Tag: Ramesh Arvind

  • ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?

    ಕಾಯಕ ಮತ್ತು ವಚನಗಳ ಮೂಲಕ ಜಗತ್ತಿಗೆ ಸಮಸಮಾಜದ ಸಂದೇಶ ಸಾರಿರುವ ಜಗಜ್ಯೋತಿ ಬಸವೇಶ್ವರರ ಜಯಂತಿ ಇಂದು. ಬಸವಣ್ಣನ ಸಂದೇಶ ಸಾರುವಂತಹ ಅನೇಕ ಕೃತಿಗಳು ಸಾಹಿತ್ಯ ಲೋಕದಲ್ಲಿದ್ದರೆ, ಸಿನಿಮಾಗಳಲ್ಲೂ ಬಸವಣ್ಣನ ಪ್ರಸ್ತಾಪವಿದೆ. ಅವರ ಬದುಕಿನ ಕುರಿತಾದ ಸಿನಿಮಾಗಳು ಮೂಡಿ ಬಂದಿವೆ.

    ಕನ್ನಡ ಬೆಳ್ಳಿತೆರೆಯ ಮೇಲೆ ಬಸವಣ್ಣ ಹಾಡಾಗಿ, ವಚನವಾಗಿ, ಜೀವನ, ಕಾಯಕ ಹೀಗೆ ನಾನಾ ರೀತಿಯಲ್ಲಿ ಅಭಿವ್ಯಕ್ತಿಗೊಂಡಿದ್ದಾರೆ. ಶ್ರೇಷ್ಠ ದಾರ್ಶನಿಕನ ನೆನಪುಗಳನ್ನು ಸಿನಿಮಾ ರಂಗ ಹಲವು ಬಗೆಯಲ್ಲಿ ಕಟ್ಟಿಕೊಟ್ಟಿದೆ. ಬಸವಣ್ಣ ಸಿನಿಮಾದಲ್ಲಿ ಬಿಡಿಬಿಡಿಯಾಗಿ ಹಾಗೂ ಇಡಿಯಾಗಿಯೂ ಕಂಡಿದ್ದಾರೆ ಎನ್ನುವುದೇ ವಿಶೇಷ. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ಕನ್ನಡ ಸಿನಿಮಾ ರಂಗದಲ್ಲಿ ಮೊಟ್ಟ ಮೊದಲ ಬಾರಿಗೆ ಬಸವಣ್ಣನ ಕುರಿತಾಗಿ ತೆರೆಗೆ ಬಂದ ಸಿನಿಮಾ ‘ಜಗಜ್ಯೋತಿ ಬಸವೇಶ್ವರ’. 1959ರಲ್ಲಿ ತೆರೆ ಕಂಡ ಈ ಸಿನಿಮಾದಲ್ಲಿ ಬಸವಣ್ಣನ ಪಾತ್ರ ಮಾಡಿದ್ದು ಹೊನ್ನಪ್ಪ ಭಾಗವತರ್. ಈ ಹೊತ್ತಿಗೆ ಬಸವಣ್ಣ ಅಂದಾಕ್ಷಣ ಇವರ ಭಾವಚಿತ್ರವೇ ಕಣ್ಮುಂದೆ ಬರುತ್ತದೆ. ಐವತ್ತರ ದಶಕದ ಕೊನೆಯಲ್ಲಿ ತೆರೆಕಂಡ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು ಟಿ.ವಿ. ಸಿಂಗ್ ಠಾಕೂರ್. ಈ ಸಿನಿಮಾದ ವಿಶೇಷ ಅಂದರೆ, ಡಾ.ರಾಜ್ ಕುಮಾರ್ ಅವರು ಬಿಜ್ಜಳನಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾಗೆ ಪ್ರಾದೇಶಿಕ ಸಿನಿಮಾ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿ ಕೂಡ ಬಂತು.

    1983ರಲ್ಲೂ ಬಸವಣ್ಣನವರ ಕುರಿತಾಗಿ ಮತ್ತೊಂದು ಚಿತ್ರ ತೆರೆಕಂಡಿತು.  ‘ಕ್ರಾಂತಿಯೋಗಿ ಬಸವಣ್ಣ’ ಹೆಸರಿನಲ್ಲಿ ಮೂಡಿ ಬಂದ ಚಿತ್ರವನ್ನು ಕೆ.ಎಸ್.ಎಲ್ ಸ್ವಾಮಿ ನಿರ್ದೇಶನ ಮಾಡಿದ್ದರು. ಅಶೋಕ್ ಬಸವಣ್ಣನ ಪಾತ್ರದಲ್ಲಿ ನಟಿಸಿದ್ದರು. ಮಾತೇ ಮಹಾದೇವಿ ಅವರೇ ಈ ಚಿತ್ರಕ್ಕೆ ಸ್ಕ್ರಿಪ್ಟ್ ಬರೆದಿದ್ದು ವಿಶೇಷ. ಈ ಸಿನಿಮಾ ಸೆಟ್ಟೇರುತ್ತಿದೆ ಎನ್ನುವ ಹೊತ್ತಿನಲ್ಲಿ ಬಸವಣ್ಣನ ಪಾತ್ರವನ್ನು ಡಾ.ರಾಜ್ ಕುಮಾರ್ ಮಾಡುತ್ತಾರೆ ಎನ್ನುವ ಸುದ್ದಿಯಿತ್ತು. ಅದಕ್ಕಾಗಿ ಡಾ.ರಾಜ್ ಕೂಡ ತಯಾರಾಗಿದ್ದರು ಎನ್ನುವ ಗಾಸಿಪ್ ಇದೆ. ಆದರೆ, ನಂತರದ ದಿನಗಳಲ್ಲಿ ಅಶೋಕ್ ಅವರು ಬಸವಣ್ಣನ ಪಾತ್ರಕ್ಕೆ ಆಯ್ಕೆಯಾದರು. ಈ ಸಿನಿಮಾ ಕೇವಲ ಬಸವಣ್ಣನ ಸುತ್ತ ಸುತ್ತದೇ ಕಲ್ಯಾಣ ಕ್ರಾಂತಿಗೆ ಕಾರಣರಾದ ಶಿವ ಶರಣ, ಶರಣೆಯರ ಪ್ರಸ್ತಾಪ ಕೂಡ ಇತ್ತು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    ಚಿಂದೂಡಿ ಬಂಗಾರೇಶ್ ನಿರ್ದೇಶನದಲ್ಲಿ ಮೂಡಿ ಬಂದ ದಾನಮ್ಮ ದೇವಿ ಸಿನಿಮಾದಲ್ಲಿ ಬಸವೇಶ್ವರರ ಪ್ರಸ್ತಾಪವಿದೆ. ಹರಳಯ್ಯ, ಮಡಿವಾಳ ಮಾಚಿದೇವ ಹೀಗೆ ಅನೇಕ ಶರಣರು ಸಿನಿಮಾದಲ್ಲಿ ಪ್ರಾಸಂಗಿಕವಾಗಿ ಬಂದು ಹೋಗುತ್ತಾರೆ. ಈ ಸಮಯದಲ್ಲಿ ಬಸವಣ್ಣ ಕೂಡ ಬರುತ್ತಾರೆ. ಈ ಪಾತ್ರವನ್ನು ನಟ ರಾಮಕೃಷ್ಣ ಅವರು ಮಾಡಿದ್ದರು. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ಟಿ.ಎಸ್. ನಾಗಾಭರಣ ನಿರ್ದೇಶನದಲ್ಲಿ ತಯಾರಾದ ‘ಅಲ್ಲಮ’ ಸಿನಿಮಾದಲ್ಲೂ ಬಸವಣ್ಣನ ಪಾತ್ರಕ್ಕೆ ನಿರ್ದೇಶಕರು ಸಾಕಷ್ಟು ಮಹತ್ವ ಕೊಟ್ಟಿದ್ದರು. ಅಲ್ಲಮನ ವಚನದ ಜೊತೆಗೆ ಬಸವೇಶ್ವರರ ವಚನಗಳನ್ನೂ ಈ ಸಿನಿಮಾದಲ್ಲಿ ಬಳಸಲಾಗಿತ್ತು. ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರು ಬಸವಣ್ಣನ ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿದ್ದರು. ಇದನ್ನೂ ಓದಿ: ಜಾನ್ವಿ ಕಪೂರ್ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ: ಶ್ರೀದೇವಿಗೆ ಹೋಲಿಸಿದ ಅಭಿಮಾನಿಗಳು

    ಬಿ.ಎ ಪುರುಷೋತ್ತಮ ನಿರ್ದೇಶನದಲ್ಲಿ ‘ಮಹಾ ಶರಣ ಹರಳಯ್ಯ’ ಸಿನಿಮಾ ಮೂಡಿ ಬಂದಿತ್ತು. ಈ ಸಿನಿಮಾದಲ್ಲಿ ಬಸವಣ್ಣನ ಪಾತ್ರವೂ  ಪ್ರಮುಖವಾಗಿತ್ತು. ಹರಳಯ್ಯ ಮತ್ತು ಬಸವಣ್ಣನ ಮುಖಾಮುಖಿಯನ್ನು ಸಮರ್ಥವಾಗಿ ಕಟ್ಟಿಕೊಟ್ಟಿದ್ದರು ನಿರ್ದೇಶಕರು. ಈ ಸಿನಿಮಾದಲ್ಲಿ ಬಸವಣ್ಣನಾಗಿ ರಮೇಶ್ ಅರವಿಂದ್ ನಟಿಸಿದ್ದರು. ಇದನ್ನೂ ಓದಿ: ಮಗಳ ನಿರ್ಮಾಣದ ವೆಬ್ ಸೀರಿಸ್‌ನಲ್ಲಿ ಶಿವಣ್ಣ ಆಕ್ಟಿಂಗ್

    ಕನ್ನಡದ ಪ್ರತಿಭಾವಂತ ಹಿರಿಯ ನಟ ಶ್ರೀನಿವಾಸ್ ಮೂರ್ತಿ ಅವರು ಕಿರುತೆರೆಯಲ್ಲಿ ಪ್ರಯೋಗವೊಂದನ್ನು ಮಾಡಿದ್ದರು. ಅವರು ಕಿರುತೆರೆಗಾಗಿ ‘ಕ್ರಾಂತಿಯೋಗಿ ಬಸವಣ್ಣ’ ಧಾರಾವಾಹಿ ನಿರ್ದೇಶಿಸಿ, ಬಸವಣ್ಣನ ಪಾತ್ರವನ್ನು ಅವರೇ ನಿರ್ವಹಿಸಿದದ್ರು. ಎರಡು ವರ್ಷಗಳ ಕಾಲ ಈ ಧಾರಾವಾಹಿ ಪ್ರಸಾರವಾಯಿತು. ಬಸವಣ್ಣನವರ ಬಹುತೇಕ ಬದುಕನ್ನು ಜನರ ಮುಂದಿಟ್ಟ ಅಪರೂಪದ ಧಾರಾವಾಹಿ ಇದಾಗಿತ್ತು.

  • ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಸದ್ಯವೇ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರ: ಲಹರಿ ವೇಲು

    ಹರಿ ಮ್ಯೂಸಿಕ್ ಮೂಲಕ ರಿಕ್ಕಿಕೇಜ್ ಸಂಗೀತ ನಿರ್ದೇಶನದಲ್ಲಿ ಮೂಡಿಬಂದಿದ್ದ ಡಿವೈನ್ ಟೈಡ್ಸ್ ಆಲ್ಬಂಗೆ ಸಂಗೀತ ಕ್ಷೇತ್ರದ ಮೇರು ಪ್ರಶಸ್ತಿಯಾದ ಗ್ರ್ಯಾಮಿ ಸಹ ಬಂದಿದೆ. ರಿಕ್ಕಿ ಕೇಜ್ ಅವರಿಗೆ ಈ ಪ್ರಶಸ್ತಿ ಸಂದಿದೆ. ಈ ಎರಡು ಸಂತಸವನ್ನು ಹಂಚಿಕೊಳ್ಳಲು ಲಹರಿ ವೇಲು ಪತ್ರಿಕಾಗೋಷ್ಠಿ ಆಯೋಜಿಸಿದ್ದರು.

    ಕೇವಲ ಐನ್ನೂರು ರೂಪಾಯಿ ಬಂಡವಾಳದಿಂದ ನಮ್ಮ ಅಣ್ಣ ಮನೋಹರ ನಾಯ್ಡು ಅವರು ಈ ಸಂಸ್ಥೆಯನ್ನು ಆರಂಭಿಸಿದರು. ಈಗ ನಮ್ಮ ಸಂಸ್ಥೆ ಈ ಮಟ್ಟಕ್ಕೆ ಬರಲು ನಿಮ್ಮೆಲ್ಲರ ಹಾರೈಕೆ ಕಾರಣ. ಇದೇ ಮೊದಲ ಬಾರಿಗೆ ನಮ್ಮ ಸಂಸ್ಥೆ ಮೂಲಕ ಬಿಡುಗಡೆಯಾದ ‘ಡಿವೈನ್ ಟೈಡ್ಸ್’ ಆಲ್ಬಂಗೆ ಸಂಗೀತ ನೀಡಿದ್ದಕ್ಕಾಗಿ ರಿಕ್ಕಿಕೇಜ್ ಅವರಿಗೆ ಗ್ರ್ಯಾಮಿ ಪ್ರಶಸ್ತಿ ಬಂದಿದೆ. ಈ ಗೌರವಕ್ಕೆ ಪಾತ್ರರಾದ ರಿಕ್ಕಿಕೇಜ್ ಅವರನ್ನು ಅಭಿನಂದಿಸುತ್ತೇನೆ. ಈ ಪ್ರಶಸ್ತಿ ಸಮಾರಂಭಕ್ಕೆ ನಾನು ವೀಸಾ ಸಿಗದ ಕಾರಣದಿಂದ ಹೋಗಿರಲಿಲ್ಲ. ನನ್ನ ಅಣ್ಣನ ಮಗ ಚಂದ್ರು, ರಿಕ್ಕಿಕೇಜ್ ಅವರ ಜೊತೆಗೆ ಹೋಗಿದ್ದರು. ನಾವೆಲ್ಲರೂ ಮನೆಯಿಂದಲೇ ನೋಡಿ ಸಂತಸಪಟ್ಟೆವು. ಸದ್ಯದಲ್ಲೇ ರಿಕ್ಕಿಕೇಜ್ ಅವರ ಸಂಗೀತ ನಿರ್ದೇಶನದಲ್ಲಿ ಉತ್ತಮ ಚಿತ್ರವೊಂದನ್ನು ನಮ್ಮ ಸಂಸ್ಥೆ ಮೂಲಕ ನಿರ್ಮಿಸುವ ತಯಾರಿ ನಡೆಯುತ್ತಿದೆ ಎಂದು ಲಹರಿ ವೇಲು ತಿಳಿಸಿದರು.

    ನನಗೆ ಎರಡನೇ ಬಾರಿ ಈ ಪ್ರಶಸ್ತಿ ಬಂದಿರುವುದು ಸಂತೋಷ ತಂದಿದೆ. ಪ್ಯಾಂಡಮಿಕ್ ಸಮಯದಲ್ಲಿ ಈ ಆಲ್ಬಂ ನಿರ್ಮಾಣವಾಯಿತು. ಅನೇಕ ಕಲಾವಿದರನ್ನು ಜೂಮ್ ಕಾಲ್ ಹಾಗೂ ಮೆಸೇಜ್‍ಗಳ ಮೂಲಕ ಸಂಪರ್ಕ ಮಾಡಿದ್ದೆ. ನೂರೈವತ್ತಕ್ಕೂ ಅಧಿಕ ಕಲಾವಿದರು ಹಾಗೂ ತಂತ್ರಜ್ಞರು ಈ ಹಾಡಿಗೆ ಕೆಲಸ ಮಾಡಿದ್ದಾರೆ. ಅದರಲ್ಲಿ ಅರವತ್ತಕ್ಕೂ ಅಧಿಕರು ಭಾರತದವರು. ಮಿಕ್ಕವರು ಹೊರ ದೇಶದವರು. ಇಲ್ಲಿನ ವಾರಿಜಾಶ್ರೀ, ಅರುಣ್ ಕುಮಾರ್, ಸುಮಾ ರಾಣಿ, ಚೈತ್ರ ಮುಂತಾದ ಕಲಾವಿದರು ಈ ಆಲ್ಬಂ ನಲ್ಲಿದ್ದಾರೆ. ನಾನು ಕನ್ನಡದಲ್ಲಿ ಆಕ್ಸಿಡೆಂಟ್, ವೆಂಕಟ ಇನ್ ಸಂಕಟ ಹಾಗೂ ಕ್ರೇಜಿ ಕುಟುಂಬ ಚಿತ್ರಗಳಿಗೆ ಸಂಗೀತ ನೀಡಿದ್ದೇನೆ. ಆ ಮೂರು ಸಿನಿಮಾಗಳ ನಾಯಕ ರಮೇಶ್ ಅರವಿಂದ್ ಅವರೆ. ರಮೇಶ್ ನನ್ನ ಆತ್ಮೀಯ ಸ್ನೇಹಿತರು. ನನಗೆ ಸಿನಿಮಾಗಿಂತ ವಿಭಿನ್ನ ಆಲ್ಬಂಗಳನ್ನು ಮಾಡುವುದರಲ್ಲೇ ಆಸಕ್ತಿ ಹೆಚ್ಚು ಎಂದು ರಿಕ್ಕಿಕೇಜ್ ತಿಳಿಸಿದ್ದಾರೆ.

    ಪ್ರಶಸ್ತಿ ಪಡೆಯಲು ಲಹರಿ ಸಂಸ್ಥೆಯ ಚಂದ್ರು ಅವರೊಂದಿಗೆ ಹೋದ ಸಂದರ್ಭವನ್ನು ನೆನಪಿಸಿಕೊಂಡರು. ಹಾಗೂ ಮುಂದೆ ಸಹ ಲಹರಿ ಸಂಸ್ಥೆಯವರೊಂದಿಗೆ ಇರುವುದಾಗಿ ಹೇಳಿದರು.

    ಇಷ್ಟು ಎತ್ತರಕ್ಕೆ ಬೆಳೆದಿದ್ದರೂ ರಿಕ್ಕಿಕೇಜ್, ನಮ್ಮ ಸಂಸ್ಥೆಯ ಕಾರ್ಯಗಳಿಗೆ ಕೈ ಜೋಡಿಸಿರುವುದು ನಿಜಕ್ಕೂ ಹೆಮ್ಮೆ. ಅವರು ನಮ್ಮೊಂದಿಗೆ ಯಾವುದೇ ಅಗ್ರಿಮೆಂಟ್ ಸಹ ಮಾಡಿಕೊಂಡಿಲ್ಲ. ಲಹರಿ ಸಂಸ್ಥೆಯ ಚಂದ್ರು ಅವರು ಮಾತನಾಡಿ, ಇದೇ ಅವರ ಪ್ರೀತಿಗೆ ಸಾಕ್ಷಿ ಎಂದರು. ರಿಕ್ಕಿಕೇಜ್ ಅವರೊಂದಿಗೆ ಹದಿನೈದು ವರ್ಷಗಳಿಂದ ಜೊತೆಗಿರುವ ವಾಡಿಯಲ್ ಸಹ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

  • ಮಹಾಶಿವರಾತ್ರಿಗೆ ಶಿವಾಜಿ ಸುರತ್ಕಲ್ ಪೋಸ್ಟರ್

    ಮಹಾಶಿವರಾತ್ರಿಗೆ ಶಿವಾಜಿ ಸುರತ್ಕಲ್ ಪೋಸ್ಟರ್

    ಮೇಶ್ ಅರವಿಂದ್ ನಟನೆಯ  ‘ಶಿವಾಜಿ ಸೂರತ್ಕಲ್, ದಿ ಮಿಸ್ಟೀರಿಯಸ್ ಕೇಸ್ ಆಫ಼್ ಮಾಯಾವಿ’ ಸಿನಿಮಾದ ಮತ್ತೊಂದು ಪೋಸ್ಟರ್ ಅನ್ನು ಶಿವರಾತ್ರಿ ದಿನದಂದು ಬಿಡುಗಡೆ ಮಾಡಿದೆ ಚಿತ್ರತಂಡ. ಈ ಸಿನಿಮಾದ ಕೆಲ ಮಾಹಿತಿಯನ್ನು ನಿರ್ದೇಶಕ ಆಕಾಶ್ ಶ್ರೀವತ್ಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಅವಳಿ ಮಕ್ಕಳಿಗೆ ಜನ್ಮ ನೀಡಿದ ನಟಿ ಅಮೂಲ್ಯ

    “ಶಿವಾಜಿಯವರ ಖಾಸಗಿ ಜೀವನವನ್ನು ಮತ್ತಷ್ಟು ಹತ್ತಿರದಿಂದ ನೋಡುತ್ತೇವೆ. ಚಿತ್ರವೂ ಮೂರು ಕಾಲಘಟ್ಟಗಳನ್ನು ಒಳಗೊಂಡಿದ್ದು, ಮೂರು ತಲೆಮಾರುಗಳನ್ನೂ ಒಟ್ಟಿಗೆ ತರಲಿದೆ. ಶಿವಾಜಿಯವರ ತಂದೆ ವಿಜೇಂದ್ರ ಸೂರತ್ಕಲ್ ಮೊದಲ ಬಾರಿಗೆ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ ಪಾತ್ರವನ್ನು ಹಿರಿಯ ನಟ ನಾಸರ್ ಅಭಿನಯಿಸುತ್ತಿದ್ದಾರೆ. ಅಷ್ಟೇ ಅಲ್ಲ. ಚಿತ್ರದಲ್ಲಿ ಶಿವಾಜಿಯ ಮಗಳಾದ ಸಿರಿ ಸೂರತ್ಕಲ್ ಕೂಡ ಬರುತ್ತಾರೆ. ಶಿವಾಜಿ ಅವಳನ್ನು ಮುದ್ದಿನಿಂದ ಚುಕ್ಕಿ ಎನ್ನುತ್ತಾರೆ. ಆ ಮುದ್ದು ಮಗಳು ಶಿವಾಜಿಗೆ ಸಿಕ್ಕಿದ್ದೆಲ್ಲಿ? ಈ ಪ್ರಶ್ನೆಗೆ ಉತ್ತರ ಬೇಕಾದಲ್ಲಿ, ನೀವು ಸಿನಿಮಾ ನೋಡಲೇ ಬೇಕು” ಅಂತಾರೆ ನಿರ್ದೇಶಕರು. ಇದನ್ನೂ ಓದಿ : ಜೇಮ್ಸ್ ಟ್ರೇಡ್ ಮಾರ್ಕ್ ಹಾಡಿಗೆ ಪುನೀತ್ ಭರ್ಜರಿ ಸ್ಟೆಪ್: ಭಾವುಕರಾದ ಅಭಿಮಾನಿಗಳು

    ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈಗಾಗಲೇ 21 ದಿನಗಳ ಚಿತ್ರೀಕರಣ ಮುಗಿಸಿ ತಂಡ ಬೆಂಗಳೂರಿಗೆ ಮರಳಿದೆ. ಇನ್ನು ಬೆಂಗಳೂರಿನಲ್ಲಿ ಚಿತ್ರೀಕರಣ ಮುಂದುವರಿಯುತ್ತದೆ. ಸಿನಿಮಾದ ಮೊದಲ ಭಾಗದಲ್ಲಿ ನಟಿಸಿದ್ದ ರಮೇಶ್ ಅರವಿಂದ್ ಶಿವಾಜಿ, ರಾಘು ರಮಣಕೊಪ್ಪ ಹಾಗೂ ರಾಧಿಕಾ ನಾರಾಯಣ್ ಎರಡನೇ ಭಾಗದಲ್ಲೂ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ : ಪ್ರಶ್ನೆ ಮಾಡುವುದನ್ನು ನಿಲ್ಲಿಸಲ್ಲ : ಮತ್ತೆ ಗುಡುಗಿದ ನಟ ಚೇತನ್

    ಹೊಸ ತಾರಾಗಣದಲ್ಲಿ ಮೇಘನಾ ಗಾಂವ್ಕರ್ ಡಿಸಿಪಿ ದೀಪಾ ಕಾಮತ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಿರಿಯ ನಟರಾದ ಶೋಭರಾಜ್, ಶ್ರೀನಿವಾಸ ಪ್ರಭು ತಾರಾಗಣವನ್ನು ಸೇರಿದ್ದಾರೆ. ಚಿತ್ರದ ಸಂಗೀತವನ್ನು ನಕುಲ್ ಅಭಯಂಕರ್ ಸಂಯೋಜಿಸುತ್ತಿದ್ದಾರೆ. ರೇಖಾ ಕೆ.ಎನ್ ಹಾಗೂ ಅನೂಪ್ ಗೌಡ ಅಂಜನಾದ್ರಿ ಸಿನಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

  • ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ರಂಗೇರಿಸಿತು 100ರ ಪಾರ್ಟಿಸಾಂಗ್!

    ರಮೇಶ್ ಅರವಿಂದ್ ಹುಟ್ಟುಹಬ್ಬಕ್ಕೆ ರಂಗೇರಿಸಿತು 100ರ ಪಾರ್ಟಿಸಾಂಗ್!

    ನಟ, ನಿರ್ದೇಶಕರಾಗಿ ಮಾತ್ರವಲ್ಲದೇ ವೀಕೆಂಡ್ ವಿತ್ ರಮೇಶ್ ಎಂಬ ಕಾರ್ಯಕ್ರಮದ ಮೂಲಕವೂ ಮನೆ ಮಾತಾಗಿರುವವರು ರಮೇಶ್ ಅರವಿಂದ್. ಇತ್ತೀಚೆಗಷ್ಟೇ ಪತ್ತೇದಾರಿಕೆಯ ಗೆಟಪ್ಪಿನಲ್ಲಿ ಮಿಂಚಿ ಗೆದ್ದಿದ್ದ ರಮೇಶ್, ಇದೀಗ ಮತ್ತೆ 100 ಅನ್ನೋ ಸಿನಿಮಾ ಮೂಲಕ ಮತ್ತೊಂದು ಅವತಾರದಲ್ಲಿ ಪ್ರೇಕ್ಷಕರನ್ನು ತಾಕುವ ಖುಷಿಯಲ್ಲಿದ್ದಾರೆ. ಅದೇ ಖುಷಿಯಲ್ಲಿ ಚಿತ್ರತಂಡ ರಮೇಶ್ ಅರವಿಂದ್ ಅವರ ಬರ್ತ್‍ಡೇ ಸ್ಪೆಷಲ್ ಎಂಬಂತೆ 100 ಚಿತ್ರದ ಚೆಂದದ ಲಿರಿಕಲ್ ವಿಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದೆ.

    ಈ ಹಿಂದೆ ಸದಭಿರುಚಿಯ ಸಿನಿಮಾಗಳ ಮೂಲಕ ಹೆಸರಾಗಿದ್ದ ಎಂ.ರಮೇಶ್ ರೆಡ್ಡಿ ನಂಗಲಿ ನಿರ್ಮಾಣದಲ್ಲಿ ‘100’ ಚಿತ್ರ ಮೂಡಿ ಬಂದಿದೆ. ಕೊರೊನಾ ಸಂಕಷ್ಟ ಒಂದಿಲ್ಲದೇ ಹೋಗಿದ್ದರೆ ಖಂಡಿತವಾಗಿಯೂ ಇಷ್ಟು ಹೊತ್ತಿಗೆಲ್ಲ ಈ ಚಿತ್ರ ಪ್ರೇಕ್ಷಕರ ಮುಂದೆ ಬಂದಿರುತ್ತಿತ್ತು. ಆ ಹಿನ್ನಡೆಯನ್ನೂ ಲೆಕ್ಕಿಸದೆ ಚಿತ್ರತಂಡ ಎಲ್ಲ ಕೆಲಸ ಕಾರ್ಯಗಳನ್ನು ಪೂರೈಸಿಕೊಂಡಿದೆ. ಬಿಡುಗಡೆಯ ಹೊಸ್ತಿಲಲ್ಲಿಯೇ ರಮೇಶ್ ಅವರ ಬರ್ತ್‍ಡೇಗಾಗಿ ಈ ಲಿರಿಕಲ್ ವೀಡಿಯೋ ಲಾಂಚ್ ಮಾಡಲಾಗಿದೆ.

    ಇದು ಪಾರ್ಟಿ ಮೂಡಿಗೆ ಜಾರಿಸುವಂಥ ಮಜವಾದ ಹಾಡು. ವಿಶೇಷ ಅಂದ್ರೆ ಈ ಹಾಡಿಗೆ ಕೆಜಿಎಫ್ ಖ್ಯಾತಿಯ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡಿದ್ದಾರೆ. ಕಿನ್ನಲ್ ರಾಜ್, ಪ್ರಮೋದ್ ಮರವಂತೆ ಮತ್ತು ಭಾಸ್ಕರ್ ಬಂಗೇರ ಸೇರಿಕೊಂಡು ಈ ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ. ರಮೇಶ್ ಅರವಿಂದ್, ಅನನ್ಯಾ ಭಟ್ ಮತ್ತು ನೀತು ಸುಬ್ರಹ್ಮಣ್ಯ ಅಷ್ಟೇ ಮಜವಾಗಿ ಹಾಡಿದ್ದಾರೆ.

    ಈವತ್ತಿಗೆ ಸೋಶಿಯಲ್ ಮೀಡಿಯಾ ಅನ್ನೋದು ಸರ್ವವ್ಯಾಪಿಯಾಗಿದೆ. ಮನಸ್ಥಿತಿ ನೆಟ್ಟಗಿದ್ದರೆ ಇದನ್ನು ಸಕಾರಾತ್ಮಕವಾಗಿಯೇ ಬಳಸಿಕೊಳ್ಳಬಹುದು. ಆದ್ರೆ ಕೆಲ ವಿಕೃತರು ಸಾಮಾಜಿಕ ಜಾಲತಾಣಗಳ ವ್ಯಾಪ್ತಿ, ವಿಸ್ತಾರಗಳನ್ನು ಸಮಾಜ ಬಾಹಿರ ದಂಧೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಇದುವೇ ಹಲವರ ನೆಮ್ಮದಿಗೆ ಕುತ್ತು ತಂದಿದೆ. ಕೆಲ ಸಂದರ್ಭಗಳಲ್ಲಿ ಜೀವ ಹಾನಿಗಳೂ ಸಂಭವಿಸುತ್ತಿವೆ. ಇದೇ ಕಥಾ ಹಂದರ ಹೊಂದಿರೋ ಚೆಂದದ ಕಥೆಯನ್ನಿಲ್ಲಿ ರಮೇಶ್ ಅರವಿಂದ್ ನಿರ್ದೇಶನ ಮಾಡಿದ್ದಾರಂತೆ.

  • ನಾನು ಅಜ್ಜಿ ಆಗೋದು ಯಾವಾಗ: ತಾಯಿ ಕೇಳಿದ ಪ್ರಶ್ನೆಗೆ ನಕ್ಕು ಉತ್ತರ ಕೊಟ್ಟ ಯಶ್

    ನಾನು ಅಜ್ಜಿ ಆಗೋದು ಯಾವಾಗ: ತಾಯಿ ಕೇಳಿದ ಪ್ರಶ್ನೆಗೆ ನಕ್ಕು ಉತ್ತರ ಕೊಟ್ಟ ಯಶ್

    ಬೆಂಗಳೂರು: ನಾನು ಅಜ್ಜಿ ಆಗೋದು ಯಾವಾಗ ಎಂದು ತಾಯಿ ಕೇಳಿದ್ದಕ್ಕೆ ರಾಕಿಂಗ್ ಸ್ಟಾರ್ ಯಶ್ `ಕನ್ನಡದ ಕೋಟ್ಯಧಿಪತಿ’ ಕಾರ್ಯಕ್ರಮದಲ್ಲಿ ಶೀಘ್ರದಲ್ಲೇ ಎಂದು ನಕ್ಕು ಉತ್ತರ ಕೊಟ್ಟಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ನಟ ರಮೇಶ್ ಅರವಿಂದ್ ನಡೆಸಿಕೊಡುವ ಕನ್ನಡದ ಕೋಟ್ಯಧಿಪತಿಗೆ ಅತಿಥಿಯಾಗಿ ಯಶ್ ಆಗಮಿಸಿದ್ದರು. ಈ ಶೋನಲ್ಲಿ ಯಶ್ ಉತ್ತಮವಾಗಿ ಆಟವಾಡಿ ಕೊನೆಗೆ 25 ಲಕ್ಷ ರೂ. ಹಣವನ್ನು ಗೆದ್ದುಕೊಂಡು ಹೋಗಿದ್ದಾರೆ. ಆದರೆ ಯಶ್ ಅವರ ಆಟಕ್ಕಿಂತ ಈ ಕಾರ್ಯಕ್ರಮದಲ್ಲಿ ಅವರು ತಾಯಿ ಕೇಳಿದ ಪ್ರಶ್ನೆಯೇ ಎಲ್ಲರ ಗಮನವನ್ನು ಸೆಳೆದಿದೆ.

    ಈ ಕಾರ್ಯಕ್ರಮದಲ್ಲಿ ಆಟದ ಮಧ್ಯೆ ಯಶ್ ಅವರಿಗೆ ಅವರ ಕುಟುಂಬದವರು ವಿಡಿಯೋ ಕಾಲ್ ಮೂಲಕ ಒಂದೊಂದು ಪ್ರಶ್ನೆ ಕೇಳುತ್ತಿದ್ದರು. ಮೊದಲು ಅವರ ತಂದೆ ಪ್ರಶ್ನೆ ಕೇಳಿದ್ದರು. ಅವರ ತಂದೆ ಕೇಳಿದ ಪ್ರಶ್ನೆ ಉತ್ತರ ಕೊಟ್ಟರು. ಬಳಿಕ ಅವರ ತಾಯಿ ಪುಷ್ಪಾ ಅವರು ವಿಡಿಯೋ ಕಾಲ್ ಮಾಡಿ “ನಾನು ತಾಯಿಯಾಗಿ ಅಲ್ಲದೇ ಒಬ್ಬ ಅಭಿಮಾನಿಯಾಗಿ ಕೇಳ್ತಿದ್ದೀನಿ. ನಾನು ಅಜ್ಜಿ ಆಗೋದು ಯಾವಾಗ?” ಎಂದು ಪ್ರಶ್ನೆ ಕೇಳಿದ್ದಾರೆ.

    ಅಮ್ಮನ ಪ್ರಶ್ನೆಗೆ ಯಶ್ ಮೊದಲು ನಕ್ಕು ಬಳಿಕ ಉತ್ತರಿಸಿದ್ದಾರೆ. ನಾನು ಮತ್ತು ರಾಧಿಕಾ ಇಬ್ಬರು ಏಳು ವರ್ಷ ರಿಲೇಷನ್ ಶಿಪ್ ನಲ್ಲಿ ಇದ್ವಿ. ಆಗ ಇಬ್ಬರು ಕಲಾವಿದರಾಗಿದ್ದು, ಸಾರ್ವಜನಿಕವಾಗಿ ಎಲ್ಲಿಯೂ ಓಡಾಡೋಕೆ ಸಾಧ್ಯವಾಗಿಲ್ಲ. ಇಬ್ಬರಿಗೂ ಗೌರವ-ಘನತೆ ಕಾಪಾಡಿಕೊಳ್ಳಬೇಕು ಎಂಬುದು ಮನಸ್ಸಲ್ಲಿತ್ತು. ಆದ್ದರಿಂದ ನಾವು ನಮ್ಮ ಮನೆಯವರ ಜೊತೆ ಇರುತ್ತಿದ್ವಿ. ಮದುವೆಯಾದ ಮೇಲೆ ಎಲ್ಲ ಕಡೆ ಸುತ್ತಾಡೋಣ ಅಂದಕೊಂಡಿದ್ವಿ. ಆದ್ದರಿಂದ ಎರಡು ವರ್ಷ ಮಕ್ಕಳು ಬೇಡ ಎಂದು ನಿರ್ಧಾರ ಮಾಡಿದ್ವಿ. ಈಗ ಮದುವೆ ಆಗಿ ಒಂದುವರೆ ವರ್ಷ ಆಗಿದೆ. ಈಗ ಮನೆಯಲ್ಲಿ, ಸಂಬಂಧಿಕರು ಒತ್ತಡ ಹಾಕುತ್ತಿದ್ದಾರೆ. ನಾನು ಈ ಬಗ್ಗೆ ಎಲ್ಲಿಯೂ ಚರ್ಚೆ ಮಾಡಲು ಇಷ್ಟ ಪಡುವುದಿಲ್ಲ. ನಮ್ಮ ಅಮ್ಮ ಮನೆಯಲ್ಲಿ ಈ ಪ್ರಶ್ನೆ ಕೇಳಿದ್ದರೆ ರೇಗಾಡುತ್ತಿದ್ದೆ. ಸರಿಯಾದ ಜಾಗದಲ್ಲಿಯೇ ಕೇಳಿದ್ದಾರೆ. ಆದಷ್ಟೂ ಬೇಗ ಆಗುತ್ತದೆ. ಸದ್ಯಕ್ಕೆ ಇಷ್ಟೇ ಹೇಳೋದು ಎಂದು ಯಶ್ ಉತ್ತರಿಸಿದ್ದಾರೆ.

    ಯಶ್ ಮತ್ತು ರಾಧಿಕಾ ಮದುವೆ ಆಗಿ ಒಂದೂವರೆ ವರ್ಷ ಆಗಿದೆ. 2016ರ ಡಿಸೆಂಬರ್ 9 ರಂದು ಇಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು.