Tag: Ramayana

  • ಅಯೋಧ್ಯೆ ಸೆಟ್ ನಿರ್ಮಾಣಕ್ಕೆ 11 ಕೋಟಿ ರೂ. ಮೀಸಲಿಟ್ಟ ಡೈರೆಕ್ಟರ್

    ಅಯೋಧ್ಯೆ ಸೆಟ್ ನಿರ್ಮಾಣಕ್ಕೆ 11 ಕೋಟಿ ರೂ. ಮೀಸಲಿಟ್ಟ ಡೈರೆಕ್ಟರ್

    ದ್ದಿಲ್ಲದೇ ರಾಮಾಯಾಣ (Ramayana) ಸಿನಿಮಾದ ಶೂಟಿಂಗ್ ಶುರು ಮಾಡಿದ್ದಾರೆ ನಿರ್ದೇಶಕ ನಿತೀಶ್ ತಿವಾರಿ. ಅದಕ್ಕಾಗಿ ಬೃಹತ್ ಸೆಟ್ ಗಳನ್ನೂ ಅವರು ಹಾಕುತ್ತಿದ್ದಾರೆ. ಗುರುಕುಲದ ಸೆಟ್ ಹೊರಗಿನ ದೃಶ್ಯವು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೇ, ಅಯೋಧ್ಯೆ (Ayodhya) ಸೆಟ್ ಹಾಕಿಸಲು ಬರೋಬ್ಬರಿ 11 ಕೋಟಿ ರೂಪಾಯಿಯನ್ನು ನಿರ್ದೇಶಕರು ಮೀಸಲಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

    ರಾಮಾಯಣ ಸಿನಿಮಾದ ಚಿತ್ರೀಕರಣವನ್ನು ನಿನ್ನೆಯಿಂದ ಆರಂಭಿಸಿದ್ದಾರೆ ನಿರ್ದೇಶಕ ನಿತಿಶ್ ತೀವಾರಿ. ಈ ಹಂತದ ಚಿತ್ರೀಕರಣದಲ್ಲಿ ಸ್ಟಾರ್ ನಟರು ಭಾಗಿ ಆಗುತ್ತಿಲ್ಲ ಎನ್ನುವ ಮಾಹಿತಿ ಇದೆ. ಗುರುಕುಲ ದೃಶ್ಯದಿಂದ ಚಿತ್ರೀಕರಣ (Shooting) ಆರಂಭಿಸಿದ್ದಾರೆ. ನಂತರದ ಚಿತ್ರೀಕರಣದಲ್ಲಿ ಸ್ಟಾರ್ ತಾರಾಗಣವೇ ಇರಲಿದೆ.

    ಈ ನಡುವೆ ರಾಮಾಯಣ ಸಿನಿಮಾದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ಮಂಡೋದರಿ ಪಾತ್ರವನ್ನು ಹಿಂದಿಯ ಖ್ಯಾತ ಕಿರುತೆರೆ ನಟಿ ಸಾಕ್ಷಿ (Sakshi Tanwar)  ತನ್ವರ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಸುದ್ದಿ ಸಾಕಷ್ಟು ಸದ್ದು ಕೂಡ  ಮಾಡಿತ್ತು. ಈ ವಿಷಯ ಸ್ವತಃ ಸಾಕ್ಷಿಗೂ ತಲುಪಿತ್ತು. ಈ ಕುರಿತಂತೆ ಅವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ರಾಮಾಯಣ ಕುರಿತಂತೆ ಸಿನಿಮಾ ಆಗುತ್ತಿರುವ ವಿಷಯವನ್ನು ನಾನೂ ಬಲ್ಲೆ. ಆದರೆ, ಮಂಡೋದರಿ ಪಾತ್ರಕ್ಕೆ ನನ್ನ ಹೆಸರು ಬಳಕೆ ಆಗಿದ್ದು ನಾನೂ ಕೇಳಿದ್ದೇನೆ. ಆದರೆ, ಈವರೆಗೂ ಚಿತ್ರತಂಡವಾಗಲಿ, ನಿರ್ದೇಶಕರಾಗಲಿ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಈವರೆಗಿನ ಸುದ್ದಿ ಸುಳ್ಳು ಎಂದು ಅವರು ಹೇಳಿದ್ದಾರೆ.

    ನಿರ್ದೇಶಕ ನಿತಿಶ್ ತಿವಾರಿ ದಕ್ಷಿಣದ ಹೀರೋಗಳ ಬಗ್ಗೆ ಒಲವು ತೋರಿ, ಇಲ್ಲಿನ ಕಲಾವಿದರನ್ನು ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತೂ ಕೇಳಿ ಬರುತ್ತಿದೆ. ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಈ ಸಿನಿಮಾದಲ್ಲಿ ರಾವಣನ ಸಹೋದರನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವಣನ ಸಹೋದರನಾಗಿ ವಿಜಯ್ ಸೇತುಪತಿ ನಟಿಸಿದರೆ, ಈ ಹಿಂದೆ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

  • ‘ರಾಮಾಯಣ’ ಸಿನಿಮಾದ ಶೂಟಿಂಗ್ ಶುರು: ವಿಶೇಷವಾಗಿದೆ ಮೊದಲ ದೃಶ್ಯ

    ‘ರಾಮಾಯಣ’ ಸಿನಿಮಾದ ಶೂಟಿಂಗ್ ಶುರು: ವಿಶೇಷವಾಗಿದೆ ಮೊದಲ ದೃಶ್ಯ

    ಲವಾರು ತಿಂಗಳಿಂದ ಸುದ್ದಿಯಲ್ಲಿರುವ ರಾಮಾಯಣ (Ramayana) ಸಿನಿಮಾದ ಶೂಟಿಂಗ್ ಕೊನೆಗೂ ಶುರುವಾಗಿದೆ. ಇಂದಿನಿಂದ ಚಿತ್ರೀಕರಣವನ್ನು ಆರಂಭಿಸಿದ್ದಾರಂತೆ ನಿರ್ದೇಶಕ ನಿತಿಶ್ ತೀವಾರಿ. ಈ ಹಂತದ ಚಿತ್ರೀಕರಣದಲ್ಲಿ ಸ್ಟಾರ್ ನಟರು ಭಾಗಿ ಆಗುತ್ತಿಲ್ಲ ಎನ್ನುವ ಮಾಹಿತಿ ಇದೆ. ಗುರುಕುಲ ದೃಶ್ಯದಿಂದ ಚಿತ್ರೀಕರಣ (Shooting) ಆರಂಭಿಸಿದ್ದಾರೆ. ನಂತರದ ಚಿತ್ರೀಕರಣದಲ್ಲಿ ಸ್ಟಾರ್ ತಾರಾಗಣವೇ ಇರಲಿದೆ.

    ಈ ನಡುವೆ ರಾಮಾಯಣ ಸಿನಿಮಾದ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ಮಂಡೋದರಿ ಪಾತ್ರವನ್ನು ಹಿಂದಿಯ ಖ್ಯಾತ ಕಿರುತೆರೆ ನಟಿ ಸಾಕ್ಷಿ (Sakshi Tanwar)  ತನ್ವರ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಸುದ್ದಿ ಸಾಕಷ್ಟು ಸದ್ದು ಕೂಡ  ಮಾಡಿತ್ತು. ಈ ವಿಷಯ ಸ್ವತಃ ಸಾಕ್ಷಿಗೂ ತಲುಪಿತ್ತು. ಈ ಕುರಿತಂತೆ ಅವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ರಾಮಾಯಣ ಕುರಿತಂತೆ ಸಿನಿಮಾ ಆಗುತ್ತಿರುವ ವಿಷಯವನ್ನು ನಾನೂ ಬಲ್ಲೆ. ಆದರೆ, ಮಂಡೋದರಿ ಪಾತ್ರಕ್ಕೆ ನನ್ನ ಹೆಸರು ಬಳಕೆ ಆಗಿದ್ದು ನಾನೂ ಕೇಳಿದ್ದೇನೆ. ಆದರೆ, ಈವರೆಗೂ ಚಿತ್ರತಂಡವಾಗಲಿ, ನಿರ್ದೇಶಕರಾಗಲಿ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಈವರೆಗಿನ ಸುದ್ದಿ ಸುಳ್ಳು ಎಂದು ಅವರು ಹೇಳಿದ್ದಾರೆ.

    ನಿರ್ದೇಶಕ ನಿತಿಶ್ ತಿವಾರಿ ದಕ್ಷಿಣದ ಹೀರೋಗಳ ಬಗ್ಗೆ ಒಲವು ತೋರಿ, ಇಲ್ಲಿನ ಕಲಾವಿದರನ್ನು ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತೂ ಕೇಳಿ ಬರುತ್ತಿದೆ. ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಈ ಸಿನಿಮಾದಲ್ಲಿ ರಾವಣನ ಸಹೋದರನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವಣನ ಸಹೋದರನಾಗಿ ವಿಜಯ್ ಸೇತುಪತಿ ನಟಿಸಿದರೆ, ಈ ಹಿಂದೆ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

  • ‘ಮಂಡೋದರಿ’ ಪಾತ್ರಕ್ಕೆ ಖ್ಯಾತ ನಟಿ ಸಾಕ್ಷಿ ತನ್ವರ್ ಹೆಸರು

    ‘ಮಂಡೋದರಿ’ ಪಾತ್ರಕ್ಕೆ ಖ್ಯಾತ ನಟಿ ಸಾಕ್ಷಿ ತನ್ವರ್ ಹೆಸರು

    ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ಮಂಡೋದರಿ ಪಾತ್ರವನ್ನು ಹಿಂದಿಯ ಖ್ಯಾತ ಕಿರುತೆರೆ ನಟಿ ಸಾಕ್ಷಿ (Sakshi Tanwar)  ತನ್ವರ್ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಸುದ್ದಿ ಸಾಕಷ್ಟು ಸದ್ದು ಕೂಡ  ಮಾಡಿತ್ತು. ಈ ವಿಷಯ ಸ್ವತಃ ಸಾಕ್ಷಿಗೂ ತಲುಪಿತ್ತು. ಈ ಕುರಿತಂತೆ ಅವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ.

    ರಾಮಾಯಣ ಕುರಿತಂತೆ ಸಿನಿಮಾ ಆಗುತ್ತಿರುವ ವಿಷಯವನ್ನು ನಾನೂ ಬಲ್ಲೆ. ಆದರೆ, ಮಂಡೋದರಿ ಪಾತ್ರಕ್ಕೆ ನನ್ನ ಹೆಸರು ಬಳಕೆ ಆಗಿದ್ದು ನಾನೂ ಕೇಳಿದ್ದೇನೆ. ಆದರೆ, ಈವರೆಗೂ ಚಿತ್ರತಂಡವಾಗಲಿ, ನಿರ್ದೇಶಕರಾಗಲಿ ಯಾರೂ ನನ್ನನ್ನು ಸಂಪರ್ಕಿಸಿಲ್ಲ. ಈವರೆಗಿನ ಸುದ್ದಿ ಸುಳ್ಳು ಎಂದು ಅವರು ಹೇಳಿದ್ದಾರೆ.

    ಈ ನಡುವೆ ನಿರ್ದೇಶಕ ನಿತಿಶ್ ತಿವಾರಿ ದಕ್ಷಿಣದ ಹೀರೋಗಳ ಬಗ್ಗೆ ಒಲವು ತೋರಿ, ಇಲ್ಲಿನ ಕಲಾವಿದರನ್ನು ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎನ್ನುವ ಮಾತೂ ಕೇಳಿ ಬರುತ್ತಿದೆ. ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಈ ಸಿನಿಮಾದಲ್ಲಿ ರಾವಣನ ಸಹೋದರನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವಣನ ಸಹೋದರನಾಗಿ ವಿಜಯ್ ಸೇತುಪತಿ ನಟಿಸಿದರೆ, ಈ ಹಿಂದೆ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

  • ‌Ramayana: ಶೂರ್ಪನಖಿ ಪಾತ್ರಕ್ಕೆ ಆಯ್ಕೆಯಾದ ಕನ್ನಡದ ‘ಗಿಲ್ಲಿ’ ನಟಿ

    ‌Ramayana: ಶೂರ್ಪನಖಿ ಪಾತ್ರಕ್ಕೆ ಆಯ್ಕೆಯಾದ ಕನ್ನಡದ ‘ಗಿಲ್ಲಿ’ ನಟಿ

    ಬಾಲಿವುಡ್‌ನಲ್ಲಿ ಸದ್ಯ ಸಂಚಲನ ಸೃಷ್ಟಿಸುತ್ತಿರುವ ಸಿನಿಮಾ ಅಂದರೆ ರಾಮಾಯಣ. ನಿತೇಶ್ ತಿವಾರಿ ಅವರು ಅಧಿಕೃತ ಘೋಷಣೆ ಮಾಡುವ ಮುನ್ನವೇ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗುತ್ತಿದೆ. ಶ್ರೀರಾಮನಾಗಿ ರಣ್‌ಬೀರ್ ಕಪೂರ್, ಸೀತೆಯಾಗಿ ಜಾನ್ವಿ ಕಪೂರ್ ನಟಿಸಿದ್ರೆ ಶೂರ್ಪನಖಿ ಪಾತ್ರಕ್ಕೆ ಕನ್ನಡದ ‘ಗಿಲ್ಲಿ’ (Gilli Kannada Film) ನಟಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ:ವರ್ತೂರ್ ಸಂತೋಷ್ ಗೆ ಸನ್ಮಾನ ಮಾಡಿದ್ದ ಅಧಿಕಾರಿ ಎತ್ತಂಗಡಿ

    ಆದಿಪುರುಷ್ ಸಿನಿಮಾ ನಂತರ ‘ರಾಮಾಯಣ’ (Ramayana) ಕಾವ್ಯ ಆಧರಿಸಿ ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ರಾಮಾಯಣ ಸಿನಿಮಾ ದಿನಕ್ಕೊಂದು ಅಪ್‌ಡೇಟ್ ಹೊರಬೀಳುತ್ತಿದೆ. ಹೀಗಿರುವಾಗ ಬಾಲಿವುಡ್ ಬ್ಯೂಟಿ ರಾಕುಲ್ ಪ್ರೀತ್ ಸಿಂಗ್ (Rakul Preet Singh) ಈಗ ಸಿಕ್ಕಾಪಟ್ಟೆ ಸದ್ದು ಮಾಡ್ತಿದ್ದಾರೆ.

    ರಾಮಾಯಣದಲ್ಲಿ ಇಡೀ ಕಥೆಗೆ ತಿರುವುದು ರಾವಣನ ಸಹೋದರಿ ಶೂರ್ಪನಖಿ. ಹಾಗಾಗಿ ಆ ಪಾತ್ರವನ್ನು ಯಾರು ಮಾಡುತ್ತಾರೆ ಎನ್ನುವ ಚರ್ಚೆ ಈಗ ಬಾಲಿವುಡ್ ಅಂಗಳದಲ್ಲಿ ಶುರುವಾಗಿದೆ. ಇಡೀ ಕಥೆಯಲ್ಲಿ ಶೂರ್ಪನಖಿ ಪಾತ್ರ ಚಿಕ್ಕದು. ಆದರೆ ಆ ಪಾತ್ರಕ್ಕೆ ಬಹಳ ಮಹತ್ವ ಇದೆ. ಸದ್ಯ ಈ ಪಾತ್ರಕ್ಕಾಗಿ ರಾಕುಲ್ ಪ್ರೀತ್ ಸಿಂಗ್ ಜೊತೆ ಚಿತ್ರತಂಡ ಮಾತುಕತೆ ನಡೆಸುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

    3 ಭಾಗಗಳಾಗಿ ‘ರಾಮಾಯಣ’ ಚಿತ್ರವನ್ನು ತೆರೆಗೆ ತರುತ್ತಾರೆ ಎನ್ನಲಾಗ್ತಿದೆ. ಮುಂದಿನ ವರ್ಷ ಪಾರ್ಟ್-1 ರಿಲೀಸ್ ಆಗುವ ನಿರೀಕ್ಷೆಯಿದೆ. ಇನ್ನು ಕೈಕೆಯಿ ಪಾತ್ರಕ್ಕೆ ಲಾರಾ ದತ್ತಾ, ವಿಭಿಷಣ ಪಾತ್ರಕ್ಕೆ ವಿಜಯ್ ಸೇತುಪತಿ ಜೊತೆ ಚರ್ಚೆ ನಡೆಸಿರುವುದಾಗಿ ಹೇಳಲಾಗಿತ್ತು. ಇದೀಗ ಶೂರ್ಪನಖಿ ಪಾತ್ರಕ್ಕಾಗಿ ಈಗಾಗಲೇ ಕನ್ನಡದ ‘ಗಿಲ್ಲಿ’ ನಟಿ ಲುಕ್ ಟೆಸ್ಟ್ ಸಹ ನಡೆದಿದೆ ಎನ್ನಲಾಗ್ತಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಅಧಿಕೃತ ಅಪ್‌ಡೇಟ್ ಹೊರಬೀಳಲಿದೆ.

    ದೆಹಲಿ ಬೆಡಗಿ ರಾಕುಲ್ ಮೊದಲು ನಟಿಸಿದ್ದು, ಕನ್ನಡದ ‘ಗಿಲ್ಲಿ’ ಸಿನಿಮಾದಲ್ಲಿ ಎಂಬುದು ವಿಶೇಷ. ಖ್ಯಾತ ನಟ ಜಗ್ಗೇಶ್ ಪುತ್ರ ಗುರುರಾಜ್‌ಗೆ ನಾಯಕಿಯಾಗಿ ರಾಕುಲ್ ಸಿನಿಮಾ ಜರ್ನಿ ಶುರು ಮಾಡಿದ್ದರು. ಇದೀಗ ಸೌತ್ ಮತ್ತು ಬಾಲಿವುಡ್ ಸಿನಿಮಾಗಳಲ್ಲಿ ನಟಿ ರಾಕುಲ್ ನೆಲೆ ಗಿಟ್ಟಿಸಿಕೊಂಡಿದ್ದಾರೆ.

  • ರಾಮನ ಪಾತ್ರಕ್ಕಾಗಿ ರಣಬೀರ್ ಕಪೂರ್ ತರಬೇತಿ

    ರಾಮನ ಪಾತ್ರಕ್ಕಾಗಿ ರಣಬೀರ್ ಕಪೂರ್ ತರಬೇತಿ

    ಬಾಲಿವುಡ್ ಖ್ಯಾತ ನಟ ರಣಬೀರ್ ಕಪೂರ್ ಇದೇ ಮೊದಲ ಬಾರಿಗೆ ಪಾತ್ರವೊಂದಕ್ಕಾಗಿ ತರಬೇತಿ ಪಡೆಯುತ್ತಿದ್ದಾರಂತೆ. ರಾಮಯಾಣ (Ramayana) ಸಿನಿಮಾದಲ್ಲಿ ಇವರು ರಾಮನ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕಾಗಿ ಹಲವು ಬಗೆಯ ತರಬೇತಿಯನ್ನು ರಣಬೀರ್ ಪಡೆದುಕೊಳ್ಳುತ್ತಿದ್ದಾರಂತೆ. ರಾಮನ ಪಾತ್ರವೆಂದರೆ, ಅದು ಸಾಮಾನ್ಯವಾದದ್ದಲ್ಲ. ಹಾಗಾಗಿ ಈ ತರಬೇತಿ ಅಗತ್ಯವಿದೆಯಂತೆ.

    ಈ ರಾಮಾಯಣ ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ನಿರ್ದೇಶಕ ನಿತಿಶ್ ತಿವಾರಿ ದಕ್ಷಿಣದ ಹೀರೋಗಳ ಬಗ್ಗೆ ಒಲವು ತೋರಿ, ಇಲ್ಲಿನ ಕಲಾವಿದರನ್ನು ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಈ ಸಿನಿಮಾದಲ್ಲಿ ರಾವಣನ ಸಹೋದರನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ರಾವಣನ ಸಹೋದರನಾಗಿ ವಿಜಯ್ ಸೇತುಪತಿ ನಟಿಸಿದರೆ, ಈ ಹಿಂದೆ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

    ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

  • Ramayana: ಸಾಯಿ ಪಲ್ಲವಿ ಔಟ್, ಸೀತೆಯ ಪಾತ್ರದಲ್ಲಿ ಶ್ರೀದೇವಿ ಪುತ್ರಿ

    Ramayana: ಸಾಯಿ ಪಲ್ಲವಿ ಔಟ್, ಸೀತೆಯ ಪಾತ್ರದಲ್ಲಿ ಶ್ರೀದೇವಿ ಪುತ್ರಿ

    ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ (Nitesh Tiwari) ಇದೀಗ ರಾಮಾಯಣ (Ramayana) ಆಧರಿಸಿ ಸಿನಿಮಾ ಮಾಡಲು ಸಕಲ ತಯಾರಿ ಮಾಡುತ್ತಿದ್ದಾರೆ. ರಾಮನಾಗಿ ರಣ್‌ಬೀರ್ ಕಪೂರ್ (Ranbir Kapoor) ಸೆಲೆಕ್ಟ್ ಆಗಿದ್ರೆ, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎನ್ನಲಾಗಿತ್ತು. ಈಗ ಸಾಯಿ ಪಲ್ಲವಿ ಬದಲು ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ (Janhvi Kapoor) ನಟಿಸಲಿದ್ದಾರೆ ಎನ್ನಲಾಗುತ್ತಿದೆ.

    ದಂಗಲ್, ಬಾವಲ್ ಚಿತ್ರಗಳ ನಿರ್ದೇಶಕ ನಿತೀಶ್ ತಿವಾರಿ ‘ರಾಮಾಯಣ’ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಪ್ರೀ- ಪ್ರೊಡಕ್ಷನ್ ಹಂತದ ಕೆಲಸಗಳು ಕೂಡ ಭರದಿಂದ ಸಾಗುತ್ತಿದೆ. ತೆರೆಮರೆಯಲ್ಲಿ ಪಾತ್ರಗಳ ಆಯ್ಕೆ ಕೂಡ ನಡೆಯುತ್ತಿದೆ. ಸೀತೆಯ ಪಾತ್ರದ ಆಯ್ಕೆಯ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ:ಪೂನಂ ಪರವಾಗಿ ಕ್ಷಮೆ ಕೇಳಿದ ಡಿಜಿಟೆಲ್ ಟೀಮ್

    ‘ರಾಮಾಯಣ’ ಸಿನಿಮಾ ಬಗ್ಗೆ ಒಂದಲ್ಲ ಒಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಇದೀಗ ಮತ್ತೊಂದು ಸುದ್ದಿ ಹೊರಬಿದ್ದಿದೆ. ರಣಬೀರ್ ರಾಮನ ಪಾತ್ರ ಮಾಡ್ತಾರೆ ಎನ್ನುವ ಸುದ್ದಿ ಹೊರಬಂದ ಬಳಿಕ ಸೀತೆಯಾಗಿ ಆಲಿಯಾ ಭಟ್ ಕಾಣಿಸಿಕೊಳ್ತಾರೆ ಎನ್ನಲಾಯ್ತು. ಆದರೆ ಡೇಟ್ ಸಮಸ್ಯೆಯಿಂದ ಆಲಿಯಾ ಈ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ. ಬಳಿಕ ಸೌತ್ ಬ್ಯೂಟಿ ಸಾಯಿ ಪಲ್ಲವಿ (Sai Pallavi) ಸೀತೆಯ ಪಾತ್ರ ಮಾಡಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಇದಾದ ಬಳಿಕ ಇದೀಗ ಶ್ರೀದೇವಿ ಮಗಳಿಗೆ ಸೀತೆಯಾಗುವ ಚಾನ್ಸ್ ಸಿಕ್ಕಿದೆ ಎನ್ನಲಾಗ್ತಿದೆ.

    ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ವಿ ಇದೀಗ ‘ರಾಮಾಯಣ’ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ರಾ ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಅಪ್‌ಡೇಟ್ ಹೊರಬೀಳಲಿದೆ.

  • ಇಂದಿನಿಂದ ಡಿಡಿಯಲ್ಲಿ ರಾಮಾಯಣ ಪ್ರಸಾರ

    ಇಂದಿನಿಂದ ಡಿಡಿಯಲ್ಲಿ ರಾಮಾಯಣ ಪ್ರಸಾರ

    ಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಬೆನ್ನಲ್ಲೇ ದೂರದರ್ಶನವು ಮತ್ತೆ ರಾಮಾಯಣ (Ramayana) ಧಾರಾವಾಹಿಯನ್ನು ಪ್ರಸಾರ ಮಾಡಲು ಹೊರಟಿದೆ. ಇಂದಿನಿಂದ ಸಂಜೆ 6 ಗಂಟೆಗೆ ಮತ್ತು ಮರುದಿನ ಮಧ್ಯಾಹ್ನ 12ಕ್ಕೆ ಮರು ಪ್ರಸಾರ ವಾಗಲಿದೆ. ಪ್ರತಿ ದಿನವೂ ವೀಕ್ಷಕರು ರಾಮಾಯಣವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

    ರಾಮಾಯಣ. ಹೀಗಂದರೆ ಸಾಕು ಈಗಲೂ ಆ ದಿನಗಳು ನೆನಪಾಗುತ್ತವೆ. ಸುಮಾರು ಮೂವತ್ತಾರು ವರ್ಷಗಳ ಹಿಂದೆ ಭಾರತಿಯರ ಪಾಲಿಗೆ ದೈವಸ್ವರೂಪಿಯಂತೆ ಕಾಣಿಸಿದ ರಮಾನಂದ್ ಸಾಗರ್ ನಿರ್ದೇಶನದ ಆ ಮಹಾ ಧಾರಾವಾಹಿ (Serial). 1987ರಲ್ಲಿ ಅಂದಿನ ದೂರದರ್ಶನದಲ್ಲಿ ಪ್ರತಿ ಭಾನುವಾರ ಬೆಳಿಗ್ಗೆ ಪ್ರಸಾರವಾಗುತ್ತಿತ್ತು. ಆಗ ಈಗಿನಷ್ಟು ಟಿವಿ ಮತ್ತು ಚಾನೆಲ್‌ಗಳು ಇರಲಿಲ್ಲ. ಒಂದು ಮನೆಯಲ್ಲಿ ಟಿವಿ ಇದ್ದರೆ ಅವರು ಶ್ರೀಮಂತರು ಎಂದು ಭಾವಿಸುವ ದಿನಮಾನ ಅವು. ಕಪ್ಪು ಬಿಳುಪು ಹಾಗೂ ಕಲರ್ ಟಿವಿಗಳಲ್ಲಿ ರಾಮಾಯಣ ನೋಡಲು ಜನರು ಮುಗಿ ಬೀಳುತ್ತಿದ್ದರು. ಬರೀ ಕತೆ ನೋಡಲು ಅಲ್ಲ, ಅಲ್ಲಿಯ ಶ್ರೀರಾಮಚಂದ್ರ ಹಾಗೂ ಸೀತಾದೇವಿಯನ್ನು ಕಣ್ಣು ತುಂಬಿಕೊಂಡು ಕೈ ಮುಗಿಯುತ್ತಿದ್ದರು.

    ಭಾನುವಾರ ಬೆಳಿಗ್ಗೆ ಹತ್ತು ಗಂಟಗೆ ದೇಶದ ಬೀದಿ ಬೀದಿಗಳು ಭಣಗುಡುತ್ತಿದ್ದವು. ಮುಂಜಾನೆದ್ದು ಹೆಂಗಸರು ಮನೆ ಮಂದಿಗೆಲ್ಲ ತಿಂಡಿ ವ್ಯವಸ್ಥೆ ಮಾಡಿ, ಒಂಬತ್ತೂವರೆಗೆ ಟಿವಿ ಮುಂದೆ ಹಾಜರಾಗುತ್ತಿದ್ದರು. ಕೆಲವರು ಟಿವಿ ಪರದೆಗೆ ಪೂಜೆ ಮಾಡುತ್ತಿದ್ದರು. ಹೂವಿನ ಹಾರ ಹಾಕಿ, ದೀಪ ಬೆಳಗಿ, ಆರತಿ ಎತ್ತಿ ಶ್ರೀರಾಮ ಹಾಗೂ ಸೀತಾದೇವಿಯನ್ನು ಬರಮಾಡಿಕೊಳ್ಳುತ್ತಿದ್ದರು. ಅದು ಆ ರಾಮಾಯಣಕ್ಕೆ ಇದ್ದ ಗತ್ತು ಹಾಗೂ ಗೌರವ. ರಾಮಾಯಣ ಪ್ರಸಾರ ಆಗುತ್ತಿದ್ದ ಹೊತ್ತಿಗೆ ವಿದ್ಯುತ್ ಕೂಡ ತೆಗೆಯುತ್ತಿರಲಿಲ್ಲ. ಅಕಸ್ಮಾತ್ ತೆಗೆದರೆ ಮುಗಿಯಿತು. ಕೆಲವು ಕಡೆ ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ ಹಾಕಿ ಗಲಾಟೆ ಕೂಡ ನಡೆಯುತ್ತಿದ್ದವು. ರಾಮಾಯಣ ಅಷ್ಟೊಂದು ಮೋಡಿ ಮಾಡಿತ್ತು.

    ರಮಾನಂದ್ ಸಾಗರ್ ಅದ್ಯಾವ ಗಳಿಗೆಯಲ್ಲಿ ರಾಮಾಯಣವನ್ನು ನಿರ್ದೇಶಿಸಲು ಮನಸು ಮಾಡಿದರೋ ಏನೊ? ಅವರು ಅಲ್ಲಿವರೆಗೆ ಮಾಡಿದ ಸಿನಿಮಾ ಕೆಲಸಗಳು ಮರೆತು ಹೋದವು. ರಾಮಾಯಣ ಮಾತ್ರ ಅವರಿಗೆ ಕೊನೇವರೆಗೂ ದೇಶವ್ಯಾಪಿ ಮೆರವಣಿಗೆ ಮಾಡಿದವು. ಅದಕ್ಕೆ ಕಾರಣ ಅವರು ಕತೆಯನ್ನು ಹೇಳಿದ ರೀತಿ ಮಾತ್ರ ಅಲ್ಲ, ಪ್ರತಿಯೊಂದು ಪಾತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದ ಕಲಾವಿದರೂ ಕಾರಣ. ರಾಮನಾಗಿ ಅರುಣ್ ಗೋವಿಲ್, ಸೀತೆಯಾಗಿ ದೀಪಿಕಾ ಚಿಕ್ಲಿಯಾ, ರಾವಣನಾಗಿ ಅರವಿಂದ್ ತ್ರಿವೇದಿ ಹಾಗೂ ಹನುಮಂತನಾಗಿ ಧಾರಾಸಿಂಗ್ ಜೀವ ತುಂಬಿದ್ದರು. ಪೌರಾಣಿಕ ಪಾತ್ರಗಳು ಹೀಗೆ ಇದ್ದಿರಬೇಕೆನ್ನುವಷ್ಟು ಭಕ್ತಿ ಮೂಡಿಸಿದ್ದವು.

    ಮೂವತ್ತಾರು ವರ್ಷ. ಆಗ ಈಗಿನಷ್ಟು ತಂತ್ರಜ್ಞಾನ ಬೆಳೆದಿರಲಿಲ್ಲ. ಗ್ರೀನ್ ಮ್ಯಾಟ್, ವಿಎಫ್‌ಎಕ್ಸ್ ಇತ್ಯಾದಿ ಹೆಸರುಗಳೇ ಗೊತ್ತಿರಲಿಲ್ಲ. ಎಲ್ಲವನ್ನೂ ಕ್ಯಾಮೆರಾ ಟೆಕ್ನಿಕ್‌ನಿಂದ ಮಾಡಬೇಕಿತ್ತು. ಅಂಥ ಕ್ಯಾಮೆರಾಮನ್ ಕೂಡ ಇದ್ದರು. ರಾಮಾಯಣದಲ್ಲಿ ಎಂತೆಂಥ ಪವಾಡ ಸದೃಶ್ಯ ದೃಶ್ಯಗಳು ಬರುತ್ತವೆಂದು ಎಲ್ಲರಿಗೂ ಗೊತ್ತು. ಯುದ್ಧ, ಕಲ್ಲಿನಿಂದ ಸೇತುವೆ ಕಟ್ಟುವುದು, ಹನುಮಂತ ಬೆಟ್ಟವನ್ನು ಹೊತ್ತುಕೊಳ್ಳುವುದು, ಲಂಕಾ ದಹನ, ವಾನರ ಸೇನೆಯ ಕದನ ಪ್ರತಿಯೊಂದಕ್ಕೂ ಕ್ಯಾಮೆರಾ ಟೆಕ್ನಿಕ್‌ನಿಂದ ಮಾಡಿದ್ದರು ರಮಾನಂದ್ ಸಾಗರ್. ಈಗ ಈ ವೈಭವನ್ನು ಮತ್ತೆ ಕಣ್ತುಂಬಿಕೊಳ್ಳಬಹುದು.

  • ರಾಮಾಯಣ ಚಿತ್ರದಲ್ಲಿ ರಾವಣನ ಸಹೋದರನಾಗಿ ವಿಜಯ್ ಸೇತುಪತಿ

    ರಾಮಾಯಣ ಚಿತ್ರದಲ್ಲಿ ರಾವಣನ ಸಹೋದರನಾಗಿ ವಿಜಯ್ ಸೇತುಪತಿ

    ಬಾಲಿವುಡ್ ನಲ್ಲಿ ನಿರ್ಮಾಣವಾಗುತ್ತಿರುವ ರಾಮಾಯಣ ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ನಿರ್ದೇಶಕ ನಿತಿಶ್ ತಿವಾರಿ ದಕ್ಷಿಣದ ಹೀರೋಗಳ ಬಗ್ಗೆ ಒಲವು ತೋರಿ, ಇಲ್ಲಿನ ಕಲಾವಿದರನ್ನು ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಈ ಸಿನಿಮಾದಲ್ಲಿ ರಾವಣನ ಸಹೋದರನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    ರಾವಣನ ಸಹೋದರನಾಗಿ ವಿಜಯ್ ಸೇತುಪತಿ ನಟಿಸಿದರೆ, ಈ ಹಿಂದೆ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

    ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

  • ರಾಮಮಂದಿರ ಉದ್ಘಾಟನೆ ದಿನ ‘ರಾಮಾಯಣ’ ಪ್ರಸಾರಕ್ಕೆ ಸಿದ್ಧತೆ

    ರಾಮಮಂದಿರ ಉದ್ಘಾಟನೆ ದಿನ ‘ರಾಮಾಯಣ’ ಪ್ರಸಾರಕ್ಕೆ ಸಿದ್ಧತೆ

    ಲವು ವರ್ಷಗಳ ಕಾಲ ಧಾರಾವಾಹಿಯಾಗಿ ಮೂಡಿ ಬಂದಿರುವ ರಾಮಾಯಣವನ್ನು (Ramayana) ಮತ್ತೆ ಮರುಪ್ರಸಾರ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜನವರಿ 22 ರಂದು ಬೆಳಗ್ಗೆ 9 ರಿಂದ ಸಂಜೆ 7.30ರವರೆಗೆ ಇಡೀ ದಿನ ಸೋನಿ ಟಿವಿಯಲ್ಲಿ ರಾಮಾಯಣ ಪ್ರಸಾರ ಮಾಡಲಾಗುವುದು ಎಂದು ವಾಹಿನಿ ಹೇಳಿಕೊಂಡಿದೆ.

    ಒಂದು ಕಡೆ ರಾಮಾಯಣ ಕಿರುತೆರೆಯಲ್ಲಿ ಮೂಡಿ ಬರುತ್ತಿದ್ದರೆ, ಮತ್ತೊಂದು ಕಡೆ ರಾಮಮಂದಿರ (Ram Mandir) ಉದ್ಘಾಟನಾ ಸಮಾರಂಭವನ್ನು ಬೆಳ್ಳಿ ತೆರೆಯ ಮೇಲೂ ವೀಕ್ಷಿಸಬಹುದಾಗಿದೆ. ಮಲ್ಟಿಪ್ಲಕ್ಸ್ ಗಳಲ್ಲಿ ನೂರು ರೂಪಾಯಿ ಟಿಕೆಟ್ ನೀಡಿ ದೊಡ್ಡ ಪರದೆಯಲ್ಲಿ ಪ್ರದರ್ಶನ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

    ರಿಷಬ್ ಗೆ ಆಹ್ವಾನ

    ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನೂ ಆಹ್ವಾನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತು ಅವರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡಿರಲಿಲ್ಲ. ಇದೀಗ ರಿಷಬ್ ಶೆಟ್ಟಿ ಅವರೇ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ಅವಕಾಶಕ್ಕಾಗಿ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

    ರಿಷಬ್ ಶೆಟ್ಟಿ ಜೊತೆ ಕನ್ನಡದ ಇನ್ನೂ ಅನೇಕ ನಟರಿಗೂ ಆಹ್ವಾನ ನೀಡಲಾಗಿದೆ.  ಟ ಹಾಗೂ ರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ (Nikhil Kumar) ಅವರಿಗೆ ರಾಮಮಂದಿರ ಉದ್ಘಾಟನೆಗೆ ಬರುವಂತೆ ಆಹ್ವಾನ ನೀಡಲಾಗಿದೆ. ಉದ್ಘಾಟನೆಗೆ ಕುಟುಂಬ ಸಮೇತ ಬರುವಂತೆ, ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ನೀಡಲಾಗಿದೆ. ಯಶ್ ಅವರಿಗೂ ಬರುವಂತೆ ಆಹ್ವಾನ ನೀಡಲಾಗಿದೆಯಂತೆ. ಕನ್ನಡ ಸಿನಿಮಾ ರಂಗದ ಬೆರಳೆಣಿಕೆಯ ಕಲಾವಿದರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ.

  • ರಾಮನ ಪ್ರಾಣಪ್ರತಿಷ್ಠೆಗೆ ದಿನಗಣನೆ- ಸೀತಾ ಮಾತೆಯ ರಕ್ಷಣೆಗೆ ಜಟಾಯು ಹೋರಾಡಿದ್ದ ಸ್ಥಳಕ್ಕೆ ಮೋದಿ ಭೇಟಿ

    ರಾಮನ ಪ್ರಾಣಪ್ರತಿಷ್ಠೆಗೆ ದಿನಗಣನೆ- ಸೀತಾ ಮಾತೆಯ ರಕ್ಷಣೆಗೆ ಜಟಾಯು ಹೋರಾಡಿದ್ದ ಸ್ಥಳಕ್ಕೆ ಮೋದಿ ಭೇಟಿ

    ಅಮರಾವತಿ: ಅಯೋಧ್ಯೆಯಲ್ಲಿ (Ayodhya Ram Mandir) ಬಾಲರಾಮನ ಪ್ರಾಣಪ್ರತಿಷ್ಠೆಯ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಮಾಯಣದಲ್ಲಿ (Ramayana) ಮಹತ್ವದ ಸ್ಥಾನ ಪಡೆದಿರುವ ಆಂಧ್ರಪ್ರದೇಶದ (Andhra Pradesh) ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ (Lepakshi Veerbhadra Temple) ಭೇಟಿ ನೀಡಿದ್ದಾರೆ.

    ಸೀತಾ ಮಾತೆಯನ್ನು ರಾವಣ ಅಪಹರಿಸುವಾಗ ಜಟಾಯು (Jatayu) ಇದೇ ಜಾಗದಲ್ಲಿ ಆತನನ್ನು ಬೆನ್ನಟ್ಟಿ ಹೋರಾಟ ನಡೆಸಿತ್ತು. ಬಳಿಕ ರಾವಣನ ದಾಳಿಯಿಂದ ನೆಲಕ್ಕೆ ಬಿದ್ದು ಸಾಯುವ ಸ್ಥಿತಿಯಲ್ಲಿದ್ದ ಜಟಾಯು ಸೀತಾ ದೇವಿಯನ್ನು ರಾವಣ ಅಪಹರಿಸಿದ ವಿಚಾರವನ್ನು ಶ್ರೀರಾಮನಿಗೆ ತಿಳಿಸಿ ಪ್ರಾಣ ಬಿಟ್ಟಿತ್ತು. ಬಳಿಕ ರಾಮ ಜಟಾಯುವಿನ ಅಂತ್ಯಕ್ರಿಯೆ ನಡೆಸಿ ಮೋಕ್ಷ ಕಲ್ಪಿಸಿದ್ದ ಎಂಬ ಪ್ರತೀತಿ ಇದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ; ಇಂದಿನಿಂದ ಪೂಜಾಕಾರ್ಯ ಆರಂಭ – ಯಾವ ದಿನ ಏನು ಕಾರ್ಯಕ್ರಮ?

    ಇನ್ನೂ ಬುಧವಾರ, ಮೋದಿಯವರು ಕೇರಳದ ಗುರುವಾಯೂರು ಮತ್ತು ತ್ರಿಪ್ರಯಾರ್‍ನ ಶ್ರೀ ರಾಮಸ್ವಾಮಿ ದೇವಾಲಯಗಳಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

    ಜ.22 ರಂದು ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಅಯೋಧ್ಯೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಇನ್ನೂ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿರುವ ವಿಗ್ರಹವನ್ನು ಪ್ರಾಣಪ್ರತಿಷ್ಠೆಗೆ ಆಯ್ಕೆ ಮಾಡಲಾಗಿದೆ. ಈ ಸಮಾರಂಭಕ್ಕೆ ಕೋಟ್ಯಂತರ ರಾಮನ ಭಕ್ತರು ಉತ್ಸಾಹದಿಂದ ಕಾದಿದ್ದಾರೆ. ಈ ಸಮಯದಲ್ಲಿ ದೇಶ ವಿದೇಶಗಳಿಂದ ಲಕ್ಷಾಂತರ ಜನ ಅಯೋಧ್ಯೆಗೆ ತೆರಳುವ ಸಾಧ್ಯತೆ ಇದ್ದು, ಉತ್ತರ ಪ್ರದೇಶ ಸರ್ಕಾರ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ದೇವಾಲಯ ಹಾಗೂ ಅಯೋಧ್ಯೆ ನಗರದ ಸುತ್ತಮುತ್ತ ಸೂಕ್ತ ಭದ್ರತೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರದಲ್ಲಿ ಚಿನ್ನದ ಬಾಗಿಲು ಅಳವಡಿಕೆ ಕಾರ್ಯ ಪೂರ್ಣ