Tag: Ramesh Bandisiddegowda

  • ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಜ್ಞಾನೋದಯ – ಕ್ಷಮೆಯಾಚಿಸಿದ ಬಂಡಿಸಿದ್ದೇಗೌಡ

    ವಿವಾದಾತ್ಮಕ ಹೇಳಿಕೆ ನೀಡಿದ ಬಳಿಕ ಜ್ಞಾನೋದಯ – ಕ್ಷಮೆಯಾಚಿಸಿದ ಬಂಡಿಸಿದ್ದೇಗೌಡ

    ಮಂಡ್ಯ: ಕಾಶ್ಮೀರದಲ್ಲಿನ (Jammu Kashmir) ನರಮೇಧಕ್ಕೆ ಆರ್ಟಿಕಲ್ 370 ತೆಗೆದಿದ್ದೇ ಕಾರಣ ಎಂದು ಹೇಳಿಕೆ ನೀಡಿದ್ದ ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisidde gowda) ಇದೀಗ ಕ್ಷಮೆಯಾಚಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಯ (Pahalgam Terrorist Attack) ಬಳಿಕ ನೀಡಿದ್ದ ವಿವಾದಾತ್ಮಕ ಹೇಳಿಕೆಯಿಂದಾಗಿ ರಮೇಶ್ ಬಂಡಿಸಿದ್ದೇಗೌಡ ಜನರಿಂದ ಛೀಮಾರಿಗೊಳಗಾಗಿದ್ದರು.

    ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೆಆರ್‌ಎಸ್‌ನಲ್ಲಿ (KRS) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಹಾಗೆ ಮಾತನಾಡಬಾರದಿತ್ತು, ನನ್ನ ಮಾತಿನಿಂದ ಎಲ್ಲರಿಗೂ ನೋವಾಗಿದೆ. ಹೀಗಾಗಿ ನನ್ನ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.ಇದನ್ನೂ ಓದಿ: ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ 

    ದೇಶದಲ್ಲಿ ಆಯಾ ಸರ್ಕಾರಗಳು ಭದ್ರತೆಯನ್ನು ಹೆಚ್ಚಿಸಬೇಕು. ಸದ್ಯ ಕಾಶ್ಮೀರದಲ್ಲಿ ನರಮೇಧ ಮಾಡಿರುವವರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕು. ಈ ಘಟನೆಯಲ್ಲಿ ಸಾವನ್ನಪ್ಪಿರುವವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಸ್ಥರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದರು.

    ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದಿದ್ದ ಉಗ್ರರ ದಾಳಿಯ ಕುರಿತು ಏ.23 ರಂದು ಮಾತನಾಡಿದ್ದ ಅವರು, ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಅತಿಯಾದ ಆತ್ಮವಿಶ್ವಾಸದಿಂದ ಈ ಘಟನೆ ನಡೆದಿದೆ ಎನ್ನುವ ಮೂಲಕ ಘಟನೆಗೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದರು.

    ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಕಿಡಿಕಾರಿದ್ದರು.ಇದನ್ನೂ ಓದಿ: ಪಹಲ್ಗಾಮ್ ಉಗ್ರರ ದಾಳಿ: ಅಮಾಯಕರ ಹತ್ಯೆಯಿಂದ ಆಘಾತವಾಗಿದೆ ಎಂದ ಆಮೀರ್ ಖಾನ್

  • ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

    ಆರ್ಟಿಕಲ್ 370 ತೆಗೆದಿದ್ದೇ ಪಹಲ್ಗಾಮ್ ನರಮೇಧಕ್ಕೆ ಕಾರಣ: ಬಂಡಿಸಿದ್ದೇಗೌಡ ವಿವಾದಾತ್ಮಕ ಹೇಳಿಕೆ

    ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆ ಕಾರಣ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ (Ramesh Bandisiddegowda) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಶ್ರೀರಂಗಪಟ್ಟಣದಲ್ಲಿ ಪಹಲ್ಗಾಮ್‌ನಲ್ಲಿ (Pahalgam) ನಡೆದ ಉಗ್ರರ ದಾಳಿಯ ಕುರಿತು ಮಾತನಾಡಿದ ಅವರು, ಆರ್ಟಿಕಲ್ 370 ತೆಗೆಯೋದಕ್ಕೂ ಮೊದಲು ಯೋಚನೆ ಮಾಡಬೇಕಿತ್ತು. ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರ ಅತಿಯಾದ ಆತ್ಮವಿಶ್ವಾಸದಿಂದ ಘಟನೆ ನಡೆದಿದೆ ಎನ್ನುವ ಮೂಲಕ ಘಟನೆಗೆ ಪರೋಕ್ಷವಾಗಿ ಬಿಜೆಪಿ ಕಾರಣ ಎಂದಿದ್ದಾರೆ. ಇದನ್ನೂ ಓದಿ: ರೈಫಲ್‌ ಕಸಿದುಕೊಳ್ಳಲು ಹೋಗಿ ಉಗ್ರರ ಗುಂಡೇಟಿಗೆ ಕುದುರೆ ರೈಡರ್‌ ಬಲಿ

    ಆರ್ಟಿಕಲ್ 370 ತೆಗೆಯುವ ಮುನ್ನ ಕಾಶ್ಮೀರದಲ್ಲಿ (Kashmir) ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು. ಅವರ ದುಡುಕಿನ ನಿರ್ಧಾರದಿಂದ ಈ ಘಟನೆ ನಡೆದಿದೆ. ಜನರ ಭಾವನೆ ಅರ್ಥ ಮಾಡಿಕೊಂಡು ಆರ್ಟಿಕಲ್ 370 ತೆಗೆಯಬೇಕಿತ್ತು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಹಿಳೆಯರಿಂದ ಪುರುಷರನ್ನು ಬೇರ್ಪಡಿಸಿ ಹತ್ಯೆ – 20 ನಿಮಿಷದಲ್ಲಿ ನರಮೇಧ ಮಾಡಿದ್ದು ಹೇಗೆ?

    ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಮೃತರಲ್ಲಿ ಮೂವರು ಕನ್ನಡಿಗರಾಗಿದ್ದಾರೆ.

  • ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಲ್ಲ: ನಿಖಿಲ್ ಕುಮಾರಸ್ವಾಮಿ

    ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಲ್ಲ: ನಿಖಿಲ್ ಕುಮಾರಸ್ವಾಮಿ

    – ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಅನುಮಾನಿಸಿದ್ದ ‘ಕೈ’ ಶಾಸಕನ ಹೇಳಿಕೆಗೆ ಬೇಸರ
    – ತಂದೆ ಆಪರೇಷನ್ ವಿಚಾರ ಮಾತನಾಡುತ್ತ ನಿಖಿಲ್ ಭಾವುಕ

    ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಹೃದಯ ಶಸ್ತ್ರಚಿಕಿತ್ಸೆಯನ್ನು ಅನುಮಾನಿಸಿ ಕಾಂಗ್ರೆಸ್ ಶಾಸಕ ರಮೇಶ ಬಂಡೀಸಿದ್ದೇಗೌಡ ನೀಡಿದ್ದ ಹೇಳಿಕೆಗೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಬೇಸರ ವ್ಯಕ್ತಪಡಿಸಿದ್ದಾರೆ. ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಲ್ಲ ಎಂದು ‘ಕೈ’ ಶಾಸಕನಿಗೆ ತಿರುಗೇಟು ನೀಡಿದ್ದಾರೆ.

    ಮಂಡ್ಯದ ನಾಗಮಂಗಲದಲ್ಲಿ ಮಾತನಾಡಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್, ರಮೇಶ್ ಬಾಬು ಅವರ ಹಿರಿತನಕ್ಕೆ ಈ ಮಾತು ಕ್ಷೋಭೆ ತರಲ್ಲ. ನಮ್ಮ ತಂದೆಯವರಿಗೆ ಆಗಿರುವ ಆಪರೇಶನ್‌ನ್ನು ಇವರ ಮುಂದೆ ಸಾಬೀತುಪಡಿಸುವ ಅಗತ್ಯವಿಲ್ಲ. ಆಪರೇಶನ್ ಆಗಿದೆ ಎಂಬ ಅನುಕಂಪದಲ್ಲಿ ಮತ ಕೇಳುವ ಪ್ರಮೇಯ ನಮಗೆ ಇಲ್ಲ. ನಮ್ಮ ತಂದೆಗೆ ಆಪರೇಶನ್ ಆಗಿರೋದು ನಿಜ. ಮೂರನೇ ಬಾರಿಗೆ ಅವರಿಗೆ ಹೃದಯದ ಶಸ್ತ್ರಚಿಕಿತ್ಸೆ ಆಗಿದೆ. ಇದನ್ನು ಪ್ರೂ ಮಾಡುವ ಅವಶ್ಯಕತೆ ನಮಗೆ ಇಲ್ಲ. 6 ವರ್ಷದಲ್ಲಿ ಮೂರನೇ ಬಾರಿ ಹೃದಯದ ಆಪರೇಶನ್ ಆಗಿರೋದು ನಮಗೆ ನೋವು ಆಗಿದೆ ಎಂದು ಭಾವುಕರಾದರು. ಇದನ್ನೂ ಓದಿ: ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

    ನಮ್ಮ ಕುಟುಂಬ ಮೊಸಳೆ ಕಣ್ಣೀರು ಹಾಕಿಲ್ಲ. ಕುಮಾರಣ್ಣ ಭಾವನಾತ್ಮಕ ಜೀವಿ. ಜನರಿಗೆ ಕಷ್ಟಗಳಾದಗ ಕುಮಾಣ್ಣನಿಗೆ ಕಣ್ಣೀರು ಬರುತ್ತೆ. ಕುಮಾರಣ್ಣನ ಸ್ಪರ್ಧೆಯನ್ನು ಕಾಂಗ್ರೆಸ್ ಅವರಿಂದ ಸಹಿಸಿಕೊಳ್ಳಲು ಆಗುತ್ತಿಲ್ಲ. ಅದಕ್ಕಾಗಿ ಹೀಗೆ ಕಾಂಗ್ರೆಸ್ ನಾಯಕರು ಮಾತಾಡುತ್ತಾರೆ ಎಂದು ಬೇಸರ ಹೊರಹಾಕಿದರು.

    ಜಿಲ್ಲೆಯ ಹಾಗೂ ರಾಜ್ಯದ ಜನರು ನೋಡುತ್ತಾ ಇದ್ದಾರೆ. ಮತದಾರ ತಂದೆ-ತಾಯಿಗಳ ಕೈಯಲ್ಲಿ ಇದಕ್ಕೆ ಉತ್ತರ ನೀಡುವ ಶಕ್ತಿ ಇದೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು. ಕುಮಾರಣ್ಣ ಎಲ್ಲೇ ಹೋಗಿ ಸ್ಪರ್ಧೆ ಮಾಡಲು ಈ ರಾಜ್ಯದ ಜನರು ಕೊಟ್ಟಿರುವ ಶಕ್ತಿ. ಜನರು ಕುಮಾರಣ್ಣನ ಸ್ಪರ್ಧೆ ನಿರ್ಧಾರ ಮಾಡ್ತಾರೆ. ಬೇರೆ ಯಾರು ಅವರ ಸ್ಪರ್ಧೆ ನಿರ್ಣಯ ಮಾಡಲ್ಲ. ಜನರ ಆಶಯದಂತೆ ಕುಮಾರಣ್ಣ ಮಂಡ್ಯದಲ್ಲಿ ಸ್ಪರ್ಧೆ ಮಾಡಿದ್ದಾರೆ. ನಾವು ಬಿಜೆಪಿ ಅವರನ್ನು ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ಸುಮಲತಾ ಅವರನ್ನು ನಾವು ಬೆಂಬಲ ಕೇಳ್ತೀವಿ ಅವರನ್ನು ಹೋಗಿ ಮಾತಾಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌ ಏ.3 ರಂದು ನಾಮಪತ್ರ ಸಲ್ಲಿಕೆ

    ಕುಮಾರಸ್ವಾಮಿ ಆಪರೇಶನ್ ವಿಚಾರ ಮಾತನಾಡುವ ವೇಳೆ ಭಾವುಕರಾದ ನಿಖಿಲ್, ತಂದೆಯ ವಿಚಾರ ಮಾತಾಡುವಾಗ ಸಹಜ ಅಲ್ಲವೇ? ತಂದೆ-ಮಗನ ಸಂಬಂಧ ಎಂದರೆ ಭಾವನೆಗಳು. ಆ ವಿಚಾರವನ್ನು ನಮ್ಮ ಮನೆಯಲ್ಲಿ ಕೂತು ಮಾತಾಡುತ್ತೇವೆ. ಬೇರೆಯವರು ಈ ಬಗ್ಗೆ ಮಾತಾಡುವ ಅವಶ್ಯಕತೆ ಇಲ್ಲ ಎಂದರು.


    ಮೊದಲ ಹಂತದ ಸಭೆಯನ್ನು ಇಂದು ನಾಗಮಂಗಲದಲ್ಲಿ ಮಾಡ್ತಾ ಇದ್ದೀವಿ. ಪ್ರತಾಪ್ ಸಿಂಹ ಸಹ ನಮ್ಮ ಜೊತೆ ಇರ್ತಾರೆ. ಮೂರು ತಿಂಗಳಿಂದ ಹಲವು ಸಭೆಗಳು ನಡೆದಿವೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಕುಮಾರಣ್ಣ ಮಂಡ್ಯ ಅಭ್ಯರ್ಥಿ ಆಗಿದ್ದಾರೆ. ಕಾರ್ಯಕರ್ತರ ಒತ್ತಾಸೆಗೆ ಸೋತು ಕುಮಾರಣ್ಣ ಸ್ಪರ್ಧೆ ಮಾಡ್ತಾ ಇದ್ದಾರೆ. ಎನ್‌ಡಿಎ ಮೈತ್ರಿ ಕೂಟದ ಅಭ್ಯರ್ಥಿ ಕುಮಾರಸ್ವಾಮಿ ಆಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಕೇಜ್ರಿವಾಲ್‌ ಬಂಧನ ಬೆನ್ನಲ್ಲೇ ಮತ್ತೊಬ್ಬ ದೆಹಲಿ ಸಚಿವರಿಗೆ ಇ.ಡಿ ಸಮನ್ಸ್‌

  • ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

    ಚುನಾವಣೆ ಬಂದ್ರೆ ಸಾಕು ಆಸ್ಪತ್ರೆ ಸೇರ್ತಾರೆ: ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ‘ಕೈ’ ಶಾಸಕ ಅನುಮಾನ

    – ಅದ್ಹೇಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿ 2 ದಿನಕ್ಕೆ ಆಚೆ ಬರ್ತಾರೆ? 

    ಮಂಡ್ಯ: ಮಾಜಿ ಸಿಎಂ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹೆಚ್‌.ಡಿ.ಕುಮಾರಸ್ವಾಮಿ (H.D.Kumaraswamy) ಅವರ ಹೃದಯ ಶಸ್ತ್ರಚಿಕಿತ್ಸೆ ಬಗ್ಗೆ ಕಾಂಗ್ರೆಸ್‌ ಶಾಸಕ ರಮೇಶ್‌ ಬಂಡೀಸಿದ್ದೇಗೌಡ (Ramesh Bandisiddegowda) ಅನುಮಾನ ವ್ಯಕ್ತಪಡಿಸಿದ್ದಾರೆ.

    ಮಳವಳ್ಳಿಯ ಕಾಂಗ್ರೆಸ್‌ ಸಭೆಯಲ್ಲಿ ಹೆಚ್‌ಡಿಕೆ ಹೃದಯ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿದ ಅವರು, ಚುನಾವಣೆ ಬಂತು ಎಂದರೇ ಸಾಕು ಆಸ್ಪತ್ರೆ ಸೇರ್ತಾರೆ. ಮೂರೇ ದಿನದಲ್ಲಿ ಹಾರ್ಟ್ ಆಪರೇಷನ್ ಆಗುತ್ತೆ. ನಾಲ್ಕನೇ ದಿನಕ್ಕೆ ಇಡೀ ರಾಜ್ಯ ಸುತ್ತುತ್ತಾರೆ. ಅದು ಹೇಗೆ ಸಾಧ್ಯ ಅನ್ನೋದು ನನಗೆ ಅರ್ಥವಾಗುತ್ತಿಲ್ಲ ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ಕೆ.ವಿ ಗೌತಮ್‌ಗೆ ಕೋಲಾರ ಕಾಂಗ್ರೆಸ್ ಟಿಕೆಟ್

    ಚಲುವರಾಯಸ್ವಾಮಿಗೆ ಇರುವ ಸೇಮ್ ಕಾಯಿಲೆ ಅವರ ಸ್ನೇಹಿತ ಕುಮಾರಸ್ವಾಮಿಯವರಿಗೆ ಇದೆ. ಚಲುವರಾಯಸ್ವಾಮಿ ಆಸ್ಪತ್ರೆ ಸೇರಿದ್ರೆ ಒಂದು ತಿಂಗಳು ಈಚೆಗೆ ಬರಲ್ಲ. ಅದು ಹೇಗೆ ಹಾರ್ಟ್ ಆಪರೇಷನ್ ಮಾಡಿಸಿ 2 ದಿನಕ್ಕೆ ಆಚೆ ಬರ್ತಾರೆ ಎಂದು ಕೇಳಿದರು.

    ಈ ಚುನಾವಣೆ ಅಭಿವೃದ್ದಿ ವರ್ಸಸ್ ಕಣ್ಣೀರಿಡುವ ಜನರ ನಡುವಿನ ಚುನಾವಣೆ. ನನಗೆ ಆ ತೊಂದರೆ ಇದೆ, ಈ ತೊಂದರೆ ಇದೆ ಎಂದರೆ ಕೇಳಬೇಡಿ. ಅಧಿಕಾರದಲ್ಲಿ ಇದ್ದಾಗ ಏನ್ ಮಾಡಿದ್ರಿ ಎಂದು ಪ್ರಶ್ನೆ ಮಾಡಿ. ಕಾಂಗ್ರೆಸ್ ಅಭ್ಯರ್ಥಿಗೆ ಅತಿ ಹೆಚ್ಚು ಮತ ಕೊಟ್ಟು ಗೆಲ್ಲಿಸಿ ಎಂದು ಜನರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ತನ್ನ ಸೋಲಿನ ಸೇಡು ತೀರಿಸಿಕೊಳ್ಳಲು ಅಪ್ಪನ ಗೆಲುವಿಗೆ ಮಗನ ಪಣ

  • ಮಂಡ್ಯದ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕರಿಗೆ ಸಂಕಷ್ಟ

    ಮಂಡ್ಯದ ಇಬ್ಬರು ಹಾಲಿ, ಓರ್ವ ಮಾಜಿ ಶಾಸಕರಿಗೆ ಸಂಕಷ್ಟ

    ಮಂಡ್ಯ: ಮುಡಾದಲ್ಲಿ (MUDA) ನಡೆದಿದ್ದ ಐದು ಕೋಟಿ ಹಗರಣಕ್ಕೆ ಸಂಬಂಧ ಇದೀಗ ಐದು ಮಂದಿಗೆ ಜೈಲಾಗಿರುವ ಬೆನ್ನಲೇ ಮತ್ತೊಂದು ಮುಡಾದ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಹಾಲಿ ಶಾಸಕರು, ಓರ್ವ ಮಾಜಿ ಶಾಸಕ ಸೇರಿದಂತೆ 24 ಮಂದಿಯ ಎದೆಯಲ್ಲಿ ಢವಢವ ಶುರವಾಗಿದೆ. ಕೋರ್ಟ್‌ನಲ್ಲಿ ವ್ಯತಿರಿಕ್ತವಾಗಿ ತೀರ್ಪು ಬಂದರೆ ಮೂವರು ಪ್ರಮುಖ ರಾಜಕಾರಿಣಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶವನ್ನೇ ಕಳೆದುಕೊಳ್ಳುವ ಜೊತೆಗೆ ರಾಜಕೀಯ ಜೀವನಕ್ಕೆ ಕಂಟಕ ಎದುರಾಗಲಿದೆ. ಇದನ್ನೂ ಓದಿ: ಆಪರೇಷನ್ ಬುಲ್ಡೋಜರ್‌ಗೆ 2ನೇ ದಿನ – ಇಂದು ಪ್ರಭಾವಿಗಳ ಕಟ್ಟಡ ಕೆಡವುತ್ತಾ ಪಾಲಿಕೆ?

    ಮಂಡ್ಯ ನಗರಾಭಿವೃದ್ದಿ ಪ್ರಾಧಿಕಾರದಿಂದ 2009 ರಲ್ಲಿ ನಿವೇಶನ ಹಂಚಿಕೆಯಾಗಿತ್ತು. ಅಂದಿನ ಮುಡಾ ಅಧ್ಯಕ್ಷರಾದ ವಿದ್ಯಾನಾಗೇಂದ್ರ ಸೇರಿದಂತೆ ಮಂಡ್ಯ ಶಾಸಕ ಎಂ.ಶ್ರೀನಿವಾಸ್ (M.Srinivas), ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು (C.S.Puttaraju, ಮಾಜಿ ಶಾಸಕ ರಮೇಶ್ ಬಂಡೀಸಿದ್ದೇಗೌಡ (Ramesh Bandisiddegowda) ಸೇರಿದಂತೆ ಮುಡಾ ಆಡಳಿತ ಮಂಡಳಿ ಸದಸ್ಯರು 107 ಮೂಡಾ ನಿವೇಶನಗಳನ್ನ ತಮ್ಮ ಕುಟುಂಬದವರಿಗೆ ಹಾಗೂ ಅತ್ಯಾಪ್ತರಿಗೆ ನಿಯಮ ಮೀರಿ ಹಂಚಿಕೆ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆ ಹಿನ್ನಲೆ 2010 ರಲ್ಲಿ ಮಂಡ್ಯದ ವಕೀಲ ಸತ್ಯಾನಂದ ಎಂಬುವವರು ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಬಳಿಕ 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮೂಡಾ ಹಗರಣವನ್ನ ಸಿಬಿಐಗೆ ವಹಿಸಿತ್ತು. ಬಳಿಕ ಸುದೀರ್ಘ ತನಿಖೆ ನಡೆಸಿದ ಸಿಬಿಐ 24 ಆರೋಪಿಗಳ ಮೇಲೆ 7,000 ಸಾವಿರ ಪುಟಗಳಷ್ಟು ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ಆದರೆ ತಮ್ಮ ಮೇಲಿನ ಪ್ರಕರಣವನ್ನ ವಜಾಗೊಳಿಸುವಂತೆ ಶಾಸಕ ಸಿ.ಎಸ್.ಪುಟ್ಟರಾಜು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ 2022 ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಆ ಅರ್ಜಿಯನ್ನ ಕೋರ್ಟ್ ವಜಾಗೊಳಿಸಿದ್ದು, ಮಧ್ಯಪ್ರವೇಶಕ್ಕೆ ನಿರಾಕರಣೆ ಮಾಡಿತ್ತು. ಆದ್ದರಿಂದ ಸಿಬಿಐ ನ್ಯಾಯಾಲಯವೇ ಇದನ್ನು ವಿಚಾರಣೆ ಕೈಗೆತ್ತಿಕೊಂಡಿದೆ.

    ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಐದು ಕೋಟಿ ಹಣ ದುರ್ಬಳಕೆಯಾಗಿದೆ ಎಂದು 2012ರಲ್ಲಿ ಅಂದಿನ ಕಮಿಷನರ್ ಶಿವರಾಂ ಐವರ ಮೇಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ನಂತರ ಈ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಇದೀಗ ತನಿಖೆ ಮುಗಿದು ಸೆ.9 ರಂದು ಸಿಬಿಐ ಕೋರ್ಟ್ ತೀರ್ಪು ನೀಡಿದ್ದು, ಐವರಿಗೆ ತಲಾ ಒಂದು ಕೋಟಿ ದಂಡ ಮತ್ತು 7 ವರ್ಷ ಜೈಲುವಾಸದ ತೀರ್ಪು ನೀಡಿತ್ತು. ಇದೀಗ ಈ ತೀರ್ಪಿನ ನಂತರ ಮುಡಾದ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಪುಟ್ಟರಾಜು, ಎಂ.ಶ್ರೀನಿವಾಸ್ ಹಾಗೂ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರಿಗೆ ಭಯ ಶುರುವಾಗಿದೆ. ಒಂದು ವೇಳೆ ಸಿಬಿಐ ತನಿಖೆಯ ಆಧಾರದ ಮೇಲೆ ಜನಪ್ರತಿನಿಧಿಗಳ ನ್ಯಾಯಾಲಯ ವ್ಯತಿರಿಕ್ತವಾದ ತೀರ್ಪು ನೀಡಿದರೆ, ಈ ಮೂವರ ರಾಜಕೀಯ ಭವಿಷ್ಯಕ್ಕೆ ಫುಲ್‌ಸ್ಟಾಪ್ ಬಿದ್ದಂತೆ ಆಗುತ್ತದೆ. ಅಲ್ಲದೇ ಮಂಡ್ಯ ಜಿಲ್ಲೆಯ ರಾಜಕೀಯದಲ್ಲಿ ಭಾರಿ ಬದಲಾವಣೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಸಚಿವ ಆನಂದ್ ಸಿಂಗ್, ಕಾರ್ಪೊರೇಟರ್ ನಡುವೆ ರಾಜೀನಾಮೆ ಸಮರ

    ಸದ್ಯ ಈ ಪ್ರಕರಣ ಕೋರ್ಟ್ ಅಂಗಳದಲ್ಲಿದ್ದು, ಮುಂದಿನ ವಿಚಾರಣೆಯೂ ಸೆ.15ಕ್ಕೆ ಇದೆ. ಮುಂದೆ ಬರಲಿರುವ ಅಂತಿಮ ತೀರ್ಪು ಶಾಸಕರಿಗೆ ರಿಲೀಪ್ ಕೊಡುತ್ತಾ ಅಥವಾ ಕಂಟಕವಾಗುತ್ತಾ ಎನ್ನುವುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಪೊಲೀಸರ ಮುಂದೆಯೇ ಮಾಜಿ ಶಾಸಕರ ಗೂಂಡಾಗಿರಿ

    ಪೊಲೀಸರ ಮುಂದೆಯೇ ಮಾಜಿ ಶಾಸಕರ ಗೂಂಡಾಗಿರಿ

    ಮಂಡ್ಯ: ಪೊಲೀಸರ ಮುಂದೆಯೇ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆಯಲ್ಲಿ ನಡೆದಿದೆ.

    ಅರಕೆರೆ ಗ್ರಾಮದಲ್ಲಿ ರಸ್ತೆ ಅಗಲೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಬಂದ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಜೆಸಿಬಿ ಚಾಲಕರ ಮೇಲೆ ಹಲ್ಲೆ ನಡೆಸಿದ್ದಾರೆ. ರಸ್ತೆ ಅಗಲೀಕರಣ ನಡೆಸಕೂಡದು ಎಂದು ಆಗ್ರಹಿಸಿ ಪೊಲೀಸರ ಮುಂದೆಯೇ ಗೂಂಡಾಗಿರಿ ಮಾಡಿದ್ದಾರೆ. ಸ್ಥಳದಲ್ಲಿದ್ದ ಅಧಿಕಾರಿಗಳು ಮತ್ತು ಪೊಲೀಸರು ಮಾಜಿ ಶಾಸಕರಿಗೆ ಸ್ಪಷ್ಟನೆ ನೀಡಿದ್ರೂ ಕೇಳದ ಮಾಜಿ ಶಾಸಕ ಪುಡಿ ರೌಡಿಯಂತೆ ವರ್ತಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಮಂಡ್ಯ ಎಸ್‍ಪಿ ಪರಶುರಾಮ್, ಅರಕೆರೆಯಲ್ಲಿ ಇಂದು ರಸ್ತೆ ಅಗಲಿಕರಣ ಕೆಲಸ ನಡೆಯುತ್ತಿತ್ತು. ಅಧಿಕಾರಿಗಳು ಎಲ್ಲರೂ ಸ್ಥಳದಲ್ಲಿದ್ದು ಸಮಾಜಯಿಷಿ ನೀಡಿದ್ರು ಕೆಲವರು ಕೆಲಸಕ್ಕೆ ಅಡ್ಡಿಪಡಿಸಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ, ಕೆಲಸಕ್ಕೆ ಅಡ್ಡಿಪಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ಇನ್ನು ಸರ್ಕಾರಿ ಅಧಿಕಾರಿಗಳ ಅನತಿಯಂತೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ ಮಾಜಿ ಶಾಸಕರ ನಡೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.