Tag: Rameshbabu Bandisidde Gowda

  • ಕುತೂಹಲಕ್ಕೆ ಕಾರಣವಾಯ್ತು ಕಾಂಗ್ರೆಸ್ಸಿನ ರಮೇಶ್‍ಬಾಬು ಬಂಡಿಸಿದ್ದೇಗೌಡ ನಡೆ

    ಕುತೂಹಲಕ್ಕೆ ಕಾರಣವಾಯ್ತು ಕಾಂಗ್ರೆಸ್ಸಿನ ರಮೇಶ್‍ಬಾಬು ಬಂಡಿಸಿದ್ದೇಗೌಡ ನಡೆ

    ಮಂಡ್ಯ: ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ರಮೇಶ್‍ಬಾಬು ಬಂಡಿಸಿದ್ದೇಗೌಡರ ನಡೆ ಈಗ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ರಮೇಶ್‍ಬಾಬು ಬಂಡಿಸಿದ್ದೇಗೌಡ ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಆದರೆ ಮಂಗಳವಾರ ಸುಮಲತಾ ಅಂಬರೀಶ್ ಬಾಡಿಗೆ ಮನೆ ವೀಕ್ಷಣೆ ವೇಳೆ ಅವರ ಜೊತೆಗೆ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಇವರ ನಡೆಯ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ.

    ರಾತ್ರಿ ಮಂಡ್ಯದ ಚಾಮುಂಡೇಶ್ವರಿ ನಗರದ 3ನೇ ಕ್ರಾಸ್ ನಲ್ಲಿರುವ ಅಂಬಿ ಲಕ್ಕಿ ಮನೆಗೆ ಸುಮಲತಾ ಭೇಟಿ ನೀಡಿದ್ದರು. ಈ ವೇಳೆ ಸುಮಲತಾ ಜೊತೆ ಬಂಡಿಸಿದ್ದೇಗೌಡ ಕೂಡ ಮನೆಗೆ ಭೇಟಿ ನೀಡಿದ್ದಾರೆ. ಅಲ್ಲದೆ ಮನೆ ಮಾಲೀಕರ ಜೊತೆ ಚರ್ಚೆ ನಡೆಸಿ ಈ ವಾರದೊಳಗೆ ಮನೆ ಬಾಡಿಗೆ ಪಡೆದು, ಪ್ರವೇಶ ಮಾಡುವ ಕುರಿತು ಚರ್ಚೆ ಮಾಡಿದ್ದಾರೆ.

    ಈ ಹಿಂದೆ ರಮೇಶ್‍ಬಾಬು ಜೆಡಿಎಸ್ ಪಕ್ಷದಲ್ಲಿ ಎರಡು ಬಾರಿ ಎಂಎಲ್‍ಎ ಆಗಿದ್ದರು. ಒಮ್ಮೆ ತಮ್ಮ ಪ್ರತಿಸ್ಪರ್ಧಿ ಅಂಬರೀಶ್ ಅವರನ್ನೂ ಸೋಲಿಸಿದ್ದರು. ಕಳೆದ ಬಾರಿ ಜೆಡಿಎಸ್ ಪಕ್ಷದ ವರಿಷ್ಠರ ಜೊತೆ ಮುನಿಸಿಕೊಂಡು ಕಾಂಗ್ರೆಸ್ ಸೇರಿ ಸೋಲು ಕಂಡಿದ್ದರು. ತಮ್ಮ ಸೋಲಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರಣ ಎಂದು ಸಿಟ್ಟಿನಲ್ಲಿದ್ದರು ಎಂದು ಹೇಳಲಾಗುತ್ತಿತ್ತು.

    ಈಗ ಲೋಕಸಭಾ ಚುನಾವಣೆಗೆ ಮುಖ್ಯಮಂತ್ರಿ ಪುತ್ರ ನಿಖಿಲ್ ಕುಮಾರ್ ಮೈತ್ರಿ ಪಕ್ಷದ ಅಭ್ಯರ್ಥಿಯಾಗೋದು ಖಚಿತವಾಗಿದೆ. ತಮ್ಮ ಸೋಲಿನ ಸೇಡು ತೀರಿಸಿಕೊಳ್ಳಲು ಬಹಿರಂಗವಾಗಿಯೇ ಕಾಂಗ್ರೆಸ್ ಮುಖಂಡ ಸುಮಲತಾ ಪರವಾಗಿ ನಿಂತಿದ್ದು, ಬಹಿರಂಗವಾಗಿ ಅವರ ಜೊತೆ ಓಡಾಡುತ್ತಾ ರಾಜಕೀಯವಾಗಿ ಸಹಕಾರ ನೀಡುತ್ತಿದ್ದಾರೆ ಎಂಬುದಾಗಿ ಜನ ಮಾತನಾಡಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ದೂರು

    ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ದೂರು

    ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಲಾಗಿದೆ.

    ರಮೇಶ್‍ಬಾಬು ಬಂಡಿಸಿದ್ದೇಗೌಡ ನಾಮಪತ್ರದ ವೇಳೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ಸರಿಯಾದ ಆಸ್ತಿ ಘೋಷಣೆ ಮಾಡಿಕೊಂಡಿಲ್ಲವೆಂದು ಆರೋಪಿಸಿ ಆರ್‍ಟಿಐ ಕಾರ್ಯಕರ್ತ ರವೀಂದ್ರ, ರಾಜ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿದ್ದಾರೆ. ಇದನ್ನೂ ಓದಿ: 10 ವರ್ಷದಿಂದ ಇಲ್ಲದವರು ಈಗ್ಯಾಕೆ ಬಂದ್ರಿ- ಗ್ರಾಮಸ್ಥರ ಸಿಟ್ಟಿಗೆ ಬೆದರಿ ಕಾಂಗ್ರೆಸ್ ಅಭ್ಯರ್ಥಿ ವಾಪಸ್

    ರಮೇಶ್‍ಬಾಬು ಬಂಡಿಸಿದ್ದೇಗೌಡ ತಮ್ಮ ಹೆಸರಿನಲ್ಲಿ ಮಂಡ್ಯ ನಗರದಲ್ಲಿರುವ ಒಂದು ನಿವೇಶನ ಹಾಗೂ ತಮ್ಮ ಪತ್ನಿ ಸುಮತಿ ಹೆಸರಲ್ಲಿ ಕಿರಂಗೂರು ಗ್ರಾಮದ ಬಳಿ ಇರುವ 85 ನಿವೇಶನಗಳ ಬಗ್ಗೆ ಮಾಹಿತಿ ನೀಡಿಲ್ಲ. ಹೀಗಾಗಿ ಆಸ್ತಿ ವಿವರದ ಬಗ್ಗೆ ಮಾಹಿತಿ ಬಚ್ಚಿಟ್ಟಿರುವ ಮಾಜಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ರಮೇಶ್‍ಬಾಬು ಬಂಡಿಸಿದ್ದೇಗೌಡ ವಿರುದ್ಧ ಕಾನೂನು ಕ್ರಮ ಜರುಗಿಸಿ, ನಾಮಪತ್ರವನ್ನು ಅಸಿಂಧುಗೊಳಿಸಬೇಕೆಂದು ಆರ್‍ಟಿಐ ಕಾರ್ಯಕರ್ತ ರವೀಂದ್ರ ಚುನಾವಣಾ ಆಯುಕ್ತರಿಗೆ ಸಲ್ಲಿಸಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.