Tag: Ramayana

  • ಯಶ್‌ ನಟನೆಯ ರಾಮಾಯಣ ಚಿತ್ರದ ಫಸ್ಟ್‌ ಗ್ಲಿಂಪ್ಸ್ WAVES ಶೃಂಗಸಭೆಯಲ್ಲಿ ರಿಲೀಸ್‌

    ಯಶ್‌ ನಟನೆಯ ರಾಮಾಯಣ ಚಿತ್ರದ ಫಸ್ಟ್‌ ಗ್ಲಿಂಪ್ಸ್ WAVES ಶೃಂಗಸಭೆಯಲ್ಲಿ ರಿಲೀಸ್‌

    – ರಾವಣನ ಅವತಾರದಲ್ಲಿ ರಾಕಿಂಗ್‌ ಸ್ಟಾರ್‌ನ ಲುಕ್‌

    ‘ರಾಕಿಂಗ್ ಸ್ಟಾರ್’ ಯಶ್ ಅಭಿಮಾನಿಗಳು (Yash Fans) ಕಳೆದ 3 ವರ್ಷಗಳಿಂದ ಕಾಯುತ್ತಿದ್ದು, ಮುಂದಿನ ವರ್ಷ ʻಟಾಕ್ಸಿಕ್ʼ ಮತ್ತು ʻರಾಮಾಯಣʼ ಸಿನಿಮಾಗಳ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ʻಟಾಕ್ಸಿಕ್ʼ 2026ರ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದ್ದು, ʻರಾಮಾಯಣʼ ಪಾರ್ಟ್‌-1 ದೀಪಾವಳಿಯ ಹೊತ್ತಿಗೆ ತೆರೆಯ ಮೇಲೆ ಬರಲಿದೆ. ಯಶ್‌ ನಟನೆಯ ಈ ಎರಡೂ ದಿನಿಮಾಗಳು ಭರ್ಜರಿ ಹಿಟ್‌ ಆಗಲಿದೆ, ಜೊತೆಗೆ ಯಶ್ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಲಿವೆ ಎಂದು ನಿರೀಕ್ಷಿಸಲಾಗಿದೆ.

    ಈ ನಡುವೆ ಚಿತ್ರತಂಡದಿಂದ ರಾಮಾಯಣ ಪಾರ್ಟ್‌-1 (Ramayana Part-1) ಚಿತ್ರದ ಫಸ್ಟ್‌ ಗ್ಲಿಂಪ್ಸ್‌ ಮುಂದಿನ ಮೇ 1 ರಿಂದ 4ರ ವರೆಗೆ ನಡೆಯಲಿರುವ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ (ಅಕಾ WAVES ಶೃಂಗಸಭೆ)ಯಲ್ಲಿ ರಿಲೀಸ್‌ ಆಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಮನ್ನಾಗೆ ಬಿಗ್ ಚಾನ್ಸ್- ಬಾಲಿವುಡ್‌ನ ಹೊಸ ಚಿತ್ರಕ್ಕೆ ಮಿಲ್ಕಿ ಬ್ಯೂಟಿ ನಾಯಕಿ

    ಬಾಲಿವುಡ್‌ ಸ್ಟಾರ್ ರಣಬೀರ್ ಕಪೂರ್‌ ರಾಮನ ಪಾತ್ರದಲ್ಲಿ ನಟಿಸಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ, ಸ್ಯಾಂಡಲ್‌ವುಡ್‌ನ ರಾಕಿಂಗ್‌ಸ್ಟಾರ್‌ ಯಶ್‌ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್ ಮತ್ತು ಇಂದಿರಾ ಕೃಷ್ಣ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಾಗಿ ರಣಬೀರ್‌ ಕಪೂರ್‌ ಅಭಿಮಾನಿಗಳೂ ಸಹ ಕಾತುರದಿಂದ ಕಾಯ್ತಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

    ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾವು 2026ರ ಮಾರ್ಚ್ 19ರಂದು ತೆರೆಗೆ ಬರಲಿದೆ. ಇದು ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾವಾಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ತಯಾರಾಗುತ್ತಿದೆ. ಕೆವಿಎನ್ ಸಂಸ್ಥೆ ಮತ್ತು ಯಶ್ ಜಂಟಿಯಾಗಿ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ. ಇದರ ಜೊತೆಗೆ ನಿತೇಶ್ ತಿವಾರಿ ಅವರ ‘ರಾಮಾಯಣ: ಪಾರ್ಟ್ 1’ ಸಿನಿಮಾದಲ್ಲೂ ಯಶ್ ನಟಿಸಲಿದ್ದು, ಅದರಲ್ಲಿನ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರ ಕೂಡ 2026ರ ದೀಪಾವಳಿ ಹಬ್ಬದ ಸಮಯದಲ್ಲಿ ತೆರೆಗೆ ಬರಲಿದೆ. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ

  • ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

    ‘ರಾಮಾಯಣ’ ಚಿತ್ರ ಕೈಬಿಟ್ಟಿದ್ಯಾಕೆ ಶ್ರೀನಿಧಿ ಶೆಟ್ಟಿ?- ಇಂಟ್ರೆಸ್ಟಿಂಗ್ ವಿಚಾರ ಬಿಚ್ಚಿಟ್ಟ ‘ಕೆಜಿಎಫ್ 2’ ನಟಿ

    ನ್ನಡದ ‘ಕೆಜಿಎಫ್ 2’ ನಟಿ ಶ್ರೀನಿಧಿ ಶೆಟ್ಟಿ (Srinidhi Shetty) ಸದ್ಯ ನಾನಿ ಜೊತೆಗಿನ ‘ಹಿಟ್ 3’ ಸಿನಿಮಾ ರಿಲೀಸ್‌ಗೆ ಎದುರು ನೋಡ್ತಿದ್ದಾರೆ. ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ಬ್ಯುಸಿಯಾಗಿದ್ದಾರೆ. ಈ ಚಿತ್ರದ ಸಂದರ್ಶನದಲ್ಲಿ ಇಂಟ್ರೆಸ್ಟಿಂಗ್ ವಿಚಾರವೊಂದನ್ನು ರಿವೀಲ್ ಮಾಡಿದ್ದಾರೆ. ರಣಬೀರ್ ಕಪೂರ್ ನಟನೆಯ ‘ರಾಮಾಯಣ’ (Ramayana) ಚಿತ್ರ ಕೈಬಿಟ್ಟಿದ್ಯಾಕೆ ಎಂಬ ಇಂಟ್ರೆಸ್ಟಿಂಗ್‌ ಸಂಗತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪಾಕ್ ನಟನ ಬಾಲಿವುಡ್ ಸಿನಿಮಾ ರಿಲೀಸ್‌ಗೆ ಬಹಿಷ್ಕಾರ

    ಸಂದರ್ಶನವೊಂದರಲ್ಲಿ ನಟಿ ಮಾತನಾಡಿ, ನಾನು ಈ ಸಿನಿಮಾಗೆ ಆಯ್ಕೆ ಆಗಿದ್ದು ನಿಜ. 3 ದೃಶ್ಯಗಳಿಗೆ ತಯಾರಾಗಿ ಸ್ಕ್ರೀನ್ ಟೆಸ್ಟ್ ಕೊಟ್ಟಿದ್ದೆ, ಅದಕ್ಕೆ ಚಿತ್ರತಂಡದ ಕಡೆಯಿಂದಲೂ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಆ ವೇಳೆ, ಯಶ್ (Yash) ಕೂಡ ಈ ಸಿನಿಮಾದ ಭಾಗವಾಗ್ತಾರೆ ಎಂದು ಕೇಳಿಪಟ್ಟಿದ್ದೆ, ಅದೇ ಸಮಯದಲ್ಲೇ ‘ಕೆಜಿಎಫ್ 2’ ರಿಲೀಸ್ ಆಗಿತ್ತು. ನನ್ನ ಮತ್ತು ಯಶ್ ಜೋಡಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಆಗ ನಾನು ಯೋಚಿಸಿದ್ದು ಇಷ್ಟೇ ಯಶ್ ರಾವಣನಾಗಿ, ನಾನು ಸೀತೆಯಾಗಿ ನಟಿಸಿದ್ರೆ ಅಭಿಮಾನಿಗಳು ಒಪ್ಪಿಕೊಳ್ತಾರೆ ಎಂದೆನಿಸಲಿಲ್ಲ. ಅಷ್ಟು ನಮ್ಮ ಜೋಡಿ ಅಭಿಮಾನಿಗಳು ಇಷ್ಟಪಟ್ಟಿದ್ದರು. ಹಾಗಾಗಿ ಈ ಸಿನಿಮಾವನ್ನು ಬಿಟ್ಟೆ ಎಂದು ಶ್ರೀನಿಧಿ ಶೆಟ್ಟಿ ವಿವರಿಸಿದ್ದಾರೆ. ಇದನ್ನೂ ಓದಿ:ಟಾಲಿವುಡ್‌ ಸಿನಿಮಾದಲ್ಲಿ ಸುದೀಪ್‌ ಪುತ್ರಿ ಸಾನ್ವಿ- ಫ್ಯಾನ್ಸ್‌ಗೆ ಗುಡ್‌ ನ್ಯೂಸ್

    ಸೀತೆಯ ಪಾತ್ರಕ್ಕೆ ಸಾಯಿ ಪಲ್ಲವಿ ಉತ್ತಮ ಆಯ್ಕೆ. ನಾನು ಅವರನ್ನು ಸೀತೆಯ ಪಾತ್ರದಲ್ಲಿ ನೋಡಲು ಇಷ್ಟಪಡುತ್ತೇನೆ ಎಂದು ಶ್ರೀನಿಧಿ ಹೇಳಿದ್ದಾರೆ. ಬೇರೆ ನಟಿಯರನ್ನು ನೋಡಿ ಹೊಟ್ಟೆ ಉರಿದುಕೊಳ್ಳುವ ಕಾಲದಲ್ಲಿ ಸಾಯಿ ಪಲ್ಲವಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶ್ರೀನಿಧಿ ಶೆಟ್ಟಿ ನಡೆಗೆ ಫ್ಯಾನ್ಸ್ ಭೇಷ್ ಎಂದಿದ್ದಾರೆ.

  • ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

    ನಾನು ಚಿಕ್ಕಂದಿನಿಂದ ಶಿವನ ಭಕ್ತ: ಉಜ್ಜಯಿನಿಯ ಮಹಾಕಾಳೇಶ್ವರ ದೇಗುಲದಲ್ಲಿ ಯಶ್

    ರಾಕಿಂಗ್ ಸ್ಟಾರ್ ಯಶ್ ಅವರು (Yash) ಮಧ್ಯ ಪ್ರದೇಶದ ಉಜ್ಜಯಿನಿಯ ಮಹಾಕಾಳೇಶ್ವರ (Mahakaleshwar) ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ರಾಮಾಯಣ’ ಸಿನಿಮಾ (Ramayana) ಶೂಟಿಂಗ್‌ಗೂ ಮುನ್ನ ಯಶ್ ಶಿವನ ಮೊರೆ ಹೋಗಿದ್ದಾರೆ. ಇದನ್ನೂ ಓದಿ:ಪತ್ನಿ ರಾಧಿಕಾ ಪಂಡಿತ್‌ ಜೊತೆ ಮುಂಬೈನಲ್ಲಿ ಯಶ್‌

    ಸದ್ಯ ಯಶ್ ‘ರಾಮಾಯಣ’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಹಿನ್ನೆಲೆ ಚಿತ್ರೀಕರಣಕ್ಕೆ ಭಾಗಿಯಾಗುವ ಮುನ್ನ ಯಶ್ ಶಿವನ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದೇವರ ದರ್ಶನದ ಬಳಿನ ನಟ ಮಾತನಾಡಿ, ಬಹಳ ಖುಷಿ ಆಗುತ್ತಿದೆ. ಶಿವನ ಆಶೀರ್ವಾದ ಪಡೆಯಲು ಬಂದೆ. ನಾನು ಚಿಕ್ಕಂದಿನಿಂದ ಶಿವನ ದೊಡ್ಡ ಭಕ್ತ. ನಾವು ಮನೆದೇವರು ಎಂದು ಕರೆಯುತ್ತೇನೆ. ನಮ್ಮ ಕುಲದೇವರು ಶಿವ. ಇಲ್ಲಿಗೆ ಬಂದಿರುವುದು ಸಂತಸ ತಂದಿದೆ. ದೇವರ ಸನ್ನಿಧಿಯಲ್ಲಿ ಧ್ಯಾನ ಮಾಡುತ್ತಾ ಕುಳಿತಾಗ ಸಮಯ ಕಳೆದಿದ್ದೇ ಗೊತ್ತಾಗಲಿಲ್ಲ. ಅದ್ಭುತ ಅನುಭವ ಸಿಕ್ಕಿದೆ ಎಂದು ಯಶ್ ಹೇಳಿದ್ದಾರೆ. ಇದನ್ನೂ ಓದಿ:ಕನ್ನಡಕ್ಕೆ ಬಂದ್ರು ಕುಡ್ಲದ ಬೆಡಗಿ- ಸುದೀಪ್‌ ಸಿನಿಮಾದಲ್ಲಿ ಪೂಜಾ ಹೆಗ್ಡೆ

    ಅಂದಹಾಗೆ, ಶೀಘ್ರದಲ್ಲೇ ‘ರಾಮಾಯಣ’ ಸಿನಿಮಾ ಶೂಟಿಂಗ್‌ನಲ್ಲಿ ಯಶ್ ಭಾಗಿಯಾಗಲಿದ್ದಾರೆ. ಇದರಲ್ಲಿ ಯಶ್ ರಾವಣನಾಗಿ ಅಬ್ಬರಿಸಲಿದ್ದಾರೆ. ಅದಷ್ಟೇ ಅಲ್ಲ, ಈ ಸಿನಿಮಾಗೆ ಸಹ-ನಿರ್ಮಾಪಕನಾಗಿ ಕೂಡ ಸಾಥ್ ನೀಡಿದ್ದಾರೆ. ರಾಮನಾಗಿ ರಣಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲಿವಿ ನಟಿಸುತ್ತಿದ್ದಾರೆ. ಎರಡು ಭಾಗಗಳಲ್ಲಿ ‘ರಾಮಾಯಣ’ ಮೂಡಿ ಬರಲಿದೆ.

  • ರಾಕಿ ಭಾಯ್ ಫ್ಯಾನ್ಸ್‌ಗೆ ಸಿಹಿಸುದ್ದಿ – ಮಾರ್ಚ್‌ನಲ್ಲಿ ‘ರಾಮಾಯಣ’ ಚಿತ್ರತಂಡಕ್ಕೆ ಸೇರಿಕೊಳ್ಳಲಿದ್ದಾರೆ ಯಶ್

    ರಾಕಿ ಭಾಯ್ ಫ್ಯಾನ್ಸ್‌ಗೆ ಸಿಹಿಸುದ್ದಿ – ಮಾರ್ಚ್‌ನಲ್ಲಿ ‘ರಾಮಾಯಣ’ ಚಿತ್ರತಂಡಕ್ಕೆ ಸೇರಿಕೊಳ್ಳಲಿದ್ದಾರೆ ಯಶ್

    ನ್ಯಾಷನಲ್ ಸ್ಟಾರ್ ಯಶ್ (Yash) ‘ಟಾಕ್ಸಿಕ್’ ಸಿನಿಮಾದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಬಾಲಿವುಡ್ ‘ರಾಮಾಯಣ’ (Ramayana) ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಈ ಮೂಲಕ ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್‌ಗೆ ಸಿಹಿ ಸುದ್ದಿ ಸಿಕ್ಕಿದೆ. ಇದನ್ನೂ ಓದಿ:ಶೂಟಿಂಗ್‌ ಮುಗಿಸಿದ ದುಷ್ಯಂತ್‌, ಆಶಿಕಾ ನಟನೆಯ ‘ಗತವೈಭವ’ ಸಿನಿಮಾ

    ‘ಟಾಕ್ಸಿಕ್’ ಸಿನಿಮಾ ಕೆಲಸ ಭರದಿಂದ ನಡೆಯುತ್ತಿದೆ. ಮುಂಬೈ, ಗೋವಾ ಸೇರಿದಂತೆ ಹಲವೆಡೆ ಈ ಚಿತ್ರದ ಶೂಟಿಂಗ್ ಮಾಡಲಾಗುತ್ತಿದೆ. ಈ ಚಿತ್ರದ ಕೆಲಸದ ನಡುವೆ ಇದೀಗ ರಾವಣನಾಗಿ ಅಬ್ಬರಿಸಲು ಯಶ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

    ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಚಿತ್ರದಲ್ಲಿ ರಾವಣನಾಗಿ ನಟಿಸುವ ಬಗ್ಗೆ ಈಗಾಗಲೇ ಯಶ್ ಅಧಿಕೃತವಾಗಿ ತಿಳಿಸಿದ್ದಾರೆ. ಇದೇ ಮಾರ್ಚ್‌ನಲ್ಲಿ ಯಶ್ ‘ರಾಮಾಯಣ’ ಚಿತ್ರತಂಡವನ್ನು ಸೇರಿಕೊಳ್ಳಿದ್ದಾರೆ. ಅದಕ್ಕಾಗಿ ತೆರೆಮರೆಯಲ್ಲಿ ಭಾರೀ ತಯಾರಿ ನಡೆಯುತ್ತಿದೆ ಎಂದು ಮಾಧ್ಯಮವೊಂದು ತಿಳಿಸಿದೆ.

    ಇನ್ನೂ ‘ರಾಮಾಯಣ’ ಸಿನಿಮಾಗೆ ಸಹ ನಿರ್ಮಾಪಕನಾಗಿಯೂ ಕೂಡ ಅವರು ಸಾಥ್ ನೀಡುತ್ತಿದ್ದಾರೆ. ಹಾಗಾಗಿ ಈ ಸಿನಿಮಾದ ಮೇಲೆ ಕೂಡ ಭಾರೀ ನಿರೀಕ್ಷೆಯಿದೆ.

  • ವಾರಣಾಸಿ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಸಾಯಿ ಪಲ್ಲವಿ

    ವಾರಣಾಸಿ ಕಾಶಿ ವಿಶ್ವನಾಥ ಸನ್ನಿಧಿಯಲ್ಲಿ ಸಾಯಿ ಪಲ್ಲವಿ

    ಸೌತ್ ಬ್ಯೂಟಿ ಸಾಯಿ ಪಲ್ಲವಿ (Sai Pallavi) ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ವಾರಣಾಸಿಗೆ ಭೇಟಿ ನೀಡಿದ್ದಾರೆ. ಕಾಶಿ ವಿಶ್ವನಾಥ ದೇವಸ್ಥಾನಕ್ಕೆ (Kashi Vishwanath Temple) ಭೇಟಿ ಕೊಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ:ಪತ್ನಿ ಅವಿವ ಜೊತೆ ಅಭಿಷೇಕ್ ಅಂಬರೀಶ್ ಮಸ್ತ್ ಫೋಟೋಶೂಟ್

    ತೆಲುಗು ಮತ್ತು ಬಾಲಿವುಡ್ (Bollywood) ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸಾಯಿ ಪಲ್ಲವಿ ಇಂದು (ಡಿ.23) ವಾರಣಾಸಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ (Kashi Vishwanath Temple) ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ದೇವರ ಸನ್ನಿಧಿಯಲ್ಲಿ ಕೆಲ ಕಾಲ ಸಮಯ ಕಳೆದಿದ್ದಾರೆ. ನಟಿ ವಾರಣಾಸಿಗೆ ಭೇಟಿ ಕೊಟ್ಟಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

    ಅಂದಹಾಗೆ, ನಾಗಚೈತನ್ಯ ಜೊತೆಗಿನ ‘ತಾಂಡೇಲ್’ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಮುಂದಿನ ವರ್ಷ ಫೆಬ್ರವರಿಯಲ್ಲಿ ರಿಲೀಸ್ ಆಗಲಿದೆ. ರಣ್‌ಬೀರ್ ಕಪೂರ್‌ಗೆ ಸೀತೆಯಾಗಿ ‘ರಾಮಾಯಣ’ ಸಿನಿಮಾದಲ್ಲಿ ಸಾಯಿ ಪಲ್ಲಿವಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಯಶ್ ಅಬ್ಬರಿಸಲಿದ್ದಾರೆ.

  • ಯಶ್ ನಟನೆಯ ‘ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ರಿಲೀಸ್

    ಯಶ್ ನಟನೆಯ ‘ರಾಮಾಯಣ’ ಚಿತ್ರದ ಮೊದಲ ಪೋಸ್ಟರ್ ರಿಲೀಸ್

    ನ್ಯಾಷನಲ್ ಸ್ಟಾರ್ ಯಶ್ (Yash) ನಟನೆಯ ‘ರಾಮಾಯಣ’ (Ramayana) ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ. ಇದೀಗ ‘ರಾಮಾಯಣ’ ಸಿನಿಮಾ 2 ಭಾಗಗಳಲ್ಲಿ ಮೂಡಿ ಬರಲಿದ್ದು, ಈ ಕುರಿತು ಅಧಿಕೃತವಾಗಿ ಚಿತ್ರತಂಡ ತಿಳಿಸಿದೆ. ಇದನ್ನೂ ಓದಿ:ಯಶ್ ಬೇಗ ಸಿನಿಮಾ ಮಾಡಿ: ‘ಟಾಕ್ಸಿಕ್’ ನೋಡುವ ನಿರೀಕ್ಷೆ ವ್ಯಕ್ತಪಡಿಸಿದ ಶಾರುಖ್ ಖಾನ್

    ರಾಮನಾಗಿ ರಣ್‌ಬೀರ್ ಕಪೂರ್ (Ranbir Kapoor), ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ (Sai Pallavi) ಮತ್ತು ರಾವಣನಾಗಿ ಕನ್ನಡದ ನಟ ಯಶ್ ಅವರು ಜೀವ ತುಂಬಲಿದ್ದಾರೆ. ‘ರಾಮಾಯಣ’ 2 ಭಾಗಗಳಲ್ಲಿ ಮೂಡಿ ಬರಲಿದೆ. ಇದರ ರಿಲೀಸ್ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ರಾಮಾಯಣ ಮೊದಲ ಭಾಗ ದೀಪಾವಳಿಯಂದು 2026ರಲ್ಲಿ ರಿಲೀಸ್ ಆಗಲಿದೆ. ಎರಡನೇ ಭಾಗ ದೀಪಾವಳಿಯಂದು 2027ರಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ.

     

    View this post on Instagram

     

    A post shared by Namit Malhotra (@iamnamitmalhotra)

    ಇನ್ನೂ ರಾವಣನ ಪಾತ್ರದಲ್ಲಿ ನಟಿಸುವ ಬಗ್ಗೆ ಯಶ್ ಅಧಿಕೃತವಾಗಿ ಇತ್ತೀಚೆಗೆ ತಿಳಿಸಿದ್ದಾರೆ. ನಿತೇಶ್ ತಿವಾರಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕ ನಮಿತ್ ಮಲ್ಹೋತ್ರಾ ಜೊತೆ ಕೋ- ಪ್ರೊಡ್ಯೂಸರ್ ಆಗಿ ಯಶ್ ಕೂಡ ಕೈಜೋಡಿಸಿದ್ದಾರೆ.

    ಅಂದಹಾಗೆ, ‘ಟಾಕ್ಸಿಕ್’ (Toxic) ಸಿನಿಮಾದ ಮೇಲೆ ಫ್ಯಾನ್ಸ್‌ಗೆ ಬೆಟ್ಟದಷ್ಟು ನಿರೀಕ್ಷೆಯಿದೆ. ಜೊತೆಗೆ ರಾವಣನ ಪಾತ್ರದಲ್ಲಿ ಯಶ್‌ರನ್ನು ನೋಡಲು ಫ್ಯಾನ್ಸ್ ಕಾತರದಿಂದ ಕಾಯುತ್ತಿದ್ದಾರೆ.

  • ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು!

    ವಿಜಯದಶಮಿಗೂ ರಾಮಾಯಣಕ್ಕೂ ಇದೆ ನಂಟು!

    ಹಿಂದೂ ಧರ್ಮ ಹಾಗೂ ಭಾರತದಲ್ಲಿ ಯಾವುದೇ ಆಚರಣೆಯಾಗಲಿ ಒಂದಲ್ಲ ಒಂದು ರೀತಿಯಲ್ಲಿ ಮಹಾಭಾರತ ಹಾಗೂ ರಾಮಾಯಣಕ್ಕೆ (Ramayana) ಸಂಬಂಧ ಹೊಂದಿರುತ್ತವೆ. ಅದೇ ರೀತಿ ನವರಾತ್ರಿ ಹಾಗೂ ವಿಜಯದಶಮಿ (Vijayadashami) ಸಹ ರಾಮಾಯಣದ ನಂಟನ್ನು ಹೊಂದಿದೆ.

    ಅಶ್ವಯುಜ ಶುಕ್ಲಪಾಡ್ಯದಂದು ಆರಂಭಗೊಂಡು ನವರಾತ್ರಿ ಹಬ್ಬದ ಒಂಭತ್ತು ದಿನಗಳು ಕಳೆದ ನಂತರ ಬರುವ ಹತ್ತನೇ ದಿನವೇ ‘ದಶಮಿ’. ಇದನ್ನೇ ವಿಜಯ ದಶಮಿ ಎಂದು ಕರೆಯುತ್ತಾರೆ. ಈ ದಿನ ಸಂತೋಷದ ಸಾಂಸ್ಕೃತಿಕ, ಧಾರ್ಮಿಕ, ವೈಭವದ ಮೆರವಣಿಗೆ ದೇಶದೆಲ್ಲೆಡೆ ನಡೆಯುತ್ತದೆ.

    ವಿಜಯದಶಮಿಯ ಹಿನ್ನೆಲೆ ಏನು?
    ಎಮ್ಮೆ ರೂಪದ ಮಹಿಷಾಸುರ ದೀರ್ಘ ತಪಸ್ಸು ಮಾಡಿ, ಯಾವುದೇ ಮನುಷ್ಯನಿಂದ, ದೇವರಿಂದ ಅಥವಾ ವಿಶಿಷ್ಟ ಶಕ್ತಿಯಿಂದ ತನ್ನನ್ನು ಸಂಹರಿಸಲು ಸಾಧ್ಯವಾಗಬಾರದು ಎಂದು ಬ್ರಹ್ಮನಿಂದ ವರವನ್ನು ಪಡೆದಿದ್ದನು. ವರ ಸಿಕ್ಕಿದ ಕೂಡಲೇ ಅಹಂಕಾರದಿಂದ ಜನರಿಗೆ ಮತ್ತು ದೇವತೆಗಳಿಗೆ ತೊಂದರೆ ಕೊಡಲು ಆರಂಭಿಸಿದ. ಈತನ ಉಪಟಳವನ್ನು ತಾಳಲಾರದೇ ದೇವತೆಗಳು ಆದಿಶಕ್ತಿಯನ್ನು ಪೂಜಿಸಿ ಮಹಿಷನನ್ನು ವದಿಸುವಂತೆ ಬೇಡಿಕೊಳ್ಳುತ್ತಾರೆ. ಪ್ರಾರ್ಥನೆ ಕೇಳಿದ ದೇವಿ ದುರ್ಗೆಯಾಗಿ ಸಿಂಹವಾಹಿನಿಯಾಗಿ, ಹತ್ತು ಕೈಗಳಲ್ಲಿ ಹತ್ತು ಬಗೆಯ ಆಯುಧಗಳನ್ನು ಹಿಡಿದು ಧರೆಗಿಳಿದಳು. ರಾಕ್ಷಸನಾದ ಮಹಿಷಾಸುರನನ್ನು ದಶಮಿಯ ದಿನ ಸಂಹಾರ ಮಾಡಿದಳು. ಅಂದಿನಿಂದ ದಶಮಿಯಂದು ಮಹಿಷಾಸುರನ್ನು ಕೊಂದು ವಿಜಯ ಸಿಕ್ಕಿದ್ದಕ್ಕೆ `ವಿಜಯದಶಮಿ’ ಹಬ್ಬವನ್ನು ಎಲ್ಲೆಡೆ ಆಚರಿಸಲಾಗುತ್ತಿದೆ.

    ರಾಮಾಯಣಕ್ಕೆ ಏನು ಸಂಬಂಧ?
    ರಾವಣನನ್ನು ಸಂಹಾರ ಮಾಡುವ ಮೊದಲು ನಾರದರು ರಾಮನಿಗೆ ಶರನ್ನವರಾತ್ರಿ ವ್ರತವನ್ನು ಮಾಡಲು ಹೇಳಿದ್ದರು. ಈ ವ್ರತವನ್ನು ಪೂರ್ಣಗೊಳಿಸಿದ ನಂತರ ರಾಮನು ಲಂಕೆಯ ಮೇಲೆ ಆಕ್ರಮಣ ಮಾಡಿ ಯುದ್ಧದಲ್ಲಿ ರಾವಣನನ್ನು ವಧಿಸಿದನು.

    ‘ದಶಹರ’ದಂದು ದಶಕಂಠನಾಗಿದ್ದ ರಾವಣನನ್ನು ಶ್ರೀರಾಮನು ಸಂಹರಿಸಿದ ಬಳಿಕ ವಿಜಯೋತ್ಸವ ನಡೆಯಿತು ಎನ್ನುವ ಪ್ರತೀತಿ ಇದೆ. ಹೀಗಾಗಿ ಉತ್ತರಭಾರತ ಕಡೆ ದಸರಾ ಸಮಯದಲ್ಲಿ 10 ದಿನಗಳ ಕಾಲ ರಾಮಾಯಣದ ವಿವಿಧ ಘಟನೆಗಳನ್ನು ವಿವರಿಸುವ ರಾಮಲೀಲಾ ಕಥನ ನಡೆಯುತ್ತದೆ. ದಶಮಿಯಂದು ರಾವಣನ ಆಕೃತಿಯನ್ನು ಸುಡಲಾಗುತ್ತದೆ. ದೆಹಲಿಯಲ್ಲಿ ರಾಷ್ಟ್ರೀಯ ಮಹತ್ವ ಇರುವ ಹಬ್ಬ ಎಂಬಂತೆ ಆಚರಿಸಲಾಗುತ್ತದೆ. ರಾಮಲೀಲಾ ಮೈದಾನದಲ್ಲಿ ಈ ಹಬ್ಬ ವಿಜೃಂಭಣೆಯಿಂದ ನಡೆಯುತ್ತದೆ.

  • ಡಿಸೆಂಬರ್‌ನಲ್ಲಿ ‘ರಾವಣ’ನಾಗಿ ಘರ್ಜಿಸಲಿದ್ದಾರೆ ಯಶ್

    ಡಿಸೆಂಬರ್‌ನಲ್ಲಿ ‘ರಾವಣ’ನಾಗಿ ಘರ್ಜಿಸಲಿದ್ದಾರೆ ಯಶ್

    ನ್ಯಾಷನಲ್ ಸ್ಟಾರ್ ಯಶ್ ಪ್ರಸ್ತುತ ‘ಟಾಕ್ಸಿಕ್’ (Toxic) ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಅವರು ಒಪ್ಪಿಕೊಂಡಿರುವ ‘ರಾಮಾಯಣ’ ಸಿನಿಮಾದ ಬಗ್ಗೆ ಬಿಗ್ ಅಪ್‌ಡೇಟ್‌ವೊಂದು ಸಿಕ್ಕಿದೆ. ಡಿಸೆಂಬರ್‌ನಲ್ಲಿ ಯಶ್ (Yash) ‘ರಾಮಾಯಣ’ ಚಿತ್ರತಂಡವನ್ನು ಸೇರಿಕೊಳ್ಳಲಿದ್ದಾರೆ. ಇದನ್ನೂ ಓದಿ:ಕನ್ನಡತಿ ಸೀರಿಯಲ್‌ ನಟ ಕಿರಣ್‌ ರಾಜ್‌ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ಆ.8ಕ್ಕೆ ಟಾಕ್ಸಿಕ್ ಸಿನಿಮಾಗೆ ಚಿತ್ರಕ್ಕೆ ನೀಡಲಾಗಿತ್ತು. ಅಂದಿನಿಂದ ಈ ಪ್ರಾಜೆಕ್ಟ್‌ನಲ್ಲಿ ಯಶ್ ಬ್ಯುಸಿಯಾಗಿದ್ದಾರೆ. ಇನ್ನೂ ಹಲವು ಹಂತದಲ್ಲಿ ಶೂಟಿಂಗ್ ನಡೆಯಲಿದೆ. ಆದರೆ ರಣ್‌ಬೀರ್ ಕಪೂರ್ (Ranbir Kapoor) ‘ರಾಮಾಯಣ’ (Ramayana) ಚಿತ್ರದಲ್ಲಿ ಯಶ್ ‘ರಾವಣ’ನಾಗಿ ಬರೋಕೆ ಮುಹೂರ್ತ ಫಿಕ್ಸ್ ಆಗಿದೆ. ‘ಟಾಕ್ಸಿಕ್’ ಸಿನಿಮಾ ಜೊತೆಗೆಯೇ ಈ ಚಿತ್ರಕ್ಕೂ ಅವರು ಸಾಥ್ ನೀಡಲಿದ್ದಾರೆ.

    ರಣ್‌ಬೀರ್ ರಾಮನ ಪಾತ್ರ, ಸಾಯಿ ಪಲ್ಲವಿ (Sai Pallavi) ಸೀತೆ ಪಾತ್ರಕ್ಕೆ ಜೀವತುಂಬುತ್ತಿದ್ದಾರೆ. ಇವರ ಭಾಗದ ಶೂಟಿಂಗ್ ಮುಂಬೈನಲ್ಲಿ ನಡೆಯುತ್ತಿದೆ. ಡಿಸೆಂಬರ್‌ನಲ್ಲಿ ಚಿತ್ರದ ಸೆಟ್‌ಗೆ ಯಶ್ ಎಂಟ್ರಿ ಕೊಡಲಿದ್ದಾರೆ. ರಾವಣನಾಗಿ ಘರ್ಜಿಸೋಕೆ ಸಕಲ ತಯಾರಿ ಮಾಡಿಕೊಂಡಿದ್ದಾರೆ. ಇನ್ನೂ ಸನ್ನಿ ಡಿಯೋಲ್ ಅವರು ಹನುಮಂತನ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

    ಇನ್ನೂ ‘ರಾಮಾಯಣ’ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಹ ನಿರ್ಮಾಪಕನಾಗಿಯೂ ಕನ್ನಡದ ನಟ ಯಶ್ ಕೈಜೋಡಿಸಿದ್ದಾರೆ. ಹಾಗಾಗಿ ಈ ಸಿನಿಮಾದ ಮೇಲೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ.

  • ವಿಜಯ್ ದೇವರಕೊಂಡಗೆ ಸಾಯಿ ಪಲ್ಲವಿ ನಾಯಕಿ

    ವಿಜಯ್ ದೇವರಕೊಂಡಗೆ ಸಾಯಿ ಪಲ್ಲವಿ ನಾಯಕಿ

    ‘ಪ್ರೇಮಂ’ (Premam) ಬೆಡಗಿ ಸಾಯಿ ಪಲ್ಲವಿ (Sai Pallavi) ಇದೀಗ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಸಿನಿಮಾದ ಶೂಟಿಂಗ್ ತೊಡಗಿಸಿಕೊಂಡಿರುವ ಸಾಯಿ ಪಲ್ಲವಿ ಈಗ ತೆಲುಗಿನ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ರೌಡಿ ಬಾಯ್‌ಗೆ ಸಾಯಿ ಪಲ್ಲವಿ ನಾಯಕಿಯಾಗಲು ಸಜ್ಜಾಗಿದ್ದಾರೆ.

    ಖುಷಿ, ಫ್ಯಾಮಿಲಿ ಸ್ಟಾರ್ ನಟ ವಿಜಯ್ ದೇವರಕೊಂಡ (Vijay Devarakonda) ನಟನೆಯ ಹೊಸ ಚಿತ್ರಕ್ಕೆ ಸಾಯಿ ಪಲ್ಲವಿ ನಾಯಕಿ ಎಂದು ಸುದ್ದಿ ಹರಿದಾಡುತ್ತಿದೆ. ವಿಜಯ್ ಜೊತೆ ಸಾಯಿ ಪಲ್ಲವಿ ಜೋಡಿಯಾಗಿ ತೋರಿಸಲು ಡೈರೆಕ್ಟರ್‌ ರವಿ ಕಿರಣ್‌ ಕೋಲಾ ಪ್ಲ್ಯಾನ್‌ ಮಾಡಿದ್ದಾರೆ ಎನ್ನಲಾಗಿದೆ.

    ಒಂದು ವಿಭಿನ್ನ ಕಥೆಯನ್ನು ತೋರಿಸಲು ರವಿಕಿರಣ್ ಹೊರಟಿದ್ದಾರೆ. ವಿಜಯ್‌ಗೆ ಸಾಯಿ ಪಲ್ಲವಿ ಸೂಕ್ತ ನಾಯಕಿ ಎಂದು ಚಿತ್ರತಂಡ ಯೋಚಿಸಿ ನಟಿಯನ್ನು ಸಂಪರ್ಕಿಸಿದೆ. ಸಾಯಿ ಪಲ್ಲವಿ ಕೂಡ ಕಥೆ ಕೇಳಿ ಓಕೆ ಎಂದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿಲ್ಲ. ಇದನ್ನೂ ಓದಿ:ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಇನ್ನೂ ಆಮೀರ್ ಖಾನ್ (Aamir Khan) ಪುತ್ರನಿಗೆ ನಾಯಕಿಯಾಗಿ ಬಾಲಿವುಡ್‌ಗೆ ಸಾಯಿ ಪಲ್ಲವಿ ಪಾದಾರ್ಪಣೆ ಮಾಡುತ್ತಿದ್ದಾರೆ. ಯಶ್ (Yash) ಸಹ-ನಿರ್ಮಾಣದ ‘ರಾಮಾಯಣ’ (Ramayana) ಚಿತ್ರದಲ್ಲಿ ಸೀತೆಯಾಗಿ ನಟಿಸುತ್ತಿದ್ದಾರೆ. ನಾಗಚೈತನ್ಯ (Nagachaitanya) ಜೊತೆ ತಾಂಡೇಲ್ ಸಿನಿಮಾ ಮಾಡಿ ಮುಗಿಸಿದ್ದಾರೆ. ಹೀಗೆ ಹಲವು ಪ್ರಾಜೆಕ್ಟ್‌ಗಳು ನಟಿಯ ಕೈಯಲ್ಲಿವೆ.

  • Ramayana: ಯಶ್ ಸಿನಿಮಾದಲ್ಲಿ ಶೂರ್ಪನಕಿಯಾಗಿ ರಕುಲ್ ಪ್ರೀತ್ ಸಿಂಗ್

    Ramayana: ಯಶ್ ಸಿನಿಮಾದಲ್ಲಿ ಶೂರ್ಪನಕಿಯಾಗಿ ರಕುಲ್ ಪ್ರೀತ್ ಸಿಂಗ್

    ನ್ನಡದ ‘ಗಿಲ್ಲಿ’ (Gilli Film) ನಟಿ ರಕುಲ್ ಪ್ರೀತ್‌ ಸಿಂಗ್ (Rakul Preet Singh) ಇದೀಗ ಯಶ್ (Yash) ನಿರ್ಮಾಣದ‌ ರಾಮಾಯಣ ಸಿನಿಮಾದಲ್ಲಿ ನಟಿಸಲು ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಶೂರ್ಪನಕಿಯಾಗಿ ‘ರಾಮಾಯಣ’ ಚಿತ್ರಕ್ಕೆ ರಕುಲ್ ಎಂಟ್ರಿ ಕೊಡ್ತಿದ್ದಾರೆ. ಇದನ್ನೂ ಓದಿ:11 ವರ್ಷಗಳ ದಾಂಪತ್ಯಕ್ಕೆ ಕೊನೆ ಹಾಡುತ್ತಿದ್ದೇವೆ; ಮ್ಯೂಸಿಕ್‌ ಡೈರೆಕ್ಟರ್ ಜಿ.ವಿ ಪ್ರಕಾಶ್

    ನ್ಯಾಷನಲ್ ಸ್ಟಾರ್ ಯಶ್ ಸಹ ನಿರ್ಮಾಪಕನಾಗಿ ಕೈಜೋಡಿಸಿರುವ ‘ರಾಮಾಯಣ’ ಸಿನಿಮಾತಂಡ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ರಾಮನಾಗಿ ರಣ್‌ಬೀರ್ ಕಪೂರ್ (Ranbir Kapoor) ಮತ್ತು ಸೀತೆಯಾಗಿ ಸಾಯಿ ಪಲ್ಲವಿ (Sai Pallavi) ನಟಿಸುತ್ತಿದ್ದಾರೆ. ಲಂಕಾಧೀಶ ರಾವಣನ ಸಹೋದರಿಯಾಗಿ ರಕುಲ್ ಕಾಣಿಸಿಕೊಳ್ಳಲಿದ್ದಾರೆ.

    ಕನ್ನಡದ ‘ಗಿಲ್ಲಿ’ ಚಿತ್ರದ ಮೂಲಕ ಬಣ್ಣದ ಹಚ್ಚಿದ ನಟಿ ರಕುಲ್ ತೆಲುಗು ಸಿನಿಮಾಗಳ ನಂತರ ಬಾಲಿವುಡ್‌ನಲ್ಲಿ ಸ್ಟಾರ್ ನಟರ ಜೊತೆ ನಟಿಸುವ ಚಾನ್ಸ್ ಗಿಟ್ಟಿಸಿಕೊಂಡರು. ಇದೀಗ ರಾಮಾಯಣ ಸಿನಿಮಾದ ಆಫರ್ ಸಿಕ್ಕಾಗ ಸೂಕ್ತ ಅವಕಾಶ ಎನಿಸಿ ನಟಿ ಓಕೆ ಎಂದಿದ್ದಾರೆ. ಸದ್ಯದಲ್ಲೇ ಶೂಟಿಂಗ್‌ನಲ್ಲಿ ರಕುಲ್ ಭಾಗಿಯಾಗಲಿದ್ದಾರೆ.

    ಅಂದಹಾಗೆ, ಇತ್ತೀಚೆಗೆ ನಿರ್ಮಾಪಕ ಜಾಕಿ ಭಗ್ನಾನಿ ಜೊತೆ ನಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆ ಬಳಿಕವೂ ನಟಿ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ.