ. ಇಬ್ಬರು ಒಂದೇ ರೀತಿಯ ಜನ. ಅವನು ಹೇಗೋ ಸರಿಯಿಲ್ಲ, ಇವರು ಅದೇ ದಾರಿಯಲ್ಲಿದ್ದಾರೆ ಎಂದು ಟೀಕಿಸಿದ್ದಾರೆ.