Tag: ramya krishna

  • ‘ಕಾವಾಲಿ’ ಹಾಡಿಗೆ ಮಸ್ತ್ ಸ್ಟೆಪ್ ಹಾಕಿದ ರಮ್ಯಾಕೃಷ್ಣ

    ‘ಕಾವಾಲಿ’ ಹಾಡಿಗೆ ಮಸ್ತ್ ಸ್ಟೆಪ್ ಹಾಕಿದ ರಮ್ಯಾಕೃಷ್ಣ

    ಕ್ಷಿಣದ ಹೆಸರಾಂತ ನಟಿ ರಮ್ಯಾಕೃಷ್ಣ (Ramya Krishna) ‘ಕಾವಾಲಿ’ (Kaavaali) ಹಾಡಿಗೆ ಸಖತ್ ಸ್ಟೆಪ್ ಹಾಕಿದ್ದಾರೆ. ಆ ವಿಡಿಯೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದು, ನಟಿಯ ನೃತ್ಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಮಧ್ಯವಯಸ್ಸಿನಲ್ಲೂ ರಮ್ಯಾ ಮಾದಕ ರೀತಿಯಲ್ಲಿ ಹೆಜ್ಜೆ ಹಾಕಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ.

    ಭಾರತೀಯ ಸಿನಿಮಾ ರಂಗದಲ್ಲಿ ಮತ್ತೊಂದು ಹಾಡು ನೋಡುಗರಿಗೆ  ಹುಚ್ಚೆಬ್ಬಿಸಿದೆ. ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕನ್ನಡದ ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಕಾಂಬಿನೇಷನ್ ನ  ‘ಜೈಲರ್’ ಸಿನಿಮಾದ ಕಾವಾಲಿ ಸಾಂಗ್ ಬಿಡುಗಡೆಯಾಗಿದ್ದು, ಆ ಹಾಡಿಗೆ ಲಕ್ಷಾಂತರ ಜನರು ಹುಕ್ ಸ್ಟೆಪ್ (Hook Step) ಹಾಕಿದ್ದಾರೆ. ಭಾರತದಾದ್ಯಂತ ಈ ಹಾಡಿಗೆ ಕುಣಿದು, ಆ ವಿಡಿಯೋವನ್ನು ಸೋಷಿಯಲ್ ಮೀಡಿಯಾಗೆ ಅಪ್ ಲೋಡ್ ಮಾಡುತ್ತಿದ್ದಾರೆ. ಇದನ್ನೂ ಓದಿ:ಸಮಂತಾ, ರಶ್ಮಿಕಾ ಈಗ ಶ್ರೀಲೀಲಾ ಭವಿಷ್ಯ ನುಡಿದ ಖ್ಯಾತ ಸೆಲೆಬ್ರಿಟಿ ಜ್ಯೋತಿಷಿ

    ಬೋಲ್ಡ್ ಪಾತ್ರಗಳ ಮೂಲಕ ಸಾಕಷ್ಟು ಸುದ್ದಿಯಲ್ಲಿರುವ ನಟಿ ತಮನ್ನಾ ಜೈಲರ್ (Jailer) ಸಿನಿಮಾದಲ್ಲೂ ಅದನ್ನು ಮುಂದುವರೆಸಿದ್ದಾರೆ. ಜೈಲರ್ ಸಿನಿಮಾದ  ಕಾವಾಲ ಹಾಡಿನಲ್ಲಿ ನಟಿ ಮೈಚಳಿ ಬಿಟ್ಟು ಕುಣಿದಿದ್ದಾರೆ. ತಮನ್ನಾ (Tamannaah) ಮೈಮಾಟಕ್ಕೆ ಅಭಿಮಾನಿಗಳು ಸುಸ್ತಾಗಿದ್ದಾರೆ.

     

    ರಜನಿಕಾಂತ್ (Rajinikanth) ಮತ್ತು ಶಿವರಾಜ್ ಕುಮಾರ್ ಕಾಂಬಿನೇಷನ್ ನ ಸಿನಿಮಾ ಇದಾಗಿದ್ದು, ಇನ್ನೇನು ಬಿಡುಗಡೆಗೂ ಸಿದ್ಧವಾಗಿದೆ. ಮೊನ್ನೆಯಷ್ಟೇ ಹಾಡು ಬಿಡುಗಡೆಯ ಸಮಾರಂಭಲ್ಲಿ ಶಿವರಾಜ್ ಕುಮಾರ್ ಭಾಗಿಯಾಗಿದ್ದರು. ಸಿನಿಮಾದ ಪ್ರಚಾರಕ್ಕೂ ಮುನ್ನ, ಸಿನಿಮಾದ ಮೊದಲ ಹಾಡನ್ನು (Song) ಚಿತ್ರತಂಡ ರಿಲೀಸ್ ಮಾಡಿತ್ತು. ಹೆಚ್ಚಿನ ಸಂಖ್ಯೆಯಲ್ಲಿ ಹಾಡನ್ನು ಅಭಿಮಾನಿಗಳು ಸವಿದಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಪ್ರಕಾಶ್ ರೈ- ರಮ್ಯಾಕೃಷ್ಣ

    ‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಪ್ರಕಾಶ್ ರೈ- ರಮ್ಯಾಕೃಷ್ಣ

    ಶ್ರೀನಗರ ಕಿಟ್ಟಿ (Srinagar Kitty) ಮುಖ್ಯಭೂಮಿಕೆಯಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದಲ್ಲಿ ಅಚ್ಚರಿಯ ತಾರಾಬಳಗ ಇರಲಿದೆಯಂತೆ ನಿರ್ದೇಶಕ ನಾಗಶೇಖರ್ (Nagashekhar) ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಕಿಟ್ಟಿ ನಾಯಕನಾದರೆ, ನಾಯಕಿಯ ಆಯ್ಕೆ ನಡೆಯಬೇಕಿದೆ. ಈಗಾಗಲೇ ರಚಿತಾ ರಾಮ್ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿರುವುದರಿಂದ, ಬಹುತೇಕ ಅವರೇ ಖಚಿತ ಎಂದು ಹೇಳಲಾಗುತ್ತಿದೆ.

    ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆಗಳಾದ ಪ್ರಕಾಶ್ ರೈ (Prakash Rai) ಮತ್ತು ರಮ್ಯಾಕೃಷ್ಣ (Ramya Krishna) ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಯಾರು, ಯಾವ ಪಾತ್ರಗಳನ್ನು ಮಾಡಲಿದ್ದಾರೆ ಎಂದು ನಾಗಶೇಖರ್ ಹೇಳದೇ ಇದ್ದರೂ, ಇಬ್ಬರೂ ನಟಿಸುವುದು ಪಕ್ಕಾ ಎಂದಿದ್ದಾರೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆಯ ಕೆಲಸ ಪ್ರಾರಂಭವಾಗಿದೆ. ಇದನ್ನೂ ಓದಿ:‘ಲೈಗರ್‌’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ

    ಈ ಸಿನಿಮಾದ ಕುರಿತು ಹತ್ತಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ ನಿರ್ದೇಶಕ ನಾಗಶೇಖರ್. ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾದರೆ, ರಮ್ಯಾ ನಾಯಕಿ. ಆದರೆ, ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮುಂದುವರೆದರೆ, ರಮ್ಯಾ ನಾಯಕಿಯಾಗಿ ನಟಿಸುತ್ತಿಲ್ಲ. ಅದರ ಬದಲು ರಚಿತಾ ರಾಮ್ ಅವರಿಗೆ ಮಣೆ ಹಾಕಿದ್ದಾರಂತೆ ನಾಗಶೇಖರ್. ಆದರೆ, ರಚಿತಾ ಈವರೆಗೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.

    ಮೊದಲ ಭಾಗದ ಕಥೆಯನ್ನು ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿ ಹೇಳಿದ್ದರು. ಅವರು ತನಿಖೆ ಮಾಡಿದ್ದ ಕೇಸ್ ಅನ್ನು ಆಧರಿಸಿದ ಸಿನಿಮಾ ಅದಾಗಿತ್ತು. ಪಾರ್ಟ್ 2 ಸಿನಿಮಾಗೆ ಕಥೆ ಹೇಳಿದ್ದು ಕನ್ನಡದ ಒಬ್ಬ ಸೂಪರ್ ಸ್ಟಾರ್ ಅಂತೆ. ಈ ಕುರಿತು ನಾಗಶೇಖರ್ ಮಾತನಾಡಿದ್ದಾರೆ. ಆದರೆ, ಆ ಸ್ಟಾರ್ ಯಾರು ಎನ್ನುವ ಕುತೂಹಲವನ್ನು ಅವರು ಬಿಟ್ಟುಕೊಟ್ಟಿಲ್ಲ. ಸ್ಟಾರ್ ನಟರೊಬ್ಬರು ಹೇಳಿದ ಕಥೆಯನ್ನೇ ಡೆವಲಪ್‌ ಮಾಡಿದ್ದೇನೆ ಎಂದಿದ್ದಾರೆ ನಾಗಶೇಖರ್.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ

    ಗುಂಟೂರು ಖಾರ ಸವಿಯಲು ಬರುತ್ತಿದ್ದಾರೆ ರಮ್ಯಾ ಕೃಷ್ಣ

    ಹೇಶ್ ಬಾಬು (Mahesh Babu) ನಟನೆಯ ಗುಂಟೂರು ಖಾರಂ ಸಿನಿಮಾದಲ್ಲಿ ಹಾಟ್ ಬ್ಯೂಟಿ ರಮ್ಯಾ ಕೃಷ್ಣ (Ramya Krishna) ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿನಿ ಪಾತ್ರ ಮಾಡಿದ್ದ ರಮ್ಯಾ ಕೃಷ್ಣ ಅಲ್ಲಿಂದ ಅವರು ಮತ್ತೆ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮಹೇಶ್ ಬಾಬು ಸಿನಿಮಾವನ್ನು ರಮ್ಯಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರಿಗಾಗಿಯೇ ಪಾತ್ರವನ್ನು ಹಿಗ್ಗಿಸಿದ್ದಾರಂತೆ ಚಿತ್ರತಂಡ.

    ಕಲಾವಿದರ ವಿಚಾರದಲ್ಲಿ ಈ ಸಿನಿಮಾ ಸಾಕಷ್ಟು ಸದ್ದು ಮಾಡುತ್ತಿದೆ. ಕರಾವಳಿ ಬ್ಯೂಟಿ ಪೂಜಾ ಹೆಗ್ಡೆ ‘ಗುಂಟೂರು ಖಾರಂ’ (Guntur Kharam) ಪ್ರಾಜೆಕ್ಟ್‌ನಿಂದ ಹೊರಬಂದಿದ್ದಾರೆ. ಎಂದು ಹೇಳಲಾಗುತ್ತಿದೆ.  ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇ ಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು ಬರುವ ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ವಾದ ಶುರುವಾಗಿದೆ. ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್‌ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ಪೂಜಾ ಹೆಗ್ಡೆಗೆ ಈಗ ಡೇಟ್ಸ್ ಸಮಸ್ಯೆ ಎದುರಾಗಿದೆ.

    ಕಳೆದ ವರ್ಷ ಈ ಚಿತ್ರಕ್ಕಾಗಿ ಕಾಲ್‌ಶೀಟ್ ಕೊಟ್ಟಿದ್ದರು. ಆದರೆ ಈವರೆಗೆ ಚಿತ್ರೀಕರಣ ಮುಗಿದಿಲ್ಲ. ಈ ವರ್ಷ ಜೂನ್‌ನಿಂದ ಡಿಸೆಂಬರ್‌ವರೆಗೆ ಬೇರೆ ಸಿನಿಮಾಗಳಿಗೆ ಕಾಲ್‌ಶೀಟ್ ಕೊಟ್ಟಿದ್ದಾರಂತೆ. ಆ ಸಿನಿಮಾಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕೆ ಮಹೇಶ್ ಬಾಬು ಚಿತ್ರದಿಂದ ಹೊರ ಬರುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಶೂಟ್‌ ಮಾಡಿದ ಭಾಗ ಮಹೇಶ್‌ ಬಾಬು ಅವರಿಗೆ ತೃಪ್ತಿ ಸಿಗದ ಕಾರಣ ಮತ್ತೊಮ್ಮೆ ರೀ-ಶೂಟ್‌ ಮಾಡಲಾಗುತ್ತಿದೆ. ಹಾಗಾಗಿ ಡೇಟ್‌ ಸಮಸ್ಯೆಯಿಂದ ಪೂಜಾ ಸಿನಿಮಾಗೆ ಬೈ ಬೈ ಹೇಳಿದ್ದಾರೆ. ಇದನ್ನೂ ಓದಿ:ಲೈಂಗಿಕ ಕಿರುಕುಳ ಆರೋಪ: ಧಾರಾವಾಹಿ ನಿರ್ಮಾಪಕನ ಮೇಲೆ ಎಫ್.ಐ.ಆರ್ ದಾಖಲು

    ಸದ್ಯ ಚಿತ್ರದಿಂದ ಪೂಜಾ ಹೆಗ್ಡೆ ಹೊರನಡೆದಿದ್ದಾರೆ ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಇದರ ನಡುವೆ ತ್ರಿಷಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ ಎನ್ನುವ ಸುದ್ದಿಯನ್ನು ಕೆಲವರು ತೇಲಿಬಿಟ್ಟಿದ್ದಾರೆ. ಈ ಹಿಂದೆ ಮಹೇಶ್ ಬಾಬು ಹಾಗೂ ತ್ರಿಷಾ ‘ಅತಡು’ ಚಿತ್ರದಲ್ಲಿ ಒಟ್ಟಿಗೆ ನಟಿಸಿದ್ದರು. ಆ ಚಿತ್ರಕ್ಕೂ ತ್ರಿವಿಕ್ರಮ್ ಆಕ್ಷನ್ ಕಟ್ ಹೇಳಿದ್ದರು. ‘ಪೊನ್ನಿಯಿನ್ ಸೆಲ್ವನ್’ 2 (Ponniyin Selvan 2) ಸರಣಿ ಚಿತ್ರದಿಂದ ತ್ರಿಷಾ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ.

     

    ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬುಗೆ ನಾಯಕಿಯರಾಗಿ ಪೂಜಾ ಹೆಗ್ಡೆ, ಶ್ರೀಲೀಲಾ ಸ್ಕ್ರೀನ್  ಶೇರ್ ಮಾಡಿದ್ದರು. ಅರ್ಧ ಭಾಗ ಚಿತ್ರೀಕರಣ ಮುಗಿದಿರೋ ಬೆನ್ನಲ್ಲೇ ಪೂಜಾ ಹೆಗ್ಡೆ ಹೊರನಡೆದಿದ್ದಾರೆ. ತ್ರಿಷಾ, ಶ್ರೀಲೀಲಾ ಲೀಡ್ ನಾಯಕಿಯರಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಹರಿದಾಡುತ್ತಿದೆ.

  • `ಜೈಲರ್’ ಲುಕ್‌ನಲ್ಲಿ ರಜನಿಕಾಂತ್ ಮಿಂಚಿಂಗ್: ಹೇಗಿರಲಿದೆ ಶಿವಣ್ಣನ ಲುಕ್?

    `ಜೈಲರ್’ ಲುಕ್‌ನಲ್ಲಿ ರಜನಿಕಾಂತ್ ಮಿಂಚಿಂಗ್: ಹೇಗಿರಲಿದೆ ಶಿವಣ್ಣನ ಲುಕ್?

    ಕಾಲಿವುಡ್‌ನ ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 169ನೇ ಸಿನಿಮಾ ಜೈಲರ್ ಪೋಸ್ಟರ್ ರಿಲೀಸ್ ಆಗಿದೆ. ತಲೈವಾ ಲುಕ್ ನೋಡಿ ಫ್ಯಾನ್ಸ್ ದಂಗಾಗಿದ್ದಾರೆ. ಜತೆಗೆ ನೆಚ್ಚಿನ ನಟ ಶಿವರಾಜ್‌ಕುಮಾರ್ ಪಾತ್ರದ ಲುಕ್ ಹೇಗಿರಬಹುದು ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ.

    ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಬಹುನಿರೀಕ್ಷಿತ `ಜೈಲರ್’ ಚಿತ್ರದ ಮೂಲಕ ತಲೈವಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಪೋಸ್ಟರ್ ಲುಕ್ ಕೂಡ ರಿವೀಲ್ ಆಗಿದ್ದು, ಎಂದೂ ಕಾಣಿಸಿಕೊಂಡಿರದ ಲುಕ್‌ನಲ್ಲಿ ರಜನೀಕಾಂತ್ ಮಿಂಚಿದ್ದಾರೆ. ಸಿಂಪಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು ಕೂಡ ರಜನೀಕಾಂತ್ ಗತ್ತಿಗೆ ಫ್ಯಾನ್ಸ್ ಫುಲ್ ಆಗಿದೆ. ಇದನ್ನೂ ಓದಿ:ಮೆಗಾಸ್ಟಾರ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: ಗಾಡ್ ಫಾದರ್‌ಗೆ ಸಲ್ಲು ಬಾಯ್ ಸಾಥ್

    ತಲೈವಾ ನಟನೆಯ 169ನೇ ಈ ಸಿನಿಮಾಗೆ ರಜನಿಕಾಂತ್ ಜೊತೆ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಕೂಡ ಕಾಣಿಸಿಕೊಳ್ಳುತ್ತಿರುವ ವಿಶೇಷ. ತಲೈವಾ ಜತೆ ಶಿವಣ್ಣ ಕೂಡ ಪ್ರಮುಖ ಪಾತ್ರಕ್ಕೆ ಸಾಥ್ ನೀಡಲಿದ್ದಾರೆ. ಇಂದಿನಿಂದ ಶೂಟಿಂಗ್ ಶುರುವಾಗಿದೆ. ತಲೈವಾ ಜತೆ ಬಾಹುಬಲಿ ಖ್ಯಾತಿ ರಮ್ಯಾ ಕೃಷ್ಣ ಕೂಡ ಸಾಥ್ ನೀಡಿದ್ದಾರೆ.

    ಜೈಲಿನಲ್ಲಿ ಕದೀಮರನ್ನು ಬೆಂಡೆತ್ತಲು ರಜನೀಕಾಂತ್ ಬರುತ್ತಿದ್ದಾರೆ. ತಲೈವಾ ಲುಕ್ ನೋಡಿ ಇದೀಗ ಫಿದಾ ಆಗಿರುವ ಫ್ಯಾನ್ಸ್, ಚಿತ್ರದಲ್ಲಿ ಶಿವಣ್ಣ ಲುಕ್ ಹೇಗಿರಬಹುದು ಎಂದು ಕಾತರದಿಂದ ಕಾಯ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

    ರಮ್ಯಾಕೃಷ್ಣ- ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್? ಅಸಲಿ ವಿಚಾರ ಬಿಚ್ಚಿಟ್ಟ ಕೃಷ್ಣವಂಶಿ

    ಕ್ಷಿಣ ಭಾರತದ ಸ್ಟಾರ್ ನಟಿ ರಮ್ಯಾಕೃಷ್ಣ ವಯಸ್ಸು 50 ವರ್ಷವಾದ್ದರೂ ಈಕೆಯ ಮೇಲಿರುವ ಕ್ರೇಜ್ ಒಂದಚೂರು ಕಡಿಮೆಯಾಗಿಲ್ಲ. ಪವರ್‌ಫುಲ್ ಪಾತ್ರಗಳ ಮೂಲಕ ಅಭಿಮಾನಿಗಳನ್ನ ರಂಜಿಸುತ್ತಲೇ ಬಂದಿದ್ದಾರೆ. ಈಗ ತಮ್ಮ ಖಾಸಗಿ ವಿಚಾರವಾಗಿ ಸುದ್ದಿಯಲ್ಲಿದ್ದಾರೆ. ರಮ್ಯಾಕೃಷ್ಣ ಮತ್ತು ನಿರ್ದೇಶಕ ಕೃಷ್ಣವಂಶಿ ಡಿವೋರ್ಸ್ ವದಂತಿಗೆ ಪತಿ ಕೃಷ್ಣವಂಶಿ ರಿಯಾಕ್ಟ್ ಮಾಡಿದ್ದಾರೆ.

    ಕನ್ನಡದ ಜತೆ ಪರಭಾಷೆ ಚಿತ್ರಗಳಲ್ಲಿ ನೇಮು ಫೇಮು ಗಿಟ್ಟಿಸಿಕೊಂಡಿರುವ ನಟಿ ರಮ್ಯಾಕೃಷ್ಣಗೆ ಬಾಹುಬಲಿ ಚಿತ್ರದ ಶಿವಗಾಮಿ ಪಾತ್ರ ಮತ್ತಷ್ಟು ಹೆಸರನ್ನ ತಂದುಕೊಟ್ಟಿತ್ತು. ಸದಾ ಸಿನಿಮಾಗಳ ವಿಚಾರವಾಗಿ ಹೈಪ್ ಕ್ರಿಯೇಟ್ ಮಾಡೋ ನಟಿ ಈಗ ಡಿವೋರ್ಸ್ ವಿಚಾರವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪತಿ ಕೃಷ್ಣವಂಶಿ ಅಸಲಿ ವಿಚಾರ ಬಿಚ್ಚಿಟ್ಟಿದ್ದಾರೆ. ಇದನ್ನೂ ಓದಿ:‘ಪುಟ್ಟಪರ್ತಿ ಸಾಯಿಬಾಬಾ’ ಸಿನಿಮಾ ಮಾಡುವುದಾಗಿ ಘೋಷಿಸಿದ ಸಾಯಿ ಪ್ರಕಾಶ್ : ನಿರ್ದೇಶಕರ 100ನೇ ಸಿನಿಮಾವಿದು

    2003ರಲ್ಲಿ ಗುರುಹಿರಿಯರ ಸಮ್ಮುಖದಲ್ಲಿ ಹಸೆಮಣೆ ಏರಿದ್ದ ಈ ಜೋಡಿಯ ಪ್ರೀತಿಗೆ ಸಾಕ್ಷಿಯಾಗಿ ಒಬ್ಬ ಮಗನಿದ್ದಾನೆ. ಇತ್ತೀಚೆಗಷ್ಟೇ ನೀಡಿದ ಸಂದರ್ಶನದಲ್ಲಿ ಕೃಷ್ಣವಂಶಿಗೆ ನಿರೂಪಕಿ ಡಿವೋರ್ಸ್ ವದಂತಿಯ ಕುರಿತು ಪ್ರಶ್ನಿಸಿದ್ದಾರೆ. ಫ್ಯಾಮಿಲಿ ಜವಬ್ದಾರಿಗೆ ಹೆದರಿ ಮದುವೆಯೇ ಬೇಡವೆಂದು ಅಂದುಕೊಂಡಿದ್ದೆ, ನಂತರ ರಮ್ಯಾಕೃಷ್ಣ ಅವರೊಂದಿಗೆ ಮದುವೆಯಾಯಿತು. ಯಾವುದೇ ನಿಯಮಗಳನ್ನ ನನ್ನ ಮೇಲೆ ಹೇರದೆ, ನನನ್ನಷ್ಟಕ್ಕೆ ಇರೋಕೆ ಬಿಟ್ಟಳು. ಇನ್ನು ಅವರೊಂದಿಗೆ ಡಿವೋರ್ಸ್ ಅಂತೀರಾ, ಇದರಲ್ಲಿ ಸತ್ಯಾಂಶವಿಲ್ಲ. ಪಬ್ಲಿಕ್ ಫಿಗರ್ ಅಂದಮೇಲೆ ಇವೆಲ್ಲಾ ಕಾಮನ್ ಎಂದು ನಿರ್ದೇಶಕ ಕೃಷ್ಣವಂಶಿ ಮಾತನಾಡಿದ್ದಾರೆ. ಡಿವೋರ್ಸ್ ವದಂತಿಗೆ ತಮ್ಮ ಉತ್ತರದ ಮೂಲಕ ಅಂತ್ಯ ಹಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಭುದೇವ ನಟನೆಯ ಪ್ಯಾನ್ ಇಂಡಿಯಾ ಚಿತ್ರದಲ್ಲಿ `ಬಾಹುಬಲಿ’ ನಟಿ

    ಪ್ರಭುದೇವ ನಟನೆಯ ಪ್ಯಾನ್ ಇಂಡಿಯಾ ಚಿತ್ರದಲ್ಲಿ `ಬಾಹುಬಲಿ’ ನಟಿ

    ಇಂಡಿಯನ್ ಮೈಕಲ್ ಜಾಕ್ಸನ್ ಅಂತಲೇ ಫೇಮಸ್ ಆಗಿರುವ ಪ್ರಭುದೇವ ಸಂದೇಶ್ ಪ್ರೊಡಕ್ಷನ್ ಸಂಸ್ಥೆಯ ಮೂಲಕ ಮತ್ತೆ ಕನ್ನಡ ಸಿನಿಮಾಗೆ ಬಣ್ಣ ಹಚ್ತಿದ್ದಾರೆ. ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಸ್ಟಾರ್ ನಟ ಪ್ರಭುದೇವ ಜೊತೆ ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಾ ಕೃಷ್ಣ ಕೂಡ ಕಾಣಿಸಿಕೊಳ್ತಿದ್ದಾರೆ.

     

    View this post on Instagram

     

    A post shared by Sandesh Nagraj (@sandesh_nagaraju)

    ದಕ್ಷಿಣ ಭಾರತದ ಸ್ಟಾರ್ ನಟ ಪ್ರಭುದೇವ ಮತ್ತೆ ಕನ್ನಡ ಸಿನಿಮಾಗೆ ಬಣ್ಣ ಹಚ್ಚಲು ರೆಡಿಯಾಗಿದ್ದಾರೆ. ಸಂದೇಶ್ ಪ್ರೊಡಕ್ಷನ್‌ನ 31ನೇ ಚಿತ್ರ ಇದಾಗಿದ್ದು, ಕನ್ನಡ, ತೆಲುಗಿ, ತಮಿಳು, ಹಿಂದಿ ಮತ್ತು ಮಲಯಾಳಂನಲ್ಲಿ ಈ ಚಿತ್ರ ತೆರೆ ಕಾಣಲಿದೆ. `ಬಾಹುಬಲಿ’ ಖ್ಯಾತಿಯ ಶಿವಗಾಮಿ ಅಲಿಯಾಸ್ ನಟಿ ರಮ್ಯಾ ಕೃಷ್ಣ ಕೂಡ ಈ ಚಿತ್ರಕ್ಕೆ ಸಾಥ್ ನೀಡ್ತಿದ್ದಾರೆ. ಪ್ರಭುದೇವ ಜೊತೆ ಪ್ರಮುಖ ಪಾತ್ರಕ್ಕೆ ರಮ್ಯಾ ಕೃಷ್ಣ ಬಣ್ಣ ಹಚ್ಚಲಿದ್ದಾರೆ. ಸಾಕಷ್ಟು ಸ್ಟಾರ್ ಕಲಾವಿದರ ದಂಡೇ ಈ ಚಿತ್ರದಲ್ಲಿರಲಿದೆ. ಇದನ್ನೂ ಓದಿ: ಮಾಲ್ಡೀವ್ಸ್‌ನಲ್ಲಿ ತನ್ನ ಹುಡುಗನ ಜೊತೆ ಕಾಣಿಸಿಕೊಂಡ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಿನ್ನು

    ವಿನಿ ವೆಂಕಟೇಶ್ ನಿರ್ದೇಶನದ ಚಿತ್ರದಲ್ಲಿ ಡ್ಯಾನ್ಸ್ ಕಿಂಗ್ ಪ್ರಭುದೇವ ಎಂದೂ ಮಾಡಿರದ ಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರ ಜುಲೈ 5ರಿಂದ ಶುರುವಾಗಲಿದೆ. ಅಂಡಮಾನ್, ನಿಕೋಬಾರ್, ಬೆಂಗಳೂರು ಸೇರಿದಂತೆ ಹಲವಡೆ ಚಿತ್ರೀಕರಣ ನಡೆಯಲಿದೆ. ಇನ್ನು ಸದ್ಯದಲ್ಲೇ ಚಿತ್ರದ ಟೈಟಲ್ ಕೂಡ ರಿವೀಲ್ ಮಾಡಲಿದೆ ಚಿತ್ರತಂಡ.

  • ಬಾಹುಬಲಿ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ? ಕೊನೆಗೂ ಮೌನ ಮುರಿದ ಶ್ರೀದೇವಿ

    ಬಾಹುಬಲಿ ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ? ಕೊನೆಗೂ ಮೌನ ಮುರಿದ ಶ್ರೀದೇವಿ

    ಮುಂಬೈ: ಎಸ್‍ಎಸ್ ರಾಜಮೌಳಿ ನಿರ್ದೇಶನದ ಬ್ಲಾಕ್‍ಬಸ್ಟರ್ ಹಿಟ್ ಚಿತ್ರ ಬಾಹುಬಲಿ ಯಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ ಎಂಬ ಬಗ್ಗೆ ಕೊನೆಗೂ ನಟಿ ಶ್ರೀದೇವಿ ಮೌನ ಮುರಿದಿದ್ದಾರೆ.

    ರಾಜಮೌಳಿ ಅವರು ಇತ್ತೀಚಿನ ಎಲ್ಲಾ ಸಂದರ್ಶನಗಳಲ್ಲಿ ನನ್ನ ಬಗ್ಗೆ ಮಾತನಾಡಿದ್ದು ಕೇಳಿ ನಿಜಕ್ಕೂ ಶಾಕ್ ಆಗಿದೆ, ಬೇಜಾರಾಗಿದೆ ಎಂದು ಶ್ರೀದೇವಿ ಪತ್ರಿಕೆಯೊಂದಕ್ಕೆ ಹೇಳಿದ್ದಾರೆ.

    ನನಗೆ ತುಂಬಾ ಆಶ್ಚರ್ಯ ಹಾಗೂ ಬೇಸರವಾಯ್ತು. ರಾಜಮೌಳಿ ತುಂಬಾ ಶಾಂತ ಹಾಗೂ ಘನತೆಯುಳ್ಳ ವ್ಯಕ್ತಿ. ಅವರೊಂದಿಗೆ ಕೆಲಸ ಮಾಡಲು(ಅವಕಾಶ ಸಿಕ್ಕಿದ್ದರೆ) ನನಗೆ ತುಂಬಾ ಸಂತೋಷವಿದೆ. ಆದ್ರೆ ಅವರು ಈ ವಿಚಾರದ ಬಗ್ಗೆ ಮಾತನಾಡಿದ ರೀತಿ ನೋಡಿ ನನಗೆ ತುಂಬಾ ದುಃಖವಾಗಿದೆ ಎಂದು ಶ್ರೀದೇವಿ ಹೇಳಿದ್ದಾರೆ.

    ನಟಿ ಶ್ರೀದೇವಿ ಬಾಹುಬಲಿ 2 ಚಿತ್ರದಲ್ಲಿ ನಟಿಸಲು ನಿರಾಕರಿಸಿದ್ದು ಯಾಕೆ ಎಂಬ ನಿಜವಾದ ಕಾರಣ ಈವರೆಗೆ ಯಾರೂ ಬಹಿರಂಗಪಡಿಸಿಲ್ಲ. ಆದ್ರೆ ಶ್ರೀದೇವಿ ಹೆಚ್ಚಿನ ಸಂಭಾವನೆಗಾಗಿ ಡಿಮ್ಯಾಂಡ್ ಮಾಡಿದ್ದರು. ನಿರ್ದೇಶಕರು ಅಷ್ಟೊಂದು ಹೆಚ್ಚಿನ ಸಂಭಾವನೆ ಕೊಡಲು ತಯಾರಿರಲಿಲ್ಲ. ಹೀಗಾಗಿ ಶಿವಗಾಮಿ ಪಾತ್ರವನ್ನು ರಮ್ಯಾಕೃಷ್ಣ ನಿರ್ವಹಿಸಿದ್ರು ಎಂಬ ವದಂತಿಯೂ ಕೇಳಿ ಬಂದಿತ್ತು.

    ಆದ್ರೆ ಇದನ್ನ ತಳ್ಳಿಹಾಕಿರುವ ಶ್ರೀದೇವಿ, ನಾನು ಹಾಗೆ ಮಾಡಿದ್ರೆ ಜನ ನನ್ನನ್ನ ಪ್ಯಾಕ್ ಮಾಡಿ ಕಳಿಸ್ತಿದ್ರು. ನಾನು ಈ ಥರ ಡಿಮ್ಯಾಂಡ್ ಮಾಡಿದ್ದೀನಿ ಎಂದು ನಿರ್ಮಾಪಕರು ತಪ್ಪಾಗಿ ರಾಜಮೌಳಿ ಅವರಿಗೆ ಹೇಳಿದ್ದಾರೇನೋ ಗೊತ್ತಿಲ್ಲ. ಆದ್ರೆ ಈ ರೀತಿ ಮಾತನಾಡೋದು ಸರಿಯಲ್ಲ ಎಂದಿದ್ದಾರೆ.

    ಸಂದರ್ಶನವೊಂದರಲ್ಲಿ ನಿರೂಪಕರು ಶ್ರೀದೇವಿ ಈ ಚಿತ್ರವನ್ನ ನಿರಾಕರಿಸಿದ್ದು ಯಾಕೆ ಎಂದು ಕೇಳಬೇಕಿತ್ತು. ಆದ್ರೆ ಅದರ ಬದಲು ಜನರ ಮೆಚ್ಚುಗೆಗೆ ಪಾತ್ರವಾಗಿರೋ ಬಾಹುಬಲಿ ಚಿತ್ರ ನೋಡಿದ್ರಾ ಎಂದು ಕೇಳಿದ್ರು. ಇದಕ್ಕೆ ಉತ್ತರಿಸಿದ ಶ್ರೀದೇವಿ, ಇಲ್ಲ. ನಿಜ ಹೇಳ್ಬೇಕು ಅಂದ್ರೆ ನಾನು ಈ ಚಿತ್ರವನ್ನ ನೋಡಿಲ್ಲ. ಆದ್ರೆ ನಾನು ಒಂದು ವಿಚಾರದ ಬಗ್ಗೆ ಮಾತನಾಡ್ಬೇಕು. ಇದು ದೊಡ್ಡ ಸುದ್ದಿಯಾಗಿದೆ. ಜನ ಇಷ್ಟಬಂದಂತೆ ಊಹೆ ಮಾಡಿಕೊಳ್ತಿದ್ದಾರೆ. ಇದಕ್ಕೆ ನನ್ನದೇ ಆದ ಕಾರಣಗಳಿವೆ. ಈಗಾಗಲೇ ಬಾಹುಬಲಿಯ ಎರಡು ಭಾಗಗಳು ಬಂದಿವೆ. ಆದ್ರೆ ಈಗ ಅದರ ಬಗ್ಗೆ ನನ್ನನ್ನು ಪ್ರಶ್ನಿಸುತ್ತಿದ್ದಾರೆ. ನಾನು ನಿರಾಕರಿಸಿದ ಅನೇಕ ಚಿತ್ರಗಳಿವೆ. ಅದರ ಬಗ್ಗೆ ಯಾಕೆ ಮಾತಾಡ್ತಿಲ್ಲ? ಈ ಚಿತ್ರದ ಬಗ್ಗೆ ಮಾತ್ರ ಯಾಕೆ? ನಾನು ಅಲ್ಲಿಗೆ ಹೋಗಿ ಮಾತಾಡ್ತೀನಿ ಅಂದ್ರು.