Tag: Ranjini Raghavan

  • ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಸ್ವಪ್ನಮಂಟಪ: ಶೂಟಿಂಗ್ ಮುಗಿಸಿದ ಬರಗೂರು ರಾಮಚಂದ್ರಪ್ಪ

    ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ. ‘ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.

    ‘ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿ ಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.

    ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ಕ್ರಮವಾಗಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.

     

    ಬಾಬುನಾಯ್ಕ್ ನಿರ್ಮಾಣ ಮತ್ತು ಬರಗೂರರ ನಿರ್ದೇಶನದ ಈ ಚಿತ್ರವು ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.

  • ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಪುಟ್ಟಗೌರಿ

    ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಪುಟ್ಟಗೌರಿ

    ಬೆಂಗಳೂರು: ಬಿಗ್ ಬಾಸ್ ಮನೆಗೆ ‘ಪುಟ್ಟಗೌರಿ ಮದುವೆ’ ಧಾರಾವಾಹಿ ಖ್ಯಾತಿಯ ನಟಿ ರಂಜಿನಿ ರಾಘವನ್ ಎಂಟ್ರಿ ಕೊಟ್ಟಿದ್ದಾರೆ

    ಖಾಸಗಿ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ರಂಜಿನಿ ಬಿಗ್ ಮನೆಯನ್ನು ಪ್ರವೇಶಿಸಿದ್ದಾರೆ. ಈ ವೇಳೆ ಸ್ಪರ್ಧಿಗಳು ರಂಜಿನಿ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ ರಂಜಿನಿ ಸ್ಪರ್ಧಿಗಳಿಗೆ ಕರ್ನಾಟಕ ಜಿಲ್ಲೆಯ ಬಗ್ಗೆ ಪಾಠ ಮಾಡಿದ್ದಾರೆ. ಜೊತೆಗೆ ಸ್ಪರ್ಧಿಗಳು ಮಾಡಿದ ಅಕ್ಷರ ತಪ್ಪುಗಳನ್ನು ಸರಿಪಡಿಸಿದ್ದಾರೆ. ರಂಜಿನಿ ಜೊತೆ ಮನೆಯ ಸದಸ್ಯರು ಖುಷಿಯಿಂದ ಕಾಲ ಕಳೆದಿರುವುದು ಪ್ರೋಮೋದಲ್ಲಿ ಕಾಣಬಹುದು.

    ಈ ಕಾರ್ಯಕ್ರಮ ಶುರುವಾಗುವ ಮೊದಲು ರಂಜಿನಿ ಅವರಿಗೆ ಬಿಗ್ ಬಾಸ್ ಆಫರ್ ನೀಡಲಾಗಿತ್ತು. ಆದರೆ ಸಿನಿಮಾ ಹಾಗೂ ಧಾರಾವಾಹಿಯಲ್ಲಿ ನಟಿಸುತ್ತಿದ್ದ ಕಾರಣ ರಂಜನಿ ಈ ಆಫರ್ ಅನ್ನು ನಿರಾಕರಿಸಿದರು. ಆದರೆ ಈಗ ರಂಜಿನಿ ಬಿಗ್ ಬಾಸ್ ಮನೆಗೆ ಅತಿಥಿಯಾಗಿ ಎಂಟ್ರಿ ಕೊಡುವುದರ ಮೂಲಕ ಎಲ್ಲರಿಗೂ ಸರ್ಪ್ರೈಸ್ ನೀಡಿದ್ದಾರೆ. ಸದ್ಯ ರಂಜಿನಿ ಅವರು ತಮ್ಮ ಧಾರಾವಾಹಿಯನ್ನು ಪ್ರಮೋಟ್ ಮಾಡಲು ಬಿಗ್ ಮನೆಗೆ ಪ್ರವೇಶಿಸಿದ್ದಾರೆ.

    ರಂಜಿನಿ, ಪುಟ್ಟಗೌರಿ ಮದುವೆ ಧಾರಾವಾಹಿ ನಂತರ ಕನ್ನಡತಿ ಸೀರಿಯಲ್ ಮೂಲಕ ಕಿರುತೆರೆಗೆ ರೀ-ಎಂಟ್ರಿ ಮಾಡುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ರಂಜಿನಿ ಕನ್ನಡ ಉಪನ್ಯಾಸಕಿಯಾಗಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಇದೇ ಸೋಮವಾರದಿಂದ ಶುರುವಾಗಲಿದೆ.

  • ಭರ್ಜರಿ ರೆಸ್ಪಾನ್ಸ್- ಕೋಟಿಯ ಕದ ತಟ್ಟಿದ ರಾಜಹಂಸ

    ಭರ್ಜರಿ ರೆಸ್ಪಾನ್ಸ್- ಕೋಟಿಯ ಕದ ತಟ್ಟಿದ ರಾಜಹಂಸ

    ಬೆಂಗಳೂರು: ಕಳೆದ ಶುಕ್ರವಾರ ಬಿಡುಗಡೆಗೊಂಡ ಹೊಸಬರ ಚಿತ್ರ `ರಾಜಹಂಸ’ ಗೆ ಪ್ರೇಕ್ಷಕ ಅಭಿಮಾನಿಗಳಿಂದ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡು ಮುನ್ನಗ್ಗುತ್ತಿದೆ. ಈಗಾಗಲೇ ಕೇವಲ ಮೂರು ದಿನಗಳಲ್ಲಿ ಸಿನಿಮಾ 1 ಕೋಟಿ ರೂ. ಹಣವನ್ನು ಗಳಿಸಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

    ರವಿವಾರದಿಂದ ಪ್ರೇಕ್ಷಕರ ಮೆಚ್ಚುಗೆ ಗಳಿಸುವ ಮೂಲಕ ಸಿನಿಮಾ ದಿನದಿಂದ ದಿನಕ್ಕೆ ಪ್ರೇಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಪುಟ್ಟಗೌರಿ ಖ್ಯಾತಿಯ ರಂಜಿನಿ ರಾಘವನ್ ತಮ್ಮ ಅಭಿಮಾನಿ ಬಳಗವನ್ನು ಸೆಳೆಯುವಲ್ಲಿ ಸಫಲರಾಗಿದ್ದಾರೆ. ಧಾರವಾಹಿ ಮೂಲಕವೇ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದು, ಚಿತ್ರದ ಗೆಲುವಿಗೆ ಕಾರಣವೆಂದು ಎಂದು ಹೇಳಬಹುದಾಗಿದೆ.

    ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಥಿಯೇಟರ್ ನಲ್ಲಿ ತೆರೆ ಕಂಡಿರುವ ರಾಜಹಂಸ ಚಲನ ಚಿತ್ರ ಬಾಡಿಗೆ ಸೇರಿ ಒಟ್ಟು 2.75 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿತ್ತು. ಹೊಸಬರ ಚಿತ್ರವಾದ ನಮ್ಮನ್ನು ಅಭಿಮಾನಿಗಳು ಮೆಚ್ಚಿದ್ದಕ್ಕೆ ಚಿತ್ರತಂಡ ಸಂತಸ ವ್ಯಕ್ತಪಡಿಸಿದೆ

    ಇನ್ನೂ ಸಿನಿಮಾದಲ್ಲಿ ರಂಜಿನಿ (ಹಂಸಾಕ್ಷಿ)ಗೆ ಜೊತೆಯಾಗಿ ಗೌರಿಶಿಕರ್ ನಾಯಕರಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಶ್ರೀಧರ್, ಬಿ.ಸಿ.ಪಾಟೀಲ್, ಯಮುನಾ, ತಬಲಾ ನಾಣಿ, ವಿಜಯ್ ಚಂಡೂರ್, ಬುಲೆಟ್ ಪ್ರಕಾಶ್ ಸೇರಿದಂತೆ 70ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ನಾಯಕನ ತಂದೆಯಾಗಿ ನಟ ಶ್ರೀಧರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆಯುತ್ತಾರೆ.

    ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ. ಈಗಾಗಲೇ ಹಾಡುಗಳು ಎಲ್ಲರ ಮನದಲ್ಲಿ ಗುನುಗುಟ್ಟುತ್ತಿವೆ. ಬಾರಮ್ಮ ಬಾರಮ್ಮ ಭಾರತಿ, ಮುಲಾ ಮುಲಾ ಸೇರಿದಂತೆ ಎಲ್ಲ ಹಾಡುಗಳು ಸಿನಿರಸಿಕರ ಮನ ಸೆಳೆಯುತ್ತಿದ್ದು, ಯುಟ್ಯೂಬ್ ನಲ್ಲಿ ಟ್ರೆಂಡ್ ಸೃಷ್ಟಿ ಮಾಡಿವೆ. ರಘು ದೀಕ್ಷಿತ್ ಹಾಡಿರುವ ಹಾಡನ್ನು ಉತ್ತರ ಭಾರತದ ಒಟ್ಟು 8 ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಬಾರಮ್ಮ ಬಾರಮ್ಮ ಹಾಡು ಚಂದನ್ ಶೆಟ್ಟಿ ಧ್ವನಿಯಲ್ಲಿ ಮೂಡಿಬಂದಿದೆ.

     

     

  • ‘ರಾಜಹಂಸ’ದ ಹೀರೋ ರಾಜಸ್ಥಾನ ಪೊಲೀಸ್ ವಶಕ್ಕೆ – ಅಲ್ಲಿಂದ ವಾಪಸ್ ಬಂದ ಕತೆ ಓದಿ!

    ‘ರಾಜಹಂಸ’ದ ಹೀರೋ ರಾಜಸ್ಥಾನ ಪೊಲೀಸ್ ವಶಕ್ಕೆ – ಅಲ್ಲಿಂದ ವಾಪಸ್ ಬಂದ ಕತೆ ಓದಿ!

    ಬೆಂಗಳೂರು: ಕನ್ನಡದ `ರಾಜಹಂಸ’ ಸಿನಿಮಾದ ನಾಯಕ ನಟ ಗೌರಿ ಶಿಕರ್ ಅವರನ್ನು ಜೈಪುರದಲ್ಲಿ ಪೊಲೀಸರು ವಶಕ್ಕೆ ಪಡೆದುಕೊಂಡು ನಂತರ ಬಿಡುಗಡೆಗೊಳಿಸಿದ್ರಂತೆ. ಹೌದು, ರಾಜಹಂಸದ ಚಿತ್ರತಂಡ ಚಿತ್ರೀಕರಣಕ್ಕಾಗಿ ರಾಜಸ್ಥಾನದ ಜೈಪುರ ನಗರಕ್ಕೆ ತೆರಳಿತ್ತು. ಈ ವೇಳೆ ಜೈಪುರನ ಐತಿಹಾಸಿಕ ಕೋಟೆಯ ಒಳಭಾಗದಲ್ಲಿ ಚಿತ್ರೀಕರಣ ಮುಗಿಸಿಕೊಂಡು ಬರುವಾಗ ಪೊಲೀಸರು ನಾಯಕ ಗೌರಿಶಿಕರ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು. ನಂತರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ವಾಪಸ್ ಕಳುಹಿಸಿದ್ದಾರೆ.

    ಏನಾಗಿತ್ತು?: ಜೈಪುರ ಕೋಟೆಯಲ್ಲಿ ಶೂಟಿಂಗ್ ಮುಗಿದ ಬಳಿಕ ಚಿತ್ರತಂಡ ಹೊರ ನಡೆದಿತ್ತು. ಕೊನೆಯಲ್ಲಿ ಉಳಿದ ನಾಯಕ ನಟ ಗೌರಿ ಶಿಕರ್‍ ಹೊರ ಹೋಗುವಷ್ಟರಲ್ಲಿ ಇಡೀ ಚಿತ್ರತಂಡ ಹೊರಟಿತ್ತು. ಇನ್ನೇನು ಹೊರಡುವಷ್ಟರಲ್ಲಿ ಬಂದ ಪೊಲೀಸರು ಕೋಟೆಯ ಪ್ರವೇಶದ ಟಿಕೆಟ್ ಕೇಳಿದ್ದಾರೆ. ಈ ವೇಳೆ ಗೌರಿ ಶಿಖರ್ ತಾವು ಸಿನಿಮಾ ಶೂಟಿಂಗ್ ಗಾಗಿ ಬಂದು ಚಿತ್ರತಂಡದ ಸದಸ್ಯರು ಮುಂದೆ ಹೋಗಿದ್ದು, ಹಾಗಾಗಿ ತಮ್ಮ ಬಳಿ ಟಿಕೆಟ್ ಇಲ್ಲವೆಂದು ತಿಳಿಸಿದ್ದಾರೆ.

    ಗೌರಿಶಿಕರ್ ತಾವು ಬಂದ ಉದ್ದೇಶವನ್ನು ಪೊಲೀಸರಿಗೆ ತಿಳಿಸಿದ್ರೂ, ಬೇರೆ ಭಾಷೆಯಾಗಿದ್ದರಿಂದ ಅರ್ಥವಾಗಿಲ್ಲ. ಹಾಗಾಗಿ ನನ್ನನ್ನು ನಾಲ್ಕು ಗಂಟೆಗಳ ಕಾಲ ಠಾಣೆಯಲ್ಲಿ ಕೂರಿಸಲಾಯಿತು. ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಬಂದಾಗ ಮೊಬೈಲ್ ನಲ್ಲಿ ಸಿನಿಮಾದ ಟೀಸರ್ ತೋರಿಸಿದಾಗ ನನ್ನನ್ನು ಬಿಟ್ಟು ಬಿಟ್ಟರು ಎಂದು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ನಟ ಗೌರಿಶಿಕರ್ ಹೇಳಿದ್ದಾರೆ.

    ಇದನ್ನೂ ಓದಿ: ನಿಮ್ಗೆ ಸೆಲ್ಫೀ ಕ್ರೇಝ್ ಇದ್ರೆ ಸೆಪ್ಟೆಂಬರ್ 8ಕ್ಕೆ ‘ರಾಜಹಂಸ’ ನೋಡಿ

    ಪೀ..ಪೀ..ಸಾಂಗ್ ಕೇಳಿ: ಈಗಾಗಲೇ ಟ್ರೇಲರ್ ಮತ್ತು ಹಾಡುಗಳಿಂದ ಗಮನ ಸೆಳೆದಿರುವ `ರಾಜಹಂಸ’ ಯುಟ್ಯೂಬ್ ನಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದೆ. ಹಳ್ಳಿ ಬೇರುಗಳು ಮತ್ತು ನಗರದ ಚಿಗುರುಗಳು ಜೊತೆಗೂಡಿ ಹ್ಯಾಪಿ ಅನ್ನೋ ಪೀಪಿ ಊದ್ತಾ ಕುಣಿದು ಕುಪ್ಪಳಿಸೋ ಪಕ್ಕಾ ಫ್ಯಾಮಿಲಿ ಹಾಡು ಈಗಾಗಲೇ ಸ್ಯಾಂಡಲ್ ವುಡ್ ನಲ್ಲಿ ತನ್ನ ಸಂಗೀತದ ಅಲೆಗಳನ್ನು ಹರಿಸಿದೆ. ಜಾತ್ರೆಯ ಸನ್ನಿವೇಶವನ್ನು ಒಳಗೊಂಡಿರುವ ಪೀ..ಪೀ.. ಹಾಡಿನಲ್ಲಿ ಸಿನಿಮಾದ ಇಡೀ ಚಿತ್ರತಂಡ ಕಾಣಿಸಿಕೊಂಡಿರುವುದು ವಿಶೇಷವಾಗಿದೆ.

    ನಗರದ ಹುಡುಗ ಮತ್ತು ಹಳ್ಳಿ ಹುಡುಗಿಯ ಕುಟುಂಬಸ್ಥರು ದೇವರ ಸನ್ನಿಧಿಯಲ್ಲಿ ಒಂದಾಗಿ ಪೂಜೆ ಸಲ್ಲಿಸುವ ವಿಶೇಷ ಹಾಡು ಇದಾಗಿದೆ. ಹಾಡಿನ ಲಿರಿಕ್ಸ್ ಮಾತ್ರ ಅರ್ಥಪೂರ್ಣವಾಗಿದ್ದು, ಗ್ರಾಮೀಣ ಮತ್ತು ನಗರದ ಜೀವನ ಶೈಲಿಯನ್ನು ಹೇಳುತ್ತದೆ. ಹಾಡಿನ ಸಂಗೀತವೂ ಚೆನ್ನಾಗಿದ್ದು ಕೇಳುಗರನ್ನು ಸಹ ನಾಲ್ಕು ಸ್ಟೆಪ್ ಹಾಕುವಂತೆ ಮಾಡುತ್ತದೆ.

    ಧಾರಾವಾಹಿ ಮೂಲಕ ಕನ್ನಡಿಗರ ಮನೆ ಮಾತಾಗಿರುವ ಪುಟ್ಟ ಗೌರಿ (ರಂಜಿನಿ ರಾಘವನ್) ಮೊದಲ ಬಾರಿಗೆ ಬೆಳ್ಳಿ ಪರದೆಯಲ್ಲಿ ಮಿಂಚಲಿದ್ದಾರೆ. ಇನ್ನೂ ಸಿನಿಮಾದಲ್ಲಿ ರಂಜಿನಿ (ಹಂಸಾಕ್ಷಿ)ಗೆ ಜೊತೆಯಾಗಿ ಗೌರಿಶಿಕರ್ ನಾಯಕರಾಗಿ ಬಣ್ಣ ಹಚ್ಚಿದ್ದಾರೆ. ಚಿತ್ರದಲ್ಲಿ ಶ್ರೀಧರ್, ಬಿ.ಸಿ.ಪಾಟೀಲ್, ಯಮುನಾ, ತಬಲಾ ನಾಣಿ, ವಿಜಯ್ ಚಂಡೂರ್, ಬುಲೆಟ್ ಪ್ರಕಾಶ್ ಸೇರಿದಂತೆ 70ಕ್ಕೂ ಹೆಚ್ಚು ಕಲಾವಿದರು ನಟಿಸಿದ್ದಾರೆ. ನಾಯಕನ ತಂದೆಯಾಗಿ ನಟ ಶ್ರೀಧರ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದಾರೆ.

    ಇದನ್ನೂ ಓದಿ:  ಸೀನು, ಲವ್ ಎರಡನ್ನೂ ಕಂಟ್ರೋಲ್ ಮಾಡೋದು ಹೇಗೆ?

    ಸಿನಿಮಾದಲ್ಲಿ ಒಟ್ಟು 6 ಹಾಡುಗಳಿವೆ. ಈಗಾಗಲೇ ಹಾಡುಗಳು ಎಲ್ಲರ ಮನದಲ್ಲಿ ಗುನುಗುಟ್ಟುತ್ತಿವೆ. ಬಾರಮ್ಮ ಬಾರಮ್ಮ ಭಾರತಿ, ಮುಲಾ ಮುಲಾ ಸೇರಿದಂತೆ ಎಲ್ಲ ಹಾಡುಗಳು ಸಿನಿರಸಿಕರ ಮನ ಸೆಳೆಯುತ್ತಿದ್ದು, ಯುಟ್ಯೂಬ್ ನಲ್ಲಿ ಟ್ರೆಂಡ್ ಸೃಷ್ಟಿ ಮಾಡಿವೆ. ರಘು ದೀಕ್ಷಿತ್ ಹಾಡಿರುವ ಹಾಡನ್ನು ಉತ್ತರ ಭಾರತದ ಒಟ್ಟು 8 ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನೂ ಬಾರಮ್ಮ ಬಾರಮ್ಮ ಹಾಡು ಚಂದನ್ ಶೆಟ್ಟಿ ಧ್ವನಿಯಲ್ಲಿ ಮೂಡಿಬಂದಿದೆ. ಸಿನಿಮಾ ಸೆಪ್ಟೆಂಬರ್ 8ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಿಗೆ ಲಗ್ಗೆಯಿಡಲಿದೆ.