Tag: Ranebennur Police

  • ಶಾಸಕ ಪ್ರಕಾಶ್‌ ಕೋಳಿವಾಡ ಆಪ್ತಸಹಾಯಕನ ಮನೆಗೆ ಕನ್ನ

    ಶಾಸಕ ಪ್ರಕಾಶ್‌ ಕೋಳಿವಾಡ ಆಪ್ತಸಹಾಯಕನ ಮನೆಗೆ ಕನ್ನ

    – 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು

    ಹಾವೇರಿ: ಶಾಸಕ ಪ್ರಕಾಶ್‌ ಕೋಳಿವಾಡ (Prakash Koliwad) ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿರುವ ಘಟನೆ ಹಾವೇರಿ (Haveri) ಜಿಲ್ಲೆಯ ರಾಣೇಬೆನ್ನೂರು ನಗರದ ಕಂಠಿಬಿರೇಶ್ವರ ನಗರದಲ್ಲಿ ನಡೆದಿದೆ.

    ಶಾಸಕ ಪ್ರಕಾಶ್‌ ಕೋಳಿವಾಡ ಅಪ್ತ ಸಹಾಯಕರಾಗಿ ಕೆಲಸ ಮಾಡ್ತಿದ್ದ ಶ್ರೀನಿವಾಸ ಹಳ್ಳಳಿ ಅವರ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಟ್ರಿಜೋರಿಯಲ್ಲಿಟ್ಟಿದ್ದ ಮಾಂಗಲ್ಯಸರ ಮತ್ತು ಕಿವಿ ಒಲೆ ಸೇರಿದಂತೆ ನಾಲ್ಕುವರೆ ಲಕ್ಷ ರೂ. ನಗದನ್ನು ದೋಚಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ | ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಮನೆಗಳ ಮೇಲೆ ಇಡಿ ದಾಳಿ

    ಶ್ರೀನಿವಾಸ ಅವರು ಬೆಂಗಳೂರಿಗೆ ತೆರಳಿದ್ದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 40 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PSI

    40 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ PSI

    ಹಾವೇರಿ: 40 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ರಾಣೇಬೆನ್ನೂರು (Ranebennur) ನಗರ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಪಿಎಸ್‌ಐ ವಾಹನ ಚಾಲಕ ಇಬ್ಬರೂ ಲೋಕಾಯುಕ್ತ (Karnataka Lokayukta) ಬಲೆ ಬಿದ್ದಿದ್ದಾರೆ.

    ರಾಣೆಬೆನ್ನೂರು ಶಹರ ಠಾಣೆಯ (Ranebennur Police Station) ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಸಚಿನ್ ಆರೋಪಿಗಳಾಗಿದ್ದಾರೆ. ಇದನ್ನೂ ಓದಿ: ಸಿಲಿಕಾನ್‌ ವ್ಯಾಲಿ ಬ್ಯಾಂಕ್‌ನಂತೆ ಅಮೆರಿಕದ 186 ಬ್ಯಾಂಕ್‌ಗಳು ಅಪಾಯದಲ್ಲಿ – ಅಧ್ಯಯನ

    ರಾಣೇಬೆನ್ನೂರು ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು 50 ಸಾವಿರ ರೂ. ಬೇಡಿಕೆಯಿಟ್ಟಿದ್ದರು. ಫೀರೋಜಾ ಎಂಬ ವ್ಯಕ್ತಿ 40 ಸಾವಿರ ರೂ. ಹಣವನ್ನ ಟೀ ಸ್ಟಾಲ್‌ನಲ್ಲಿ ಕೊಟ್ಟು ಹೋಗಿದ್ದರು. ಈ ಹಣವನ್ನ ಚಾಲಕ ತೆಗೆದುಕೊಂಡು ಪಿಎಸ್‌ಐಗೆ ಕೊಡುತ್ತಿದ್ದ ವೇಳೆ ರೇಡ್ ಹ್ಯಾಂಡ್‌ಆಗಿ ಸಿಕ್ಕಿ ಬಿದ್ದಿದ್ದಾರೆ.

    ಹಾವೇರಿ ಲೋಕಾಯುಕ್ತ ಅಧಿಕಾರಿಗಳ ನೇತ್ರತ್ವದಲ್ಲಿ ದಾಳಿ ನಡೆಸಿದ್ದು, ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು : ಮೋದಿ ಬಳಿ ಅಫ್ರಿದಿ ಮನವಿ