Tag: Ramesh Jarakihili

  • ಕಾಂಗ್ರೆಸ್‍ನಲ್ಲೇ ಇರೋದಾಗಿ ರಮೇಶ್ ಜಾರಕಿಹೊಳಿ ಬರೆದುಕೊಟ್ಟಿದ್ದಾರೆ: ಸತೀಶ್ ಜಾರಕಿಹೊಳಿ

    ಕಾಂಗ್ರೆಸ್‍ನಲ್ಲೇ ಇರೋದಾಗಿ ರಮೇಶ್ ಜಾರಕಿಹೊಳಿ ಬರೆದುಕೊಟ್ಟಿದ್ದಾರೆ: ಸತೀಶ್ ಜಾರಕಿಹೊಳಿ

    ದಾವಣಗೆರೆ: ಮೋಡ ಇದ್ದಾಗ ಗುಡುಗು ಸಾಮಾನ್ಯ. ಅದನ್ನು ಸರಿಪಡಿಸಿಕೊಂಡು ಹೋಗುತ್ತೇವೆ. ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲೇ ಇರುತ್ತೇನೆ ಎಂದು ಬರೆದುಕೊಟ್ಟಿದ್ದಾರೆ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ 20 ಶಾಸಕರು ದೂರ ಇಲ್ಲಾ, ಎಲ್ಲರೂ ಒಟ್ಟಿಗೆ ಇದ್ದಾರೆ. ಆದರೆ ರಮೇಶ್ ಜಾರಕಿಹೊಳಿ ಅವರು ಫೋನ್ ಸಂಪರ್ಕಕ್ಕೆ ಸಿಕ್ಕಿಲ್ಲಾ. ಅವರು ಬಂದ ಮೇಲೆ ಅಸಮಾಧಾನದ ಕುರಿತು ಚರ್ಚೆ ಮಾಡುತ್ತೇನೆ. ಅಲ್ಲದೇ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಲ್ಲೇ ಇರುತ್ತೇವೆ ಎಂದು ಬರೆದುಕೊಟ್ಟಿದ್ದಾರೆ ಎಂದರು ತಿಳಿಸಿದರು.

    ಸಿಎಂ ಆಗೋ ಆಸೆ: ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ #MyCMSatish Jarkiholi ಅಭಿಯಾನದ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಮುಖ್ಯಮಂತ್ರಿ ಆಗುವುದಕ್ಕೆ ಯಾರಿಗೆ ಆಸೆ ಇರುವುದಿಲ್ಲ. ಗ್ರಾಮ ಪಂಚಾಯತಿ ಸದಸ್ಯನಿಂದ ಹಿಡಿದು ಎಲ್ಲರಿಗೂ ಆಸೆ ಇರುತ್ತೆ. ಅದೇ ರೀತಿ ನಮಗೂ ಇದೆ, ಅದಕ್ಕೆ ಇನ್ನು ಸಮಯವಿದೆ ಎಂದು ಸಿಎಂ ಆಗುವ ಕನಸನ್ನು ಬಿಚ್ಚಿಟ್ಟರು.

    ನಮ್ಮ ಸಮುದಾಯದವರು ಸಿಎಂ ಆಗಬೇಕೆನ್ನುವುದು ನಮ್ಮ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಸದ್ಯ ಸಮ್ಮಿಶ್ರ ಸರ್ಕಾರ ರಚನೆ ಆಗಿರುವುದರಿಂದ ಕೆಲ ಸಮಸ್ಯೆ ಇದ್ದೇ ಇದೆ. ನಿರಂತರವಾಗಿ ಇಂತಹ ಸಮಸ್ಯೆಗಳು ಬರುತ್ತದೆ. ಅದನ್ನು ಸಿಎಂ ಎಚ್‍ಡಿಕೆ, ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿಭಾಯಿಸುತ್ತಾರೆ. ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ತಿಂಗಳ 8 ಮತ್ತು 9 ಕ್ಕೆ ರಾಜನಹಳ್ಳಿ ವಾಲ್ಮೀಕಿ ಮಠದ ಜಾತ್ರೆ ನಡೆಯಲಿದ್ದು, ಈ ಕಾರಣ ಜಾತ್ರೆಯ ಸ್ಥಳ ಪರಿಶೀಲನೆ ನಡೆಸಲು ಸಚಿವರು ಆಗಮಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ನಿಮ್ಮಿಂದ ಸಾಧ್ಯವಾಗದೇ ಇದ್ರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ- ಸಿದ್ದು, ಜಾರಕಿಹೊಳಿ ಸಭೆಯ ಇನ್‍ಸೈಡ್ ಸ್ಟೋರಿ

    ನಿಮ್ಮಿಂದ ಸಾಧ್ಯವಾಗದೇ ಇದ್ರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟುಬಿಡಿ- ಸಿದ್ದು, ಜಾರಕಿಹೊಳಿ ಸಭೆಯ ಇನ್‍ಸೈಡ್ ಸ್ಟೋರಿ

    ಬೆಂಗಳೂರು: ರಾಜ್ಯ ರಾಜಕೀಯ ಇದೀಗ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಆಪರೇಷನ್ ಕಮಲ, ಕಾಂಗ್ರೆಸ್ ಒಳ ಬೇಗುದಿಯ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ರಮೇಶ್ ಜಾರಕಿಹೊಳಿ ಸೇರಿದಂತೆ ಅತೃಪ್ತ ಶಾಸಕರೊಂದಿಗೆ ಸಂಧಾನ ಮಾತುಕತೆ ನಡೆಸಿದ್ದಾರೆ.

    ಈ ಮಾತುಕತೆ ವೇಳೆ ಬೆಳಗಾವಿ ರಾಜಕೀಯದಲ್ಲಿ ಮೂಗು ತೂರಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಜಾರಕಿಹೊಳಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿಕೆಶಿಗೆ ಹೈಕಮಾಂಡಿನಿಂದಲೇ ಎಚ್ಚರಿಕೆ ನೀಡಬೇಕೆಂದು ರಮೇಶ್ ಜಾರಕಿಹೊಳಿ ಒತ್ತಡ ಹೇರಿದ್ದಾರೆ. ಇದು ಸಾಧ್ಯವಾಗದಿದ್ದರೆ ನಮ್ಮ ಪಾಡಿಗೆ ನಮ್ಮನ್ನು ಬಿಟ್ಟು ಬಿಡಿ ಎಂದು ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಖಡಕ್ ಆಗಿ ಹೇಳಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನು ಓದಿ: ಕೊನೆಗೂ ಸಚಿವ ರಮೇಶ್ ಜಾರಕಿಹೊಳಿಗೆ ಮಣಿದ ರಾಜ್ಯ ಸರ್ಕಾರ

    ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬೇಡಿ ಎಂದು ಸೂಚಿಸಿರುವ ಸಿದ್ದರಾಮಯ್ಯ, ಹೈಕಮಾಂಡ್ ಬಳಿ ಈ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ. ಅಸಮಾಧಾನಗೊಂಡಿರುವ ಶಾಸಕರೊಂದಿಗೂ ಸಭೆ ನಡೆಸಿದ ಸಿದ್ದರಾಮಯ್ಯ, ಸೆ.30ರವರೆಗೆ ಕಾಯುವಂತೆ ಸೂಚಿಸಿದ್ದಾರೆ.

    ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕ ಸಂದರ್ಭದಲ್ಲಿ ಅತೃಪ್ತರಿಗೆ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಈ ಸಂಧಾನ ಮಾತುಕತೆಗಳ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಮೇರೆಗೆ ಮಂಗಳವಾರ ದೆಹಲಿಗೆ ಸಿದ್ದರಾಮಯ್ಯ ಸಹಿತ ರಾಜ್ಯ ನಾಯಕರು ದೆಹಲಿಗೆ ತೆರಳುವ ಸಾಧ್ಯತೆಗಳಿವೆ. ಇದನ್ನು ಓದಿ: ಸ್ವ ಕ್ಷೇತ್ರದಲ್ಲೇ ಸಿಎಂಗೆ ಮುಖಭಂಗ: ಕೈ ಬೆಂಬಲಿತ ಬಿಜೆಪಿ ಅಭ್ಯರ್ಥಿಗೆ ಜಯ

    ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ದೆಹಲಿಗೆ ಪ್ರಯಾಣಿಸುತ್ತಿದ್ದು, ಹೈಕಮಾಂಡ್ ಬುಲಾವ್ ನೀಡಿಲ್ಲ ಸ್ಪಷ್ಪಪಡಿಸಿದ್ದಾರೆ. ಕಾಂಗ್ರೆಸ್ ಒಳ ಬೇಗುದಿಯ ನಡುವೆಯೇ, ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯರೇ ಶ್ರೀರಕ್ಷೆ ಅಂತ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಸಿದ್ದರಾಮಯ್ಯರೇ ಕಂಟಕ ಅನ್ನೋದೆಲ್ಲಾ ಸುಳ್ಳು. ಅವರ ಶ್ರೀರಕ್ಷೆಯಿಂದಲೇ ಈ ಸರ್ಕಾರ ಐದು ವರ್ಷ ಅಧಿಕಾರ ಪೂರೈಸಲಿದೆ ಅಂತ ತಿಳಿಸಿದ್ದಾರೆ. ನಮ್ಮ ಬಳಿ 104 ಶಾಸಕರಿದ್ದಾರೆ ಅಂತ ಹೇಳುವವರೇ ಈ ಸರ್ಕಾರಕ್ಕೆ ವಿಲನ್ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.

    ಸುಧಾಕರ್ ದೂರು:
    ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಅವರಂತೂ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ವಿರುದ್ಧ ದೂರು ನೀಡಿದ್ದಾರೆ. ಇವರಿಬ್ಬರ ನಿರ್ಲಿಪ್ತತೆಯಿಂದಾಗಿ ಕಾಂಗ್ರೆಸ್ ಶಾಸಕರನ್ನು ಕಡೆಗಣಿಸಲಾಗಿದೆ ಅಂತ ದೂರಿದ್ದಾರೆ. ಸಚಿವ ಜಾರಕಿಹೊಳಿ ಜೊತೆಗೆ ಪ್ರತ್ಯೇಕ ಸಭೆ ನಡೆಸಿದ ಅತೃಪ್ತ ಶಾಸಕರು ದು:ಖ-ದುಮ್ಮಾನ ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನು ಓದಿ: ಸಾಂಬಾರ್ ಬಡಿಸುವ ವೇಳೆ ಅನ್ನದ ತಟ್ಟೆ ಕಿತ್ಕೊಂಡ್ರು- ಪಕ್ಷೇತರ ಶಾಸಕ ನಾಗೇಶ್ ಸಿಟ್ಟು

    ಕ್ಷೇತ್ರಗಳ ಅಭಿವೃದ್ಧಿ, ಮಂತ್ರಿ ಮಾಡದಿರುವುದಕ್ಕೆ ಅಸಮಾಧಾನವಿದ್ದು ಮಂಗಳವಾರ ಅತೃಪ್ತ ಶಾಸಕರೆಲ್ಲಾ ಸೇರಿ ನಮ್ಮ ಮನಸ್ಸಿನಲ್ಲಿ ಏನಿದೆ ಅಂತ ಹೇಳುತ್ತೇವೆ ಎಂದು ಹೊಸಕೋಟೆ ಶಾಸಕ ಎಂ.ಟಿ.ಬಿ. ನಾಗರಾಜ್ ಹೇಳಿದ್ದಾರೆ. ಶಾಸಕ ಭೀಮಾನಾಯ್ಕ್ ಕೂಡ ಜಾರಕಿಹೊಳಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನದ ಬೇಡಿಕೆ ಇಟ್ಟಿದ್ದಾರೆ. ಈ ತಿಂಗಳಾಂತ್ಯಕ್ಕೆ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿಗಳಿಗೆ ನೇಮಕವಾಗಲಿದ್ದು, ಅಲ್ಲಿಯವರೆಗೆ ಕಾಯಿರಿ ಅಂತ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇದನ್ನು ಓದಿ: ನಾನ್ಯಾಕೆ ರಾಜೀನಾಮೆ ಕೊಡ್ಲಿ ಸ್ವಾಮಿ: ರಮೇಶ್ ಜಾರಕಿಹೊಳಿ

    ಕಾಂಗ್ರೆಸ್ ನಾಯಕರ ಅಸಮಾಧಾನಕ್ಕೆ ಕಾರಣವೇನು?
    – ದೋಸ್ತಿ ಸರ್ಕಾರವಿದ್ದರೂ ನಮ್ಮನ್ನು ಕಡೆಗಣನೆ ಮಾಡಲಾಗಿದೆ
    – ಡಿಸಿಎಂ ಪರಮೇಶ್ವರ್, ಸಚಿವ ಡಿಕೆಶಿ ಸ್ಪಂದಿಸುತ್ತಿಲ್ಲ
    – ನಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಯಾರೂ ಅಲಿಸುತ್ತಿಲ್ಲ
    – ಸಿಎಂ ಕುಮಾರಸ್ವಾಮಿ ಜೆಡಿಎಸ್ ಶಾಸಕರಿಗೆ ಸೀಮಿತವಾಗಿದ್ದಾರೆ
    – ಸರ್ಕಾರ ಮಟ್ಟದಲ್ಲಿ ನಮ್ಮ ಸಮಸ್ಯೆಗಳು ಬಗೆಹರಿಯುತ್ತಿಲ್ಲ
    – ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಹೋಗಲು ಆಗುತ್ತಿಲ್ಲ
    – ನಾವು 3-4 ಬಾರಿ ಗೆದ್ದಿದ್ದೇವೆ ನಮಗೂ ಸಚಿವ ಸ್ಥಾನ ಬೇಕು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ: ಸತೀಶ್ ಜಾರಕಿಹೊಳಿ

    ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಚುನಾವಣೆ ಗೆಲ್ಲೋದು ಒಂದೇ ಸದ್ಯದ ನನ್ನ ಗುರಿ ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಸುಳೇಭಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಡಿಕೆಶಿ, ರಮೇಶ್ ಜಾರಕಿಹೊಳಿಯ ವಾಗ್ದಾಳಿ ವಿಚಾರವಾಗಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾವು ಅವರ ಹೆಸರು ಪ್ರಸ್ತಾಪ ಮಾಡಿಲ್ಲ. ಅವರು ನನ್ನ ಹೆಸರು ಕೂಡಾ ಪ್ರಸ್ತಾಪ ಮಾಡಿಲ್ಲ. ಜಿಲ್ಲೆಗೆ ಸೀಮತವಾಗಿ ಮಾತನಾಡಿದ್ದೇವೆ ಅಷ್ಟೆ ಎಂದು ಹೇಳಿದರು.

    ನೇರವಾಗಿ ನನ್ನ ಹೆಸರು ಪ್ರಸಾಪ ಮಾಡಿಲ್ಲ. ಹಾಗಾಗಿ ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ನಾನು ಕೇವಲ ಬೆಳಗಾವಿಗೆ ಸೀಮಿತವಾಗಿಲ್ಲ. ಜಿಲ್ಲೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾವುದು. ಸರ್ವೇ ಮೂಲಕ ಗೆಲ್ಲುವ ಅಭ್ಯರ್ಥಿಗೆ ಮಾತ್ರ ಟಿಕೆಟ್ ನೀಡಲು ಶಿಫಾರಸು ಮಾಡಲಾಗಿದೆ ಎಂದರು.

    ಸಚಿವ ರಮೇಶ ಜಾರಕಿಹೊಳಿ ಸೋಸಲಿಸಲು ನಾನು ಯತ್ನಿಸಿಲ್ಲ. ಜಾರಕಿಹೊಳಿ ಕುಟುಂಬ ಎಂದು ಎಲ್ಲರೂ ಓಟ್ ಹಾಕಿದ್ದಾರೆ. ಒಂದು ವೇಳೆ ಅವರು ಹಾಗೆ ಭಾವಿಸಿದ್ದರೆ ಅವರ ಕಲ್ಪನೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ವಿಭಜನೆ ಮಾಡೋ ಪ್ರಸ್ತಾಪನೆ ಇದೆ. ದೊಡ್ಡ ಜಿಲ್ಲೆ ಇರೋದರಿಂದ ಜಿಲ್ಲೆ ವಿಭಜನೆ ಮಾಡೋಕೆ ಬೇಡಿಕೆ ಇತ್ತು. ಆದರೆ ಇದೀಗ ಈ ಬೇಡಿಕೆಗೆ ಹೆಚ್ಚು ವೇಗ ಸಿಕ್ಕಿದೆ ಎಂದು ಹೇಳಿದರು.