Tag: Ramenahalli Jagannath

  • ಸೆಟ್ಟೇರಿತು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ: ಅರ್ಚನಾ ನಾಯಕಿ

    ಸೆಟ್ಟೇರಿತು ‘ತೀರ್ಥರೂಪ ತಂದೆಯವರಿಗೆ’ ಸಿನಿಮಾ: ಅರ್ಚನಾ ನಾಯಕಿ

    ಹೊಂದಿಸಿ ಬರೆಯಿರಿ ಸಿನಿಮಾ ಮೂಲಕ ಬದುಕು ಬಂದಂತೆ ಸ್ವೀಕರಿಸಿ ಎಂಬ ಸ್ವೀಟ್ ಸಂದೇಶ ಕೊಟ್ಟು ಫ್ಯಾಮಿಲಿ ಪ್ರೇಕ್ಷಕ ಪ್ರಭುವಿನಿಂದ ಚಪ್ಪಾಳೆ‌ ಪಡೆದಿದ್ದ ರಾಮೇನಹಳ್ಳಿ ಜಗನ್ನಾಥ (Ramenahalli Jagannath) ಈಗ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ದಿನವಾದ ಇಂದು ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿ ಚಿತ್ರ ಸೆಟ್ಟೇರಿದೆ. ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರ ಪುತ್ರಿ ಸಿನಿಮಾಗೆ ಕ್ಲ್ಯಾಪ್ ಮಾಡಿದರೆ, ನವೀನ್ ಶಂಕರ್ (Naveen Shankar) ಹಾಗೂ ಅರ್ಚನಾ ಜೋಯಿಸ್ (Archana Jois) ಕ್ಯಾಮೆರಾಗೆ ಚಾಲನೆ ನೀಡಿದರು. ಜಗನ್ನಾಥ ಅವರ ಹೊಸ ಪ್ರಯತ್ನಕ್ಕೆ ತೀರ್ಥರೂಪ ತಂದೆಯವರಿಗೆ ಎಂಬ ಆಕರ್ಷಕ ಟೈಟಲ್ ಇಡಲಾಗಿದೆ.

    ತೆಲುಗಿನಲ್ಲಿ ಗುಪ್ಪೆಡಂತ ಮನಸು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಪ್ರೀತಿ ಪಡೆದಿರುವ ನಿಹಾರ್ ಮುಖೇಶ್ ತೀರ್ಥರೂಪ ತಂದೆಯವರಿಗೆ ಸಿನಿಮಾ ಮೂಲಕ ನಾಯಕನಾಗಿ ಕನ್ನಡ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಸದ್ಯ ಮುಖೇಶ್ ಹೀರೋ ಆಗಿ ಬಣ್ಣ ಹಚ್ಚಿರುವ ಗೀತಾ ಶಂಕರಂ‌ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿದೆ. ಇದರ ಬೆನ್ನೆಲ್ಲೇ‌ ನಿಹಾರ್ ಮುಖೇಶ್ ತೀರ್ಥರೂಪ ತಂದೆಯವರಿಗೆ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಚಿತ್ರ ಮೂಡಿ ಬರುತ್ತಿದೆ. ತೆಲುಗಿನಲ್ಲಿ ಪ್ರಿಯಮೈನ ನಾನ್ನಕು ಎಂಬ ಶೀರ್ಷಿಕೆ ಇಡಲಾಗಿದೆ.

    ಜೈ ಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಡಿ ತೀರ್ಥರೂಪ ತಂದೆಯವರಿಗೆ ಸಿನಿಮಾ ನಿರ್ಮಾಣವಾಗುತ್ತಿದ್ದು, ರಾಮೇನಹಳ್ಳಿ ಜಗನ್ನಾಥ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದ ಸಂಡೇ ಸಿನಿಮಾಸ್ ಈ ಸಿನಿಮಾವನ್ನು ಪ್ರೆಸೆಂಟ್ ಮಾಡುತ್ತಿದೆ. ಬ್ಲಿಂಕ್ ಸಿನಿಮಾ ಖ್ಯಾತಿಯ ರವಿಚಂದ್ರ ಎ.ಜೆ ತೀರ್ಥರೂಪ ತಂದೆಯವರಿಗೆ ಚಿತ್ರಕ್ಕೆ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಸಾಥ್ ಕೊಟ್ಟಿದ್ದಾರೆ. ಕೌಟುಂಬಿಕ ಹಿನ್ನೆಲೆ ಕಥೆಯುಳ್ಳ ಸಿನಿಮಾಗೆ ದೀಪಕ್ ಯರಗೇರಾ ಛಾಯಾಗ್ರಹಣ, ಪ್ರಶಾಂತ್ ರಾಜಪ್ಪ ಸಂಭಾಷಣೆ ಇರಲಿದೆ. ಸದ್ಯ ಮುಹೂರ್ತ ನೆರವೇರಿದ್ದು, ಶೀಘ್ರದಲ್ಲೇ ಚಿತ್ರತಂಡ ಶೂಟಿಂಗ್ ಅಖಾಡಕ್ಕೆ ಎಂಟ್ರಿ‌ ಕೊಡಲಿದೆ.

  • ‘ಹೊಂದಿಸಿ ಬರೆಯಿರಿ’ ಎನ್ನುವ ಹುಡುಗರಿಗೆ ಮೋಹಕ ತಾರೆ ರಮ್ಯಾ ಸಾಥ್

    ‘ಹೊಂದಿಸಿ ಬರೆಯಿರಿ’ ಎನ್ನುವ ಹುಡುಗರಿಗೆ ಮೋಹಕ ತಾರೆ ರಮ್ಯಾ ಸಾಥ್

    ರಾಮೇನಹಳ್ಳಿ ಜಗನ್ನಾಥ್ ಸಾರಥ್ಯದಲ್ಲಿ ತಯಾರಾಗಿರುವ ಹೊಂದಿಸಿ ಬರೆಯಿರಿ (Hondisi bareyiri) ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಕಥೆ, ಪಾತ್ರವರ್ಗದ ಬಗ್ಗೆ ಪ್ರೇಕ್ಷಕ ಕುತೂಹಲಗೊಂಡಿದ್ದಾನೆ. ಫಸ್ಟ್ ಲುಕ್ ನಿಂದ ಹಿಡಿದು ಇಲ್ಲಿವರೆಗೂ ನಾನಾ ಬಗೆಯಲ್ಲಿ ಪ್ರೇಕ್ಷಕರನ್ನು ಆವರಿಸಿರುವ ಹೊಂದಿಸಿ ಬರೆಯಿರಿ ಸಿನಿಮಾಗೆ ಈಗ ಮೋಹಕ ತಾರೆ ರಮ್ಯಾ ಸಾಥ್ ಕೊಡ್ತಿದ್ದಾರೆ.  ಇದೇ 28ರಂದು ಚಿತ್ರದ ಓ ಕವನ ಎಂಬ ವಿಡಿಯೋ ಸಾಂಗ್ ನ್ನು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ (Ramya) ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಲಿದ್ದಾರೆ. ಸಂಡೇ ಸಿನಿಮಾಸ್ ಯೂಟ್ಯೂಬ್ ನಲ್ಲಿ ಬೆಳಗ್ಗೆ 11.31ಕ್ಕೆ ಹಾಡು ಅನಾವರಣವಾಗಲಿದೆ.

    ನವೆಂಬರ್‌ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆಗೆ ಬರುತ್ತಿರುವ ಚಿತ್ರದಲ್ಲಿ ಕಲರ್ ಫುಲ್ ತಾರಾಬಗಳವಿದೆ. ಪ್ರವೀಣ್‌ ತೇಜ್‌ (Praveen Tej), ಐಶಾನಿ ಶೆಟ್ಟಿ (Aishani Shetty), ಸಂಯುಕ್ತ ಹೊರನಾಡು, ಶ್ರೀಮಹಾದೇವ್‌, ಭಾವನಾ ರಾವ್‌, ನವೀನ್‌ ಶಂಕರ್‌, ಅರ್ಚನಾ ಜೋಯಿಸ್‌ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಸುನೀಲ್‌ ಪುರಾಣಿಕ್‌, ಪ್ರವೀಣ್‌ ಡಿ ರಾವ್‌, ಧರ್ಮೇಂದ್ರ ಅರಸ್‌, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಹಿರಿಯ ಕಲಾವಿದರ ದಂಡು ಚಿತ್ರದಲ್ಲಿದೆ.

    ನಮ್ಮ ಬದುಕಿನಲ್ಲಿ ಏನೇ ಆದರೂ, ಅದಕ್ಕೆ ನಾವೇ ಹೊಣೆ. ಆಗಿರುವ ವಿಷಯಗಳನ್ನು ಹೊಂದಿಸಿ ಬರೆದುಕೊಂಡು ಜೀವನ ಸಾಗಿಸಬೇಕು ಎನ್ನುವ ಸಂದೇಶವನ್ನು   ಇಟ್ಟುಕೊಂಡು ಸಿನಿಮಾವನ್ನು ರೂಪಿಸಲಾಗಿದ್ದು, ಏಳು ಯುವಕ-ಯುವತಿಯರ ಒಂದೊಂದು ಕಥೆಯೂ ಚಿತ್ರದಲ್ಲಿದೆ. ಇದನ್ನೂ ಓದಿ:ಬೆಳಗ್ಗೆ ಎದ್ದಾಗ್ಲೇ ಬಿಕ್ಕಳಿಕೆ- ಯಾರೋ ಮಿಸ್ ಮಾಡಿಕೊಳ್ತಿದ್ದಾರೆ ಅಂದ್ರು ರಶ್ಮಿಕಾ

    ಜೋ ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ (Ramenahalli Jagannath) ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.ಗುಳ್ಟು ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ.  ಟಗರು  ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದು, “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ‘ಸುಮ್ಮನೆ’ ಹಾಡುತ್ತಾ ಹೊಂದಿಸಿ ಬರೆಯಿರಿ ಅಂತಿದ್ದಾರೆ ಕೆಜಿಎಫ್ ಅರ್ಚನಾ

    ‘ಸುಮ್ಮನೆ’ ಹಾಡುತ್ತಾ ಹೊಂದಿಸಿ ಬರೆಯಿರಿ ಅಂತಿದ್ದಾರೆ ಕೆಜಿಎಫ್ ಅರ್ಚನಾ

    ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಸಾಕಷ್ಟು ವಿಶೇಷತೆಗಳಿಂದ ಗಮನಸೆಳೆಯುತ್ತಿದೆ. ತಾರಾಗಣ, ಕಂಟೆಂಟು, ಕ್ವಾಲಿಟಿ , ಟೀಸರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾದಿಂದ ಬದುಕಿ ಸುಮ್ಮನೆ ಎಂಬ ಮೆಲೋಡಿ ಹಾಡು ಬಿಡುಗಡೆಯಾಗಿದೆ. ರಾಮೇನಹಳ್ಳಿ ಜಗನ್ನಾಥ್ ಅರ್ಥಪೂರ್ಣ ಪದಪುಂಜಗಳನ್ನು ಪೊಣಿಸಿ ರಚಿಸಿರುವ ಹಾಡಿಗೆ ಜೋ ಕೋಸ್ಟ ಅದ್ಭುತ ಸಂಗೀತ ನೀಡುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ.

    ಗುಳ್ಟು ಖ್ಯಾತಿಯ ನವೀನ್ ಹಾಗೂ ಕೆಜಿಎಫ್ ಸಿನಿಮಾದಲ್ಲಿ ರಾಕಿಭಾಯ್ ಅಮ್ಮನಾಗಿ ನಟಿಸಿದ್ದ ಅರ್ಚನಾ ಜೋಯಿಸ್  ಕೆ. ಜಿ. ಎಫ್ ನಂತರ ಹೊಂದಿಸಿ ಬರೆಯಿರಿ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪರಿಸ್ಥಿತಿಗಳನ್ನು ಹೊಂದಿಕೊಂಡು ಸಾಗುವ ಬದುಕಿನ ಪಯಣದ ಹೊಂದಿಸಿ ಬರೆಯಿರಿ ಸಿನಿಮಾದಲ್ಲಿ ಏಳು ಯುವಕ-ಯುವತಿಯರ ಒಂದೊಂದು ಕಥೆ, ಪ್ರೀತಿ ತುಂಬಿದೆ. ಈಗಾಗಲೇ ಹೊಂದಿಸಿ ಬರೆಯಿರಿ ಸಿನಿಮಾದ  ಶೂಟಿಂಗ್ ಆಗಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಟಗರು  ಖ್ಯಾತಿಯ ಮಾಸ್ತಿ, ಪೊಗರು ಖ್ಯಾತಿಯ ಪ್ರಶಾಂತ್ ರಾಜಪ್ಪ ಹಾಗೂ ಜಗನ್ನಾಥ್ ಸೇರಿದಂತೆ ಮೂವರು ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ‘ಗುಳ್ಟು’ ಚಿತ್ರಕ್ಕೆ ಸಿನಿಮಾಟೋಗ್ರಫಿ ಮಾಡಿದ್ದ ಶಾಂತಿ ಸಾಗರ್‌ ಈ ಚಿತ್ರಕ್ಕೆ ಕ್ಯಾಮೆರಾ ಹಿಡಿದಿದ್ದಾರೆ. ಇದನ್ನೂ ಓದಿ:ಕರೀನಾ ಬರೆದ ಪ್ರೆಗ್ನೆನ್ಸಿ ಬೈಬಲ್ ಪುಸ್ತಕ ಕೇಸು: ಸರ್ಕಾರದ ಮೂಲಕ ದೂರು ದಾಖಲಿಸಿ ಎಂದ ಹೈಕೋರ್ಟ್

    ಕೋಸ್ಟ ಸಂಗೀತ, ಕೆ ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ದೊಡ್ಡ ತಾರಾಬಳಗವೇ ನಟಿಸಿರುವ ಹೊಂದಿಸಿ ಬರೆಯಿರಿ ಸಿನಿಮಾವನ್ನು “ಸಂಡೇ ಸಿನಿಮಾಸ್ “ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಅವರ ಸ್ನೇಹಿತರು ನಿರ್ಮಾಣ ಮಾಡಿದ್ದು, ಚೂರಿಕಟ್ಟೆ ಖ್ಯಾತಿಯ ಪ್ರವೀಣ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಗಜಾನನ ಅಂಡ್ ಗ್ಯಾಂಗ್ ಖ್ಯಾತಿಯ ಶ್ರೀಮಹಾದೇವ್, ಗಾಳಿಪಟ ಚಿತ್ರ ಖ್ಯಾತಿಯ ಭಾವನಾರಾವ್ ಹೀಗೆ ಹಲವು ಪ್ರತಿಭೆಗಳು ಸಿನಿಮಾದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]