Tag: Rambhapuri Shri

  • ಗ್ಯಾರಂಟಿಗೆ ಮುಕ್ಕಾಲು ಭಾಗ ಹಣ ಖರ್ಚು ಮಾಡಿದ್ರೆ ಆಡಳಿತ ಕಷ್ಟ: ರಂಭಾಪುರಿ ಶ್ರೀ ಅಸಮಾಧಾನ

    ಗ್ಯಾರಂಟಿಗೆ ಮುಕ್ಕಾಲು ಭಾಗ ಹಣ ಖರ್ಚು ಮಾಡಿದ್ರೆ ಆಡಳಿತ ಕಷ್ಟ: ರಂಭಾಪುರಿ ಶ್ರೀ ಅಸಮಾಧಾನ

    ಚಿಕ್ಕಮಗಳೂರು: ಗ್ಯಾರಂಟಿಗೆ (Guarantee Scheme) ಮುಕ್ಕಾಲು ಭಾಗ ಹಣ ಖರ್ಚು ಮಾಡಿದ್ರೆ ಆಡಳಿತ ನಡೆಸುವುದು ಕಷ್ಟ ಎಂದು ರಂಭಾಪುರಿ ಶ್ರೀಗಳು (Rambhapuri Shri) ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಬಾಳೆಹೊನ್ನೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ರಾಜ್ಯ ಸರ್ಕಾರ ಹಿಂದಿನ ಸರ್ಕಾರದ ಹಲವು ಯೋಜನೆಗಳನ್ನು ತಡೆಹಿಡಿದಿದೆ. ಬಜೆಟ್‍ನಲ್ಲೂ ಮಠ ಮಂದಿರಗಳಿಗೆ ವಿಶೇಷವಾದ ಅನುದಾನ ಕೊಟ್ಟಿಲ್ಲ. ಆಡಳಿತ ಪಕ್ಷದ ಶಾಸಕರು ಕೂಡ ಅಭಿವೃದ್ಧಿಗೆ ಹಣ ಇಲ್ಲದೆ ಕೊರಗುತ್ತಿದ್ದಾರೆ. ಜನರ ಬಳಿ ಹೋಗುವುದು ಕಷ್ಟವಾಗಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಾರೆ ಎಂದಿದ್ದಾರೆ.

    ಸೋಮವಾರ ನಡೆದ ಕಾಂಗ್ರೆಸ್ ಸಭೆಯಲ್ಲಿ ಅನುದಾನದ ಬಗ್ಗೆ ಚರ್ಚೆ ಆಗಿರಬಹುದು. ಜಾಸ್ತಿ ಅಲ್ಲದಿದ್ದರೂ. ಆಯಾ ಕ್ಷೇತ್ರದ ಶಾಸಕರಿಗೆ ವಿಶೇಷ ಅನುದಾನ ಕೊಡಬಹುದು ಎನ್ನುವ ನಂಬಿಕೆ ಇದೆ ಎಂದಿದ್ದಾರೆ.

    ರಾಜ್ಯದಲ್ಲಿ ವೀರಶೈವ – ಲಿಂಗಾಯುತರ ಸಭೆ ವಿಜಯೇಂದ್ರ ಅಭಿಮಾನಿಗಳು ಮಾಡುತ್ತಿರಬಹುದು. ವಿಜಯೇಂದ್ರ ಅವರೇ ಮಾಡಿಸುತ್ತಿದ್ದಾರೆ ಎನ್ನುವ ಭಾವನೆ ಇಲ್ಲ. ಅಭಿಮಾನಿಗಳು ಅಭಿಮಾನದಿಂದ ಮಾಡಿರಬಹುದು. ಒಳ್ಳೆಯ ನಾಯಕತ್ವ, ರಾಜ್ಯದ ಹಿತ ಚಿಂತನೆ ಕಾಪಾಡಲು ಜನರ ಸಹಕಾರ ಅವಶ್ಯಕ. ವಿಜಯೇಂದ್ರ ವಿಚಾರದಲ್ಲೂ ಒಳ್ಳೆಯದು ಮಾಡಿದಾಗ ಹೆಮ್ಮೆಯಿಂದ ಹೇಳುತ್ತೇವೆ. ಅಲ್ಲದ ಮಾರ್ಗ ತುಳಿದಾಗ ತಿದ್ದಿಕೊಳ್ಳಲು ಸೂಚನೆ ನೀಡುವುದಕ್ಕೂ ಹಿಂದೇಟು ಹಾಕಲ್ಲ ಎಂದಿದ್ದಾರೆ.

    ವಿಜಯೇಂದ್ರ ಅವರ ರಾಜ್ಯಾಧ್ಯಕ್ಷ ಸ್ಥಾನದ ಅಪಸ್ವರಕ್ಕೆ ರಾಷ್ಟ್ರ-ರಾಜ್ಯ ನಾಯಕರು ಕೂತು ಮಾತಾಡೋದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

  • ರಾಜಕಾರಣಿಗಳು ಧರ್ಮ, ಜಾತಿಗಳ ಮಧ್ಯೆ ಸಂಘರ್ಷ ಹುಟ್ಟುಹಾಕುತ್ತಿದ್ದಾರೆ: ರಂಭಾಪುರಿ ಶ್ರೀ

    ರಾಜಕಾರಣಿಗಳು ಧರ್ಮ, ಜಾತಿಗಳ ಮಧ್ಯೆ ಸಂಘರ್ಷ ಹುಟ್ಟುಹಾಕುತ್ತಿದ್ದಾರೆ: ರಂಭಾಪುರಿ ಶ್ರೀ

    ಬೆಳಗಾವಿ: ಧರ್ಮ ಮತ್ತು ಜಾತಿಗಳ (Religion And Caste)  ಮಧ್ಯೆ ವ್ಯಾಪಕ ಸಂಘರ್ಷ ಹುಟ್ಟು ಹಾಕುವಂತ ಕೆಲಸವನ್ನು ಕೆಲ ರಾಜಕಾರಣಿಗಳು (Politicians) ಮಾಡುತ್ತಿರುವುದು ವಿಪರ್ಯಾಸದ ಸಂಗತಿ ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

    ಬೈಲಹೊಂಗಲ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಕೀಯ ಧುರೀಣರು ಸರ್ವ ಜನಾಂಗದ ಶ್ರೇಯೋಭಿವೃದ್ಧಿಗೆ ಗಮನ ಹರಿಸದೇ ಶಾಂತಿ ಮತ್ತು ಸೌಹಾರ್ದತೆ ಬೆಳೆಸದೇ ಅಧಿಕಾರದ ಗದ್ದುಗೆಗಾಗಿ ಜಾತಿಯಲ್ಲಿ ವಿಷ ಬೀಜ ಬಿತ್ತುತ್ತಿದ್ದಾರೆ. ಜನರ ಭಾವನೆಗಳನ್ನು ಕೆರಳಿಸುವಂತ ಕೆಲಸ ಮಾಡುತ್ತಿದ್ದಾರೆ. ಇಂತಹ ಕೃತ್ಯವನ್ನು ಯಾರೂ ಮಾಡಬಾರದೆಂಬ ಸಂದೇಶ ನಾವು ನೀಡಲು ಇಚ್ಚಿಸುತ್ತೇವೆ ಎಂದರು. ಇದನ್ನೂ ಓದಿ: ರವಿ.ಡಿ ಚನ್ನಣ್ಣನವರ್ ಸೇರಿ 11 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ಭಾರತೀಯ ಉತ್ಕೃಷ್ಟ ಸಂಸ್ಕೃತಿಯಲ್ಲಿ ಎಲ್ಲರೂ ಒಂದಾಗಿ ಬಾಳಬೇಕು. ಶಾಂತಿ, ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಬೇಕು. ಪ್ರತಿಯೊಬ್ಬರೂ ತಮ್ಮ, ತಮ್ಮ ಧರ್ಮಗಳಲ್ಲಿ ನಿಷ್ಠೆ ಹೊಂದಿರಬೇಕು. ಆದರೆ, ಪರಧರ್ಮದ ಬಗ್ಗೆ ಸಂಹಿಷ್ಣತಾ ಮನೋಭಾವ ಬೆಳೆಸಿಕೊಂಡು ಬಂದಾಗ ಮಾತ್ರ ಧರ್ಮ, ಜಾತಿಗಳ ಮಧ್ಯೆ ಯಾವುದೇ ಸಂಘರ್ಷ ಉಂಟಾಗುವುದಿಲ್ಲ. ಪ್ರತಿಯೊಬ್ಬರಲ್ಲಿ ಸ್ವಾಭಿಮಾನ ಇರಬೇಕು. ಸ್ವಾಭಿಮಾನದ ಕೊರತೆಯಿಂದಾಗಿ ಎಲ್ಲ ರಂಗಗಳಲ್ಲಿ ಅನೇಕ ಸಂಘರ್ಷ ಉಂಟಾಗುತ್ತಿವೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ಪ್ರತಾಪ್‌ಸಿಂಹನಿಗೆ ಬಸ್‌ನಿಲ್ದಾಣದ ಗುಂಬಜ್‌ಗಳೂ ಮುಸ್ಲಿಮರ ಮಸೀದಿಯೆಂತೆ ಕಾಣ್ತಿದೆ – ಸೇಠ್ ತಿರುಗೇಟು

    ಕಾರ್ಯಕ್ರಮದಲ್ಲಿ ಸಂಗೊಳ್ಳಿ ಗುರುಲಿಂಗ ಸ್ವಾಮೀಜಿ, ಶಿರಕೊಳ್ಳ ಗುರುಸಿದ್ದೇಶ್ವರ ಸ್ವಾಮೀಜಿ, ಸುಳ್ಳದ ಶಿವಸಿದ್ಧರಾಮೇಶ್ವರ ಸ್ವಾಮೀಜಿ ಸೇರಿ ಅನೇಕರು ಇದ್ದರು.

    Live Tv
    [brid partner=56869869 player=32851 video=960834 autoplay=true]

  • ಲಂಗು ಲಗಾಮು ಇಲ್ಲದೆ ಮಾತನಾಡಿ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮೆ: ರಂಭಾಪುರಿ ಶ್ರೀ

    ಲಂಗು ಲಗಾಮು ಇಲ್ಲದೆ ಮಾತನಾಡಿ ಚುನಾವಣೆ ಗೆಲ್ಲುತ್ತೇವೆ ಎಂಬುದು ಭ್ರಮೆ: ರಂಭಾಪುರಿ ಶ್ರೀ

    -ಉಪಚುನಾವಣೆಯಲ್ಲಿ ರಾಜಕೀಯ ನಾಯಕರ ಬೈದಾಟಕ್ಕೆ ಅಸಮಾಧಾನ

    ಯಾದಗಿರಿ: ಎಲ್ಲಾ ರಾಜಕೀಯ ನಾಯಕರು ಪ್ರಚಾರದ ಬರದಲ್ಲಿ ಮಾಡುತ್ತಿರುವ ಪದ ಬಳಕೆ ಯಾವುದಕ್ಕೂ ಪ್ರಯೋಜನ ಇಲ್ಲ. ಎಲ್ಲಾ ರಾಜಕೀಯ ಮುಖಂಡರು ವಿಷಯವನ್ನು ಆಧರಿಸಿ ಟೀಕೆ ಟಿಪ್ಪಣಿ ಮಾಡಿದ್ರೆ ಜನರು ಬೆಲೆ ಕೊಡುತ್ತಾರೆ ಎಂದು ಉಪಚುನಾವಣೆ ವೇಳೆ ರಾಜಕೀಯ ನಾಯಕರ ಕೆಸರೆರಚಾಟ ನಡೆಸುತ್ತಿದ್ದಾರೆ ಈ ಮೂಲಕ ಜಯಗಳಿಸುತ್ತೇವೆ ಎಂಬುದು ಭ್ರಮೆ ಎಂದು ರಂಭಾಪುರಿ ಶ್ರೀ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಯಾದಗಿರಿಯಲ್ಲಿ ಮಾತನಾಡಿದ ಅವರು, ಯಾವ ಪ್ರಣಾಳಿಕೆಯು ಇಲ್ಲದೆ, ವಿಷಯವೂ ಇಲ್ಲದೆ ಧರ್ಮದ ಲಾಂಚಣ ಹಿಡಿಯಲಾಗುತ್ತಿದೆ, ಧರ್ಮದ ಆಚರಣೆ ಇಟ್ಟುಕೊಂಡು ಲಂಗು ಲಗಾಮು ಇಲ್ಲದೆ ಮಾತನಾಡುವದು ನೋಡುಗರಿಗೆ ಮುಜುಗರ ಉಂಟು ಮಾಡಿದೆ, ಇಂತಹ ಮಾತುಗಳಿಂದ ಗೆಲ್ಲುತ್ತೇವೆ ಎಂಬುದು ಭ್ರಮೆ ಇದು ಸಂಪೂರ್ಣ ಸುಳ್ಳು ಇದನ್ನು ಮೊದಲು ಅರ್ಥ ಮಾಡಿಕೊಳ್ಳಿ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಹಿರಂಗ ಪ್ರಚಾರ ಅಂತ್ಯ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳಿಂದ ಮನೆ-ಮನೆ ಕ್ಯಾಂಪೇನ್

    ಯಾವುದೆ ರಾಜಕಾರಣಿ ಇರಲಿ, ಧರ್ಮದ ವ್ಯಕ್ತಿ ಇರಲಿ ಭಾರತೀಯ ಸಂಸ್ಕೃತಿಯನ್ನು ಸಮಾನವಾಗಿ ಕಾಣುವ ಭಾವನೆ ಇರಬೇಕು, ವ್ಯಕ್ತಿಯನ್ನು ಕುರಿತು ಟೀಕೆ ಟಿಪ್ಪಣಿ ಮಾಡಬಾರದು, ಅವರು ಆಡುವಂತಹ ಮಾತಿನಲ್ಲಿ ಸುಧಾರಣೆ ಆದರೆ ಒಳ್ಳೆಯದು. ಇಲ್ಲದಿದ್ದಲ್ಲಿ ಅದಕ್ಕೆ ತಕ್ಕ ಪ್ರಾಯಶ್ಚಿತ್ತ ಆಗುತ್ತದೆ ಎಂದರು. ಇದನ್ನೂ ಓದಿ: ಹಾನಗಲ್‍ನಲ್ಲಿ ಹರೀತಿದ್ಯಾ ಹಣದ ಹೊಳೆ..? – ಸಿದ್ದರಾಮಯ್ಯ, ಡಿಕೆಶಿ ಬಳಿಕ ಹೆಚ್‍ಡಿಕೆ ಆರೋಪ

  • ರಂಭಾಪುರಿ ಶ್ರೀಗಳ ಭವಿಷ್ಯಕ್ಕೆ ಟಾಂಗ್ ನೀಡಿದ ಸಚಿವ ಶ್ರೀನಿವಾಸ್

    ರಂಭಾಪುರಿ ಶ್ರೀಗಳ ಭವಿಷ್ಯಕ್ಕೆ ಟಾಂಗ್ ನೀಡಿದ ಸಚಿವ ಶ್ರೀನಿವಾಸ್

    ತುಮಕೂರು: ಮಠಾದೀಶರುಗಳು ಒಂದು ವ್ಯಕ್ತಿ, ಸರ್ಕಾರದ ಹಣೆಬರಹ ಬರೆಯು ಹಾಗಿದ್ದರೆ ಅವರೇ ಎಲ್ಲರನ್ನೂ ಗೆಲ್ಲಿಸುತ್ತಿದ್ದರು. ರಾಜಕಾರಣಿಗಳು ಹಳ್ಳಿ ಹಳ್ಳಿ ಸುತ್ತಿ ಜನರ ಕಾಲಿಗೆ ಬೀಳುವ ಪ್ರಮೇಯ ಬರುತ್ತಿರಲಿಲ್ಲ ಎಂದು ರಂಭಾಪುರಿ ಶ್ರೀಗಳಿಗೆ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಟಾಂಗ್ ಕೊಟ್ಟಿದ್ದಾರೆ.

    ಜಿಲ್ಲೆ ಗುಬ್ಬಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸ್ವಾಮೀಜಿಗಳು ಭವಿಷ್ಯ ನುಡಿದಂತೆ ಆಗಿದ್ದರೆ, ಅವರು ನೇರವಾಗಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡುತ್ತಿದ್ದರು. ನನಗೆ ಜಾತಕ, ಭವಿಷ್ಯದ ಬಗ್ಗೆ ನಂಬಿಕೆ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ರಂಭಾಪುರಿ ಶ್ರೀಗಳು ನುಡಿದಿದ್ದ ಭವಿಷ್ಯವೇನು?

    ನಾವು ಐದು ವರ್ಷ ಪೂರೈಸಲು ಪ್ರಯತ್ನ ಪಡುತ್ತಿದ್ದೇವೆ. ಕೊನೆ ತನಕ ತಲುಪುತ್ತೇವೆ ಎನ್ನುವುದು ಯಾರಿಗೆ ಗೊತ್ತು. ಸರ್ಕಾರದ ಭವಿಷ್ಯ ಮುಂದಿನ ದಿನದಲ್ಲಿ ಗೊತ್ತಾಗುತ್ತದೆ. ನಾವೆಲ್ಲರೂ ದಡ ಸೇರುತ್ತೇವೆ ಎಂಬ ಭರವಸೆಯಿಂದ ಹೊರಟಿದ್ದೇವೆ, ಮೇಲೆ ಭಗವಂತ ಹೇಗೆ ಬರೆದಿದ್ದಾನೋ ಹಾಗಾಗುತ್ತದೆ ಎನ್ನುವ ಮೂಲಕ ಸರ್ಕಾರದ ಸ್ಥಿರತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದರು.

  • ಅಕ್ಟೋಬರ್ 2ನೇ ವಾರದಲ್ಲಿ ಯಡಿಯೂರಪ್ಪಗೆ ಮಹಾಯೋಗ -ಭವಿಷ್ಯ ನುಡಿದ ರಂಭಾಪುರಿ ಶ್ರೀಗಳು

    ಅಕ್ಟೋಬರ್ 2ನೇ ವಾರದಲ್ಲಿ ಯಡಿಯೂರಪ್ಪಗೆ ಮಹಾಯೋಗ -ಭವಿಷ್ಯ ನುಡಿದ ರಂಭಾಪುರಿ ಶ್ರೀಗಳು

    ತುಮಕೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರ ಜಾತಕದಲ್ಲಿ ಅಕ್ಟೋಬರ್ ಎರಡನೇ ವಾರದಲ್ಲಿ ಮಹಾಯೋಗ ಇದೆ ಅಂತ ರಂಭಾಪುರಿ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

    ನೊಣವಿನಕೆರೆಯ ಕಾಡುಸಿದ್ದೇಶ್ವರ ಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಈ ಭವಿಷ್ಯವಾಣಿ ನುಡಿದಿದ್ದಾರೆ. ಅಕ್ಟೋಬರ್ ಎರಡನೇ ವಾರದಲ್ಲಿ ಯಡಿಯೂರಪ್ಪರ ಜಾತಕದಲ್ಲಿ ಮಹಾಯೋಗ ಇದೆ. ಈ ಮಹಾಯೋಗದ ಪ್ರಕಾರ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಿ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

    ಅಕ್ಟೋಬರ್ ಎರಡನೇ ವಾರದ ಅಪೂರ್ವ ಘಟ್ಟದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ಯೋಗ ಇದೆ ಎಂದರು. ಶ್ರೀಗಳಿಂದ ಹಿತನುಡಿ ಹೊರಬರುತಿದ್ದಂತೆ ಸಮಾರಂಭದಲ್ಲಿ ನೆರೆದವರು ಚಪ್ಪಾಳೆ ಸುರಿಮಳೆಗೈದಿದ್ದಾರೆ.