Tag: Ramanathapura

  • ರಾಮನಾಥಪುರದಲ್ಲಿ ಅದ್ಧೂರಿ ಷಷ್ಠಿ ರಥೋತ್ಸವ

    ರಾಮನಾಥಪುರದಲ್ಲಿ ಅದ್ಧೂರಿ ಷಷ್ಠಿ ರಥೋತ್ಸವ

    ಹಾಸನ: ರಾಜ್ಯದ ಎರಡನೇ ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಹಾಸನ (Hassan) ಜಿಲ್ಲೆ, ಅರಕಲಗೂಡು (Arakalgud) ತಾಲೂಕಿನ, ರಾಮನಾಥಪುರದಲ್ಲೂ (Ramanathapura) ಇಂದು ಶ್ರೀ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿಯ ಮೊದಲ ಷಷ್ಠಿ (Shasti) ರಥೋತ್ಸವ (Chariot Festival) ಅದ್ಧೂರಿಯಿಂದ ಜರುಗಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿ ರಥಕ್ಕೆ ಹಣ್ಣು-ಜವನ ಎಸೆದು ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

    ಈ ಕ್ಷೇತ್ರದ ವಿಶೇಷತೆ ಎಂದರೆ, ಕುಕ್ಕೆ ಸುಬ್ರಹ್ಮಣ್ಯಕ್ಕೆ (Kukke Subrahmanya) ಹೋಗಲಾಗದವರು, ರಾಮನಾಥಪುರದ ಕಾವೇರಿ ನದಿಯಲ್ಲಿ ಮಿಂದು, ವಿಶೇಷ ಪೂಜೆ ಸಲ್ಲಿಸಿದರೆ ಸಾಕು ಕಂಕಣಭಾಗ್ಯ, ರೋಗ-ರುಜಿನ ನಿವಾರಣೆ ಸೇರಿ ಬೇಡಿಕೊಂಡಿದ್ದು ಈಡೇರಲಿದೆ ಎಂಬ ಪ್ರತೀತಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವುದರಿಂದ ವಿವಿಧೆಡೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಇದನ್ನೂ ಓದಿ: ದೆಹಲಿಯಲ್ಲಿ ಮೋದಿ ಭೇಟಿಯಾಗ್ತೀನಿ ಎಂದ ಸಿದ್ದರಾಮಯ್ಯ; ಕಾರಣ ಏನು?

    ಸುಪ್ರಸಿದ್ಧ ಕುಕ್ಕೆಸುಬ್ರಹ್ಮಣ್ಯ ರಥೋತ್ಸವ ದಿನದಂದೇ ರಾಮನಾಥಪುರದಲ್ಲೂ ಷಷ್ಠಿಯಂದು ಅದ್ಧೂರಿ ರಥೋತ್ಸವ ಜರುಗಿತು. ಮಧ್ಯಾಹ್ನ 12:30ಕ್ಕೆ ಸರಿಯಾಗಿ ಅಲಂಕೃತ ರಥ, ರಾಮನಾಥಪುರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸುಬ್ರಹ್ಮಣ್ಯಸ್ವಾಮಿ ಉತ್ಸವಮೂರ್ತಿ ಹೊತ್ತ ರಥ, ರಾಜಬೀದಿಗಳಲ್ಲಿ ಸಾಗುವ ಮುನ್ನ ದೈವೀ ಸ್ವರೂಪ ಎನಿಸಿರುವ ಗರುಡ ನಭದಲ್ಲಿ ಹಾರಾಡಿದರೆ ಶುಭ ಸೂಚನೆ ಎಂಬ ನಂಬಿಕೆ ಹಿಂದಿನಿಂದಲೂ ಇರುವುದರಿಂದ ಇಂದೂ ಸಹ ಗರುಡ ಪ್ರತ್ಯಕ್ಷವಾದ ನಂತರವೇ ರಥ ಮುಂದೆ ಸಾಗಿತು. ಇದನ್ನೂ ಓದಿ: ನನ್ನ ತಂಟೆಗೆ ಬಂದವರಿಗೆ ತಕ್ಕ ಉತ್ತರ ಕೊಟ್ಟಿದ್ದೇನೆ, ಮುಂದೆಯೂ ಬಂದರೆ ಸುಮ್ನೆ ಬಿಡಲ್ಲ: ಶೆಟ್ಟರ್ ವಾರ್ನಿಂಗ್

    ಸುಬ್ರಹ್ಮಣ್ಯಸ್ವಾಮಿ ರಥ ಪೂರ್ವಾಭಿಮುಖವಾಗಿ ಸಾಗುತ್ತಿದ್ದಂತೆಯೇ ಜಿಲ್ಲೆ ಹಾಗೂ ನಾಡಿನ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು, ಹಣ್ಣು-ಜವನ ಎಸೆದು ಜಯಘೋಷ ಮೊಳಗಿಸಿ ತಮ್ಮ ಭಕ್ತಿ ಭಾವ ಪ್ರದರ್ಶನ ಮಾಡಿದರು. ವರ್ಷಕ್ಕೊಮ್ಮೆ ಒಂದು ತಿಂಗಳ ಕಾಲ ನಡೆಯುವ ಷಷ್ಠಿ ಉತ್ಸವದ ವೇಳೆ ಆಗಮಿಸಿ ಇಲ್ಲಿನ ಕಾವೇರಿ ನದಿಯಲ್ಲಿ ಮಿಂದು ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರೆ ಅಂದುಕೊಂಡಿದ್ದೆಲ್ಲಾ ಈಡೇರಲಿದೆ ಎಂಬ ನಂಬಿಕೆ ಇದೆ. ಕಂಕಣಭಾಗ್ಯ, ಸಂತಾನ ಫಲ ಹಾಗೂ ಚರ್ಮ ರೋಗದಂಥ ಆರೋಗ್ಯ ಸಮಸ್ಯೆಗಳು ಶ್ರೀ ಕ್ಷೇತ್ರಕ್ಕೆ ಬಂದು ಹೋದರೆ ಗುಣವಾಗಲಿವೆ. ಪ್ರಸನ್ನ ಸುಬ್ರಹ್ಮಣ್ಯನ ಸನ್ನಿಧಿ ಅನೇಕ ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿರುವುದರ ಸಾವಿರಾರು ವರ್ಷಗಳಿಂದಲೂ ರಾಮನಾಥಪುರಕ್ಕೆ ಅದರದ್ದೇ ಮಹತ್ವವಿದೆ. ಇದನ್ನೂ ಓದಿ: ಮಕ್ಕಳೊಂದಿಗೆ ಮಗುವಾದ ಮೋದಿ – ತನಗಾಗಿ ವಿಶೇಷ ಕವಿತೆ ಹಾಡಿದ ಬಾಲಕಿಗೆ ಭೇಷ್‌ ಎಂದ ಪ್ರಧಾನಿ

    ಶ್ರೀ ಕ್ಷೇತ್ರದ ಮತ್ತೊಂದು ವಿಶೇಷ ಎಂದರೆ, ರಥೋತ್ಸವ ವೇಳೆ ಇಲ್ಲಿಗೆ ಬಂದು ಹಣ್ಣು ತುಪ್ಪದ ಹರಕೆ ತೀರಿಸಿದರೆ ಚರ್ಮರೋಗದಂಥ ಕಾಯಿಲೆ ವಾಸಿಯಾಗುತ್ತದೆ. ಕಾವೇರಿ ನದಿಯಲ್ಲಿ ಮಿಂದು ಗಂಗೆ ಪೂಜೆ ಮಾಡಿದರೆ ಮಕ್ಕಳಾಗುತ್ತವೆ ಎನ್ನುವ ಪ್ರತೀತಿ ಇದೆ. ಹೀಗಾಗಿಯೇ ಇದಕ್ಕೆಂದು ಹರಕೆ ಕಟ್ಟಿಕೊಂಡಿದ್ದ ಹೆಂಗಸರು, ನವಜೋಡಿ ಆಗಮಿಸಿ ಪೂಜೆ ಸಲ್ಲಿಸೋದು ವಾಡಿಕೆ. ಮತ್ತೊಂದು ವಿಶೇಷ ಎಂದರೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಲಾಗದವರು ರಾಮನಾಥಪುರಕ್ಕೆ ಬಂದು ಪೂಜಿಸಿದರೆ ಸಾಕು ಎಂಬ ವಾಡಿಕೆ ಇರುವುದರಿಂದ ಇದನ್ನು ಬಡವರ ಕಾಶಿ ಎಂದು ಕರೆಯುತ್ತಾರೆ. ಇದೇ ಕಾರಣಕ್ಕೆ ಯಾವುದೇ ರೀತಿಯ ಬೇಧ-ಭಾವ ಇಲ್ಲದೇ ಅಪಾರ ಭಕ್ತ ಸಂಗಮವೇ ಇಲ್ಲಿ ಮೇಳೈಸುತ್ತದೆ. ಇದನ್ನೂ ಓದಿ: ಇಂದು ದೆಹಲಿಗೆ ತೆರಳಲಿರುವ ಸಿಎಂಗೆ ಆರ್. ಅಶೋಕ್ ಕಿವಿಮಾತು

    ಇಂದಿನಿಂದ ಒಂದು ತಿಂಗಳ ರಾಮನಾಥಪುರದಲ್ಲಿ ಷಷ್ಠಿ ಜಾತ್ರಾ ಮಹೋತ್ಸವ ನಡೆಯಲಿದ್ದು, ನಿತ್ಯವೂ ಸಾವಿರಾರು ಭಕ್ತರು ಬಂದು ಕಾವೇರಿ ನದಿಯಲ್ಲಿ ಮಿಂದು ಶ್ರೀ ಪ್ರಸನ್ನ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಹೋಗುತ್ತಾರೆ. ಇದನ್ನೂ ಓದಿ: ಕೇಂದ್ರದಲ್ಲಿ ಬಿಜೆಪಿ ಇರುವುದ್ರಿಂದ ಪ್ರತಾಪ್ ಸಿಂಹನ ರಕ್ಷಣೆ ಮಾಡ್ತಿದ್ದಾರೆ: ದಿನೇಶ್ ಗುಂಡೂರಾವ್ ಆಕ್ರೋಶ

  • ಪೊಲೀಸರ ಟಾರ್ಚರ್‌ನಿಂದ ಮಗನ ಸಾವು – ಮರು ಮರಣೋತ್ತರ ಪರೀಕ್ಷೆಗೆ ಆದೇಶ

    ಪೊಲೀಸರ ಟಾರ್ಚರ್‌ನಿಂದ ಮಗನ ಸಾವು – ಮರು ಮರಣೋತ್ತರ ಪರೀಕ್ಷೆಗೆ ಆದೇಶ

    – ಪೊಲೀಸರ ವಿರುದ್ಧ ಹೈಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಿದ್ದ ತಾಯಿ
    – ಬಿಡುಗಡೆಯಾದ ಮರು ದಿನವೇ ಸಾವನ್ನಪ್ಪಿದ್ದ ವಿದ್ಯಾರ್ಥಿ

    ಚೆನ್ನೈ: ಪೊಲೀಸ್ ಟಾರ್ಚರ್‍ನಿಂದ ಸಾವನ್ನಪ್ಪಿದ್ದಾನೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತಮಿಳುನಾಡು ವಿದ್ಯಾರ್ಥಿಯ ಮೃತದೇಹವನ್ನು ಮತ್ತೊಮ್ಮೆ ಮರಣೋತ್ತರ ಪರೀಕ್ಷೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ಆದೇಶಿಸಿದೆ.

    ರಾಮನಾಥಪುರ ಜಿಲ್ಲೆ ಮುದುಕಲತ್ತೂರು ಸಮೀಪದ ನೀರ್ ಕೊಜಿಯೆಂತಲ್ ಗ್ರಾಮದ ಕಾಲೇಜು ವಿದ್ಯಾರ್ಥಿ ಎಲ್.ಮಣಿಕಂದನ್(21)ನನ್ನು ವಾಹನ ತಪಾಸಣೆ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದರು.

    POLICE JEEP

    ಶನಿವಾರ ಸಂಜೆ ಪೊಲೀಸರು ಕಸ್ಟಡಿಯಿಂದ ಬಿಡುಗಡೆ ಮಾಡಿದ್ದರು. ಆದರೆ ಬಿಡುಗಡೆ ಮಾಡಿದ ಮರುದಿನವೇ ಅಂದರೆ ಭಾನುವಾರ ಆತ ಮೃತಪಟ್ಟಿದ್ದಾನೆ. ಈ ಹಿನ್ನೆಲೆ ಆತನ ಸಾವು ಸಹಜವಲ್ಲ ಎಂದು ತಾಯಿ ರಾಮಲಕ್ಷ್ಮಿ ಆರೋಪಿಸಿ ನ್ಯಾಯಲಯದ ಮೊರೆ ಹೋಗಿದ್ದರು. ಇದನ್ನೂ ಓದಿ: ಏಳಕ್ಕೆ ಏಳು ಜೆಡಿಎಸ್ ಶಾಸಕರಿದ್ದರೂ ಮಂಡ್ಯ ಅಭಿವೃದ್ಧಿಯಾಗಿಲ್ಲ ಯಾಕೆ: ಸಿದ್ದರಾಮಯ್ಯ

    ನನ್ನ ಮಗ ತನ್ನ ಬೈಕ್‍ನಲ್ಲಿ ವಾಹನ ಚೆಕ್‍ಪೋಸ್ಟ್‍ನಿಂದ ಪರಾರಿಯಾಗಲು ಯತ್ನಿಸಿದ್ದ. ಈ ಕಾರಣಕ್ಕೆ ಪೊಲೀಸರು ವಿಚಾರಣೆ ಮಾಡುವುದಾಗಿ ಠಾಣೆಗೆ ಕರೆದೊಯ್ದಿದ್ದರು. ನಂತರ ನಮಗೆ ಮಣಿಕಂದನ್ ಅನ್ನು ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ನಾವು ಮಣಿಕಂದನ್ ನನ್ನು ಮನೆಗೆ ಕರೆದುಕೊಂಡು ಹೋಗಿದ್ದು, ನಿಗೂಢವಾಗಿ ಅವನು ಸಾವನ್ನಪ್ಪಿದ್ದಾನೆ. ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

    ನನ್ನ ಮಗನಿಗೆ ಪೊಲೀಸರು ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ್ದರಿಂದಲೇ ಆತ ಸಾವನ್ನಪ್ಪಿದ್ದಾನೆ. ಈ ಹಿನ್ನೆಲೆಯಲ್ಲಿ ಮಗನ ಮರು ಮರಣೋತ್ತರ ಪರೀಕ್ಷೆ ನಡೆಸಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿಕೊಂಡಿದ್ದರು.

    ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಜಿಆರ್ ಸ್ವಾಮಿನಾಥನ್, ರಾಮನಾಥಪುರಂ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಣಿಕಂದನ್ ಪಾರ್ಥಿವ ಶರೀರದ ಮರು ಮರಣೋತ್ತರ ಪರೀಕ್ಷೆ ನಡೆಸುವಂತೆ ಆದೇಶಿಸಿದರು. ಅಷ್ಟೇ ಅಲ್ಲದೇ ಮರಣೋತ್ತರ ಪರೀಕ್ಷೆಯ ಎಲ್ಲ ಪ್ರಕ್ರಿಯೆಯ ವಿಡಿಯೋವನ್ನು ಸೆರೆ ಹಿಡಿಯುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ನೀವು ಬದಲಾಗದಿದ್ದರೆ ಮುಂದೆ ಎಲ್ಲವೂ ಬದಲಾಗುತ್ತೆ: ಸಂಸದರಿಗೆ ಮೋದಿ ಎಚ್ಚರಿಕೆ

    ಏನಿದು ಘಟನೆ?
    ಶನಿವಾರ ಪರಮಕುಡಿ-ಕೀಳತೂವಲ್ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾಗ, ಮಣಿಕಂದನ್ ತನ್ನ ಸ್ನೇಹಿತನೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ. ಅವರು ನಿಲ್ಲಿಸದ ಕಾರಣ, ಅಧಿಕಾರಿಯೊಬ್ಬರು ಆತನ ವಾಹನವನ್ನು ಹಿಂಬಾಲಿಸಿಕೊಂಡು ಹೋಗಿ ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಸಂಜೆ ಆತನನ್ನು ಬಿಡುಗಡೆ ಮಾಡಿದ್ದರು. ಪೊಲೀಸ್ ಕಸ್ಟಡಿಯಿಂದ ಬಂದ ಮರುದಿನವೇ ಮಣಿಕಂದನ್ ಮೃತಪಟ್ಟಿದ್ದು ಅನುಮಾನಕ್ಕೆ ಕಾರಣವಾಗಿದೆ.

  • ಜನತೆ ಕ್ಷಮೆ ಕೇಳಬೇಕು ಅಂದ್ರೆ ಕೇಳ್ತೀನಿ- ಸಚಿವ ರೇವಣ್ಣ

    ಜನತೆ ಕ್ಷಮೆ ಕೇಳಬೇಕು ಅಂದ್ರೆ ಕೇಳ್ತೀನಿ- ಸಚಿವ ರೇವಣ್ಣ

    ಬೆಂಗಳೂರು: ಹಸಿವಿನಿಂದ ಮಕ್ಕಳು ಹಾಗೂ ಮಹಿಳೆಯರು ಬಿಸ್ಕೆಟ್ ಕೇಳುತ್ತಿದ್ದರು. ಹೀಗಾಗಿ ದೂರದಲ್ಲಿ ಕುಳಿತವರಿಗೆ ಬಿಸ್ಕೆಟ್ ಎಸೆದಿರುವೆ. ಈ ಕುರಿತಾಗಿ ಜನತೆ ಕ್ಷಮೆ ಕೇಳಬೇಕು ಎಂದರೆ ಕೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

    ರಾಮನಾಥಪುರದಲ್ಲಿ ನಿರಾಶ್ರಿತರ ಕೇಂದ್ರದಲ್ಲಿ ಬಿಸ್ಕೆಟ್ ಎಸೆದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ನಾನು ದೇವರನ್ನು ನಂಬುವ ವ್ಯಕ್ತಿ. ಘಟನೆಯಾದ ಮಾರನೇ ದಿನ ಸುದ್ದಿ ಮಾಡಲಾಗಿದೆ. ನನ್ನಿಂದ ತಪ್ಪಾಗಿದೆ ಬಿಡಿ ಎಂದರು.

    25 ವರ್ಷಗಳಿಂದ ಆಯ್ಕೆಯಾಗಿರುವ ನಾಯಕರು ಹಾಗೂ ಕೇಂದ್ರ ಸಚಿವರು ಸಂತ್ರಸ್ತರ ನೆರವಿಗೆ ಬರಲಿಲ್ಲ. ಇಂತಹ ಸಂದರ್ಭದಲ್ಲಿ ನಾನು ನೆರವಿಗೆ ನಿಂತಿದ್ದೆ. ಈಗ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ರೇವಣ್ಣ ದೂರಿದರು.

    ನಾನು ಬೇಕು ಅಂತಾ ಮಾಡಲಿಲ್ಲ. ಆ ರೀತಿಯ ಮನೋಭಾವನೆಯೂ ನನ್ನಲ್ಲಿ ಇಲ್ಲ. ಹಿಂದೆ ಕುಳಿತಿದ್ದ ಮಹಿಳೆಯರು ಒಂದೇ ಸಮನೇ ಬೇಕು ಅಂತಾ ಕೂಗುತ್ತಿದ್ದರು. ಹೀಗಾಗಿ ಅಲ್ಲಿಗೆ ಹೋಗಿ ಕೊಡುವುದಕ್ಕೆ ಆಗಲಿಲ್ಲ, ನಿಂತಲ್ಲಿಯೇ ಕೊಡಬೇಕಾದ ಪರಿಸ್ಥಿತಿ ಬಂದಿತ್ತು. ಅದನ್ನು ಎಸೆದಿದ್ದಾರೆ ಅಂತಾ ಹೇಳಿದರೆ ಹೇಗೆ? ಮಾಧ್ಯಮದವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ. ಎಲ್ಲಾ ಮಾಧ್ಯಮದವರು ಅಂದು ಅಲ್ಲಿಯೇ ಇದ್ದರು. ಆದರೆ ಅಂದೇ ಸುದ್ದಿ ಮಾಡಲಿಲ್ಲ ಎಂದರು.

    ನಿರಾಶ್ರಿತ ಕೇಂದ್ರದಲ್ಲಿ ಇದ್ದವರು ಶ್ರೀಮಂತರಲ್ಲ, ಎಲ್ಲರೂ ಬಡವರು. ನಾನು ಪ್ರವಾಹ ಪೀಡಿತ ಭಾಗಗಳಿಗೆ ರಾತ್ರಿ, ಹಗಲು ಹೋಗಿದ್ದೇನೆ. ಏನು ಗ್ರಹಚಾರಾನೋ ಏನೋ, ಸಾಮಾಜಿಕ ಜಾಲ ತಾಣಗಳಲ್ಲಿ ನನ್ನ ವಿರುದ್ಧ ಅಭಿಯಾನವೇ ಶುರುವಾಗಿದೆ ಎಂದು ಹೇಳಿದ ಸಚಿವರು, ಕೊಡಗು ಹಾಗೂ ಮಳೆಯಿಂದ ಹಾನಿಯಾಗಿರುವ ಪ್ರದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸಂಪುಟ ಸಚಿವರು ಬಂದ ಪರಿಸ್ಥಿತಿಯನ್ನು ನೋಡಲಿ. ನಾನು ಕೊಡಗು ಜಿಲ್ಲಾ ಉಸ್ತುವಾರಿ ಸಚಿವನಲ್ಲ, ಆದರೂ ನೆರವಿಗೆ ನಿಂತೆ. ಈಗ ನನ್ನ ಮೇಲೆ ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ. ಚುನಾವಣೆ ವೇಳೆ ರಾಜಕೀಯ ಮಾಡೋಣ, ಇಂತಹ ಸಂದರ್ಭದಲ್ಲಿ ಬೇಡ ಎಂದು ಕಿಡಿಕಾರಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅರಕಲಗೂಡಿನಲ್ಲಿ 77.19 ಕೋಟಿ ನಷ್ಟ, 6 ದಶಕಗಳಿಂದ ಈ ರೀತಿಯ ಪ್ರವಾಹ ನೋಡಿರಲಿಲ್ಲ: ಎಟಿ ರಾಮಸ್ವಾಮಿ

    ಅರಕಲಗೂಡಿನಲ್ಲಿ 77.19 ಕೋಟಿ ನಷ್ಟ, 6 ದಶಕಗಳಿಂದ ಈ ರೀತಿಯ ಪ್ರವಾಹ ನೋಡಿರಲಿಲ್ಲ: ಎಟಿ ರಾಮಸ್ವಾಮಿ

    ಹಾಸನ: ಆರು ದಶಕಗಳಿಂದ ಈ ರೀತಿಯ ಪ್ರವಾಹ ನೋಡಿರಲಿಲ್ಲ, ಅಪಾಯದ ಅಂಚು ಮೀರಿ ನೀರು ಹರಿದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ ಎಂದು ಜೆಡಿಎಸ್ ಹಿರಿಯ ಶಾಸಕ ಎಟಿ ರಾಮಸ್ವಾಮಿ ಹೇಳಿದ್ದಾರೆ.

    ರಾಮನಾಥಪುರದಲ್ಲಿ ಮಾತನಾಡಿದ ಅವರು ಗಂಜಿ ಕೇಂದ್ರ ಹೆಸರಿನ ಬಗ್ಗೆ ನನಗೆ ವೈಯುಕ್ತಿಕವಾಗಿ ಸಮಾಧಾನವಿಲ್ಲ. ಅದು ಕರಾವಳಿ ಭಾಗದಿಂದ ಬಂದಿರುವ ಹೆಸರು. ನೆರೆ ಸಂತ್ರಸ್ತರ ಪುನರ್ವಸತಿ ಕೇಂದ್ರಗಳನ್ನು ಮಾಡಿದ್ದೇವೆ. ಇನ್ನೂ ನಮ್ಮ ಪೂರ್ವಜರು ಕಟ್ಟಿರುವ ರಾಮೇಶ್ವರ ದೇವಸ್ಥಾನವು ಜಲಾವೃತವಾಗಿತ್ತು. ಸಂತ್ರಸ್ತರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಿದ್ದೇವೆ. ಒಟ್ಟು 201 ಮನೆಗಳಲ್ಲಿ 669 ಜನಸಂಖ್ಯೆ ಇದ್ದು ಅವರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿಸಿದರು.

    ಸ್ವಲ್ಪ ಪ್ರಮಾಣದಲ್ಲಿ ಪ್ರವಾಹ ಇಳಿಮುಖವಾಗಿದ್ದು, ಮನೆಗಳಿಂದ ನೀರು ತೆರವಾಗಿದೆ. ಹಾನಿಗೊಳಗಾದ ಮನೆಗಳನ್ನು ಹೊರತುಪಡಿಸಿ ಉಳಿದ ಮನೆಗಳಿಗೆ ವಾಪಾಸ್ಸು ತೆರಳುವಂತೆ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ. ಯಾರಿಗೆ ಸಮಸ್ಯೆ ಇದೆಯೋ ಅವರು ಮಾತ್ರ ಪುನರ್ವಸತಿಯನ್ನು ಬಳಕೆ ಮಾಡುವಂತೆ ಶಾಸಕರು ಮನವಿ ಮಾಡಿಕೊಂಡರು.

    ಕ್ಷೇತ್ರದ ವಿವಿಧೆಡೆ ರಸ್ತೆಗಳ ಹಾನಿಯಿಂದ 23 ಕೋಟಿ ರೂ. ನಷ್ಟ, ಜಿಲ್ಲಾ ಪಂಚಾಯತ್ ರಸ್ತೆಗಳು, ಕೆರೆಗಳು, ಶಾಲಾಕಟ್ಟಡ, ವಿದ್ಯಾರ್ಥಿನಿಲಯ, ಸೇರಿದಂತೆ 22.664 ಕೋಟಿ ರೂ. ನಷ್ಟವಾಗಿದೆ. ಕೃಷಿ ಇಲಾಖೆ ಮಾಹಿತಿ ಪ್ರಕಾರ 4,759 ಬೆಳೆ ನಷ್ಟ 12 ಕೋಟಿ ರೂ., ತೋಟಗಾರಿಕೆ ಬೆಳೆಯಲ್ಲಿ 7.75 ಕೋಟಿ ರೂ ನಷ್ಟವಾಗಿದೆ. ಒಂದು ಸಾವಿರ ಮನೆಗಳಿಗೆ ತಾಲೂಕಿನಾದ್ಯಂತ ಹಾನಿಯಾಗಿದ್ದು, 5 ಕೋಟಿ ರೂ. ನಷ್ಟವಾಗಿದೆ. ಒಟ್ಟಾರೆ ಅರಕಲಗೂಡು ತಾಲೂಕಿನಲ್ಲಿ 77.19 ಕೋಟಿ ನಷ್ಟ ಸಂಭವಿಸಿದೆ ಎಂದು ವಿವರಿಸಿದರು.

    ಕಷ್ಟದಲ್ಲಿರುವ ಜನರಿಗೆ ಸರ್ಕಾರ ನೆರವಿಗೆ ಧಾವಿಸಬೇಕು ಮತ್ತು ಪರಿಹಾರ ಕಾಮಗಾರಿ ಮಾಡಲು ಹಣ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡರು. ನಾನೂ ಕೂಡ ಇಲ್ಲಿಯೇ ನೊಂದವರೊಂದಿಗೆ ವಾಸ ಇದ್ದೇನೆ. ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv