Tag: rani chennamma

  • ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಬೆಳಗಾವಿ ಹಾಸ್ಟೆಲ್‌ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ ಸಾವು

    ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಎಂಬಿಎ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ವಿವಿ ಕ್ಯಾಂಪಸ್ ನಲ್ಲಿ ಇರುವ ಕೃಷ್ಣ ಹಾಸ್ಟೆಲ್ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.‌

    ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಚೇತನ್‌ ನಾಯಿಕ (25) ಮೃತ ವಿದ್ಯಾರ್ಥಿ. ಹಾಸ್ಟೆಲ್‌ನಿಂದ ಜಿಗಿದ ವಿದ್ಯಾರ್ಥಿಗೆ ಗಂಭೀರ ಗಾಯವಾಗಿತ್ತು.‌ ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು.‌ ಈ ಘಟನೆ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: Ballari | ಐವಿ ದ್ರಾವಣ ಪೂರೈಕೆ ಮಾಡಿದ ಕಂಪನಿ ವಿರುದ್ಧ ಕೇಸ್ ದಾಖಲಿಸಲು ತಾಕೀತು

    ಪ್ರಕರಣ ಸಂಬಂಧ ಡಿಸಿಎಂ ರೋಹನ್ ಜಗದೀಶ್ ಮಾಹಿತಿ ಮಾಹಿತಿ ನೀಡಿದ್ದು, ಹಾಸ್ಟೆಲ್ ಮೇಲಿನಿಂದ ಬಿದ್ದ ವಿದ್ಯಾರ್ಥಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚೇತನ್‌ ಅವರನ್ನು ಕುಟುಂಬಸ್ಥರು ಡಿಸ್ಚಾರ್ಜ್ ಮಾಡಿದ್ದಾರೆ. ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ವಿದ್ಯಾರ್ಥಿ ತಂದೆ ಇದುವರೆಗೂ ದೂರನ್ನು ನೀಡಿಲ್ಲ ಎಂದರು.

    ಪ್ರಜ್ಞಾಹೀನ ಸ್ಥಿತಿಯಲ್ಲಿ ಚೇತನ್‌ನನ್ನು ಪೋಷಕರು ಮನೆಗೆ ಕರೆದುಕೊಂಡು ಹೊಗಿದ್ದರು. ಚೇತನ್‌ ಮನೆಯಲ್ಲಿ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.‌

     

  • ಕಾಮಣ್ಣನ ಪ್ರತಿಷ್ಠಾಪನೆಗೆ ನಿರಾಕರಣೆ- ಮತ್ತೊಂದು ವಿವಾದಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಈದ್ಗಾ ಮೈದಾನ

    ಕಾಮಣ್ಣನ ಪ್ರತಿಷ್ಠಾಪನೆಗೆ ನಿರಾಕರಣೆ- ಮತ್ತೊಂದು ವಿವಾದಕ್ಕೆ ಸಾಕ್ಷಿಯಾದ ಹುಬ್ಬಳ್ಳಿ ಈದ್ಗಾ ಮೈದಾನ

    ಹುಬ್ಬಳಿ: ಇಷ್ಟು ದಿನ ತಣ್ಣಗಾಗಿದ್ದ ಹುಬ್ಬಳಿ (Hubballi) ರಾಣಿ ಚೆನ್ನಮ್ಮ (Rani Chennamma) ಈದ್ಗಾ ಮೈದಾನದಲ್ಲಿ (Idgah Maidan) ಮತ್ತೆ ವಿವಾದದ ಕಿಡಿ ಹೊತ್ತಿಕೊಂಡಿದೆ. ಕಾಮಣ್ಣನ ಪ್ರತಿಷ್ಠಾಪನೆಗೆ ಹಿಂದೂಪರ ಸಂಘಟನೆಗಳ ಮನವಿಗೆ ಮಹಾನಗರ ಪಾಲಿಕೆಯ ದ್ವಂದ್ವ ನೀತಿಯಿಂದಾಗಿ ಮತ್ತೆ ಈದ್ಗಾ ಮೈದಾನ ಸುದ್ದಿಯಾಗಿದೆ.

    ಹಿಂದೂಪರ ಸಂಘಟನೆಗಳ ಮನವಿಯ ಮೇರೆಗೆ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ಮೆಯರ್ ಈರೇಶ್ ಅಂಚಟಗೇರಿ ಅನುಮತಿ ನೀಡಿದ್ದರು. ಆದರೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಅನುಮತಿ ನೀಡಲು ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ನಿರಾಕರಣೆ ಮಾಡಿದ್ದಾರೆ. ಆಯುಕ್ತರ ನಿರ್ಧಾರಕ್ಕೆ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಮಾಡಾಳ್ ಭ್ರಷ್ಟಾಚಾರ ಪಕ್ಷಕ್ಕೆ ಮುಜುಗರ; ಆರೋಪಿಗಳ ಪರ ಜೈಕಾರ ಹಾಕೋದು ಡಿಕೆಶಿ ಸಂಸ್ಕೃತಿ – ಸಿ.ಟಿ ರವಿ

    ಅನುಮತಿ ನೀಡಿದರೆ ಈದ್ಗಾ ಮೈದಾನದ ಆವರಣದೊಳಗೆ ಕಾಮಣ್ಣನ ಕೂರಿಸುತ್ತೇವೆ. ಇಲ್ಲದಿದ್ದರೆ ಮೈದಾನದ ಹೊರಗಡೆಯೇ ಮೂರ್ತಿ ಪ್ರತಿಷ್ಠಾಪನೆ ಮಾಡುತ್ತೇವೆ. ಮೂರು ದಿನಗಳ ಕಾಲ ಹೋಳಿ (Holi) ಆಚರಣೆ ಮಾಡುತ್ತೇವೆ ಎಂದು ಮೈದಾನದ ಎದುರು ಪ್ರತಿಭಟಿಸಿ ಪಾಲಿಕೆಗೆ ಎಚ್ಚರಿಕೆ ನೀಡಿವೆ. ಪ್ರತಿಭಟನೆ ಬೆನ್ನಲ್ಲೇ ಮೈದಾನಕ್ಕೆ ಬಿಗಿ ಪೊಲೀಸ್ ಭದ್ರತೆ ಹಾಕಲಾಗಿದೆ. ಈ ಹಿಂದೆ ಗಣಪತಿ ಪ್ರತಿಷ್ಠಾಪನೆ (Ganesh Chaturth) ವಿಚಾರದಲ್ಲಿ ಈದ್ಗಾ ಮೈದಾನ ಸುದ್ದಿಯಾಗಿತ್ತು. ಇದನ್ನೂ ಓದಿ: ಕಲರ್ ಎರಚಬೇಡಿ ಎಂದಿದ್ದಕ್ಕೆ ವೃದ್ಧೆಯ ಕೊಂದೇ ಬಿಟ್ಟ ಯುವಕರು!

  • ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ರಾಣಿ ಚೆನ್ನಮ್ಮ ವಿವಿಯಿಂದ ನಟ ರಮೇಶ್ ಅರವಿಂದ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್

    ನ್ನಡದ ಹೆಸರಾಂತ ನಟ, ಮೊನ್ನೆಯಷ್ಟೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿರುವ ರಮೇಶ್ ಅರವಿಂದ್ (Ramesh Aravind) ಸೇರಿ ಮೂವರಿಗೆ ರಾಣಿ ಚೆನ್ನಮ್ಮ (Rani Chennamma) ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ (Honorary Doctorate) ಘೋಷಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ (Sandalwood) ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಮೇಶ್ ಅವರನ್ನು ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

    ರಮೇಶ್ ಅರವಿಂದ್ ಅವರ ಜೊತೆ ಸಮಾಜ ಸೇವೆ ಕ್ಷೇತ್ರದಲ್ಲಿ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆಗೈದ ಮಾತೆ ಅಕ್ಕ ಅನ್ನಪೂರ್ಣ ‌ತಾಯಿಗೆ ಗೌರವ ಡಾಕ್ಟರೇಟ್ ಘೋಷಣೆಯಾಗಿದೆ. ಸೆ.14 ರಂದು ಮಧ್ಯಾಹ್ನ 12 ಕ್ಕೆ ಸುವರ್ಣಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ವಿ.ವಿ ತಿಳಿಸಿದೆ. ಇದನ್ನೂ ಓದಿ:ನಂದಿನಿ ಔಟ್ ಆದ್ಮೇಲೆ ಸಾನ್ಯ ಜೊತೆ ಜಶ್ವಂತ್ ಲವ್ವಿ-ಡವ್ವಿ: ರೂಪೇಶ್‌ಗೆ ಟೆನ್ಷನ್ ಶುರು

    ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ವಹಿಸಲಿದ್ದು, ಆಂಧ್ರದ ಕೇಂದ್ರಿಯ ಬುಡಕಟ್ಟು ವಿವಿ ಕುಲಪತಿ ಪ್ರೊ. ಟಿ.ವಿ ಕಟ್ಟಿಮನಿ ಅವರಿಂದ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.  ಉನ್ನತ ಶಿಕ್ಷಣ ‌ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ ಎಂದು ರಾಣಿ ‌ಚೆನ್ನಮ್ಮ ವಿವಿ ಕುಲಪತಿ ಪ್ರೊ. ರಾಮಚಂದ್ರೆಗೌಡ ಮಾಹಿತಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೊಂದು ವಿವಾದ – ಮಾಣಿಕ್ ಷಾ ಮೈದಾನದ ದ್ವಾರಗಳ ಮೇಲಿದ್ದ ಟಿಪ್ಪು, ಚೆನ್ನಮ್ಮ ಹೆಸರಿಗೆ ಬಣ್ಣ!

    ಮತ್ತೊಂದು ವಿವಾದ – ಮಾಣಿಕ್ ಷಾ ಮೈದಾನದ ದ್ವಾರಗಳ ಮೇಲಿದ್ದ ಟಿಪ್ಪು, ಚೆನ್ನಮ್ಮ ಹೆಸರಿಗೆ ಬಣ್ಣ!

    ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ವರ್ಸಸ್ ಸಾವರ್ಕರ್ ವಿಚಾರದ ಬೆನ್ನಲ್ಲೇ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದೆ. ರಾಜ್ಯ ರಾಜಧಾನಿಯ ಮಾಣಿಕ್ ಷಾ ಪರೇಡ್ ಮೈದಾನದ 2 ದ್ವಾರಗಳ ಮೇಲಿದ್ದ ಹೋರಾಟಗಾರರ ಹೆಸರನ್ನು ತೆಗೆದು ಹಾಕಿದೆ.

    ನಿನ್ನೆಯಷ್ಟೇ ದೇಶದಲ್ಲಿ ಅದ್ಧೂರಿ ಸ್ವಾತಂತ್ರ್ಯ ದಿನಾಚರಣೆ ಮುಗಿದಿದೆ. ಇತ್ತ ರಾಜ್ಯದಲ್ಲಿ ಟಿಪ್ಪು ವರ್ಸಸ್ ಸಾವರ್ಕರ್ ಹೆಸರಿನಲ್ಲಿ ಜಟಾಪಟಿ ಹೆಚ್ಚಾಗುತ್ತಿದೆ. ಈ ನಡುವೆ ಸರ್ಕಾರ ಸ್ವಾತಂತ್ರ್ಯ ದಿನಾಚರಣೆ ನಡೆದ ಜಾಗದಲ್ಲೇ ಹೋರಾಟಗಾರರ ಹೆಸರನ್ನು ಕೈಬಿಟ್ಟಿರುವುದು ಮತ್ತೊಂದು ವಿವಾದಕ್ಕೆ ಕಾರಣವಾಗುತ್ತಿದೆ.

    ಎಂಜಿ ರೋಡ್ ಮೆಟ್ರೋ ನಿಲ್ದಾಣದ ಹಿಂಭಾಗ ಇರುವ ಮಾಣಿಕ್ ಷಾ ಮೈದಾನ ಎರಡು ದ್ವಾರಗಳ ಪೈಕಿ ಒಂದಕ್ಕೆ ರಾಣಿ ಚೆನ್ನಮ್ಮ, ಮತ್ತೊಂದಕ್ಕೆ ಟಿಪ್ಪು ಸುಲ್ತಾನ್ ದ್ವಾರ ಎಂದು ಹೆಸರಿಡಲಾಗಿತ್ತು. ಆದರೆ ಈ ಬಾರಿಯ ಕಾರ್ಯಕ್ರಮದ ಸಿದ್ಧತೆ ವೇಳೆ ಮೈದಾನಕ್ಕೆ ಬಣ್ಣ ಬಳಿಯುವಾಗ ಈ ಎರಡು ಹೆಸರಿಗೂ ಬಣ್ಣ ಬಳಿಯಲಾಗಿದೆ. ಪ್ರತಿವರ್ಷ ಈ ದ್ವಾರಗಳಿಗೆ ಬಣ್ಣ ಬಳೆಯುವುದರ ಜೊತೆಗೆ ಹೆಸರುಗಳನ್ನು ಸಿಂಗರಿಸಲಾಗುತ್ತಿತ್ತು. ಆದರೆ ಈ ಬಾರಿ ಹೆಸರುಗಳನ್ನು ಸಂಪೂರ್ಣವಾಗಿ ಅಳಿಸಲಾಗಿದೆ. ಇದನ್ನೂ ಓದಿ: ಪ್ರತಿ ಲೀಟರ್‌ಗೆ 2 ರೂಪಾಯಿ ದರ ಹೆಚ್ಚಿಸಿದ ಅಮುಲ್

    ಇನ್ನೂ ಈ ವಿಚಾರವಾಗಿ ಹಲವರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಹೊರಟಿದೆ. ಇಬ್ಬರು ಮಹಾನ್ ಹೋರಾಟಗಾರರಿಗೆ ಸರ್ಕಾರ ಮಾಡುತ್ತಿರುವ ಅವಮಾನವಾಗಿದೆ. ಹೆಸರನ್ನು ಮುಚ್ಚಿ ಹಾಕುವುದರಿಂದ ಇತಿಹಾಸ ಮುಚ್ಚಿಡಲು ಸಾಧ್ಯವಿಲ್ಲ. ತಕ್ಷಣ ಸರ್ಕಾರ ಇದನ್ನ ಸರಿಪಡಿಸಬೇಕೆಂದು ಇಲ್ಲಿನ ಸ್ಥಳೀಯರು ಒತ್ತಾಯಿಸಿದ್ದಾರೆ. ಒಟ್ಟಾರೆ ಬೂದಿ ಮುಚ್ಚಿದ ಕೆಂಡದಂತಿರೋ ರಾಜ್ಯದ ಸದ್ಯದ ಪರಿಸ್ಥಿತಿ ನಡುವೆ ಮತ್ತೊಂದು ವಿವಾದ ಸರ್ಕಾರದ ಹೆಗಲೇರಿದೆ. ಇದನ್ನೂ ಓದಿ: SDPI ನವರು ಪಾಕಿಸ್ತಾನಕ್ಕೆ ಹೋಗಲಿ – ಶಾಸಕ ಬೋಪಯ್ಯ ಕಿಡಿ

    Live Tv
    [brid partner=56869869 player=32851 video=960834 autoplay=true]

  • ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗಾಗಿ ಗಲಾಟೆ- ಎಸಿ, ಡಿವೈಎಸ್‍ಪಿ ಕಾರು ಜಖಂ

    ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಮೂರ್ತಿ ಪ್ರತಿಷ್ಠಾಪನೆಗಾಗಿ ಗಲಾಟೆ- ಎಸಿ, ಡಿವೈಎಸ್‍ಪಿ ಕಾರು ಜಖಂ

    ಗದಗ: ಸಂಗೊಳ್ಳಿ ರಾಯಣ್ಣ ಹಾಗೂ ಕಿತ್ತೂರು ರಾಣಿ ಚೆನ್ನಮ್ಮನ ಮೂರ್ತಿ ಪ್ರತಿಷ್ಠಾಪನೆ ಪ್ರತಿಷ್ಠೆಗಾಗಿ 2 ಸಮುದಾಯದ ನಡುವೆ ಗಲಾಟೆ ನಡೆದಿರುವ ಘಟನೆ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ನಡೆದಿದೆ.

    ಬಳಗಾನೂರ ಗ್ರಾಮದ ಬಸ್ ನಿಲ್ದಾಣದ ಬಳಿ ಇರುವ ಜಾಗದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಹಾಲುಮತ ಕುರುಬ ಸಮಾಜದವರು. ಅದೇ ಜಾಗದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಅಂತ ಪಂಚಮಸಾಲಿ ಸಮುದಾಯವರ ನಡುವೆ ಜಿದ್ದಾಜಿದ್ದಿ ನಡೆಯುತ್ತಿದೆ. ಕಳೆದ ನಾಲ್ಕೈದು ವರ್ಷಗಳಿಂದ ಈ ಎರಡು ಸಮುದಾಯದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದ್ದು, ಈ ಹಿಂದೆ ಹಾಕಿದ್ದ ರಾಣಿ ಚೆನ್ನಮ್ಮ ನಾಮ ಫಲಕವನ್ನು ತೆರವುಗೊಳಿಸಲಾಗಿತ್ತು. ಈಗ ರಾತ್ರೋರಾತ್ರಿ ನಿರ್ಮಾಣವಾಗಿದ್ದ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ತೆರವುಗೊಳಿಸಿದ್ದಾರೆ.

    ಇದರಿಂದ ರಾಯಣ್ಣ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಈ ವೇಳೆ ಪೊಲೀಸರು ಗುಂಪು ಚದುರಿಸಲು ಮುಂದಾದವ ಹಂತದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಗುಂಪು ಚದುರಿಸಲು ಲಘುಲಾಠಿ ಪ್ರಹಾರ ಮಾಡಿದ್ದರು. ಈ ವೇಳೆ ಕೆಲ ಕಿಡಿಗೇಡಿಗಳು ಗದಗ ಎಸಿ ರಾಯಪ್ಪ ಹಾಗೂ ಡಿವೈಎಸ್‍ಪಿ ಪ್ರಹ್ಲಾದ್ ಅವರ ಎರಡು ವಾಹನಕ್ಕೆ ಕಲ್ಲು ಹೊಡೆದು ಜಖಂ ಗೊಳಿಸಿದ್ದಾರೆ.

    ಘಟನೆಯಲ್ಲಿ ಸಂಬಂಧ ಎರಡು ಸಮುದಾಯದ ಹತ್ತಾರು ಜನರ ಬಂಧನ ಮಾಡಲಾಗಿದೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು ಬೀಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ. ಈ ಎಲ್ಲಾ ಘಟನೆಗೆ ಕಾರಣ ಸಚಿವ ಸಿ.ಸಿ ಪಾಟೀಲ್ ಎಂಬುದು ರಾಯಣ್ಣ ಬ್ರಿಗೇಡ್ ಸಂಘಟಿಕರ ಆರೋಪವಾಗಿದೆ. ಸಚಿವ ಸಿ.ಸಿ ಪಾಟೀಲ್ ಒಂದು ಸಮುದಾಯಕ್ಕೆ ಮಾತ್ರ ಪ್ರೋತ್ಸಾಹಿಸಿ ಅಧಿಕಾರಿಗಳನ್ನು ಬಳಸಿಕೊಂಡು ಸಂಗೊಳ್ಳಿ ರಾಯಣ್ಣ ಮೂರ್ತಿ ತೆರವುಗೊಳಿಸಿದ್ದಾರೆ ಎಂಬ ಆರೋಪಿಸಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಸ್ಥಿತಿ ತಿಳಿಗೊಳಿಸಲು ಮುಂದಾಗಿದ್ದಾರೆ. ಬಳಗಾನೂರ ಗ್ರಾಮದಲ್ಲಿ ಸದ್ಯಕ್ಕೆ ಬೂದಿಮುಚ್ಚಿದ ಕೆಂಡದಂತಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ರೈಲು ತಡವಾಗಿದ್ರಿಂದ ತಪ್ಪಿದ ಪೊಲೀಸ್ ಪರೀಕ್ಷೆ – ಆ.30 ರೊಳಗೆ ಅಗತ್ಯ ದಾಖಲೆ ಸಲ್ಲಿಸುವಂತೆ ಸೂಚನೆ

    ರೈಲು ತಡವಾಗಿದ್ರಿಂದ ತಪ್ಪಿದ ಪೊಲೀಸ್ ಪರೀಕ್ಷೆ – ಆ.30 ರೊಳಗೆ ಅಗತ್ಯ ದಾಖಲೆ ಸಲ್ಲಿಸುವಂತೆ ಸೂಚನೆ

    ಬೆಂಗಳೂರು: ರಾಣಿ ಚೆನ್ನಮ್ಮ ರೈಲು ತಡವಾಗಿದ್ದರಿಂದ ಪರೀಕ್ಷೆಗೆ ಹಾಜರಾಗಲು ಅಸಾಧ್ಯವಾದ ಅಭ್ಯರ್ಥಿಗಳಿಗೆ ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಸೂಚನೆ ನೀಡಲಾಗಿದೆ.

    ಸಶಸ್ತ್ರ ಮೀಸಲು ಪೊಲೀಸ್ ಕಾನ್ಸ್‍ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆ ಸಲ್ಲಿಸಬೇಕಾದ ಮಾಹಿತಿ ಹೀಗಿದೆ:
    1) ಅಭ್ಯರ್ಥಿ ಕ್ರಮ ಸಂಖ್ಯೆ
    2) ಹೆಸರು
    3) ಅರ್ಜಿ ಸಂಖ್ಯೆ
    4)ಪರೀಕ್ಷಾ ಕೇಂದ್ರ & ವಿಳಾಸ
    5) ಪ್ರಯಾಣದ ದಿನಾಂಕ
    6) ರೈಲು ಕಾಯ್ದಿರಿಸಿದ ಮುಂಗಡ ಟಿಕೆಟ್ ಪ್ರತಿ & ಸಂಖ್ಯೆ
    7) ಮೊಬೈಲ್ ಸಂಖ್ಯೆ

    ಈ ನಮೂನೆಯಲ್ಲಿ ಭರ್ತಿಗೊಳಿಸಿ ಮೂಲಪ್ರತಿಯನ್ನು ಆಗಸ್ಟ್ 30ರೊಳಗೆ ಎಡಿಜಿಪಿ (ನೇಮಕಾತಿ)ರ ಬೆಂಗಳೂರು ಕಚೇರಿಗೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಚೆನ್ನಮ್ಮ ಎಕ್ಸ್ ಪ್ರೆಸ್ ರೈಲು ತಡವಾಗಲು ಪ್ರಯಾಣಿಕರೇ ಕಾರಣ – ರೈಲ್ವೇ ಅಧಿಕಾರಿಗಳಿಂದ ಸ್ಪಷ್ಟನೆ

    ಏನಿದು ಘಟನೆ?:
    ಮಹಾರಾಷ್ಟ್ರದ ಕೊಲ್ಹಾಪುರದಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್ ರೈಲು ಆಗಸ್ಟ್ 5ರಂದು ಮಾರ್ಗ ಮಧ್ಯದಲ್ಲೇ ಸುಮಾರು 7 ಗಂಟೆಗಳ ಕಾಲ ನಿಂತ ಹಿನ್ನೆಲೆಯಲ್ಲಿ ಬೆಂಗಳೂರು ತೆರಳಬೇಕಿದ್ದ ಪರೀಕ್ಷಾರ್ಥಿಗಳು ಪರದಾಡಿದಾಡಿದ್ದಾರೆ. ಶನಿವಾರ ಮಧ್ಯಾಹ್ನ ಕೊಲ್ಹಾಪುರ ಬಿಟ್ಟ ಈ ಟ್ರೈನ್ ಇಂದು ಬೆಳಗ್ಗೆ 6.45ಕ್ಕೆ ಬೆಂಗಳೂರು ತಲುಪಬೇಕಿತ್ತು. ಆದ್ರೆ 7 ಗಂಟೆಗಳ ಕಾಲ ತಡವಾದ ಹಿನ್ನೆಲೆಯಲ್ಲಿ ಈ ಟ್ರೈನ್‍ಗಾಗಿ ಎಲ್ಲ ನಿಲ್ದಾಣಗಳಲ್ಲಿ ಕಾಯುತ್ತ ನಿಂತ ಪ್ರಯಾಣಿಕರು ರೋಸಿಹೋಗಿದ್ದರು. ಇದನ್ನೂ ಓದಿ: ಮಾರ್ಗ ಮಧ್ಯೆಯೇ ನಿಂತ ರಾಣಿ ಚನ್ನಮ್ಮ ಎಕ್ಸ್ ಪ್ರೆಸ್- ಪರೀಕ್ಷಾರ್ಥಿಗಳ ಪರದಾಟ

    ಬೆಳಗಾವಿ ಹಾಗೂ ಧಾರವಾಡ ಭಾಗದಿಂದ ಬೆಂಗಳೂರಿಗೆ ಡಿ.ಆರ್ ಪರೀಕ್ಷೆ ಬರೆಯಲು ಇದೇ ಟ್ರೈನ್ ನಲ್ಲಿ ಬರ್ತಾ ಇದ್ದ ಸಾವಿರಾರೂ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಬೆಂಗಳೂರು ತಲುಪಲಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದರು. ಈ ಹಿನ್ನೆಲೆಯಲ್ಲಿ ಈಗ ಉತ್ತರ ಕರ್ನಾಟಕ ಭಾಗದ ಸಾವಿರಾರೂ ಅಭ್ಯರ್ಥಿಗಳು ತಮ್ಮ ತಪ್ಪು ಇಲ್ಲದೆ ಡಿ.ಆರ್ ಪರೀಕ್ಷೆಯಿಂದ ವಂಚಿತರಾಗುವಂತಾಗಿದ್ದು, ಈ ಕೂಡಲೇ ಪರೀಕ್ಷೆ ಮುಂದೂಡಬೇಕು. ಇಲ್ಲವೇ ರಾಣಿ ಚನ್ನಮ್ಮ ಟ್ರೈನ್‍ಗೆ ಟಿಕೆಟ್ ತೆಗೆಸಿದ್ದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಮರು ಅವಕಾಶ ಕಲ್ಪಿಸಿಕೊಡಬೇಕು ಅನ್ನೋ ಆಗ್ರಹಗಳು ಕೇಳಿ ಬಂದಿತ್ತು. ಬಳಿಕ ಅಭ್ಯರ್ಥಿಗಳ ಮನವಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮರು ಪರೀಕ್ಷ ನಡೆಸುವುದಾಗಿ ಭರವಸೆ ನೀಡಿದ್ದರು. ಇದನ್ನೂ ಓದಿ: ರೈಲು ವಿಳಂಬ: ಪೊಲೀಸ್ ಮರು ಪರೀಕ್ಷೆಗೆ ಅವಕಾಶ- ಸಿಎಂ ಎಚ್‍ಡಿಕೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv